Thursday, 6 September 2018

ಭಗವದ್ಗೀತೆಯಂಥ ಧರ್ಮಗ್ರಂಥಗಳನ್ನು ಏಕೆ ಓದಬೇಕು?

ಭಗವದ್ಗೀತೆಯಂಥ ಧರ್ಮಗ್ರಂಥಗಳನ್ನು ಏಕೆ ಓದಬೇಕು?

ಈ ಪ್ರಶ್ನೆಯನ್ನು ನಮಗೆ ನಮ್ಮ ಮಕ್ಕಳು ಕೇಳಿರಬಹುದು ಅಥವಾ ನಾವು ನಮ್ಮ ಅಜ್ಜಂದಿರಿಗೆ ಕೇಳಿರಬಹುದು! ಉತ್ತರ ಸಿಕ್ಕಿರಲೂಬಹುದು. ಆದರೆ ಒಬ್ಬ ಅಜ್ಜ ಕೊಟ್ಟ ಉತ್ತರ ಕುತೂಹಲಕಾರಿಯಾಗಿದೆ. ಆ ಅಜ್ಜ ಪ್ರತಿದಿನ ಮುಂಜಾನೆ ಎದ್ದು ಭಗವದ್ಗೀತೆ ಪಠಣ ಮಾಡುತ್ತಿದ್ದರು. ಅದೇ ಸಮಯಕ್ಕೆ ಅವರ ಮೊಮ್ಮಗನೂ ಎದ್ದು ಕುಳಿತು ತನ್ನ ಶಾಲಾ ಪುಸ್ತಕಗಳನ್ನು ಓದುತ್ತಿದ್ದ.


ಒಂದು ದಿನ ಮೊಮ್ಮಗ ಅಜ್ಜನನ್ನು ಅನುಕರಿಸಿ ತಾನೂ ಭಗವದ್ಗೀತೆಯನ್ನು ಓದಲು ಪ್ರಯತ್ನಿಸಿದ. ಅರ್ಥವಾಗಲಿಲ್ಲ. ಕೆಲವು ದಿನಗಳ ನಂತರ ಮೊಮ್ಮಗ ‘ಅಜ್ಜ ಭಗವದ್ಗೀತೆ ಪುಸ್ತಕವನ್ನು ನಾನು ಓದಲು ಪ್ರಯತ್ನಿಸಿದೆ. ಆದರೆ ನನಗೆ ಏನೂ ಅರ್ಥವಾಗಲಿಲ್ಲ. ಅರ್ಥವಾದ ಅಲ್ಪಸ್ವಲ್ಪ ಕೂಡ ನೆನಪಿನಲ್ಲಿ ಉಳಿಯುವುದಿಲ್ಲ’ ಎಂದ. ಅಜ್ಜ ‘ ಅರ್ಥವಾದರೂ, ಅರ್ಥವಾಗದಿದ್ದರೂ, ನೆನಪಿನಲ್ಲುಳಿದರೂ, ನೆನಪಿನಲ್ಲುಳಿಯದಿದ್ದರೂ ಓದಲೇಬೇಕಾದ ಗ್ರಂಥಗಳು ಇವು’ ಎಂದರು. ಮೊಮ್ಮಗ ‘ ಅರ್ಥವಾಗದ ನೆನಪಿನಲ್ಲಿ ಉಳಿಯದ ಗ್ರಂಥವನ್ನು ಓದುವುದರಿಂದ ಏನು ಪ್ರಯೋಜನ? ಎಂದ. ಅಜ್ಜ ಸ್ವಲ್ಪ ಹೊತ್ತು ಯೋಚನೆ ಮಾಡಿ ‘ ನಿನ್ನ ಪ್ರಶ್ನೆಗೆ ಉತ್ತರ ಕೊಡುತ್ತೇನೆ. ಅದಕ್ಕೆ ಮೊದಲು ನಿನಗೊಂದು ಕೆಲಸವಿದೆ.



ಅಡುಗೆ ಮನೆಯಲ್ಲಿರುವ ಜೋಳಿಗೆಯಲ್ಲಿ ಇದ್ದಿಲು ತುಂಬಿದೆ. ಅದನ್ನು ಖಾಲಿ ಮಾಡಿಕೋ, ಹತ್ತಿರದಲ್ಲಿ ನದಿ ಹರಿಯುತ್ತಿದೆ. ನದಿಯಿಂದ ಜೋಳಿಗೆ ತುಂಬ ನೀರು ತುಂಬಿಸಿಕೊಂಡು ಬಾ’ ಎಂದರು. ಮೊಮ್ಮಗ ಜೋಳಿಗೆಯನ್ನು ಖಾಲಿ ಮಾಡಿದ. ಇದ್ದಿಲು ಹಾಕಿಟ್ಟಿದ್ದರಿಂದ ಜೋಳಿಗೆ ಕಪ್ಪು ಕಪ್ಪಾಗಿತ್ತು. ಆತ ಅದನ್ನು ತೆಗೆದುಕೊಂಡು ನದಿಗೆ ಹೋದ. ಜೋಳಿಗೆಯನ್ನು ನೀರಿನಲ್ಲಿ ಅದ್ದಿ ನೀರು ತುಂಬಿಸಿಕೊಂಡ. ಮನೆ ಕಡೆ ಧಾವಿಸಿದ. ಜೋಳಿಗೆ ಬಟ್ಟೆಯದಾದ್ದರಿಂದ ಮನೆಗೆ ಬರುವಷ್ಟರಲ್ಲಿ ನೀರೆಲ್ಲಾ ಸೋರಿ ಹೋಗಿತ್ತು. ಮೊಮ್ಮಗ ಅಜ್ಜನಿಗೆ ‘ಜೋಳಿಗೆಯಲ್ಲಿ ನೀರು ತರುವುದು ಕಷ್ಟ. ಇಲ್ಲಿಗೆ ಬರುವಷ್ಟರಲ್ಲಿ ಎಲ್ಲ ಸೋರಿಹೋಗುತ್ತದೆ. ಬಿಂದಿಗೆಯಲ್ಲಿ ನೀರು ತರಲೆ? ಎಂದು ಕೇಳಿ.



ಅಜ್ಜ ‘ ನನಗೆ ಬಿಂದಿಗೆಯ ನೀರು ಬೇಡ. ಜೋಳಿಗೆಯ ನೀರೇ ಬೇಕು’ ಎಂದರು. ಮೊಮ್ಮಗ ಮತ್ತೊಮ್ಮೆ ನದಿಗೆ ಧಾವಿಸಿ, ಜೋಳಿಗೆಯಲ್ಲಿ ನೀರು ತುಂಬಿಸಿಕೊಂಡು ಮನೆಗೆ ಬರುವಷ್ಟರಲ್ಲಿ ಮತ್ತೆ ನೀರೆಲ್ಲ ಸೋರಿಹೋಗಿತ್ತು. ಅಜ್ಜ ‘ ಮತ್ತೆ ಹೋಗು. ಜೋಳಿಗೆಯಲ್ಲೇ ನೀರು ತೆಗೆದುಕೊಂಡು ಬಾ’ ಎಂದರು. ಮೊಮ್ಮಗ ಮತ್ತೆ ನದಿಗೆ ಓಡಿದ. ಅಪರೂಪದ ಮೊಮ್ಮಗ, ಅಜ್ಜನ ಮಾತನ್ನು ಚಾಚೂ ತಪ್ಪದೇ, ಪ್ರತಿಭಟಿಸದೇ ಪಾಲಿಸುತ್ತಿದ್ದ. ಹೀಗೆ ಹತ್ತು ಸಾರಿ ನಡೆಯಿತು. ಆದರೆ ಜೋಳಿಗೆಯಲ್ಲಿ ನೀರು ತರಲಾಗ ಲಿಲ್ಲ. ಮೊಮ್ಮಗ ‘ ಅಜ್ಜಾ! ನಾನು ಹತ್ತಲ್ಲ, ನೂರು ಸಾರಿ ಪ್ರಯತ್ನಿಸಿದರೂ ಜೋಳಿಗೆಯಲ್ಲಿ ನೀರು ತರಲಾಗುವುದಿಲ್ಲ. ಮನೆಗೆ ಬರುವಷ್ಟರಲ್ಲಿ ಎಲ್ಲವೂ ಸೋರಿ ಹೋಗುತ್ತದೆ.’ ಎಂದ.



‘ಮಗೂ, ನೀರು ಸೋರಿ ಹೋಗುತ್ತದೆಂಬುದು ನಿಜ. ಚಿಂತೆಯಿಲ್ಲ. ಆದರೆ ಜೋಳಿಗೆ ಈಗ ಹೇಗಾಗಿದೆ ನೋಡು!’ ಎಂದರು. ಮೊದಲನೆಯ ಸಾರಿ ನದಿಗೆ ಹೋದಾಗ ಜೋಳಿಗೆ ಇದ್ದಿಲಿನ ಕಪ್ಪು ಬಣ್ಣದಲ್ಲಿತ್ತು. ಈಗ ಹತ್ತು ಸಾರಿ ನದಿಗೆ ಹೋಗಿ ನೀರು ತುಂಬಿಸಿಕೊಂಡು ಬರುವಷ್ಟರಲ್ಲಿ ಕಪ್ಪು ಜೋಳಿಗೆ ಬಿಳಿಯ ಜೋಳಿಗೆಯಾಗಿತ್ತು! ಅಂದರೆ ಕೊಳೆಯನ್ನೆಲ್ಲ ಕಳೆದುಕೊಂಡು ಶುಭ್ರವಾಗಿತ್ತು! ಆಗ ಅಜ್ಜಾ ‘ ಭಗವದ್ಗೀತೆಯನ್ನು ಓದಿದಾಗ ಅರ್ಥವಾಗದಿರಬಹುದು, ಓದಿದ್ದು ನೆನಪಿನಲ್ಲಿ ಉಳಿಯದಿರಬಹುದು, ಆದರೆ ಓದುವಾತನ ಬುದ್ಧಿ ಶುದ್ಧಿಯಾಗುತ್ತದೆ. ಅದಕ್ಕಾಗಿ ಭಗವದ್ಗೀತೆಯನ್ನು ಓದಬೇಕು’ ಎಂದರಂತೆ. ಧರ್ಮಗ್ರಂಥಗಳನ್ನು ಏಕೆ ಓದಬೇಕೆಂಬ ಪ್ರಶ್ನೆಯನ್ನು ನಮ್ಮ ಮಕ್ಕಳು ನಮಗೆ ಕೇಳಿದರೆ, ನಾವು ಉತ್ತರ ಕೊಡಲು ಈ ಪ್ರಸಂಗ ಸಹಕಾರಿಯಾಗಬಹುದು.


ಮಾನ್ಯರೇ   ಭಗವದ್ಗೀತೆಯನ್ನು ಪ್ರೀತಿಯಿಂದ ಓದಿ, ಮನನ ಮಾಡಿ ಆಗ ದುಃಖದಿಂದ ಪಾರಾಗುವಿರಿ. ನಮ್ಮೇಲ್ಲಾ ಸಮಸ್ಯೆಗಳಿಗೆ ಭಗವದ್ಗೀತೆಯೇ ಪರಿಹಾರ. ಇದು ಒಂದು ಜನಾಂಗದಲ್ಲ. ಇಡೀ ಮಾನವ ಕುಲಕ್ಕೆ ಸೇರಿದ್ದು. ಅನೇಕ ಮಹಾತ್ಮರು ಗೀತೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸುಖ, ಶಾಂತಿ, ಸಮಾಧಾನವನ್ನು ಪಡೆದಿದ್ದಾರೆ.   ಸಹ್ರದಯರೇ ಮಾನವನದು ದೇಹವಲ್ಲ ಅದು ಆತ್ಮ. ನಾವು ಅನುಭವಿಸುವ ಎಲ್ಲಾ ದುಃಖ  ದೇಹಕ್ಕೆ ಸಂಭಂದಿಸಿದು, ಆತ್ಮದಲ್ಲೇ ಮನಸನ್ನು ಸ್ಥಿರಗೊಳಿದರೆ ಎಲ್ಲಾ ದುಃಖದಿಂದ ಪಾರಾಗಬಹುದು.ಗೀತೆಯನ್ನು ಸರಿಯಾಗಿ ಮನನ ಮಾಡಿಕೊಂಡಲ್ಲಿ, ಯಶಸ್ಸು, ಕೀರ್ತಿ ಮತ್ತು ಸಂಪತ್ತನ್ನು ಪಡೆಯಬಹುದು. ಇಳಿ ವಯಸ್ಸಿನಲ್ಲಿ ವೈರಾಗ್ಯವ‌ನ್ನು ತಾಳಬಹುದು   ನೀವು ಏಕಾಂಗಿಯೆಂದು ತಿಳಿಯಬೇಡಿರಿ. ನಿಮ್ಮ ಶ್ರೇಯಸ್ಸನ್ನು ಬಯಸುವ ಸಜ್ಜನರು ಬಹಳಷ್ಟಿದ್ದಾರೆ. ನಮ್ಮ ವೇದಿಕೆಯ ಈ ಪ್ರಯತ್ನವೇ ಅದರ ಪ್ರತೀಕ. ನಾವು ನಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಬೇಕಿದೆ. ಮಾಧ್ಯಮಗಳಲ್ಲಿ ಬರುವ ಕೆಟ್ಟ ವಿಚಾರಗಳ, ಅತ್ಯಾಚಾರಗಳ ಬಗ್ಗೆ ಓದುವುದನ್ನು ಬಿಟ್ಟು ದಿನದ ಪ್ರಾರಂಭ  ಭಗವದ್ಗೀತೆಯ ಅಧ್ಯಯನದಲ್ಲಿ ಆರಂಭವಾಗಲಿ. ಇದು ನಮ್ಮ ಮೆದುಳಿಗೆ ಸ್ಪೂರ್ತಿಯ ಆಹಾರ.  ನಾವೇಲ್ಲರು ಸಾಧ್ಯವಾದಷ್ಟು ಸಾತ್ವಿಕ ಆಹಾರವನ್ನು ಉಪಯೋಗಿಸುವ ಪ್ರಯತ್ನ ಮಾಡೋಣ.  ನಮ್ಮೇಲ್ಲರ ಬಾಳು ಸಂತೋಷದಿಂದ ಕೂಡಿರಲಿ ಹಾಗೂ ನಮ್ಮ ಸುತ್ತ ಮುತ್ತ ಇರುವವರಿಗೂ ಸಂತೋಷ ನೀಡೋಣ. ಉದ್ವೇಗ ರಹಿತನಾಗಿ, ಆರೋಗ್ಯವಂತರಾಗಿ ಬಾಳೋಣ. ಈ ಜಗತ್ತು ಇನ್ನೂ ಉತ್ತಮ ತಾಣವಾಗಲಿ. ನಮ್ಮ ಹಿರಿಯರು ಮತ್ತು ಮಕ್ಕಳು ನಮ್ಮ ಶ್ರೇಷ್ಠತೆಗೆ ಹೆಮ್ಮೆ ಪಡುವಂತಾಗಲಿ. ನಮ್ಮ ಅಸಾಧಾರಣ ವ್ಯಕ್ತಿತ್ವವನ್ನು ಅವರು ಪ್ರೀತಿಯಿಂದ ಅನುಸರಿಸುವಂತಾಗಲಿ. ಓಂಕಾರ ಸ್ವರೂಪಿಣಿ ಮಹಾ ಸರಸ್ವತಿ ನಮಗೆಲ್ಲರಿಗೂ ಸನ್ಮಂಗಲವನ್ನು ಉಂಟು ಮಾಡಲಿ. ನಾವೇಲ್ಲರೂ ಜೋತೆಗೂಡಿ ಇಂದಿನಿಂದ  ಮುಂದುವರಿಯೋಣ. ನಮ್ಮವರೇಲ್ಲರನ್ನು ಆದರ್ಶ ಜೀವನಕ್ಕೆ ಪ್ರೇರೇಪಿಸೋಣ. ಭಗವದ್ಗೀತೆ ಒಂದು ಪುಸ್ತಕವಲ್ಲ, ಅದೊಂದು ಶಕ್ತಿವೆಂಬುದನ್ನು ಮರೆಯದೀರೋಣ.        ನಮ್ಮ ಕಲಿಕೆ ಈ ಕ್ಷಣದಿಂದಲೇ ಪ್ರಾರಂಭವಾಗಲಿದೆ. ನಾಳೆಯಿಂದ ಮುಂಜಾನೆ ಎದ್ದ ತಕ್ಷಣ ಓದುವ ಅಭ್ಯಾಸ ಮಾಡಿಕೋಳ್ಳೋಣ .  ಸಜ್ಜನರೇ , ಯಾವುದೋ ಪುಣ್ಯದ ಕಾರಣದಿಂದ ನಮಗೋಂದು ಸೌಭಾಗ್ಯ ದೊರಕಿದೆ ಸದುಪಯೋಗ ಪಡಿಸಿಕಳ್ಳೋಣ. ಸರ್ವರಿಗೂ  ಶುಭವಾಗಲಿ.

ಅಧ್ಯಾಯ ಎಂಟು

ಅಧ್ಯಾಯ ಎಂಟು
ಏಳನೆಯ ಅಧ್ಯಾಯದ ಕೊನೆಯಲ್ಲಿ ಕೃಷ್ಣ ಸಂಕ್ಷಿಪ್ತವಾಗಿ ಆರು ಮಹತ್ವದ ಸಂಗತಿಯನ್ನು ಮನುಷ್ಯ ತಿಳಿದಿರಬೇಕು ಎಂದು ಹೇಳಿದ್ದ. ಅಧ್ಯಾತ್ಮ, ಅಧಿಭೂತ, ಅಧಿದೈವ, ಅಧಿಯಜ್ಞ, ಬ್ರಹ್ಮ, ಕರ್ಮ-ಈ ಆರು ಸಂಗತಿಗಳನ್ನು ತಿಳಿದರೆ ಅದರಿಂದ ಮೇಲಕ್ಕೆ ಏರುವ ಇನ್ನೊಂದು ಮೆಟ್ಟಲಿರುವುದಿಲ್ಲ ಎಂದಿದ್ದ ಕೃಷ್ಣ.
ಅಧಿಭೂತ ಎಂದರೆ ಭೌತಿಕ ಪ್ರಪಂಚ, ಅಧ್ಯಾತ್ಮ ಎಂದರೆ ಜಡದೊಳಗಿರುವ ಚೈತನ್ಯ,  ಅಧಿದೈವ ಎಂದರೆ ಚೇತನವನ್ನು ನಿಯಂತ್ರಿಸುವ ದೇವತಾಶಕ್ತಿ, ಅಧಿಯಜ್ಞ ಎಂದರೆ ದೇವತೆಗಳನ್ನು ನಿಯಂತ್ರಿಸುವ ಭಗವಂತ, ಈ ಅಧಿಯಜ್ಞ ಜಗತ್ತಿನಲ್ಲೆಲ್ಲಾ ತುಂಬಿದ್ದಾನೆ ಎನ್ನುವುದು ಬ್ರಹ್ಮ ಕಲ್ಪನೆ, ಅವನಿಂದಲೇ ಎಲ್ಲಾ ಕ್ರಿಯೆಗಳೂ ನಡೆಯುತ್ತವೆ-ಆತನೇ ಸೂತ್ರದಾರ. ಈ ಅರಿವು ಸಾವಿನ ಸಮಯದಲ್ಲೂ ಎಚ್ಚರವಾಗಿರಬೇಕು ಆಗ ಆ ಸಾವು ಮಾಂಗಲಿಕ. ಇಷ್ಟು ವಿಚಾರವನ್ನು ನಾವು ಹಿಂದಿನ ಅಧ್ಯಾಯದಲ್ಲಿ ನೋಡಿದ್ದೇವೆ.
ಸೂಕ್ಷ್ಮವಾಗಿ ಏಳನೇ ಅಧ್ಯಾಯದ ಕೊನೆಯ ಎರಡು ಶ್ಲೋಕಗಳನ್ನು ಗಮನಿಸಿದರೆ ಅಲ್ಲಿ ಕೃಷ್ಣ ‘ತತ್ ಬ್ರಹ್ಮ’(ಆ ಬ್ರಹ್ಮತತ್ವ) ಎಂದಿದ್ದಾನೆ. ಕೊನೆಯಲ್ಲಿ  ‘ನನ್ನನ್ನು(ಮಾಂ) ಸೇರುತ್ತಾರೆ’ ಎಂದಿದ್ದಾನೆ. ಇಲ್ಲಿ ನಮಗೆ ಕೃಷ್ಣ ಮತ್ತು ಬ್ರಹ್ಮತತ್ವ ಬೇರೆ ಬೇರೆಯೋ ಅನ್ನುವ ಪ್ರಶ್ನೆ ಬರುತ್ತದೆ. ಇನ್ನು ಇಲ್ಲಿ ಕೃಷ್ಣ ಬಳಸಿದ ಪದಗಳನ್ನು ನೋಡಿದಾಗ ಅಲ್ಲಿ ಅನೇಕ ಅರ್ಥವನ್ನು ಕಾಣುತ್ತೇವೆ. ಉದಾಹರಣೆಗೆ ಬ್ರಹ್ಮ ಎನ್ನುವ ಪದಕ್ಕೆ ಸಂಸ್ಕೃತದಲ್ಲಿ ಅನೇಕ ಅರ್ಥವಿದೆ. ಬ್ರಹ್ಮ ಎಂದರೆ ಜೀವ, ಚತುರ್ಮುಖ ಬ್ರಹ್ಮ, ಭಗವಂತ, ವೇದಗಳು, ಇತ್ಯಾದಿ. ಅಧ್ಯಾತ್ಮ ಎನ್ನುವಲ್ಲಿ ‘ಆತ್ಮ’ ಪದಕ್ಕೆ ಶರೀರ, ಮನಸ್ಸು, ಜೀವ, ಪರಮಾತ್ಮ ಇತ್ಯಾದಿ ಅರ್ಥಗಳಿವೆ. ‘ಕರ್ಮ’ ಎನ್ನುವಲ್ಲಿ ಪ್ರಾರಾಬ್ಧಕರ್ಮ ಮತ್ತು ಕರ್ತವ್ಯಕರ್ಮ ಎನ್ನುವ ಎರಡು ಅರ್ಥ ಕಾಣುತ್ತದೆ. ಅಧಿಭೂತ ಎನ್ನುವಲ್ಲಿ ‘ಭೂತ’ ಪದಕ್ಕೆ ಜಡ ಹಾಗು ಚೇತನ ಎನ್ನುವ ಎರಡು ಅರ್ಥವನ್ನು ಕಾಣಬಹುದು. ಇದೇ ರೀತಿ ಅಧಿದೈವ ಎಂದರೆ ದೈವರಲ್ಲಿ(ದೇವತೆಗಳಲ್ಲಿ) ಅಧಿಕನಾದವನು ಅಧಿದೈವ, ದೇವತೆಗಳಿಗೆ ಸಂಬಂಧಪಟ್ಟಿದ್ದೂ ಕೂಡಾ ಅಧಿದೈವ. ಹೀಗೆ ಈ ಆರೂ ಶಬ್ದಗಳು ಬೇರೆ ಬೇರೆ ಸಂದರ್ಭದಲ್ಲಿ ಬೇರೆ ಬೇರೆ ಆಯಾಮದಲ್ಲಿ ತೆರೆದುಕೊಳ್ಳುವಂತದ್ದು. ಹೀಗಿರುವಾಗ ಕೃಷ್ಣ ಹೇಳಿರುವ ಈ ಆರು ಸಂಗತಿಯನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟ.

ಕೊನೆಯ ಶ್ಲೋಕದಲ್ಲಿ ಕೃಷ್ಣ ಹೇಳಿದ “ನಮ್ಮ ಜೀವನ ಪಯಣದ ಕೊನೆಯ ಕ್ಷಣದಲ್ಲಿ ಈ ಅರಿವನ್ನು ಉಳಿಸಿಕೊಂಡಿರಬೇಕು” ಎಂದು. ಅದು ಹೇಗೆ ಸಾಧ್ಯ ? ದೇಹತ್ಯಾಗ ಮಾಡುವಾಗ ಮಾನಸಿಕ ಚಿಂತನೆ ಹೇಗಿರಬೇಕು? ದೇಹತ್ಯಾಗ ನಂತರ ಜೀವ ಯಾವ ಮಾರ್ಗದಲ್ಲಿ ಚಲಿಸುತ್ತದೆ? ಇತ್ಯಾದಿ ಪ್ರಶ್ನೆ ನಮ್ಮನ್ನು ಕಾಡುತ್ತದೆ. ಎಂಟನೇ ಅಧ್ಯಾಯ ನಮ್ಮೆಲ್ಲರ ಪ್ರತಿನಿಧಿ ಅರ್ಜುನ ಈ ನಮ್ಮ ಪ್ರಶ್ನೆಯನ್ನು ಶ್ರೀಕೃಷ್ಣನಲ್ಲಿ ಕೇಳುವುದರೊಂದಿಗೆ ಪ್ರಾರಂಭವಾಗುತ್ತದೆ.

ಅಧ್ಯಾಯ - 08 : ಶ್ಲೋಕ – 01

ಅರ್ಜುನ ಉವಾಚ ।ಕಿಂ ತದ್ ಬ್ರಹ್ಮ  ಕಿಮಧ್ಯಾತ್ಮಂ ಕಿಂ ಕರ್ಮ ಪುರುಷೋತ್ತಮ ।ಅಧಿಭೂತಂ ಚ ಕಿಂ ಪ್ರೋಕ್ತಮಧಿದೈವಂ ಕಿಮುಚ್ಯತೇ ॥೧॥

ಅರ್ಜುನ ಉವಾಚ
ಕಿಮ್  ತತ್  ಬ್ರಹ್ಮ  ಕಿಮ್ ಅಧ್ಯಾತ್ಮಮ್  ಕಿಮ್  ಕರ್ಮ ಪುರುಷೋತ್ತಮ ।
ಅಧಿಭೂತಮ್  ಚ ಕಿಮ್  ಪ್ರೋಕ್ತಮ್ ಅಧಿದೈವಮ್  ಕಿಮ್ ಉಚ್ಯತೇ  -

ಅರ್ಜುನ ಕೇಳಿದನು: ಪುರುಷೋತ್ತಮ, ಯಾವುದು ಆ ‘ಬ್ರಹ್ಮ’? ‘ಅಧ್ಯಾತ್ಮ’ವೆಂದರೆ ಏನು? ಏನು ‘ಕರ್ಮ’ವೆಂದರೆ? ಯಾವುದನ್ನು ‘ಅಧಿಭೂತ’ವೆನ್ನುತ್ತಾರೆ? ಯಾವುದನ್ನು ‘ಅಧಿದೈವ’ವೆನ್ನುತ್ತಾರೆ?

ಅರ್ಜುನ ಕೃಷ್ಣನನ್ನು ಕೇಳುತ್ತಾನೆ “ ತತ್ ಬ್ರಹ್ಮ(ಆ ಬ್ರಹ್ಮತತ್ವ) ಅಂದರೆ ಯಾವುದು? ಅಧ್ಯಾತ್ಮ ಅಂದರೆ ಏನು? ಮತ್ತು ಕರ್ಮ ಅಂದರೇನು?”  ಎಂದು. ಇಲ್ಲಿ ವ್ಯಾಸರು ಅರ್ಜುನನ ಈ ಪ್ರಶ್ನೆಯ ಹಿಂದಿನ ಭಾವನೆಯನ್ನು “ಪುರುಷೋತ್ತಮ” ಎನ್ನುವ ವಿಶೇಷಣದಲ್ಲಿ ಹಿಡಿದು ನಮ್ಮ ಮುಂದಿಟ್ಟಿದ್ದಾರೆ. ಪುರುಷೋತ್ತಮ ಎಂದರೆ ಕ್ಷರ(ಜೀವ)ವನ್ನು ಮೀರಿನಿಂತವನು. ಅಕ್ಷರ(ಶ್ರೀತತ್ವ)ಕ್ಕಿಂತಲೂ ಹಿರಿಯನು. “ಕ್ಷರ-ಅಕ್ಷರವನ್ನು ಮೀರಿ ನಿಂತ  ನೀನೇ ಪುರುಷೋತ್ತಮ, ನೀನಲ್ಲದೆ ನಿನ್ನಿಂದ ಹಿರಿದಾದ ತತ್ವ ಇನ್ನೊಂದಿಲ್ಲ, ಆದ್ದರಿಂದ ನನಗೆ ತಿಳಿದಂತೆ ನೀನೇ ಬ್ರಹ್ಮ. ಇದರ ವಿವರಣೆಯನ್ನು ನಿನ್ನಿಂದ ತಿಳಿಯಬೇಕು”  ಎನ್ನುವ ಭಾವವನ್ನು ಅರ್ಜುನ ವ್ಯಕ್ತಪಡಿಸಿದ ಎನ್ನುವುದನ್ನು ತಿಳಿಸುವ ವಿಶೇಷಣ  ‘ಪುರುಷೋತ್ತಮ’. ಅರ್ಜುನ ಕೇಳುತ್ತಾನೆ “ಯಾವುದನ್ನು ಅಧಿಭೂತವೆನ್ನುತ್ತಾರೆ?  ಯಾವುದನ್ನು ಅಧಿದೈವವೆನ್ನುತ್ತಾರೆ?” ಎಂದು.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( ब्रह्म, अध्यात्म और कर्मादि के विषय में अर्जुन के सात प्रश्न और उनका उत्तर )
अर्जुन उवाच
किं तद्ब्रह्म किमध्यात्मं किं पुरुषोत्तम।
अधिभूतं च किं प्रोक्तमधिदैवं किमुच्यते॥

अर्जुन ने कहा- हे पुरुषोत्तम! वह ब्रह्म क्या है? अध्यात्म क्या है? कर्म क्या है? अधिभूत नाम से क्या कहा गया है और अधिदैव किसको कहते हैं
॥1॥

Arjuna Uvaacha:
Kim tadbrahma kim adhyaatmam kim karma purushottama;
Adhibhootam cha kim proktam adhidaivam kimuchyate.

Arjuna said:
What is that Brahman? What is Adhyatma? What is action, O best among men? What isdeclared to be Adhibhuta? And what is Adhidaiva said to be?

ಅಧ್ಯಾಯ - 08 : ಶ್ಲೋಕ – 02

ಅಧಿಯಜ್ಞಃ ಕಥಂ ಕೋSತ್ರ ದೇಹೇSಸ್ಮಿನ್ ಮಧುಸೂದನ ।ಪ್ರಯಾಣಕಾಲೇ ಚ ಕಥಂ ಜ್ಞೇಯೋSಸಿ ನಿಯತಾತ್ಮಭಿಃ ॥೨॥

ಅಧಿಯಜ್ಞಃ ಕಥಮ್ ಕಃ ಅತ್ರ ದೇಹೇ ಅಸ್ಮಿನ್ ಮಧುಸೂದನ ।
ಪ್ರಯಾಣ ಕಾಲೇ ಚ ಕಥಮ್  ಜ್ಞೇಯಃ ಅಸಿ ನಿಯತ ಆತ್ಮಭಿಃ –

ಮಧುಸೂದನ, ಇಲ್ಲಿ ಈ ದೇಹದಲ್ಲಿ ‘ಅಧಿಯಜ್ಞ’ಯಾರು? ಮತ್ತು ಹೇಗೆ? ಬಗೆ ಹಿಡಿತದಲ್ಲಿಟ್ಟವರು ಕೊನೆಯ ಕಾಲದಲ್ಲಿ ನಿನ್ನನ್ನು ಹೇಗೆ ನೆನೆಯಬೇಕು?

ಮುಂದುವರಿದು ಅರ್ಜುನ ಕೇಳುತ್ತಾನೆ “ಅಧಿಯಜ್ಞ ಅಂದರೆ ಯಾರು?” ಎಂದು. ನಮ್ಮ ದೇಹದೊಳಗಿರುವ ಅಧಿಯಜ್ಞ ಯಾರು ಮತ್ತು ಹೇಗೆ? ಅಧಿಯಜ್ಞದ ಅರ್ಥವ್ಯಾಪ್ತಿ ಏನು? ಎನ್ನುವುದು ಅರ್ಜುನನ ಪ್ರಶ್ನೆ. ಇಲ್ಲಿ ಪುನಃ ವ್ಯಾಸರು “ಮಧುಸೂದನ” ಎನ್ನುವ ವಿಶೇಷಣವನ್ನು ಬಳಸಿ ಅರ್ಜುನನ ಪ್ರಶ್ನೆಯ ಭಾವನೆಯನ್ನು ನಮಗೆ ತಿಳಿಸುತ್ತಾರೆ.   “ಮಧುಸೂದನ” ಅನ್ನುವ ನಾಮಕ್ಕೆ ಎರಡು ಪ್ರಮುಖ ಅರ್ಥವಿದೆ. ‘ಮಧು’ ಅಂದರೆ ಆನಂದ(Inner bliss). ‘ಸೂದ’ ಎಂದರೆ ಸತ್ಕರ್ಮವನ್ನು ಮಾಡುವ ಸಾತ್ವಿಕರು. ಆದ್ದರಿಂದ ಮಧುಸೂದನ ಎಂದರೆ ಸಾತ್ವಿಕರೊಳಗಿದ್ದು ಅವರಿಗೆ ಆನಂದವನ್ನು ಕೊಡುವವನು ಎಂದರ್ಥ.  ‘ಸೂದ’ ಎಂದರೆ ನಾಶ ಎನ್ನುವ ಇನ್ನೊಂದು ಅರ್ಥವಿದೆ. ಆದ್ದರಿಂದ ದುರ್ಜನರ ಆನಂದವನ್ನು ನಾಶಮಾಡುವವನು ಮಧುಸೂದನ. “ನಮ್ಮೊಳಗೆ ಕೂತು ಆನಂದ ಕೊಡುವವನೂ ನೀನೇ, ದುಃಖ ಕೊಡುವವನೂ ನೀನೆ. ನಮ್ಮೊಳಗಿದ್ದು ಎಲ್ಲ ಯಜ್ಞಗಳನ್ನು ನಿಯಂತ್ರಿಸುವವನು ನೀನೆ. ಆದ್ದರಿಂದ ನೀನೇ ಅಧಿಯಜ್ಞ ಎನ್ನುವುದು ನನ್ನ ತಿಳುವಳಿಕೆ. ಇದನ್ನು ನನಗೆ ವಿವರಿಸು” ಎನ್ನುವ ಅರ್ಜುನನ ಭಾವವನ್ನು ಈ ವಿಶೇಷಣದ ಮೂಲಕ ವ್ಯಾಸರು ಇಲ್ಲಿ ವಿವರಿಸಿದ್ದಾರೆ. ಅರ್ಜುನ ಕೇಳುತ್ತಾನೆ “ನಮ್ಮ ಜೀವನದ ಕೊನೆಯ ಶ್ರೇಷ್ಠವಾದ ಯಾತ್ರೆಯಲ್ಲಿ ಜೀವದ ದೇಹ ನಿರ್ಗಮನದ ಅನುಸಂಧಾನ ಮತ್ತು ಹೋಗುವ ವಿವರವನ್ನು ತಿಳಿಸು” ಎಂದು. 
ಮೇಲಿನ ಶ್ಲೋಕದಲ್ಲಿ ಉಪಯೋಗಿಸಿದ ಪುರುಷೋತ್ತಮ ಮತ್ತು ಮಧುಸೂದನ ಎನ್ನುವ ಎರಡು ವಿಶೇಷಣದ ಹಿಂದಿನ ಅರ್ಥವನ್ನು ನೋಡಿದಾಗ ನಮಗೆ ಸ್ಪಷ್ಟವಾಗಿ ತಿಳಿಯುತ್ತದೆ-ಅರ್ಜುನನಿಗೆ ಈ ಆರು ಸಂಗತಿಯ  (ಪದಗಳ) ನಿಜವಾದ ಅರ್ಥ ತಿಳಿದಿತ್ತು ಎಂದು. ಆದರೂ ಅದರ ವಿವರವನ್ನು ಭಗವಂತನಿಂದ ತಿಳಿದುಕೊಳ್ಳುವ ಉದ್ದೇಶದಿಂದ ಆತ ಈ ಪ್ರಶ್ನೆಯನ್ನು ಕೃಷ್ಣನಲ್ಲಿ ಕೇಳುತ್ತಾನೆ. ಸಾಮಾನ್ಯವಾಗಿ ತಿಳಿದವರು ತಮಗೆ ತಿಳಿದಿದ್ದರೂ ಕೂಡಾ ಇನ್ನೊಬ್ಬರಿಗೆ ತಿಳಿಸುವ ಉದ್ದೇಶದಿಂದ ಈ ರೀತಿ ಪ್ರಶ್ನೆ ಮಾಡುತ್ತಾರೆ. ಇಲ್ಲಿ ಅರ್ಜುನ ತಾನು ತಿಳಿದಿರುವುದನ್ನು ದೃಡೀಕರಿಸಿಕೊಳ್ಳುವುದಕ್ಕೊಸ್ಕರ ಮತ್ತು ಇಡೀ ಮಾನವ ಜನಾಂಗಕ್ಕೆ ಭಗವಂತನ ವಿವರಣೆಯನ್ನು ತಿಳಿಸುವುದಕ್ಕೋಸ್ಕರ ಈ ಪ್ರಶ್ನೆಯನ್ನು ಕೃಷ್ಣನ ಮುಂದಿಟ್ಟಿದ್ದಾನೆ.
ನಮಗೆ ಅನಿಸಬಹುದು “ಯುದ್ಧರಂಗದಲ್ಲಿ ನಿಂತಿರುವ ಅರ್ಜುನ ಏಕೆ ಇಂತಹ ಪ್ರಶ್ನೆಗಳನ್ನು ಕೇಳುತ್ತಿದ್ದಾನೆ? ಇಲ್ಲಿ ಅದರ ಅಗತ್ಯ ಏನಿದೆ?”  ಎಂದು. ಸಾಮಾನ್ಯವಾಗಿ ಯುದ್ಧರಂಗದಲ್ಲಿ ನಿಂತವರಿಗೆ ಸಾವು ಕಾಡುವಷ್ಟು ಇನ್ನ್ಯಾರನ್ನೂ ಕಾಡುವುದಿಲ್ಲ. ಅವರನ್ನು ಪ್ರತಿಕ್ಷಣ ಸಾವು ನಿರೀಕ್ಷಿಸುತ್ತಿರುತ್ತದೆ. ಅವರು ಸಾವು ಮತ್ತು ಸಾವಿನ ಆಚೆಗಿನ ಸ್ಥಿತಿಯ ಬಗ್ಗೆ ಜಾಗೃತರಾಗಿರುತ್ತಾರೆ. ಸಾವಿನಿಂದಾಚೆಗೆ ಏನು ಎನ್ನುವುದು ಸೈನಿಕರಿಗೆ ಬಹಳ ಮಹತ್ವದ್ದಾಗಿರುತ್ತದೆ.  ಈವರೆಗಿನ ಕೃಷ್ಣಾರ್ಜುನ ಸಂವಾದದಲ್ಲಿ ಎಲ್ಲಿಯೂ ಕೃಷ್ಣ ಅರ್ಜುನನಿಗೆ ಗೆಲುವಿನ ಭರವಸೆಯನ್ನು ಕೊಟ್ಟಿಲ್ಲ. ಧರ್ಮದ ಪರ ಹೋರಾಡುವುದು ನಿನ್ನ ಕರ್ತವ್ಯ ಅಂದಿದ್ದಾನೆ ಅಷ್ಟೇ. ಆದ್ದರಿಂದ ಯುದ್ಧರಂಗದಲ್ಲಿರುವ ಅರ್ಜುನನಿಗೆ ಸಾವು ಮತ್ತು ಸಾವಿನಿಂದಾಚೆಗೆ ಏನು ಎನ್ನುವುದು ಬಹಳ ಮುಖ್ಯ ವಿಚಾರ.
ಅರ್ಜುನನ ಪ್ರಶ್ನೆಗೆ ಭಗವಂತನ ಉತ್ತರವೇ ಎಂಟನೆಯ ಅಧ್ಯಾಯದ ಉಳಿದ ಭಾಗ. 

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अधियज्ञः कथं कोऽत्र देहेऽस्मिन्मधुसूदन।
प्रयाणकाले च कथं ज्ञेयोऽसि नियतात्मभिः॥

हे मधुसूदन! यहाँ अधियज्ञ कौन है? और वह इस शरीर में कैसे है? तथा युक्त चित्त वाले पुरुषों द्वारा अंत समय में आप किस प्रकार जानने में आते हैं
॥2॥

Adhiyajnah katham ko’tra dehe’smin madhusoodana;
Prayaanakaale cha katham jneyo’si niyataatmabhih.

Who and how is Adhiyajna here in this body, O destroyer of Madhu (Krishna)? And how,at the time of death, art Thou to be known by the self-controlled one?COMMENTARY: In the last two verses of the seventh discourse, Lord Krishna usescertain philosophical terms. Arjuna does not understand their meaning. So he proceeds to questionthe Lord.

ಅಧ್ಯಾಯ - 08 : ಶ್ಲೋಕ – 03

ಭಗವಾನುವಾಚ ।ಅಕ್ಷರಂ ಬ್ರಹ್ಮ ಪರಮಂ ಸ್ವಭಾವೋSಧ್ಯಾತ್ಮಮುಚ್ಯತೇ ।ಭೂತಭಾವೋದ್ಭವಕರೋ ವಿಸರ್ಗಃ ಕರ್ಮಸಂಜ್ಞಿತಃ ॥೩॥

ಭಗವಾನ್ ಉವಾಚ ।
ಅಕ್ಷರಮ್  ಬ್ರಹ್ಮ ಪರಮಮ್  ಸ್ವಭಾವಃ ಅಧ್ಯಾತ್ಮಮ್ ಉಚ್ಯತೇ ।
ಭೂತ ಭಾವ ಉದ್ಭವ ಕರಃ ವಿಸರ್ಗಃ ಕರ್ಮ ಸಂಜ್ಞಿತಃ –

ಭಗವಂತ ಹೇಳಿದನು: ಪರಮಾಕ್ಷರ ಎನ್ನಿಸಿದ ಪರತತ್ವವೆ ‘ಬ್ರಹ್ಮ’. ಜೀವ ಸ್ವರೂಪ ಮತ್ತು ಜೀವಕ್ಕೆ ಸಂಭದಿಸಿದ ಸಮಷ್ಟಿ ಪಿಂಡಾಂಡವನ್ನು [ಭಗವಂತನ ಬಗೆಯ ನಿಲುವನ್ನು] ‘ಅಧ್ಯಾತ್ಮ’ ಎನ್ನುತ್ತಾರೆ. ಜೀವ-ಜಡಗಳ ಅಭಿವ್ಯಕ್ತಿಗೆ ಕಾರಣವಾದ ಭಗವಂತನ ಬಗೆಬಗೆಯ ಸೃಷ್ಟಿಕ್ರಿಯೆಗೆ ‘ಕರ್ಮ’ ಎಂದು ಹೆಸರು.

ಕೃಷ್ಣ   ಹೇಳುತ್ತಾನೆ ‘ಬ್ರಹ್ಮ’ ಅಂದರೆ “ಪರಮಂ ಬ್ರಹ್ಮ –ಪರಮಂ ಅಕ್ಷರ’ ಎಂದು. ಭಗವಂತ ಎಲ್ಲರಿಗಿಂತ ಹಿರಿದಾದ  ಪರಮಮ್ ಬ್ರಹ್ಮ- ಆತ ಪರಮಾಕ್ಷರ. ಅಂತಹ ಭಗವಂತನ ಬಗೆಗೆ ತಿಳಿದುಕೊಳ್ಳಬೇಕು ಎನ್ನುವುದು ‘ಬ್ರಹ್ಮ’ ಪದದ ಹಿಂದಿನ ಅರ್ಥ. ವಿಷ್ಣು ಸಹಸ್ರನಾಮದಲ್ಲಿ ಭಗವಂತನನ್ನು ಈ ರೀತಿ ವರ್ಣಿಸಿದ್ದಾರೆ:
ಪರಮಂ ಯೋ ಮಹತ್ತೇಜಃ ಪರಮಂ ಯೋ ಮಹತ್ತಪಃ |
ಪರಮಂ ಯೋ ಮಹದ್ಬ್ರಹ್ಮ ಪರಮಂ ಯಃ ಪರಾಯಣಮ್ ||
ಭಗವಂತ ಬೆಳಕುಗಳಿಗೆ ಬೆಳಕು ನೀಡುವ ಸ್ವರೂಪ; ಎಲ್ಲರ ಚಿಂತನೆಯ ಕೊನೆಯ ಗುರಿ; ಎಲ್ಲ ಜ್ಞಾನದ ಗಮ್ಯ ಆ ಭಗವಂತ.  ಇಲ್ಲಿ ಭಗವಂತನನ್ನು  'ಪರಮ ಮಹಾ ಬ್ರಹ್ಮ'ಎನ್ನುತ್ತಾರೆ.  ಬ್ರಹ್ಮ ಎಂದರೆ ಜೀವರು; ಪರಬ್ರಹ್ಮ ಎಂದರೆ ಮುಕ್ತರಾದ ಜೀವರು; ಪರಮಬ್ರಹ್ಮ ಎಂದರೆ ಶ್ರೀತತ್ವ, ನಿತ್ಯ ಮುಕ್ತಳಾದ ಶ್ರೀಲಕ್ಷ್ಮಿ. ಪರಮ ಮಹಾ ಬ್ರಹ್ಮ ಎಂದರೆ ನಾರಾಯಣ. ಭಗವಂತ ಪರಾಯಣರಿಗೂ ಕೂಡಾ ಪರಮ. ಇಲ್ಲಿ ಪರಾಯಣರು ಎಂದರೆ ನಮಗೆ ಆಸರೆಯಾಗಿರುವ ತತ್ವಾಭಿಮಾನಿ ದೇವತೆಗಳು.  ಭಗವಂತ ಸರ್ವ ದೇವತೆಗಳ ಒಡೆಯ.  ಇದು ನಾವು ತಿಳಿದುಕೊಳ್ಳಬೇಕಾದ ಆರು ಸಂಗತಿಗಳಲ್ಲಿ  ಒಂದಾದ  ‘ಬ್ರಹ್ಮ’ ಪದದ ಅರ್ಥ.
ಮುಂದುವರಿದು ಕೃಷ್ಣ ಹೇಳುತ್ತಾನೆ “ಸ್ವಭಾವಃ ಅಧ್ಯಾತ್ಮಮ್ ಉಚ್ಯತೇ” ಎಂದು. ಇಲ್ಲಿ ಸ್ವಭಾವ ಎಂದರೆ ತನ್ನತನ. ಜೀವದ ಇರವಿನ ಬಗೆ ಮತ್ತು ಜೀವ ಸ್ವಭಾವ. ನಾವು ಭಗವಂತನನ್ನು ಅರಿಯುವ ಮೊದಲು ನಮ್ಮ ಜೀವ ಸ್ವಭಾವವನ್ನು ಅರಿಯಬೇಕು. ನಾನು ಅಂದರೆ ಏನು? ನನ್ನಲ್ಲಿರುವ ಉತ್ತಮ ಅಂಶ(plus point) ಯಾವುದು? ಕೆಟ್ಟ ಅಂಶ(minus point) ಯಾವುದು ಎಂದು ನಿರಂತರ ನಾವು ನಮ್ಮನ್ನು ತಿಳಿಯಲು ಪ್ರಯತ್ನಿಸಬೇಕು [ಆದರೆ ನಾವು ನಮ್ಮ ಹೆಚ್ಚಿನ ಸಮಯವನ್ನು ಇನ್ನೊಬ್ಬರ ಬಗ್ಗೆ ತೀರ್ಪು ಕೊಡುವುದರಲ್ಲಿ ಕಳೆಯುತ್ತೇವೆ!!!] . ನಮಗೆ ಈ ದೇಹದಲ್ಲಿ ಕಣ್ಣು, ಕೈ, ಕಾಲು ಹಾಗು ಇತರ ಅಂಗಾಂಗಗಳನ್ನೂ ಬಿಟ್ಟು ಒಂದು ‘ನಾನು’ ಅನ್ನುವ ವಸ್ತುವಿದೆ ಎನ್ನುವ ಅರಿವೇ ಇರುವುದಿಲ್ಲ [awareness of self].  ಮೊದಲು ನಾವು  ಜೀವದ ಇರುವಿಕೆಯನ್ನು ತಿಳಿದುಕೊಳ್ಳಬೇಕು, ನಂತರ  ಅದರ ಸ್ವಭಾವವೇನು ಎಂದು ತಿಳಿಯಬೇಕು. [ಸಾಮಾನ್ಯವಾಗಿ ನಮಗೆ ನಮ್ಮ ಜೀವ ಸ್ವಭಾವ ಏನು ಎಂದು ತಿಳಿದಿರುವುದಿಲ್ಲ. ನಾವು ಪ್ರಭಾವದಲ್ಲೇ ಬದುಕುತ್ತಿರುತ್ತೇವೆ.]
ಜೀವ ಅನ್ನುವುದು ಅತೀ ಸೂಕ್ಷ್ಮವಾದ ವಸ್ತು. ಅದು ಹೃತ್ಕಮಲ ಮಧ್ಯದಲ್ಲಿ ಅನಾಹತ ಚಕ್ರ(thymus gland)ವೆಂಬ ಶಕ್ತಿ ಕೇಂದ್ರದಲ್ಲಿದೆ. ಈ ಜೀವ ಎನ್ನುವುದು ಕೋಣೆಯಲ್ಲಿ ಹಚ್ಚಿದ ಪುಟ್ಟ ದೀಪದಂತೆ. ದೀಪ ಇಡೀ ಕೋಣೆಯನ್ನು ಬೆಳಗಿಸುವಂತೆ,  ಜೀವ  ಅತಿ ಸೂಕ್ಷ್ಮವಾದರೂ ಕೂಡಾ ಅದರ ಬೆಳಕು ಇಡೀ ದೇಹವನ್ನು ವ್ಯಾಪಿಸಿರುತ್ತದೆ. ಇಂತಹ  ಜೀವ ಮತ್ತು ಜೀವ ಸ್ವಭಾವವೇ ‘ಅಧ್ಯಾತ್ಮ’.
ಕೃಷ್ಣ ಮುಂದುವರಿದು ಹೇಳುತ್ತಾನೆ “ಈ ಪ್ರಪಂಚ ಎಂದರೆ ಭೂತ ಮತ್ತು ಭಾವ-ಅಂದರೆ ಇದು ಜೀವ ಮತ್ತು ಜಡದ ಸೃಷ್ಟಿ” ಎಂದು. ನಾವು ಈ ಜಗತ್ತಿನಲ್ಲಿದ್ದೇವೆ. ಇಂತಹ ಜಗತ್ತು ಹೇಗೆ ಸೃಷ್ಟಿಯಾಯಿತು? ಯಾವಾಗ ಸೃಷ್ಟಿಯಾಯಿತು? ಅದರ ಹಿಂದಿರುವ ಮೂಲದ್ರವ್ಯ ಯಾವುದು? ಅದರ ನಿಮಿತ್ತ ಮತ್ತು ಉಪಾದಾನ ಕಾರಣ ಯಾರು? ಜೀವ ದೇಹದಮೂಲಕ ಹುಟ್ಟುವುದು ಏಕೆ? ಎಲ್ಲವನ್ನೂ ವ್ಯವಸ್ಥಿತವಾಗಿ ನಡೆಸುತ್ತಿರುವ ಆ ಮಹಾ ಶಕ್ತಿ ಯಾವುದು? ಹೀಗೆ ಚಿಂತನೆ ಮಾಡಿದಾಗ ನಮಗೆ ಒಂದು ವಿಷಯ ತಿಳಿಯುತ್ತದೆ-ಅದೇ ಕರ್ಮ  ಸಿದ್ಧಾಂತ. ಈ ಜೀವಜಾತವನ್ನು ಮತ್ತು ಜಡಪ್ರಪಂಚವನ್ನು ಸೃಷ್ಟಿ ಮಾಡುವ ಮೂಲ ಶಕ್ತಿ ಆ ಭಗವಂತ. ಅವನ ಕ್ರಿಯೆಯೇ ನಿಜವಾದ ಕ್ರಿಯೆ. ಈ ಪ್ರಪಂಚದ ವೈವಿಧ್ಯಮಯವಾದ ಸೃಷ್ಟಿಯ ಮೂಲವನ್ನು ತಿಳಿದಾಗ ನಿಜವಾದ ಕರ್ಮ ತಿಳಿಯುತ್ತದೆ. ನಾವೆಲ್ಲರೂ ಕೂಡಾ ಭಗವಂತ ಸೃಷ್ಟಿ ಮಾಡಿದ ಗೊಂಬೆಗಳು-ಆತ ಸೂತ್ರದಾರ. ನಮ್ಮ ಕ್ರಿಯೆ  ಆ ಸೂತ್ರದಾರನ ನಿಯಮಕ್ಕೆ ಬದ್ಧ. ಇಡೀ ವಿಶ್ವಚಕ್ರ ಭಗವಂತನ ಅಧೀನವಾಗಿ ತಿರುಗುತ್ತಿದೆ. ಭಗವಂತನ ಕ್ರಿಯೆ ಮಹಾಕ್ರಿಯೆ. ನಮ್ಮ ಕ್ರಿಯೆ -ಸುತ್ತುತ್ತಿರುವ ಮಹಾ ಚಕ್ರದ ಮೇಲೆ ಚಲಿಸುತ್ತಿರುವ  ಇರುವೆಯಂತೆ. ಇರುವೆ ಯಾವ ದಿಕ್ಕಿಗೆ ಚಲಿಸಿದರೂ ಕೂಡಾ ಅದು ಚಲಿಸುವುದು ಚಕ್ರ ತಿರುಗಿದಂತೆ ಹೊರತು ಇರುವೆ ಚಲಿಸಿದಂತೆ  ಚಕ್ರ ತಿರುಗುವುದಿಲ್ಲ. ಅದೇ ರೀತಿ ಪ್ರಪಂಚದ ಗತಿ ನಮ್ಮ ಕ್ರಿಯೆಯ ಮೇಲೆ ನಿರ್ಧಾರವಲ್ಲ. ಅದು ತನ್ನ ಗತಿಗನುಗುಣವಾಗಿ ನಿರಂತರ ನಡೆಯುತ್ತಿರುತ್ತದೆ. ಆದ್ದರಿಂದ ‘ನಾನು ಮಾಡಿದೆ’ ನನ್ನಿಂದಾಯ್ತು’ ಎಂದು ಅಹಂಕಾರ ಪಡುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗೆ  ಜೀವ ಜಡ ಪ್ರಪಂಚ ಸೃಷ್ಟಿಗೆ ಕಾರಣವಾಗಿರತಕ್ಕಂತಹ ವಿಶಿಷ್ಟವಾದ ಸೃಷ್ಠಿ ಕ್ರಿಯೆಯೇ ನಿಜವಾದ ‘ಕರ್ಮ’.
ಈ ಶ್ಲೋಕವನ್ನು ಇನ್ನೊಂದು ಆಯಾಮದಲ್ಲಿ ನೋಡಿದಾಗ ಇದು ಹೊಸ ರೀತಿಯಲ್ಲಿ ತೆರೆದುಕೊಳ್ಳುತ್ತದೆ. ಇಲ್ಲಿ ಜೀವ ಬರುವುದೇ ಇಲ್ಲ. ಎಲ್ಲಾ ಮೂರೂ ಸಂಗತಿಗಳೂ ಭಗವಂತನನ್ನು ಹೇಳುತ್ತವೆ. ಬ್ರಹ್ಮ ಎಂದರೆ ‘ಭಗವಂತ’ ; ಸ್ವಭಾವ ಅಂದರೆ ಭಗವಂತನ ಸ್ವತಂತ್ರ ಭಾವ. ಆದ್ದರಿಂದ ಭಗವಂತನ ಗುಣ-ಧರ್ಮ ಚಿಂತನೆಯೇ ಅಧ್ಯಾತ್ಮ. ನಮ್ಮಲ್ಲಿ ಕೆಲವರು ಕೇಳುವುದಿದೆ. “ಭಗವಂತನಿಗೆ ಏಕೆ ಈ ಸ್ವಭಾವ ?   ಒಬ್ಬರಿಗೆ ಸುಖ, ಒಬ್ಬರಿಗೆ ದುಃಖ, ಒಬ್ಬರಿಗೆ ಬಡತನ, ಒಬ್ಬರಿಗೆ ಸಿರಿತನ, ಒಬ್ಬರು ನರಕಕ್ಕೆ, ಒಬ್ಬರು ಸ್ವರ್ಗಕ್ಕೆ , ಏಕೆ ಈ ತಾರತಮ್ಯ ?” ಎಂದು. ಇದು ಬಾಲಿಶ ಪ್ರಶ್ನೆ. ಇಂತಹ ವಾದದಿಂದಲೇ ನಮ್ಮಲ್ಲಿ ನಾಸ್ತಿಕತೆ ಹುಟ್ಟಿಕೊಂಡಿರುವುದು. ಜೀವ ಅನಾದಿನಿತ್ಯ, ಅದನ್ನು ಭಗವಂತ ಸೃಷ್ಟಿ ಮಾಡುವುದಿಲ್ಲ. ಪ್ರತಿಯೊಂದು ಜೀವ ಸ್ವರೂಪದ ಗುಣಧರ್ಮ ಸ್ವಭಾವಕ್ಕನುಗುಣವಾಗಿ, ಅರ್ಹತೆಗನುಗುಣವಾಗಿ, ಅವರವರನ್ನು ಸೃಷ್ಟಿ ಮಾಡುವುದು ಭಗವಂತನ ಸ್ವಭಾವ. ಆದ್ದರಿಂದ ಇಲ್ಲಿ ತಾರತಮ್ಯ ಅನ್ನುವ ಪ್ರಶ್ನೆಯೇ ಇಲ್ಲ. ಭಗವಂತನ ಸೃಷ್ಟಿಯ ಹಿಂದಿರುವ  ಭಗವಂತನ  ಸ್ವತಂತ್ರ್ಯ, ಆತನ ನಿಷ್ಪಕ್ಷಪಾತ, ಯಾವುದೇ ಪ್ರಭಾವಕ್ಕೊಳಗಾಗದಿರುವುದು, ತ್ರಿಗುಣಾತೀತತ್ವ, ಇವು ಭಗವಂತನ ಮೂಲಭೂತ ಸ್ವಭಾವ. ಇದರ ಅರಿವೇ ‘ಅಧ್ಯಾತ್ಮ’. ಭಗವಂತನ ಗುಣಧರ್ಮವನ್ನು ತಿಳಿದಾಗ ಅವನ ಸೃಷ್ಟಿ ಏನು ಎಂದು ಅರ್ಥವಾಗುತ್ತದೆ. ಅದೇ ಕರ್ಮ. ಭಗವಂತನ ಕ್ರಿಯೆಯಲ್ಲಿ ಜ್ಞಾನ-ಇಚ್ಚೆ-ಕೃತಿ ಎನ್ನುವ ಮೂರು ಹಂತವಿಲ್ಲ. ಆತ ಇಚ್ಚಿಸುವುದೇ ಕ್ರಿಯೆ. ಇದನ್ನು ತಿಳಿಯುವುದು ‘ಕರ್ಮದ ಅರಿವು’. ಹೀಗೆ ಭಗವಂತನ ಸ್ವರೂಪದ, ಗುಣಧರ್ಮದ ಮತ್ತು ಕ್ರಿಯೆಯ  ಅರಿವೇ –ಬ್ರಹ್ಮ ಅಧ್ಯಾತ್ಮ ಮತ್ತು ಕರ್ಮ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

श्रीभगवानुवाच
अक्षरं ब्रह्म परमं स्वभावोऽध्यात्ममुच्यते।
भूतभावोद्भवकरो विसर्गः कर्मसंज्ञितः॥

श्री भगवान ने कहा- परम अक्षर 'ब्रह्म' है, अपना स्वरूप अर्थात जीवात्मा 'अध्यात्म' नाम से कहा जाता है तथा भूतों के भाव को उत्पन्न करने वाला जो त्याग है, वह 'कर्म' नाम से कहा गया है
॥3॥

Sri Bhagavaan Uvaacha:
Aksharam brahma paramam swabhaavo’dhyaatmamuchyate;
Bhootabhaavodbhavakaro visargah karmasamjnitah.

The Blessed Lord said:
Brahman is the Imperishable, the Supreme;
His essential nature is called Self-knowledge;
the offering (to the gods) which causes existence and manifestation of beings and which alsosustains them is called action

 ಅಧ್ಯಾಯ - 08 : ಶ್ಲೋಕ – 04

ಅಧಿಭೂತಂ ಕ್ಷರೋ ಭಾವಃ ಪುರುಷಶ್ಚಾಧಿದೈವತಮ್ ।ಅಧಿಯಜ್ಞೋSಹಮೇವಾತ್ರ ದೇಹೇ ದೇಹಭೃತಾಂ ವರ ॥೪॥

ಅಧಿಭೂತಮ್  ಕ್ಷರಃ  ಭಾವಃ ಪುರುಷಃ ಚ ಅಧಿದೈವತಮ್ ।
ಅಧಿಯಜ್ಞಃ ಅಹಮ್ ಏವ ಅತ್ರ ದೇಹೇ ದೇಹಭೃತಾಮ್  ವರ-

 ಹುಟ್ಟಿ ಸಾಯುವ ಸಮಷ್ಟಿ ಬ್ರಹ್ಮಾಂಡ [ದೇಹೆಂದ್ರಿಯಗಳಿಂದ ಕೂಡಿದ ಜೀವರಾಶಿ] ‘ಅಧಿಭೂತ’, ಶರೀರದೊಳಗಿದ್ದು ನಿಯಮಿಸುವ ತತ್ವಾಭಿಮಾನಿ ದೇವತೆಗಳು[ಜಗತ್ತಿನ ಹಿರಿಯ ಚಾಲಕಶಕ್ತಿಯಾಗಿ ‘ಪುರುಷ’ ಎನಿಸಿದ ಶ್ರಿತತ್ವ ] ‘ಅಧಿದೈವ’. ಹಿರಿಯ ಜೀವವೆ, ಈ ದೇಹದಲ್ಲಿ ನಾನೆ ‘ಅಧಿಯಜ್ಞ’.

ಹಿಂದಿನ ಶ್ಲೋಕದಲ್ಲಿ ನೋಡಿದಂತೆ ಅಧ್ಯಾತ್ಮ ಎಂದರೆ ಶರೀರದಲ್ಲಿ ಬಂಧಿಯಾಗಿರುವ ಜೀವ. ಈ ಜೀವದ ಭೋಗಕ್ಕಾಗಿ ಸೃಷ್ಟಿಯಾಗಿರತಕ್ಕಂತಹ ಪಂಚಭೂತಾತ್ಮಕವಾದ ಈ ಪ್ರಪಂಚದ ಸಮಸ್ತ ವಿಚಾರಗಳೂ ಅಧಿಭೂತದಲ್ಲಿ ಸೇರಿದೆ. ಪಂಚಭೂತದ ಮೂಲದ್ರವ್ಯ ಮತ್ತು ಪಂಚಭೂತದಿಂದ ನಿರ್ಮಾಣಗೊಂಡ ಪ್ರಪಂಚ ಅಧಿಭೂತ. ಜಡ ಪ್ರಕೃತಿಯಿಂದ ಹಿಡಿದು ಸ್ಥೂಲ ವಿಶ್ವದ ತನಕ ತ್ರಿಗುಣಾತ್ಮಕವಾದ  ಎಲ್ಲವೂ ‘ಅಧಿಭೂತ’.
ಕೃಷ್ಣ ಹೇಳುತ್ತಾನೆ “ಪುರುಷಶ್ಚಾಧಿದೈವತಮ್” ಎಂದು. ಈ ಶರೀರದೊಳಗಿರುವ ಜೀವಕ್ಕೆ ನೆರವಾಗುವುದಕ್ಕೊಸ್ಕರ ದೇಹದಲ್ಲಿ ಬೇರೆ ಬೇರೆ ಇಂದ್ರಿಯಗಳನ್ನು ನಿಯಂತ್ರಿಸತಕ್ಕಂತಹ ದೇವತೆಗಳಿದ್ದಾರೆ. ಇದು ಅಧಿದೈವತಾ ವಿಜ್ಞಾನ. ಇದು ಒಂದು ಮುಖ. ಇನ್ನೊಂದು ರೀತಿಯಲ್ಲಿ ನೋಡಿದರೆ ಇಲ್ಲಿ ಕೃಷ್ಣ ‘ಪುರುಷ’ ಎಂದು ಸಂಬೋಧಿಸಿದ್ದಾನೆ.  ನಮ್ಮ ದೇಹದಲ್ಲಿ ನಾಲ್ಕು "ಪುರುಷರಿದ್ದಾರೆ'. ಶರೀರಪುರುಷ, ಛಂದಃಪುರುಷ, ವೇದಪುರುಷ ಮತ್ತು ಸಂವತ್ಸರಪುರುಷ. ಈ ದೇಹ ನಿಂತು ನಡೆದಾಡಬೇಕಾದರೆ ದೇಹದಲ್ಲಿ ಶರೀರಪುರುಷನಾದ ಶಿವಶಕ್ತಿ ಬೇಕು. ಮನಸ್ಸು ಯೋಚಿಸಿದ್ದನ್ನು ಸ್ಪಂದನ, ಪರಾಶರ, ಪಶ್ಯಂತಿ, ಮದ್ಯಮ ಮತ್ತು ವೈಖರಿ ರೂಪದಲ್ಲಿ ವಾಕ್ ಶಕ್ತಿ ಯಾಗಿ ಹೊರಹೊಮ್ಮಲು ಛಂದಃಪುರುಷನಾದ ಶೇಷ ಕಾರಣ. ಮನೋಮಯ ಕೋಶದಲ್ಲಿದ್ದು, ವೇದಾಂತದ ಚಿಂತನೆ, ಮನಸ್ಸಿನಲ್ಲಿ ಮನನ ಶಕ್ತಿ ಕೊಡತಕ್ಕವ ವೇದಪುರುಷ ಗರುಡ. ವೇದಪುರುಷ ನಮಗೆ  ಅಪೂರ್ವವಾದ ವೈದಿಕ ವಾಙ್ಮಯ ಶಕ್ತಿ ಪ್ರಾಪ್ತವಾಗುವಂತೆ ಮಾಡುತ್ತಾನೆ. ಜೀವದ ಯೋಗ್ಯತೆಯನ್ನು, ಇಡೀ ಜೀವದ ಸ್ವರೂಪವನ್ನು ನಿಯಂತ್ರಣ ಮಾಡುವವ ಜೀವಕಲಾಭಿಮಾನಿ ಚತುರ್ಮುಖಬ್ರಹ್ಮ, ಈತ ಸಂವತ್ಸರಪುರುಷ.  [ ‘ಸಂ-ವತ್ಸ-ರ’- ಅಂದರೆ ಚನ್ನಾಗಿ ಮಕ್ಕಳನ್ನು ಸಾಕುವ ಪಿತಾಮಹ]. ಬ್ರಹ್ಮ-ವಾಯು ಜೀವವನ್ನು ಮೇಲಕ್ಕೆತ್ತಿ ಸಾಧನೆಯ ಹಾದಿಯಲ್ಲಿ ತೊಡಗಿಸುತ್ತಾರೆ. ಹೀಗೆ ಈ ಪಂಚದೇವತೆಗಳು ಭಗವಂತನ  ನಂತರ ದೇಹದಲ್ಲಿರುವ ಪ್ರಮುಖ ಅಧಿದೇವತೆಗಳು. ಅವರಿಂದ ನಿಯಂತ್ರಿಸಲ್ಪಟ್ಟ ಸಮಸ್ತ ಬ್ರಹ್ಮಾಂಡ ಅಧಿಭೂತ.
ಕೃಷ್ಣ ಮುಂದುವರಿದು ಹೇಳುತ್ತಾನೆ: ಪ್ರತಿಯೊಂದು ದೇಹದ ಒಳಗೂ ನಾನು ಒಂದೊಂದು ರೂಪದಲ್ಲಿದ್ದೇನೆ ಎಂದು. ಭಗವಂತನ ಈ ರೂಪವೇ ‘ಅಧಿಯಜ್ಞ’ ರೂಪ. ಯಜ್ಞವನ್ನು ಅಧಿಕರಿಸಿ, ಅದನ್ನು ನಿಯಂತ್ರಿಸುವ ಯಜ್ಞ ಭೋಕ್ತಾರ, ಯಜ್ಞವನ್ನು ಮಾಡುವವ, ಮಾಡಿಸುವವ, ಫಲಪ್ರದ ಭಗವಂತ ಅಧಿಯಜ್ಞ. ನಾವು ಭಗವಂತನ ಪೂಜಾರೂಪ ಎಂದು ತಿಳಿದು ಮಾಡುವ ಎಲ್ಲಾ ಕರ್ಮವೂ ಯಜ್ಞ. ‘ಯಜ ದೇವಾ ಪೂಜಾಯಾಂ’ – ನಮ್ಮ ಬದುಕಿನ ಪ್ರತಿಯೊಂದು ಕ್ರಿಯೆಯೂ ಭಗವಂತನ ಆರಾದನೆ. ನಮ್ಮ ದೇಹದೊಳಗಿದ್ದು, ಸಕಲ ತತ್ವಾಭಿಮಾನಿ ದೇವತೆಗಳ ಮುಖೇನ ಕ್ರಿಯೆ ಮಾಡಿಸುವ ಭಗವಂತ ‘ಅಧಿಯಜ್ಞ’.
ಎರಡನೇ ಆಯಾಮದಲ್ಲಿ ಈ ಶ್ಲೋಕವನ್ನು ನೋಡಿದರೆ [ಹಿಂದಿನ ಶ್ಲೋಕದಲ್ಲಿ ಭಗವಂತ-ಭಗವಂತನ ಸ್ವಭಾವ ಮತ್ತು ಅವನ ಕ್ರಿಯೆ ಎನ್ನುವ ಅರ್ಥ ವಿಶ್ಲೇಷಣೆಯಂತೆ] ಅಧಿಭೂತ ಎಂದರೆ ಬ್ರಹ್ಮಾದಿಸಮಸ್ತ ದೇವತೆಗಳು. ಚೇತನಾಚೇತನಾತ್ಮಕ ಪ್ರಪಂಚ, ಜೀವರು, ಶರೀರ, ಬ್ರಹ್ಮ ಮತ್ತು ಬ್ರಹ್ಮಾಂಡ ಎಲ್ಲವೂ ಅಧಿಭೂತ. ಎಲ್ಲಾ ದೇವತೆಗಳಿಗೂ ಮಿಗಿಲಾದ ಭಗವಂತನ ಅನಂತರ ಬ್ರಹ್ಮಾದಿ ದೇವತೆಗಳಿಗೂ ತಾಯಿಯಾದ ‘ಶಕ್ತಿ’ ಶ್ರಿತತ್ವ ಅಧಿದೈವ. ಎಲ್ಲೆಡೆ ತುಂಬಿದ್ದು ಎಲ್ಲಾ ಜೀವರ ಒಳಗೆ ಅಂತರ್ಯಾಮಿಯಾಗಿ ನಿಂತು ನಿಯಮಿಸುವ ಭಗವಂತ ಅಧಿಯಜ್ಞ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अधिभूतं क्षरो भावः पुरुषश्चाधिदैवतम्‌।
अधियज्ञोऽहमेवात्र देहे देहभृतां वर॥

उत्पत्ति-विनाश धर्म वाले सब पदार्थ अधिभूत हैं, हिरण्यमय पुरुष (जिसको शास्त्रों में सूत्रात्मा, हिरण्यगर्भ, प्रजापति, ब्रह्मा इत्यादि नामों से कहा गया है) अधिदैव है और हे देहधारियों में श्रेष्ठ अर्जुन! इस शरीर में मैं वासुदेव ही अन्तर्यामी रूप से अधियज्ञ हूँ
॥4॥

Adhibhootam ksharo bhaavah purushashchaadhidaivatam;
Adhiyajno’hamevaatra dehe dehabhritaam vara.

Adhibhuta (knowledge of the elements) pertains to My perishable Nature, and thePurusha or soul is the Adhidaiva;
I alone am the Adhiyajna here in this body, O best among theembodied (men)!


ಅಧ್ಯಾಯ - 08 : ಶ್ಲೋಕ – 05

ಅಂತಕಾಲೇ ಚ ಮಾಮೇವ ಸ್ಮರನ್ ಮುಕ್ತ್ವಾ ಕಳೇಬರಮ್ ।ಯಃ ಪ್ರಯಾತಿ ಸ ಮದ್ಭಾವಂ ಯಾತಿ ನಾಸ್ತ್ಯತ್ರ ಸಂಶಯಃ ॥೫॥

ಅಂತಕಾಲೇ ಚ ಮಾಮ್ ಏವ ಸ್ಮರನ್ ಮುಕ್ತ್ವಾ ಕಳೇಬರಮ್ ।
ಯಃ ಪ್ರಯಾತಿ ಸ ಮತ್ ಭಾವಮ್  ಯಾತಿ ನ ಅಸ್ತಿ ಅತ್ರ ಸಂಶಯಃ –

ಕೊನೆಯ ಕಾಲದಲ್ಲು ನನ್ನನ್ನೆ ನೆನೆಯುತ್ತ ದೇಹವನ್ನು ತೊರೆದು ತೆರಳುವವನು ನನ್ನಂತಯೆ ದುಃಖವಿರದ ಸುಖದ ನಿಜಸ್ಥಿತಿಯನ್ನು [ನನ್ನಲ್ಲೆ ಇರವನ್ನು] ಪಡೆಯುತ್ತಾನೆ.
ಅರ್ಜುನನ ಕೊನೆಯ ಪ್ರಶ್ನೆಗೆ ಕೃಷ್ಣ ಉತ್ತರಿಸುತ್ತಾ ಹೇಳುತ್ತಾನೆ “ಸಾಯುವ ಕ್ಷಣದಲ್ಲೂ ಕೂಡ ನನ್ನನ್ನೇ ನೆನೆಯುತ್ತಾ ದೇಹವನ್ನು ತೊರೆಯುವ ಜೀವರು ನನ್ನ ಹಾಗೇ ಜ್ಞಾನಾನಂದ ಸ್ವರೂಪರಾಗಿ ನನ್ನಲ್ಲಿ ಬಂದು ನೆಲೆಸುತ್ತಾರೆ. ಅವರು ಮುಂದೆಂದೂ ಈ ಅಜ್ಞಾನ ಮತ್ತು ದುಃಖಮಯವಾದ ಸಂಸಾರದ ತೊಳಲಾಟಕ್ಕೆ ಒಳಗಾಗುವುದಿಲ್ಲ. ಈ ಬಗ್ಗೆ ಎಂದೂ ಸಂಶಯ ಪಡಬೇಡ”  ಎಂದು. ಇಲ್ಲಿ “ಅಂತಕಾಲೇ” ಎಂದರೆ ಮುಪ್ಪಿನ ಕಾಲದಲ್ಲಿ ಎನ್ನುವ ಅರ್ಥವಲ್ಲ ಬದಲಿಗೆ ದೇಹವನ್ನು ಜೀವ ಬಿಡುವ ಕೊನೆಯ ಕ್ಷಣ  ಎಂದರ್ಥ. ದೇಹವನ್ನು ಬಿಡುತ್ತಾ ಭಗವಂತನನ್ನು ಸ್ಮರಿಸುತ್ತಾ ಹೊರಗೆ ಹೋಗುವ ಚೇತನಕ್ಕೆ ಅಗಾಧವಾದ ಬೆಳಕು ಕಾಣಿಸುತ್ತದೆ ಮತ್ತು ಆ ಚೇತನ  ಮೋಕ್ಷವನ್ನು ಸೇರುತ್ತದೆ. [ಜೀವ ಶರೀರವನ್ನು ಬಿಡುವ ಮತ್ತು ದೇಹದಿಂದ ಹೊರ ಬಂದ ಮೇಲೆ ಜೀವದ ಪ್ರಯಾಣದ ಕುರಿತು ಸತ್ತು ಬದುಕಿದ ಅನೇಕ ಜನರ ಅನುಭವವನ್ನು ಸಂಗ್ರಹಿಸಿ Raymond Mody ಬರೆದ “Life after Life” ಎನ್ನುವ ಪುಸ್ತಕ ಬೆಳಕು ಚೆಲ್ಲುತ್ತದೆ].

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अंतकाले च मामेव स्मरन्मुक्त्वा कलेवरम्‌।
यः प्रयाति स मद्भावं याति नास्त्यत्र संशयः॥

जो पुरुष अंतकाल में भी मुझको ही स्मरण करता हुआ शरीर को त्याग कर जाता है, वह मेरे साक्षात स्वरूप को प्राप्त होता है- इसमें कुछ भी संशय नहीं है
॥5॥

Antakaale cha maameva smaran muktwaa kalevaram;
Yah prayaati sa madbhaavam yaati naastyatra samshayah.

And whosoever, leaving the body, goes forth remembering Me alone at the time of death,he attains My Being;
there is no doubt about this.

ಅಧ್ಯಾಯ - 08 : ಶ್ಲೋಕ – 06

ಯಂ ಯಂ ವಾSಪಿ ಸ್ಮರನ್  ಭಾವಂ ತ್ಯಜತ್ಯಂತೇ ಕಳೇಬರಮ್ ।ತನ್ತಮೇವೈತಿ ಕೌಂತೇಯ ಸದಾ ತದ್ ಭಾವಭಾವಿತಃ ॥೬॥

ಯಮ್  ಯಮ್  ವಾ ಅಪಿ ಸ್ಮರನ್  ಭಾವಮ್  ತ್ಯಜತಿ ಅಂತೇ ಕಳೇಬರಮ್   ।
ತಮ್ ತಮ್  ಏವ ಏತಿ ಕೌಂತೇಯ ಸದಾ ತತ್  ಭಾವ ಭಾವಿತಃ  -

ಕೌಂತೇಯ, ಕೊನೆಯಲ್ಲಿ ಯಾವ ಯಾವ ವಿಷಯವನ್ನು ನೆನೆಯುತ್ತ ದೇಹವನ್ನು ತೊರೆಯುತ್ತಾನೆ ಅದರಲ್ಲೆ ಅನುಗಾಲ ಬೇರೂರಿದ ಸಂಸ್ಕಾರದಿಂದ ಅದದನ್ನೆ ಪಡೆಯುತ್ತಾನೆ.

“ಜೀವನ ಯಾತ್ರೆಯ  ಅಂತಿಮ ಕ್ಷಣದಲ್ಲಿ ಭಗವಂತನನ್ನು ನೆನೆದವರು ‘ನನ್ನನ್ನು’ ಸೇರುತ್ತಾರೆ” ಎಂದು ಕೃಷ್ಣ  ಏಕೆ ಹೇಳಿದ ಎನ್ನುವುದಕ್ಕೆ ಈ ಶ್ಲೋಕದಲ್ಲಿ ಉತ್ತರವಿದೆ. ಇಲ್ಲಿ ಕೃಷ್ಣ ಮರಣ ಕಾಲದ ಒಂದು ಅದ್ಭುತ ಮನಃಶಾಸ್ತ್ರವನ್ನು ನಮ್ಮ ಮುಂದೆ ತೆರೆದಿಡುತ್ತಾನೆ. ಸಾಯುವ ಕ್ಷಣದಲ್ಲಿ ಭಗವಂತನ ಧ್ಯಾನ ಮಾಡಲು ಒಂದು ಉದ್ದೇಶವಿದೆ ಎನ್ನುತ್ತಾನೆ ಕೃಷ್ಣ. ನಾವು ದೇಹ ತ್ಯಾಗ ಮಾಡುವಾಗ ಏನನ್ನು ಸ್ಮರಣೆ ಮಾಡುತ್ತೇವೋ ಮುಂದಿನ ಜನ್ಮದಲ್ಲಿ ಅದನ್ನೇ ಪಡೆಯುತ್ತೇವೆ. ಆದ್ದರಿಂದ ಆ ಕಾಲದಲ್ಲಿ ಭಗವಂತನನ್ನು ಸ್ಮರಿಸಿದರೆ ಭಗವಂತನನ್ನು ಸೇರುತ್ತೇವೆ. ಸಾವಿನ ಕೊನೇ ಕ್ಷಣದಲ್ಲಿ ಬರುವ ಚಿಂತನೆ ಮುಂದಿನ ಜನ್ಮದ ನಿರ್ಣಾಯಕ ಸಂಗತಿ. ಹಾಗಾಗಿ ಮುಂದಿನ ಜನ್ಮದಲ್ಲಿ ಆತ ಏನಾಗಬೇಕೋ ಅದೇ ನೆನಪಾಗುತ್ತದೆ! ಭಗವಂತನನ್ನು ಸೇರುವ ಯೋಗ ಇಲ್ಲದವರಿಗೆ ಭಗವಂತನ ನೆನಪು ಬರುವುದೇ ಇಲ್ಲ! ಇದಕ್ಕೆ ಶಾಸ್ತ್ರದಲ್ಲಿ ಅನೇಕ ದೃಷ್ಟಾಂತಗಳಿವೆ. ಈ ದೇಶಕ್ಕೆ ‘ಭಾರತ’ ಎಂದು ಹೆಸರು ಬರಲು ಕಾರಣನಾದ ವೃಷಭದೇವನ ಮಗ ಭರತನ ಕಥೆ ಈ ವಿಚಾರವನ್ನು ಸ್ಪಷ್ಟವಾಗಿ ಪುರಾವೆ ಸಹಿತ ಹೇಳುವ ಕಥೆ. (ಈ ಭರತ ದುಷ್ಯಂತನ ಮಗ ಭರತನಲ್ಲ, ದುಷ್ಯಂತನ ಮಗ ಭರತ  ‘ಭರತವಂಶ’ ದ ಮೂಲ ಪುರುಷ). ಪರಮ ಧಾರ್ಮಿಕನಾದ ಭರತ ತನ್ನ ಮಗ ಪ್ರಾಯ ಪ್ರಬುದ್ಧನಾದ ಮೇಲೆ ತನ್ನೆಲ್ಲಾ ಅಧಿಕಾರವನ್ನು ಅವನಿಗೊಪ್ಪಿಸಿ, ವಾನಪ್ರಸ್ಥಾಶ್ರಮವನ್ನು ಸ್ವೀಕರಿಸಿ ಕಾಡಿನಲ್ಲಿ ಋಷಿಗಳ ಜೊತೆಗೆ ಸದಾ ಭಗವದ್ ನಿಷ್ಠನಾಗಿ ಬದುಕುತ್ತಿದ್ದ. ಒಂದು ದಿನ ಆತನಿಗೆ ಕಾಡಿನಲ್ಲಿ ತಾಯಿ ಸತ್ತ ಒಂದು ಜಿಂಕೆ ಮರಿ ಸಿಕ್ಕಿತು. ಭರತ ಆ ಮರಿಯನ್ನು ತಂದು ಪಾಲನೆ ಪೋಷಣೆ ಮಾಡತೊಡಗಿದ. ಇದರಿಂದ ಆತ ಸದಾ ಆ ಜಿಂಕೆಯನ್ನೇ ಪೋಷಣೆ ಮಾಡುವುದರಲ್ಲಿ ತನ್ನ ಸಮಯವನ್ನು ಕಳೆಯಲಾರಂಭಿಸಿದ. ಇದರಿಂದ ಆತನ ಸಾಧನೆಗೆ ಚ್ಯುತಿ ಬಂತು. ಆ ಜಿಂಕೆಯ ಮರಿ ಬೆಳೆದು ದೊಡ್ಡದಾಗುವ ಮೊದಲೇ ಆತ ಪ್ರಾಣತ್ಯಾಗ ಮಾಡುವ ಪ್ರಸಂಗ ಬಂತು. ಆ ಕಾಲದಲ್ಲಿ ಭರತನಿಗೆ ಭಗವಂತನ ಚಿಂತನೆಯ ಬದಲು ಕಾಡಿದ್ದು ಆ ಜಿಂಕೆ ಮರಿಯ ಚಿಂತೆ!  ಇದರಿಂದ ಆತ ತನ್ನ ಮುಂದಿನ ಜನ್ಮದಲ್ಲಿ ಜಿಂಕೆಯಾಗಿ ಹುಟ್ಟಿದ. ಆದ್ದರಿಂದ ಎಂತಹ ಅಪರೋಕ್ಷ ಜ್ಞಾನಿಯನ್ನೂ ಕೂಡ ಪ್ರರಾಬ್ಧ ಬಿಡದು ಎನ್ನುವುದಕ್ಕೆ  ಇದು ಶ್ರೇಷ್ಠ ಉದಾಹರಣೆ. ಈ ಕಥೆ ಕೃಷ್ಣ ಇಲ್ಲಿ ಹೇಳುವ ವಿಚಾರಕ್ಕೆ ಜ್ವಲಂತ ದೃಷ್ಟಾಂತ.
ನಾವು ಜೀವನ ಪರ್ಯಂತ ಸಾಧನೆ ಮಾಡಿದರೂ ಕೂಡಾ, ಸಾಯುವ ಕ್ಷಣದಲ್ಲಿ ಭಗವಂತನ ನೆನಪು ಬಾರದೇ ಹೋಗಬಹುದು. ಇದಕ್ಕಾಗಿ ಜೀವನ ಪರ್ಯಂತ ಅಥವಾ ಅನೇಕ ಜನ್ಮಗಳ ಸಾಧನೆ ಅಗತ್ಯ. ಕೃಷ್ಣ ಹೇಳುತ್ತಾನೆ “ಸದಾ ತದ್ ಭಾವಭಾವಿತಃ” ಎಂದು. ಇಲ್ಲಿ ಭಾವ ಅಂದರೆ ತನ್ಮಯತೆ. ಯಾವಾಗಲೂ ಭಗವಂತನಲ್ಲೇ ತನ್ಮಯವಾದ ಮನಸ್ಸಿನಿಂದ ನಿರಂತರ ಭಗವಂತನ ಚಿಂತನೆ ಮಾಡಬೇಕು. ಅಂತ್ಯ ಕಾಲದಲ್ಲಿ ಭಗವಂತನ ನೆನಪು ಬರಬೇಕಾದರೆ, ನಿರಂತರ ಭಗವಂತನಲ್ಲಿ ಮನಸ್ಸನ್ನು ನೆಲೆಗೊಳಿಸುವ ಸಂಸ್ಕಾರ ಬೇಕು. ಇದನ್ನು ಬಿಟ್ಟು ಮರಣ ಕಾಲದಲ್ಲಿ ಭಗವಂತನನ್ನು ನೆನೆದರಾಯ್ತು ಎಂದು ಜೀವನವನ್ನು ವ್ಯರ್ಥವಾಗಿ ಕಳೆದರೆ ಮರಣ ಕಾಲದಲ್ಲಿ ಭಗವಂತನ ನೆನಪು ಬರುವುದೇ ಇಲ್ಲ!

ಭೀಷ್ಮಾಚಾರ್ಯರಿಗೆ ಕೊನೆಗಾಲದಲ್ಲಿ ಎಷ್ಟೇ ಭಗವಂತನ ಬಗ್ಗೆ ಯೋಚಿಸಿದರೂ ಕೂಡಾ ಕಂಡಿದ್ದು ತನ್ನದೇ ಬಾಣದಿಂದ ಗಾಯಗೊಂಡು ನೆತ್ತರು ಸುರಿಸುತ್ತಿರುವ ಕೃಷ್ಣ! ಆನಂದಸ್ವರೂಪ ಭಗವಂತನ ನಿಜ ದರ್ಶನ ಅವರಿಗಾಗಲಿಲ್ಲ. ಇಲ್ಲಿ ನಾವು ಅರಿಯಬೇಕಾದ ವಿಚಾರವೇನೆಂದರೆ-ನಾವು ಯಾವುದೇ ಕೆಟ್ಟ ಸಂಗತಿಯನ್ನು ಗಾಢವಾಗಿ ಮನಸ್ಸಿಗೆ ಹಚ್ಚಿಕೊಳ್ಳಬಾರದು. ಹಚ್ಚಿಕೊಂಡರೆ ಕೊನೆಗಾಲದಲ್ಲಿ ಅದೇ ಕಾಣುತ್ತದೆ! ಇಡೀ ಜೀವನದಲ್ಲಿ ನಾವು ಯಾವತ್ತೂ ಕೆಟ್ಟದ್ದನ್ನು ಯೋಚಿಸಬಾರದು. ಯಾರನ್ನೂ ಕೆಟ್ಟವರೆಂದು ದ್ವೇಷಿಸಬಾರದು. ಒಬ್ಬರನ್ನು ದ್ವೇಷಿಸುವುದು ತುಂಬಾ ಕೆಟ್ಟದ್ದು. ಅದು ನಮ್ಮ ಇಡೀ ಬದುಕನ್ನೇ ಹಾಳುಮಾಡುತ್ತದೆ. ದುಷ್ಟರಿಂದ ದೂರವಿರು ಆದರೆ ದ್ವೇಷಿಸಬೇಡ. ಒಬ್ಬರನ್ನು ದ್ವೇಷಿಸುವುದು, ನಿಂದಿಸುವುದು, ಅದನ್ನು ಗಾಢವಾಗಿ ಹಚ್ಚಿಕೊಳ್ಳುವುದರಿಂದ ಅವರಿಗೆ ಏನೂ ಬಾಧಕವಿಲ್ಲ. ಆದರೆ ನಮ್ಮ ಬದುಕನ್ನು ನಾವು ಹಾಳು ಮಾಡಿಕೊಳ್ಳುತ್ತೇವೆ. ನಾವು ದ್ವೇಷಿಸುವ ವಸ್ತು ನಮ್ಮ ತಲೆಯಲ್ಲಿ ಗಾಢವಾಗಿ ನೆಲೆ ನಿಲ್ಲುತ್ತದೆ ಮತ್ತು ನಮ್ಮನ್ನು ಅಧಃಪಾತಕ್ಕೆ ಕೊಂಡೊಯ್ಯುತ್ತದೆ. ಅದು ಸಾವಿನ ಕಾಲದಲ್ಲಿ ಕೊನೆಗೆ ತಲೆಎತ್ತಿ ಹೆಡೆ ಅರಳಿಸುತ್ತದೆ! ಆದ್ದರಿಂದ ನಾವು ಈ ವಿಚಾರದಲ್ಲಿ ಎಚ್ಚರವಾಗಿರಬೇಕು. ಯಾರನ್ನಾದರು ಟೀಕೆ ಮಾಡಲು ನಾವು ಅರ್ಹರಲ್ಲ. ಏಕೆಂದರೆ ನಮಗೆ ಅಂತರಂಗ ದರ್ಶನವಿಲ್ಲ. ನಾವು ಮಾತನಾಡುವುದು ಕೇವಲ ಹೊರ ನೋಟದಿಂದ. ಒಳಗೆ ಯಾರು ಏನು ಎಂದು ನೋಡುವ ಶಕ್ತಿ ನಮಗಿಲ್ಲ. ಆದ್ದರಿಂದ ಇನ್ನೊಬ್ಬರ ಚಿಂತನೆ ಬಿಟ್ಟು ಸದಾ ಭಗವಂತನ ಚಿಂತನೆ ಮಾಡು ಎನ್ನುತ್ತಾನೆ ಕೃಷ್ಣ. ನಾವು ಚಿಂತಿಸಬೇಕಾದ ಏಕಮಾತ್ರ ವಸ್ತು ಕೇವಲ ಭಗವಂತ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यं यं वापि स्मरन्भावं त्यजत्यन्ते कलेवरम्‌।
तं तमेवैति कौन्तेय सदा तद्भावभावितः॥

हे कुन्ती पुत्र अर्जुन! यह मनुष्य अंतकाल में जिस-जिस भी भाव को स्मरण करता हुआ शरीर त्याग करता है, उस-उसको ही प्राप्त होता है क्योंकि वह सदा उसी भाव से भावित रहा है
॥6॥

Yam yam vaapi smaran bhaavam tyajatyante kalevaram;
Tam tamevaiti kaunteya sadaa tadbhaavabhaavitah.

Whosoever at the end leaves the body, thinking of any being, to that being only does hego, O son of Kunti (Arjuna), because of his constant thought of that being!COMMENTARY: The most prominent thought of one’s life occupies the mind at the timeof death. It determines the nature of the body to be attained in the next birth.


ಅಧ್ಯಾಯ - 08 : ಶ್ಲೋಕ – 07

ತಸ್ಮಾತ್ ಸರ್ವೇಷು ಕಾಲೇಷು ಮಾಮನುಸ್ಮರ ಯುಧ್ಯ ಚ    ।ಮಯ್ಯರ್ಪಿತಮನೋಬುದ್ಧಿರ್ಮಾಮೇವೈಷ್ಯಸ್ಯಸಂಶಯಮ್ ॥೭॥

ತಸ್ಮಾತ್ ಸರ್ವೇಷು ಕಾಲೇಷು ಮಾಮ್ ಅನುಸ್ಮರ ಯುಧ್ಯ ಚ ।
ಮಯಿ ಅರ್ಪಿತ ಮನಃ ಬುದ್ಧಿಃ ಮಾಮ್ ಏವ ಏಷ್ಯಸಿ ಅಸಂಶಯಃ  –

ಅದರಿಂದ ಎಲ್ಲ ಕಾಲದಲ್ಲು ನನ್ನನ್ನು ನೆನೆ. ನೆನೆಯುತ್ತ ಹೋರಾಡು. ನಿನ್ನೆಲ್ಲ ಬಯಕೆ ನಿರ್ಧಾರಗಳು ನನ್ನ ಕುರಿತಾದಾಗ ನಿಶ್ಚಯವಾಗಿ ನನ್ನನ್ನೆ ಸೇರುವೆ.

ದೇವರನ್ನು ಸ್ಮರಣೆ ಮಾಡುವ ಕಾಲ ಅಂತ ಒಂದಿಲ್ಲ. ಕೃಷ್ಣ ಹೇಳುತ್ತಾನೆ “ಸರ್ವ ಕಾಲದಲ್ಲೂ ನನ್ನನ್ನು ಸ್ಮರಣೆ ಮಾಡು” ಎಂದು. ಪ್ರತಿಯೊಂದು ಕ್ರಿಯೆ ಮಾಡುವಾಗ ಆ ಕ್ರಿಯೆ ಮಾಡಿಸುತ್ತಿರುವವ ಭಗವಂತ ಎನ್ನುವ ಎಚ್ಚರವಿರಲಿ. ಯುದ್ಧ ಮಾಡುವಾಗಲೂ ಸಹ “ಆ ಭಗವಂತ ನನ್ನೊಳಗೆ ಕೂತು ಈ ಕಾರ್ಯವನ್ನು ಮಾಡಿಸುತ್ತಿದ್ದಾನೆ, ಇದು ಅವನ ಸಂಕಲ್ಪ” ಎನ್ನುವ ಭಾವನೆ ಯುದ್ಧವನ್ನೂ ದೇವರ ಪೂಜೆಯನ್ನಾಗಿ ಪರಿವರ್ತಿಸುತ್ತದೆ! ನಮ್ಮಿಂದ ತಿಳಿದೋ ತಿಳಿಯದೆಯೋ ಆಗುವ ತಪ್ಪಿನಲ್ಲಿಯೂ ಕೂಡಾ ಭಗವಂತನ ಅರಿವು, ಶರಣಾಗತಿ ನಮಗೆ ಪಾಪದ ಲೇಪ ಬರದಂತೆ ತಡೆಯುತ್ತದೆ. ಭಗವಂತನ ಸ್ಮರಣೆಗೆ ಯಾವುದೇ ಕಾಲದ ನಿರ್ಬಂಧವಿಲ್ಲ. ಯಾವಾಗ ಭಗವಂತನ ಸ್ಮರಣೆ ಬಂತೋ ಅದೇ ಪುಣ್ಯಕಾಲ. ಭಗವಂತನ ಸ್ಮರಣೆ ಮನಸ್ಸಿನಲ್ಲಿರುವುದೇ ಮಡಿ. ಆದ್ದರಿಂದ ಭಗವಂತನ ಪೂಜಾರೂಪವಾಗಿ ಅಹಂಕಾರವಿಲ್ಲದೆ ಭಗವಂತನನ್ನು ನೆನೆದು ಕರ್ತವ್ಯ ಮಾಡಬೇಕು.

ಕ್ರಿಯೆಯಲ್ಲಿ ಇರತಕ್ಕ ಭಾವ ಧರ್ಮ-ಅಧರ್ಮವನ್ನು ನಿರ್ಣಯ ಮಾಡುತ್ತದೆ. ಉದಾಹರಣೆಗೆ ಧರ್ಮವ್ಯಾದ. ಈತ ಮಾಂಸ ಮಾರಿಯೂ ಪರಮ ಧಾರ್ಮಿಕನಾಗಿ ಬದುಕಿದ. ಏಕೆಂದರೆ ಆತನ ಅನುಸಂಧಾನ ಶುದ್ಧವಾಗಿತ್ತು. “ದೇವರು ನನ್ನನ್ನು ಈ ಕೆಲಸಕ್ಕೆ ಹಚ್ಚಿದ್ದಾನೆ, ನನ್ನ ಈ ಜನ್ಮದ ಕರ್ತವ್ಯ ಮಾಂಸ ಮಾರಿ ಬದುಕುವುದು. ಅದನ್ನು ಪ್ರಾಮಾಣಿಕವಾಗಿ ಮಾಡಿ ಜೀವನ ಸಾಗಿಸಬೇಕು” ಎನ್ನುವ ಅನುಸಂಧಾನ ಆತನಲ್ಲಿತ್ತು. ಆತ ತನ್ನ ವ್ಯಾಪಾರವನ್ನು ಕೇವಲ ತನ್ನ ಹಾಗು ತನ್ನ ಕುಟುಂಬದ ಜೀವನ ನಿರ್ವಹಣೆಗಾಗಿ ಮಾಡುತ್ತಿದ್ದ. ಈ ರೀತಿ ಪ್ರಾಮಾಣಿಕನಾಗಿ ಬದುಕಿ ಆತ ಋಷಿಗಳನ್ನೂ ಮೀರಿಸುವಷ್ಟು ಎತ್ತರಕ್ಕೇರಿದ. ಆದ್ದರಿಂದ ಭಾವ ಶುದ್ಧಿ ಅತ್ಯಂತ ಶ್ರೇಷ್ಠ. ಹಾಗಾಗಿ ನಾವು ನಮ್ಮ ಮನಸ್ಸು ಮತ್ತು ಬುದ್ಧಿಯನ್ನು ಭಗವಂತನಲ್ಲಿ ನೆಲೆ ನಿಲ್ಲಿಸಬೇಕು. “ಆಗ ನಿಸಂಶಯವಾಗಿ ನನ್ನನ್ನು ಸೇರುವೆ” ಎನ್ನುತ್ತಾನೆ ಕೃಷ್ಣ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

तस्मात्सर्वेषु कालेषु मामनुस्मर युद्ध च।
मय्यर्पितमनोबुद्धिर्मामेवैष्यस्यसंशयम्‌॥

इसलिए हे अर्जुन! तू सब समय में निरंतर मेरा स्मरण कर और युद्ध भी कर। इस प्रकार मुझमें अर्पण किए हुए मन-बुद्धि से युक्त होकर तू निःसंदेह मुझको ही प्राप्त होगा
॥7॥

Tasmaat sarveshu kaaleshu maamanusmara yudhya cha;
Mayyarpitamanobuddhir maamevaishyasyasamshayam.

Therefore, at all times remember Me only and fight. With mind and intellect fixed (orabsorbed) in Me, thou shalt doubtless come to Me alone.

ಅಧ್ಯಾಯ - 08 : ಶ್ಲೋಕ – 08

ಅಭ್ಯಾಸಯೋಗಯುಕ್ತೇನ ಚೇತಸಾSನಾನ್ಯಗಾಮಿನಾ ।ಪರಮಂ ಪುರುಷಂ ದಿವ್ಯಂ ಯಾತಿ ಪಾರ್ಥಾನುಚಿಂತಯನ್  ॥೮॥

ಅಭ್ಯಾಸ ಯೋಗ ಯುಕ್ತೇನ ಚೇತಸಾ ನ ಅನ್ಯ ಗಾಮಿನಾ ।
ಪರಮಮ್  ಪುರುಷಮ್  ದಿವ್ಯಮ್  ಯಾತಿ ಪಾರ್ಥ ಅನುಚಿಂತಯನ್ –

ಪಾರ್ಥ, ಸೃಷ್ಟಿಯೊಂದು ಲೀಲೆಯಾದ ಪರಮ ಪುರುಷನನ್ನು ಅಭ್ಯಾಸದ ಉಪಾಯದಿಂದ ಹದಗೊಂಡು, ಬೇರಾವುದೂ ಬೇಡದ ಒಳಬಗೆಯಿಂದ, ಭಕ್ತಿಯಿಟ್ಟು ನೆನೆದಾಗ ಅವನನ್ನೆ ಸೇರುತ್ತಾನೆ.

ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ.  ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು  ಕೇವಲ ಭಗವಂತನನ್ನು ಚಿಂತಿಸುವಂತೆ  ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ. ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ.
ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.
ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ೧) ಧ್ಯುತಿ ೨) ವಿಜಿಗೀಶ ೩) ಕಾಂತಿ ೪) ಸ್ತುತಿ ೫) ವ್ಯವಹಾರ ೬) ಕ್ರೀಡಾ ೭) ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.
೧) ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.
೨) ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.
೩) ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.
೪) ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.
೫) ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.
೬) ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.
೭) ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ  'ದೇವ'
ಹೀಗೆ ಅನೇಕ ಅರ್ಥಗಳನ್ನು 'ದಿವ್ಯ' ಎನ್ನುವ ಪದದಲ್ಲಿ  ಕಂಡುಕೊಳ್ಳಬಹುದು. "ಓ ದೇವರೇ" ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.
ಈ ಅಧ್ಯಾಯದ ಮುಂದಿನ ಭಾಗದಲ್ಲಿ ಕೃಷ್ಣ ಭಗವಂತನನ್ನು ಅನುಚಿಂತನೆ ಮಾಡುವುದು ಅಂದರೆ ಏನು ಎನ್ನುವುದನ್ನು ವಿವರಿಸುತ್ತಾನೆ. ಒಬ್ಬ ಧ್ಯಾನ ಮಾಡುವವ ಭಗವಂತನನ್ನು ಯಾವರೀತಿ ಧ್ಯಾನ ಮಾಡಬೇಕು ಎನ್ನುವ ಚಿತ್ರಣವನ್ನು ಮುಂದಿನ ಶ್ಲೋಕಗಳಲ್ಲಿ ಕಾಣಬಹುದು.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( भक्ति योग का विषय )
अभ्यासयोगयुक्तेन चेतसा नान्यगामिना।
परमं पुरुषं दिव्यं याति पार्थानुचिन्तयन्‌॥

हे पार्थ! यह नियम है कि परमेश्वर के ध्यान के अभ्यास रूप योग से युक्त, दूसरी ओर न जाने वाले चित्त से निरंतर चिंतन करता हुआ मनुष्य परम प्रकाश रूप दिव्य पुरुष को अर्थात परमेश्वर को ही प्राप्त होता है
॥8॥

Abhyaasayogayuktena chetasaa naanyagaaminaa;
Paramam purusham divyam yaati paarthaanuchintayan.

With the mind not moving towards any other thing, made steadfast by the method ofhabitual meditation, and constantly meditating, one goes to the Supreme Person, the Resplendent,O Arjuna!

ಅಧ್ಯಾಯ - 08 : ಶ್ಲೋಕ – 09

ಕವಿಂ ಪುರಾಣಮನುಶಾಸಿತಾರಮಣೋರಣೀಯಾಂಸಮನುಸ್ಮರೇದ್ ಯಃ  ।ಸರ್ವಸ್ಯ ಧಾತಾರಮಚಿಂತ್ಯರೂಪಮಾದಿತ್ಯವರ್ಣಂ ತಮಸಃ ಪರಸ್ತಾತ್ ॥೯॥

ಕವಿಮ್  ಪುರಾಣಮ್ ಅನುಶಾಸಿತಾರಮ್ ಅಣೋಃ ಅಣೀಯಾಂಸಮ್ ಅನುಸ್ಮರೇತ್  ಯಃ  ।
ಸರ್ವಸ್ಯ ಧಾತಾರಮ್ ಅಚಿಂತ್ಯ ರೂಪಮ್ ಆದಿತ್ಯ ವರ್ಣಮ್  ತಮಸಃ ಪರಸ್ತಾತ್ –

ಎಲ್ಲವನ್ನು ಬಲ್ಲವನು, ಎಲ್ಲಕ್ಕಿಂತ ಮೊದಲಿದ್ದವನು, ಎಲ್ಲರ ಒಡೆಯ, ಅಣುವಿಗಿಂತ ಅಣು, ಎಲ್ಲವನ್ನು ಹೊತ್ತು ಸಲಹುವವನು, ಬಗೆಗೆ ನಿಲುಕದ ನಿಟ್ಟಿನವನು, ಸೂರ್ಯನಂತೆ ಬೆಳಗುವವನು,ಕತ್ತಲಿನಾಚೆಗಿರುವವನು[ಸಾವಿರದವನು]-ಹೀಗೆಂದು ಅವನನ್ನು ಸ್ಮರಿಸುವವನು[ಅವನನ್ನೆ ಸೇರುತ್ತಾನೆ].

ನಮ್ಮ ಅಂತರ್ಯಾಮಿ ಭಗವಂತನನ್ನು ಧ್ಯಾನ ಮಾಡುವಾಗ ‘ಅನುಸಂಧಾನ ಮಾಡಬೇಕಾದ ವಿಷಯಗಳನ್ನು’ ಕೃಷ್ಣ ಇಲ್ಲಿ ಬಿಡಿಸಿ ಬಿಡಿಸಿ ಹೇಳುತ್ತಾನೆ. ಕೃಷ್ಣ ಹೇಳುತ್ತಾನೆ “ಭಗವಂತನನ್ನು ಕವಿ ಎಂದು ಉಪಾಸನೆ ಮಾಡು” ಎಂದು. ಇಲ್ಲಿ ಕವಿ ಎಂದರೆ ಸರ್ವಜ್ಞ ಎಂದರ್ಥ. ನಮಗೆ ಮೊದಲು ಬೇಕಾಗಿರುವುದು ಜ್ಞಾನ. ಜ್ಞಾನವಿಲ್ಲದೆ ಆನಂದವಿಲ್ಲ. ಇದಕ್ಕಾಗಿ ಭಗವಂತನಲ್ಲಿ ಮೊದಲು ಅರಿವನ್ನು ಬೇಡಬೇಕು. ಎರಡನೆಯದಾಗಿ ಭಗವಂತನನ್ನು ಪುರಾಣಮ್ ಎಂದು ಉಪಾಸನೆ ಮಾಡು ಎನ್ನುತ್ತಾನೆ ಕೃಷ್ಣ. ಪುರಾಣ ಎಂದರೆ ಎಲ್ಲಕ್ಕಿಂತ ಮೊದಲಿದ್ದವ ಮತ್ತು ಸರ್ವ ಕಾಲದಲ್ಲೂ ಏಕಪ್ರಕಾರನಾಗಿರುವವ. ನಮ್ಮ ಪುರ(ದೇಹ)ದೊಳಗೆ  ಕೂತು ಪ್ರತಿಕ್ಷಣದಲ್ಲಿಯೂ ನಮ್ಮನ್ನು ನಿಯಂತ್ರಿಸುವವ ಎನ್ನುವ ಅನುಸಂಧಾನ.
ಮೂರನೆಯದಾಗಿ ಭಗವಂತ ‘ಅನುಶಾಸಿತಾರಮ್’. ಅಂದರೆ ಪ್ರತಿಯೊಂದನ್ನೂ ಕೂಡಾ ನಿಯಮನ(ಶಾಸನ) ಮಾಡುವವನು. ನನ್ನ ಇರವು, ಜಗತ್ತಿನ ಪ್ರತಿಯೊಂದು ವಸ್ತುವಿನ ಇರವು-ಅವನ ನಿಯಂತ್ರಣಕ್ಕೊಳಪಟ್ಟಿದೆ; ಭಗವಂತ ಪ್ರತಿಯೊಂದು ಜೀವ ಸ್ವರೂಪದ ಯೋಗ್ಯತೆಗನುಗುಣವಾಗಿ ಶಾಸನ ಮಾಡುತ್ತಾನೆ-ಎಂದು ಅರಿತು  ಅವನನ್ನು ಅನುಸಂಧಾನ ಮಾಡಬೇಕು.  ಸಮಸ್ತ ಬ್ರಹ್ಮಾಂಡದಲ್ಲಿ ತುಂಬಿದ ಆ ಭಗವಂತನೇ ಅಣುವಿಗಿಂತ ಅಣುವಾಗಿ  ಜೀವ ಸ್ವರೂಪದ ಒಳಗೂ ತುಂಬಿದ್ದಾನೆ. “ಎಲ್ಲವನ್ನು ಧರಿಸಿದ ಭಗವಂತನೇ ನಮ್ಮೊಳಗೆ ಕೂತು ಪೋಷಣೆ ಮಾಡುತ್ತಿದ್ದಾನೆ. ಆತ ಇಡೀ ವಿಶ್ವದ ಧಾರಣೆ-ಪೋಷಣೆ ಮಾಡುವ ಶಕ್ತಿ. ಆತ ಸರ್ವರಿಗೂ ಸರ್ವಾಭೀಷ್ಟವನ್ನು ಕೊಡುವವ” ಎಂದು ಅವನನ್ನು ಧ್ಯಾನ ಮಾಡಬೇಕು.
 ಭಗವಂತ ನಮ್ಮ ಕಲ್ಪನೆಗೆ ಎಟುಕದ ವಸ್ತು ಎಂದು ನಾವು ತಿಳಿದಿರಬೇಕು. ಆತನದು ನಮ್ಮ ಮಾತು ಮನಸ್ಸಿಗೆ ಮುಟ್ಟದ ರೂಪ. ಧ್ಯಾನದಲ್ಲಿ ಜೀವಸ್ವರೂಪದ ಕಣ್ಣಿನಿಂದ ಭಗವಂತನನ್ನು ನೋಡಿದರೆ ಆತ ಉದಿಸುವ ಸೂರ್ಯನಂತೆ ಕಾಣುತ್ತಾನೆ. ಆತನ ಬಣ್ಣ  ಪ್ರಕೃತಿ ನಿರ್ಮಿತವಾದ ಬಣ್ಣವಲ್ಲ, ಅದು ತ್ರಿಗುಣಾತೀತವಾದ ಎಂದೂ ಅಳಿವಿರದ ಅಪ್ರಾಕೃತ ಬಣ್ಣ.  ಹೀಗೆ ಭಗವಂತನನ್ನು ತಿಳಿದು ನಿರಂತರ ಚಿಂತನೆ ಮಾಡುವವ ತನ್ನ ದೇಹ ತ್ಯಾಗ ಮಾಡುವಾಗ ಭಗವಂತನನ್ನೇ ನೆನೆದು ಭಗವಂತನನ್ನು ಸೇರುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

कविं पुराणमनुशासितार-मणोरणीयांसमनुस्मरेद्यः।
सर्वस्य धातारमचिन्त्यरूप-मादित्यवर्णं तमसः परस्तात्‌॥

जो पुरुष सर्वज्ञ, अनादि, सबके नियंता (अंतर्यामी रूप से सब प्राणियों के शुभ और अशुभ कर्म के अनुसार शासन करने वाला) सूक्ष्म से भी अति सूक्ष्म, सबके धारण-पोषण करने वाले अचिन्त्य-स्वरूप, सूर्य के सदृश नित्य चेतन प्रकाश रूप और अविद्या से अति परे, शुद्ध सच्चिदानन्दघन परमेश्वर का स्मरण करता है
॥9॥

Kavim puraanamanushaasitaaramAnoraneeyaamsam anusmaredyah;
Sarvasya dhaataaram achintyaroopamAadityavarnam tamasah parastaat.

Whosoever meditates on the Omniscient, the Ancient, the ruler (of the whole world),minuter than an atom, the supporter of all, of inconceivable form, effulgent like the sun and beyondthe darkness of ignorance,

ಅಧ್ಯಾಯ - 08 : ಶ್ಲೋಕ – 10

ಪ್ರಯಾಣಕಾಲೇ ಮನಸಾSಚಲೇನ ಭಕ್ತ್ಯಾ ಯುಕ್ತೋ ಯೋಗಬಲೇನ ಚೈವ ।ಭ್ರುವೋರ್ಮಧ್ಯೇ ಪ್ರಾಣಮಾವೇಶ್ಯ ಸಮ್ಯಕ್  ಸ ತಂ ಪರಂ ಪುರುಷಮುಪೈತಿ ದಿವ್ಯಮ್ ॥೧೦॥

ಪ್ರಯಾಣ ಕಾಲೇ ಮನಸಾ ಅಚಲೇನ ಭಕ್ತ್ಯಾ ಯುಕ್ತಃ   ಯೋಗಬಲೇನ ಚ ಏವ ।
ಭ್ರುವೋಃ ಮಧ್ಯೇ ಪ್ರಾಣಮ್ ಆವೇಶ್ಯ ಸಮ್ಯಕ್  ಸಃ  ತಮ್  ಪರಮ್  ಪುರುಷಮ್ ಉಪೈತಿ ದಿವ್ಯಮ್ –

ಕೊನೆಯ ಕಾಲದಲ್ಲಿ ಭಗವಂತನಲ್ಲಿ ಭಕ್ತಿಯಿಟ್ಟು, ಬಿಗಿಯಾದ ಬಗೆಯಿಂದ , ಹುಬ್ಬುಗಳ ನಡುವೆ ಪ್ರಾಣವಾಯುವನ್ನು ಕದಲದಂತೆ ಇರಗೊಳಿಸಿ, ಪ್ರಾಣಾಯಾಮದ ಯೋಗದ ಮೂಲಕ ಕೂಡ ಲೀಲಾಲೋಲನಾದ  ಆ ಪರಮಪುರುಷನನ್ನು ಪಡೆಯಬಹುದು.

ಭಗವಂತನನ್ನು ಸೇರುವ ಇನ್ನೊಂದು ಮಾರ್ಗ ಹಠಯೋಗ. ಈ ಮಾರ್ಗ ಕಠಿಣವಾದದ್ದು.ಇದು ಯಮನಿಯಮನ-ಪ್ರಾಣಾಯಾಮ-ಪ್ರತ್ಯಾಹಾರಗಳಿಂದ ಭಗವಂತನನ್ನು ಸೇರುವ ಬಗೆ. ಈ ಮಾರ್ಗದಲ್ಲಿ ಸಾಧನೆ ಮಾಡುವವರು ತಮ್ಮ ಸಾವಿನ ಕಾಲದಲ್ಲಿ ಏನು ಮಾಡಬೇಕು ಎನ್ನುವುದನ್ನು ಕೃಷ್ಣ ಈ ಶ್ಲೋಕದಲ್ಲಿ ವಿವರಿಸುತ್ತಾನೆ. ಆಸನ ಪ್ರಾಣಾಯಾಮ ಮಾಡಿ ಸ್ಥಿರವಾದ ದೇಹ, ಸ್ಥಿರವಾದ ಪ್ರಾಣಮಯ ಕೊಶವನ್ನು ಸಾಧಿಸಿದ ಮೇಲೆ, ಪ್ರತ್ಯಾಹಾರದ ಮೂಲಕ ತನ್ನೊಳಗೆ ತುಂಬಿದ ಕೆಟ್ಟ ಸಂಗತಿಗಳನ್ನು  ಹೊರ ಹಾಕಿ, ಕೆಟ್ಟ ವಿಚಾರ ಒಳಬಾರದಂತೆ ತಡೆದು, ಏಕಾಗ್ರತೆ ಸಾಧಿಸುವುದು. ಇದು ತುಂಬಾ ಧೀರ್ಘವಾದ ಕಠಿಣ ಸಾಧನೆ. ಇಂತವರು ತಮ್ಮ ಹೃತ್ಕಮಲ ಮಧ್ಯ(ಅನಾಹತ ಚಕ್ರ) ದಲ್ಲಿ  ಪ್ರಾಣಶಕ್ತಿಯೊಂದಿಗಿರುವ ಜೀವವನ್ನು ಅಲ್ಲಿಂದ ಊರ್ಧ್ವ ಮುಖವಾಗಿ ವಿಶುದ್ಧಿಚಕ್ರದ ಮೂಲಕ  ಭ್ರು ಮಧ್ಯ (ಎರಡು ಹುಬ್ಬುಗಳ ನಡುವೆ ಇರುವ ಆಜ್ಞಾ ಚಕ್ರ) ತಂದು ನಿಲ್ಲಿಸಬೇಕು. ಈ ಪ್ರಕ್ರಿಯೆ ಅತ್ಯಂತ ಕಠಿಣ. ಈ ಸಂಪೂರ್ಣ ಕ್ರಿಯೆಯಲ್ಲಿ ಅನನ್ಯ ಭಕ್ತಿ ಬಹಳ ಮುಖ್ಯ. ಈ ರೀತಿ ಭ್ರು ಮಧ್ಯದಿಂದ ಸಹಸ್ರಾರದ ಬ್ರಹ್ಮರಂದ್ರದ ಮೂಲಕ ಜೀವ ಹೊರ ಹೋದರೆ ಅವರು ನೇರವಾಗಿ ಭಗವಂತನನ್ನು ಸೇರುತ್ತಾರೆ.
ಈ ರೀತಿಯ ಹಠಯೋಗ ಕಠಿಣ ಸಾಧನವಾಗಿರುವುದರಿಂದ ಪ್ರಾಚೀನರು ಅದಕ್ಕೆ ಪೂರಕವಾದ ಅತ್ಯಂತ ಸರಳ ವಿಧಾನವನ್ನು ತಮ್ಮ ದೈನಂದಿನ ಜೀವನದಲ್ಲಿ ತೊಡಗಿಸಿಕೊಂಡಿದ್ದರು. ಇದಕ್ಕೆ ಉತ್ತಮ ಉದಾಹರಣೆ ಊರ್ಧ್ವಪುಂಡ್ರ.  ಇದು ಜೀವದ ಊರ್ಧ್ವಮುಖ ಗತಿಗೆ ಸಂಬಂಧಪಟ್ಟಿದ್ದು. ಇದು ಪೂರ್ಣ ಪ್ರಮಾಣದಲ್ಲಿ ದೇಹದಲ್ಲಿರುವ ಶಕ್ತಿ ಕೇಂದ್ರಗಳನ್ನು ಜಾಗೃತಿಗೊಳಿಸುವ ಒಂದು ಸರಳ ವಿಧಾನ. [ಆದರೆ ಇಂದು ನಾವು ಏಕೆ ನಾಮ ಹಾಕಿ ಕೊಳ್ಳುತ್ತೇವೆ ಎನ್ನುವುದೇ ನಮಗೆ ತಿಳಿದಿಲ್ಲ].

ಹಠಯೋಗವನ್ನು ಸರಿಯಾದ ಮಾರ್ಗದರ್ಶನ ಇಲ್ಲದೆ ಮಾಡುವುದು ಅಪಾಯಕಾರಿ. ಭಾಗವತದ ದ್ವಿತೀಯ ಸ್ಕಂದದಲ್ಲಿ ಜೀವವನ್ನು ಮೇಲಕ್ಕೆ ಕೊಂಡೊಯ್ಯುವ ಹಂತವನ್ನು ಒಂದು ಅಧ್ಯಾಯದಲ್ಲಿ ವಿವರವಾಗಿ ವಿವರಿಸಿದ್ದಾರೆ. ಹೀಗೆ ಯೋಗದ ಮೂಲಕ ಹಠಮಾಡಿ ಭಗವಂತನನ್ನು ಸೇರಬಹುದು, ಅಥವಾ ತಾಯಿಯಲ್ಲಿ ಮಗು ಹಠಮಾಡಿದಂತೆ ಭಗವಂತನಲ್ಲಿ ಭಕ್ತ ಸದಾ ಭಕ್ತಿಯೆಂಬ ಹಠಮಾಡಿ ಆತನನ್ನು ಸೇರಬಹುದು.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

प्रयाण काले मनसाचलेन भक्त्या युक्तो योगबलेन चैव।
भ्रुवोर्मध्ये प्राणमावेश्य सम्यक्‌- स तं परं पुरुषमुपैति दिव्यम्‌।

वह भक्ति युक्त पुरुष अन्तकाल में भी योगबल से भृकुटी के मध्य में प्राण को अच्छी प्रकार स्थापित करके, फिर निश्चल मन से स्मरण करता हुआ उस दिव्य रूप परम पुरुष परमात्मा को ही प्राप्त होता है
॥10॥

Prayaanakaale manasaachalenaBhaktyaa yukto yogabalena chaiva;
Bhruvormadhye praanamaaveshya samyakSa tam param purusham upaiti divyam.

At the time of death, with unshaken mind, endowed with devotion and by the power ofYoga, fixing the whole life-breath in the middle of the two eyebrows, he reaches that resplendentSupreme Person.

ಅಧ್ಯಾಯ - 08 : ಶ್ಲೋಕ – 11

ಹೀಗೆ ಭ್ರುಮಧ್ಯೆ ಜೀವವನ್ನು ತಂದು ನಿಲ್ಲಿಸುವ ವಿಧಾನವನ್ನು ವಿವರಿಸಿದ ಕೃಷ್ಣ, ಅಲ್ಲಿಂದ ಮುಂದೆ ಸಹಸ್ರಾರದ ಶಕ್ತಿ ಕೇಂದ್ರದ ದ್ವಾರದ ಮೂಲಕ ಜೀವ  ಹೊರ ಹೋಗುವ  ವಿಧಾನವನ್ನು ಇನ್ನೂ ವಿವರವಾಗಿ ಮುಂದಿನ ಮೂರು ಶ್ಲೋಕದಲ್ಲಿ ವಿವರಿಸುತ್ತಾನೆ.     

ಯದಕ್ಷರಂ ವೇದವಿದೋ ವದಂತಿ ವಿಶಂತಿ ಯದ್ ಯತಯೋ ವೀತರಾಗಾಃ ।ಯದಿಚ್ಛಂತೋ ಬ್ರಹ್ಮಚರ್ಯಂ ಚರಂತಿ  ತತ್  ತೇ ಪದಂ ಸಂಗ್ರಹೇಣ ಪ್ರವಕ್ಷ್ಯೇ ॥೧೧॥

ಯತ್ ಅಕ್ಷರಂ ವೇದವಿದಃ  ವದಂತಿ ವಿಶಂತಿ ಯತ್  ಯತಯಃ  ವೀತ ರಾಗಾಃ ।
ಯತ್ ಇಚ್ಛಂತಃ  ಬ್ರಹ್ಮಚರ್ಯಮ್  ಚರಂತಿ  ತತ್  ತೇ ಪದಮ್  ಸಂಗ್ರಹೇಣ ಪ್ರವಕ್ಷ್ಯೇ –

ವೇದ ಬಲ್ಲವರು ಅಳಿವಿರದ ಅದನ್ನು ‘ಅಕ್ಷರ’ ಎನ್ನುತ್ತಾರೆ. ಭೋಗದ ಒಲವು ತೊರೆದ ಸಾಧಕರು ಅದನ್ನೇ ಸೇರುತ್ತಾರೆ. ಅದನ್ನು ಸೇರಬಯಸಿಯೆ ಬಗೆಯಲ್ಲಿ ಆ ಹಿರಿಯ ತತ್ವವನ್ನು ಚಿಂತಿಸುತ್ತಾರೆ.  ಅಂಥ ಮುಕ್ತಿಪ್ರದವಾದ ಪರತತ್ವವನ್ನುನಿನಗೆ ಅಡಕವಾಗಿ ಹೇಳುತ್ತೇನೆ.

ಕೃಷ್ಣ ಹೇಳುತ್ತಾನೆ “ಯೋಗ ಸಾಧನೆಯಿಂದ ಭ್ರುಮಧ್ಯೆ ತಂದು ನಿಲ್ಲಿಸಿದ ಜೀವವನ್ನು ಅಲ್ಲಿಂದ ಧ್ಯಾನ ಮಾಡುತ್ತಾ ಮೇಲಕ್ಕೆ ಸಹಸ್ರಾರದತ್ತ ತೆಗೆದುಕೊಂಡು ಹೋಗಬೇಕು” ಎಂದು. ಈ ಕಾಲದಲ್ಲಿ ಧ್ಯಾನ ಮಾಡಬೇಕಾದ ರೂಪದ ಬಗ್ಗೆ  ಹೇಳುತ್ತಾ ಕೃಷ್ಣ ಹೇಳುತ್ತಾನೆ “ವೇದವನ್ನು ಬಲ್ಲವರು ಅದನ್ನು ಅಳಿವಿರದ ‘ಅಕ್ಷರ’(ಓಂಕಾರ ಎನ್ನುವ ಅಕ್ಷರದಿಂದ ಪ್ರತಿಪಾಧ್ಯನಾದ ಸರ್ವಶಬ್ದ ವಾಚ್ಯ) ಎನ್ನುತ್ತಾರೆ” ಎಂದು. ಮಹಾ ಪ್ರಯತ್ನದಿಂದ ಭಗವಂತನನ್ನು ಒಲಿಸಿಕೊಂಡವರು, ಪ್ರಾಪಂಚಿಕ ಸೆಳೆತದಿಂದ ಪಾರಾದವರು, ಆ ಭಗವಂತನನ್ನು ಹೋಗಿ ಸೇರುತ್ತಾರೆ. “ಅವರು ಅಂತಹ ಭಗವಂತನನ್ನು ತಿಳಿದುಕೊಳ್ಳಬಯಸಿ ಬ್ರಹ್ಮಚರ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ”  ಎನ್ನುತ್ತಾನೆ ಕೃಷ್ಣ. [ಇಲ್ಲಿ ‘ಬ್ರಹ್ಮಚರ್ಯ’ ಎಂದರೆ ನಿಘಂಟಿನಲ್ಲಿ ಹೇಳುವ  ದೈಹಿಕ ಬ್ರಹ್ಮಚರ್ಯವಲ್ಲ, ಬದಲಿಗೆ ‘ಬ್ರಹ್ಮಣಿ ಚರಣಂ’-ಭಗವಂತನಲ್ಲಿ ಮನಸ್ಸು ನೆಲೆಗೊಳ್ಳುವಿಕೆ-ಬ್ರಹ್ಮಚರ್ಯ]. “ಅದನ್ನು ಸೇರಬಯಸಿಯೆ ಬಗೆಯಲ್ಲಿ ಆ ಹಿರಿಯ ತತ್ವವನ್ನು ಚಿಂತಿಸುತ್ತಾರೆ. ಈ ರೀತಿ ಮೋಕ್ಷವನ್ನು ಪಡೆಯುವ ಪ್ರಕ್ರಿಯೆಯನ್ನು ಸಂಗ್ರಹವಾಗಿ ನಿನಗೆ ಹೇಳುತ್ತೇನೆ” ಎಂದು ಹೇಳಿ ಕೃಷ್ಣ ಈ ಪ್ರಕ್ರಿಯೆಯನ್ನು ಮುಂದಿನ ಶ್ಲೋಕಗಳಲ್ಲಿ ಅರ್ಜುನನಿಗೆ ವಿವರಿಸುತ್ತಾನೆ.     

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यदक्षरं वेदविदो वदन्ति विशन्ति यद्यतयो वीतरागाः।
यदिच्छन्तो ब्रह्मचर्यं चरन्ति तत्ते पदं संग्रहेण प्रवक्ष्ये॥

वेद के जानने वाले विद्वान जिस सच्चिदानन्दघनरूप परम पद को अविनाश कहते हैं, आसक्ति रहित यत्नशील संन्यासी महात्माजन, जिसमें प्रवेश करते हैं और जिस परम पद को चाहने वाले ब्रह्मचारी लोग ब्रह्मचर्य का आचरण करते हैं, उस परम पद को मैं तेरे लिए संक्षेप में कहूँगा
॥11॥

Yadaksharam vedavido vadantiVishanti yadyatayo veetaraagaah;
Yadicchanto brahmacharyam charantiTatte padam samgrahena pravakshye.

That which is declared imperishable by those who know the Vedas, that which theself-controlled (ascetics) and passion-free enter, that desiring which celibacy is practised—thatgoal I will declare to thee in brief.


ಅಧ್ಯಾಯ - 08 : ಶ್ಲೋಕ – 12, 13

ಸರ್ವದ್ವಾರಾಣಿ ಸಂಯಮ್ಯ ಮನೋ ಹೃದಿ ನಿರುದ್ಧ್ಯ ಚ ।ಮೂರ್ಧ್ನ್ಯಾSಧಾಯಾSತ್ಮನಃ ಪ್ರಾಣಮಾಸ್ಥಿತೋ ಯೋಗಧಾರಣಾಮ್  ॥೧೨॥ಓಮಿತ್ಯೇಕಾಕ್ಷರಂ ಬ್ರಹ್ಮ ವ್ಯಾಹರನ್  ಮಾಮನುಸ್ಮರನ್ ।ಯಃ ಪ್ರಯಾತಿ ತ್ಯಜನ್ ದೇಹಂ  ಸ ಯಾತಿ ಪರಮಾಂ ಗತಿಮ್ ॥೧೩॥

ಸರ್ವದ್ವಾರಾಣಿ ಸಂಯಮ್ಯ ಮನಃ  ಹೃದಿ ನಿರುದ್ಧ್ಯ ಚ ।
ಮೂರ್ಧ್ನಿ ಆಧಾಯಾ ಆತ್ಮನಃ ಪ್ರಾಣಮ್ ಆಸ್ಥಿತಃ  ಯೋಗ ಧಾರಣಾಮ್ ||
ಓಂ ಇತಿ ಏಕಾಕ್ಷರಮ್  ಬ್ರಹ್ಮ ವ್ಯಾಹರನ್  ಮಾಮ್ ಅನುಸ್ಮರನ್ ।
ಯಃ ಪ್ರಯಾತಿ ತ್ಯಜನ್ ದೇಹಮ್   ಸಃ  ಯಾತಿ ಪರಮಾಮ್  ಗತಿಮ್ –

ಎಲ್ಲ ನಾಡೀ ದ್ವಾರಗಳನ್ನು ತಡೆ ಹಿಡಿದು , ಬಗೆಯನ್ನು ಭಗವಂತನಲ್ಲೆ ಬಿಗಿ ಹಿಡಿದು,ತನ್ನ ಪ್ರಾಣವಾಯುವನ್ನು ನೆತ್ತಿಯಲ್ಲಿರಿಸಿ ಯೋಗ ಸಾಧನೆಯಲ್ಲಿ ನೆಲೆಗೊಂಡವನು, ‘ಓಮ್’ ಎಂಬ ಒಂದಕ್ಷರದಿಂದ ವಾಚ್ಯನಾದ ಪರತತ್ವವನ್ನು ಕೊಂಡಾಡುತ್ತಾ, ನನ್ನನ್ನು ನೆನೆಯುತ್ತ, ದೇಹ ತೊರೆದು ಮೇಲೇರಿದವನು ಮರಳಿ ಬರದ ತಾಣವನ್ನು ಸೇರುತ್ತಾನೆ.

ಸಹಸ್ರಾರದತ್ತ ಜೀವವನ್ನು ಕೊಂಡೊಯ್ಯುವಾಗ ದೇಹದ ಇತರ ಎಲ್ಲಾ ದ್ವಾರಗಳನ್ನೂ ಯೋಗ ಬಲದಿಂದ ಮುಚ್ಚಬೇಕು ಮತ್ತು ಮುಚ್ಚಿರುವ ಸಹಸ್ರಾರದ ಬಾಗಿಲನ್ನು ತೆರೆದು ಹೊರಹೋಗಬೇಕು. ಈ ರೀತಿ ಮಾಡುವಾಗ ಮನಸ್ಸನ್ನು ಆ ಸರ್ವಸಂಹಾರಕ ಭಗವಂತನಲ್ಲಿ ನೆಲೆಗೊಳಿಸಬೇಕು. ಪೂರ್ಣಪ್ರಮಾಣದಲ್ಲಿ ತನ್ನ ಯೋಗಾಭ್ಯಾಸವನ್ನು ಬಳಸಿ, ಶ್ವಾಸ ನಿರೋಧ ಮಾಡಿ, ಮನಸ್ಸನ್ನು ಭಗವಂತನಲ್ಲಿಟ್ಟು ಧ್ಯಾನ ಮಾಡಬೇಕು. “ಓಂಕಾರ ಪ್ರತಿಪಾಧ್ಯನಾದ ನನ್ನನ್ನು ಓಂಕಾರದಿಂದ ನೆನೆಯುತ್ತಾ ಸಹಸ್ರರದ ಬಾಗಿಲಿನಿಂದ ಹೊರಬಂದು ದೇಹ ತ್ಯಾಗ ಮಾಡಿ ಮೇಲೇರಿದವನು ಮುಂದೆಂದೂ ಮರಳಿ ಬರದ ತಾಣವಾದ ಮೋಕ್ಷ(ಭಗವಂತ)ವನ್ನು ಸೇರುತ್ತಾನೆ".

ಈ ಸಾಧನೆ ಕೇವಲ ಹಠಯೋಗಿಗಳಿಗೆ ಸಾಧ್ಯ ಮತ್ತು ಇದು ತುಂಬಾ ಕಷ್ಟದ ಸಾಧನೆ. ಎಲ್ಲರೂ ಈ ರೀತಿ ಯೋಗಾಭ್ಯಾಸ ಮಾಡಿ ಸಿದ್ಧಿ ಪಡೆಯುವುದು ಸಾಧ್ಯವಿಲ್ಲ. ಅದಕ್ಕಾಗಿ ಮುಂದಿನ ಶ್ಲೋಕದಲ್ಲಿ ಕೃಷ್ಣ ಸುಲಭದ ಮಾರ್ಗವನ್ನು ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

सर्वद्वाराणि संयम्य मनो हृदि निरुध्य च।
मूर्ध्न्याधायात्मनः प्राणमास्थितो योगधारणाम्‌॥
ओमित्येकाक्षरं ब्रह्म व्याहरन्मामनुस्मरन्‌।
यः प्रयाति त्यजन्देहं स याति परमां गतिम्‌॥

सब इंद्रियों के द्वारों को रोककर तथा मन को हृद्देश में स्थिर करके, फिर उस जीते हुए मन द्वारा प्राण को मस्तक में स्थापित करके, परमात्म संबंधी योगधारणा में स्थित होकर जो पुरुष 'ॐ' इस एक अक्षर रूप ब्रह्म को उच्चारण करता हुआ और उसके अर्थस्वरूप मुझ निर्गुण ब्रह्म का चिंतन करता हुआ शरीर को त्यागकर जाता है, वह पुरुष परम गति को प्राप्त होता है
॥12-13॥

Sarvadwaaraani samyamya mano hridi nirudhya cha;
Moordhnyaadhaayaatmanah praanamaasthito yogadhaaranaam.

Having closed all the gates, confined the mind in the heart and fixed the life-breath in thehead, engaged in the practice of concentration,

Omityekaaksharam brahma vyaaharan maamanusmaran;
Yah prayaati tyajan deham sa yaati paramaam gatim.

Uttering the monosyllable Om—the Brahman—remembering Me always, he whodeparts thus, leaving the body, attains to the supreme goal.

ಅಧ್ಯಾಯ - 08 : ಶ್ಲೋಕ – 14

ಅನನ್ಯಚೇತಾಃ ಸತತಂ ಯೋ ಮಾಂ ಸ್ಮರತಿ ನಿತ್ಯಶಃ ।ತಸ್ಯಾಹಂ ಸುಲಭಃ ಪಾರ್ಥ ನಿತ್ಯಯುಕ್ತಸ್ಯ ಯೋಗಿನಃ ॥೧೪॥

ಅನನ್ಯ ಚೇತಾಃ ಸತತಮ್  ಯಃ  ಮಾಮ್  ಸ್ಮರತಿ ನಿತ್ಯಶಃ ।
ತಸ್ಯ ಅಹಮ್  ಸುಲಭಃ ಪಾರ್ಥ ನಿತ್ಯ ಯುಕ್ತಸ್ಯ ಯೋಗಿನಃ   -

ಪಾರ್ಥಾ, ಬೇರೇನನ್ನೂ ನೆನೆಯದೆ ಅನುದಿನವೂ ನಿರಂತರ ನನ್ನನ್ನು ನೆನೆಯುವವನಿಗೆ, ಅಂಥ ನಿರಂತರ ಸಾಧನೆಯಿಂದ ಸಿದ್ಧಿಪಡೆದವನಿಗೆ ನಾನು ಕೈಸೆರೆ.

  “ನಿರಂತರ ನಿತ್ಯ ಭಗವಂತನ ಚಿಂತನೆ ಮಾಡುತ್ತಾ ಬೇರೇನನ್ನೂ ನೆನೆಯದೆ ನನ್ನನ್ನು ಭಜಿಸುವ ಸಾಧಕನಿಗೆ ನಾನು ಅನಾಯಾಸವಾಗಿ ಸ್ವಾಧೀನನಾಗುತ್ತೇನೆ” ಎನ್ನುತ್ತಾನೆ ಕೃಷ್ಣ. ಸಾಧನೆಯಲ್ಲಿ ನಿತ್ಯ ತೊಡಗಿ, ಸಾಧನೆಯ ತುದಿ ಮುಟ್ಟಿದವ ಬೇರೆ ಯಾವ ಪ್ರಯತ್ನವೂ ಇಲ್ಲದೆ ಭಗವಂತನನ್ನು ಸೇರುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अनन्यचेताः सततं यो मां स्मरति नित्यशः।
तस्याहं सुलभः पार्थ नित्ययुक्तस्य योगिनीः॥

हे अर्जुन! जो पुरुष मुझमें अनन्य-चित्त होकर सदा ही निरंतर मुझ पुरुषोत्तम को स्मरण करता है, उस नित्य-निरंतर मुझमें युक्त हुए योगी के लिए मैं सुलभ हूँ, अर्थात उसे सहज ही प्राप्त हो जाता हूँ
॥14॥

Ananyachetaah satatam yo maam smarati nityashah;
Tasyaaham sulabhah paartha nityayuktasya yoginah.

I am easily attainable by that ever-steadfast Yogi who constantly and daily remembersMe (for a long time), not thinking of anything else (with a single or one-pointed mind), O Partha(Arjuna)!COMMENTARY: Constantly remembering the Lord throughout one’s life is the easiestway of attaining Him.


ಅಧ್ಯಾಯ - 08 : ಶ್ಲೋಕ – 15

ಮಾಮುಪೇತ್ಯ ಪುನರ್ಜನ್ಮ ದುಃಖಾಲಯಮಶಾಶ್ವತಮ್ ।ನಾSಪ್ನುವಂತಿ ಮಹಾತ್ಮಾನಃ ಸಂಸಿದ್ಧಿಂ ಪರಮಾಂ ಗತಾಃ  ॥೧೫॥

ಮಾಮ್ ಉಪೇತ್ಯ ಪುನಃ ಜನ್ಮ ದುಃಖ ಆಲಯಮ್ ಅಶಾಶ್ವತಮ್      ।
ನ ಅಪ್ನುವಂತಿ ಮಹಾ ಆತ್ಮಾನಃ ಸಂಸಿದ್ಧಿಮ್  ಪರಮಾಮ್  ಗತಾಃ –

ಹಿರಿಯ ಸಿದ್ಧಿಯನ್ನು ಪಡೆದ ಇಂಥ ಜೀವಗಳು ನನ್ನನ್ನು ಪಡೆದ ಮೇಲೆ ದುಗುಡಗಳ ನೆಲೆಯಾದ ನಾಲ್ಕು ದಿನದ ಈ ಸಂಸಾರದಲ್ಲಿ ಮರಳಿ ಹುಟ್ಟಿ ಬರುವುದಿಲ್ಲ.

ಸಾಧನೆಯ ಮೂಲಕ ಸಿದ್ಧಿಯನ್ನು ಪಡೆದು ಭಗವಂತನನ್ನು ಸೇರಿದ ಜೀವರು ಎಂದೂ ದುಃಖಮಾಯವಾದ ಮತ್ತು ಅಶಾಶ್ವತವಾದ ಈ ಸಂಸಾರದಲ್ಲಿ ಮರಳಿ ಹುಟ್ಟುವುದಿಲ್ಲ. “ನನ್ನನ್ನು ಬಂದು ಸೇರುವವರು ಪುಣ್ಯಾತ್ಮರು. ಜಗತ್ತಿನಲ್ಲಿ, ಜೀವನದ ಸಾಧನೆಯಲ್ಲಿ ಅತ್ಯಂತ ಶ್ರೇಷ್ಠವಾದ ಸಿದ್ಧಿ ಎಂದರೆ ಭಗವಂತನ ಸಾಕ್ಷಾತ್ಕಾರ. ಅದನ್ನು ಪಡೆದವರು ಮತ್ತೆ ಸಂಸಾರದ ಬಂಧದಲ್ಲಿ ಸಿಲುಕಿ ಒದ್ದಾಡುವ ಅಗತ್ಯವಿಲ್ಲ” ಎನ್ನುತ್ತಾನೆ ಕೃಷ್ಣ . 

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

मामुपेत्य पुनर्जन्म दुःखालयमशाश्वतम्‌।
नाप्नुवन्ति महात्मानः संसिद्धिं परमां गताः॥

परम सिद्धि को प्राप्त महात्माजन मुझको प्राप्त होकर दुःखों के घर एवं क्षणभंगुर पुनर्जन्म को नहीं प्राप्त होते
॥15॥

Maamupetya punarjanma duhkhaalayamashaashwatam;
Naapnuvanti mahaatmaanah samsiddhim paramaam gataah.

Having attained Me these great souls do not again take birth (here), which is the place ofpain and is non-eternal;
they have reached the highest perfection (liberation).


ಅಧ್ಯಾಯ - 08 : ಶ್ಲೋಕ – 16

ಆ ಬ್ರಹ್ಮಭುವನಾಲ್ಲೋಕಾಃ ಪುನರಾವರ್ತಿನೋರ್ಜುನ ।ಮಾಮುಪೇತ್ಯ ತು ಕೌಂತೇಯ ಪುನರ್ಜನ್ಮ ನ ವಿದ್ಯತೇ ॥೧೬॥

ಆ ಬ್ರಹ್ಮಭುವನಾತ್ ಲೋಕಾಃ  ಪುನಃ ಆವರ್ತಿನಃ ಅರ್ಜುನ   ।
ಮಾಮ್ ಉಪೇತ್ಯ ತು ಕೌಂತೇಯ ಪುನಃ ಜನ್ಮ ನ ವಿದ್ಯತೇ –

ಅರ್ಜುನ, ಬ್ರಹ್ಮ ಲೋಕದ ತನಕದ ಎಲ್ಲ ಲೋಕಗಳಿಂದಲೂ  ಮರಳಿ ಬರಲೇಬೇಕು. ಕೌಂತೇಯ, ನನ್ನನ್ನು ಪಡೆದಾಗ ಮಾತ್ರ ಮರುಹುಟ್ಟು ಇಲ್ಲ.

ಬ್ರಹ್ಮ ಲೋಕದಿಂದ ಹಿಡಿದು ಇತರ ಎಲ್ಲಾ ಲೋಕಗಳಿಗೂ ಒಂದು ದಿನ ನಾಶವಿದೆ. ಚತುರ್ಮುಖ ಬ್ರಹ್ಮನ ಆಯಸ್ಸು 31,104,000,0000000(ಮೂವತ್ತೊಂದು ಸಾವಿರದ ನೂರಾ ನಾಲ್ಕು ಸಾವಿರ ಕೋಟಿ) ವರ್ಷ. ಇದು ಭಗವಂತನಿಗೆ ಒಂದು ಹಗಲಿನಂತೆ!  ಭಗವಂತ ಕಾಲಾತೀತ. ಆದ್ದರಿಂದ ಕೃಷ್ಣ ಹೇಳುತ್ತಾನೆ “ನನ್ನನ್ನು ಪಡೆದಾಗ ಮಾತ್ರ ಮರುಹುಟ್ಟು ಇಲ್ಲ” ಎಂದು.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

आब्रह्मभुवनाल्लोकाः पुनरावर्तिनोऽर्जुन।
मामुपेत्य तु कौन्तेय पुनर्जन्म न विद्यते॥

हे अर्जुन! ब्रह्मलोकपर्यंत सब लोक पुनरावर्ती हैं, परन्तु हे कुन्तीपुत्र! मुझको प्राप्त होकर पुनर्जन्म नहीं होता, क्योंकि मैं कालातीत हूँ और ये सब ब्रह्मादि के लोक काल द्वारा सीमित होने से अनित्य हैं
॥16॥

Aabrahmabhuvanaallokaah punaraavartino’rjuna;
Maamupetya tu kaunteya punarjanma na vidyate.

(All) the worlds, including the world of Brahma, are subject to return again, O Arjuna!But he who reaches Me, O son of Kunti, has no rebirth

 ಅಧ್ಯಾಯ - 08 : ಶ್ಲೋಕ – 17

ಸಹಸ್ರಯುಗಪರ್ಯಂತಮಹರ್ಯದ್ ಬ್ರಹ್ಮಣೋ ವಿದುಃ ।ರಾತ್ರಿಂ ಯುಗಸಹಸ್ರಾಂತಾಂ ತೇSಹೋರಾತ್ರವಿದೋ ಜನಾಃ ॥೧೭॥

ಸಹಸ್ರ ಯುಗ ಪರ್ಯಂತಮ್ ಅಹಃ ಯತ್  ಬ್ರಹ್ಮಣಃ  ವಿದುಃ ।
ರಾತ್ರಿಮ್  ಯುಗ ಸಹಸ್ರಾಂತಾಮ್  ತೇ ಅಹಃ ರಾತ್ರ ವಿದಃ  ಜನಾಃ –ಸಾವಿರಾರು ಯುಗಗಳ ತನಕ ಭಗವಂತನ ಹಗಲು ಮತ್ತು ಸಾವಿರಾರು ಯುಗಗಳ ತನಕ ಇರುಳು ಎಂದು ತಿಳಿಯುತ್ತಾರೆ, ಅವರು ಹಗಲು-ಇರುಳು ಬಲ್ಲ ಜನರು.

ಭಗವಂತ ಕಾಲಾತೀತ ಆದರೂ ಕೂಡಾ ಆತನ ಅನುಸಂಧಾನಕ್ಕಾಗಿ ಆತನ ಸೃಷ್ಟಿ ಕಾಲವನ್ನು ಭಗವಂತನ ಹಗಲೆಂದೂ ಮತ್ತು ಪ್ರಳಯ ಕಾಲವನ್ನು ಭಗವಂತನ ರಾತ್ರಿ ಎಂದು ಕರೆಯುತ್ತಾರೆ. ಒಂದು ಸಾವಿರ ಯುಗಚಕ್ರದ ಆವೃತಿಗೆ ಒಂದು ಬ್ರಹ್ಮನ ದಿನ.  ಯುಗಚಕ್ರ ಎಂದರೆ ಚತುರ್ಯುಗ- ಕಲಿಯುಗ 4,32,000 ವರ್ಷಗಳು; ದ್ವಾಪರ ಯುಗ 8,64,000 ವರ್ಷಗಳು; ತ್ರೇತಾಯುಗ 12,96,000 ವರ್ಷಗಳು; ಕೃತಯುಗ 17,28,000 ವರ್ಷಗಳು; ಒಟ್ಟಿಗೆ ಒಂದು ಯುಗಚಕ್ರ ಎಂದರೆ 43,20,000 ವರ್ಷಗಳು. ಇಂತಹ ಒಂದು ಸಾವಿರ ಯುಗ ಚಕ್ರಗಳು ಬ್ರಹ್ಮನ ಒಂದು ಹಗಲು. ಅಂದರೆ 432 ಕೋಟಿ ವರ್ಷ. ಆದ್ದರಿಂದ ಬ್ರಹ್ಮನ ಒಂದು ದಿನ ಅಂದರೆ 864 ಕೋಟಿ ವರ್ಷ. ಚತುರ್ಮುಖ ಬ್ರಹ್ಮನ ಆಯಸ್ಸು ಅಥವಾ ಸತ್ಯಲೋಕದ ಆಯಸ್ಸು 100 ವರ್ಷ. ಅಂದರೆ 864 ಕೋಟಿ X 360 X 100=31,104,000,0000000(ಮೂವತ್ತೊಂದು ಸಾವಿರದ ನೂರಾ ನಾಲ್ಕು ಸಾವಿರ ಕೋಟಿ) ವರ್ಷ.  ಇದು ಭಗವಂತನ ಸೃಷ್ಟಿ ಕಾಲ(ಹಗಲು). ನಂತರ ಮಹಾಪ್ರಳಯ. ಈ ಮಹಾಪ್ರಳಯದ ಕಾಲ 31,104 ಸಾವಿರ ಕೋಟಿ ವರ್ಷ(ರಾತ್ರಿ). ಇದು ಭಗವಂತನ ಸೃಷ್ಟಿ ಮತ್ತು ಸಂಹಾರದ ಲೆಕ್ಕಾಚಾರ.
ಪ್ರಳಯಗಳಲ್ಲಿ ಮೂರು ವಿಧ. ೧. ಮನ್ವಂತರ ಪ್ರಳಯ; ೨. ದಿನಪ್ರಳಯ; ೩. ಮಹಾಪ್ರಳಯ. [ಈ ಮೂರು ಪ್ರಳಯಗಳಲ್ಲದೆ ಇನ್ನೂ ಅನೇಕ ಚಿಕ್ಕ ಪ್ರಳಯಗಳಾಗುತ್ತವೆ.  ಆ ಪ್ರಳಯಗಳಲ್ಲಿ ಭೂಮಿಯ ಯಾವುದೊ ಒಂದು ಭಾಗ ನಾಶವಾಗಬಹುದು]. ಮನ್ವಂತರ ಪ್ರಳಯದಲ್ಲಿ ಭೂಮಿ ಪೂರ್ಣವಾಗಿ ನಾಶವಾಗುವುದಿಲ್ಲ-ಆದರೆ ನಾಗರೀಕತೆ ನಾಶವಾಗುತ್ತದೆ.  ದಿನಪ್ರಳಯ ಚತುರ್ಮುಖ ಬ್ರಹ್ಮನ ರಾತ್ರಿ. ಅಂದರೆ ಪ್ರತೀ 432 ಕೋಟಿ ವರ್ಷಕ್ಕೊಮ್ಮೆ ದಿನಪ್ರಳಯ. ಈ ಪ್ರಳಯದಲ್ಲಿ ಭೂಮಿ ಪೂರ್ಣವಾಗಿ ನಾಶವಾಗುತ್ತದೆ. ಮಹಾಪ್ರಳಯ ಪ್ರತೀ 31,104 ಸಾವಿರ ಕೋಟಿ ವರ್ಷಕ್ಕೊಮ್ಮೆ ಹಾಗು ಈ ಪ್ರಳಯದಲ್ಲಿ ಸತ್ಯ ಲೋಕದಿಂದ ಹಿಡಿದು ಸರ್ವ ಲೋಕಗಳೂ  ಸೂಕ್ಷ್ಮಾತಿ ಸೂಕ್ಷ್ಮ ಪರಮಾಣುವಿನ ರೂಪದಲ್ಲಿ ಭಗವಂತನಲ್ಲಿ ಲೀನವಾಗುತ್ತವೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

सहस्रयुगपर्यन्तमहर्यद्ब्रह्मणो विदुः।
रात्रिं युगसहस्रान्तां तेऽहोरात्रविदो जनाः॥

ब्रह्मा का जो एक दिन है, उसको एक हजार चतुर्युगी तक की अवधि वाला और रात्रि को भी एक हजार चतुर्युगी तक की अवधि वाला जो पुरुष तत्व से जानते हैं, वे योगीजन काल के तत्व को जानने वाले हैं
॥17॥

Sahasrayugaparyantam aharyad brahmano viduh;
Raatrim yugasahasraantaam te’horaatravido janaah.

Those who know the day of Brahma, which is of a duration of a thousand Yugas (ages),and the night, which is also of a thousand Yugas’ duration, they know day and night.

ಅಧ್ಯಾಯ - 08 : ಶ್ಲೋಕ – 18

ಅವ್ಯಕ್ತಾದ್  ವ್ಯಕ್ತಯಃ ಸರ್ವಾಃ ಪ್ರಭವಂತ್ಯಹರಾಗಮೇ ।ರಾತ್ರ್ಯಾಗಮೇ ಪ್ರಲೀಯಂತೇ ತತ್ರೈವಾವ್ಯಕ್ತಸಂಜ್ಞಕೇ ॥೧೮॥

ಅವ್ಯಕ್ತಾತ್   ವ್ಯಕ್ತಯಃ ಸರ್ವಾಃ ಪ್ರಭವಂತಿ ಅಹಃ ಆಗಮೇ  ।
ರಾತ್ರಿ ಆಗಮೇ  ಪ್ರಲೀಯಂತೇ ತತ್ರ ಏವ ಅವ್ಯಕ್ತ ಸಂಜ್ಞಕೇ –

ಕಾಣದ ಭಗವಂತನಿಂದ ಕಾಣುವ ಈಯೆಲ್ಲ ಹಗಲಾದಾಗ ರೂಪುಗೊಳ್ಳುತ್ತವೆ, ಇರುಳಾದಾಗ ಅದೇ ಕಾಣದ ಭಗವಂತನಲ್ಲಿ ಕಣ್ಮರೆಯಾಗುತ್ತವೆ.

ಮಹಾಪ್ರಳಯ ಕಾಲದಲ್ಲಿ ಅವ್ಯಕ್ತನಾದ  ಭಗವಂತನಲ್ಲಿ ವ್ಯಕ್ತವಾಗಿರುವ ಈ ಪ್ರಪಂಚ ಪರಮಾಣುವಿನ ರೂಪದಲ್ಲಿ ಸೇರಿಕೊಳ್ಳುತ್ತದೆ. ಪುನಃ ಸೃಷ್ಟಿ ಕಾಲದಲ್ಲಿ ಮರಳಿ ಸೂಕ್ಷ್ಮ ರೂಪದಿಂದ ಸ್ಥೂಲ ರೂಪವನ್ನು ಪಡೆದು ವ್ಯಕ್ತವಾಗುತ್ತವೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अव्यक्ताद्व्यक्तयः सर्वाः प्रभवन्त्यहरागमे।
रात्र्यागमे प्रलीयन्ते तत्रैवाव्यक्तसंज्ञके॥

संपूर्ण चराचर भूतगण ब्रह्मा के दिन के प्रवेश काल में अव्यक्त से अर्थात ब्रह्मा के सूक्ष्म शरीर से उत्पन्न होते हैं और ब्रह्मा की रात्रि के प्रवेशकाल में उस अव्यक्त नामक ब्रह्मा के सूक्ष्म शरीर में ही लीन हो जाते हैं
॥18॥

Avyaktaadvyaktayah sarvaah prabhavantyaharaagame;
Raatryaagame praleeyante tatraivaavyaktasamjnake.

From the unmanifested all the manifested (worlds) proceed at the coming of the “day”;
at the coming of the “night” they dissolve verily into that alone which is called the unmanifested.COMMENTARY: Coming of the “day’ is the commencement of creation. Coming of the“night” is the commencement of dissolution.


ಅಧ್ಯಾಯ - 08 : ಶ್ಲೋಕ – 19

ಭೂತಗ್ರಾಮಃ ಸ ಏವಾಯಂ ಭೂತ್ವಾಭೂತ್ವಾ ಪ್ರಲೀಯತೇ ।ರಾತ್ರ್ಯಾಗಮೇSವಶಃ ಪಾರ್ಥ ಪ್ರಭವತ್ಯಹರಾಗಮೇ ॥೧೯॥

ಭೂತ ಗ್ರಾಮಃ ಸಃ ಏವ ಅಯಮ್  ಭೂತ್ವಾಭೂತ್ವಾ ಪ್ರಲೀಯತೇ ।
ರಾತ್ರಿ ಆಗಮೇ ಅವಶಃ ಪಾರ್ಥ ಪ್ರಭವತಿ ಅಹಃ ಆಗಮೇ  -

ಪಾರ್ಥ, ಅದೇ ಪಂಚಭೂತಗಳ ಗುಂಪು ಮರಳಿಮರಳಿ ಹುಟ್ಟಿ ಇರುಳಾದಾಗ ಭಗವಂತನ ವಶದಲ್ಲಿ ಲಯಗೊಳ್ಳುತ್ತದೆ; ಹಗಲಾದಾಗ ಹುಟ್ಟುತ್ತದೆ.

ಸೃಷ್ಟಿಯ ಮೂಲದ್ರವ್ಯ ಎಂದೂ ಬದಲಾಗುವುದಿಲ್ಲ. ಅದೇ ಪಂಚಭೂತಗಳು ಮರಳಿಮರಳಿ ಸೃಷ್ಟಿ-ಸಂಹಾರ ಚಕ್ರದಲ್ಲಿ ಸುತ್ತುತ್ತಿರುತ್ತವೆ. ಈ ಚಕ್ರದಲ್ಲಿ ಮೋಕ್ಷ ಯೋಗ್ಯವಲ್ಲದ ಅನಂತ ಜೀವಗಳೂ ಸುತ್ತುತ್ತಿರುತ್ತವೆ. ಆದರೆ ಭಗವಂತನನ್ನು ಸೇರಿದ ಜೀವ ಈ ಚಕ್ರದಿಂದಾಚೆಗಿರುತ್ತದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

भूतग्रामः स एवायं भूत्वा भूत्वा प्रलीयते।
रात्र्यागमेऽवशः पार्थ प्रभवत्यहरागमे॥

हे पार्थ! वही यह भूतसमुदाय उत्पन्न हो-होकर प्रकृति वश में हुआ रात्रि के प्रवेश काल में लीन होता है और दिन के प्रवेश काल में फिर उत्पन्न होता है
॥19॥

Bhootagraamah sa evaayam bhootwaa bhootwaa praleeyate;
Raatryaagame’vashah paartha prabhavatyaharaagame.

This same multitude of beings, born again and again, is dissolved, helplessly, O Arjuna,(into the unmanifested) at the coming of the night, and comes forth at the coming of the day!


ಅಧ್ಯಾಯ - 08 : ಶ್ಲೋಕ – 21

ಅವ್ಯಕ್ತೋSಕ್ಷರ ಇತ್ಯುಕ್ತಸ್ತಮಾಹುಃ ಪರಮಾಂ ಗತಿಮ್ ।ಯಂ ಪ್ರಾಪ್ಯ ನ ನಿವರ್ತಂತೇ ತದ್ ಧಾಮ  ಪರಮಂ ಮಮ  ॥೨೧॥

ಅವ್ಯಕ್ತಃ ಅಕ್ಷರಃ  ಇತಿ ಉಕ್ತಃ ತಮ್ ಆಹುಃ ಪರಮಾಮ್  ಗತಿಮ್ ।
ಯಮ್  ಪ್ರಾಪ್ಯ ನ ನಿವರ್ತಂತೇ ತತ್  ಧಾಮ  ಪರಮಮ್  ಮಮ –

ಈ ಅವ್ಯಕ್ತ ತತ್ವವನ್ನೇ ‘ಅಕ್ಷರ’ ನಾದ ಭಗವಂತನೆನ್ನುತ್ತಾರೆ.ಅವನೆ ಕೊನೆಯಾಸರೆ ಎನ್ನುತ್ತಾರೆ. ಅವನನ್ನು ಪಡೆದವರು ಮತ್ತೆ ಮರಳಿ ಬರುವುದಿಲ್ಲ. ಅದು ನನ್ನ ಹಿರಿದಾದ ಸ್ವರೂಪ.

ಎಲ್ಲರೂ ಹೋಗಿ ಸೇರಬೇಕಾದ ಸರ್ವಶ್ರೇಷ್ಠ ಸ್ಥಾನ  ಈ ಅವ್ಯಕ್ತ ತತ್ವ. ಆತನೇ 'ಅಕ್ಷರ' ಶಬ್ದದ ಮುಖ್ಯಾರ್ಥ. ಎಂದೂ ನಾಶವಿಲ್ಲದ, ಎಲ್ಲಾ ಕಡೆ ವ್ಯಾಪಿಸಿರುವ,ಯಾರು ಏನು ಬಯಸಿದರೂ ಅದನ್ನು ಕೊಡತಕ್ಕ, ಸರ್ವಸಮರ್ಥ, ಇಂದ್ರಿಯಗಳ ಅನುಭವ ಕೊಡುವವ, ಸಮಸ್ತ ಶಬ್ದವಾಚ್ಯ-ಭಗವಂತ. ಅವನನ್ನು ಸೇರಿದರೆ ಮತ್ತೆ ಮರಳಿ ಸಂಸಾರದಲ್ಲಿ ಹುಟ್ಟಬೇಕಾಗಿಲ್ಲ. “ಅದು ನನ್ನ ಹಿರಿದಾದ ಸ್ವರೂಪ” ಎನ್ನುತ್ತಾನೆ ಕೃಷ್ಣ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अव्यक्तोऽक्षर इत्युक्तस्तमाहुः परमां गतिम्‌।
यं प्राप्य न निवर्तन्ते तद्धाम परमं मम॥

जो अव्यक्त 'अक्षर' इस नाम से कहा गया है, उसी अक्षर नामक अव्यक्त भाव को परमगति कहते हैं तथा जिस सनातन अव्यक्त भाव को प्राप्त होकर मनुष्य वापस नहीं आते, वह मेरा परम धाम है
॥21॥

Avyakto’kshara ityuktastamaahuh paramaam gatim;
Yam praapya na nivartante taddhaama paramam mama.

What is called the Unmanifested and the Imperishable, That they say is the highest goal(path). They who reach It do not return (to this cycle of births and deaths). That is My highest abode(place or state).


ಅಧ್ಯಾಯ - 08 : ಶ್ಲೋಕ – 22

ಪುರುಷಃ ಸ ಪರಃ ಪಾರ್ಥ ಭಕ್ತ್ಯಾ ಲಭ್ಯಸ್ತ್ವನನ್ಯಯಾ  ।ಯಸ್ಯಾಂತಃಸ್ಥಾನಿ ಭೂತಾನಿ ಯೇನ ಸರ್ವಮಿದಂ ತತಮ್   ॥೨೨॥

ಪುರುಷಃ ಸಃ  ಪರಃ ಪಾರ್ಥ ಭಕ್ತ್ಯಾ ಲಭ್ಯ ತು ಅನನ್ಯ ಯಾ     ।
ಯಸ್ಯ ಅಂತಸ್ಥಾನಿ ಭೂತಾನಿ ಯೇನ ಸರ್ವಮ್ ಇದಮ್  ತತಮ್ –

ಪಾರ್ಥ, ಆ ಪರಮ ಪುರುಷ ಅವನಿಗೇ ಮೀಸಲಾದ ಭಕ್ತಿಗೆ ಮಾತ್ರವೆ ಎಟುಕುವವನು. ಅವನ ಒಳಗೆ ಇಡಿಯ ವಿಶ್ವವಿದೆ. ಅವನು ಈ ಎಲ್ಲವನ್ನು ತಬ್ಬಿ ನಿಂತಿದ್ದಾನೆ.

ಈ ಬ್ರಹ್ಮಾಂಡ ಮತ್ತು ಪಿಂಡಾಂಡವೆಂಬ ಪುರದಲ್ಲಿದ್ದು ಎಲ್ಲವನ್ನೂ ನಿಯಂತ್ರಿಸುವ ಭಗವಂತ ಸರ್ವ ಶಬ್ದವಾಚ್ಯ. ಇಂತಹ ಭಗವಂತನನ್ನು ಒಲಿಸಿಕೊಳ್ಳಲು ಇರುವ ಏಕಮಾತ್ರ ಉಪಾಯ ಭಕ್ತಿ. ಭಕ್ತಿ ಇಲ್ಲದ ಯಾವ ಕರ್ಮದಿಂದಲೂ ಆತನನ್ನು ಸೇರಲು ಸಾಧ್ಯವಿಲ್ಲ. ಭಗವಂತನ ಸಾಕ್ಷಾತ್ಕಾರ ಮತ್ತು ಮೋಕ್ಷಕ್ಕೆ ಏಕಮಾತ್ರ ಸಾಧನ ಅನನ್ಯವಾದ ಏಕಭಕ್ತಿ. ಪ್ರಳಯ ಕಾಲದಲ್ಲಿ ಎಲ್ಲವನ್ನೂ ತನ್ನ ಒಡಲಲ್ಲಿಟ್ಟು ರಕ್ಷಿಸಿ, ಸೃಷ್ಟಿ ಕಾಲದಲ್ಲಿ ಅಂತರ್ಯಾಮಿಯಾಗಿದ್ದು  ಮಾಡಬೇಕಾದ ಕಾರ್ಯವನ್ನೂ ಮಾಡಿಸಿ, ಅನುದಿನ ಅನಂತ ಕಾಲದಲ್ಲಿ ಒಳಗೂ ಹೊರಗೂ ತುಂಬಿ ರಕ್ಷಣೆ ಮಾಡುವ ಆ ಭಗವಂತನನ್ನು ನಿರಂತರ ಪ್ರೀತಿಸು.

 ಹೀಗೆ ಕೊನೆಗಾಲದಲ್ಲಿ ದೇಹ ತ್ಯಾಗ ಮಾಡುವಾಗ ಭಗವಂತನ ಧ್ಯಾನ ಹೇಗೆ ಮಾಡಬೇಕು ಎನ್ನುವ ಚಿತ್ರಣವನ್ನು ನಮ್ಮ ಮುಂದಿರಿಸಿದ ಕೃಷ್ಣ, ದೇಹದಿಂದ ಹೊರ ಬಂದ ಮೇಲೆ ಭಗವಂತನತ್ತ ಪ್ರಯಾಣಿಸುವ ದಾರಿಯ ಬಗ್ಗೆ  ಈ ಅಧ್ಯಾಯದ ಮುಂದಿನ ಭಾಗದಲ್ಲಿ ವಿವರಿಸುತ್ತಾನೆ. 

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

पुरुषः स परः पार्थ भक्त्या लभ्यस्त्वनन्यया।
यस्यान्तः स्थानि भूतानि येन सर्वमिदं ततम्‌॥

हे पार्थ! जिस परमात्मा के अंतर्गत सर्वभूत है और जिस सच्चिदानन्दघन परमात्मा से यह समस्त जगत परिपूर्ण है (गीता अध्याय 9 श्लोक 4 में देखना चाहिए), वह सनातन अव्यक्त परम पुरुष तो अनन्य (गीता अध्याय 11 श्लोक 55 में इसका विस्तार देखना चाहिए) भक्ति से ही प्राप्त होने योग्य है
॥22॥

Purushah sa parah paartha bhaktyaa labhyastwananyayaa;
Yasyaantahsthaani bhootaani yena sarvamidam tatam.

That highest Purusha, O Arjuna, is attainable by unswerving devotion to Him alonewithin whom all beings dwell and by whom all this is pervaded.


ಅಧ್ಯಾಯ - 08 : ಶ್ಲೋಕ – 23

ಯತ್ರ ಕಾಲೇ ತ್ವನಾವೃತ್ತಿಮಾವೃತ್ತಿಂ ಚೈವ ಯೋಗಿನಃ  ।ಪ್ರಯಾತಾ ಯಾಂತಿ  ತಂ ಕಾಲಂ ವಕ್ಷ್ಯಾಮಿ ಭರತರ್ಷಭ ॥೨೩॥

ಯತ್ರ ಕಾಲೇ ತು ಅನಾವೃತ್ತಿಮ್ ಆವೃತ್ತಿಮ್  ಚ ಏವ  ಯೋಗಿನಃ      ।
ಪ್ರಯಾತಾಃ  ಯಾಂತಿ  ತಮ್  ಕಾಲಮ್  ವಕ್ಷ್ಯಾಮಿ ಭರತ ಋಷಭ –

ಭರತ ಶ್ರೇಷ್ಠ, ಯಾವ ಕಾಲದೇವತೆಗಳ ದಾರಿಯಲ್ಲಿ ಹೋದ ಸಾಧಕರು ಮರಳುವುದಿಲ್ಲ ಮತ್ತು ಯಾವ ದಾರಿಯಲ್ಲಿ ಮರಳುತ್ತಾರೆ ಅಂಥ 'ಕಾಲ' ದೇವತೆಗಳನ್ನು ಹೇಳುತ್ತೇನೆ .

“ಶರೀರವನ್ನು ತ್ಯಾಗ ಮಾಡಿದ(ಕಾಲ ವಶನಾದ) ಜೀವನನ್ನು ಯಾವಯಾವ ದೇವತೆಗಳು  ನಿಯಮನ ಮಾಡಿ ಮುಂದೆ ಕರೆದುಕೊಂಡು ಹೋಗುತ್ತಾರೆ; ಯಾವ ದಾರಿಯಲ್ಲಿ ಹೋದವರು ಮರಳಿ ಭೂಮಿಯಲ್ಲಿ ಹುಟ್ಟುತ್ತಾರೆ ಮತ್ತು ಯಾರು ನೇರವಾಗಿ ಮೋಕ್ಷವನ್ನು ತಲುಪುತ್ತಾರೆ, ಆ ವಿಷಯವನ್ನು ನಿನಗೆ ಹೇಳುತ್ತೇನೆ” ಎನ್ನುತ್ತಾನೆ ಕೃಷ್ಣ. ಇಲ್ಲಿ ಕೆಲವರು ಕಾಲ ಎನ್ನುವ ಪದವನ್ನೂ ತಪ್ಪಾಗಿ ತಿಳಿದುಕೊಳ್ಳುತ್ತಾರೆ. ಈ ಶ್ಲೋಕದಲ್ಲಿ  ಕೃಷ್ಣ ಹೇಳುವ  ಕಾಲ ಅಂದರೆ ಸಮಯವಲ್ಲ. ಶರೀರ ತ್ಯಾಗ ಮಾಡಿದ  ಜೀವನ ನಿಯಮನ ಮಾಡುವ ದೇವತೆಗಳ ಗಣ ‘ಕಾಲ’.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( शुक्ल और कृष्ण मार्ग का विषय )
यत्र काले त्वनावत्तिमावृत्तिं चैव योगिनः।
प्रयाता यान्ति तं कालं वक्ष्यामि भरतर्षभ॥

हे अर्जुन! जिस काल में (यहाँ काल शब्द से मार्ग समझना चाहिए, क्योंकि आगे के श्लोकों में भगवान ने इसका नाम 'सृति', 'गति' ऐसा कहा है।) शरीर त्याग कर गए हुए योगीजन तो वापस न लौटने वाली गति को और जिस काल में गए हुए वापस लौटने वाली गति को ही प्राप्त होते हैं, उस काल को अर्थात दोनों मार्गों को कहूँगा
॥23॥

Yatra kaale twanaavrittim aavrittim chaiva yoginah;
Prayaataa yaanti tam kaalam vakshyaami bharatarshabha.

Now I will tell thee, O chief of the Bharatas, the times departing at which the Yogis willreturn or not return!

ಅಧ್ಯಾಯ - 08 : ಶ್ಲೋಕ – 24

ಅಗ್ನಿರ್ಜೋತಿರಹಃ ಶುಕ್ಲಃ ಷಣ್ಮಾಸಾ ಉತ್ತರಾಯಣಮ್  ।ತತ್ರ ಪ್ರಯಾತಾ ಗಚ್ಛಂತಿ  ಬ್ರಹ್ಮ ಬ್ರಹ್ಮವಿದೋ ಜನಾಃ ॥೨೪॥

ಅಗ್ನಿಃ ಜ್ಯೋತಿಃ ಅಹಃ ಶುಕ್ಲಃ ಷಟ್ ಮಾಸಾಃ ಉತ್ತರ ಅಯನಮ್        ।
ತತ್ರ ಪ್ರಯಾತಾ ಗಚ್ಛಂತಿ ಬ್ರಹ್ಮ ಬ್ರಹ್ಮವಿದಃ  ಜನಾಃ –

ಅಗ್ನಿ ಮತ್ತು ಜ್ಯೋತಿ [ಎಂಬಿಬ್ಬರು ವಹ್ನಿಯ ಮಕ್ಕಳು].[ಮಧ್ಯಾಹ್ನದ ದೇವತೆಯ ಜತೆ] ಹಗಲಿನ ದೇವತೆ, [ಹುಣ್ಣಿಮೆಯ ದೇವತೆ ಜತೆ] ಶುಕ್ಲಪಕ್ಷದ ದೇವತೆ , ಉತ್ತರಾಯಣದ ಆರು ತಿಂಗಳ ದೇವತೆಗಳು, [ಸಂಕ್ರಾಂತಿಯ ದೇವತೆಯ ಜತೆ] ಉತ್ತರಾಯಣದ ದೇವತೆ- ಈ ದಾರಿಯಲ್ಲಿ ಹೋದವರು ಭಗವಂತನನ್ನು ಬಲ್ಲವರು ಭಗವಂತನನ್ನು ಸೇರುತ್ತಾರೆ; ಮತ್ತೆ ಮರಳುವುದಿಲ್ಲ.

ದೇಹದಿಂದ ಹೊರಬಂದ ಮೋಕ್ಷ ಯೋಗ್ಯ ಜೀವವನ್ನು ಮೊದಲು ಸ್ವಾಗತಿಸುವವರು ವೈಶ್ವಾನರ(ಪ್ರಧಾನ ಅಗ್ನಿ)ನ ಮಕ್ಕಳಾದ ಅಗ್ನಿ ಮತ್ತು ಜ್ಯೋತಿ. ಈ ದೇವತೆಗಳು ಜೀವನನ್ನು ಸತ್ಕರಿಸಿ ಮುಂದಕ್ಕೆ ಕಳುಹಿಸುತ್ತಾರೆ. ಮುಂದೆ ಜೀವನನ್ನು ಬೆಳಕಿನ ಮತ್ತು ಮಧ್ಯಾಹ್ನದ ದೇವತೆಗಳು ಸ್ವಾಗತಿಸುತ್ತಾರೆ. ಈ ನಿಜವಾದ ಬೆಳಕಿನ ಅನುಭವದೊಂದಿಗೆ ಜೀವ ಮುಂದೆ ಸಾಗಿ ಶುಕ್ಲಪಕ್ಷದ ಮತ್ತು ಹುಣ್ಣಿಮೆಯ ದೇವತೆಯನ್ನು ತಲುಪುತ್ತಾನೆ. ಆ ನಂತರ ಸಂಕ್ರಮಣದ, ಉತ್ತರಾಯಣದ ದೇವತೆ ಜೊತೆಗೆ ಉತ್ತರಾಯಣದ ಆರು ತಿಂಗಳ ದೇವತೆಗಳು ಜೀವನನ್ನು ಭಗವಂತನೆಡೆಗೆ ಕಳುಹಿಸುತ್ತಾರೆ. ಹೀಗೆ ಯಾರು ಈ ದಾರಿಯಲ್ಲಿ ಸಾಗುತ್ತಾರೆ ಅವರು ಎಂದೂ ಮರಳಿ ಬರುವುದಿಲ್ಲ-ನಿತ್ಯ ಸತ್ಯವಾದ ಭಗವಂತನನ್ನು ಸೇರುತ್ತಾರೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अग्निर्ज्योतिरहः शुक्लः षण्मासा उत्तरायणम्‌।
तत्र प्रयाता गच्छन्ति ब्रह्म ब्रह्मविदो जनाः॥

जिस मार्ग में ज्योतिर्मय अग्नि-अभिमानी देवता हैं, दिन का अभिमानी देवता है, शुक्ल पक्ष का अभिमानी देवता है और उत्तरायण के छः महीनों का अभिमानी देवता है, उस मार्ग में मरकर गए हुए ब्रह्मवेत्ता योगीजन उपयुक्त देवताओं द्वारा क्रम से ले जाए जाकर ब्रह्म को प्राप्त होते हैं।
॥24॥

Agnijyotirahah shuklah shanmaasaa uttaraayanam;
Tatra prayaataa gacchanti brahma brahmavido janaah.

Fire, light, daytime, the bright fortnight, the six months of the northern path of the sun(northern solstice)—departing then (by these), men who know Brahman go to Brahman

[2:39 PM, 9/3/2018] Bhagavathgeetha: ಅಧ್ಯಾಯ - 08 : ಶ್ಲೋಕ – 25

ಧೂಮೋ ರಾತ್ರಿಸ್ತಥಾ ಕೃಷ್ಣಃ ಷಣ್ಮಾಸಾ ದಕ್ಷಿಣಾಯನಮ್  ।ತತ್ರ ಚಾಂದ್ರಮಸಂ ಜ್ಯೋತಿರ್ಯೋಗೀ ಪ್ರಾಪ್ಯ ನಿವರ್ತತೇ   ॥೨೫॥

ಧೂಮಃ  ರಾತ್ರಿಃ ತದಾ  ಕೃಷ್ಣಃ ಷಟ್ ಮಾಸಾ ದಕ್ಷಿಣಾಯನಮ್   ।
ತತ್ರ ಚಾಂದ್ರಮಸಮ್  ಜ್ಯೋತಿಃ ಯೋಗೀ ಪ್ರಾಪ್ಯ ನಿವರ್ತತೇ –

ಹೊಗೆಯ ದೇವತೆ, ಇರುಳ ದೇವತೆ, ಕೃಷ್ಣಪಕ್ಷದ ದೇವತೆ, ದಕ್ಷಿಣಾಯನದ ಆರು ತಿಂಗಳ ದೇವತೆಗಳು, ಮತ್ತು ದಕ್ಷಿಣಾಯನದ ದೇವತೆ-ಈ ದಾರಿಯಲ್ಲಿ ಸಾಗಿದ ಸಾಧಕ ಚಂದ್ರನ ಬೆಳಕಿನ ಲೋಕವನ್ನು ಸೇರಿ ಮರಳಿ ಬರುತ್ತಾನೆ.

ಮೋಕ್ಷ ಯೋಗ್ಯವಲ್ಲದ ಜೀವ ದೇಹದಿಂದ ಹೊರ ಬಂದಾಗ ಆತನನ್ನು ಸ್ವಾಗತಿಸುವ ದೇವತೆ ಹೊಗೆಯ ಮತ್ತು ಕತ್ತಲಿನ ದೇವತೆ. ಆ ನಂತರ ಕೃಷ್ಣಪಕ್ಷದ ದೇವತೆ; ನಂತರ  ದಕ್ಷಿಣಾಯನದ ಮತ್ತು ‘ದಕ್ಷಿಣಾಯನದ ಆರು ತಿಂಗಳ’ ದೇವತೆಗಳು ಜೀವನನ್ನು ಸೋಮಲೋಕಕ್ಕೆ ತಲುಪಿಸುತ್ತಾರೆ. ಜೀವ ಇಲ್ಲಿ ತನ್ನ  ಪುಣ್ಯ ಕ್ಷಯವಾಗುವ ತನಕ ಸುಖವನ್ನು ಅನುಭವಿಸಿ, ಮರಳಿ ಮೋಡದಲ್ಲಿ ಸೇರಿ, ಮಳೆಯ ಮೂಲಕ ಭೂಮಿಯನ್ನು ತಲುಪಿ, ಒಂದು ಗಂಡಿನ ದೇಹದ ಮೂಲಕ ಹೆಣ್ಣಿನ ಗರ್ಭವನ್ನು ಪ್ರವೇಶಿಸಿ, ಮರಳಿ  ಭೂಮಿಯಲ್ಲಿ ಹುಟ್ಟುತ್ತದೆ. 

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

धूमो रात्रिस्तथा कृष्ण षण्मासा दक्षिणायनम्‌।
तत्र चान्द्रमसं ज्योतिर्योगी प्राप्य निवर्तते॥

जिस मार्ग में धूमाभिमानी देवता है, रात्रि अभिमानी देवता है तथा कृष्ण पक्ष का अभिमानी देवता है और दक्षिणायन के छः महीनों का अभिमानी देवता है, उस मार्ग में मरकर गया हुआ सकाम कर्म करने वाला योगी उपयुक्त देवताओं द्वारा क्रम से ले गया हुआ चंद्रमा की ज्योत को प्राप्त होकर स्वर्ग में अपने शुभ कर्मों का फल भोगकर वापस आता है
॥25॥

Dhoomo raatristathaa krishnah shanmaasaa dakshinaayanam;
Tatra chaandramasam jyotir yogee praapya nivartate.

Attaining to the lunar light by smoke, night-time, the dark fortnight or the six months ofthe southern path of the sun (the southern solstice), the Yogi returns.

ಅಧ್ಯಾಯ - 08 : ಶ್ಲೋಕ – 26

ಶುಕ್ಲಕೃಷ್ಣೇ ಗತೀ ಹ್ಯೇತೇ ಜಗತಃ ಶಾಶ್ವತೇ ಮತೇ ।ಏಕಯಾ ಯಾತ್ಯನಾವೃತ್ತಿಮನ್ಯಯಾSSವರ್ತತೇ ಪುನಃ  ॥೨೬॥

ಶುಕ್ಲ ಕೃಷ್ಣೇ ಗತೀ ಹಿ ಏತೇ ಜಗತಃ ಶಾಶ್ವತೇ ಮತೇ   ।
ಏಕಯಾ ಯಾತಿ ಅನಾವೃತ್ತಿಮ್ ಅನ್ಯಯಾ ಆವರ್ತತೇ ಪುನಃ –

ಇವು ಜಗದ ಬಿಳಿ ಮತ್ತು ಕಪ್ಪು ದಾರಿಗಳು. ಅನುಗಾಲ ಇರುವಂಥವು ಎಂದು ಶಾಸ್ತ್ರದ ತೀರ್ಮಾನ. ಒಂದರಿಂದ ಮರಳಿ ಬರುವುದಿಲ್ಲ. ಇನ್ನೊಂದರಿಂದ ಮತ್ತೆ ಮರಳುತ್ತಾನೆ.

ಹೀಗೆ ಒಂದು ಮೋಕ್ಷಕ್ಕೆ ಹೋಗುವ ಬೆಳಕಿನ ಬಿಳಿಯ ದಾರಿ ಮತ್ತು ಇನ್ನೊಂದು ಮರಳಿ ಸಂಸಾರಕ್ಕೆ ಬರುವ ಕತ್ತಲಿನ ಕಪ್ಪು ದಾರಿ. ಈ ಎರಡೂ ದಾರಿಗಳೂ ಅನಾದಿ ಅನಂತ ಕಾಲದಲ್ಲಿ ಎಲ್ಲ ಜೀವಗಳಿಗೆ ಸಮನಾಗಿ ಇರತಕ್ಕಂತಹ ವ್ಯವಸ್ಥೆ. ಬೆಳಕಿನ ದಾರಿಯಲ್ಲಿ ಹೋದವ ಮರಳಿ ಬರುವುದಿಲ್ಲ, ಕತ್ತಲೆಯ ದಾರಿಯಲ್ಲಿ ಹೋದವ ಮರಳಿ ಬರುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

शुक्ल कृष्णे गती ह्येते जगतः शाश्वते मते।
एकया यात्यनावृत्ति मन्ययावर्तते पुनः॥

क्योंकि जगत के ये दो प्रकार के- शुक्ल और कृष्ण अर्थात देवयान और पितृयान मार्ग सनातन माने गए हैं। इनमें एक द्वारा गया हुआ (अर्थात इसी अध्याय के श्लोक 24 के अनुसार अर्चिमार्ग से गया हुआ योगी।)-- जिससे वापस नहीं लौटना पड़ता, उस परमगति को प्राप्त होता है और दूसरे के द्वारा गया हुआ ( अर्थात इसी अध्याय के श्लोक 25 के अनुसार धूममार्ग से गया हुआ सकाम कर्मयोगी।) फिर वापस आता है अर्थात्‌ जन्म-मृत्यु को प्राप्त होता है
॥26॥

Shuklakrishne gatee hyete jagatah shaashwate mate;
Ekayaa yaatyanaavrittim anyayaa’vartate punah.

The bright and the dark paths of the world are verily thought to be eternal;
by the one(the bright path) a person goes not to return again, and by the other (the dark path) he returns.COMMENTARY: The bright path is the path to the gods taken by devotees. The dark pathis of the manes taken by those who perform sacrifices or charitable acts with the expectation ofrewards.


ಅಧ್ಯಾಯ - 08 : ಶ್ಲೋಕ – 27

ನೈತೇ ಸೃತೀ ಪಾರ್ಥ ಜಾನನ್ ಯೋಗೀ ಮುಹ್ಯತಿ ಕಶ್ಚನ  ।ತಸ್ಮಾತ್ ಸರ್ವೇಷು ಕಾಲೇಷು ಯೋಗಯುಕ್ತೋ ಭವಾರ್ಜುನ ॥೨೭॥

ನ ಏತೇ  ಸೃತೀ ಪಾರ್ಥ ಜಾನನ್ ಯೋಗೀ ಮುಹ್ಯತಿ ಕಶ್ಚನ  ।
ತಸ್ಮಾತ್ ಸರ್ವೇಷು ಕಾಲೇಷು ಯೋಗಯುಕ್ತಃ  ಭವ ಅರ್ಜುನ-

ಪಾರ್ಥ, ಈ ದಾರಿಗಳನ್ನರಿತ ಯಾವ ಸಾಧಕನೂ ದಾರಿ ತಪ್ಪುವುದಿಲ್ಲ. ಅದರಿಂದ, ಓ ಅರ್ಜುನ, ಎಲ್ಲ ಕಾಲಗಳಲ್ಲು ಉಪಾಯವನ್ನರಿತು ನಡೆ.

ಈ ಎರಡೂ ದಾರಿಗಳ ಬಗ್ಗೆ ಸರಿಯಾದ ತಿಳುವಳಿಕೆ ಇದ್ದು, ನೀನು ಹೋಗಬೇಕಾದ ದಾರಿ ಯಾವುದು ಎಂದು ತಿಳಿದು, ಆಯಾ ಅಭಿಮಾನಿ ದೇವತೆಗಳ ಜೊತೆಗೆ ಮುಂದಕ್ಕೆ ಸಾಗಬೇಕು. ಆಯಾ ಅಭಿಮಾನಿ ದೇವತೆಗಳು ಬೇರೆಬೇರೆ ಮೆಟ್ಟಲಿನಲ್ಲಿ ಬಂದು ಜೀವನನ್ನು ಮುಂದಕ್ಕೆ ಕರೆದುಕೊಂಡು ಹೋಗುತ್ತಾರೆ. ಈ ಕಾರಣದಿಂದ ಅಂತ್ಯ ಕಾಲದ ಸ್ಮರಣೆಯಲ್ಲಿ ಮಾರ್ಗ ಮತ್ತು ಅಭಿಮಾನಿ ದೇವತೆಗಳ ಚಿಂತನೆ ಅತ್ಯಗತ್ಯ. ಇದನ್ನು ತಿಳಿದು ಅನುಸಂಧಾನ ಮಾಡಿಕೊಂಡು ಅನುಷ್ಠಾನ ಮಾಡಿದರೆ ಯಾವ ಸಾಧಕನಿಗೂ ಗೊಂದಲವಿಲ್ಲ. ಆದ್ದರಿಂದ ಕೃಷ್ಣ ಅರ್ಜುನನಿಗೆ ಹೇಳುತ್ತಾನೆ – “ಎಲ್ಲ ಕಾಲದಲ್ಲೂ ಈ ಉಪಾಯವನ್ನರಿತು ನಡೆ” ಎಂದು.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

नैते सृती पार्थ जानन्योगी मुह्यति कश्चन।
तस्मात्सर्वेषु कालेषु योगयुक्तो भवार्जुन॥

हे पार्थ! इस प्रकार इन दोनों मार्गों को तत्त्व से जानकर कोई भी योगी मोहित नहीं होता। इस कारण हे अर्जुन! तू सब काल में समबुद्धि रूप से योग से युक्त हो अर्थात निरंतर मेरी प्राप्ति के लिए साधन करने वाला हो
॥27॥

Naite sritee paartha jaanan yogee muhyati kashchana;
Tasmaat sarveshu kaaleshu yogayukto bhavaarjuna.

Knowing these paths, O Arjuna, no Yogi is deluded! Therefore, at all times be steadfastin Yoga.


ಅಧ್ಯಾಯ - 08 : ಶ್ಲೋಕ – 28

ವೇದೇಷು ಯಜ್ಞೇಷು ತಪಸ್ಸು  ಚೈವ ದಾನೇಷು ಯತ್ ಪುಣ್ಯಫಲಂ ಪ್ರದಿಷ್ಟಮ್ ।ಅತ್ಯೇತಿ ತತ್ ಸರ್ವಮಿದಂ ವಿದಿತ್ವಾಯೋಗೀ ಪರಂ ಸ್ಥಾನಮುಪೈತಿ ಚಾSದ್ಯಮ್ ॥೨೮॥

ವೇದೇಷು ಯಜ್ಞೇಷು ತಪಸ್ಸು  ಚ ಏವ ದಾನೇಷು ಯತ್ ಪುಣ್ಯಫಲಮ್  ಪ್ರದಿಷ್ಟಮ್ ।
ಅತ್ಯೇತಿ ತತ್ ಸರ್ವಮ್ ಇದಮ್  ವಿದಿತ್ವಾ ಯೋಗೀ ಪರಮ್  ಸ್ಥಾನಮ್ ಉಪೈತಿ ಚ ಆದ್ಯಮ್ –

ವೇದವನ್ನು ಓದಿದರೆ, ಯಜ್ಞಗಳನ್ನು ಮಾಡಿದರೆ, ತಪಗಳನ್ನು ಆಚರಿಸಿದರೆ, ದಾನಗಳನ್ನು ನೀಡಿದರೆ ಏನು ಪುಣ್ಯಫಲ ಹೇಳಲಾಗಿದೆ ಅದನ್ನೆಲ್ಲ ಮೀರಿ ನಿಲ್ಲುತ್ತಾನೆ ಇದನ್ನು ಬಲ್ಲ ಸಾಧಕ; ಎಲ್ಲಕ್ಕೂ ಮೊದಲ ಹಿರಿಯ ತಾಣವನ್ನು ಸೇರುತ್ತಾನೆ.

 ಉಪಸಂಹಾರ ಮಾಡುತ್ತಾ ಕೃಷ್ಣ ಹೇಳುತ್ತಾನೆ-ಎಲ್ಲಕ್ಕಿಂತ ಮಿಗಿಲಾದ ತಿಳಿವು ಅಂದರೆ ಈ ಅಂತ್ಯ ಕಾಲದ ಅರಿವು ಎಂದು . ಸಮಸ್ತ ಶಾಸ್ತ್ರದಲ್ಲಿ ಯಜ್ಞ-ದಾನ-ತಪಸ್ಸುಗಳ ಮೂಲಕ ಏನು ಪುಣ್ಯ ಹೇಳಿದ್ದಾರೆ, ಈ ಅಂತ್ಯ ಕಾಲದ ಸಾವಿನ ರಹಸ್ಯದ ಅರಿವು  ಈ ಎಲ್ಲಾ ಪುಣ್ಯ ಫಲವನ್ನು ಮೀರಿ ನಿಲ್ಲುತ್ತದೆ. ಆದ್ದರಿಂದ ಎಲ್ಲಕ್ಕಿಂತ ದೊಡ್ಡ ಸಾಧನೆ ಅಂತ್ಯ ಕಾಲದ ಚಿಂತನೆ.  ಈ ಕಾರಣದಿಂದ ಬದುಕಿಗಿಂತ ಸಾವಿನ ಬಗ್ಗೆ ಹೆಚ್ಚು ಚಿಂತನೆಯ ಅಗತ್ಯವಿದೆ.

ಸಾವು ಅಮಂಗಳವಲ್ಲ. ಸಾವು ದುಃಖದ ಅನುಭವ ಎನ್ನುವುದು ನಮ್ಮ ಭ್ರಮೆ. ದೇಹದ ಒಳಗಿರುವಾಗ ಬೌತಿಕ ಶರೀರದ ಎಲ್ಲಾ ಯಾತನೆ ಜೀವಕ್ಕೆ ಅಂಟಿಕೊಂಡಿರುತ್ತದೆ. ಸಾವು ಎಂದರೆ ಈ ಸ್ಥೂಲ ಶರೀರದಿಂದ ಬಿಡುಗಡೆ. ಆದ್ದರಿಂದ ಸೂಕ್ಷ್ಮ ಶರೀರದಲ್ಲಿರುವ ಜೀವ ಪಂಜರದಿಂದ ಹೊರ ಬಂದು ಮುಕ್ತವಾಗಿ ಆಕಾಶದಲ್ಲಿ ಹಾರಾಡುವ ಪಕ್ಷಿಯಂತೆ. ಈ ಕಾರಣದಿಂದ ಸಾವಿನ ಭಯ ಬಿಟ್ಟು ಕೊನೇ ಕ್ಷಣದಲ್ಲಿ ಮಾಂಗಲಿಕವಾಗಿ ಎತ್ತರಕ್ಕೇರುವ ದೇವತಾ ಅನುಸಂಧಾನ ನಿರಂತರವಾಗಿ ನಮ್ಮ ಬದುಕಿನಲ್ಲಿರಬೇಕು.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

ಇತಿ ಅಷ್ಟಮೋಧ್ಯಾಯಃ

ಎಂಟನೆಯ ಅಧ್ಯಾಯ ಮುಗಿಯಿತು 

🍁🍁🍁🍁🍁🍁🍁🍁🍁🍁🍁

वेदेषु यज्ञेषु तपःसु चैव दानेषु यत्पुण्यफलं प्रदिष्टम्‌।
अत्येत तत्सर्वमिदं विदित्वा योगी परं स्थानमुपैति चाद्यम्‌॥

योगी पुरुष इस रहस्य को तत्त्व से जानकर वेदों के पढ़ने में तथा यज्ञ, तप और दानादि के करने में जो पुण्यफल कहा है, उन सबको निःसंदेह उल्लंघन कर जाता है और सनातन परम पद को प्राप्त होता है
॥28॥
ॐ तत्सदिति श्री मद्भगवद्गीतासूपनिषत्सु ब्रह्मविद्यायां योगशास्त्रे श्री कृष्णार्जुनसंवादे अक्षर ब्रह्मयोगो नामाष्टमोऽध्यायः
॥8॥

Vedeshu yajneshu tapahsu chaivaDaaneshu yat punyaphalam pradishtam:Atyeti tatsarvam idam viditwaaYogee param sthaanamupaiti chaadyam.

Whatever fruits or merits is declared (in the scriptures) to accrue from (the study of) theVedas, (the performance of) sacrifices, (the practice of) austerities, and (the offering of)gifts—beyond all these goes the Yogi, having known this;
and he attains to the supreme primeval(first or ancient) Abode.

Hari Om Tat SatIti Srimad Bhagavadgeetaasoopanishatsu BrahmavidyaayaamYogashaastre Sri KrishnaarjunasamvaadeAksharabrahmayogo Naama Ashtamo’dhyaayah

Thus in the Upanishads of the glorious Bhagavad Gita, the science of the Eternal, thescripture of Yoga, the dialogue between Sri Krishna and Arjuna, ends the eighth discourse entitled:“The Yoga Of the Imperishable Brahman”

ಅಧ್ಯಾಯ ಏಳು

 ಅಧ್ಯಾಯ ಏಳು

ಹಿಂದಿನ ಆರು ಅಧ್ಯಾಯ(ಮೊದಲ ಷಟ್ಕ)ದಲ್ಲಿ ಕೃಷ್ಣ ಸಾಧಕನಾದವನು ಯಾವ ರೀತಿ ಸಾಧನೆಗೆ ತೊಡಗಬೇಕು, ಕರ್ಮ ಹೇಗಿರಬೇಕು, ಧ್ಯಾನ ಹೇಗಿರಬೇಕು, ಇತ್ಯಾದಿ ಭಗವಂತನನ್ನು ತಿಳಿಯುವ ಸಾಧನದ ಬಗ್ಗೆ ಹೇಳಿದ. ಎರಡನೇ ಷಟ್ಕ(ಅ-೭ರಿಂದ ೧೨) ಸಾಧನೆಯ ಮೂಲಕ ನಾವು ತಿಳಿದುಕೊಳ್ಳಬೇಕಾದ ಭಗವಂತನ ಸ್ವರೂಪವನ್ನು, ವಿಭೂತಿಯನ್ನು,  ವೈಭವವನ್ನು, ಆತನ ಮಹಿಮೆಯನ್ನು ಹೇಳುವ ಸಾಧ್ಯಾಧ್ಯಾಯ.

ಏಳನೇ ಅಧ್ಯಾಯ ಭಗವಂತನ ಅಮೃತ ನುಡಿಯಿಂದ ಪ್ರಾರಂಭವಾಗುತ್ತದೆ. 

ಅಧ್ಯಾಯ - 07 : ಶ್ಲೋಕ – 01

ಭಗವಾನುವಾಚ ।ಮಯ್ಯಾಸಕ್ತಮನಾಃ ಪಾರ್ಥ ಯೋಗಂ ಯುಂಜನ್ ಮದಾಶ್ರಯಃ ।ಅಸಂಶಯಂ ಸಮಗ್ರಂ ಮಾಂ ಯಥಾ ಜ್ಞಾಸ್ಯಸಿ ತಚ್ಛೃಣು ॥೧॥

ಭಗವಾನ್ ಉವಾಚ-ಭಗವಂತ ಹೇಳಿದನು:
ಮಯಿ ಆಸಕ್ತ ಮನಾಃ ಪಾರ್ಥ ಯೋಗಮ್  ಯುಂಜನ್ ಮತ್ ಆಶ್ರಯಃ ।
ಅಸಂಶಯಮ್  ಸಮಗ್ರಮ್  ಮಾಮ್  ಯಥಾ ಜ್ಞಾಸ್ಯಸಿ ತತ್ ಶೃಣು –

ಪಾರ್ಥ, ನನ್ನನ್ನೆ ಬಗೆ ತುಂಬಿ ಪ್ರೀತಿಸುತ್ತ, ನನ್ನನ್ನೆ ಮೊರೆಹೊಕ್ಕು, ಯೋಗ ಸಾಧನೆಯಲ್ಲಿ ತೊಡಗುತ್ತ ಖಚಿತವಾಗಿ, ಅರಿವಿನ ತೆಕ್ಕೆ ತುಂಬಾ ನನ್ನನ್ನು ಹೇಗೆ ಅರಿಯಬಲ್ಲೆ ಅದನ್ನು ಕೇಳು.

ಮದ್ದಾನೆ ಅಥವಾ ಗೂಳಿಯಂತಹ ನಮ್ಮ ಮನಸ್ಸನ್ನು ಮಣಿಸಿ, ಸಾಧನೆಯ ಹಾದಿಯಲ್ಲಿ ಅದನ್ನು ಪಕ್ವಗೊಳಿಸಿದ ಮೇಲೆ, ಭಗವಂತನಲ್ಲಿ  ಮತ್ತೆಂದೂ ಕದಲದ, ಸುದೃಡ ಮತ್ತು ಗಾಢವಾದ ಭಕ್ತಿಯಿಂದ, ಅಹಂಕಾರ ತೊರೆದು, ಸಂಪೂರ್ಣ ಶರಣಾಗತಿಯಿಂದ (ಎಲ್ಲಾ ಕಾಲದಲ್ಲೂ ನಾವು ಭಗವಂತನ ಅಧೀನ ಎನ್ನುವ ಎಚ್ಚರದಿಂದ), ಭಗವಂತನಲ್ಲಿ ಸಂಪೂರ್ಣವಾಗಿ ತನ್ನನ್ನು ತಾನು ಅರ್ಪಿಸಿಕೊಂಡು, ಧ್ಯಾನಯೋಗದಲ್ಲಿ ತೊಡಗಿದ ಮೇಲೆ, ‘ಅರಿವಿನ ಪೂರ್ಣ ಸಾಮರ್ಥ್ಯದಷ್ಟು ಭಗವಂತನನ್ನು ಹೇಗೆ ತಿಳಿಯಬಹುದು’ ಅದನ್ನು ಕೇಳು ಎನ್ನುತ್ತಾನೆ ಕೃಷ್ಣ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( विज्ञान सहित ज्ञान का विषय )
श्रीभगवानुवाच
मय्यासक्तमनाः पार्थ योगं युञ्जन्मदाश्रयः।
असंशयं समग्रं मां यथा ज्ञास्यसि तच्छृणु॥

श्री भगवान बोले- हे पार्थ! अनन्य प्रेम से मुझमें आसक्त चित तथा अनन्य भाव से मेरे परायण होकर योग में लगा हुआ तू जिस प्रकार से सम्पूर्ण विभूति, बल, ऐश्वर्यादि गुणों से युक्त, सबके आत्मरूप मुझको संशयरहित जानेगा, उसको सुन
॥1॥

Sri Bhagavaan Uvaacha:
Mayyaasaktamanaah paartha yogam yunjanmadaashrayah;
Asamshayam samagram maam yathaa jnaasyasi tacchrinu.

The Blessed Lord said:
O Arjuna, hear how you shall without doubt know Me fully, with the mind intent on Me,practising Yoga and taking refuge in Me!COMMENTARY: If you sing the glories and attributes of the Lord, you will develop lovefor Him and then your mind will be ever fixed on Him. Intense love for the Lord is real devotion.With this you must surely get full knowledge of the Self.


ಅಧ್ಯಾಯ - 07 : ಶ್ಲೋಕ – 02

ಜ್ಞಾನಂ ತೇSಹಂ ಸವಿಜ್ಞಾನಮಿದಂ ವಕ್ಷ್ಯಾಮ್ಯಶೇಷತಃ ।ಯಜ್ ಜ್ಞಾತ್ವಾ ನೇಹ ಭೂಯೋSನ್ಯಜ್ ಜ್ಞಾತವ್ಯಮವಶಿಷ್ಯತೇ  ॥೨॥

ಜ್ಞಾನಮ್  ತೇ ಅಹಮ್  ಸ ವಿಜ್ಞಾನಮ್ ಇದಮ್  ವಕ್ಷ್ಯಾಮಿ ಅಶೇಷತಃ ।
ಯತ್  ಜ್ಞಾತ್ವಾ ನ ಇಹ  ಭೂಯಃ ಅನ್ಯತ್  ಜ್ಞಾತವ್ಯಮ್ ಅವಶಿಷ್ಯತೇ –

ತಿಳಿಯಬೇಕಾದ ನನ್ನ ಹಿರಿಮೆಯನ್ನು ಅದರ ಬಿತ್ತರದ ಜತೆಗೆ ನಿನಗೆ ನಾನು ಪೂರ್ತಿಯಾಗಿ ಹೇಳುತ್ತೇನೆ. ಇದನ್ನು ತಿಳಿದರೆ ಮತ್ತೆ ಈ ವಿಷಯದಲ್ಲಿ ಬೇರೆ ತಿಳಿಯುವಂಥದೇನೂ ಉಳಿದಿರುವುದಿಲ್ಲ.

ಯಾವುದನ್ನು ತಿಳಿದರೆ ಎಲ್ಲವನ್ನೂ ತಿಳಿದಂತಾಗುತ್ತದೋ ಅದನ್ನು ನಿನಗೆ ಹೇಳುತ್ತೇನೆ ಎನ್ನುತ್ತಾನೆ ಕೃಷ್ಣ. ಉಪನಿಷತ್ತಿನಲ್ಲಿ ಒಂದು ಮಾತಿದೆ “ಯಸ್ಮಿನ್ ವಿಜ್ಞಾತೇ ಸರ್ವ೦ ಇದ೦ ವಿಜ್ಞಾತ೦ ಭವತಿ” ಎಂದು. ಅಂದರೆ ಯಾವುದನ್ನು ತಿಳಿದರೆ ಎಲ್ಲವೂ ತಿಳಿಯುತ್ತದೋ ಅದನ್ನು ಮೊದಲು ತಿಳಿಯಬೇಕು.  ನಾವು ಭಗವಂತನನ್ನು ತಿಳಿದರೆ ಈ ಪ್ರಪಂಚವನ್ನು ತಿಳಿದಂತೆ. ಅದನ್ನು ಬಿಟ್ಟು ಪ್ರಪಂಚವನ್ನು ತಿಳಿದು ಭಗವಂತನನ್ನು ತಿಳಿಯಬೇಕು ಅಂದುಕೊಂಡರೆ ಅದು ಅಸಾಧ್ಯ. ಇಲ್ಲಿ ಕೃಷ್ಣ ಹೇಳುತ್ತಾನೆ “ಯಾವ ಸಂಗತಿಯನ್ನು ತಿಳಿದರೆ ಮತ್ತೆ ಬೇರೆ ತಿಳಿದುಕೊಳ್ಳಬೇಕಾದ ಸಂಗತಿ ಉಳಿಯುವುದಿಲ್ಲವೋ ಅಂತಹ ವಿಜ್ಞಾನವನ್ನು ನಿನಗೆ ಕೊಡುತ್ತೇನೆ” ಎಂದು. ಜ್ಞಾನ ವಿಜ್ಞಾನವಾದಾಗಲೇ ಅದು ಸಮಗ್ರವಾಗುವುದು. ವಿಜ್ಞಾನ ಅಂದರೆ ವಿ+ಜ್ಞಾನ. ಇಲ್ಲಿ ‘ವಿ’ ಉಪಸರ್ಗ, ‘ವಿ’- ವಿಲಕ್ಷಣವಾದ, ವಿಶಿಷ್ಟವಾದ, ವಿಶೇಷವಾದ, ಇತ್ಯಾದಿ ಅರ್ಥವನ್ನು ಕೊಡುತ್ತದೆ. ಒಂದು ವಿಷಯವನ್ನು ತಳಸ್ಪರ್ಶಿಯಾಗಿ ತಿಳಿಯುವುದು ವಿಜ್ಞಾನ. ಇಲ್ಲಿ ಕೃಷ್ಣ ಹೇಳುತ್ತಿರುವುದು ವಿಜ್ಞಾನದ ಬಗ್ಗೆ. ‘ದೇವರು ಇದ್ದಾನೆ, ಅವನು ಸರ್ವಸಮರ್ಥ, ಸರ್ವಾಂತರ್ಯಾಮಿ’ ಎನ್ನುವುದು ಜ್ಞಾನ; ಆತ ಎಲ್ಲೆಲ್ಲಿ ಹೇಗಿದ್ದಾನೆ, ಯಾವ ವಸ್ತುವಿನಲ್ಲಿ ಯಾವ ವಿಭೂತಿಯಾಗಿದ್ದಾನೆ, ಎಂದು ವಿವರವಾಗಿ ತಿಳಿಯುವುದು ವಿಜ್ಞಾನ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

ज्ञानं तेऽहं सविज्ञानमिदं वक्ष्याम्यशेषतः।
यज्ज्ञात्वा नेह भूयोऽन्यज्ज्ञातव्यमवशिष्यते॥

मैं तेरे लिए इस विज्ञान सहित तत्व ज्ञान को सम्पूर्णतया कहूँगा, जिसको जानकर संसार में फिर और कुछ भी जानने योग्य शेष नहीं रह जाता
॥2॥

Jnaanam te’ham savijnaanam idam vakshyaamyasheshatah;
Yajjnaatwaa neha bhooyo’nyaj jnaatavyamavashishyate.

I shall declare to thee in full this knowledge combined with direct realisation, afterknowing which nothing more here remains to be known.


ಅಧ್ಯಾಯ - 07 : ಶ್ಲೋಕ – 03

ಮನುಷ್ಯಾಣಾಂ ಸಹಸ್ರೇಷು ಕಶ್ಚಿದ್ ಯತತಿ ಸಿದ್ಧಯೇ ।ಯತತಾಮಪಿ ಸಿದ್ಧಾನಾಂ ಕಶ್ಚಿನ್ಮಾಂ ವೇತ್ತಿ ತತ್ತ್ವತಃ  ॥೩॥

ಮನುಷ್ಯಾಣಾಮ್  ಸಹಸ್ರೇಷು ಕಶ್ಚಿತ್  ಯತತಿ ಸಿದ್ಧಯೇ ।
ಯತತಾಮ್ ಅಪಿ ಸಿದ್ಧಾನಾಮ್  ಕಶ್ಚಿತ್ ಮಾಮ್ ವೇತ್ತಿ ತತ್ತ್ವತಃ –

ಸಾವಿರಾರು ಮಂದಿಯಲ್ಲಿ ಯಾರೋ ಒಬ್ಬ ಸಿದ್ಧಿಗಾಗಿ ಪ್ರಯತ್ನಿಸುತ್ತಾನೆ. ಪ್ರಯತ್ನಿಸಿದವರಲ್ಲಿ, ಪ್ರಯತ್ನಿಸಿ ಗುರಿಮುಟ್ಟಿದವರಲ್ಲಿ ಯಾರೋ ಒಬ್ಬ ನನ್ನನ್ನು ಸರಿಯಾಗಿ ಅರಿತುಕೊಳ್ಳುತ್ತಾನೆ.

ಭಗವಂತನನ್ನು ಯಾರು ತಳಸ್ಪರ್ಶಿಯಾಗಿ  ತಿಳಿಯಲು ಸಾಧ್ಯ? ಕೃಷ್ಣ ಹೇಳುತ್ತಾನೆ “ಸಾವಿರಾರು ಮಾನವರಲ್ಲಿ ಕೆಲವರು ಸಿದ್ಧಿಗಾಗಿ ಪ್ರಯತ್ನಿಸುತ್ತಾರೆ. ಈ ರೀತಿ ಯೋಗದಲ್ಲಿ ತೊಡಗಿಸಿಕೊಂಡು ಅದರಲ್ಲಿ ಗುರಿಮುಟ್ಟಿದ ಅನೇಕರಲ್ಲಿ, ‘ಒಬ್ಬನು ನನ್ನನ್ನು ನಿಜವಾಗಿ ಅರ್ಥ ಮಾಡಿಕೊಂಡಿದ್ದಾನೆ’ ಎಂದು ಹೇಳುವುದು ಕಷ್ಟ”. ಎಂದು. ಅಪರೋಕ್ಷ ಜ್ಞಾನದಲ್ಲಿ ಎತ್ತರಕ್ಕೇರಿದ ಸಿದ್ಧಪುರುಷರಲ್ಲೂ ಕೂಡಾ ಭಗವಂತನನ್ನು  ತತ್ವತಃ ತಿಳಿದುಕೊಳ್ಳುವವರು ಬಹಳ ವಿರಳ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

मनुष्याणां सहस्रेषु कश्चिद्यतति सिद्धये।
यततामपि सिद्धानां कश्चिन्मां वेत्ति तत्वतः॥

हजारों मनुष्यों में कोई एक मेरी प्राप्ति के लिए यत्न करता है और उन यत्न करने वाले योगियों में भी कोई एक मेरे परायण होकर मुझको तत्व से अर्थात यथार्थ रूप से जानता है
॥3॥

Manushyaanaam sahasreshu kashchidyatati siddhaye;
Yatataamapi siddhaanaam kashchinmaam vetti tattwatah.

Among thousands of men, one perchance strives for perfection;
even among thosesuccessful strivers, only one perchance knows Me in essence.


ಅಧ್ಯಾಯ - 07 : ಶ್ಲೋಕ – 04

ಭೂಮಿರಾಪೋSನಲೋ ವಾಯುಃ ಖಂ ಮನೋ ಬುದ್ಧಿರೇವ ಚ ।ಅಹಂಕಾರ ಇತೀಯಂ ಮೇ ಭಿನ್ನಾ ಪ್ರಕೃತಿರಷ್ಟಧಾ  ॥೪॥

ಭೂಮಿಃ ಆಪಃ ಅನಲಃ ವಾಯುಃ ಖಮ್  ಮನಃ  ಬುದ್ಧಿಃ ಏವ  ಚ ।
ಅಹಂಕಾರಃ  ಇತಿ ಇಯಮ್  ಮೇ ಭಿನ್ನ  ಪ್ರಕೃತಿ ಅಷ್ಟಧಾ-

ಮಣ್ಣು, ನೀರು, ಬೆಂಕಿ, ಗಾಳಿ, ಆಕಾಶ, ಮನಸ್ಸು, ಬುದ್ಧಿ,[ಸುಪ್ತಪ್ರಜ್ಞೆಯಿಂದ ಕೂಡಿದ] ಅಹಂಕಾರ ಹೀಗೆ ನನ್ನ ಅಧೀನವಾದ ಈ ಜಡ ಪ್ರಕೃತಿ ಎಂಟು ಬಗೆಯಾಗಿದೆ.

ಈ ಶ್ಲೋಕ ಭಗವಂತನ ಪ್ರಪಂಚ ಸೃಷ್ಟಿಯ ವಿರಾಟ ರೂಪವನ್ನು ಸಮಷ್ಟಿಯಾಗಿ ತಿಳಿಸುತ್ತದೆ. ನಮಗೆ ತಿಳಿದಂತೆ ಸೃಷ್ಟಿ ಪೂರ್ವದಲ್ಲಿ ಈ ಸಂಪೂರ್ಣ ಜಗತ್ತು ಸೂಕ್ಷ್ಮ ರೂಪದಲ್ಲಿ ಆ ಭಗವಂತನ ಉದರದಲ್ಲಿ  ನೆಲೆಗೊಂಡಿದ್ದು, ನಂತರ ಭಗವಂತ ಈ ಸೃಷ್ಟಿಯನ್ನು ನಿರ್ಮಿಸಿದ. ಹೀಗೆ ಮೊದಲು ನಿರ್ಮಾಣವಾದುದು ಈ ಜಡ ಪ್ರಕೃತಿ. ಇಲ್ಲಿ ಪಂಚಭೂತಗಳು(ಮಣ್ಣು, ನೀರು, ಬೆಂಕಿ, ಗಾಳಿ, ಆಗಸ) ಜೊತೆಗೆ ಮನಸ್ಸು, ಬುದ್ಧಿ ಮತ್ತು ಅಹಂಕಾರ. ಇವು ಒಟ್ಟಿಗೆ ಎಂಟು ಬಗೆ. ಈ ಇಡೀ ಸ್ಥೂಲಪ್ರಪಂಚ ಮಣ್ಣು ನೀರು ಬೆಂಕಿ ಗಾಳಿ ಆಕಾಶ ಇದರ ವಿಕಾರ. ಆದ್ದರಿಂದ ಈ ಪ್ರಪಂಚದಲ್ಲಿರುವ ಸಮಸ್ತ ಜಡಪದಾರ್ಥಗಳ ಮೂಲದ್ರವ್ಯ ಪಂಚಭೂತಗಳು.

 ಇಲ್ಲಿ ನಮಗೆ ಒಂದು ಪ್ರಶ್ನೆ ಕಾಡಬಹುದು. ಅದೇನೆಂದರೆ ಪಂಚಭೂತಗಳ ಸೃಷ್ಟಿಯಲ್ಲಿ ಆಕಾಶದ ಸೃಷ್ಟಿ ಅಂದರೇನು? ಎಂದು. ಮೂಲತಃ  ಆಕಾಶದ ಸೃಷ್ಟಿ ವಾಸ್ತವ ಅಲ್ಲ ಇದು ಸಾಪೇಕ್ಷವಾಗಿ . ಅಂತರಿಕ್ಷ (Space) ಮೊದಲೇ ಇತ್ತು. ಅದರಲ್ಲಿ ಭಗವಂತ ತನ್ನ ರೂಪವನ್ನು ಆವಿರ್ಭಾವ ಗೊಳಿಸುವುದೇ ಆಕಾಶ ಸೃಷ್ಟಿ. ಬಣ್ಣವಿಲ್ಲದ ಅಂತರಿಕ್ಷದಲ್ಲಿ  ‘ಕಣ್ಣಿಗೆ ಕಾಣದ ನೀಲ ವರ್ಣದ(Ultraviolet)’ ಆಕಾಶ ಸೃಷ್ಟಿಯಾಯಿತು.(ಇದನ್ನು ಹದಿಮೂರನೇ ಶತಮಾನದಲ್ಲಿ ಮಧ್ವಾಚಾರ್ಯರು ಉಲ್ಲೇಖಿಸಿದ್ದಾರೆ) ಅಲ್ಲಿ ಕಂಪನ ಉಂಟಾಗಿ ಅದರಿಂದ ಗಾಳಿ ಹುಟ್ಟಿತು. ಗಾಳಿಯ ಕಂಪನದಿಂದ ಬೆಂಕಿ ಹಾಗು ಬೆಂಕಿಯಿಂದ ನೀರಿನ ಸೃಷ್ಟಿಯಾಯಿತು. ಈ ನೀರು ಗಟ್ಟಿಯಾಗಿ ಕಾಲ ಕ್ರಮೇಣ ಭೂಮಿಯಾಗಿ ವಿಕಾರಗೊಂಡಿತು. ಹೀಗೆ ಈ ಪಂಚಭೂತಗಳಿಂದ ಅನಂತ ವಸ್ತುಗಳ ನಿರ್ಮಾಣವಾಯಿತು. ಇದು ನಮ್ಮ ‘ಅನ್ನಮಯಕೋಶ’.  ಬೆಂಕಿ ಗಾಳಿ ಆಕಾಶದಿಂದ ಪ್ರಾಣಮಯಕೋಶದ ಸೃಷ್ಟಿ. ಈ ಪ್ರಾಣಮಯಕೋಶದ ಒಳಗೆ ಮನಸ್ಸು ಮತ್ತು ಬುದ್ಧಿಯಿಂದಾದ ಮನೋಮಯಕೋಶ. ನಂತರ ನಮ್ಮ ನೆನಪಿನ ಶಕ್ತಿಯ ಅಹಂಕಾರತತ್ವ(awareness of self, ಚಿತ್ತ, ಚೇತನ)ದಿಂದಾದ ವಿಜ್ಞಾನಮಯಕೋಶ ಸೃಷ್ಟಿಯಾಯಿತು. ಇಲ್ಲಿ ಮನಸ್ಸು ಸೃಷ್ಟಿಯಾಯಿತು ಎಂದರೆ ಮನಸ್ಸಿನ ಅಭಿಮಾನಿ ದೇವತೆಯ ಸೃಷ್ಟಿಯಾಯಿತು ಎಂದರ್ಥ; ಭೂಮಿ ಸೃಷ್ಟಿಯಾಯಿತು ಎಂದರೆ ಈ ಜಡವಾದ ಭೂಮಿಯ ಜೊತೆಗೆ ಭೂಮಿಯ ಅಭಿಮಾನಿ ದೇವತೆಯ ಸೃಷ್ಟಿಯಾಯಿತು ಎಂದರ್ಥ. ಅದೇ ರೀತಿ ವಾಯುವಿನ ಸೃಷ್ಟಿ ಎಂದಾಗ ಅಲ್ಲಿ ವಾಯುವಿನ ಜೊತೆಗೆ  ನಲವತ್ತೊಂಬತ್ತು ದೇವತೆಗಳ ಸೃಷ್ಟಿಯಾಯಿತು ಎಂದರ್ಥ. ನಮಗೆ ತಿಳಿದಂತೆ ಭೂಮಿಯನ್ನು ಆವರಿಸಿರುವ ವಾಯುವಿನ ಪದರು ನಲವತ್ತೊಂಬತ್ತು. ಭೂಮಿಯಿಂದ ವಿವಿಧ ದೂರದಲ್ಲಿ ಗಾಳಿಯ ವಿವಿಧ ಒತ್ತಡಕ್ಕನುಗುಣವಾಗಿ ಈ ವಿಭಾಗ. ಇದನ್ನು ನಿಯಮಿತವಾಗಿ ಆಯಾ ಅಭಿಮಾನಿ ದೇವತೆಗಳು ನಿರ್ವಹಿಸುತ್ತಾರೆ.  (‘ಭಾರದ್ವಾಜ ಸಂಹಿತದಲ್ಲಿ ಈ ಬಗ್ಗೆ ಮತ್ತು ವಿಮಾನ ತಾಂತ್ರಿಕತೆ ಬಗ್ಗೆ ಸಂಪೂರ್ಣ ವಿವರವನ್ನು ಕಾಣಬಹುದು). ಹೀಗೆ ಭಗವಂತನ ಅಧೀನವಾಗಿ ಅಷ್ಟರೂಪದ ಅಕ್ಷರಪ್ರಕೃತಿ ರೂಪುಗೊಂಡಿತು. ಈ ಅಷ್ಟ ವಿಧದ ಪ್ರಪಂಚದಲ್ಲಿ  ಅಷ್ಟಾಕ್ಷರ ವಾಚ್ಯನಾಗಿ ಭಗವಂತ ತುಂಬಿದ.

ನಾದಸೃಷ್ಟಿಯ ಮೊದಲ ಸೃಷ್ಟಿ ಓಂಕಾರ. ಓಂಕಾರದಲ್ಲಿ ಎಂಟು ಅಕ್ಷರಗಳಿವೆ. ನಾಭಿಯಿಂದ ಹೊರಟು ಉಚ್ಚಾರದ ಕೊನೆಯ ತನಕ ಒಟ್ಟು ಎಂಟು ಅಕ್ಷರಗಳು. ಅವುಗಳೆಂದರೆ: ಅಕಾರ , ಉಕಾರ, ಮಕಾರ, ನಾದ, ಬಿಂದು, ಕಲೆ, ಶಾಂತ, ಅತಿಶಾಂತ. ಹೀಗೆ ಎಂಟು ಅಕ್ಷರದಿಂದ ವಾಚ್ಯನಾಗಿ; ವಿಶ್ವ, ತೈಜಸ, ಪ್ರಾಜ್ಞ, ತುರೀಯ , ಆತ್ಮ, ಅಂತರಾತ್ಮ, ಪರಮಾತ್ಮ ಮತ್ತು  ಜ್ಞಾನಾತ್ಮ ಎನ್ನುವ ಎಂಟು ರೂಪದಲ್ಲಿ ಭಗವಂತ ಈ  ಅಷ್ಟವಿಧ  ಪ್ರಕೃತಿಯಲ್ಲಿ ತುಂಬಿದ. ಹೀಗೆ ಇಡೀ ಪ್ರಪಂಚ ಅಷ್ಟ ವಿಧದಲ್ಲಿ ವಿಕಾರಗೊಂಡಿತು.

(ಅಧ್ಯಾತ್ಮದಲ್ಲಿ ಪ್ರತಿಯೊಂದು ಸಂಖ್ಯಯ ಹಿಂದೆ ಒಂದು ವೇದಾಂತವಿದೆ. ಸೃಷ್ಟಿ ಪ್ರಕ್ರಿಯೆಯಲ್ಲಿ ಎಂಟರ ಮಹತ್ವವನ್ನು ಇಲ್ಲಿ ನೋಡಿದೆವು.   ಬನ್ನಂಜೆಯವರ ‘ಅಂಕೆಯಲ್ಲಿ ಅಧ್ಯಾತ್ಮ’ ಎನ್ನುವ ಪುಟ್ಟ ಪುಸ್ತಕ ಈ ವಿಷಯದ ಮೇಲೆ  ಬೆಳಕು ಚಲ್ಲುತ್ತದೆ).

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

भूमिरापोऽनलो वायुः खं मनो बुद्धिरेव च।
अहङ्‍कार इतीयं मे भिन्ना प्रकृतिरष्टधा॥
अपरेयमितस्त्वन्यां प्रकृतिं विद्धि मे पराम्‌।
जीवभूतां महाबाहो ययेदं धार्यते जगत्‌॥

पृथ्वी, जल, अग्नि, वायु, आक…


ಅಧ್ಯಾಯ - 07 : ಶ್ಲೋಕ – 05

ಅಪರೇಯಮಿತಸ್ತ್ವನ್ಯಾಂ ಪ್ರಕೃತಿಂ ವಿದ್ಧಿ ಮೇ ಪರಾಮ್  ।ಜೀವಭೂತಾಂ ಮಹಾಬಾಹೋ ಯಯೇದಂ ಧಾರ್ಯತೇ ಜಗತ್ ॥೫॥

ಅಪರಾ ಇಯಮ್ ಇತಃ ತು ಅನ್ಯಾಮ್ ಪ್ರಕೃತಿಮ್  ವಿದ್ಧಿ ಮೇ ಪರಾಮ್         ।
ಜೀವಭೂತಾಮ್  ಮಹಾಬಾಹೋ ಯಯಾ ಇದಮ್ ಧಾರ್ಯತೇ ಜಗತ್-

ಎರಡು ಪ್ರಕೃತಿಗಳಲ್ಲಿ ಇದು ಕೆಳಮಟ್ಟದ್ದು. ನನ್ನ ಅಧೀನವಾದ ಇನ್ನೊಂದು ಪ್ರಕೃತಿ ಇದಕ್ಕಿಂತ ಮಿಗಿಲಾದದ್ದು. ಅದೇ ಚೇತನ ಪ್ರಕೃತಿ; ಶ್ರಿತತ್ವ. ಎಲ್ಲ ಜೀವರಿಗೆ ಆಸರೆಯಾಗಿ ಎಂದೆಂದೂ ಇರುವಂಥದು. ಮಹಾವೀರ, ಅದು ಈ ಜಗವನ್ನು ಹೊತ್ತುಕೊಂಡಿದೆ.

ಅಚೇತನ ಸೃಷ್ಟಿಗೆ ಒಬ್ಬ ನಿಮಿತ್ತ ಕಾರಣ ಮತ್ತು ಒಂದು ಉಪಾದಾನ ಕಾರಣ. ಜಡಪ್ರಕೃತಿ ಪ್ರಪಂಚಕ್ಕೆ ಉಪಾದಾನ ಕಾರಣ ಹಾಗು ಅದರ ಮೂಲಕ ಭಗವಂತ ಸಮಸ್ತ ಸೃಷ್ಟಿಗೆ ನಿಮಿತ್ತ ಕಾರಣ. ಚೇತನದಲ್ಲಿ ಎರಡು ವಿಧ, ಚರ ಮತ್ತು ಅಚರ. ಅಚರವಾದ ಚೇತನ(ಉದಾ-ಮರ ಗಿಡಗಳು)ದ ಸೃಷ್ಟಿಗೆ ಮೇಲೆ ಹೇಳಿದಂತೆ ಒಬ್ಬ ನಿಮಿತ್ತ ಕಾರಣ ಮತ್ತು ಒಂದು ಉಪಾದಾನ ಕಾರಣ ಸಾಕು. ಆದರೆ ಚೇತನದಲ್ಲಿ ಚರವಾದ  ಚೇತನ(ಅಂಡಜ ಮತ್ತು ಜರಾಯು) ಸೃಷ್ಟಿಗೆ ಒಂದು ನಿಮಿತ್ತ ಕಾರಣ ಸಾಲದು. ಇಲ್ಲಿ ಎರಡು ನಿಮಿತ್ತ ಕಾರಣ ಬೇಕು. ಒಂದು ತಂದೆ, ಒಂದು ತಾಯಿ. ಎರಡು ಚೇತನದಿಂದ ಒಂದು ಚೇತನ ಸೃಷ್ಟಿ. ಇದರ ಪ್ರಾರಂಭ ಮೂಲ ಸೃಷ್ಟಿಯಲ್ಲಿಯೇ ಆಗಿದೆ. ಹೀಗೆ ಎರಡು ಚೇತನ ಹಾಗು ಒಂದು ಜಡ ಸೇರಿ ಈ ಸಮಸ್ತ ಸೃಷ್ಟಿಯಾಗಿರುವುದು. ಹಿಂದೆ ಹೇಳಿದಂತೆ ವಸ್ತುತಃ ಪ್ರಳಯಕಾಲದಲ್ಲಿ ಇಡೀ ಪ್ರಪಂಚ ಭಗವಂತನ ಉದರದಲ್ಲೇ ಇದ್ದದ್ದು. ಆದ್ದರಿಂದ ಅವನೇ ತಂದೆ, ಅವನೇ ತಾಯಿ. ಆದರೂ ಈ ಪ್ರಪಂಚದಲ್ಲಿರುವ ಜೀವ ಜಾತದ ಸೃಷ್ಟಿಗೆ ಮುಂದೆ ಹೇಗೆ ತಂದೆ ತಾಯಿ ಎನ್ನುವ ಎರಡು ಚೇತನ ಬೇಕೋ  ಅದನ್ನು ಸೃಷ್ಟಿಯ ಆದಿಯಲ್ಲೇ  ಭಗವಂತ ಮಾಡಿದ. ಪ್ರಪಂಚದಲ್ಲಿ ಯಾವ ರೀತಿ ಜೀವದ ಸೃಷ್ಟಿ ಪ್ರಕ್ರಿಯೆ ಮುಂದುವರಿಯುತ್ತದೋ ಅದೇ ರೀತಿ ಪ್ರಾರಂಭದಿಂದ ಆ ವ್ಯವಸ್ಥೆ ಮಾಡಿದ ಭಗವಂತ. ಅದರದ್ದೇ ಮುಂದುವರಿಕೆ ಈ ಸೃಷ್ಟಿ.

ಈ ಶ್ಲೋಕದಲ್ಲಿ  ಕೃಷ್ಣ ಹೇಳುತ್ತಾನೆ “ನಾನು ಹಿಂದೆ ಹೇಳಿದ ಪ್ರಕೃತಿ ‘ಜಡಪ್ರಕೃತಿ’ ; ಆದರೆ ಅದಕ್ಕಿಂತ  ಬಿನ್ನವಾದ ಮತ್ತು ಶ್ರೇಷ್ಠವಾದ ಇನ್ನೊಂದು ಪ್ರಕೃತಿ ಇದೆ” ಎಂದು. ಅದೇ ಇಡೀ ಪ್ರಪಂಚಕ್ಕೆ ಮಾತೃ ಸ್ಥಾನ ಕೊಟ್ಟಿರುವ ಚಿತ್ ಪ್ರಕೃತಿ. ವೇದದಲ್ಲಿ ಹೇಳುವಂತೆ ಜಡಪ್ರಕೃತಿ ‘ಅಕ್ಷರ’, ಅದಕ್ಕಿಂತ ಭಿನ್ನವಾದ ಚೇತನಪ್ರಕೃತಿ-‘ಪರಮಾಕ್ಷರ’. ಭಗವಂತ ‘ಪರತ-ಪರಮಾಕ್ಷರ’. ಹೀಗೆ  ಭಗವಂತನಿಗೂ ಮತ್ತು ಪ್ರಪಂಚಕ್ಕೂ ಮಾಧ್ಯಮವಾಗಿ ಶ್ರೀತತ್ವ(ಶ್ರೀಲಕ್ಷ್ಮಿ)ವಿದೆ. ಈ ಕಾರಣದಿಂದ ಲಕ್ಷ್ಮಿಯನ್ನು ಲೋಕಮಾತೆ ಎನ್ನುತ್ತಾರೆ. ಈ ಜಗತ್ತನ್ನು ಸೃಷ್ಟಿ ಮಾಡುವಾಗ ಜಡ ಪ್ರಕೃತಿಯನ್ನು ಉಪಾದಾನ ಕಾರಣವಾಗಿ ಬಳಸಿದರೆ, ಆ ಜಡವಾದ ಶರೀರ(ಪಿಂಡಾಂಡ)ದಲ್ಲಿ ಜೀವದ ಸೃಷ್ಟಿಯಾಗಬೇಕಾದರೆ ಜೀವಭೂತಳಾದ ಚೇತನಾ ಶಕ್ತಿ ಹೊಂದಿರುವ ಚಿತ್ ಪ್ರಕೃತಿಯನ್ನು  ಕಾರಣವಾಗಿ ಬಳಸಿದ ಭಗವಂತ.  ಹೀಗೆ ಜಗತ್ತಿನ ಮೊದಲ ಜೀವ ಚತುರ್ಮುಖನ ಸೃಷ್ಟಿ ಶ್ರಿತತ್ವದಿಂದಾಯಿತು.

ಹೀಗೆ ಜಗತ್ತಿನ ಮೂಲದಲ್ಲೇ  ಪ್ರಕೃತಿ ಮತ್ತು ಪುರುಷ ಎನ್ನುವ ಎರಡು ವಿಧದ ಚೇತನವನ್ನು ನಾವು ಕಾಣುತ್ತೇವೆ. ಜೀವ ಸ್ವರೂಪದಲ್ಲೂ ಗಂಡು ಮತ್ತು ಹೆಣ್ಣು ಎನ್ನುವ ಎರಡು ಪ್ರಭೇದವಿದೆ ಎನ್ನುವುದು ಸೃಷ್ಟಿಯ ಆದಿಯಿಂದಲೇ ತಿಳಿಯುತ್ತದೆ. ಪುರುಷ ಮತ್ತು ಪ್ರಕೃತಿ ಎನ್ನುವ ಭಗವಂತನ ಎರಡು ಮುಖದಿಂದ ಈ ಸೃಷ್ಟಿಯಾಯಿತು. ಜಡಕ್ಕೆ ಲಿಂಗ ಭೇದವಿಲ್ಲ. ಆದರೂ ನಾವು ಕೆಲವು ಜಡ ವಸ್ತುವನ್ನು ಹೆಣ್ಣಾಗಿ ಮತ್ತು ಗಂಡಾಗಿ ಗುರುತಿಸುತ್ತೇವೆ. ಇದು ಆ ವಸ್ತುವಿನ ಅಭಿಮಾನಿ ದೇವತೆಯ ಲಿಂಗಕ್ಕನುಗುಣವಾಗಿ ಗುರುತಿಸಲ್ಪಟ್ಟಿರುವುದು. ಉದಾಹರಣೆಗೆ ನದಿ: ನದಿಯ ಅಭಿಮಾನಿ ದೇವತೆಗಳಲ್ಲಿ ಹೆಚ್ಚಿನವರು ಸ್ತ್ರೀಲಿಂಗ; ಅದೇ ರೀತಿ  ಭೂಮಿಯ ಅಭಿಮಾನಿ ದೇವತೆ ಕೂಡಾ ಹೆಣ್ಣು. ಈ ಕಾರಣಕ್ಕಾಗಿ ನದಿಯನ್ನು, ಭೂಮಿಯನ್ನು ನಾವು  ತಾಯಿ ರೂಪದಲ್ಲಿ ಕಾಣುತ್ತೇವೆ.

ಹೀಗೆ ಜಗತ್ತಿನ ಮೂಲ ಸಂಗತಿ ಭಗವಂತ(ಪುರುಷ) ಮತ್ತು ಆತನ ಅಧೀನವಾಗಿ ಜಡ ಪ್ರಕೃತಿ ಮತ್ತು ಚಿತ್  ಪ್ರಕೃತಿ. ಇವು ಸದಾ ನಿತ್ಯ -ಎಂದೂ ನಾಶವಿಲ್ಲದವು. ಆಕಾರದ(ವಿಕೃತಿಯ) ನಾಶವಾಗುತ್ತದೆ ಹೊರತು ಮೂಲದ್ರವ್ಯ ಉತ್ಪತ್ತಿ ನಾಶ ಜಗತ್ತಿನಲ್ಲಿಲ್ಲ. ಆದ್ದರಿಂದ ಇವು ‘ಅ-ಕ್ಷರ’  ಸಂಗತಿಗಳು. ಈ ಮೂರರಿಂದ ‘ಕ್ಷರ’ ವಾದ ಪ್ರಪಂಚ ಸೃಷ್ಟಿಯಾಗುತ್ತದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

भूमिरापोऽनलो वायुः खं मनो बुद्धिरेव च।
अहङ्‍कार इतीयं मे भिन्ना प्रकृतिरष्टधा॥
अपरेयमितस्त्वन्यां प्रकृतिं विद्धि मे पराम्‌।
जीवभूतां महाबाहो ययेदं धार्यते जगत्‌॥

पृथ्वी, जल, अग्नि, वा…


ಅಧ್ಯಾಯ - 07 : ಶ್ಲೋಕ – 06

ಏತದ್ಯೋನೀನಿ ಭೂತಾನಿ ಸರ್ವಾಣೀತ್ಯುಪಧಾರಯ ।ಅಹಂ ಕೃತ್ಸ್ನಸ್ಯ ಜಗತಃ ಪ್ರಭವಃ ಪ್ರಳಯಸ್ತಥಾ ॥೬॥

ಏತತ್ ಯೋನೀನಿ  ಭೂತಾನಿ ಸರ್ವಾಣಿ ಇತಿ ಉಪಧಾರಯ ।
ಅಹಮ್  ಕೃತ್ಸ್ನಸ್ಯ ಜಗತಃ ಪ್ರಭವಃ ಪ್ರಳಯಃ ತಥಾ-

ಈ ಎರಡು ಪ್ರಕೃತಿಗಳಿಂದಲೆ ಎಲ್ಲ ಜೀವಿಗಳೂ ರೂಪುಗೊಂಡಿವೆ ಎಂದು ತಿಳಿ. ನಾನೇ ಎಲ್ಲ ಜಗದ ಹುಟ್ಟು-ಸಾವುಗಳಿಗೆ ಕಾರಣನಾಗಿದ್ದೇನೆ.

ಜಡ ಪ್ರಕೃತಿ ಮತ್ತು ಚಿತ್ ಪ್ರಕೃತಿ ಇವೇ ಇಡೀ ಜಗತ್ತಿನ ಎಲ್ಲಾ ಜೀವಜಾತಕ್ಕೆ ಮೂಲ ಕಾರಣ. ಭಗವಂತ ಜೀವಜಾತದ ಹಿಂದೆ ತಂದೆಯಾಗಿ, ಲಕ್ಷ್ಮೀದೇವಿ ತಾಯಿಯಾಗಿ ನಿಂತು ಈ ಜಗತ್ತನ್ನು ಸೃಷ್ಟಿ ಮಾಡಿದರು. ತಾಯಿಯ ಗರ್ಭದಲ್ಲಿ ಬೆಳೆಯುವ ಭ್ರೂಣದಂತೆ ಜಡಪ್ರಕೃತಿ ವಿಕಾರಗೊಂಡಿತು. ಹೀಗೆ ಚಿತ್ ಪ್ರಕೃತಿ ಜಡ ಪ್ರಕೃತಿಗೆ ರೂಪ ಕೊಟ್ಟಳು, ಕೊಟ್ಟು ಧಾರಣೆ ಮಾಡಿದಳು, ಅದೇ ಜಗತ್ತಾಯಿತು.

ಭಗವಂತನ ಶಕ್ತಿ ಆಧಾನದಿಂದ, ಪ್ರೇರಣೆಯಿಂದ, ಜಡ ಮತ್ತು ಚಿತ್ ಪ್ರಕೃತಿಯ ಮೂಲಕ ಈ ಜಗತ್ತಿನ ಹುಟ್ಟಿಗೆ ಭಗವಂತ ಹೇಗೆ ಕಾರಣನೋ ಹಾಗೇ ಇಡೀ ಜಗತ್ತಿನ ಪ್ರಳಯ ಕೂಡಾ ಭಗವಂತ. ಕೃಷ್ಣ ಹೇಳುತ್ತಾನೆ “ ಸಮಸ್ತ ಜಗತ್ತಿನ ಉತ್ಪತ್ತಿಗೆ ಮೂಲ ಕಾರಣ ನಾನು, ಜಗತ್ತಿನ ಸಂಹಾರಕ್ಕೆ ಕಾರಣ ನಾನು” ಎಂದು. ಈ ಜಗತ್ತಿನ ಹುಟ್ಟಿನ ಮೊದಲಿದ್ದವ, ಹುಟ್ಟಿಗೆ ಕಾರಣ, ಸಂಹಾರಕ್ಕೆ ಕಾರಣ, ಸಂಹಾರದ ನಂತರ ಇರುವವ ಆ ಭಗವಂತ.

ನಮ್ಮಲ್ಲಿ ಕೆಲವರು ಕೇಳುವುದಿದೆ: ಜಡಪ್ರಕೃತಿಗೆ ನಿಯಾಮಕ ಶಕ್ತಿ- ಚೇತನಪ್ರಕೃತಿ, ಚೇತನ ಪ್ರಕೃತಿಯನ್ನು ಪ್ರೇರಣೆ ಮಾಡಿ ಸೃಷ್ಟಿ ಸಂಹಾರದಲ್ಲಿ ತೊಡಗಿಸುವವ ‘ಪುರುಷ’ ನಾಮಕ ಭಗವಂತ. ಹಾಗಾದರೆ ಈ ಭಗವಂತನನ್ನು ನಿಯಂತ್ರಿಸುವವರು ಯಾರು? ಎಂದು. ಇದಕ್ಕೆ ಕೃಷ್ಣ ಮುಂದಿನ ಶ್ಲೋಕದಲ್ಲಿ ಉತ್ತರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

एतद्योनीनि भूतानि सर्वाणीत्युपधारय।
अहं कृत्स्नस्य जगतः प्रभवः प्रलयस्तथा॥

हे अर्जुन! तू ऐसा समझ कि सम्पूर्ण भूत इन दोनों प्रकृतियों से ही उत्पन्न होने वाले हैं और मैं सम्पूर्ण जगत का प्रभव तथा प्रलय हूँ अर्थात्‌ सम्पूर्ण जगत का मूल कारण हूँ
॥6॥

Etadyoneeni bhootaani sarvaaneetyupadhaaraya;
Aham kritsnasya jagatah prabhavah pralayastathaa.

Know that these two (My higher and lower Natures) are the womb of all beings. So, I amthe source and dissolution of the whole universe.


ಅಧ್ಯಾಯ - 07 : ಶ್ಲೋಕ – 07

ಮತ್ತಃ ಪರತರಂ ನಾನ್ಯತ್ ಕಿಂಚಿದಸ್ತಿ ಧನಂಜಯ ।ಮಯಿ ಸರ್ವಮಿದಂ ಪ್ರೋತಂ ಸೂತ್ರೇ ಮಣಿಗಣಾ ಇವ ॥೭॥

ಮತ್ತಃ ಪರತರಂ ನಾನ್ಯತ್ ಕಿಂಚಿದಸ್ತಿ ಧನಂಜಯ ।
ಮಯಿ ಸರ್ವಮಿದಂ ಪ್ರೋತಂ ಸೂತ್ರೇ ಮಣಿಗಣಾ ಇವ-

ಧನಂಜಯ, ನಾನಲ್ಲದೆ ಇನ್ನೊಂದು ಪರತರ ವಸ್ತು ಇಲ್ಲ. ಈ ಎಲ್ಲ ನನ್ನಲ್ಲೆ ಹೆಣೆದುಕೊಂಡಿದೆ-ದಾರದಲ್ಲಿ ಮಣಿಗಳ ರಾಶಿ ಹೇಗೆ ಹಾಗೆ.

ಕೃಷ್ಣ ಹೇಳುತ್ತಾನೆ “ ನನ್ನನ್ನು ಮೀರಿ ನನ್ನಿಂದ ಹಿರಿದಾದ, ನನಗಿಂತ ಬೇರೆಯಾದ ಇನ್ನೊಂದು ವಸ್ತುವಿಲ್ಲ” ಎಂದು. ಚಿತ್ ಪ್ರಕೃತಿ, ಜಡ ಪ್ರಕೃತಿ, ಇದರಿಂದ ದೇಹ ಧಾರಣೆ ಮಾಡಿದ ಜೀವಜಾತ, ವಾಸಿಸುವ ಬ್ರಹ್ಮಾಂಡ, ಈ ಪಿಂಡಾಂಡ, ಎಲ್ಲವೂ ಕೂಡ ಭಗವಂತನಲ್ಲಿ ದಾರದಲ್ಲಿ ಮಣಿಗಳು ಹೆಣೆದುಕೊಂಡಂತೆ ಹೆಣೆದುಕೊಂಡಿವೆ. ಇಡೀ ವಿಶ್ವವನ್ನು  ಜೀವಜಾತವನ್ನು ಹೆಣೆದ ಸೂತ್ರ ಆ ಭಗವಂತ.

ಮುಂದೆ ಕೃಷ್ಣ ಒಂದೊಂದು ವಸ್ತುವಿನಲ್ಲಿ ಯಾವರೀತಿ ಭಗವಂತನ ವಿಭೂತಿ ಅಡಗಿದೆ ಎನ್ನುವ ವಿಜ್ಞಾನವನ್ನು ಸುವಿವರವಾಗಿ ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

मत्तः परतरं नान्यत्किञ्चिदस्ति धनञ्जय।
मयि सर्वमिदं प्रोतं सूत्रे मणिगणा इव॥

हे धनंजय! मुझसे भिन्न दूसरा कोई भी परम कारण नहीं है। यह सम्पूर्ण जगत सूत्र में सूत्र के मणियों के सदृश मुझमें गुँथा हुआ है
॥7॥

Mattah parataram naanyat kinchidasti dhananjaya;
Mayi sarvamidam protam sootre maniganaa iva.

There is nothing whatsoever higher than Me, O Arjuna! All this is strung on Me asclusters of gems on a string.COMMENTARY: There is no other cause of the universe but Me. I alone am the cause ofthe univers

ಅಧ್ಯಾಯ - 07 : ಶ್ಲೋಕ – 08

ರಸೋSಹಮಪ್ಸು ಕೌಂತೇಯ ಪ್ರಭಾSಸ್ಮಿ ಶಶಿಸೂರ್ಯಯೋಃ  ।ಪ್ರಣವಃ ಸರ್ವವೇದೇಷು ಶಬ್ದಃ ಖೇ ಪೌರುಷಂ ನೃಷು ॥೮॥

ರಸಃ ಅಹಮ್ ಅಪ್ಸು ಕೌಂತೇಯ ಪ್ರಭಾ ಅಸ್ಮಿ ಶಶಿ ಸೂರ್ಯಯೋಃ |
ಪ್ರಣವಃ ಸರ್ವವೇದೇಷು ಶಬ್ದಃ ಖೇ ಪೌರುಷಮ್  ನೃಷು –

ಕೌಂತೇಯ ನೀರಿನಲ್ಲಿ ರಸವಿರುವುದು ನನ್ನಿಂದ[ನೀರಿನಲ್ಲಿದ್ದು ರಸದ ಸವಿಯನ್ನುಣ್ಣಿಸುವುದರಿಂದ ‘ರಸ’ ನಾಮಕ.] ಚಂದ್ರ-ಸೂರ್ಯರಲ್ಲಿ ಬೆಳಕಿರುವುದು ನನ್ನಿಂದ [ಚಂದ್ರ –ಸೂರ್ಯರಲ್ಲಿದ್ದು ಬೆಳಗಿಸುವುದರಿಂದ ‘ಪ್ರಭಾ’ ನಾಮಕ.]ಎಲ್ಲ ವೇದಗಳಲ್ಲಿ ‘ಓಂಕಾರ’ ಸಾರವಾದದ್ದು ನನ್ನಿಂದ.[ಎಲ್ಲ ವೇದಗಳಲ್ಲಿದ್ದು ನಾನೇ ಸ್ತುತಿಸುವುದರಿಂದ ‘ಪ್ರಣವ’ ನಾಮಕ] ಆಗಸದಲ್ಲಿ ಸದ್ದು ಮೂಡುವುದು ನನ್ನಿಂದ [ಆಗಸದಲ್ಲಿ ಸದ್ದು ಹೊರಡಿಸುವುದರಿಂದ ‘ಶಬ್ದ’ ನಾಮಕ.] ಗಂಡಸರಲ್ಲಿ ಬೀರ ನನ್ನಿಂದ[ಗಂಡಸರಲ್ಲಿದ್ದು ಬೀರವನ್ನಿತ್ತುದರಿಂದ ‘ಪೌರುಷ’ ನಾಮಕ].

ಭಗವಂತ ಈ ಪ್ರಪಂಚವನ್ನು ಸೃಷ್ಟಿ ಮಾಡಿದ, ಆನಂತರ ಪ್ರಪಂಚದೊಳಗೆ ಪ್ರವೇಶ ಮಾಡಿದ ಎನ್ನುವುದನ್ನು ಶಾಸ್ತ್ರಗಳು ಹೇಳುತ್ತವೆ. ಇಲ್ಲಿ ನಮಗೆ ಸ್ವಲ್ಪ ಗೊಂದಲವಾಗುತ್ತದೆ. “ಭಗವಂತ ಸರ್ವವ್ಯಾಪ್ತ , ಆತ ಪ್ರವೇಶ ಮಾಡುವುದು ಅಂದರೇನು?” ಇದು ನಮ್ಮ ಪ್ರಶ್ನೆ. ಇದು ಅರ್ಥವಾಗಬೇಕಾದರೆ ಸರ್ವವ್ಯಾಪ್ತ ಭಗವಂತನಿಗೆ ಅನಂತ ರೂಪ ಎನ್ನುವ ವಿಚಾರವೂ ನಮಗೆ ತಿಳಿದಿರಬೇಕು. ಆತ ವ್ಯಾಪ್ತವಾದ ಒಂದು ರೂಪದಲ್ಲಿ ಸರ್ವತ್ರ ಇದ್ದಾನೆ ಮತ್ತು ಒಂದೊಂದು ವಸ್ತುವಿನಲ್ಲೂ  ವಿಶೇಷ ಶಕ್ತಿಪ್ರದನಾಗಿ, ವಿಶೇಷ ಶಕ್ತಿ ಅಭಿವ್ಯಂಜಕನಾದ ಒಂದು ವಿಭೂತಿ ರೂಪದಲ್ಲಿ ಅಲ್ಲಿ ಪ್ರವೇಶ ಮಾಡುತ್ತಾನೆ. ಹೀಗೆ ಒಂದು ವಸ್ತುವಿನಲ್ಲೇ ಭಗವಂತನ ಅನೇಕ ರೂಪಗಳಿರಬಹುದು. ಒಂದು ವಸ್ತುವಿಗೆ ಆ ಶಕ್ತಿವಿಶೇಷವನ್ನು ಕೊಟ್ಟ ಭಗವಂತನ ರೂಪವನ್ನು ಆತನ ವಿಭೂತಿ ರೂಪ ಎನ್ನುತ್ತಾರೆ, ಇದು ಅವನ ಲೀಲೆ. ಭಗವಂತ  ವಿಭೂತಿ ರೂಪದಲ್ಲಿ ಒಂದು ವಸ್ತುವಿನೊಳಗೆ ಪ್ರವೇಶಿಸಿ, ಆ ವಸ್ತುವಿನಲ್ಲಿ ಒಂದು ಶಕ್ತಿವಿಶೇಷವನ್ನು ಅಭಿವ್ಯಕ್ತಗೊಳಿಸುತ್ತಾನೆ-ಇದು ವಿಭೂತಿ ವಿಜ್ಞಾನ.
ಈ ಶ್ಲೋಕದ ಪ್ರಾರಂಭದಲ್ಲಿ ಕೃಷ್ಣ ಪಂಚಭೂತಗಳಲ್ಲಿ ಬಹಳ ಮುಖ್ಯವಾದ ನೀರಿನಲ್ಲಿನ ತನ್ನ ವಿಭೂತಿಯನ್ನು ವಿವರಿಸುತ್ತಾನೆ.  ನಮ್ಮ ಉಪಾಸನೆಯಲ್ಲಿ ಭಗವಂತನನ್ನು ಜಲದಲ್ಲಿ ಉಪಾಸನೆ ಮಾಡುವುದು ಬಹಳ ವಿಶೇಷ. ಎಲ್ಲಾ ಅನುಷ್ಠಾನಕ್ಕೂ(ಸ್ನಾನ, ಅರ್ಗ್ಯ, ತರ್ಪಣ ಇತ್ಯಾದಿ) ಕೂಡಾ ಬೇಕಾಗಿರುವುದು ನೀರು. ಅರ್ಘ್ಯಂ ಸಮರ್ಪಯಾಮಿ। ಗಂದಾಕ್ಷತಂ ಸಮರ್ಪಯಾಮಿ। ಪುಷ್ಪಂ ಸಮರ್ಪಯಾಮಿ। ನೈವೇದ್ಯಂ ಸಮರ್ಪಯಾಮಿ। ತಾಂಬೂಲಂ ಸಮರ್ಪಯಾಮಿ।  ಎಂದು ಸಮರ್ಪಣೆ ಮಾಡುವುದು ಒಂದು ಉದ್ಧರಣೆ ನೀರು! ಹೀಗೆ ಏನೂ ಇಲ್ಲದಾಗ ಎಲ್ಲವುದಕ್ಕೂ ಪ್ರತಿನಿಧಿಯಾಗಿ ನೀರನ್ನು ಅರ್ಪಿಸುತ್ತೇವೆ. ಏಕೆಂದರೆ ಭಗವಂತನ ಸೃಷ್ಟಿಯ ವಿಸ್ತಾರಕ್ಕೆ ನೀರು ಮೂಲದ್ರವ್ಯ. ಅದನ್ನು ಭಕ್ತಿಯಿಂದ ಅರ್ಪಿಸಿದರೆ ಎಲ್ಲವನ್ನು  ಅರ್ಪಿಸಿದಂತೆ.
ಇಲ್ಲಿ ಕೃಷ್ಣ ಹೇಳುತ್ತಾನೆ “ರಸಃ ಅಹಮ್ ಅಪ್ಸು ಕೌಂತೇಯ” ಎಂದು. ಅಂದರೆ  “ರಸ ನಾಮಕನಾಗಿ ನೀರಿನಲ್ಲಿ ನಾನು ರಸವಾಗಿದ್ದೇನೆ” ಎಂದು. ಸಂಸ್ಕೃತದಲ್ಲಿ ರಸ ಅಂದರೆ ಸಾರಭೂತವಾದದ್ದು, ಹರಿಯುವಿಕೆ, ಇತ್ಯಾದಿ ಅನೇಕ ಅರ್ಥಗಳಿವೆ. ಹರಿಯುವ ಶಕ್ತಿ ನೀರಿನ ವಿಶಿಷ್ಟ ಗುಣ(exclusive quality). ಹರಿಯುವ ಶಕ್ತಿಯಾಗಿ ‘ಹರಿ’ ನೀರಿನಲ್ಲಿ ಕುಳಿತಿರುವುದರಿಂದ ನೀರಿಗೆ ಆ ಶಕ್ತಿ ಬಂತು. ಉಪಾಸನೆಯಲ್ಲಿ ಈ ಜ್ಞಾನ ಬಹಳ ಮುಖ್ಯ. ಶಾಸ್ತ್ರೀಯವಾಗಿ ಗುಹ್ಯ ಭಾಷೆಯಲ್ಲಿ ನೀರಿಗೆ ‘ವಿಷ್ಣುಃ’ ಎನ್ನುತ್ತಾರೆ. ‘ವಿಷಂತಿ ಅತ್ರ ಇತಿ ವಿಷ್ಣುಃ’- ಅಂದರೆ ಯಾವುದರ ಒಳಗೆ ಹೋಗಿ ಹೊರಗೆ ಬರಲು ಸಾಧ್ಯವೋ ಅದು ವಿಷ್ಣುಃ.
ಭಗವಂತ ನೀರಿನಲ್ಲಿ ರಸವಾಗಿ(ರುಚಿಯಾಗಿ) ಕುಳಿತ. ನಮಗೆ ರುಚಿಯ ಅನುಭವವನ್ನು ಕೊಟ್ಟು ಅವನು ನೀರಿನಲ್ಲಿ ರಸವಾಗಿ ಕೂರದೇ ಇದ್ದಿದ್ದರೆ ನಮಗೆ ನಾಲಿಗೆ ಇದ್ದೂ ಏನೂ ಉಪಯೋಗವಾಗುತ್ತಿರಲಿಲ್ಲ. ಪ್ರತಿಯೊಂದರಲ್ಲೂ ಸಾರಭೂತವಾದ ಇಂತಹ ಅಸಾಧಾರಣ ಶಕ್ತಿ ಏನಿದೆ-ಅದು ಆ ಭಗವಂತನ ವಿಭೂತಿ. ಆತ ರಸಃ-‘ರ’ ಎಂದರೆ ಆನಂದ ; ‘ಸ’ ಎಂದರೆ ಜ್ಞಾನ-ಆದ್ದರಿಂದ ರಸಃ ನಾಮಕ ಭಗವಂತ ಜ್ಞಾನಾನಂದಪೂರ್ಣ.
ನೀರಿನ ನಂತರ ಕೃಷ್ಣ ಸೂರ್ಯ ಮತ್ತು ಚಂದ್ರನ ಉದಾಹರಣೆಯನ್ನು ತೆಗೆದುಕೊಳ್ಳುತ್ತಾನೆ. ಕೃಷ್ಣ ಹೇಳುತ್ತಾನೆ-“ಪ್ರಭಾ ಅಸ್ಮಿ ಶಶಿ ಸೂರ್ಯಯೋಃ” ಎಂದು. ಅಂದರೆ “ಸೂರ್ಯ ಚಂದ್ರರೊಳಗೆ ಪ್ರಭಾ ನಾಮಕನಾಗಿದ್ದು ಬೆಳಗಿಸುವವ ನಾನು”. ನಮಗೆ ಪ್ರಾಣಶಕ್ತಿ ಹರಿದು ಬರುವುದು ಸೂರ್ಯ ಮತ್ತು ಚಂದ್ರನಿಂದ. ಮನುಷ್ಯನ ಜೀವನಕ್ಕೆ ವಿಶೇಷವಾಗಿ ಸೌರ ಶಕ್ತಿ ಕಾರಣವಾದರೂ ಕೂಡಾ  ಸಮಸ್ತ ವನಸ್ಪತಿಗಳಿಗೆ ಚಂದ್ರನ ವಿಶೇಷ ಸಂಬಂಧವಿದೆ. ಈ ಕಾರಣಕ್ಕಾಗಿ ವನಸ್ಪತಿ ತಜ್ಞರು ಯಾವ ಯಾವ ಮರದಲ್ಲಿ ಎಂತೆಂಥಾ ಶಕ್ತಿ ಬೆಳದಿಂಗಳಿಂದ ನಿಷ್ಪನ್ನವಾಗುತ್ತದೆ ಎನ್ನುವುದನ್ನು ಅಧ್ಯಯನ ಮಾಡಿ ಚಂದ್ರನ ಗತಿಗನುಗುಣವಾಗಿ ವನಸ್ಪತಿಗಳನ್ನು ಕತ್ತರಿಸುತ್ತಿದ್ದರು. ಹಿಂದಿನ ಕಾಲದಲ್ಲಿ ಮನೆ ಕಟ್ಟಲು ಬಳಸುವ ಮರವನ್ನು ಚಂದ್ರನ ಗತಿಗನುಗುಣವಾಗಿ ಅಧ್ಯಯನ ಮಾಡಿ ಕತ್ತರಿಸುತ್ತಿದ್ದರು. ಇದನ್ನು ತಿಳಿಯದೇ ಮರವನ್ನು ಕತ್ತರಿಸಿದರೆ ಆ ಮರ ಬಾಳಿಕೆ ಬಾರದು.  ಭಗವಂತ  ಚಂದ್ರ ಸೂರ್ಯರಿಂದ ನಿರಂತರ ಶಕ್ತಿ ಹರಿಸುವುದರಿಂದ ಈ ಜೀವಲೋಕ ಬದುಕಿದೆ. ಸೂರ್ಯ ಚಂದ್ರರ ಶಕ್ತಿಪಾತವಾಗದೇ ಇದ್ದರೆ ನಮಗೆ ಬದುಕೇ ಇಲ್ಲ. ಇದಕ್ಕಾಗಿ ಭಗವಂತನನ್ನು ‘ಕೇಶವ’ ಎನ್ನುತ್ತಾರೆ. ಸೂರ್ಯ ಚಂದ್ರರ ಕಿರಣದಲ್ಲಿದ್ದು, ಆ ಪ್ರಕಾಶದ ಮೂಲಕ, ಬಿಸಿಲು ಮತ್ತು ಬೆಳದಿಂಗಳ ಮೂಲಕ ನಮಗೆ ಬದುಕನ್ನು ಕೊಡುವವ ಕೇಶವ. ಚಂದ್ರನ ಬೆಳಕಿನಲ್ಲಿ, ಸೂರ್ಯನ ಬೆಳಕಿನಲ್ಲಿ ಆ ಬೆಳಗುವ ಶಕ್ತಿಯನ್ನು ಕೊಟ್ಟು, ಆ ಬೆಳಕಿನಲ್ಲಿ ಬೆಳಕಾಗಿ ‘ಪ್ರಭಾ’ ಶಬ್ದವಾಚ್ಯ ಭಗವಂತ ಕೂತಿದ್ದಾನೆ. ‘ಪ್ರ’ ಎಂದರೆ ಪ್ರಕೃಷ್ಟವಾದ, ‘ಭ’ ಎಂದರೆ  ಜ್ಞಾನಾನಂದಮಯವಾದ. ಭಗವಂತ ಜ್ಞಾನಾನಂದಮಯವಾದ ಬೆಳಕಾಗಿ ಸೂರ್ಯ ಚಂದ್ರರಲ್ಲಿದ್ದು ಜೀವಜಾತಕ್ಕೆ ನಿರಂತರ ಪ್ರಾಣಶಕ್ತಿಯನ್ನು ಹರಿಸುತ್ತಿದ್ದಾನೆ.
ಕೃಷ್ಣ ಮುಂದುವರಿದು ಹೇಳುತ್ತಾನೆ “ಎಲ್ಲಾ ವೇದಗಳಲ್ಲೂ, ವೇದ ಶಬ್ದ ವಾಚ್ಯನಾಗಿ ನಾನು ತುಂಬಿದ್ದೇನೆ” ಎಂದು. ‘ವೇದ’ ಎಂದರೆ 'ಅರಿವು ಕೊಡುವಂತಹದ್ದು' ಎಂದರ್ಥ. ಎಲ್ಲರಿಗೂ ಅರಿವು ಕೊಡುವವ ಭಗವಂತ. ಸ್ವಯಂ ಪೂರ್ಣನಾಗಿ ಸರ್ವರಿಗೂ  ಜ್ಞಾನಪ್ರದನಾಗಿ, ಸರ್ವಶಬ್ದವಾಚ್ಯನಾಗಿ, ಸರ್ವ ವೇದಗಳಲ್ಲಿ ಭಗವಂತ ನೆಲೆಸಿದ್ದಾನೆ. ವೇದದ ಅರ್ಥ ತಿಳಿದವನ ಬದುಕು ಸದಾ  ಮಂಗಳಮಯ. ಅಂತಹ ವೇದದ ಸಾರ 'ಓಂಕಾರ'-ಅದೇ  ಪ್ರಣವಃ.
ಇಲ್ಲಿ ನಾವು ಒಂದು ವಿಷಯವನ್ನು ಅರ್ಥ ಮಾಡಿಕೊಳ್ಳಬೇಕು. ಓಂಕಾರ ಸರ್ವ ವೇದಗಳ ಸಾರ ಎನ್ನುತ್ತಾರೆ. ಅದು ಹೇಗೆ ಎಂದು.  ವೇದಗಳು ಅನೇಕ. ಋಗ್ವೇದದಲ್ಲಿ 24 ಶಾಖೆ, ಯಜುರ್ವೇದದಲ್ಲಿ 101 ಶಾಖೆ, ಸಾಮವೇದದಲ್ಲಿ 1000 ಶಾಖೆ, ಅಥರ್ವವೇದದಲ್ಲಿ 12 ಶಾಖೆ. ಹೀಗೆ ಒಟ್ಟು 1137 ಸಂಹಿತೆಗಳು. ಅದಕ್ಕೆ ಅಷ್ಟೇ ಬ್ರಾಹ್ಮಣಗಳು, ಅರಣ್ಯಕಗಳು, ಉಪನಿಷತ್ತುಗಳು. ಹೀಗೆ ವೇದವೆಂದರೆ ವಿಪುಲವಾದ ವೈದಿಕ ವಾಙ್ಮಯ. ಎಷ್ಟೇ ವೇದಗಳಿದ್ದರೂ ಕೂಡಾ ಮೂಲತಃ ವೇದದಲ್ಲಿ ಪ್ರಮುಖವಾಗಿ ಮೂರು ವಿಭಾಗವಿದೆ. ಪದ್ಯರೂಪ(ಋಗ್ವೇದ), ಗದ್ಯರೂಪ(ಯಜುರ್ವೇದ) ಮತ್ತು  ಗಾನರೂಪ(ಸಾಮವೇದ). ಈ ಮೂರು ವೇದಗಳ ಮೂರು ಅಕ್ಷರಗಳನ್ನು ತೆಗೆದುಕೊಂಡು ನಿರ್ಮಾಣವಾಗಿರುವುದು ಓಂಕಾರ. “ಓಂಕಾರಕ್ಕೆ ಸಾರತ್ವವನ್ನು ಕೊಟ್ಟು ಸಾರಭೂತನಾಗಿ ‘ಪ್ರಣವಃ’ ಶಬ್ದವಾಚ್ಯನಾಗಿ ನಾನು ಓಂಕಾರದಲ್ಲಿ ನೆಲೆಸಿದ್ದೇನೆ” ಎನ್ನುತ್ತಾನೆ ಕೃಷ್ಣ. ಇದು ಬಹಳ ವಿಚಾರಗರ್ಭಿತ ಸಂಗತಿ. ಪ್ರಾಚೀನರು ಮೂರು ವೇದಗಳನ್ನು ಭಟ್ಟಿಇಳಿಸಿ ಅದರ ಸಾರವಾದ ಮೂರು ವರ್ಗಗಳ ಒಂದು ಸೂಕ್ತ ಮಾಡಿದರು. ಅದೇ ಪುರುಷಸೂಕ್ತ. ಈ ಕಾರಣದಿಂದ ವೇದಸೂಕ್ತಗಳಲ್ಲೇ ಪುರುಷಸೂಕ್ತ ಅತ್ಯಂತ ಶ್ರೇಷ್ಠವಾದ ಸೂಕ್ತ. ಈ ಸೂಕ್ತವನ್ನು ಮತ್ತೆ ಭಟ್ಟಿಇಳಿಸಿ ಮೂರು ಪಾದಗಳ ಗಾಯತ್ರಿ ಮಂತ್ರ(ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್) ನಿರ್ಮಾಣವಾಯಿತು. ‘ತತ್ ಸವಿತುರ್ ವರೇಣ್ಯಂ’ ಋಗ್ವೇದಕ್ಕೆ ಸಂಬಂಧಪಟ್ಟಿದ್ದು,  ‘ಭರ್ಗೋ ದೇವಸ್ಯ ಧೀಮಹಿ’ ಯಜುರ್ವೇದಕ್ಕೆ ಸಂಬಂಧಪಟ್ಟಿದ್ದು, ‘ಧೀಯೊ ಯೊ ನಃ ಪ್ರಚೋದಯಾತ್’ ಸಾಮವೇದಕ್ಕೆ ಸಂಬಂಧಪಟ್ಟಿದ್ದು. ಹೀಗೆ ಮೂರು ವೇದಗಳ ಸಾರ ಗಾಯತ್ರಿಯ ಮೂರುಪಾದಗಳುಳ್ಳ ಒಂದು ಮಂತ್ರದಲ್ಲಿದೆ. ಇದಕ್ಕಾಗಿ ಗಾಯತ್ರಿ ಮಂತ್ರವನ್ನು ‘ವೇದಮಾತ’ ಎನ್ನುತ್ತಾರೆ. ಈ ಗಾಯತ್ರಿಯಿಂದ ರಸ ತೆಗೆದಾಗ ಮೂರು ಪಾದಗಳಿಂದ ಮೂರು ಪದಗಳುಳ್ಳ ವ್ಯಾಹೃತಿ  “ಭೂಃ ಭುವಃ ಸ್ವಃ”; ಈ ಮೂರು ಪದಗಳ ಸಾರ ಮೂರು ಅಕ್ಷರದ(ಅ, ಉ, ಮ) ಓಂಕಾರ-ॐ. 
ಓಂಕಾರದಲ್ಲಿ ‘ಅ’ಕಾರ ಋಗ್ವೇದಕ್ಕೆ, ‘ಉ’ಕಾರ ಯಜುರ್ವೇದಕ್ಕೆ ಮತ್ತು ‘ಮ’ಕಾರ ಸಾಮವೇದಕ್ಕೆ ಸಂಬಂಧಪಟ್ಟಿದ್ದು. ಋಗ್ವೇದ " ಅಗ್ನಿಮೀ”ಳೇ ಪುರೋಹಿತಂ ಯಜ್ಞಸ್ಯ ದೇವಂ-ಋತ್ವಿಜಂ” | ಹೋತಾ”ರಂ ರತ್ನ ಧಾತಮಂ |..."  ಎಂದು ‘ಅ’ ಕಾರದಿಂದ ಪ್ರಾರಂಭವಾಗುತ್ತದೆ. ಮತ್ತು “....ಸಮಾನೀ ವ ಆಕೂತಿಃ ಸಮಾನಾ ಹೃದಯಾನಿ ಹಃ: | ಸಮಾನಮಸ್ತು ವೋ ಮನೋ ಯಥಾ ವಃ ಸುಸಹಾಸತಿ ॥” ಎಂದು ‘ಇ’ಕಾರದಲ್ಲಿ ಕೊನೆಗೊಳ್ಳುತ್ತದೆ. ಅಲ್ಲಿಂದ ಮುಂದುವರಿದು ಯಜುರ್ವೇದ “ಇಷೇ ತ್ವೋರ್ಜೆ ತ್ವಾ …” ಎಂದು ‘ಇ’ಕಾರದಿಂದ ಪ್ರಾರಂಭವಾಗಿ “……..ಸಮುದ್ರೋ ಬಂಧುಃ” ಎಂದು ‘ಉ’ಕಾರದಲ್ಲಿ ಕೊನೆಗೊಳ್ಳುತ್ತದೆ. ಹೀಗೆ ಓಂಕಾರದಲ್ಲಿನ ‘ಅ’ಕಾರ ಮತ್ತು ‘ಉ’ಕಾರ ಋಗ್ವೇದ ಮತ್ತು ಯಜುರ್ವೇದವನ್ನು ಪೂರ್ಣವಾಗಿ ಸೂಚಿಸುವ ಸಂಕ್ಷೇಪಣಾ(abbreviation)ರೂಪ. ಇಲ್ಲಿಂದ ಮುಂದೆ ಸಾಮವೇದ. ಸಾಮವೇದ “ಅಗ್ನ ಆ ಯಾಹಿ ………” ಎಂದು ‘ಅ’ಕಾರದಿಂದ ಆರಂಭವಾಗಿ “……ಬ್ರ್ಹಸ್ಪತಿರ್ದಧಾತು” ಎಂದು ‘ಉ’ಕಾರದಲ್ಲಿ ಕೊನೆಗೊಳ್ಳುತ್ತದೆ. ಆದ್ದರಿಂದ ಇಲ್ಲಿ ‘ಮ’ ಕಾರ ಬಂದಿಲ್ಲ. ಆದರೆ ನಮಗೆ ತಿಳಿದಂತೆ ಸಾಮವೇದ ನಾದ ರೂಪದಲ್ಲಿದೆ. ಓಂಕಾರದಲ್ಲಿ ಕೂಡಾ ‘ಮ’ ಎನ್ನುವುದು ನಾದರೂಪದಲ್ಲಿ ಹೊರ ಹೊಮ್ಮುವ ಅಕ್ಷರ- ಅದು ಸಂಗೀತ. ಹೀಗೆ ಓಂಕಾರ ವೇದದ ಸಂಕ್ಷೇಪಣಾರೂಪ ಬೀಜಾಕ್ಷರ. ಇದು ನಮಗೆ ವೇದವನ್ನು ಗುರುತಿಸುವ ಮಾರ್ಗದರ್ಶಿ. ಆದ್ದರಿಂದ ಇದು ಭಗವಂತನನ್ನು ಸ್ತೋತ್ರ ಮಾಡುವ ಮಂತ್ರಗಳಲ್ಲಿ ಅತ್ಯಂತ ಪ್ರಕೃಷ್ಟವಾದುದ್ದು. ಇದಕ್ಕಿಂತ ದೊಡ್ಡ ಸ್ತೋತ್ರಮಾಡುವ ಶಬ್ದ ಈ ಪ್ರಪಂಚದಲ್ಲಿಲ್ಲ.
ಒಂದು ಮಂತ್ರದ ಕೊನೆಯಲ್ಲಿ ಹೇಳುವ ಓಂಕಾರಕ್ಕೆ ವ್ಯಾಕರಣದ ಪರಿಭಾಷೆಯಲ್ಲಿ ‘ಪ್ರಣವಃ’ ಎನ್ನುತ್ತಾರೆ. ಆದಿಯಿಂದ ಅಂತದ ತನಕ ಸಮಸ್ತ ನಾಮ ಪ್ರತಿಪಾದ್ಯ ‘ಭಗವಂತ’ ಎಂದು ತೋರಿಸುವುದಕ್ಕೆ ಓಂಕಾರವನ್ನು ಆದಿ-ಅಂತದಲ್ಲಿ ಉಚ್ಛಾರ ಮಾಡುತ್ತಾರೆ. ಈ ಕಾರಣಕ್ಕಾಗಿ ಮಂತ್ರದ ಆದಿಯಲ್ಲಿ ಮತ್ತು ಅಂತದಲ್ಲಿ ಬಳಸುವ ಓಂಕಾರವನ್ನು ಎಂದೂ ಪ್ರತ್ಯೇಕವಾಗಿ ಹೇಳಬಾರದು. ಉದಾಹರಣೆಗೆ ವಿಷ್ಣು ಸಹಸ್ರನಾಮದ ಕೊನೆಯಲ್ಲಿ “ಸರ್ವಪ್ರಹರಣಾಯುಧಃ ಓಂ ನಮ ಇತಿ” ಎಂದು ಹೇಳದೆ  “ಸರ್ವಪ್ರಹರಣಾಯುಧೋಂ ನಮ ಇತಿ” ಎಂದು ಹೇಳಬೇಕು. ಆಯುಧಃ ಎನ್ನುವಲ್ಲಿನ ವಿಸರ್ಗ(ಃ)ವನ್ನು ತೆಗೆದು ಅಲ್ಲಿ ‘ಓಂ’ ಸೇರಿಸಿ ಅದನ್ನು ಸಮಸ್ತವಾಗಿ ಹೇಳಬೇಕು.
“ವೇದದ ಸಾರಭೂತವಾದ ‘ಪ್ರಣವಃ’  ನಾನು” ಎನ್ನುತ್ತಾನೆ ಕೃಷ್ಣ. ಪ್ರಣವಃ ವಿಸ್ತೃತಯಾದಾಗ ವ್ಯಾಹೃತಿ, ವ್ಯಾಹೃತಿ ವಿಸ್ತಾರವಾಗಿ ಗಾಯತ್ರಿ, ಗಾಯತ್ರಿ ವಿಸ್ತಾರವಾಗಿ ಕುರುಡ ಸೂಕ್ತ,  ನಂತರ ಮೂರು ವೇದಗಳು, ಅಲ್ಲಿಂದ ಸಮಸ್ತ ವೇದಗಳು. ಹೀಗೆ ಪ್ರಣವದಲ್ಲಿ, ವ್ಯಾಹೃತಿಯಲ್ಲಿ, ಪುರುಷ ಸೂಕ್ತದಲ್ಲಿ, ಸಮಸ್ತವೇದಗಳಲ್ಲಿ ಭಗವಂತ ನೆಲೆಸಿದ್ದಾನೆ.

ವೇದದ ಶಬ್ದಗಳಿಂದಲೇ ಹುಟ್ಟಿ ಬಂದ ಪ್ರಪಂಚದ ಎಲ್ಲಾ ಶಬ್ದದಲ್ಲೂ, ಎಲ್ಲಾ ಲೌಕಿಕ ನಾದದಲ್ಲೂ  ತುಂಬಿದ ಭಗವಂತ, ಆಕಾಶದಲ್ಲಿ ಅನಂತ ಶಬ್ದಗಳನ್ನೂ, ಅನಂತ ನಾದಗಳನ್ನು ಸೃಷ್ಟಿ ಮಾಡಿದ. ನಮಗೆ ಶಬ್ದದಿಂದ ಅನಂತ ಅನುಭವವನ್ನು ಕೊಟ್ಟು, ಆ ಶಬ್ದವನ್ನು ಗ್ರಹಿಸುವ ಮತ್ತು ಗ್ರಹಿಸಿ ಪುನರುಚ್ಛರಿಸುವ ವಿಶೇಷ ಶಕ್ತಿಯನ್ನು ಕರುಣಿಸಿದ. ಜ್ಞಾನದ ಮೂಲಕ ಈ ಶಬ್ದ ನಾಮಕ ಭಗವಂತನನ್ನು ತಿಳಿಯುವ ವಿಶೇಷ ಶಕ್ತಿ ಮಾನವನಿಗೆ ಭಗವಂತನ ವಿಶೇಷ ಕೊಡುಗೆ. ಜೀವಲೋಕಕ್ಕೆ ನಾನಾ ವಿಧದ ಪೌರುಷವನ್ನು ಕೊಟ್ಟ ಭಗವಂತ,‘ಪುರುಷ’ ಶಬ್ದ ವಾಚ್ಯನಾಗಿ ಮಾನವರ ಬಹುವಿಧ ಪೌರುಷದಲ್ಲಿ ತುಂಬಿದ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( संपूर्ण पदार्थों में कारण रूप से भगवान की व्यापकता का कथन )
रसोऽहमप्सु कौन्तेय प्रभास्मि शशिसूर्ययोः।
प्रणवः सर्ववेदेषु शब्दः खे पौरुषं नृषु॥

हे अर्जुन! मैं जल में रस हूँ, चन्द्रमा और सूर्य में प्रकाश हूँ, सम्पूर्ण वेदों में ओंकार हूँ, आकाश में शब्द और पुरुषों में पुरुषत्व हूँ
॥8॥

Raso’hamapsu kaunteya prabhaasmi shashisooryayoh;
Pranavah sarvavedeshu shabdah khe paurusham nrishu.

I am the sapidity in water, O Arjuna! I am the light in the moon and the sun;
I am thesyllable Om in all the Vedas, sound in ether, and virility in men

ಅಧ್ಯಾಯ - 07 : ಶ್ಲೋಕ – 10

ಕೃಷ್ಣ ಪಿಂಡಾಂಡ-ಬ್ರಹ್ಮಾಂಡದಲ್ಲಿ ನಿಂತು ಹೇಗೆ ವಿಭೂತಿಯಾಗಿ ಬೇರೆ ಬೇರೆ ವಸ್ತುವಿನಲ್ಲಿ ವಿಶಿಷ್ಟ ಶಕ್ತಿಯನ್ನು ತುಂಬುತ್ತಾನೆ ಎನ್ನುವ ಮಾತಿನ ಸಂಕ್ಷಿಪ್ತ ಉಪಾಸನೆ ನೋಡಿದೆವು. ಈ ವಿಭೂತಿಯ ವಿಸ್ತಾರ ಮುಂದೆ ಪುನಃ ಬರುತ್ತದೆ. ಇಲ್ಲಿ ಕೃಷ್ಣ ಅದನ್ನು ಕ್ರೂಡೀಕರಣ ಮಾಡಿ ಸಮಷ್ಟಿಯಾಗಿ ವಿಭೂತಿಯ ಅನುಸಂಧಾನ ಹೇಗಿರಬೇಕು ಎಂದು ವಿವರಿಸಿದ್ದಾನೆ. 

ಬೀಜಂ ಮಾಂ ಸರ್ವಭೂತಾನಾಂ ವಿದ್ಧಿ ಪಾರ್ಥ ಸನಾತನಮ್ ।ಬುದ್ಧಿರ್ಬುದ್ಧಿಮತಾಮಸ್ಮಿ ತೇಜಸ್ತೇಜಸ್ವಿನಾಮಹಮ್ ॥೧೦॥

ಬೀಜಮ್  ಮಾಮ್  ಸರ್ವಭೂತಾನಾಮ್  ವಿದ್ಧಿ ಪಾರ್ಥ ಸನಾತನಮ್ ।
ಬುದ್ಧಿ ಬುದ್ಧಿಮತಾಮ್ ಅಸ್ಮಿ ತೇಜಃ ತೇಜಸ್ವಿನಾಮ್ ಅಹಮ್-

ಓ ಪಾರ್ಥ, ಎಲ್ಲ ಜೀವಿಗಳ ಅಳಿವಿರದ ಬೀಜ [ಸ್ವಭಾವದ ಅಭಿವ್ಯಕ್ತಿಗೆ ಕಾರಣನಾಗಿ ‘ಬೀಜ’ ನಾಮಕ] ನಾನೆಂದು ತಿಳಿ. ತಿಳಿದವರ ತಿಳಿವು ನನ್ನಿಂದ. [ತಿಳಿದವರೊಳಗಿದ್ದು ತಿಳಿವು ನೀಡುವುದರಿಂದ ‘ಬುದ್ಧಿ’ನಾಮಕ ]. ಪರಾಕ್ರಮಿಗಳ ಸೋಲರಿಯದ ಶಕ್ತಿ ನನ್ನಿಂದ. [ಪರಾಕ್ರಮಿಗಳೊಳಗಿದ್ದು ಸೋಲರಿಯದ ಶಕ್ತಿ ನೀಡುವುದರಿಂದ ‘ತೇಜಸ್’ ನಾಮಕ].

ಕೃಷ್ಣ ಹೇಳುತ್ತಾನೆ “ಬೀಜಮ್  ಮಾಮ್  ಸರ್ವಭೂತಾನಾಮ್  “ ಎಂದು. ಅಂದರೆ ‘ಎಲ್ಲಾ ಜೀವಗಳ ಬೀಜ’ ನಾನು ಎಂದು. ಬೀಜ ಎಂದಾಗ ನಮಗೆ ಸಾಮಾನ್ಯವಾಗಿ ನೆನಪಿಗೆ ಬರುವುದು ಮರಗಿಡದ ಬೀಜ. ಈ ಬೀಜವನ್ನು ಬಿತ್ತಿದಾಗ ಅದು ಮರವಾಗಿ ಬೆಳೆಯುತ್ತದೆ. ಅಂದರೆ ಮರಕ್ಕೆ ಬೀಜ ಉಪಾದಾನ ಕಾರಣ. ಹಾಗೇ ಭಗವಂತ ಕೂಡಾ ಈ ಜಗತ್ತಿಗೆ ಉಪಾದಾನ ಕಾರಣವೆ? ಇದು ನಮ್ಮ ಮುಂದೆ ಬರುವ ಮೊದಲ ಪ್ರಶ್ನೆ. ಇದನ್ನು ತಿಳಿಯಬೇಕಾದರೆ ಮೊದಲು ನಾವು ‘ಬೀಜ’ ಅನ್ನುವ ಪದದ ಅಧ್ಯಾತ್ಮಿಕ ಅರ್ಥವಿಶೇಷವನ್ನು(etymological meaning) ಅರಿಯಬೇಕು. ಬೀಜ ಎನ್ನುವುದು ‘ಅಂಜು’ ಧಾತುವಿನಿಂದ ಬಂದಿರುವುದು. ಇಲ್ಲಿ ‘ವಿ’ ವಿಸರ್ಗ. ಯಾವುದು ವ್ಯಂಜನ (ವ್ಯಂಜನಾತ್) ಅದು ಅಭಿವ್ಯಂಜನ. ಅಂದರೆ ಯಾರಿಂದ ಅಭಿವ್ಯಕ್ತವಾಯಿತೋ ಅದು ಬೀಜ. ಯಾವುದು(ಮೂಲವಸ್ತು) ಇದ್ದೂ ಕಾಣಿಸುತ್ತಿರಲಿಲ್ಲವೋ ಅದಕ್ಕೆ ಕಾಣುವಂತಹ ಆಕಾರಕೊಟ್ಟವನು ಆ ಭಗವಂತ. ಅಂದರೆ ಸೂಕ್ಷ್ಮ ರೂಪದಲ್ಲಿ ತುಂಬಿದ್ದ ಈ ಅವ್ಯಕ್ತ ಪ್ರಪಂಚಕ್ಕೆ ವ್ಯಕ್ತವಾದ ರೂಪ ಕೊಟ್ಟವ. ಆದ್ದರಿಂದ ಇಡೀ ಪ್ರಪಂಚದಲ್ಲಿರುವ ಜೀವಜಾತಕ್ಕೆ ಅಭಿವ್ಯಕ್ತವನ್ನು ಕೊಟ್ಟವನು ಯಾರೋ ಅವನು ಸರ್ವಭೂತಗಳಿಗೆ ಬೀಜ. ಈ ಜಗತ್ತಿಗೆ ತಂದೆಯೂ ತಾಯಿಯೂ ಆದ ಆ  ಭಗವಂತ ಬೀಜ. ಪ್ರಳಯ ಕಾಲದಲ್ಲಿ ಕಣ್ಣಿಗೆ ಕಾಣದ(ಅವ್ಯಕ್ತ), ಸೂಕ್ಷ್ಮರೂಪದಲ್ಲಿ ಇದ್ದ ಈ ಪ್ರಪಂಚಕ್ಕೆ-ವ್ಯಕ್ತವಾದ ರೂಪವನ್ನು ಕೊಟ್ಟವ ‘ಸರ್ವಭೂತಾನಾಂ ಬೀಜ’.

ಜಗತ್ತಿನ ಸಮಸ್ತ ಜೀವಜಾತಕ್ಕೆ ಅಂದರೆ- ಚತುರ್ಮುಖ-ಪ್ರಾಣ-ಗರುಡ-ಶೇಷ-ರುದ್ರ-ಇಂದ್ರ-ಕಾಮ-ಸರ್ವ ದೇವತೆಗಳು, ಮಾನವರು, ವನಸ್ಪತಿಗಳು, ಇತ್ಯಾದಿ. ಹೀಗೆ ಸಮಸ್ತ ಜೀವಕೋಟಿಗೆ ದೇಹಕೊಟ್ಟು, ಆಕಾರ ಕೊಟ್ಟು, ಅಭಿವ್ಯಕ್ತಿಕೊಟ್ಟು, ಇಡೀ ಜೀವಜಾತದ ಹಿಂದೆ ತಂದೆಯಾಗಿ ನಿಂತವ ಆ ಭಗವಂತ. ಈ ಪ್ರಪಂಚದಲ್ಲಿ ಯಾವ-ಯಾವ ಜೀವಜಾತವಿದೆ, ಆ ಜೀವಜಾತದಲ್ಲಿರುವ ವಿಶೇಷ ಶಕ್ತಿ(exclusive quality) ಹಿಂದೆ ಕಾರಣ ಪುರುಷನಾಗಿ, ವ್ಯಕ್ತಿತ್ವ ವಿಕಸನಕ್ಕೆ (ಅಭಿವ್ಯಕ್ತಿಗೆ) ಮೂಲಕಾರಣನಾಗಿ ಆ ಭಗವಂತ ನಿಂತಿದ್ದಾನೆ.
ನಮಗಿರುವ ಬೀಜದ ಇನ್ನೊಂದು ಕಲ್ಪನೆ –ಅದು ಮರವಾಗಿ ಬೆಳೆದಾಗ ತನ್ನ ಆಕಾರವನ್ನು ಕಳೆದುಕೊಳ್ಳುತ್ತದೆ ಎನ್ನುವುದು. ಆದರೆ ಭಗವಂತ ‘ಸನಾತನ’. ಇಲ್ಲಿ ಕೃಷ್ಣ ಹೇಳುತ್ತಾನೆ “ನಾನು ನಾನಾಗಿಯೇ ಇದ್ದು ಪ್ರಪಂಚಕ್ಕೆ ಆಕಾರ ಕೊಡುತ್ತೇನೆ” ಎಂದು. ಅಂದರೆ ಭಗವಂತ ಎಂದೂ ಬದಲಾಗುವುದಿಲ್ಲ-ಆದರೆ ಪ್ರಪಂಚ ಬದಲಾಗುತ್ತದೆ. ಭಗವಂತ ಪ್ರಪಂಚಕ್ಕೆ ಬೇರೆ ಬೇರೆ ಆಕಾರದ ಅಭಿವ್ಯಕ್ತ ಕೊಡುತ್ತಾನೆ. ಹೊಸ ಶಕ್ತಿ ಕೊಡುತ್ತಾನೆ. ಇದರಿಂದ ಅದು ಬದಲಾಗುತ್ತಾ, ಹೊಸ ರೂಪ ಪಡೆಯುತ್ತಾ ಇರುತ್ತದೆ. ಇದಕ್ಕೆ ಕಾರಣಪುರುಷನಾದ ಭಗವಂತ ಮಾತ್ರ ಎಲ್ಲಾ ಕಾಲದಲ್ಲೂ ಏಕರೂಪದಲ್ಲಿರುತ್ತಾನೆ. ಹೀಗೆ ಭಗವಂತ ಸಮಸ್ತ ಭೂತಗಳಿಗೆ(ಜಡ, ಚೇತನ, ಮುಕ್ತರು)ಬೀಜ ಮತ್ತು ಆತ ಸನಾತನ.

ಕೃಷ್ಣ ಹೇಳುತ್ತಾನೆ “ಬುದ್ಧಿರ್ಬುದ್ಧಿಮತಾಮಸ್ಮಿ ತೇಜಸ್ತೇಜಸ್ವಿನಾಮಹಮ್” ಎಂದು. ಅಂದರೆ “ಬುದ್ಧಿವಂತರ ಬುದ್ಧಿಮತ್ತೆ ಏನಿದೆ ಅದು ನನ್ನ ಕೊಡುಗೆ; ಹಾಗೇ ತೇಜಸ್ವಿಗಳಿಗೆ ತೇಜಸ್ವಿ ನಾನು”. ಜ್ಞಾನಪ್ರದ ಜೀವರಲ್ಲಿ ಜ್ಞಾನಶಕ್ತಿಯನ್ನು  ಭಗವಂತ ಅಭಿವ್ಯಕ್ತ ಗೊಳಿಸಿದ. ಇದರಿಂದ ಅವರು ಜ್ಞಾನ ಯೋಗಿಗಳಾದರು ಮತ್ತು ಸಂಸಾರದಲ್ಲಿ ಜ್ಞಾನ ಪರಂಪರೆಯನ್ನು ಬೆಳೆಸಿ ಮುಕ್ತಿಯನ್ನು ಪಡೆದರು. ಅದೇ ರೀತಿ ಕರ್ಮಪ್ರಧಾನವಾಗಿರುವ ಕರ್ಮಯೋಗಿಗಳಿಗೆ ತೇಜಸ್ಸಾಗಿ ನಿಂತು ಮುನ್ನೆಡೆಸಿದ ಭಗವಂತ, ಅವರಿಗೆ ‘ತೇಜಸ್ಸಾಗಿ’ ಮುಕ್ತಿ ಕರುಣಿಸುವವ. ಬುದ್ಧಿಃ ಮತ್ತು ತೇಜಃ ಎನ್ನುವುದು ಭಗವಂತನ ಹೆಸರು. ಜ್ಞಾನದ ಅಪಾರ ಮತ್ತು ಅನಂತ ಕಡಲಾಗಿರುವ ಭಗವಂತ ‘ಬುದ್ಧಿಃ’. ದೇಹಬಲ, ಆತ್ಮಬಲ ಎಲ್ಲವೂ ಪೂರ್ಣಪ್ರಮಾಣದಲ್ಲಿರುವ ಸರ್ವಸಮರ್ಥ ಭಗವಂತ ತೇಜಃ.     

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

बीजं मां सर्वभूतानां विद्धि पार्थ सनातनम्‌।
बुद्धिर्बुद्धिमतामस्मि तेजस्तेजस्विनामहम्‌॥

हे अर्जुन! तू सम्पूर्ण भूतों का सनातन बीज मुझको ही जान। मैं बुद्धिमानों की बुद्धि और तेजस्वियों का तेज हूँ
॥10॥

Beejam maam sarvabhootaanaam viddhi paartha sanaatanam;
Buddhir buddhimataamasmi tejastejaswinaamaham.

Know Me, O Arjuna, as the eternal seed of all beings;
I am the intelligence of theintelligent;
the splendour of the splendid objects am I!


ಅಧ್ಯಾಯ - 07 : ಶ್ಲೋಕ – 11

ಬಲಂ ಬಲವತಾಂ ಚಾಹಂ ಕಾಮರಾಗವಿವರ್ಜಿತಮ್ ।ಧರ್ಮಾವಿರುದ್ಧೋ ಭೂತೇಷು ಕಾಮೋSಸ್ಮಿ ಭರತರ್ಷಭ ॥೧೧॥

ಬಲಮ್  ಬಲವತಾಂ ಚ ಅಹಮ್ ಕಾಮ ರಾಗ ವಿವರ್ಜಿತಮ್ ।
ಧರ್ಮ ಅವಿರುದ್ಧಃ  ಭೂತೇಷು ಕಾಮಃ ಅಸ್ಮಿ ಭರತ ಋಷಭ-

 ಬಲವಂತರ ಬಯಕೆ-ಒಲವುಗಳಿಲ್ಲದ ಬಲ ನನ್ನಿಂದ. [ಬಲವಂತರೊಳಗಿದ್ದು ಬಲ ನೀಡುವುದರಿಂದ ಮತ್ತು ಕಾಮನೆಯಿಲ್ಲದ, ಆಸ್ಥಾನದಲ್ಲಿ ಬಳಸದ ಬಲರೂಪನಾದ್ದರಿಂದ ‘ಕಾಮ ವಿವರ್ಜಿತ’ ಮತ್ತು ‘ಬಲ’ ನಾಮಕ.] ಭರತಶ್ರೇಷ್ಠ, ಜೀವಿಗಳಲ್ಲಿ ಧರ್ಮಕ್ಕೆ ಅನುಗುಣವಾದ ಬಯಕೆ ನನ್ನಿಂದ. [ಜೀವಿಗಳಲ್ಲಿದ್ದು ಧರ್ಮ ವೃದ್ಧಿಗೆ ನೆರವಾಗಿ ಎಲ್ಲರಿಂದಲೂ ಕಾಮಿತನಾದ್ದರಿಂದ ‘ಧರ್ಮಾವಿರುದ್ಧ’ ಮತ್ತು ‘ಕಾಮ’ನಾಮಕ.]

ವಿಭೂತಿಯ ಸಮಸ್ತ ಮುಖಗಳನ್ನು ಕ್ರೂಡೀಕರಿಸಿ ಸಮಷ್ಟಿಯಾಗಿ ಹೇಳಿದ ಕೃಷ್ಣ, ಇಲ್ಲಿ ಮೂಲಭೂತವಾಗಿ ಬದುಕಿನ ಎರಡು ಮುಖವನ್ನು ವಿವರಿಸುತ್ತಾನೆ. ಕೃಷ್ಣ ಚೇತನದಲ್ಲಿರುವ ಬಲವನ್ನು ಈ ಶ್ಲೋಕದಲ್ಲಿ ಉಲ್ಲೇಖಿಸುತ್ತಾನೆ. ಬಲದಲ್ಲಿ ಅನೇಕ ವಿಧ. ಮುಡಕೋಪನಿಷತ್ತಿನಲ್ಲಿ ಹೇಳುವಂತೆ:

ನಾಯಮಾತ್ಮಾ ಪ್ರವಚನೇನ ಲಭ್ಯೋ ನ ಮೇಧಯಾ ನ ಬಹುನಾ ಶ್ರುತೇನ ।
ಯಮೇವೈಷ ವೃಣುತೇ ತೇನ ಲಭ್ಯಸ್ತಸ್ಯೈಷ ಆತ್ಮಾ ವಿವೃಣುತೇ ತನೂಂ ಸ್ವಾಮ್ ॥೩-೨-೩॥

ನಾಯಮಾತ್ಮಾ ಬಲಹೀನೇನ ಲಭ್ಯೋ ನ ಚ ಪ್ರಮಾದಾತ್ ತಪಸೋ ವಾಪ್ಯಲಿಙ್ಗಾತ್ ।
ಏತೈರುಪಾಯೈರ್ಯತತೇ ಯಸ್ತು ವಿದ್ವಾಂಸ್ತಸ್ಯೈಷ ಆತ್ಮಾ ವಿಶತೇ ಬ್ರಹ್ಮಧಾಮ ॥೩-೨-೪॥

“ನ ಅಯಂ ಆತ್ಮಾ ಬಲಹೀನೇನ ಲಭ್ಯಃ” ಅಂದರೆ ಭಗವಂತನನ್ನು ಪಡೆಯುವುದು ದುರ್ಬಲರಿಗೆ ಸಾಧ್ಯವಿಲ್ಲ ಎಂದರ್ಥ. ಇಲ್ಲಿ ಬಂದಿರುವ ಬಲ ದೇಹಬಲವಲ್ಲ. ಇದು ಭಗವಂತನ ಅನುಗ್ರಹದ ಬಲ, ಸ್ವರೂಪ ಯೋಗ್ಯತೆ ಮತ್ತು ಜೊತೆಗೆ ಮನೋಬಲ. ಈ ಶ್ಲೋಕದಲ್ಲಿ ಹೇಳುವಂತೆ-ಅಧ್ಯಯನದಿಂದ, ಶಾಸ್ತ್ರ ಶ್ರವಣದಿಂದ ‘ಮನೋಬಲ’ ವೃದ್ಧಿಯಾಗಬಹುದು, ಆದರೆ ಆತ್ಮಬಲವಿಲ್ಲದೆ  ಭಗವಂತನನ್ನು ಕಾಣಲು ಸಾಧ್ಯವಿಲ್ಲ.

"ಯಸ್ಯ ದೇವೇ ಪರಾ ಭಕ್ತಿರ್ಯಥಾ ದೇವೇ ತಥಾ ಗುರೌ|
ತಸ್ಮೈತೇ ಕಥಿತಾ ಹ್ಯರ್ಥಾಃ ಪ್ರಕಾಶಂತೇ ಮಹಾತ್ಮನಃ"

ಜ್ಞಾನದ ಬಲವಿದ್ದರೆ ಸಾಲದು,ಭಕ್ತಿಯ ಬಲಬೇಕು. ಭಗವಂತನ ಅನುಗ್ರಹಕ್ಕೆ ನಮ್ಮಲ್ಲಿ ಭಕ್ತಿಯನ್ನು ಜಾಗೃತಗೊಳಿಸುವ ಗುರು ಅನುಗ್ರಹದ ಬಲವೂ ಮುಖ್ಯ. ಹೀಗೆ ಆತ್ಮ ಯೋಗ್ಯತೆಯ ಬಲ, ಸಾಧನೆಯ ಬಲ, ಭಕ್ತಿಯ ಬಲ,ಶಾಸ್ತ್ರಾಧ್ಯಾಯನದ ಬಲ, ಗುರುಗಳ ಅನುಗ್ರಹದ ಬಲ, ಇವನ್ನೆಲ್ಲವನ್ನೂ ನಮಗೆ ಕೊಡುವವ ಆ ಭಗವಂತ. ಆತ ಅನೇಕರೂಪದಲ್ಲಿ ‘ಬಲ’ ನಾಮಕನಾಗಿ  ನಿಂತು  ಜೀವ ಯೋಗ್ಯತೆಗನುಗುಣವಾಗಿ ವಿಶೇಷ ಬಲವನ್ನು ಅನುಗ್ರಹಿಸುತ್ತಾನೆ.
ಸಾಮಾನ್ಯವಾಗಿ ಬಲದ ಹಿಂದೆ ಒಂದು ದೋಷವಿರುತ್ತದೆ. ಬಲ ಬಂದಾಗ ನಮಗೆ ಕೆಟ್ಟ ಕಾಮನೆ ಹುಟ್ಟುತ್ತದೆ. ಆದರೆ ಭಗವಂತ  ಕಾಮ-ರಾಗ ವಿವರ್ಜಿತ  ಬಲ ಸ್ವರೂಪ. ನಮಗೆ ಕಾಮವರ್ಜಿತ ಬಲ ಕಲ್ಪನಾತೀತ. ಇಲ್ಲಿ ಕೃಷ್ಣ ‘ಕಾಮನೆ’ ಬೇಡ ಎಂದು ಹೇಳುತ್ತಿಲ್ಲ. ‘ಭಗವಂತನನ್ನು ತಿಳಿಯಬೇಕು’, ‘ಭಕ್ತಿಯಿಂದ  ಶಾಸ್ತ್ರಾಧ್ಯಾಯನ ಮಾಡಬೇಕು’ ಇತ್ಯಾದಿ ಕಾಮನೆಗಳು ನಮಗೆ ಅಗತ್ಯವಾಗಿ ಬೇಕು. ಯಾವ ಬಯಕೆ ನಮಗೆ ಧಾರಕ ಶಕ್ತಿಯಾಗಿ ನಿಲ್ಲುತ್ತದೋ ಅಲ್ಲಿ ‘ಕಾಮ ವಿವರ್ಜಿತನಾಗಿ’ ಭಗವಂತ ನಿಂತ. ಇಲ್ಲಿ ಕೃಷ್ಣ ಹೇಳುತ್ತಾನೆ “ಸಮಸ್ತ ಜೀವಜಾತದಲ್ಲಿ ಧರ್ಮಕ್ಕೆ ಅವಿರುದ್ಧವಾಗಿರುವ ಕಾಮನೆಯ ಹಿಂದೆ ನಾನಿದ್ದೇನೆ” ಎಂದು.
ಈ  ಶ್ಲೋಕದಲ್ಲಿ ಕೃಷ್ಣ ಅರ್ಜುನನನ್ನು ‘ಭರತ ಋಷಭ’ ಎಂದು ಸಂಬೋಧಿಸುತ್ತಾನೆ.  ಜ್ಞಾನಾನಂದದಲ್ಲಿ ರಥನಾದವ ‘ಭರತರ್ಷಭ’;  ಭರತ(ವಾಯು) ಋಷಭ(ಅಣ್ಣ)ನಾಗಿ ಉಳ್ಳವ ಭರತರ್ಷಭ.

ಈ ಮೇಲಿನ ಶ್ಲೋಕದಲ್ಲಿ ಒಳ್ಳೆಯ ಅಂಶದಲ್ಲಿ ಇರತಕ್ಕಂತಹ ತನ್ನ ವಿಭೂತಿಯನ್ನು ಕೃಷ್ಣ ವಿವರಿಸಿದ. ಈ ಅನುಸಂಧಾನದಲ್ಲಿ ಗೀತೆಯನ್ನು ನೋಡಿದಾಗ, ಇಲ್ಲಿ ಕೆಲವರಿಗೆ ಒಂದು ಸಂಶಯ ಬರಬಹುದು. “ಒಳ್ಳೆಯದನ್ನು ಮಾಡಿಸುವವನು ದೇವರು, ಕೆಟ್ಟದ್ದನ್ನು ಮಾಡಿಸುವುದು ಯಾವುದೋ ದುಷ್ಟಶಕ್ತಿ” ಎಂದು. ಅಂದರೆ  ಎಲ್ಲವನ್ನೂ ಭಗವಂತ ಮಾಡಿಸುವುದಲ್ಲ ಎನ್ನುವ ಸಂಶಯ ನಮ್ಮನ್ನು ಕಾಡಬಹುದು. ಈ ನಮ್ಮ ಸಂಶಯಕ್ಕೆ  ಕೃಷ್ಣನ  ಉತ್ತರ ಮುಂದಿನ ಶ್ಲೋಕ.
ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

बलं बलवतां चाहं कामरागविवर्जितम्‌।
धर्माविरुद्धो भूतेषु कामोऽस्मि भरतर्षभ॥

हे भरतश्रेष्ठ! मैं बलवानों का आसक्ति और कामनाओं से रहित बल अर्थात सामर्थ्य हूँ और सब भूतों में धर्म के अनुकूल अर्थात शास्त्र के अनुकूल काम हूँ
॥11॥

Balam balavataam asmi kaamaraagavivarjitam;
Dharmaaviruddho bhooteshu kaamo’smi bharatarshabha.

Of the strong, I am the strength devoid of desire and attachment, and in (all) beings, I amthe desire unopposed to Dharma, O Arjuna!


ಅಧ್ಯಾಯ - 07 : ಶ್ಲೋಕ – 12

ಯೇ ಚೈವ ಸಾತ್ತ್ವಿಕಾ ಭಾವಾ ರಾಜಸಾಸ್ತಾಮಸಾಶ್ಚ ಯೇ ।ಮತ್ತ ಏವೇತಿ ತಾನ್ ವಿದ್ಧಿ ನ ತ್ವಹಂ ತೇಷು ತೇ ಮಯಿ  ॥೧೨॥

ಯೇ ಚ ಏವ ಸಾತ್ತ್ವಿಕಾಃ ಭಾವಾ ರಾಜಸಾಃ ತಾಮಸಾಃ ಚ ಯೇ।
ಮತ್ತ ಮತ್ತಃ ಏವ ಇತಿ ತಾನ್ ವಿದ್ಧಿ  ನ ತು ಅಹಮ್ ತೇಷು ತೇ ಮಯಿ-

ಯಾವ ವಸ್ತುಗಳು ಸತ್ವಗುಣದ ಪ್ರಭಾವಕ್ಕೆ ಒಳಗಾದವು ಮತ್ತು ಯಾವವು ರಜೋಗುಣ ಮತ್ತು ತಮೋಗುಣದ ಪ್ರಭಾವಕ್ಕೆ-ಅವೆಲ್ಲವೂ ನನ್ನಿಂದಾಗಿಯೇ ಆಗಿವೆ ಎಂದು ತಿಳಿ. ನಾನು ಅವುಗಳ ಹಂಗಿನಲ್ಲಿಲ್ಲ. ಅವು ನನ್ನ ಹಂಗಿನಲ್ಲಿವೆ.

ಈ ಪ್ರಪಂಚ ಎಂದರೆ ಅಂತರಂಗ ಮತ್ತು ಬಹಿರಂಗ. ಅಂತರಂಗ ಪ್ರಪಂಚದಲ್ಲಿ  ತ್ರೈಗುಣ್ಯದ ಭಾವನೆಗಳು, ಬಾಹ್ಯ ಪ್ರಪಂಚದಲ್ಲಿ ತ್ರೈಗುಣ್ಯ ಪದಾರ್ಥಗಳು. ಸತ್ವ, ರಜಸ್ಸು ಮತ್ತು ತಮಸ್ಸು ಈ ಮೂರರ ಸಮಾವೇಶವೇ ಈ ಪ್ರಪಂಚ. ಮಣ್ಣು ತಮೋಗುಣದ, ನೀರು ರಜೋಗುಣದ ಮತ್ತು ಬೆಂಕಿ ಸತ್ವ ಗುಣದ ಸಂಕೇತ. ಆದ್ದರಿಂದ ಈ ಪ್ರಪಂಚದಲ್ಲಿ ನಮಗೆ ಕಾಣುವ ಪ್ರತಿಯೊಂದು ವಸ್ತುವೂ ಕೂಡಾ ಈ ಮೂರರ ಸಮಾವೇಶ. ನಮ್ಮ ಅಂತರಂಗದ ಭಾವನೆಗಳೂ ಕೂಡಾ ಈ ಮೂರು ಗುಣದ ಸಮಾವೇಶ. ನಮ್ಮಲ್ಲಿರುವ ವರ್ಣ ಪದ್ಧತಿ ಕೂಡಾ ತ್ರೈಗುಣ್ಯ ಆಧಾರಿತ. ಎಲ್ಲರಲ್ಲಿಯೂ ಕೂಡಾ ಈ ಮೂರು ಗುಣಗಳಿವೆ. ಆದರೆ ಸತ್ವದ ಅಂಶ ಹೆಚ್ಚಾಗಿದ್ದು, ರಜಸ್ಸು ಮತ್ತು ತಮಸ್ಸು ಕಡಿಮೆ ಇರುವವ ಬ್ರಾಹ್ಮಣ ವರ್ಣ; ರಜಸ್ಸಿನ ಅಂಶ ಹೆಚ್ಚಾಗಿದ್ದು ಅದರ ನಂತರ ಸತ್ವ ಮತ್ತು ತಮಸ್ಸು ಇರುವವ ಕ್ಷತ್ರಿಯ; ರಜಸ್ಸು ಹೆಚ್ಚಾಗಿದ್ದು ಅದರ ನಂತರ ತಮಸ್ಸು ಮತ್ತು ಸತ್ವ ಗುಣ ಉಳ್ಳವ ವೈಶ್ಯ; ತಮೋಗುಣ ಹೆಚ್ಚಾಗಿದ್ದು, ಅದರ ನಂತರ ರಜಸ್ಸು ಮತ್ತು ಸತ್ವ ಗುಣ ಉಳ್ಳವ ಶೂದ್ರ. ಈ ಎಲ್ಲಾ ವರ್ಣದವರೂ ಮೋಕ್ಷ ಯೋಗ್ಯರೆ. ಸೃಷ್ಟಿಯ ಆದಿಯಲ್ಲಿ ಈ ಮೂರು ಗುಣಗಳ ಮಿಶ್ರಣವಾಗಿಯೇ ಸೃಷ್ಟಿ ಪ್ರಾರಂಭವಾಯಿತು. ಇಲ್ಲಿ ಶುದ್ಧ ಸತ್ವ ಅನ್ನುವುದೊಂದಿಲ್ಲ. (ಗಣಿತಬದ್ಧವಾಗಿ ಹೇಗೆ ತ್ರೈಗುಣ್ಯದಿಂದ ಈ ಪ್ರಪಂಚ ನಿರ್ಮಾಣವಾಯಿತು ಎನ್ನುವುದನ್ನು ಮಧ್ವಾಚಾರ್ಯರು ತಮ್ಮ ಭಾಗವತ ತಾತ್ಪರ್ಯನಿರ್ಣಯ ಗ್ರಂಥದಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ. ಇದೊಂದು ಸೃಷ್ಟಿಯ ಪ್ರಮೇಯ).

ಹೀಗೆ ಪ್ರತಿಯೊಂದು ಪದಾರ್ಥದಲ್ಲಿ ಮೂರು ಅಂಶಗಳಿವೆ ಮತ್ತು ನಮ್ಮ ಭಾವದಲ್ಲಿಯೂ ಮೂರು ಅಂಶಗಳಿವೆ. ಈ ಮೂರು ಗುಣಗಳ ಸಂಕೀರ್ಣ ಪ್ರಪಂಚ ಬಹಳ ವಿಚಿತ್ರ. ಇವು ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂದು ಮನುಷ್ಯ ತೀರ್ಮಾನ ಮಾಡಲಾಗದಷ್ಟು ಗೊಂದಲಗೆಡಿಸುತ್ತವೆ. ಆದರೆ ಇಲ್ಲಿ ಕೃಷ್ಣ ಹೇಳುತ್ತಾನೆ “ತ್ರೈಗುಣ್ಯ ವರ್ಜಿತನಾಗಿ ಈ ಮೂರು ಗುಣಗಳನ್ನುಕೊಡುತ್ತಿರುವವನು ನಾನು” ಎಂದು! ಪ್ರತಿಯೊಂದು ಜೀವದ ಜೀವ ಸ್ವಭಾವಕ್ಕನುಗುಣವಾಗಿ, ಅದಕ್ಕೆ ಬೇಕಾದ ಗುಣ ಪ್ರವೃತ್ತಿಯನ್ನು ಕೊಡುವವ ಆ  ಭಗವಂತ. ಯಾರಲ್ಲೂ ಯಾವ ಕ್ರಿಯೆಯೂ ಭಗವಂತನ ಪ್ರೇರಣೆ ಇಲ್ಲದೆ ಆಗುವುದಿಲ್ಲ. ಹಿಂದೆ ವಿವರಿಸಿದಂತೆ ಜೀವನಿಗೆ ಸ್ವತಂತ್ರ ಇಚ್ಛಾಪೂರ್ವಕ ಕ್ರಿಯೆ ಇಲ್ಲ. “ನಹಿ ಪ್ರತಿಬಿಂಬಸ್ಯ ಕ್ರಿಯಾ | ಸ ಹಿ ಬಿಂಬ ಕ್ರಿಯೈವ ಕ್ರಿಯಾವಾನ್ ||”. ಬಿಂಬದಲ್ಲಿ ಕ್ರಿಯೆ ಇಲ್ಲದೆ ಪ್ರತಿಬಿಂಬದಲ್ಲಿ ಕ್ರಿಯೆ ಇಲ್ಲ. ಭಗವಂತನ ಅಧೀನವಾಗಿ ಈ ಮೂರು ಗುಣಗಳು ಈ ಪ್ರಪಂಚದಲ್ಲಿ ತುಂಬಿಕೊಂಡಿವೆ. ಇದು ನಮ್ಮ ಜೀವ ಪಕ್ವವಾಗಿ ಮೋಕ್ಷವನ್ನು ಸೇರಲು ಭಗವಂತ ನಿರ್ಮಿಸಿರುವ ಪಾಠಶಾಲೆ.

ಭಗವಂತ ತ್ರೈಗುಣ್ಯ ವರ್ಜಿತ. ಆತ ತ್ರಿಗುಣದ ನಿಯಂತ್ರಣಕ್ಕೊಳಪಟ್ಟಿಲ್ಲ.  ಅದಕ್ಕಾಗಿ ಭಗವಂತನನ್ನು “ತ್ರಿಗುಣಾತೀತ ವಿದಾರಕ-ಪರಿತೋ ತೇಹಿಸುಭಕ್ತಿಂ- ಕರುಣಾಪೂರ್ಣ ಪರಪ್ರದ-ಚರಿತಂ ಜ್ಞಾಪಯಮೇತೇ”  ಎಂದು ಸ್ತುತಿಸುತ್ತಾರೆ. ಇಡೀ ಜಗತ್ತು ತ್ರಿಗುಣದ ನಿಯಂತ್ರಣಕ್ಕೊಳಪಟ್ಟಿದೆ ಆದರೆ ಭಗವಂತ ತ್ರಿಗುಣಾತೀತ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

ये चैव सात्त्विका भावा राजसास्तामसाश्चये।
मत्त एवेति तान्विद्धि न त्वहं तेषु ते मयि॥

और भी जो सत्त्व गुण से उत्पन्न होने वाले भाव हैं और जो रजो गुण से होने वाले भाव हैं, उन सबको तू 'मुझसे ही होने वाले हैं' ऐसा जान, परन्तु वास्तव में (गीता अ. 9 श्लोक 4-5 में देखना चाहिए) उनमें मैं और वे मुझमें नहीं हैं
॥12॥

Ye chaiva saattvikaa bhaavaa raajasaastaamasaashcha ye;
Matta eveti taanviddhi na twaham teshu te mayi.

Whatever being (and objects) that are pure, active and inert, know that they proceedfrom Me. They are in Me, yet I am not in them.


ಅಧ್ಯಾಯ - 07 : ಶ್ಲೋಕ – 13

ತ್ರಿಭಿರ್ಗುಣಮಯೈರ್ಭಾವೈರೇಭಿಃ ಸರ್ವಮಿದಂ ಜಗತ್  ।ಮೋಹಿತಂ ನಾಭಿಜಾನಾತಿ ಮಾಮೇಭ್ಯಃ ಪರಮವ್ಯಯಮ್ ॥೧೩॥

ತ್ರಿಭಿಃ ಗುಣ ಮಯೈಃ ಭಾವೈಃ ಏಭಿಃ ಸರ್ವಮ್ ಇದಮ್ ಜಗತ್ ।
ಮೋಹಿತಮ್ ನ ಅಭಿಜಾನಾತಿ ಮಾಮ್ ಏಭ್ಯಃ ಪರಮ್ ಅವ್ಯಯಮ್-

ತ್ರಿಗುಣಾತ್ಮಕವಾದ ಈ ಸೋತ್ತುಗಳಿಂದ ಮೋಹಗೊಂಡ ಈ ಎಲ್ಲ ಜೀವಜಾತ ಇವುಗಳಿಂದಾಚೆಗಿರುವ, ಅಳಿವಿರದ ನನ್ನನ್ನು ತಿಳಿಯದಾಗಿದೆ.

ಇಡೀ ಜಗತ್ತು ತ್ರಿಗುಣಗಳಿಂದ ಮೋಹಿತವಾಗಿರುವುದರಿಂದ ಮತ್ತು ಈ ಮೂರು ಗುಣಗಳು ಎಲ್ಲಾ ಕಡೆ ತುಂಬಿರುವುದರಿಂದ ನಮಗೆ ತ್ರಿಗುಣಾತೀತವಾದ ಯೋಚನೆ ಅಸಾಧ್ಯ. ಈ ಕಾರಣದಿಂದ ತ್ರಿಗುಣಾತೀತನೂ ಅವ್ಯಯನೂ ಆದ  ಆ ಭಗವಂತನನ್ನು ಪೂರ್ಣ ಗ್ರಹಿಸಲು ಜೀವನಿಗೆ ಸಾಧ್ಯವಿಲ್ಲ.  ಭಗವಂತನನ್ನು ಅರಿಯಬೇಕಾದರೆ ನಾವು ಈ ತ್ರಿಗುಣದ ಚಕ್ರದಿಂದ ಹೊರಕ್ಕೆ ಬರಬೇಕು. ಆದರೆ ಹೊರ ಬರುವ ಮಾರ್ಗ ಎಂತು? ಉತ್ತರ ಮುಂದಿನ ಶ್ಲೋಕ.   

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( आसुरी स्वभाव वालों की निंदा और भगवद्भक्तों की प्रशंसा )
त्रिभिर्गुणमयैर्भावैरेभिः सर्वमिदं जगत्‌।
मोहितं नाभिजानाति मामेभ्यः परमव्ययम्‌॥

गुणों के कार्य रूप सात्त्विक, राजस और तामस- इन तीनों प्रकार के भावों से यह सारा संसार- प्राणिसमुदाय मोहित हो रहा है, इसीलिए इन तीनों गुणों से परे मुझ अविनाशी को नहीं जानता
॥13॥

Tribhirgunamayair bhaavairebhih sarvamidam jagat;
Mohitam naabhijaanaati maamebhyah paramavyayam.

Deluded by these Natures (states or things) composed of the three qualities of Nature, allthis world does not know Me as distinct from them and immutable.


ಅಧ್ಯಾಯ - 07 : ಶ್ಲೋಕ – 14

ದೈವೀ ಹ್ಯೇಷಾ ಗುಣಮಯೀ ಮಮ ಮಾಯಾ ದುರತ್ಯಯಾ ।ಮಾಮೇವ ಯೇ ಪ್ರಪದ್ಯಂತೇ  ಮಾಯಾಮೇತಾಂ ತರಂತಿ ತೇ ॥೧೪॥

ದೈವೀ ಹಿ ಏಷಾ  ಗುಣಮಯೀ ಮಮ ಮಾಯಾ ದುರತ್ಯಯಾ ।
ಮಾಮ್ ಏವ ಯೇ ಪ್ರಪದ್ಯಂತೇ  ಮಾಯಾಮ್ ಎತಾಮ್ ತರಂತಿ ತೇ-

ಗುಣಮಯವಾದ ನನ್ನ ಮಾಯೆ ತುಂಬಾ ಶಕ್ತಿಶಾಲಿ. ಅದನ್ನು ದಾಟುವುದು ಸುಲಭವಲ್ಲ. ಯಾರು ನನ್ನಲ್ಲಿ ಮೊರೆ ಹೋಗುತ್ತಾರೆ ಅವರು ಈ ಮಾಯೆಯನ್ನು ದಾಟುತ್ತಾರೆ.

ತ್ರಿಗುಣಾತ್ಮಕವಾದ ಈ ಮೂರು ಭಾವಗಳಲ್ಲಿ ಇನ್ನೊಂದು ಮುಖವಿದೆ. ತ್ರಿಗುಣದ ಮಾನಿನಿ(ಶ್ರೀ ಲಕ್ಷ್ಮಿ)ಯೂ ಕೂಡಾ ಮೂರು ಮುಖದವಳು. ಶ್ರೀ-ಭೂ-ದುರ್ಗ-ಇವು ತ್ರಿಗುಣವನ್ನು ನಿಯಂತ್ರಿಸುವ ಮೂರು ರೂಪಗಳು. ಈ ಗುಣಮಯೀ ತಾಯಿ ಮಾಯೆಯಾಗಿ ಜಗತ್ತಿನಲ್ಲಿ ತುಂಬಿದ್ದಾಳೆ. ಇಡೀ ಜಗತ್ತನ್ನು ನಿಯಂತ್ರಿಸಬಲ್ಲ  ಮಹಾ  ಶಕ್ತಿ ಸ್ವರೂಪ ಆ ಮಾಯೆ ಭಗವಂತನ ಅಧೀನ. ನಾವು ಭಗವಂತನನ್ನು ಕಾಣಬೇಕಾದರೆ ಈ ಮಾಯಾ ಪರದೆಯನ್ನು ಸರಿಸಿ ಕಾಣಬೇಕು. ಆದರೆ ನಮ್ಮಿಂದ ಅದು ಅಸಂಭವ. ಈ ಕಾರಣದಿಂದ ಭಗವಂತನನ್ನು ಸೇರುವ ಏಕೈಕ ಮಾರ್ಗ ಭಗವಂತನಲ್ಲಿ ಪೂರ್ಣ ಶರಣಾಗತಿ. ಆತ ಈ ಮಾಯಾ ಪರದೆಯನ್ನು ಸರಿಸಿ ದರ್ಶನ ಕೊಡಬಲ್ಲ. ಈ ಹಿಂದೆ ಹೇಳಿದಂತೆ ಸಂಸಾರದ ಮೋಹ ಪಾಶದಿಂದ ದೂರ ಸರಿದು ನಾರಾಯಣನಲ್ಲಿ  ಶರಣಾದಲ್ಲಿ ಆತ ನಮ್ಮನ್ನು ಈ ಮಾಯಾ ಪರದೆಯಿಂದ ದಾಟಿಸುತ್ತಾನೆ.

ಭಗವಂತನಲ್ಲದೆ  ನನಗೆ ಬೇರೆ ಅಸ್ತಿತ್ವವಿಲ್ಲ ಎನ್ನುವ ಎಚ್ಚರದಿಂದ ನಾವು ನಮ್ಮನ್ನು ಆತನಿಗೆ ಅರ್ಪಿಸಿಕೊಳ್ಳಬೇಕು. ನವವಿಧ ಭಕ್ತಿಯಲ್ಲಿ ಇದು ಶ್ರೇಷ್ಠವಾದ ಭಕ್ತಿ. ಇದನ್ನು ಆತ್ಮನಿವೇದನ ಎನ್ನುತ್ತಾರೆ.ಮೊದಲು ನಮ್ಮೊಳಗಿರುವ ಭಗವಂತನನ್ನು ಅರಿತು, ಅಹಂಕಾರ ಮಮಕಾರವನ್ನು ತೊರೆದು ನಮ್ಮನ್ನು ಸಂಪೂರ್ಣವಾಗಿ ಭಗವಂತನಲ್ಲಿ ಅರ್ಪಿಸಿಕೊಂಡಾಗ ಭಗವದ್ ಸಾಕ್ಷಾತ್ಕಾರವಾಗುತ್ತದೆ. ಇಲ್ಲಿ ಮುಖ್ಯವಾಗಿ ಬೇಕಾಗಿರುವುದು ಏಕ ಭಕ್ತಿ ಮತ್ತು ಏಕ ಶರಣಾಗತಿ. ಕೃಷ್ಣ ಹೇಳುತ್ತಾನೆ "ಯಾರು ನನಗೇ ಶರಣಾಗುತ್ತಾರೋ ಅವರು ಪಾರಾಗಿಯೇ  ಆಗುತ್ತಾರೆ" ಎಂದು. ಕೃಷ್ಣನ ಈ ಮಾತನ್ನು ಕೇಳಿದಾಗ ನಮ್ಮನ್ನು ಕೆಲವು ಪ್ರಶ್ನೆಗಳು  ಕಾಡಬಹುದು. "ಎಲ್ಲರೂ ಏಕೆ ಭಗವಂತನಲ್ಲಿ ಶರಣಾಗುವುದಿಲ್ಲ? ಕೆಟ್ಟತನ  ಜನರಲ್ಲಿ ಹೇಗೆ ಬರುತ್ತದೆ?" ಇತ್ಯಾದಿ. ಬನ್ನಿ ನಮ್ಮ ಪ್ರಶ್ನೆಗೆ ಉತ್ತರವನ್ನು ಮುಂದಿನ ಶ್ಲೋಕದಲ್ಲಿ ಹುಡುಕೋಣ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

दैवी ह्येषा गुणमयी मम माया दुरत्यया।
मामेव ये प्रपद्यन्ते मायामेतां तरन्ति ते॥

क्योंकि यह अलौकिक अर्थात अति अद्भुत त्रिगुणमयी मेरी माया बड़ी दुस्तर है, परन्तु जो पुरुष केवल मुझको ही निरंतर भजते हैं, वे इस माया को उल्लंघन कर जाते हैं अर्थात्‌ संसार से तर जाते हैं
॥14॥

Daivee hyeshaa gunamayee mama maayaa duratyayaa;
Maameva ye prapadyante maayaametaam taranti te.

Verily this divine illusion of Mine made up of the qualities (of Nature) is difficult tocross over;
those who take refuge in Me alone cross over this illusion.

ಅಧ್ಯಾಯ - 07 : ಶ್ಲೋಕ – 15

ನ ಮಾಂ ದುಷ್ಕೃತಿನೋ ಮೂಢಾಃ ಪ್ರಪದ್ಯನ್ತೇ ನರಾಧಮಾಃ ।ಮಾಯಯಾSಪಹೃತಜ್ಞಾನಾ ಆಸುರಂ ಭಾವಮಾಶ್ರಿತಾಃ ॥೧೫॥

ನ ಮಾಂ ದುಷ್ಕೃತಿನಃ ಮೂಡಾಃ ಪ್ರಪದ್ಯನ್ತೇ ನರ ಅಧಮಾಃ ।
ಮಾಯಯಾ ಅಪಹೃತ ಜ್ಞಾನಾಃ ಆಸುರಮ್  ಭಾವಮ್ ಆಶ್ರಿತಾಃ –

 ಕೆಡು ನಡೆಯ ತಿಳಿಗೇಡಿ ಹುಲು ಮನುಜರು, ಮೈಯ ಸುಖದಲ್ಲೆ ಮೈಮರೆತು ಮಾಯೆಯಿಂದ ತಿಳಿವು ಮಂಕಾದವರು. ಇವರು ನನಗೆ ಶರಣಾಗುವುದಿಲ್ಲ.

ಕೃಷ್ಣ ಈ ಶ್ಲೋಕದಲ್ಲಿ ದುಷ್ಕೃತಿಗಳ ಬಗ್ಗೆ ಹೇಳುತ್ತಾನೆ. ಇವರಲ್ಲಿ ಎರಡು ವಿಧ. ಯಾವುದೋ ಪ್ರಾರಬ್ಧ ಕರ್ಮಕ್ಕೊಳಗಾಗಿ-ಪರಿಸರದ ಪ್ರಭಾವದಿಂದ  ಪಾಪದ ದಾರಿಯಲ್ಲಿ ಸಾಗುವವರು(ಉದಾ: ಕರ್ಣ , ಅಜಾಮಿಳ) ಹಾಗು ಸ್ವಭಾತಃ ಪಾತಕಿಗಳು(ಉದಾ: ದುರ್ಯೋಧನ). ಕೃಷ್ಣ ಹೇಳುತ್ತಾನೆ “ನಾನೇ ನಾನು ನನಗೆ ಶರಣಾದವರನ್ನು ಮಾಯೆಯಿಂದ ಬಿಡಿಸುತ್ತೇನೆ. ಆದರೂ ಕೂಡಾ ಎಲ್ಲರೂ ನನಗೆ ಶರಣಾಗುವುದಿಲ್ಲ” ಎಂದು. ಸ್ವಭಾವತಃ ದುಷ್ಕೃತಿಗಳಾದವರು ಎಂದೂ ಭಗವಂತನನ್ನು ಒಪ್ಪಿಕೊಳ್ಳುವುದಿಲ್ಲ. ಅವರಿಗೆ ಎಷ್ಟೇ ಬುದ್ಧಿವಾದ ಹೇಳಿದರೂ ಅರ್ಥವಾಗುವುದಿಲ್ಲ. ಇಂತವರು ಮಾಯೆಯ ಬಲೆಯಲ್ಲಿ ಬಿದ್ದು  ಇಂದ್ರಿಯದಲ್ಲೇ  ಎಲ್ಲಾ ಸುಖವಿದೆ ಎಂದು ತಿಳಿದು ಬದುಕುತ್ತಾರೆ. ಪ್ರಭಾವದಿಂದ ಮಾಯೆಯ ಬಲೆಗೆ ಬೀಳುವ ಸಜ್ಜನರಿಗೆ ಮರಳಿ ಸರಿದಾರಿಗೆ ಬರುವ ವ್ಯವಸ್ಥೆ  ಸೃಷ್ಟಿಯಲ್ಲಿದೆ. ಜೀವ ಸ್ವಭಾವವೇ ನೀಚವಾಗಿದ್ದರೆ ಅಂತವರನ್ನು ಎಂದೂ ತಿದ್ದಲು ಸಾಧ್ಯವಿಲ್ಲ. ಅವರು ಎಂದೂ ಭಗವಂತನನ್ನು ತಿಳಿಯಲು ಪ್ರಯತ್ನಿಸುವುದಿಲ್ಲ. ಇವರು ದುಷ್ಕೃತ್ಯವೇ ತಮ್ಮ  ಕರ್ತವ್ಯ ಎಂದು ತಿಳಿದ ತಿಳಿಗೇಡಿಗಳೆನಿಸುತ್ತಾರೆ. ಇಂಥವರನ್ನು ಇಲ್ಲಿ ಕೃಷ್ಣ ‘ನರಾಧಮಃ’ ಎಂದು ಸಂಬೋಧಿಸಿದ್ದಾನೆ. ಇವರನ್ನು ಸದಾ ಮಾಯೆ ಆವರಿಸಿರುತ್ತದೆ. ಅವರಿಗೆ ತಮಗೆ ಬುದ್ಧಿ ಇಲ್ಲ ಎಂದೂ ತಿಳಿದಿರುವುದಿಲ್ಲ! ಅವರು ಎಂದೂ ಭಗವಂತನಲ್ಲಿ ಶರಣಾಗುವುದಿಲ್ಲ ಮತ್ತು ಭಗವಂತನನ್ನು ಸೇರುವುದಿಲ್ಲ.

ಪ್ರಭಾವದಿಂದ ದುಷ್ಕೃತ್ಯಕ್ಕಿಳಿದವರ ಬುದ್ಧಿಯನ್ನು ಮಾಯೆ ಆವರಿಸಿರುತ್ತದೆ. ಕಾಲ ಪಕ್ವವಾದಾಗ ಅವರು ಪರಿಸರ ಪ್ರಭಾವದಿಂದ ಕಳಚಿಕೊಂಡು ಮರಳಿ ಭಗವಂತನಿಗೆ ಶರಣಾಗುತ್ತಾರೆ. ಇದಕ್ಕೆ ಉತ್ತಮ ದೃಷ್ಟಾಂತ ಅಜಾಮಿಳನ ಜೀವನ ಕಥನ.
ಭಗವಂತ ಅವರವರ ಸ್ವಭಾವಕ್ಕೆ ತಕ್ಕಂತೆ ಅವರವರ ವ್ಯಕ್ತಿತ್ವ ವಿಕಾಸಗೊಳಿಸುತ್ತಾನೆ. ಜೀವ ಸ್ವಭಾವವನ್ನು ಆತ ಎಂದೂ ಬದಲಿಸುವುದಿಲ್ಲ. ಪಾಪಿಗಳಾದವರಿಗೆ ಪಾಪದ ಫಲ, ಪುಣ್ಯವಂತರಿಗೆ ಪುಣ್ಯದ ಫಲ. ಈ ವ್ಯವಸ್ಥೆ ಎಂದೂ ಬದಲಾಗುವುದಿಲ್ಲ. ಈ ಕಾರಣದಿಂದ ಪ್ರಪಂಚದಲ್ಲಿ ನಾವು ಎಲ್ಲಾ ವಿಧದ ಜನರನ್ನು ಕಾಣುತ್ತೇವೆ. ಸಾಮಾನ್ಯವಾಗಿ ಪ್ರಪಂಚದಲ್ಲಿ ಭಗವದ್ಭಕ್ತರು ಮತ್ತು ಜ್ಞಾನಿಗಳು ಅಲ್ಪಸಂಖ್ಯಾತರು. ಯಾವ ಕಾಲದಲ್ಲೂ ಕೂಡಾ ಇವರು ಬಹು ಸಂಖ್ಯೆಯಲ್ಲಿ ಇರುವುದಿಲ್ಲ.
ಹರಿಕಥಾಮೃತಸಾರದಲ್ಲಿ ದಾಸರು ಸತ್ವರು, ತಾಮಸರು ಮತ್ತು ರಾಜಸರ ಬಗ್ಗೆ ಈ ರೀತಿ ಸೊಗಸಾಗಿ ಹಾಡಿದ್ದಾರೆ:

ಸತ್ವಸತ್ವರು ಸತ್ವರಾಜಸ ಸತ್ವತಾಮಸ ಮೂವರೂ-
ರಜ ಸತ್ವಾಧಿಕಾರಿಗಳು ಭಗವದ್ಭಕ್ತರೆನಿಸುವರು |
ನಿತ್ಯಬದ್ಧರು ರಜೋರಜರುತ್ಪತ್ತಿ ಭೂಸ್ವರ್ಗದೊಳು-
ನರಕದಿ ಪ್ರಥ್ವಿಯೊಳು ಸಂಚರಿಸುತಿಪ್ಪರು ರಾಜಸ್ತಾಮಸರು||

ತಮಸ್ಸಾತ್ವಿಕರೆನಿಸಿಕೊಂಬರು ಅಮಿತನಾಖ್ಯಾತಾಸುರರಗಣ-
ತಮೋರಾಜಸರೆನಿಸಿಕೊಂಬರು ದೈತ್ಯ ಸಮುದಾಯ |
ತಮಸ್ತಾಮಸ ಕಲಿ ಪುರಂಧ್ರಿಯು ಅಮಿತ ದುರ್ಗುಣಪೂರ್ಣ-
ಸರ್ವಧರ್ಮರೊಳಧಮಾಧಮದುರಾತ್ಮನು ಕಲಿಯೆನಿಸಿಕೊಂಬ ||

ಮಾಯೆಯ ಪ್ರಭಾವ ನಮ್ಮ ಮೇಲೆ ಕಾಲಕ್ಕನುಗುಣವಾಗಿರುತ್ತದೆ. ಸಾತ್ವಿಕ ಯುಗದಲ್ಲಿ ಸಾತ್ವಿಕ ಸ್ವಭಾವ ಎಷ್ಟು ಬಲಿಷ್ಟ ಎಂದರೆ ಅದು ಸಾತ್ವಿಕರು ತಾಮಸ ಪ್ರಭಾವಕ್ಕೆ ಒಳಗಾಗದೆ ಶುದ್ಧವಾಗಿರುವಂತೆ ಮಾಡುತ್ತದೆ. ಆದರೆ ಕಲಿಯುಗದಲ್ಲಿ ಎಲ್ಲರೂ  ಬಹಳ ಸುಲಭವಾಗಿ ತಾಮಸ ಪ್ರಭಾವಕ್ಕೊಳಗಾಗುತ್ತಾರೆ. ಒಂದು ವೇಳೆ ಅದನ್ನು ಮೀರಿ ಭಗವಂತನತ್ತ ಮನಸ್ಸು ಹರಿದರೆ ಅದು ಪರಮ ಶ್ರೇಷ್ಠ. ಇದಕ್ಕಾಗಿ ‘ಕಲಿಯುಗದಲ್ಲಿ ಹರಿನಾಮ ನೆನೆದರೆ ಕುಲಕೋಟಿ ಉದ್ಧಾರವಾಗುವುದು’ ಎನ್ನುತ್ತಾರೆ. ಕಲಿಯುಗದಲ್ಲಿ ತಾಮಸ ಪ್ರಭಾವಕ್ಕೊಳಗಾಗಿ ಮಾಡುವ ತಪ್ಪಿಗೆ ಶಿಕ್ಷೆ ಕಡಿಮೆ. ಹಾಗೇ ಪುಣ್ಯಕ್ಕೆ ಮಹಾ ಫಲ.

ದುಷ್ಕೃತಿಗಳ ಬಗ್ಗೆ ವಿವರಿಸಿದ ಕೃಷ್ಣ, ಪುಣ್ಯವಂತ ಸಜ್ಜನರ ವಿಧವನ್ನು ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

न मां दुष्कृतिनो मूढाः प्रपद्यन्ते नराधमाः।
माययापहृतज्ञाना आसुरं भावमाश्रिताः॥

माया द्वारा जिनका ज्ञान हरा जा चुका है, ऐसे आसुर-स्वभाव को धारण किए हुए, मनुष्यों में नीच, दूषित कर्म करने वाले मूढ़ लोग मुझको नहीं भजते
॥15॥

Na maam dushkritino moodhaah prapadyante naraadhamaah;
Maayayaapahritajnaanaa aasuram bhaavamaashritaah.

The evil-doers and the deluded, who are the lowest of men, do not seek Me;
they whoseknowledge is destroyed by illusion follow the ways of demons.

 ಅಧ್ಯಾಯ - 07 : ಶ್ಲೋಕ – 16

ಚತುರ್ವಿಧಾ ಭಜಂತೇ ಮಾಂ ಜನಾಃ ಸುಕೃತಿನೋSರ್ಜುನ   ।ಆರ್ತೋ ಜಿಜ್ಞಾಸುರರ್ಥಾರ್ಥೀ ಜ್ಞಾನೀ ಚ ಭರತರ್ಷಭ ॥೧೬॥

ಚತುರ್ವಿಧಾಃ ಭಜಂತೇ ಮಾಮ್  ಜನಾಃ ಸುಕೃತಿನಃ ಅರ್ಜುನ ।
ಆರ್ತಃ ಜಿಜ್ಞಾಸುಃ ಅರ್ಥ ಅರ್ಥೀ ಜ್ಞಾನೀ ಚ ಭರತ ಋಷಭ-

ಓ ಭರತ ವಂಶದ ವೀರ ಅರ್ಜುನ, ಪುಣ್ಯವಂತರಾದ ನಾಲ್ಕು ಬಗೆಯ ಜನರು ನನ್ನಲ್ಲಿ ಭಕ್ತಿ ಇಡುತ್ತಾರೆ: ಸಂಕಟದಲ್ಲಿರುವವರು, ಸಿರಿಯನ್ನು ಬಯಸುವವರು, ತಿಳಿಯ ಬಯಸುವವನು ಮತ್ತು ತಿಳಿದವನು.

ದುಷ್ಕೃತಿಗಳ ಬಗ್ಗೆ ಮೊದಲು ವಿವರಿಸಿದ ಕೃಷ್ಣ ಈ ಶ್ಲೋಕದಲ್ಲಿ ಸುಕೃತಿಗಳ ಬಗ್ಗೆ  ವಿವರಿಸುತ್ತಾನೆ. ಭಗವಂತನ ಕಡೆಗೆ ಸಾಗುವುದು ಒಂದು ಸರಳರೇಖೆಯ ದಾರಿ ಇದ್ದಂತೆ. ಅದು ಕವಲು ದಾರಿ ಅಲ್ಲ. ಈ ಸರಳರೇಖೆಯಲ್ಲಿ ಭಗವಂತನಿಗೆ ಬೆನ್ನು ಹಾಕಿ ಸಾಗುವವರು ಸ್ವಭಾವತಃ ದುಷ್ಕೃತಿಗಳು, ಭಗವಂತನಿಗೆ ಬೆನ್ನು ಹಾಕಿ ಸಾಗಿ, ನಂತರ ಅರಿವು ಮೂಡಿ ಪುನಃ ಭಗವಂತನತ್ತ ಮುಖ ಹಾಕುವವರು ದುಷ್ಕೃತಿಗಳಾಗಿದ್ದು ಸುಕೃತಿಗಳಾಗುವವರು, ಇನ್ನು ಭಗವಂತನತ್ತ ಮುಖ ಮಾಡಿ ಸಾಗುವವರು ಸ್ವಭಾವತಃ ಸುಕೃತಿಗಳು. ಇವರು ಭಗವಂತನನ್ನು ಭಜಿಸುವವರು. ಈ ಸುಕೃತಿಗಳಲ್ಲಿ ನಾಲ್ಕು ವಿಧ: (೧) ಆರ್ತಃ  (೨) ಜಿಜ್ಞಾಸುಃ (೩) ಅರ್ಥ ಅರ್ಥೀ (೪) ಜ್ಞಾನಿ.

ಕೃಷ್ಣ ಹೇಳುತ್ತಾನೆ “ನನ್ನನ್ನು ನಾಲ್ಕು ವಿಧದಲ್ಲಿ ಭಜಿಸುವ ಸುಕೃತ ಜನರಿದ್ದಾರೆ” ಎಂದು. ಇಲ್ಲಿ ಭಜಿಸುವುದು ಅಥವಾ ‘ಭಜನೆ’ ಅಂದರೆ ‘ಭಕ್ತಿಯಿಂದ ಭಗವಂತನನ್ನು ಆರಾದಿಸುವುದು’ ಎಂದರ್ಥ.  ಭಜ ಸೇವಾಯಾಂ ಧಾತು. ಭಗವಂತನನ್ನು ಎಲ್ಲವುದಕ್ಕಿಂತ ಹಿರಿದಾಗಿ ಮತ್ತು ಹೆಚ್ಚಾಗಿ ಪ್ರೀತಿಸಿ, ಆ ಪ್ರೀತಿಗೆ ತಕ್ಕಂತೆ ನಡೆದುಕೊಳ್ಳುವುದು ಭಜನೆ. ಈ ರೀತಿ ಭಜಿಸುವವರಲ್ಲಿ ಮೊದಲನೆಯವರು ಆರ್ತರು.

ಮನುಷ್ಯ ಯಾವುದೋ ಒಂದು ತೊಂದರೆಗೆ ಸಿಕ್ಕಿಕೊಂಡಾಗ, ದುಃಖಕ್ಕೊಳಗಾದಾಗ, ಪರಿಹಾರ ಕೋರಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಾನೆ. ಇದು ಆರ್ತಃ ಭಕ್ತಿ. ಈ ಭಕ್ತಿಯಲ್ಲಿ ಅತ್ಯಂತ ಕೆಳ ಮಟ್ಟದಿಂದ ಅತ್ಯಂತ ಶ್ರೇಷ್ಠ ಮಟ್ಟನ್ನು ಕಾಣಬಹುದು. ಕಷ್ಟ ಬಂದಾಗ ದೇವರನ್ನು ಆರ್ತನಾಗಿ ಭಜಿಸಿ ಸುಖ ಬಂದಾಗ ಸಂಪೂರ್ಣ ಮರೆತರೆ ‘ಸಂಕಟ ಬಂದಾಗ ವೆಂಕಟರಮಣ’ ಎನ್ನುವಂತೆ ಅದು ಅತ್ಯಂತ ಕೆಳಮಟ್ಟದ ಆರ್ತಭಕ್ತಿಯಾಗುತ್ತದೆ. ಆರ್ತ ಭಕ್ತಿಯಲ್ಲಿ ಅತ್ಯಂತ ಶ್ರೇಷ್ಠ ಮಟ್ಟದ ಭಕ್ತಿಗೆ ಉತ್ತಮ ದೃಷ್ಟಾಂತ ದ್ರೌಪದಿ. ಸಭೆಯಲ್ಲಿ ಆಕೆಯ ಮಾನಭಂಗ ಪ್ರಸಂಗ ಎದುರಾದಾಗ, ಆಕೆ ಕೃಷ್ಣನನ್ನು ಆರ್ತನಾದದಿಂದ ಕೂಗಿ ಭಜಿಸುತ್ತಾಳೆ.(ಇಲ್ಲಿ ದ್ರೌಪದಿ ಕೃಷ್ಣನನ್ನು ನಿರಂತರ ಭಜಿಸುತ್ತಿದ್ದಳು ಎನ್ನುವುದನ್ನು ನಾವು ಮರೆಯಬಾರದು). ಮೊಸಳೆ ತನ್ನ ಕಾಲನ್ನು ಕಚ್ಚಿ ಹಿಡಿದಾಗ ಗಜೇಂದ್ರ ಮಾಡಿದ್ದೂ ಕೂಡಾ ಆರ್ತ ಭಕ್ತಿ.

ಆರ್ತ ಭಕ್ತಿಯಲ್ಲಿ ಒಂದು ಸಮಸ್ಯೆ ಇದೆ. ಸಾಮಾನ್ಯವಾಗಿ ನಮಗೆ ಸುಖ ಬಂದಾಗ ನಾವು ಭಗವಂತನನ್ನು ಮರೆತುಬಿಡುತ್ತೇವೆ. ನಮ್ಮೆಲಾ ಐಶ್ವರ್ಯ-ಸಂಪತ್ತು ‘ನಮ್ಮ ದುಡಿಮೆಯ ಫಲ’ ಅಂದುಕೊಳ್ಳುತ್ತೇವೆ. ಆಗ ನಮಗೆ ದೇವರು ನನಪಿಗೆ ಬರುವುದೇ ಇಲ್ಲ. ಆದರೆ ಒಂದು ವೇಳೆ ಏನಾದರೂ ಸಮಸ್ಯೆ ಬಂದರೆ-ಮೊದಲು ನೆನಪಿಗೆ ಬರುವುದು ದೇವರು. ಎಂದೆಂದೂ ‘ದೇವರು ಸುಖವನ್ನೇಕೆ  ಕೊಟ್ಟ’ ಎಂದು ಯೋಚಿಸದ ನಾವು, ಕಷ್ಟ ಬಂದಾಗ  ‘ದೇವರು ನನಗೇಕೆ ಹೀಗೆ ಮಾಡಿದ’ ಎನ್ನಲಾರಭಿಸುತ್ತೇವೆ!   ಸಾಮಾನ್ಯವಾಗಿ ಜನರು ಸಂಕಟ ಬಂದಾಗ  ಮೊದಲು ಜೋತಿಷಿಗಳ ಬಳಿ ಹೋಗುತ್ತಾರೆ. ಜೋತಿಷಿಗಳು  ಒಂದು ಪರಿಹಾರ ಮಾರ್ಗವನ್ನು ಸೂಚಿಸುತ್ತಾರೆ. ನವಗ್ರಹ ಪೂಜೆ, ನಾಗಾರಾಧನೆ,ಗಣಪತಿ ಪೂಜೆ, ದೇವೀ ಆರಾದನೆ ಇತ್ಯಾದಿ. ಇಲ್ಲಿ  ಕೆಲವು ಶಾಸ್ತ್ರ ಜ್ಞಾನವಿಲ್ಲದ ಮತ್ತು ಅಧ್ಯಾತ್ಮದ ಅರಿವಿಲ್ಲದ ಸಾಮಾನ್ಯ ಜೋತಿಷಿಗಳು, ಜನರಿಗೆ ಸರಿಯಾದ ಮಾರ್ಗದರ್ಶನ ಮಾಡದೇ ತಪ್ಪು ಮಾರ್ಗ ತೋರಿಸುವ ಸಾಧ್ಯತೆ ಹೆಚ್ಚು. ಕೆಲವರು  “ನೀನು ವಿಷ್ಣು ಪೂಜೆ ಮಾಡಿದ್ದರಿಂದ ದೇವಿ ಕೊಪಗೊಂಡಿದ್ದಾಳೆ!!!” ಎಂಬಿತ್ಯಾದಿ  ಅಸಂಬದ್ಧ ಹೇಳಿಕೆ ಕೊಟ್ಟು,  ಜನರನ್ನು ದಾರಿತಪ್ಪಿಸುವ ಪ್ರಸಂಗವಿದೆ.   ಹೀಗಾದಾಗ ಸಾಮಾನ್ಯ ಜನರು ಎಲ್ಲಾ ದೇವತೆಗಳನ್ನು ಬೇರೆ ಬೇರೆಯಾಗಿ ಪೂಜಿಸಿ, ಏಕಭಕ್ತಿಯಿಂದ ದೂರ ಸರಿಯುತ್ತಾರೆ. ಇದರಿಂದಾಗಿ ಭಗವಂತನನ್ನು ಪ್ರೀತಿಸುವ ಬದಲು ಭಯದಿಂದ ‘ದೇವರಿಂದ ನನಗೆ ಯಾವ ತೊಂದರೆ ಆಗದಿರಲಿ’ ಎನ್ನುವಂತೆ ಭಕ್ತಿ ಮಾಡುವ ಸಾಧ್ಯತೆ ಇದೆ! ಈ ಎಲ್ಲ ಕಾರಣದಿಂದ ನಿರಂತರಭಕ್ತಿ ಮತ್ತು ಏಕಭಕ್ತಿ ಆರ್ತಭಕ್ತರಲ್ಲಿ ಇಲ್ಲದೇ ಇರುವ ಸಾಧ್ಯತೆ ಹೆಚ್ಚು.

ಆರ್ತರು ಕಷ್ಟವನ್ನು ನೀಗುವಂತೆ ಭಗವಂತನಲ್ಲಿ ಭಕ್ತಿ ಮಾಡಿದರೆ, ಜಿಜ್ಞಾಸುಗಳು ಜ್ಞಾನಕ್ಕಾಗಿ ಭಗವಂತನಲ್ಲಿ ಭಕ್ತಿ ಮಾಡುತ್ತಾರೆ. ಅದೇ ರೀತಿ ಅರ್ಥಾರ್ಥಿಗಳು ಐಹಿಕ ಸಂಪತ್ತಿಗಾಗಿ,  ಐಶ್ವರ್ಯಕ್ಕಾಗಿ, ಏನನ್ನೋ ಪಡೆಯುವುದಕ್ಕಾಗಿ  ಭಗವಂತನನ್ನು ಪೂಜಿಸುತ್ತಾರೆ.
ಈ ಮೂರು ಭಕ್ತರಿಗಿಂತ ಭಿನ್ನ ನಾಲ್ಕನೇ ವಿಧದ ಭಕ್ತ. ಆತ ಜ್ಞಾನಿ. ಆತ ಏನೋ ಬೇಕು ಅಥವ ಬೇಡ ಎಂದು ಭಗವಂತನನ್ನು ಪೂಜಿಸುವುದಿಲ್ಲ; ಬದಲಿಗೆ ಭಗವಂತನ ಮಹಿಮೆಯನ್ನು ಸಂಪೂರ್ಣ ತಿಳಿದ ಆತ ಸಹಜವಾಗಿ ಭಗವಂತನನ್ನು ಅನನ್ಯವಾಗಿ ಪ್ರೀತಿಸುತ್ತಿರುತ್ತಾನೆ. ಈತನಲ್ಲಿ ಏಕಭಕ್ತಿ ಮತ್ತು ನಿರಂತರ ಭಕ್ತಿ ಇರುತ್ತದೆ. ಯಾವುದೇ ಐಹಿಕ ಫಲಾಪೇಕ್ಷೆಯಿಂದ ಈತ ಭಗವಂತನನ್ನು ಭಜಿಸುವುದಿಲ್ಲ.

ಮುಂದಿನ ಶ್ಲೋಕಕ್ಕೆ ಹೋಗುವ ಮೊದಲು ಇಲ್ಲಿ ನಾವು ಏಕಭಕ್ತಿ ಅಂದರೆ ಏನು ಎನ್ನುವುದನ್ನು ಸ್ಪಷ್ಟವಾಗಿ ತಿಳಿದಿರಬೇಕು. ಏಕಭಕ್ತಿ ಎಂದರೆ ಎಲ್ಲಾ ದೇವತೆಗಳನ್ನು, ಗುರು-ಹಿರಿಯರನ್ನು ನಿರ್ಲಕ್ಷಿಸಿ ಕೇವಲ ಭಗವಂತನನ್ನು ಪೂಜಿಸುವುದಲ್ಲ. ಒಂದು ವೇಳೆ ನಾವು ಹೀಗೆ ಮಾಡಿದರೆ ಅದು ಭಗವಂತನನ್ನು ಅವಮಾನ ಮಾಡಿದಂತೆ. ಉದಾಹರಣೆಗೆ ನಮಗೆ ಯಾವುದೋ ತೊಂದರೆ ಬಂದಾಗ  ಜೋತಿಷಿಯೊಬ್ಬರು ‘ನವಗ್ರಹ ಶಾಂತಿ’ ಮಾಡಿಸಿ ಪರಿಹಾರವಾಗುತ್ತದೆ  ಎಂದು ಹೇಳುತ್ತಾರೆ. ಹೀಗೆ ಹೇಳಿದಾಗ ನಾವು ಅದನ್ನು ನಿರ್ಲಕ್ಷಿಸಿ ಕೇವಲ ಭಗವಂತನನ್ನು ಮಾತ್ರ ನಾನು ಭಜಿಸುತ್ತೇನೆ, ಭಗವಂತನ ಅಧೀನ ದೇವತೆಯ ಪೂಜೆಯ ಅಗತ್ಯವೇನು ಎಂದು ತಿಳಿದುಕೊಂಡರೆ ಅದು ತಪ್ಪಾಗುತ್ತದೆ. ನವಗ್ರಹಗಳ ಪರಿವಾರ ಸಹಿತನಾಗಿ ಕೂತ ಭಗವಂತನಿಗೆ ಮಾಡುವ ಪೂಜೆ ‘ನವಗ್ರಹ ಪೂಜೆ’. ಇದು ಯಾವುದರಿಂದ ಸಮಸ್ಯೆ ಬಂತೋ ಅದರ ಮುಖಂಡನಾಗಿ ಕುಳಿತ ಭಗವಂತನ ಪೂಜೆ. ಭಗವಂತನ ಸಮಸ್ತ ಪರಿವಾರದ ವೈಭವನ್ನು ನೆನೆಸಿಕೊಂಡು ಯಾವುದೇ ಪೂಜೆ ಮಾಡಿದರೂ ಅದು ಶ್ರೇಷ್ಠ ಪೂಜೆ ಎನಿಸುತ್ತದೆ. ಸಮಸ್ತ ದೇವತೆಗಳ ಸಹಿತನಾದ ಭಗವಂತನ ಉಪಾಸನೆಯೇ ಏಕಭಕ್ತಿ. ಭಗವಂತ ಏಕಾಕಿ ಅಲ್ಲ. ಆತ ಅನಂತ ಪ್ರಜಾಪತಿ. ಆದ್ದರಿಂದ ಭಗವಂತನನ್ನು ಪ್ರಧಾನವಾಗಿಟ್ಟುಕೊಂಡು ಇತರ ದೇವತೆಗಳನ್ನು ಭಗವಂತನ ಪರಿವಾರವಾಗಿ ತಿಳಿದು ನಿಷ್ಠೆಯಿಂದ ಪೂಜಿಸಬೇಕು. ಇದು ದೇವರನ್ನು ಸೇರಲು ನಮಗೆ ಮಾರ್ಗದರ್ಶನ ಮಾಡುವ ದೇವತೆಗಳೂ ಇಷ್ಟಪಡುವ ಅತಿಶ್ರೇಷ್ಠ ಭಕ್ತಿ. ಒಂದು ವೇಳೆ ನಾವು ಭಗವಂತನನ್ನು ಮರೆತು ಕೇವಲ ಒಂದು ದೇವತೆಯನ್ನು ಪೂಜಿಸಿದರೆ ಆ ದೇವತೆ ನಮ್ಮ ಪೂಜೆಯನ್ನು ಸ್ವೀಕರಿಸುವುದಿಲ್ಲ. ಪೂಜೆ ಪರಿಪೂರ್ಣವಾಗಬೇಕಾದರೆ ನಾವು ಏಕಭಕ್ತಿಯನ್ನು ಭಗವಂತನಲ್ಲಿ ತೋರಬೇಕು.

ಗುರುಭಕ್ತಿ ಕೂಡಾ ಇದೇ ರೀತಿ. ಗುರುಭಕ್ತಿಯಲ್ಲಿ ನಾವು ಕಾಣಬೇಕಾಗಿರುವುದು ಗುರುವಿನ  ಅಂತರಂಗದೊಳಗಿರುವ ಭಗವಂತನನ್ನು. ಜ್ಞಾನಿ ಎಲ್ಲವುದರಲ್ಲೂ ಅದರ ಅಂತರ್ಯಾಮಿಯಾದ ಭಗವಂತನನ್ನು ಕಾಣುತ್ತಾ, ಐಹಿಕ ಫಲಾಪೇಕ್ಷೆ ಇಲ್ಲದ ಏಕಭಕ್ತಿ ಮತ್ತು ನಿರಂತರ ಭಕ್ತಿಯನ್ನು ರೂಢಿಸಿಕೊಂಡಿರುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

चतुर्विधा भजन्ते मां जनाः सुकृतिनोऽर्जुन।
आर्तो जिज्ञासुरर्थार्थी ज्ञानी च भरतर्षभ॥

हे भरतवंशियों में श्रेष्ठ अर्जुन! उत्तम कर्म करने वाले अर्थार्थी (सांसारिक पदार्थों के लिए भजने वाला), आर्त (संकटनिवारण के लिए भजने वाला) जिज्ञासु (मेरे को यथार्थ रूप से जानने की इच्छा से भजने वाला) और ज्ञानी- ऐसे चार प्रकार के भक्तजन मुझको भजते हैं
॥16॥

Chaturvidhaa bhajante maam janaah sukritino’rjuna;
Aarto jijnaasurartharthee jnaanee cha bharatarshabha.

Four kinds of virtuous men worship Me, O Arjuna! They are the distressed, the seeker ofknowledge, the seeker of wealth, and the wise, O lord of the Bharatas!


ಅಧ್ಯಾಯ - 07 : ಶ್ಲೋಕ – 17

ತೇಷಾಂ ಜ್ಞಾನೀ ನಿತ್ಯಯುಕ್ತ ಏಕಭಕ್ತಿರ್ವಿಶಿಷ್ಯತೇ ।ಪ್ರಿಯೋ ಹಿ ಜ್ಞಾನಿನೋSತ್ಯರ್ಥಮಹಂ ಸ ಚ ಮಮ ಪ್ರಿಯಃ   ॥೧೭॥

ತೇಷಾಮ್  ಜ್ಞಾನೀ ನಿತ್ಯಯುಕ್ತಃ  ಏಕಭಕ್ತಿಃ ವಿಶಿಷ್ಯತೇ ।
ಪ್ರಿಯಃ ಹಿ ಜ್ಞಾನಿನಃ ಅತ್ಯರ್ಥಮ್ ಅಹಮ್  ಸಃ ಚ ಮಮ ಪ್ರಿಯಃ –

ಅವರಲ್ಲಿ ತಿಳಿದವನು ಮಿಗಿಲಾದವನು ; ನನ್ನಲ್ಲೇ ಭಕ್ತಿಯನ್ನಿಟ್ಟು, ನನ್ನನೇ ಸದಾ ನೆನೆಯುವವನು. ತಿಳಿದವನಿಗೆ ನಾನೆಂದರೆ ತುಂಬಾ ಇಷ್ಟ, ಅವನೆಂದರೆ ನನಗೂ ತುಂಬಾ ಇಷ್ಟ.

ಮೇಲೆ ಹೇಳಿದ ನಾಲ್ಕು ರೀತಿಯ ಭಕ್ತರಲ್ಲಿ ಜ್ಞಾನಿ ಎಲ್ಲರಿಗಿಂತ ಶ್ರೇಷ್ಠ. ಆತ ಜ್ಞಾನಪೂರ್ವಕವಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಭಗವಂತನನ್ನು ತಿಳಿದು ಸಹಜವಾಗಿ  ಪ್ರೀತಿಸುತ್ತಾನೆ. ಹಿಂದಿನ ಅಧ್ಯಾಯಗಳಲ್ಲಿ ನೋಡಿದಂತೆ ನಾವು ಏನನ್ನು ಮಾಡುತ್ತೇವೋ ಅದನ್ನೇ ಪಡೆಯುತ್ತೇವೆ. ಭಗವಂತನನ್ನು ಹೇಗೆ ಕಾಣುತ್ತೇವೋ ಹಾಗೇ ಭಗವಂತ ನಮ್ಮನ್ನು ಕಾಣುತ್ತಾನೆ. ಈ ಕಾರಣದಿಂದ ಜ್ಞಾನಪೂರ್ವಕವಾದ, ಫಲಾಪೇಕ್ಷೆ ಇಲ್ಲದ, ಏಕಭಕ್ತಿಯುಳ್ಳ ಜ್ಞಾನಿ ಭಗವಂತನಿಗೆ ಬಹಳ ಹತ್ತಿರದಲ್ಲಿರುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

तेषां ज्ञानी नित्ययुक्त एकभक्तिर्विशिष्यते।
प्रियो हि ज्ञानिनोऽत्यर्थमहं स च मम प्रियः॥

उनमें नित्य मुझमें एकीभाव से स्थित अनन्य प्रेमभक्ति वाला ज्ञानी भक्त अति उत्तम है क्योंकि मुझको तत्व से जानने वाले ज्ञानी को मैं अत्यन्त प्रिय हूँ और वह ज्ञानी मुझे अत्यन्त प्रिय है
॥17॥

Teshaam jnaanee nityayukta eka bhaktirvishishyate;
Priyo hi jnaanino’tyarthamaham sa cha mama priyah.

Of them, the wise, ever steadfast and devoted to the One, excels (is the best);
for, I amexceedingly dear to the wise and he is dear to Me.

ಅಧ್ಯಾಯ - 07 : ಶ್ಲೋಕ – 18

ಉದಾರಾಃ ಸರ್ವ ಏವೈತೇ ಜ್ಞಾನೀ ತ್ವಾತ್ಮೈವ ಮೇ ಮತಮ್ ।ಆಸ್ಥಿತಃ ಸ ಹಿ ಯುಕ್ತಾತ್ಮಾ ಮಾಮೇವಾನುತ್ತಮಾಂ ಗತಿಮ್ ॥೧೮॥

ಉದಾರಾಃ  ಸರ್ವೇ ಏವ ಏತೇ  ಜ್ಞಾನೀ ತು ಆತ್ಮಾ ಏವ  ಮೇ ಮತಮ್ ।
ಆಸ್ಥಿತಃ ಸಃ ಹಿ ಯುಕ್ತಾತ್ಮಾ ಮಾಮೇವಾನುತ್ತಮಾಂ ಗತಿಮ್ –

ಇವರೆಲ್ಲರೂ ದೊಡ್ದವರೇ. ತಿಳಿದವನಂತು ತೀರ ನನ್ನವನು ಎಂದು ನನ್ನ ತೀರ್ಮಾನ. ಏಕೆಂದರೆ ಅವನು ಹಿರಿಯ ನೆಲೆಯಾದ ನನ್ನಲ್ಲೆ ಬಗೆ ನೆಟ್ಟು ನನ್ನಲ್ಲೆ ನೆಲೆಗೊಂಡವನು.

ಕೃಷ್ಣ ಹೇಳುತ್ತಾನೆ “ಭಕ್ತಿ ಮಾರ್ಗದಲ್ಲಿ ನಡೆಯುವ ಈ ಎಲ್ಲಾ ರೀತಿಯ ಸುಕೃತಿಗಳೂ ಉತ್ತಮರೆ ; ಆದರೆ ಜ್ಞಾನಿ ಮಾತ್ರ ನನಗೆ ತುಂಬಾ ಹತ್ತಿರದವನು ಮತ್ತು ಆತ್ಮೀಯ” ಎಂದು. ಏಕೆಂದರೆ ನಮಗೆ ತಿಳಿದಂತೆ ಜ್ಞಾನವಿಲ್ಲದ ಭಕ್ತಿ ಪೂರ್ಣಭಕ್ತಿ ಆಗುವುದಿಲ್ಲ. ಜ್ಞಾನಪೂರ್ವಕವಾಗಿ ಭಕ್ತಿ ಮಾಡುವವ ನೇರವಾಗಿ ಭಗವಂತನನ್ನು ಹೋಗಿ ಸೇರುತ್ತಾನೆ. ಆದ್ದರಿಂದ ಅದು ಶ್ರೇಷ್ಠವಾದ ಭಕ್ತಿ.
ಜ್ಞಾನಿಗಳು ಆರ್ತರಾಗಿರಬಹುದು, ಜಿಜ್ಞಾಸುಗಳಾಗಿರಬಹುದು ಅಥವಾ ಅರ್ಥಾರ್ಥಿಗಳಾಗಿರಬಹುದು(ಉದಾಹರಣೆಗೆ ಅರ್ಜುನ). ಆದರೆ ಎಲ್ಲಾ ಆರ್ತರು, ಜಿಜ್ಞಾಸುಗಳು ಮತ್ತು ಅರ್ಥಾರ್ಥಿಗಳು ಜ್ಞಾನಿಗಳಾಗಿರಬೇಕೆಂದೇನಿಲ್ಲ. ಜ್ಞಾನಿಗೆ ಸದೃಶವಾದ ಭಕ್ತಿ ಇನ್ನೊಂದಿಲ್ಲ. ಜ್ಞಾನಿಯ ಮನಸ್ಸು ಸದಾ ಭಗವಂತನಲ್ಲಿ ನೆಟ್ಟಿರುತ್ತದೆ. ಭಕ್ತಿಯ ಮಾರ್ಗದಲ್ಲಿ ಸಾಗುವ ಎಲ್ಲರೂ ದೊಡ್ಡವರಾದರೂ ಕೂಡಾ, ಜ್ಞಾನಿ ಮಾತ್ರ ಭಗವಂತನಿಗೆ ಅತೀ ಆತ್ಮೀಯ.

ಮೇಲೆ ಹೇಳಿದಂತೆ ಜ್ಞಾನಿ ಅರ್ಥಾರ್ಥಿಯಾಗಿರಬಹುದು. ಈ ವಿಚಾರ  ನಿಮಗೆ ಸ್ವಲ್ಪ ಗೊಂದಲವೆನಿಸಬಹುದು. ಪ್ರಹ್ಲಾದನ ಜೀವನದ ಒಂದು ಘಟನೆಯನ್ನು ನೋಡಿದರೆ ಈ ವಿಚಾರ ನಮಗೆ ಅರ್ಥವಾಗುತ್ತದೆ. ಪ್ರಹ್ಲಾದನ ಕಥೆ ನಮಗೆಲ್ಲರಿಗೂ ತಿಳಿದಿದೆ. ಆತ ಮಹಾನ್ ಜ್ಞಾನಿ. ಇಂತಹ ಪ್ರಹ್ಲಾದ ತನ್ನ ತಂದೆ ಹಿರಣ್ಯಾಕ್ಷನನ್ನು ಕೊಂದ ನರಸಿಂಹ ರೂಪಿ ಭಗವಂತನಲ್ಲಿ ಒಂದು ಪ್ರಾರ್ಥನೆ ಮಾಡುತ್ತಾನೆ. “ನನ್ನ ತಂದೆ ತಿಳುವಳಿಕೆ ಇಲ್ಲದೆ, ನಿನ್ನ ಮಹತ್ವ ಗೊತ್ತಿಲ್ಲದೆ, ನಿನ್ನನ್ನು ನಿಂದೆ ಮಾಡಿದ. ಆ ದೋಷಕ್ಕೆ ಎಂದೂ ಪರಿಹಾರ ಇಲ್ಲ ಎನ್ನುವುದು ನನಗೆ ತಿಳಿದಿದೆ. ಆದರೂ ಅಜ್ಞಾನದಿಂದ ಆತ ಮಾಡಿದ ತಪ್ಪನ್ನು ಕ್ಷಮಿಸು” ಎಂದು. ಇಲ್ಲಿ ಯಾವುದೇ ಸ್ವಾರ್ಥ ನಮಗೆ ಕಾಣುವುದಿಲ್ಲ. ಆದ್ದರಿಂದ ಇದು ಜ್ಞಾನಿ ಅರ್ಥಾರ್ಥಿ ಹೇಗೆ ಆಗುತ್ತಾನೆ ಎನ್ನುವುದಕ್ಕೆ ಉತ್ತಮ ನಿದರ್ಶನ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

उदाराः सर्व एवैते ज्ञानी त्वात्मैव मे मतम्‌।
आस्थितः स हि युक्तात्मा मामेवानुत्तमां गतिम्‌॥

ये सभी उदार हैं, परन्तु ज्ञानी तो साक्षात्‌ मेरा स्वरूप ही है- ऐसा मेरा मत है क्योंकि वह मद्गत मन-बुद्धिवाला ज्ञानी भक्त अति उत्तम गतिस्वरूप मुझमें ही अच्छी प्रकार स्थित है
॥18॥

Udaaraah sarva evaite jnaanee twaatmaiva me matam;
Aasthitah sa hi yuktaatmaa maamevaanuttamaam gatim.

Noble indeed are all these;
but I deem the wise man as My very Self;
for, steadfast inmind, he is established in Me alone as the supreme goal.


ಅಧ್ಯಾಯ - 07 : ಶ್ಲೋಕ – 19

ಬಹೂನಾಂ ಜನ್ಮನಾಮಂತೇ ಜ್ಞಾನವಾನ್ ಮಾಂ ಪ್ರಪದ್ಯತೇ ।ವಾಸುದೇವಃ ಸರ್ವಮಿತಿ ಸ ಮಹಾತ್ಮಾ ಸುದುರ್ಲಭಃ ॥೧೯॥

ಬಹೂನಾಮ್  ಜನ್ಮನಾಮ್ ಅಂತೇ ಜ್ಞಾನವಾನ್ ಮಾಮ್  ಪ್ರಪದ್ಯತೇ   ।
ವಾಸುದೇವಃ ಸರ್ವಮ್ ಇತಿ ಸಃ  ಮಹಾ ಆತ್ಮಾ ಸು ದುರ್ಲಭಃ  -

ಬಹಳ ಜನ್ಮಗಳ ಸಾಧನೆಯ ಕೊನೆಯಲ್ಲಿ ಅರಿವು ಪಡೆದು ನನ್ನನ್ನು ಸೇರುತ್ತಾನೆ. ‘ವಾಸುದೇವನೆ ಎಲ್ಲೆಡೆ ತುಂಬಿರುವ ಪೂರ್ಣತತ್ವ’ ಎಂದರಿತ ಅಂಥ ಹಿರಿಯ ವ್ಯಕ್ತಿ ತುಂಬ ವಿರಳ.

ಜೀವನದಲ್ಲಿ ಜ್ಞಾನಿ ಎನಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೃಷ್ಣ ಹೇಳುತ್ತಾನೆ: “ಬಹೂನಾಂ ಜನ್ಮನಾಮಂತೇ ಜ್ಞಾನವಾನ್ ಮಾಂ ಪ್ರಪದ್ಯತೇ” ಎಂದು. ಅಂದರೆ “ಅನೇಕಾನೇಕ ಜನ್ಮಗಳ ಸಾಧನೆಯಿಂದ, ಜಿಜ್ಞಾಸೆಯಿಂದ, ಅಧ್ಯಯನದಿಂದ ಜ್ಞಾನ ಬರುತ್ತದೆ ಮತ್ತು ಇಂತಹ  ಜ್ಞಾನಿ ಸಹಜವಾಗಿ ನನಗೆ ಶರಣಾಗುತ್ತಾನೆ”.  ಹಿಂದಿನ ಅಧ್ಯಾಯಗಳಲ್ಲಿ ಹೇಳಿದಂತೆ ಜ್ಞಾನ ಸಂಪಾದನೆ ಒಂದು ಜನ್ಮದ ಸಾಧನೆ ಅಲ್ಲ. ಆದರೆ ಒಂದು ಜನ್ಮದಲ್ಲಿ ಮಾಡಿದ ಅಧ್ಯಾತ್ಮ ಸಾಧನೆ ಎಂದೂ ನಷ್ಟವಾಗುವುದಿಲ್ಲ. ಹುಟ್ಟುವಾಗಲೇ ನಾವು ನಮ್ಮ ಹಿಂದಿನ ಜನ್ಮದ ಅಧ್ಯಾತ್ಮ ಸಾಧನೆಯ ಜ್ಞಾನವನ್ನು ಹೊತ್ತು ಹುಟ್ಟುತ್ತೇವೆ. ಇದು ಮಾನವನಿಗೆ ಭಗವಂತನ ಮಹಾ ಪ್ರಸಾದ. ಜ್ಞಾನ ಎನ್ನುವುದು ನೂರಾರು ಜನ್ಮಗಳ ಸಂಚಯನ. ಇದು ಒಂದು ಜನ್ಮದಲ್ಲಿ ಪಡೆಯಬಹುದಾದ ವಿಷಯವಲ್ಲ. ನಾವು ಎಷ್ಟು ತಿಳಿದಿದ್ದರೂ ಕೂಡಾ ಅದು ಕಡಿಮೆಯೇ. ಭಗವಂತನೇ ಹೇಳುವಂತೆ ವೇದದ ಪೂರ್ಣ ಅರ್ಥವನ್ನು ಭಗವಂತನಲ್ಲದೆ ಇನ್ಯಾರೂ ತಿಳಿದಿಲ್ಲ.
ಹೀಗೆ ಯಾರು ಜನ್ಮ ಜನ್ಮಗಳ ಸಾಧನೆಯಿಂದ ಜ್ಞಾನಿ ಎನಿಸುತ್ತಾನೋ ಆತ ಸರ್ವಸ್ವವನ್ನೂ ವಾಸುದೇವನಲ್ಲಿ ಅರ್ಪಿಸಿ ಮೋಕ್ಷ ಪಡೆಯುತ್ತಾನೆ. ಇಲ್ಲಿ ವಾಸುದೇವ ಎನ್ನುವ ಭಗವಂತನ ನಾಮಕ್ಕೆ ವಿಶೇಷ ಅರ್ಥವಿದೆ. ವಾಸು+ದೇವ-ವಾಸುದೇವ. ಭಗವಂತ ವಾಸು, ಅಂದರೆ ತನ್ನನ್ನು ತಾನು ಮುಚ್ಚಿಕೊಂಡವನು. ಯಾವಾಗ ನಾವು ಜ್ಞಾನವನ್ನು ಪಡೆದು, ಹದಿನೈದು ಬೇಲಿಗಳನ್ನು ದಾಟಿ, ಸಮಾದಿ ಸ್ಥಿತಿಯಿಂದ ಆಳಕ್ಕಿಳಿದು, ಹದಿನಾರನೇ ಜೀವಸ್ವರೂಪವನ್ನು ಕಾಣುತ್ತೇವೋ, ಆಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ;ಈ ಸ್ಥಿತಿಯಲ್ಲಿ ಮುಚ್ಚಿಕೊಂಡ ಭಗವಂತ ದೇವನಾಗಿ ತೆರೆದುಕೊಳ್ಳುತ್ತಾನೆ. ಭಗವಂತನನ್ನು ಕಾಣಬೇಕಾದರೆ ಮೊದಲು ನಾವು ನಮ್ಮನ್ನು ಕಾಣಬೇಕು. ನಮ್ಮ ಅರಿವೇ ನಮಗಿಲ್ಲದೆ ಭಗವಂತನನ್ನು ಕಾಣುವುದು ಅಸಾಧ್ಯ. ನಾವು ನಮ್ಮ ಜೀವಸ್ವರೂಪವನ್ನು ಕಂಡಾಗ, ಅದರೊಳಗಿನಿಂದ ಸಾಕ್ಷಾತ್ಕಾರವಾಗುವ ಭಗವಂತ ದೇವಃ. ನಾವು ನಮ್ಮ ಪಂಚಕೋಶಗಳ ಪರದೆಯಲ್ಲಿದ್ದಾಗ ವಾಸುವಾಗಿ; ಜ್ಞಾನ ಸಂಪಾದನೆಯಿಂದ ಪರದೆಯಿಂದಾಚೆಗೆ ಬಂದು ಜೀವ ಸ್ವರೂಪವನ್ನು ಕಂಡಾಗ ದೇವನಾಗಿ ದರ್ಶನ ಕೊಡುವ ಭಗವಂತ ವಾಸುದೇವಃ.
ಹೀಗೆ ಅನೇಕ ಜನ್ಮಗಳ ಸಾಧನೆಯಿಂದ ಜ್ಞಾನ ಸಂಪಾದಿಸಿ, ಭಗವಂತನನ್ನು ತಿಳಿದು, ಭಗವಂತನಲ್ಲಿ ಶರಣಾಗುವ ಜ್ಞಾನಿ ಬಹಳ ಹಿರಿಯ. ಜಗತ್ತಿನಲ್ಲಿ ಇಂತವರು ಬಹಳ ವಿರಳ ಎನ್ನುತ್ತಾನೆ ಕೃಷ್ಣ.

ಇಲ್ಲಿ ನಾವು ನಾಲ್ಕು ಬಗೆಯ ಭಕ್ತರನ್ನು ಮತ್ತು ಅವರಲ್ಲಿ ಜ್ಞಾನಿಯ ಶ್ರೇಷ್ಠತೆಯನ್ನು ನೋಡಿದೆವು. ಈ ನಾಲ್ಕು ಬಗೆಯಲ್ಲೂ ಸೇರದೆ ಪಂಚಮರಾಗಿ ಹೊರಗುಳಿಯುವ ಜನರು ಏಕೆ ಹಾಗಿರುತ್ತಾರೆ ಎನ್ನುವ ವಿಚಾರವನ್ನೂ ಕೃಷ್ಣ ವಿವರಿಸಿದ. ಮನುಷ್ಯ ನಿಜವಾದ ಅಧ್ಯಾತ್ಮ ಮಾರ್ಗದಲ್ಲಿ ನಡೆಯದೆ ಎಲ್ಲಿ ಎಡವುತ್ತಾನೆ ಎನ್ನುವ ಅಂಶಗಳನ್ನು ಕೃಷ್ಣ ಈ ಅಧ್ಯಾಯದ ಮುಂದಿನ ಭಾಗದಲ್ಲಿ ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

बहूनां जन्मनामन्ते ज्ञानवान्मां प्रपद्यते।
वासुदेवः सर्वमिति स महात्मा सुदुर्लभः॥

बहुत जन्मों के अंत के जन्म में तत्व ज्ञान को प्राप्त पुरुष, सब कुछ वासुदेव ही हैं- इस प्रकार मुझको भजता है, वह महात्मा अत्यन्त दुर्लभ है
॥19॥

Bahoonaam janmanaamante jnaanavaanmaam prapadyate;
Vaasudevah sarvamiti sa mahaatmaa sudurlabhah.

At the end of many births the wise man comes to Me, realising that all this is Vasudeva(the innermost Self);
such a great soul (Mahatma) is very hard to find

ಅಧ್ಯಾಯ - 07 : ಶ್ಲೋಕ – 20

ಕಾಮೈಸ್ತೈಸ್ತೈರ್ಹೃತಜ್ಞಾನಾಃ ಪ್ರಪದ್ಯಂತೇSನ್ಯದೇವತಾಃ ।ತನ್ತಂ ನಿಯಮಮಾಸ್ಥಾಯ ಪ್ರಕೃತ್ಯಾ ನಿಯತಾಃ ಸ್ವಯಾ ॥೨೦॥

ಕಾಮೈಃ ತೈಃ ತೈಃ ಹೃತ ಜ್ಞಾನಾಃ ಪ್ರಪದ್ಯಂತೇ ಅನ್ಯ ದೇವತಾಃ ।
ತಮ್ ತಮ್  ನಿಯಮಮ್ ಆಸ್ಥಾಯ ಪ್ರಕೃತ್ಯಾ ನಿಯತಾಃ ಸ್ವಯಾ-ಯಾವ ಯಾವುದೋ ಬಯಕೆಗಳಿಂದ ಅರಿವು ಅಳಿದವರು ತಮ್ಮ ಸ್ವಭಾವ –

ಸಂಸ್ಕಾರಗಳಿಗೆ ತಕ್ಕಂತೆ ಆಯಾ ಕಟ್ಟಲೆಗಳಿಗೆ ಕಟ್ಟುಬಿದ್ದು ಬೇರೆ ಬೇರೆ ದೇವತೆಗಳಿಗೆ ಮೊರೆಹೋಗುತ್ತಾರೆ.

ಕೃಷ್ಣ ಹಿಂದಿನ ಅಧ್ಯಾಯಗಳಲ್ಲಿ ಹೇಳಿರುವ ವಿಚಾರವನ್ನು ಮತ್ತೆ ಒತ್ತು ಕೊಟ್ಟು ಇಲ್ಲಿ ವಿವರಿಸುತ್ತಾನೆ. ಮನುಷ್ಯ ಅಧ್ಯಾತ್ಮ ಮಾರ್ಗದಿಂದ ದೂರ ಸರಿಯಲು ಮೂಲ ಕಾರಣ ಅವನ ಹುಚ್ಚು ಬಯಕೆಗಳು. ಇದು ನಮ್ಮ ಅರಿವಿಗೆ ದೊಡ್ಡ ಅಡ್ಡಗೋಡೆ. ಬಯಕೆಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಇದ್ದಾಗ, ಮನುಷ್ಯ ಅಧ್ಯಾತ್ಮದ ಬೆನ್ನುಹತ್ತುವ ಬದಲು ಬಯಕೆಗಳ ಬೆನ್ನು ಹತ್ತುತ್ತಾನೆ. ಬಯಕೆಗಳ ಈಡೇರಿಕೆಗೋಸ್ಕರ ಮಾಡಬಾರದ್ದನ್ನು ಮಾಡುತ್ತಾ ಹೋಗುತ್ತಾನೆ ಮತ್ತು  ಅಧಃಪಾತವನ್ನು ಹೊಂದುತ್ತಾನೆ.
ಬಯಕೆಗಳ ಬೆನ್ನುಹತ್ತಿದಾಗ ಬಯಕೆ ಅರಿವನ್ನು ನಿಯಂತ್ರಿಸಲಾರಂಭಿಸುತ್ತದೆ. ಈ ಸಮಯದಲ್ಲಿ ಯಾರಾದರೂ ‘ನಿನ್ನ ಇಷ್ಟಾರ್ಥ ಸಿದ್ಧಿಗಾಗಿ ಈ ದೇವಾಲಯಕ್ಕೆ ಹೋಗು’ ಎಂದರೆ ಆತ ಅಲ್ಲಿಗೆ ಹೋಗುತ್ತಾನೆ . ಹೀಗೆ ಇಷ್ಟಾರ್ಥ ಸಿದ್ಧಿ ಎಲ್ಲಿ ಸಾಧ್ಯ ಎಂದು ಸುದ್ದಿ ಬಂತೋ ಅಲ್ಲಿಗೆ ಭೇಟಿ ಕೊಡಲಾರಂಭಿಸುತ್ತಾನೆ. ಇದರಿಂದಾಗಿ  ಆತ ಮೂಲ ಅಧ್ಯಾತ್ಮ ತತ್ವವನ್ನು ಬಿಟ್ಟು, ಏಕಭಕ್ತಿಯಿಂದ ದೂರ ಸರಿದು, ಎಲ್ಲಿ ತನ್ನ ಅಪೇಕ್ಷೆ ಈಡೇರುತ್ತದೋ ಅಲ್ಲಿ, ಆಯಾ ದೇವತೆಗಳನ್ನು ತನ್ನ ಭೌತಿಕ ಬಯಕೆಗಳನ್ನು ಈಡೇರಿಸುವಂತೆ ಬೇಡಿ ಪೂಜಿಸಲಾರಂಭಿಸುತ್ತಾನೆ. ಅದಕ್ಕಾಗಿ ಯಾವುದ್ಯಾವುದೋ ವೃತಾಚರಣೆ ಮಾಡಲಾರಂಭಿಸುತ್ತಾನೆ. ಇದರಿಂದಾಗಿ ಆತ ನಿಜವಾದ ಭಗವಂತನ ಉಪಾಸನೆಯ ಮಾರ್ಗದಿಂದ ದೂರ ಸರಿಯುತ್ತಾನೆ. ಏಕಭಕ್ತಿ ಉಪಾಸನೆಯಿಂದ  ಈ  ರೀತಿಯ ಅಲ್ಪ ಬಯಕೆ ಎಂದೂ ಈಡೇರುವುದಿಲ್ಲ. ಏಕೆಂದರೆ  ‘ಯದನುಗ್ರಹಮಿಚ್ಛಾಮಿ ತಸ್ಯ ವಿತ್ತಂ ಹರಾಮ್ಯಹಂ’ ಭಕ್ತರ ಸಂಪತ್ತನ್ನು ಇಲ್ಲದಂತೆ ಮಾಡಿ, ಪರೀಕ್ಷಿಸಿ, ನಂತರ ಅವರನ್ನು ಉದ್ಧರಿಸುವುದೇ ಭಗವಂತನ  ಸಂಕಲ್ಪ. ನಮಗೆ ಏನು ಬೇಕು ಎನ್ನುವುದು ನಮಗಿಂತ ಚನ್ನಾಗಿ ಭಗವಂತನಿಗೆ ಗೊತ್ತು. ಆತನ ಅನುಗ್ರಹ ಮಹಾ ಪ್ರಸಾದ. ಈ ಅರಿವು ಬಯಕೆಗಳ ಬೆನ್ನು ಹತ್ತಿದವರಿಗೆ ಇರುವುದಿಲ್ಲ ಮತ್ತು ಇದರಿಂದ ಅವರು ಭಗವಂತನ ಅನುಗ್ರಹದಿಂದ ವಂಚಿತರಾಗುತ್ತಾರೆ.

ಏಕೆ ಹೀಗೆ? ಏಕೆ ಎಲ್ಲರೂ ಒಂದೇ ರೀತಿಯಾಗಿ ಭಗವಂತನನ್ನು ಪೂಜಿಸುವುದಿಲ್ಲ? ಇದಕ್ಕೆ ಕೃಷ್ಣ ಹೇಳುತ್ತಾನೆ “ತನ್ತಂ ನಿಯಮಮಾಸ್ಥಾಯ ಪ್ರಕೃತ್ಯಾ ನಿಯತಾಃ ಸ್ವಯಾ”.   “ಪ್ರತಿಯೊಂದು ಜೀವಕ್ಕೂ ಅದರದ್ದೇ ಆದ ಪ್ರಕೃತಿ ಇದೆ” ಎಂದು.  [ಇಲ್ಲಿ ಹೇಳಿರುವ ‘ಪ್ರಕೃತಿ’ ಅಂದರೆ ಒಂದು ‘ಜೀವ ಸ್ವಭಾವ’ ಹಾಗು ಇನ್ನೊಂದು ‘ಪರಿಸರ ಮತ್ತು ಹುಟ್ಟಿಬಂದ ಮನೆತನದ ಸಂಸ್ಕಾರ(genes and environmental force)’ ] ಮನುಷ್ಯನ ಈ ಜೀವಸ್ವಭಾವವನ್ನು ಎಂದೂ ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ. ಒಬ್ಬೊಬ್ಬರ ಸ್ವಭಾವ ಒಂದೊಂದು ತರ. ಈ ಕಾರಣದಿಂದ ಏಕರೂಪ ಸ್ವಭಾವ ಈ ಜಗತ್ತಿನಲ್ಲಿಲ್ಲ. ಈ ಭೂಮಿಯ ಮೇಲೆ  ಎಷ್ಟೋ  ಭಾರಿ ಭಗವಂತ ಮತ್ತು ಅನೇಕ ಮಹಾತ್ಮರು ಅವತರಿಸಿ ಬಂದು ಸತ್ಯವನ್ನು ಭೋಧನೆ ಮಾಡಿದರೂ ಕೂಡಾ, ಏಕ ಧರ್ಮ ಸ್ಥಾಪನೆ ಆಗಲಿಲ್ಲ. ಕಾರಣ ಏನೆಂದರೆ ಸ್ವತಃ ಭಗವಂತನೇ ಬಂದು ಹೇಳಿದರೂ ಕೂಡಾ-ಸತ್ಯವನ್ನು ತಿಳಿಯಬಲ್ಲ ಜೀವಸ್ವಭಾವವುಳ್ಳ ಜೀವ ಮಾತ್ರ ಆ ಸತ್ಯವನ್ನು ಗ್ರಹಿಸಿ ಒಪ್ಪುತ್ತದೆ. ಉಳಿದ ಜೀವಗಳು ಈ ಸತ್ಯವನ್ನು ಗ್ರಹಿಸಲಾರವು. ಇದು ತೀರಾ ಸಹಜ. ಆದ್ದರಿಂದ ಕೃಷ್ಣ ಹೇಳುತ್ತಾನೆ “ಸತ್ಯವನ್ನು ಒಪ್ಪುವುದಕ್ಕೂ ಕೂಡಾ ಜೀವಕ್ಕೆ ಯೋಗ್ಯತೆ ಬೇಕು” ಎಂದು. ಹೀಗೆ  ಜೀವ ಸ್ವರೂಪದ ಯೋಗ್ಯತೆಗನುಗುಣವಾಗಿ ಅವರವರಿಗೆ ಇಷ್ಟವಾಗುವ ದೇವತಾ ಉಪಾಸನೆ
ಪ್ರಪಂಚದಲ್ಲಿ ನಡೆಯುತ್ತದೆ. ಈ ಕಾರಣದಿಂದ ಪ್ರಪಂಚದಲ್ಲಿ ಎಲ್ಲರೂ ನಿಜವಾದ ಭಗವದ್ ಭಕ್ತರಾಗಲು ಸಾಧ್ಯವಿಲ್ಲ, ಅದು ಕೇವಲ ಸಾತ್ವಿಕ ಚೇತನಕ್ಕೆ ಮಾತ್ರ ಸಾಧ್ಯ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( अन्य देवताओं की उपासना का विषय )
कामैस्तैस्तैर्हृतज्ञानाः प्रपद्यन्तेऽन्यदेवताः।
तं तं नियममास्थाय प्रकृत्या नियताः स्वया॥

उन-उन भोगों की कामना द्वारा जिनका ज्ञान हरा जा चुका है, वे लोग अपने स्वभाव से प्रेरित होकर उस-उस नियम को धारण करके अन्य देवताओं को भजते हैं अर्थात पूजते हैं
॥20॥

Kaamaistaistairhritajnaanaah prapadyante’nyadevataah;
Tam tam niyamamaasthaaya prakrityaa niyataah swayaa.

Those whose wisdom has been rent away by this or that desire, go to other gods,following this or that rite, led by their own nature.


ಅಧ್ಯಾಯ - 07 : ಶ್ಲೋಕ – 21

ಯೋಯೋ ಯಾಂಯಾಂ ತನುಂ ಭಕ್ತಃ ಶ್ರದ್ಧಯಾSರ್ಚಿತುಮಿಚ್ಛತಿ ।ತಸ್ಯ ತಸ್ಯಾಚಲಾಂ ಶ್ರದ್ಧಾಂ ತಾಮೇವ ವಿದಧಾಮ್ಯಹಮ್ ॥೨೧॥

ಯಃ ಯಃ  ಯಾಮ್ ಯಾಮ್  ತನುಮ್  ಭಕ್ತಃ ಶ್ರದ್ಧಯಾ ಅರ್ಚಿತುಮ್ ಇಚ್ಛತಿ ।
ತಸ್ಯ ತಸ್ಯ ಅಚಲಾಮ್  ಶ್ರದ್ಧಾಮ್  ತಾಮ್ ಏವ ವಿದಧಾಮಿ ಅಹಮ್-

ಯಾರು ಯಾವ ದೇವತಾರೂಪವನ್ನು ಭಕ್ತಿಯಿಟ್ಟು ಶ್ರದ್ಧೆಯಿಂದ ಪೂಜಿಸಬಯಸುತ್ತಾನೆ ಅವರಿಗೆ ಅಂಥದೇ ಶ್ರದ್ಧೆಯನ್ನು ನಾನು ಗಟ್ಟಿಗೊಳಿಸುತ್ತೇನೆ.

ಭಗವಂತನೆಂಬ ಅಸಾಧಾರಣ ಶಕ್ತಿ ತನ್ನ ದೇವತಾ ಪರಿವಾರದೊಂದಿಗೆ ಈ ಜಗತ್ತನ್ನು ನಿಯಂತ್ರಿಸುತ್ತಿದೆ ಎನ್ನವ ಎಚ್ಚರ ಇಲ್ಲದೆ, ಭಗವಂತನ ಮೇಲಿನ  ಏಕಭಕ್ತಿ ಬಿಟ್ಟು, ಕೇವಲ ಒಂದು ದೇವತೆಯನ್ನು ಶ್ರದ್ಧೆಯಿಂದ  ಪೂಜೆ ಮಾಡಲು ಆಯ್ಕೆ ಮಾಡಿಕೊಂಡವರಿಗೆ –“ಯಾವ ದೇವತೆಯ ಮೇಲೆ ಭಕ್ತಿ ಇದೆಯೋ ಅದನ್ನೇ ಆಚಲವಾಗಿಸುತ್ತೇನೆ” ಎನ್ನುತ್ತಾನೆ ಕೃಷ್ಣ! 
ಮನುಷ್ಯ ಶ್ರದ್ಧೆಯ ಸ್ವರೂಪ. ಯಾವುದರ ಬಗೆಗೆ ಶ್ರದ್ಧೆ ಮೂಡಿತೋ ಅದೇ ಅವನಲ್ಲಿ ಬೆಳೆದುಕೊಂಡು ಹೋಗುತ್ತದೆ. ಯಾವ ದೇವತಾ ಶಕ್ತಿಯನ್ನು ಶ್ರದ್ಧೆಯಿಂದ ಆರಾಧನೆ ಮಾಡಿದೆವೋ ಅದೇ ನಂಬಿಕೆ ನಮ್ಮಲ್ಲಿ ಗಟ್ಟಿಯಾಗುತ್ತಾ ಹೋಗುತ್ತದೆ ಮತ್ತು  ಆ ಶ್ರದ್ಧೆ ನಿಶ್ಚಲವಾಗುತ್ತದೆ. ಅದನ್ನು ಬದಲಿಸುವುದು ಬಹಳ ಕಷ್ಟ. ಈ ಕಾರಣಕ್ಕಾಗಿ ನಾವು ದೇವರ ಬಗ್ಗೆ ತಿಳಿದುಕೊಳ್ಳಬೇಕು. ದೇವರು ಮತ್ತು ದೇವತಾ ಪರಿವಾರ  ಎಂದರೆ ಮಾನವರಂತೆ  ಒಬ್ಬರನೊಬ್ಬರು ದ್ವೇಷಿಸುವ ಆಸೂಹೆ ಪಡುವ ಸಂಸ್ಕ್ರತಿ ಉಳ್ಳ ಒಂದು ಗುಂಪು ಎಂದು ನಾವು ತಿಳಿದಿದ್ದರೆ ಅದು ನಮ್ಮ ಮೌಡ್ಯತೆಯ ಪರಮಾವದಿ. ಹಿಂದೆ ಹೇಳಿದಂತೆ ಭಗವಂತ ಅನ್ನುವುದು ಏಕಶಕ್ತಿ. ಆತ ಸದಾ ತನ್ನ ದೇವತಾ ಪರಿವಾರದೊಂದಿಗೆ ಅಭಿವ್ಯಕ್ತವಾಗುತ್ತಾನೆ. ನಾವು ಗಣಪತಿ ಅಥವಾ ಇನ್ನ್ಯಾವುದೇ ದೇವತೆಯ  ಆರಾಧನೆ ಮಾಡುವಾಗ ನಮಗೆ ಆ ಏಕ ಶಕ್ತಿಯ ಎಚ್ಚರ ಇದ್ದು ಮಾಡಿದರೆ ಆ ಪೂಜೆ ಮಹಾ ಪೂಜೆಯಾಗುತ್ತದೆ. ಅದನ್ನು ಬಿಟ್ಟು ಗಣಪತಿಯೇ(ಅಥವಾ ಇನ್ಯಾವುದೇ ದೇವತೆ) ಬೇರೆ, ಅವನೊಬ್ಬನೇ ದೇವರು  ಎಂದು ತಿಳಿದು ಅದರಲ್ಲೇ ಶ್ರದ್ಧೆ ಬೆಳೆಸಿಕೊಂಡರೆ  ಆಗ ಆ ಶ್ರದ್ಧೆಯ ಬೇಲಿಯಲ್ಲಿ ನಾವು ಸಿಕ್ಕಿ ಹಾಕಿಕೊಳ್ಳುತ್ತೇವೆ. ಇದು ಕಲ್ಲಿನ ಮೂರ್ತಿಯನ್ನು ದೇವರೆಂದು ಪೂಜಿಸಿದಂತಾಗುತ್ತದೆ. ನಿಜವಾಗಿ ನಾವು ಪೂಜಿಸುವುದು ಕಲ್ಲಿನ ಮೂರ್ತಿಯನ್ನಲ್ಲ –ಅದರಲ್ಲಿನ ಭಗವಂತನ  ಪ್ರತೀಕವನ್ನು. ಕಲ್ಲಿನ ಮೂರ್ತಿ ಕೇವಲ ದೇವತಾ ಪ್ರತೀಕ. ಸರ್ವಶಕ್ತ ಭಗವಂತ ಆ ಮೂರ್ತಿಯೊಳಗೆ ಅಂತರ್ಗತನಾಗಿದ್ದಾನೆ.   ಆದ್ದರಿಂದ ಯಾವುದೇ ದೇವತಾ ಪ್ರತೀಕವನ್ನು ಪೂಜಿಸುವಾಗಲೂ ಕೂಡಾ ‘ಭಗವಂತ ಒಬ್ಬನೆ, ಆತ ಈ ದೇವತೆಯ ಪ್ರತೀಕದಲ್ಲಿ ಅಂತರ್ಗತನಾಗಿ, ತನ್ನ ಸಮಸ್ತ ದೇವತಾ  ಪರಿವಾರದ ಮೂಲಕ ನಮ್ಮನ್ನು ರಕ್ಷಿಸುತ್ತಿದ್ದಾನೆ’ ಎನ್ನುವ ಅನುಸಂಧಾನ ಬಹಳ ಮುಖ್ಯ. ಈ ಅನುಸಂಧಾನದಿಂದ ಗಣಪತಿಯನ್ನಾಗಲಿ, ವೀರಭದ್ರನನ್ನಾಗಲಿ, ಕೋಟಿ ಚನ್ನಯ್ಯನನ್ನಾಗಲಿ, ಅಥವಾ ಇನ್ಯಾವುದೇ ದೇವತೆಯನ್ನು  ಪೂಜಿಸಿದರೂ ಕೂಡ ಅದು ಪರಮಾತ್ಮ ಮೆಚ್ಚುವ ಮಹಾ ಪೂಜೆಯಾಗುತ್ತದೆ. ನಾವು ಮಾಡುವ ವ್ರತ-ಅನುಷ್ಠಾನ ಕೂಡಾ ಇದೇ ರೀತಿಯಾಗಿರಬೇಕು. ಅದು ಏಕಾದಶಿಯ ಉಪವಾಸವಾಗಿರಲಿ ಅಥವಾ ಸಂಕಷ್ಟಹರ ಚತುರ್ಥಿಯ ಉಪವಾಸವಾಗಿರಲಿ, ಎಲ್ಲವೂ ಕೂಡಾ ಆ ಭಗವದ್ ಪ್ರೀತ್ಯರ್ಥವಾಗಿರಬೇಕು. ಭಗವಂತ ಸರ್ವ ಶಬ್ದವಾಚ್ಯ-ಆದ್ದರಿಂದ ಯಾವ ಹೆಸರಿನಿಂದ ಕರೆದರೂ ಅದು ಭಗವಂತನ ಹೆಸರು; ಭಗವಂತ  ಸರ್ವ ಸಮರ್ಥ-ಆದ್ದರಿಂದ ಆತ ಕಲ್ಲಿನಲ್ಲೂ ಇರಬಹುದು ಕಂಬದಲ್ಲೂ ಇರಬಹುದು; ಭಗವಂತ ಸರ್ವಾಂತರ್ಯಾಮಿ-ಸರ್ವ ದೇವತೆಗಳ ಅಂತರ್ಯಾಮಿಯಾಗಿದ್ದು ನಮ್ಮನ್ನು ರಕ್ಷಿಸುವವನು ಆ ಭಗವಂತ. ಈ ಅನುಸಂಧಾನದಿಂದ ಮಾಡುವ ಭಕ್ತಿ ಶ್ರೇಷ್ಠ ಭಕ್ತಿ ಎನಿಸುತ್ತದೆ. ಇದನ್ನು ಬಿಟ್ಟು ಅಂಧಶ್ರದ್ಧೆಯನ್ನು ಬೆಳೆಸಿಕೊಂಡರೆ ಅದೇ ನಮ್ಮಲ್ಲಿ ಗಟ್ಟಿಯಾಗಿ ನಮ್ಮನ್ನು ಅಧಃಪಾತಕ್ಕೆ ತಳ್ಳಬಹುದು!

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यो यो यां यां तनुं भक्तः श्रद्धयार्चितुमिच्छति।
तस्य तस्याचलां श्रद्धां तामेव विदधाम्यहम्‌॥

जो-जो सकाम भक्त जिस-जिस देवता के स्वरूप को श्रद्धा से पूजना चाहता है, उस-उस भक्त की श्रद्धा को मैं उसी देवता के प्रति स्थिर करता हूँ
॥21॥

Yo yo yaam yaam tanum bhaktah shraddhayaarchitum icchati;
Tasya tasyaachalaam shraddhaam taameva vidadhaamyaham.

Whatsoever form any devotee desires to worship with faith—that (same) faith of his Imake firm and unflinching.

ಅಧ್ಯಾಯ - 07 : ಶ್ಲೋಕ – 22

ಸ ತಯಾ ಶ್ರದ್ಧಯಾ ಯುಕ್ತಸ್ತಸ್ಯಾSರಾಧನಮೀಹತೇ ।ಲಭತೇ ಚ ತತಃ ಕಾಮಾನ್ ಮಯೈವ ವಿಹಿತಾನ್ ಹಿ ತಾನ್ ॥೨೨॥

ಸಃ ತಯಾ  ಶ್ರದ್ಧಯಾ ಯುಕ್ತಃ ತಸ್ಯ ಆರಾಧನಮ್ ಈಹತೇ ।
ಲಭತೇ ಚ ತತಃ ಕಾಮಾನ್ ಮಯಾ ಏವ ವಿಹಿತಾನ್ ಹಿ ತಾನ್-

ಅವನು ಶ್ರದ್ಧೆಯನ್ನೆ ಆತುಕೊಂಡು ಆಯಾ ದೇವತೆಗಳನ್ನು ಪೂಜಿಸತೊಡಗುತ್ತಾನೆ. ಅದರ ಫಲವಾಗಿ ನಾನೇ ಈಡೇರಿಸಿದ ಆಯಾ ಬಯಕೆಗಳನ್ನು ಪಡೆಯುತ್ತಾನೆ.

ಮೇಲೆ ಹೇಳಿದ ಏಕಭಕ್ತಿಯನ್ನು ಪಾಲಿಸದೆ ಯಾವುದೋ ಒಂದು ದೇವತೆಯನ್ನು ಅಚಲವಾಗಿ ಪೂಜಿಸಿ ಫಲ ಪಡೆಯವವರನ್ನು ಪ್ರಪಂಚದಲ್ಲಿ ಕಾಣುತ್ತೇವೆ. ಇಲ್ಲಿ ‘ತಪ್ಪು ಪೂಜಾಕ್ರಮದಿಂದಲೂ ಹೇಗೆ ಫಲ ಸಿಗುತ್ತದೆ’ ಎನ್ನುವ ಪ್ರಶ್ನೆ ನಮ್ಮಲ್ಲಿ ಸಹಜವಾಗಿ ಮೂಡುತ್ತದೆ.  ಕೃಷ್ಣ ಹೇಳುತ್ತಾನೆ “ನೀನು ಯಾರನ್ನು ಉಪಾಸನೆ ಮಾಡಿದರೂ ಕೊನೆಗೆ ಫಲ ಕೊಡುವವನು ನಾನೇ” ಎಂದು. ಶಾಸ್ತ್ರಗಳಲ್ಲಿ ಹೇಳುವಂತೆ "ಸರ್ವ ದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ". ಯಾರನ್ನು ಪೂಜೆ ಮಾಡಿದರೂ ಅದು ಸಲ್ಲುವುದು ಅದರೊಳಗಿನ ಭಗವಂತನನ್ನೇ. ಆದರೆ ವ್ಯತ್ಯಾಸ ಒಂದೆ-ತಿಳಿದು ಮಾಡಿದಾಗ ‘ಶಾಶ್ವತವಾದ ಪೂರ್ಣಫಲ’, ತಿಳಿಯದೇ ಫಲ ಕಾಮನೆಯಿಂದ ಮಾಡಿದಾಗ ‘ಬೌತಿಕವಾದ ಅಲ್ಪಫಲ’.

ನಾವು ಯಾವುದೇ ಆರಾಧ್ಯ ಮೂರ್ತಿಯನ್ನು ಪೂಜಿಸಿದರೂ ಕೂಡಾ ಆ ಆರಾಧ್ಯ ಮೂರ್ತಿಯ ಅಂತರ್ಯಾಮಿಯಾಗಿದ್ದು ಫಲ ಕೊಡುವವನು ಭಗವಂತನೇ. ಆದರೆ ‘ದೇವತಾ ಅಂತರ್ಗತನಾದ ಭಗವಂತ ಕೊಟ್ಟ’ ಅನ್ನುವ ಅರಿವು ನಮಗಿರುವುದಿಲ್ಲ ಅಷ್ಟೇ. ನಮ್ಮ ಪ್ರತಿಯೊಂದು ಕ್ರಿಯೆಯಲ್ಲಿಯೂ ಈ ಎಚ್ಚರ ಬಹಳ ಮುಖ್ಯ. ನಾವು ನಮ್ಮ ಪ್ರತಿಯೊಂದು ಅನುಸಂಧಾನವನ್ನು ಭಗವಂತನ ಪೂಜಾ ರೂಪವಾಗಿ ಮಾಡಿ ಭವ್ಯವಾಗಿಸಬೇಕು. ಇಲ್ಲದಿದ್ದರೆ ಮಹಾಫಲದಿಂದ ವಂಚಿತರಾಗಿ  ಯಾವುದೋ ಕ್ಷುದ್ರ ಫಲ ನಮ್ಮದಾಗುತ್ತದೆ. [ಇಲ್ಲಿ “ಮಯೈವ ವಿಹಿತಾನ್ ಹಿ ತಾನ್” ಎಂದರೆ ನಾನೇ ದೇವತೆಯೊಳಗಿದ್ದು ಫಲವನ್ನೂ ಕೊಡುವವನು ಎಂದರ್ಥವಾದರೆ,  ‘ಮಯೈವ ವಿಹಿತಾನ್ ಹಿತಾನ್’ ಎಂದರೆ ‘ನೀನು ಬಯಸಿದ-‘ನಿನಗೆ ಹಿತವಾದ’ ಕ್ಷಣಿಕ ಫಲವನ್ನು ನನ್ನಿಂದ ಪಡೆಯುತ್ತೀಯ’ ಎಂದರ್ಥ].   

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

स तया श्रद्धया युक्तस्तस्याराधनमीहते।
लभते च ततः कामान्मयैव विहितान्हि तान्‌॥

वह पुरुष उस श्रद्धा से युक्त होकर उस देवता का पूजन करता है और उस देवता से मेरे द्वारा ही विधान किए हुए उन इच्छित भोगों को निःसंदेह प्राप्त करता है
॥22॥

Sa tayaa shraddhayaa yuktastasyaaraadhanameehate;
Labhate cha tatah kaamaan mayaiva vihitaan hi taan.

Endowed with that faith, he engages in the worship of that (form), and from it he obtainshis desire, these being verily ordained by Me (alone).

ಅಧ್ಯಾಯ - 07 : ಶ್ಲೋಕ – 23

ಅಂತವತ್ತು  ಫಲಂ ತೇಷಾಂ ತದ್  ಭವತ್ಯಲ್ಪಚೇತಸಾಮ್ ।ದೇವಾನ್ ದೇವಯಜೋ ಯಾಂತಿ ಮದ್ ಭಕ್ತಾ ಯಾಂತಿ ಮಾಮಪಿ   ॥೨೩॥

ಅಂತವತ್ ತು   ಫಲಮ್  ತೇಷಾಮ್  ತತ್   ಭವತಿ ಅಲ್ಪಚೇತಸಾಮ್ ।
ದೇವಾನ್ ದೇವಯಜಃ  ಯಾಂತಿ ಮತ್  ಭಕ್ತಾಃ  ಯಾಂತಿ ಮಾಮ್ ಅಪಿ-

ಅಲ್ಪಮತಿಗಳಾದ ಅಂಥವರ ಆ ಫಲಕ್ಕೆ ಅಳಿವುಂಟು. ದೇವತೆಗಳನ್ನು ಪೂಜಿಸುವವರು ದೇವತೆಗಳನ್ನು ಸೇರುತ್ತಾರೆ. ನನ್ನ ಭಕ್ತರು ನನ್ನನ್ನು ಸೇರುತ್ತಾರೆ.

ಕೃಷ್ಣನ ಮಾತನ್ನು ಕೇಳಿದಾಗ ನಮ್ಮಲ್ಲಿ ಒಂದು ಭಾವನೆ ಮೂಡಬಹುದು: “ಯಾರು ಫಲ ಕೊಟ್ಟರೆ ನಮಗೇನು?  ನನಗೆ ನನ್ನ ಇಷ್ಟಾರ್ಥ ಸಿದ್ಧಿಯಾದರೆ ಸಾಕು” ಎಂದು. ಅದಕ್ಕಾಗಿ ಈ ಶ್ಲೋಕದಲ್ಲಿ ಕೃಷ್ಣ ಎಚ್ಚರಿಕೆಯ ನುಡಿಯನ್ನಾಡುತ್ತಾನೆ. ಕೃಷ್ಣ ಹೇಳುತ್ತಾನೆ “ಅಂತವತ್ತು  ಫಲಂ ತೇಷಾಂ ತದ್  ಭವತ್ಯಲ್ಪಚೇತಸಾಮ್” ಎಂದು. ಅಂದರೆ ಯಾವುದೋ ಒಂದು ಕ್ಷುದ್ರ ಫಲ ಸಿಕ್ಕಿತು ಎಂದು ಹಿಗ್ಗುವವರು  ಅಲ್ಪಮತಿಗಳು. ಈ ರೀತಿಯಾಗಿ ಸಿಗುವ ಫಲ ಎಂದೂ ಶಾಶ್ವತ ಅಲ್ಲ, ಅದು ಕ್ಷಣಿಕ. “ನೀವು ಯಾವ ದೇವತೆಯನ್ನು ಪೂಜಿಸುತ್ತೀರೋ ಆ ದೇವತೆಯನ್ನು ಸೇರುತ್ತೀರಿ ಹೊರತು ಮೊಕ್ಷವನ್ನಲ್ಲ” ಎನ್ನುತ್ತಾನೆ ಕೃಷ್ಣ. ಯಾವ ದೇವತೆಗಳೂ ಕೂಡ ಅನಂತ ಕಾಲದ ತನಕ ನಮ್ಮನ್ನು ಅವರ ಲೋಕದಲ್ಲಿ ಇರಗೊಡುವುದಿಲ್ಲ. ಆದ್ದರಿಂದ ನಾವು ಮಾಡಿದ ಕರ್ಮದ ಅವದಿ ಮುಗಿದಾಕ್ಷಣ ಮರಳಿ ಈ ಮೃತ್ಯುಲೋಕಕ್ಕೆ ಬರಬೇಕಾಗುತ್ತದೆ. ಈ ಕಾರಣದಿಂದ ಭಗವಂತನ ಅರಿವಿಲ್ಲದ ಕೇವಲ ದೇವತಾ ಉಪಾಸನೆ ಶಾಶ್ವತ ಮೋಕ್ಷವನ್ನು ಕೊಡಲಾರದು.
ಭಗವಂತನಲ್ಲಿ ಮನವಿಟ್ಟು, ಏಕಭಕ್ತಿಯಿಂದ ಭಗವಂತನನ್ನು ಭಜಿಸಿದರೆ ಆಗ ‘ತದ್ಧಾಮಂ ಪರಮಂ ಮಮ’- ಎಲ್ಲಿಂದ ಎಂದೂ ಮರಳಿ ಬರಬೇಕಾಗಿಲ್ಲವೋ ಅಂಥಹ  ಶಾಶ್ವತವಾದ ಮೋಕ್ಷವನ್ನು ಪಡೆಯುತ್ತಾರೆ. ಭಗವಂತನನ್ನು ಪ್ರೀತಿಸುವುದರಿಂದ  ಯಥಾರ್ಥ ಜ್ಞಾನ ಸಿದ್ಧಿಯಾಗುತ್ತದೆ. ಇದರಿಂದ ಎಂದೆಂದೂ ದುಃಖವಿಲ್ಲದ ಭಗವದ್ ಪ್ರಾಪ್ತಿ ರೂಪವಾದ ಮೋಕ್ಷವನ್ನು ಪಡೆಯುಬಹುದು.
ಇಲ್ಲಿ ಕೆಲವರಿಗೆ ಒಂದು ಗೊಂದಲವಾಗಬಹುದು. “ದೇವರು ಏಕೆ ಹೊಗಳುವಿಕೆಯನ್ನು ಇಷ್ಟಪಡುತ್ತಾನೆ? ಆತ ಏಕೆ ತನ್ನನ್ನು ಹೊಗಳುವವರನ್ನು ಮಾತ್ರ ಉದ್ಧರಿಸಿ ಉಳಿದವರನ್ನು ಉದ್ಧರಿಸುವುದಿಲ್ಲ?” ಎಂದು. ದೇವರು ಪ್ರೀತಿಸುವುದು ಹೊಗಳಿಕೆಯನ್ನಲ್ಲ-ಸತ್ಯವನ್ನು. ವಿಷ್ಣು ಸಹಸ್ರನಾಮದಲ್ಲಿ ಬರುವ ಸಾವಿರ ನಾಮದಲ್ಲಿ ದೇವರು ಅಂದರೆ ಏನು ಆತನ ಮಹಾತ್ಮೆ ಏನು(etymologically)  ಎನ್ನುವ ಸತ್ಯ ಅಡಗಿದೆ. ಭಗವಂತ ಯಾರು ಸತ್ಯವನ್ನು ತಿಳಿಯುತ್ತಾರೋ ಅವರನ್ನು ಪ್ರೀತಿಸುತ್ತಾನೆ. ಆತನಿಗೆ ವೈಯಕ್ತಿಕ ಇಷ್ಟಾನಿಷ್ಟವಿಲ್ಲ. ಆತ ಇಷ್ಟ ಪಡುವುದು ಯಥಾರ್ಥ ಜ್ಞಾನವನ್ನು. ಯಥಾರ್ಥ ಜ್ಞಾನ-ಭಕ್ತಿ ರೂಪದಲ್ಲಿದೆ. ನಿಜವಾದ ಭಕ್ತಿ-ಯಥಾರ್ಥ ಜ್ಞಾನದಲ್ಲಿದೆ.  ಯಥಾರ್ಥದ ಅರಿವು ಭಗವಂತನಿಗೆ ಇಷ್ಟ ಮತ್ತು ಇದು ಮೋಕ್ಷವನ್ನು ತಲುಪಲು ಬೇಕಾದ ಅರ್ಹತೆ. ಆದ್ದರಿಂದ ಭಗವಂತ ತನ್ನನ್ನು ಹೊಗಳುವವರನ್ನು ಉದ್ಧರಿಸುವುದಲ್ಲ. ಆತ ಯಥಾರ್ಥವನ್ನು ತಿಳಿದವರನ್ನು ಉದ್ಧರಿಸುತ್ತಾನೆ ಮತ್ತು ಅರ್ಹತೆ ಉಳ್ಳವರಿಗೆ ಮೋಕ್ಷ ಕರುಣಿಸುತ್ತಾನೆ.
“ಶಾಶ್ವತ ಫಲವನ್ನು ಕೊಡತಕ್ಕಂತಹ ಅಂತರ್ಯಾಮಿಯ ಉಪಾಸನೆಯಲ್ಲಿ ಗಟ್ಟಿಯಾಗಿ-ಮೋಕ್ಷವನ್ನು ಪಡೆ” ಎನ್ನುವುದು ಇಲ್ಲಿ ಕೃಷ್ಣನ ಸಂದೇಶ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अन्तवत्तु फलं तेषां तद्भवत्यल्पमेधसाम्‌।
देवान्देवयजो यान्ति मद्भक्ता यान्ति मामपि॥

परन्तु उन अल्प बुद्धिवालों का वह फल नाशवान है तथा वे देवताओं को पूजने वाले देवताओं को प्राप्त होते हैं और मेरे भक्त चाहे जैसे ही भजें, अन्त में वे मुझको ही प्राप्त होते हैं
॥23॥

Antavattu phalam teshaam tadbhavatyalpamedhasaam;
Devaan devayajo yaanti madbhaktaa yaanti maamapi.

Verily the reward (fruit) that accrues to those men of small intelligence is finite. Theworshippers of the gods go to them, but My devotees come to Me.


ಅಧ್ಯಾಯ - 07 : ಶ್ಲೋಕ – 24

ಭಗವಂತನನ್ನು ತಿಳಿಯಬೇಕು ಎಂದು ಭಕ್ತಿ ಮತ್ತು ಜ್ಞಾನ ಮಾರ್ಗದಲ್ಲಿ ಸಾಗಿದವರಿಗೂ ಕೂಡ ಭಗವಂತನನ್ನು ತಿಳಿಯುವುದು ಎಷ್ಟು ಕಷ್ಟ ಎನ್ನುವುದನ್ನು ಕೃಷ್ಣ ಈ ಅಧ್ಯಾಯದಲ್ಲಿ ಇನ್ನೂ ವಿವರಿಸುತ್ತಾನೆ.   

ಅವ್ಯಕ್ತಂ ವ್ಯಕ್ತಿಮಾಪನ್ನಂ ಮನ್ಯಂತೇ ಮಾಮಬುದ್ಧಯಃ ।ಪರಂ ಭಾವಮಜಾನಂತೋ ಮಮಾವ್ಯಯಮನುತ್ತಮಮ್॥೨೪॥

ಅವ್ಯಕ್ತಮ್  ವ್ಯಕ್ತಿಮ್ ಅಪನ್ನಮ್  ಮನ್ಯಂತೇ ಮಾಮ್ ಅಬುದ್ಧಯಃ ।
ಪರಮ್  ಭಾವಮ್ ಅಜಾನಂತಃ ಮಮ ಅವ್ಯಯಮ್ ಅನುತ್ತಮಮ್-

ಅಳಿವಿರದ, ಮಿಗಿಲಿರದ ನನ್ನ ಮಹಿಮೆಯ ಹಿರಿಮೆಯನ್ನರಿಯದ  ತಿಳಿಗೇಡಿಗಳು ದೇಹದಿಂದ ಹುಟ್ಟಿಬರದ ನನ್ನನ್ನು ಹುಟ್ಟಿಬಂದೆ ಎಂದು [ಭಗವಂತನೇ ಜೀವಭಾವ ಪಡೆದನೆಂದು ] ತಿಳಿದುಬಿಡುತ್ತಾರೆ.

ಸಾಮಾನ್ಯವಾಗಿ ಭಗವಂತನ ಬಗೆಗೆ ಸರಿಯಾದ ತಿಳುವಳಿಕೆ ಗಳಿಸುವುದು ಕಷ್ಟ. ಆದರೆ ತಪ್ಪು ಗ್ರಹಿಕೆ ಸುಲಭ. ಇಲ್ಲಿ ಕೃಷ್ಣ ಹೇಳುತ್ತಾನೆ “ನಾನು ವಸ್ತುತಃ ಅವ್ಯಕ್ತ” ಎಂದು. ಜೀವ ವ್ಯಕ್ತ ಆಗುವುದು ಅದಕ್ಕೆ ಪಾಂಚಭೌತಿಕ ಶರೀರ ಬಂದಾಗ. ಆದ್ದರಿಂದ ಸ್ಥೂಲವಾದ ಶರೀರವುಳ್ಳದ್ದನ್ನು ವ್ಯಕ್ತ ಎನ್ನುತ್ತಾರೆ. ಭಗವಂತನಿಗೆ ಒಂದು ದಿನ ನಾಶವಾಗುವ ಪಾಂಚಭೌತಿಕ ಶರೀರ ಇಲ್ಲ- ಆತ ಸರ್ವದಾ ಅವ್ಯಕ್ತ. ಇಂತಹ ಅವ್ಯಕ್ತ ಭಗವಂತ ತನ್ನ ಅವತಾರದಲ್ಲಿ  ತನ್ನ ಸ್ವತಃ ಇಚ್ಛೆಯಿಂದ ಒಂದು ರೂಪದಲ್ಲಿ  ಎಲ್ಲರಿಗೂ ಕಾಣಿಸಿಕೊಳ್ಳುತ್ತಾನೆ.  ಶಾಸ್ತ್ರೀಯವಾಗಿ ಭಗವಂತನ ಸ್ವರೂಪದ ಅರಿವಿಲ್ಲದ ಜನ ತಮಗೆ ಕಾಣುವ ಅವತಾರರೂಪಿ ಭಗವಂತನಿಗೆ ತಮ್ಮಂತೆ ಪಾಂಚಭೌತಿಕ ಶರೀರವಿದೆ ಮತ್ತು ಭಗವಂತ ಒಂದು ದಿನ ದೇಹತ್ಯಾಗ ಮಾಡುತ್ತಾನೆ ಎಂದು ತಿಳಿಯುತ್ತಾರೆ. ವ್ಯಕ್ತವಾದ, ಸ್ಥೂಲವಾದ, ನಶ್ವರವಾದ, ಪ್ರಾಕೃತವಾದ ಶರೀರ ಇಲ್ಲದ ಭಗವಂತನನ್ನು ಅಂತಹ ಸ್ಥೂಲವಾದ ಶರೀರದೊಳಗೆ ಬದ್ಧನಾಗಿರುವವನು ಎನ್ನುವ ಅರ್ಥದಲ್ಲಿ ಅವರು ತಿಳಿದುಕೊಳ್ಳುತ್ತಾರೆ. “ಹೀಗೆ ತಿಳಿದುಕೊಳ್ಳುವವರು ಬುದ್ಧಿಶೂನ್ಯರು” ಎನ್ನುತ್ತಾನೆ ಕೃಷ್ಣ. 

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( भगवान के प्रभाव और स्वरूप को न जानने वालों की निंदा और जानने वालों की महिमा )
अव्यक्तं व्यक्तिमापन्नं मन्यन्ते मामबुद्धयः।
परं भावमजानन्तो ममाव्ययमनुत्तमम्‌॥

बुद्धिहीन पुरुष मेरे अनुत्तम अविनाशी परम भाव को न जानते हुए मन-इन्द्रियों से परे मुझ सच्चिदानन्दघन परमात्मा को मनुष्य की भाँति जन्मकर व्यक्ति भाव को प्राप्त हुआ मानते हैं
॥24॥

Avyaktam vyaktimaapannam manyante maamabuddhayah;
Param bhaavamajaananto mamaavyayamanuttamam.

The foolish think of Me, the Unmanifest, as having manifestation, knowing not Myhigher, immutable and most excellent nature.


ಅಧ್ಯಾಯ - 07 : ಶ್ಲೋಕ – 25

ನಾಹಂ ಪ್ರಕಾಶಃ ಸರ್ವಸ್ಯ ಯೋಗಮಾಯಾಸಮಾವೃತಃ     ।ಮೂಢೋSಯಂ ನಾಭಿಜಾನಾತಿ ಲೋಕೋ ಮಾಮಜಮವ್ಯಯಮ್   ॥೨೫॥

ನ ಅಹಮ್ ಪ್ರಕಾಶಃ ಸರ್ವಸ್ಯ ಯೋಗ ಮಾಯಾ ಸಮಾವೃತಃ          ।
ಮೂಢಃ ಅಯಮ್ ನ ಅಭಿಜಾನಾತಿ ಲೋಕಃ  ಮಾಮ್ ಅಜಮ್ ಅವ್ಯಯಮ್-ನನ್ನ ಸಾಮರ್ಥ್ಯ ಮತ್ತು ಪ್ರಕೃತಿಯ ಮಾಯೆಯಿಂದ ಮುಚ್ಚಿಕೊಂಡಿರುವ ನಾನು ಎಲ್ಲರಿಗೂ ಬಯಲಾಗಲಾರೆ. ಹುಟ್ಟಿರದ ಸಾವಿರದ ನನ್ನನ್ನು ಈ ತಿಳಿಗೇಡಿ ಮಂದಿ ತಿಳಿಯಲಾರರು.

ಭಗವಂತ ಎಲ್ಲರಿಗೂ ಕಾಣಿಸಿಕೊಳ್ಳುವುದಿಲ್ಲ. ಆತನ ಅನಂತ ಗುಣದ ಸ್ಪಷ್ಟ ಚಿತ್ರ ಯಾರಿಗೂ ಬರುವುದು ಸಾಧ್ಯವಿಲ್ಲ. ಮನುಷ್ಯನ ಚಿಂತನೆಗೆ ಒಂದು ಮಿತಿ ಇದೆ, ಆದರೆ ಭಗವಂತ ಆ ಮಿತಿಯ ಒಳಗಿಲ್ಲ. ಆದ್ದರಿಂದ ನಮ್ಮ ಬುದ್ಧಿ ಆತನ ಅನಂತವಾದ ಜ್ಞಾನವನ್ನು, ಅನಂತವಾದ ಶಕ್ತಿಯನ್ನೂ, ಆನಂತ ರೂಪವನ್ನು ಗ್ರಹಿಸಲಾರದು. ನಾವು ಇಚ್ಛೆಪಟ್ಟಾಗ ಭಗವಂತ ಕಾಣುವುದಿಲ್ಲ. ಆದರೆ ಕಾಲ ಪಕ್ವವಾದಾಗ ತನ್ನ ಇಚ್ಛೆಯಂತೆ  ಭಗವಂತ ಜ್ಞಾನಾನಂದ ಸ್ವರೂಪವಾದ ಮನಸ್ಸು ಮತ್ತು ಜ್ಞಾನಾನಂದ ಸ್ವರೂಪವಾದ ಇಂದ್ರಿಯಗಳಿಗೆ ಯಥಾಶಕ್ತಿ ಗೋಚರವಾಗಬಲ್ಲ.

ಈ ಲೋಕದಲ್ಲಿ ಅಜ್ಞಾನದ ಮೋಹಕ್ಕೆ ಒಳಗಾದ ಜೀವಜಾತ  ಎಂದೂ ಭಗವಂತನನ್ನು ಗ್ರಹಿಸಲಾರದು. ಜೀವನಿಗೂ ಮತ್ತು ಭಗವಂತನಿಗೂ ನಡುವೆ ಇರುವ ಅಜ್ಞಾನವೆಂಬ ಮಾಯಾ ಪರದೆಯಿಂದಾಗಿ ಭಗವಂತ ನಮಗೆ ಕಾಣುವುದಿಲ್ಲ. 

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

नाहं प्रकाशः सर्वस्य योगमायासमावृतः।
मूढोऽयं नाभिजानाति लोको मामजमव्ययम्‌॥

अपनी योगमाया से छिपा हुआ मैं सबके प्रत्यक्ष नहीं होता, इसलिए यह अज्ञानी जनसमुदाय मुझ जन्मरहित अविनाशी परमेश्वर को नहीं जानता अर्थात मुझको जन्मने-मरने वाला समझता है
॥25॥

Naaham prakaashah sarvasya yogamaayaasamaavritah;
Moodho’yam naabhijaanaati loko maamajamavyayam.

I am not manifest to all (as I am), being veiled by the Yoga Maya. This deluded worlddoes not know Me, the unborn and imperishable.

ಅಧ್ಯಾಯ - 07 : ಶ್ಲೋಕ – 26

ವೇದಾಹಂ ಸಮತೀತಾನಿ ವರ್ತಮಾನಾನಿ ಚಾರ್ಜುನ ।ಭವಿಷ್ಯಾಣಿ ಚ ಭೂತಾನಿ ಮಾಂ ತು ವೇದ ನ ಕಶ್ಚನ ॥೨೬॥

ವೇದ ಅಹಮ್ ಸಮತೀತಾನಿ ವರ್ತಮಾನಾನಿ ಚ ಅರ್ಜುನ   ।
ಭವಿಷ್ಯಾಣಿ ಚ ಭೂತಾನಿ ಮಾಮ್  ತು ವೇದ ನ ಕಶ್ಚನ-

ಅರ್ಜುನ , ನಾನು ತಿಳಿದಿದ್ದೇನೆ-ಹಿಂದಿದ್ದ ಜೀವಿಗಳನ್ನು, ಈಗಿರುವವರನ್ನು,ಮುಂದೆ ಬರುವವರನ್ನು ಕೂಡ. ನನ್ನನ್ನು ಮಾತ್ರ ಯಾರೂ ತಿಳಿದಿಲ್ಲ.

ಜೀವ ಮತ್ತು ಭಗವಂತನ ನಡುವಿನ ವೆತ್ಯಾಸವನ್ನು ಬಹಳ ಸ್ಪಷ್ಟವಾಗಿ ವಿವರಿಸುತ್ತಾ ಕೃಷ್ಣ ಹೇಳುತ್ತಾನೆ “ ಹಿಂದೆ ಆಗಿ ಹೋದ ಭೂತಗಳು, ಈಗ ಇರುವ ಭೂತಗಳು, ಮತ್ತು ಮುಂದೆ ಬರಲಿರುವ ಭೂತಗಳು ಈ ಎಲ್ಲವನ್ನೂ ನಾನು ತಿಳಿದಿದಿದ್ದೇನೆ” ಎಂದು. ಇಲ್ಲಿ ಭೂತ ಎನ್ನುವ ಪದಕ್ಕೆ ಅನೇಕ ಅರ್ಥವಿದೆ. ಪಂಚಭೂತಗಳು, ಅದರಿಂದ ನಿರ್ಮಾಣವಾದ ಬ್ರಹ್ಮಾಂಡ, ಅದರಿಂದ ರೂಪುಗೊಂಡ ಸಮಸ್ತ ವಸ್ತುಗಳು ಮತ್ತು ಸಮಸ್ತ ಜೀವಜಾತಗಳು ಎಲ್ಲವೂ ಭೂತಗಳು. ಈ ಹಿಂದೆ ಸೃಷ್ಟಿಯಾದ ಅನಂತ ಬ್ರಹ್ಮಾಂಡ, ಈಗಿರುವ ಬ್ರಹ್ಮಾಂಡ, ಮುಂದೆ ಸೃಷ್ಟಿಯಾಗಲಿರುವ ಅನಂತ ಬ್ರಹ್ಮಾಂಡ, ಹಿಂದೆ ಇದ್ದ ಅನಂತ ಜೀವಜಾತಗಳು, ಈಗಿರುವ ಅನಂತ ಜೀವಜಾತಗಳು ಮತ್ತು ಮುಂದೆ ಸೃಷ್ಟಿಯಾಗಲಿರುವ ಅನಂತ ಜೀವಜಾತಗಳನ್ನು ತಿಳಿದವನು ಆ ಅನಂತಕೋಟಿ ಬ್ರಹ್ಮಾಂಡ ನಾಯಕ ಭಗವಂತನೊಬ್ಬನೆ. ಕೃಷ್ಣ ಹೇಳುತ್ತಾನೆ “ಮಾಮ್  ತು ವೇದ ನ ಕಶ್ಚನ” ಎಂದು. ಅಂದರೆ ‘ನನ್ನನ್ನು ಬಿಟ್ಟು ಇನ್ನ್ಯಾರೂ ಇದನ್ನು ಪೂರ್ಣವಾಗಿ ತಿಳಿದಿಲ್ಲ’ . ಭಗವಂತನನ್ನು ಪೂರ್ಣವಾಗಿ ತಿಳಿದವರಿಲ್ಲ ಹಾಗು ತಿಳಿಯುವುದು ಸಾಧ್ಯವಿಲ್ಲ. ಆತ ಸ್ವತಂತ್ರ, ಪೂರ್ಣ ಮತ್ತು ನಿತ್ಯ ಸತ್ಯ. ಜೀವ ಅಪೂರ್ಣ, ಅಸ್ವತಂತ್ರ ಮತ್ತು ಅನಿತ್ಯಸತ್ಯ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

वेदाहं समतीतानि वर्तमानानि चार्जुन।
भविष्याणि च भूतानि मां तु वेद न कश्चन॥

हे अर्जुन! पूर्व में व्यतीत हुए और वर्तमान में स्थित तथा आगे होने वाले सब भूतों को मैं जानता हूँ, परन्तु मुझको कोई भी श्रद्धा-भक्तिरहित पुरुष नहीं जानता
॥26॥

Vedaaham samateetaani vartamaanaani chaarjuna;
Bhavishyaani cha bhootani maam tu veda na kashchana.

I know, O Arjuna, the beings of the past, the present and the future, but no one knowsMe.


ಅಧ್ಯಾಯ - 07 : ಶ್ಲೋಕ – 27

ಭಗವಂತನನ್ನು ಪೂರ್ಣವಾಗಿ ತಿಳಿಯುವುದು ಅಸಾಧ್ಯ, ಆದರೆ ತಮ್ಮ ಯಥಾಶಕ್ತಿ ಅರಿಯಲು ಎಲ್ಲರಿಗೂ  ಏಕೆ ಸಾಧ್ಯವಾಗುವುದಿಲ್ಲ ಎನ್ನುವುದನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ. 

ಇಚ್ಛಾದ್ವೇಷಸಮುತ್ಥೇನ ದ್ವಂದ್ವಮೋಹೇನ ಭಾರತ ।ಸರ್ವಭೂತಾನಿ ಸಮ್ಮೋಹಂ ಸರ್ಗೇ ಯಾಂತಿ ಪರಂತಪ॥೨೭॥

ಇಚ್ಛಾ ದ್ವೇಷ ಸಮುತ್ಥೇನ ದ್ವಂದ್ವ ಮೋಹೇನ ಭಾರತ ।
ಸರ್ವ ಭೂತಾನಿ ಸಮ್ಮೋಹಮ್  ಸರ್ಗೇ ಯಾಂತಿ ಪರಂತಪ-

ಓ ಅರಿಗಳನ್ನು ತರಿದವನೆ, ಭರತ ವಂಶದ ಕುಡಿಯೆ, ಒಲವು-ಹಗೆತನಗಳಿಂದ ಹುಟ್ಟಿದ ಸುಖ-ದುಃಖ ಮುಂತಾದ ದ್ವಂದ್ವಗಳ [ಜೀವೇಶ್ವರರು ಮುಂತಾದ ದ್ವಂದ್ವಗಳ] ತಪ್ಪು ಗ್ರಹಿಕೆಯಿಂದ ಎಲ್ಲ ಜೀವಿಗಳೂ ಹುಟ್ಟಿನಿಂದಲೆ ಸುಳ್ಳಿನ ಕೆಟ್ಟದಾರಿ  ಹಿಡಿದಿವೆ.

ನಾವು ಹುಟ್ಟುವಾಗಲೇ ಹುಟ್ಟಿನ ಜೊತೆಗೆ ‘ಇಚ್ಛಾ-ದ್ವೇಷ’ ಸೇರಿಸಿಕೊಂಡು ಹುಟ್ಟುತ್ತೇವೆ. ಶರೀರ ಬೆಳೆದಂತೆ ಅದು ಬೆಳೆಯುತ್ತಾ ಹೋಗುತ್ತದೆ. ಇದರಿಂದ ಇಬ್ಬಂದಿತನ(ದ್ವಂದ್ವ)ದ ಗೊಂದಲ. ಯಾವುದರಿಂದ ಸುಖ, ಯಾವುದರಿಂದ ದುಃಖ ಎಂದು ಗೊತ್ತಿಲ್ಲದೆ ದುಃಖವನ್ನೇ ಸುಖ ಎಂದು ತಿಳಿದು ಅದರ ಬೆನ್ನು ಹತ್ತಿ ಕೊನೆಗೆ ದುಃಖ ಬಂದಾಗ ಅಯ್ಯೋ ಎನ್ನುತ್ತೇವೆ. ಸುಳ್ಳನ್ನೇ ಸತ್ಯ ಎಂದು ನಂಬುವುದು, ಜ್ಞಾನ-ಅಜ್ಞಾನದ ಗೊಂದಲ, ಸತ್ಯ-ಅಸತ್ಯದ ಗೊಂದಲ, ಹೀಗೆ ದ್ವಂದ್ವ ಮೋಹಕ್ಕೆ ಒಳಗಾದವರನ್ನು ತಿದ್ದುವುದು ಬಹಳ ಕಷ್ಟ. ಇದು ಬರಿಯ ಮೋಹ ಮಾತ್ರವಲ್ಲ, ಇದೊಂದು ಸಮ್ಮೋಹ! ನಾನು ತಿಳಿದಿರುವುದೇ ಸರಿ ಎನ್ನುವ ಹಠ, ತನ್ನದೇ ಸರಿ ಎನ್ನುವ ಆಗ್ರಹ. ಇದರಿಂದ ಮನುಷ್ಯ ಸತ್ಯವನ್ನು ಅರಿಯದೆ ಅಜ್ಞಾನಿಯಾಗುತ್ತಾನೆ. ಹೀಗೆ ಅಜ್ಞಾನದಿಂದ ಮೋಹ, ಮೋಹದಿಂದ ಸಮ್ಮೋಹ. ಗೊತ್ತಿಲ್ಲದೇ ಇರುವುದನ್ನು ತಿಳಿದುಕೊಳ್ಳಲು ಪ್ರಯತ್ನಿಸದೆ ಇದ್ದಾಗ ಅದರಿಂದ ವಿಪರೀತ ಜ್ಞಾನ-ನಂತರ ನಾನು ನಂಬಿದ್ದೇ ಸರಿ ಎನ್ನುವ ಆಗ್ರಹ. ಇದು ಸಾಮಾನ್ಯವಾಗಿ ನಾವು ಕಾಣುವ ಮನುಷ್ಯನ ದೌರ್ಬಲ್ಯ. ಈ ಪ್ರಪಂಚದಲ್ಲಿ ಪ್ರತಿಯೊಬ್ಬ ದಡ್ಡನೂ ಕೂಡಾ ತಾನು ಎಲ್ಲರಿಗಿಂತ ಬುದ್ಧಿವಂತ ಎಂದು ತಿಳಿದಿರುತ್ತಾನೆ!  ಆದ್ದರಿಂದ ಇಡೀ ಜಗತ್ತಿನ ವ್ಯವಹಾರವನ್ನು ತನ್ನ ಬುದ್ಧಿಯ ಮಾನದಂಡದಿಂದ ಅಳೆದು ದಾರಿತಪ್ಪುತ್ತಾನೆ. ಇದನ್ನು ಮಹಾಭಾರತದಲ್ಲಿ ಹೀಗೆ ಹೇಳಿದ್ದಾರೆ: “ಸರ್ವೋಹಿ ಮನ್ಯತೇ ಲೋಕ ಆತ್ಮಾನಂ ಬುದ್ಧಿಮತ್ತರಂ” ಎಂದು. ತಾನು ಬುದ್ಧಿವಂತ, ನನ್ನ ತೀರ್ಮಾನವೇ ಸರಿ, ಉಳಿದವರಿಗೆ ನನ್ನಷ್ಟು ತಿಳುವಳಿಕೆ ಇಲ್ಲ ಅನ್ನುವ ತಪ್ಪು ಕಲ್ಪನೆಯಿಂದ ಮನುಷ್ಯ ಸಮ್ಮೋಹದತ್ತ  ಸಾಗುತ್ತಾನೆ. ಈ ಅಪಾಯದಿಂದ ಯಾರು ಹೇಗೆ ಪಾರಾಗುತ್ತಾರೆ ಎನ್ನುವುದನ್ನು ಮುಂದಿನ ಶ್ಲೋಕ ವಿವರಿಸುತ್ತದೆ.
ಇಲ್ಲಿ ಕೃಷ್ಣ ಅರ್ಜುನನ್ನು ‘ಭಾರತ’ ಮತ್ತು ‘ಪರಂತಪ’ ಎನ್ನುವ ವಿಶೇಷಣಗಳಿಂದ ಸಂಬೋಧಿಸಿದ್ದಾನೆ. ಭಗವಂತನ ಅರಿವು ಪಡೆಯಬೇಕಾದರೆ ನಾವು ಭಾರತ-ಪರಂತಪರಾಗಬೇಕು. ಬೆಳಕಿನ ದಾರಿಯಲ್ಲಿ ರಥನಾಗಿ ಸಾಗಿ(ಭಾರತ), ಪರತತ್ವದ ನಿರಂತರ ಚಿಂತನೆ(ಪರಂತಪ) ಮಾಡಿದಾಗ ಮಾತ್ರ ನಮಗೆ ಭಗವಂತನ  ಛಾಯೆ ತಿಳಿದೀತು ಎನ್ನುವುದು ಈ ವಿಶೇಷಣದ ಅರ್ಥವಿಶೇಷ. 

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

इच्छाद्वेषसमुत्थेन द्वन्द्वमोहेन भारत।
सर्वभूतानि सम्मोहं सर्गे यान्ति परन्तप॥

हे भरतवंशी अर्जुन! संसार में इच्छा और द्वेष से उत्पन्न सुख-दुःखादि द्वंद्वरूप मोह से सम्पूर्ण प्राणी अत्यन्त अज्ञता को प्राप्त हो रहे हैं
॥27॥

Icchaadweshasamutthena dwandwamohena bhaarata;
Sarvabhootaani sammoham sarge yaanti parantapa.

By the delusion of the pairs of opposites arising from desire and aversion, O Bharata, allbeings are subject to delusion at birth, O Parantapa!


ಅಧ್ಯಾಯ - 07 : ಶ್ಲೋಕ – 28

ಯೇಷಾಂ ತ್ವಂತಗತಂ ಪಾಪಂ ಜನಾನಾಂ ಪುಣ್ಯಕರ್ಮಣಾಮ್ ।ತೇ ದ್ವಂದ್ವ ಮೋಹನಿರ್ಮುಕ್ತಾ ಭಜಂತೇ  ಮಾಂ ದೃಢವ್ರತಾಃ॥೨೮॥

ಯೇಷಾಮ್ ತು ಅಂತಗತಮ್  ಪಾಪಮ್  ಜನಾನಾಮ್  ಪುಣ್ಯಕರ್ಮಣಾಮ್ ।
ತೇ ದ್ವಂದ್ವ ಮೋಹ ನಿರ್ಮುಕ್ತಾಃ ಭಜಂತೇ  ಮಾಮ್  ದೃಢವ್ರತಾಃ –

ಪುಣ್ಯವಂತರಾದ ಯಾವ ಜನರ ಪಾಪ ಕೊನೆಗೊಂಡಿದೆ ಅವರು ದ್ವಂದ್ವಗಳ ತಪ್ಪರಿವಿನಿಂದ ಕಳಚಿಕೊಂಡು ನಿಷ್ಠೆಯ ನೇಮದಿಂದ ನನ್ನನ್ನು ಸೇವಿಸುತ್ತಾರೆ.

ಹಿಂದಿನ ಶ್ಲೋಕದಲ್ಲಿ ಕೃಷ್ಣ ದ್ವಂದ್ವ ಮೋಹದ ಬಗ್ಗೆ ಹೇಳಿದ. ಇದಕ್ಕೆ ಮೂಲಭೂತವಾಗಿ ಎರಡು ಕಾರಣ. ಒಂದು ಜೀವ ಸ್ವರೂಪ(ಉದಾ: ದುರ್ಯೋಧನ, ಶಕುನಿ). ಇನ್ನೊಂದು ಪ್ರರಾಬ್ಧ ಕರ್ಮ(ಉದಾ: ಕರ್ಣ, ಅಜಾಮಿಳ, ಪಿಂಗಳೆ). ಜೀವ ಸ್ವರೂಪವೇ ಇಂತಹ ಗತಿಯಲ್ಲಿದ್ದರೆ ಅದಕ್ಕೆ ಯಾವುದೇ ಪರಿಹಾರ ಮಾರ್ಗವಿಲ್ಲ. ಆದರೆ ಯಾವುದೋ ಕಾರಣದಿಂದ ಕೆಟ್ಟ ದಾರಿಯಲ್ಲಿ ಸಾಗುವ ಸಾತ್ವಿಕ ಜೀವಕ್ಕೆ ಜ್ಞಾನದ ಮಾರ್ಗವಿದೆ. ಯಾವುದೋ ಒಂದು ದುರಂತದಿಂದ ಕೆಲವೊಮ್ಮೆ ಅಪರೋಕ್ಷ ಜ್ಞಾನಿಗಳೂ ದಾರಿ ತಪ್ಪುತ್ತಾರೆ. ಇಂತವರ ಪಾಪ ಕರ್ಮ ತೊಳೆದು ಹೋಗುವ ತನಕ ಅವರು ಸರಿ ದಾರಿಗೆ ಬರಲಾಗುವುದಿಲ್ಲ. ಆದರೆ ಕೆಲವೊಮ್ಮೆ ಜೀವನದಲ್ಲಿ ನಡೆಯುವ ಕೆಲವು ದುರಂತ ಅಥವಾ ಆಘಾತ ಇಂತವರನ್ನು ಮರಳಿ ಸತ್ಯದ ಮಾರ್ಗಕ್ಕೆ ಕರೆತರುತ್ತದೆ. ಇಂತಹ ಸಂದರ್ಭದಲ್ಲಿ ಅವರಿಗೆ ತಮ್ಮ ತಪ್ಪಿನ ಅರಿವಾಗಿ ಪಶ್ಚಾತ್ತಾಪ ಭಾವನೆಯಿಂದ ದೇವರಲ್ಲಿ ಅಗಾಧವಾದ ಭಕ್ತಿ ಮೂಡುತ್ತದೆ.
ಪಶ್ಚಾತ್ತಾಪಕ್ಕಿಂತ ಶ್ರೇಷ್ಠವಾದ ಪ್ರಾಯಶ್ಚಿತ ಇನ್ನೊಂದಿಲ್ಲ. ಎಂತಹ ಪಾತಕವನ್ನೂ ಕೂಡ ಪಶ್ಚಾತ್ತಾಪದಿಂದ ತಿದ್ದಿಕೊಳ್ಳಬಹುದು. ನಾವು ನಮ್ಮ ಜೀವನದಲ್ಲಿ ನಮಗೆ ತಿಳಿದೋ ತಿಳಿಯದೆಯೋ ತಪ್ಪು ಮಾಡುತ್ತಿರುತ್ತೇವೆ. ಮಾನಸಿಕವಾಗಿ,  ದೈಹಿಕವಾಗಿ, ವಾಚಕವಾಗಿ ನಮಗೆ ತಿಳಿಯದೆಯೇ ನಮ್ಮಿಂದ ತಪ್ಪು ನಡೆಯುತ್ತಿರುತ್ತದೆ. ಆದರೆ ತಪ್ಪಿನ ಅರಿವಾದಾಗ ಹೃದಯದಿಂದ ಮೂಡುವ ಪಶ್ಚಾತ್ತಾಪ ಇಂತಹ ತಪ್ಪಿಗೆ ಪ್ರಾಯಶ್ಚಿತ. ವೈದಿಕ ಸಂಪ್ರದಾಯದಲ್ಲಿ ದೇವತಾರ್ಚನೆಯ ನಂತರ ನಮಸ್ಕಾರ ಮಾಡುವಾಗ ಹೇಳಿಕೊಳ್ಳುವ ಶ್ಲೋಕ ಒಂದಿದೆ.
ಪಾಪೋಽಹಂ ಪಾಪಕರ್ಮಾಹಂ ಪಾಪಾತ್ಮಾ ಪಾಪಸಂಭವ |
ತ್ರಾಹಿ ಮಾ ಕೃಪಯಾ ದೇವ ಸರ್ವಪಾಪಹರೋ ಭವ ||
ಅನ್ಯಥಾ ಶರಣಂ ನಾಸ್ತಿ ತ್ವಮೇವ ಶರಣಂ ಮಮ |
ತಸ್ಮಾತ್ ಕಾರುಣ್ಯಭಾವೇನ ರಕ್ಷ ಮಾಂ ಜಗದೀಶ್ವರ ||
 ಇಲ್ಲಿ ನಾವು ಆ ಭಗವಂತನಲ್ಲಿ “ನಾನು ತಿಳಿದೋ ತಿಳಿಯದೆಯೋ ಮಾಡಿದ ತಪ್ಪನ್ನು ಕ್ಷಮಿಸು” ಎಂದು ಬೇಡುತ್ತೇವೆ. “ನಾನು ಹುಟ್ಟಿನಿಂದ ಪಾಪವನ್ನು ಹೊತ್ತು ಬಂದಿದ್ದೇನೆ, ಅದರಿಂದ ತಪ್ಪು ಮಾಡುತ್ತಿದ್ದೇನೆ, ಆದ್ದರಿಂದ ನನ್ನನ್ನು ಕ್ಷಮಿಸಿ ಈ ಪಾಪದಿಂದ ನನ್ನನ್ನು ಪಾರು ಮಾಡು” ಎಂದು ದೇವರಲ್ಲಿ ಶರಣಾಗುವುದು ಈ ಶ್ಲೋಕದ ಮೂಲಕ ನಾವು ದೇವರಲ್ಲಿ ಮಾಡುವ ಪ್ರಾರ್ಥನೆ. ಇಲ್ಲಿ ಕೃಷ್ಣ ಹೇಳುತ್ತಾನೆ “ತೇ ದ್ವಂದ್ವ ಮೋಹನಿರ್ಮುಕ್ತಾ ಭಜಂತೇ  ಮಾಂ ದೃಢವ್ರತಾಃ” ಎಂದು. ಅಂದರೆ  ಒಮ್ಮೆ ಇಂತಹ ಪಾಪ ಕರ್ಮದಿಂದ ಆಚೆ ಬಂದರೆ, ಎಲ್ಲಾ ದ್ವಂದ್ವ ಮೋಹಗಳೂ ಪರಿಹಾರವಾಗಿ ಭಗವಂತನಲ್ಲಿ ಗಾಢವಾದ ಭಕ್ತಿ ನೆಲೆ ನಿಲ್ಲುತ್ತದೆ. ಈ ರೀತಿ ಪಾಪದ ಅರಿವಾಗಿ ಪಶ್ಚಾತ್ತಾಪದಿಂದ ಭಗವಂತನೆಡೆಗೆ ತಿರುಗಿದವರು ಬಹಳ ಬೇಗ ಭಗವಂತನ ದಾರಿಯಲ್ಲಿ ಸಾಗುತ್ತಾರೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

येषां त्वन्तगतं पापं जनानां पुण्यकर्मणाम्‌।
ते द्वन्द्वमोहनिर्मुक्ता भजन्ते मां दृढव्रताः॥

परन्तु निष्काम भाव से श्रेष्ठ कर्मों का आचरण करने वाले जिन पुरुषों का पाप नष्ट हो गया है, वे राग-द्वेषजनित द्वन्द्व रूप मोह से मुक्त दृढ़निश्चयी भक्त मुझको सब प्रकार से भजते हैं
॥28॥

Yeshaam twantagatam paapam janaanaam punyakarmanaam;
Te dwandwamohanirmuktaa bhajante maam dridhavrataah.

But those men of virtuous deeds whose sins have come to an end, and who are freedfrom the delusion of the pairs of opposites, worship Me, steadfast in their vows.

ಅಧ್ಯಾಯ - 07 : ಶ್ಲೋಕ – 29

ಜರಾಮರಣಮೋಕ್ಷಾಯ ಮಾಮಾಶ್ರಿತ್ಯ ಯತಂತಿ  ಯೇ ।ತೇ ಬ್ರಹ್ಮ ತದ್ ವಿದುಃ ಕೃತ್ಸ್ನಮಧ್ಯಾತ್ಮಂ ಕರ್ಮ ಚಾಖಿಲಮ್ ॥೨೯

ಜರಾ ಮರಣ ಮೋಕ್ಷಾಯ ಮಾಮ್ ಆಶ್ರಿತ್ಯ ಯತಂತಿ  ಯೇ ।
ತೇ ಬ್ರಹ್ಮ ತತ್  ವಿದುಃ ಕೃತ್ಸ್ನಮ್ ಅಧ್ಯಾತ್ಮಮ್  ಕರ್ಮ ಚ ಅಖಿಲಮ್-

ಮುಪ್ಪು-ಸಾವುಗಳಿಂದ ಪಾರಾಗಲೆಂದು ನನ್ನನ್ನು ಮೊರೆಹೊಕ್ಕು ಸಾಧನೆಗೆಳಸುವವರು ಆ ‘ಬ್ರಹ್ಮತತ್ವ’ವನ್ನು ತಿಳಿಯಬಲ್ಲರು; ಸಮಗ್ರವಾದ ‘ಅಧ್ಯಾತ್ಮ’ವನ್ನು ಮತ್ತು ಎಲ್ಲ ‘ಕರ್ಮ’ ವನ್ನು ಕೂಡ.

ಭಗವಂತನೆಡೆಗೆ ತಿರುಗಿದವರು ಮುಪ್ಪು-ಸಾವಿನಿಂದ ಪಾರಾಗುವುದಕ್ಕೊಸ್ಕರ, ಈ ಸಂಸಾರ ಬಂಧದಿಂದ ಬಿಡುಗಡೆ ಬಯಸಿ ಭಗವಂತನ ಮೊರೆ ಹೋಗುತ್ತಾರೆ ಮತ್ತು ಸಾಧನೆ ಮಾಡುತ್ತಾರೆ. ಸಾಮಾನ್ಯವಾಗಿ ಏನನ್ನೂ ಬಯಸದೇ ಇರುವುದು ಶ್ರೇಷ್ಠ, ಆದರೆ ಬಯಸುವುದೇ ಜೀವನ ಧರ್ಮವಾಗಿದ್ದಾಗ ಇನ್ನೇನನ್ನೋ ಬಯಸದೆ ಮೋಕ್ಷವನ್ನು ಬಯಸುವುದು ಶ್ರೇಷ್ಠ. ಈ ಶ್ಲೋಕದಲ್ಲಿ ಕೃಷ್ಣ ಮೋಕ್ಷಕ್ಕೆ ಹೋಗುವ ಸಾಧಕನ ಪ್ರಯತ್ನ ಏನು, ಜ್ಞಾನದ ದಾರಿಯಲ್ಲಿ ಹೇಗೆ ಸಾಗಬೇಕು ಅನ್ನುವ ಅದ್ಭುತ ವಿಚಾರವನ್ನು ವಿವರಿಸುತ್ತಾನೆ.
ಅಧ್ಯಾತ್ಮದಲ್ಲಿ ತಿಳಿದುಕೊಳ್ಳಬೇಕಾದ ಸಂಗತಿ ‘ಬ್ರಹ್ಮ’ ಎನ್ನುತ್ತಾನೆ ಕೃಷ್ಣ. ಬ್ರಹ್ಮ ಎನ್ನುವ ಪದ ‘ಅವ ವೃದ್ದೋ’ ಅನ್ನುವ ದಾತುವಿನಿಂದ ಬಂದಿದೆ. ಅವತಿ ಎಂದರೆ ಎಲ್ಲಕ್ಕಿಂತ ದೊಡ್ಡದು ಅದು ಓಂ. ಅಂದರೆ ಅನಾಧಿನಿತ್ಯ, ಸರ್ವ ಗುಣಪೂರ್ಣ, ಸರ್ವಗತ, ಸರ್ವಸಮರ್ಥ ಭಗವಂತ ಬ್ರಹ್ಮ- ಅವನೇ ಓಂ. ಮುಖ್ಯವಾಗಿ ಈ ಶ್ಲೋಕದಲ್ಲಿ   “ತೇ ಬ್ರಹ್ಮ ತದ್ ವಿದುಃ”  ಅಂದರೆ ‘ಎಲ್ಲಾ ಕಡೆ ಇರುವ ಭಗವಂತನನ್ನು ತಿಳಿಯುತ್ತಾರೆ’ ಎಂದರ್ಥ. ಭಗವಂತನ ಸರ್ವಗತತ್ವದ ಸಾಕ್ಷಾತ್ಕಾರವೇ ಬ್ರಹ್ಮಸಾಕ್ಷಾತ್ಕಾರ. ಬಿಂಬಸಾಕ್ಷಾತ್ಕಾರ ಅಂದರೆ ನಮ್ಮೊಳಗಿರತಕ್ಕಂತಹ ಅಣೋರಣೀಯವಾಗಿರುವ ಭಗವಂತನ ಸಾಕ್ಷಾತ್ಕಾರ. ಇಂತಹ ಬಿಂಬರೂಪಿ ಭಗವಂತನೇ ಇಡೀ ವಿಶ್ವದಲ್ಲಿ ವ್ಯಾಪ್ತನಾಗಿ ತುಂಬಿದ್ದಾನೆ ಎನ್ನುವುದು ಬ್ರಹ್ಮಸಾಕ್ಷಾತ್ಕಾರ. ಭಗವಂತನ ವ್ಯಾಪ್ತ ರೂಪವನ್ನು ನಾವು ಕಾಣಲು ಸಾಧ್ಯವಿಲ್ಲ. ಆದರೆ ಆ ವ್ಯಾಪ್ತಿಯ ಅರಿವು ಬಹಳ ಮುಖ್ಯ. ಸೌರಶಕ್ತಿಯಲ್ಲಿ ತುಂಬಿ ಇಡೀ ಪ್ರಪಂಚವನ್ನು ಬೆಳಗಿಸುವವನೂ ಅವನೆ, ನನ್ನೊಳಗಿದ್ದು ಬೆಳಗಿಸುವವನೂ ಅವನೆ ಎನ್ನುವ ಅರಿವು ಆತ್ಮ ಸಾಕ್ಷಾತ್ಕಾರ.  ಬಲಿಚಕ್ರವರ್ತಿಗೆ ಆದ ಅನುಭವ ಕೂಡಾ ಇದೇ. ನಿಮಗೆ ತಿಳಿದಿರುವಂತೆ ವಾಮನ ರೂಪಿ ಭಗವಂತ, ಮಹಾ ದಾನಿ ಬಲಿಚಕ್ರವರ್ತಿಯಲ್ಲಿ ಮೂರು ಹೆಜ್ಜೆ ಭೂಮಿಯನ್ನು ದಾನವಾಗಿ ಕೇಳುತ್ತಾನೆ. ಶುಕ್ರಾಚಾರ್ಯರ ವಿರೋಧವನ್ನು ಲೆಕ್ಕಿಸದೆ ಬಲಿ ವಾಮನನಿಗೆ ದಾನ ಮಾಡಲು ಮುಂದಾಗುತ್ತಾನೆ. ಆಗ ವಾಮನನು ತನ್ನ ಮೊದಲ ಹೆಜ್ಜೆಯಿಂದ ಭೂಮಿಯನ್ನೂ ಮತ್ತು ಎರಡನೇ ಹೆಜ್ಜೆಯಿಂದ ಆಕಾಶವನ್ನು ಆವರಿಸಿದಾಗ , ಮೂರನೇ ಹೆಜ್ಜೆಗೆ ಬಲಿ ತನ್ನ ತಲೆಯನ್ನು ಅರ್ಪಿಸಿ ಪಾತಳವನ್ನು ಸೇರಿ ಉದ್ದಾರವಾಗುತ್ತಾನೆ. ಈ ಕಥೆಯನ್ನು ನಾವು ಸ್ವಲ್ಪ ಆಳವಾಗಿ ವಿಶ್ಲೇಷಿಸಿದರೆ ಕಥೆಯಲ್ಲಿ ಅಡಗಿರುವ ಸಾರ ತಿಳಿಯುತ್ತದೆ. ಸಂಸಾರ ಸಾಗರದಲ್ಲಿ ಮುಳುಗಿರುವ ನಾವೆಲ್ಲರೂ ಒಂದು ರೀತಿಯಲ್ಲಿ ಬಲಿಗಳು. ಭಗವಂತನ ಸಾಕ್ಷಾತ್ಕಾರವಾಗಲು ನಾವೆಲ್ಲರೂ ಮಾನಸಿಕವಾಗಿ, ಆದ್ಯಾತ್ಮಿಕವಾಗಿ ಬಲಿಷ್ಟರಾಗಬೇಕು. ಉಪಾಸನೆಯಲ್ಲಿ ಪ್ರಮುಖವಾಗಿ ಮೂರೂ ಹೆಜ್ಜೆಗಳಿವೆ. ಮೊದಲನೆಯದು ಭಗವಂತನ ಪುಟ್ಟ (ವಾಮನ) ಮೂರ್ತಿಯನ್ನು ದೇವರು ಎಂದು ಆರಾದಿಸುವುದು. ಎರಡನೆಯದು ಉಪಾಸನೆ ಮಾಡುತ್ತಾ ಮಾಡುತ್ತಾ , ಭಗವಂತ ಕೇವಲ ಮೂರ್ತಿಯಲ್ಲಿ ಅಲ್ಲದೆ, ಇಡೀ ಲೋಕದಲ್ಲಿ ವ್ಯಾಪಿಸಿರುವ ಶಕ್ತಿ ಎಂದು ತಿಳಿಯುವುದು. ಪ್ರಮುಖವಾದ ಮೂರನೇ ಹೆಜ್ಜೆ- ಭಗವಂತ ಸರ್ವಾಂತರ್ಯಾಮಿ, ಆತ ನನ್ನೊಳಗೂ ತುಂಬಿದ್ದಾನೆ ಎಂದು ತಿಳಿದು, ಆ ಪರಶಕ್ತಿಗೆ ತಲೆಬಾಗುವುದು. ಆಗ ನಮಗೆ ನಿಜವಾದ ಭಗವಂತನ ಸಾಕ್ಷಾತ್ಕಾರವಾಗುತ್ತದೆ, ಹಾಗು ಭಗವಂತ ನಮ್ಮನ್ನು ಉದ್ದರಿಸುತ್ತಾನೆ. ಬಲಿ ಭಗವಂತ  ನನ್ನೊಳಗೆ ಅಂತರ್ಯಾಮಿ(ಆತ್ಮನಿ ವೇದನಂ) ಎಂದು ತಿಳಿದು ಭಗವಂತನಿಗೆ ತನ್ನನ್ನು ಅರ್ಪಿಸಿಕೊಂಡ(ಆತ್ಮ ನಿವೇದನಂ)ಅಥವಾ ತನ್ನ ತಲೆಯನ್ನು ಕೊಟ್ಟ. ಇದು ಮೂರು ಹೆಜ್ಜೆಯ ಪರಿಕಲ್ಪನೆ.
ಭಗವಂತ ಸರ್ವಗತ-ಸರ್ವಸಮರ್ಥ, ಅವನು ಎಲ್ಲವುದರ ಒಳಗೂ ಇದ್ದು ಎಲ್ಲವನ್ನು ಮಾಡುತ್ತಿದ್ದಾನೆ. ಅವನ ಅಧೀನವಾಗಿರತಕ್ಕ ಪ್ರತಿಬಿಂಬ ಈ ಜೀವ ಎನ್ನುವ ಸತ್ಯ ತಿಳಿದಾಗ ಎಲ್ಲ ಕರ್ಮದ ರಹಸ್ಯ ತಿಳಿಯುತ್ತದೆ. ಆದ್ದರಿಂದ ಅಧ್ಯಾತ್ಮದಲ್ಲಿ ತಿಳಿಯಬೇಕಾದ ಮೊದಲ ಮೂರು ವಿಚಾರ ಎಂದರೆ ಭಗವಂತನ ಪ್ರತಿಬಿಂಬವಾದ ಜೀವ, ಪರಿಪೂರ್ಣ ಮತ್ತು ಸರ್ವಸಮರ್ಥನಾದ ಬ್ರಹ್ಮ, ಆ ಅನಂತ ಸಾಮರ್ಥ್ಯದಿಂದ ನಡೆಯುವ ಕರ್ಮ. ಇದೇ ಬ್ರಹ್ಮ-ಕರ್ಮ-ಅಧಿಆತ್ಮ. ಈ ಮೂರು ವಿಚಾರವಲ್ಲದೆ ಇನ್ನೂ ಮೂರು ವಿಷಯಗಳನ್ನೂ ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

जरामरणमोक्षाय मामाश्रित्य यतन्ति ये।
ते ब्रह्म तद्विदुः कृत्स्नमध्यात्मं कर्म चाखिलम्‌॥

जो मेरे शरण होकर जरा और मरण से छूटने के लिए यत्न करते हैं, वे पुरुष उस ब्रह्म को, सम्पूर्ण अध्यात्म को, सम्पूर्ण कर्म को जानते हैं
॥29॥

Jaraamaranamokshaaya maamaashritya yatanti ye;
Te brahma tadviduh kritsnam adhyaatmam karma chaakhilam.

Those who strive for liberation from old age and death, taking refuge in Me, realise infull that Brahman, the whole knowledge of the Self and all action.

ಅಧ್ಯಾಯ - 07 : ಶ್ಲೋಕ – 30

ಸಾಧಿಭೂತಾಧಿದೈವಂ ಮಾಂ ಸಾಧಿಯಜ್ಞಂ ಚ ಯೇ ವಿದುಃ ।ಪ್ರಯಾಣಕಾಲೇSಪಿ ಚ ಮಾಂ ತೇ ವಿದುರ್ಯುಕ್ತಚೇತಸಃ ॥೩೦॥

ಸ ಅಧಿ ಭೂತ ಅಧಿದೈವಮ್  ಮಾಮ್  ಸ ಅಧಿಯಜ್ಞಮ್  ಚ ಯೇ ವಿದುಃ ।
ಪ್ರಯಾಣ ಕಾಲೇ ಅಪಿ ಚ ಮಾಮ್  ತೇ ವಿದುಃ ಯುಕ್ತ ಚೇತಸಃ –

ಯಾರು ‘ಅಧಿಭೂತ’ –‘ಅಧಿದೈವ’ದ ಜತೆಗೆ ನನ್ನನ್ನು ತಿಳಿಯುತ್ತಾರೆ ; ತಿಳಿದು ಕೊನೆಯ ಕ್ಷಣದಲ್ಲು ನನ್ನನ್ನು ನೆನೆಯುತ್ತಾರೆ, ನನ್ನಲ್ಲೆ ಬಗೆಯಿಟ್ಟ ಅಂಥವರೆ ನನ್ನನ್ನು ಬಲ್ಲವರು.

ಭಗವಂತನ ಅರಿವು ಮೂಡಬೇಕಾದರೆ ಮೊದಲು ಭೌತವಿಜ್ಞಾನ(ಅಧಿಭೂತ)ದ ಅರಿವಿರಬೇಕು. ಪಂಚ ಭೂತಗಳು, ಈ ದೇಹ, ಬ್ರಹ್ಮಾಂಡ, ಪಿಂಡಾಂಡ, ಇಲ್ಲಿರುವ ದ್ರವ್ಯಗಳ ಅರಿವು ಸಾಧನೆಯ ಮೊದಲ ಹೆಜ್ಜೆ. ಅಧಿಭೂತದ ನಂತರ ಅಧಿದೈವದ ಅರಿವು. ನಮ್ಮ ಪಂಚಭೂತಾತ್ಮಕವಾದ ಶರೀರದಲ್ಲಿ ‘ನೋಡುವುದು, ಕೇಳುವುದು, ಅನುಭವಿಸುವುದು’ ಇತ್ಯಾದಿ ಕ್ರಿಯೆ ನಿಯಮಬದ್ಧವಾಗಿ ಹೇಗೆ ನಡೆಯುತ್ತದೆ? ಜಡದಲ್ಲಿ ಕ್ರಿಯೆ ಇಲ್ಲ, ಬದಲಿಗೆ ಅದರ ಹಿಂದಿರುವ ಅಭಿಮಾನಿ ದೇವತೆಗಳು ಒಂದೊಂದು ಇಂದ್ರಿಯದಲ್ಲಿದ್ದು ಒಂದೊಂದು ಕ್ರಿಯೆಯನ್ನು ನಿಯಂತ್ರಿಸುತ್ತಿದ್ದಾರೆ-ಇದು ಅಧಿದೈವದ ತಿಳುವಳಿಕೆ. ಇಂತಹ ಸಹಸ್ರಾರು ದೇವತೆಗಳನ್ನು ನಿಯಂತ್ರಿಸುವ ಅಧ್ಯಕ್ಷ ಆ ಭಗವಂತ. ಈ ಪ್ರಪಂಚದಲ್ಲಿ ಅಥವಾ ಪಿಂಡಾಂಡದಲ್ಲಿ ನಡೆಯುವ ಪ್ರತಿಯೊಂದು ಕ್ರಿಯೆ ಒಂದು ಯಜ್ಞ. ಆ ಯಜ್ಞವನ್ನು ಅಧ್ಯಕ್ಷನಾಗಿ ನಡೆಸುವವನು ಅಧಿಯಜ್ಞ. ಆತ ಸಮಸ್ತ ದೇವತೆಗಳ ನಿಯಾಮಕನಾದ ಭಗವಂತ.
ಒಟ್ಟಿನಲ್ಲಿ ನಾವು ಆರು ವಿಚಾರವನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು. ೧. ಅಧಿಭೂತ-ಭೌತಿಕ ಪ್ರಪಂಚ.; ೨. ಅಧಿಆತ್ಮ-ಜೀವಾತ್ಮ ; ೩. ಅಧಿದೈವ-ಸಮಸ್ತ ತತ್ವಾಭಿಮಾನಿ ದೇವತೆಗಳು ; ೪. ಅಧಿಯಜ್ಞ-ಸರ್ವ ನಿಯಾಮಕ ಭಗವಂತ; ೫. ಬ್ರಹ್ಮ ಸಾಕ್ಷಾತ್ಕಾರ -ಅಂತರ್ಯಾಮಿಯಾಗಿರುವ ಬಿಂಬ ರೂಪಿ ಭಗವಂತನೇ ಎಲ್ಲಾ ಕಡೆ ತುಂಬಿದ್ದಾನೆ ಎನ್ನುವ ಅರಿವು; ೬. ಎಲ್ಲಾ ಕರ್ಮಗಳೂ ಆ ಭಗವಂತನ ಅಧೀನವಾಗಿ ನಡೆಯುತ್ತವೆ ಎನ್ನುವ ಸತ್ಯ.
ಈ ಆರು ವಿಚಾರಗಳೂ ನಮ್ಮ ಜೀವನದ ಕೊನೆಯ ಕ್ಷಣದಲ್ಲಿ(ದೇಹ ತ್ಯಾಗ ಮಾಡುವಾಗ)ಕೂಡ ನಮ್ಮ ಮನದಲ್ಲಿ ಗಾಢವಾಗಿ ನಿಂತಿರಬೇಕು. ನಾವು ದೇಹ ತ್ಯಾಗ ಮಾಡುವಾಗ ನಮ್ಮ ಮನದಲ್ಲಿ ಯಾವುದು ಗಾಢವಾಗಿ ನಿಂತಿರುತ್ತದೋ ಅದು ನಮ್ಮ ಮುಂದಿನ ಜನ್ಮವನ್ನು ನಿರ್ಧರಿಸುತ್ತದೆ. ಇದಕ್ಕಾಗಿ ಜೀವಮಾನದಲ್ಲಿ ಭಗವಂತನ ಅರಿವು ಬಹಳ ಮುಖ್ಯ. “ಸಾಧನೆಯಲ್ಲಿ ಎಂದೂ ಯಾವುದೇ ಮೋಹಕ್ಕೊಳಗಾಗದೆ, ಅಂತ್ಯಕಾಲದಲ್ಲೂ ಸದಾ ಭಗವಂತನನ್ನು ಚಿಂತಿಸುವವನು ನನ್ನನ್ನು ಸೇರುತ್ತಾನೆ” ಎನ್ನುತ್ತಾನೆ ಕೃಷ್ಣ.

ಹೀಗೆ ಈ ಅಧ್ಯಾಯದಲ್ಲಿ ಜ್ಞಾನದ ವೈಭವವನ್ನು ನಮ್ಮ ಮುಂದೆ ತೆರೆದಿಟ್ಟ ಕೃಷ್ಣ, ಮುಂದಿನ ಅಧ್ಯಾಯದಲ್ಲಿ ಅಧಿಭೂತ, ಅಧಿದೈವ, ಅಧಿಆತ್ಮ, ಅಧಿಯಜ್ಞ, ಬ್ರಹ್ಮ, ಕರ್ಮ ಇದರ ವಿಸ್ತಾರವಾದ ವಿವರಣೆಯನ್ನು ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

ಇತಿ ಸಪ್ತಮೋSಧ್ಯಾಯಃ

ಏಳನೆಯ ಅಧ್ಯಾಯ ಮುಗಿಯಿತು

🍁🍁🍁🍁🍁🍁🍁🍁🍁🍁🍁

साधिभूताधिदैवं मां साधियज्ञं च ये विदुः।
प्रयाणकालेऽपि च मां ते विदुर्युक्तचेतसः॥

जो पुरुष अधिभूत और अधिदैव सहित तथा अधियज्ञ सहित (सबका आत्मरूप) मुझे अन्तकाल में भी जानते हैं, वे युक्तचित्तवाले पुरुष मुझे जानते हैं अर्थात प्राप्त हो जाते हैं
॥30॥

ॐ तत्सदिति श्रीमद्भगवद्गीतासूपनिषत्सु ब्रह्मविद्यायां योगशास्त्रे श्रीकृष्णार्जुनसंवादे ज्ञानविज्ञानयोगो नाम सप्तमोऽध्यायः
॥7॥

Saadhibhootaadhidaivam maam saadhiyajnam cha ye viduh;
Prayaanakaale’pi cha maam te vidur yuktachetasah.

Those who know Me with the Adhibhuta (pertaining to the elements), the Adhidaiva(pertaining to the gods), and Adhiyajna (pertaining to the sacrifice), know Me even at the time ofdeath, steadfast in mind.COMMENTARY: They who are steadfast in mind, who have taken refuge in Me, whoknow Me as knowledge of elements on the physical plane, as knowledge of gods on the celestial ormental plane, as knowledge of sacrifice in the realm of sacrifice,—they are not affected by death.

Hari Om Tat SatIti Srimad Bhagavadgeetaasoopanishatsu BrahmavidyaayaamYogashaastre Sri KrishnaarjunasamvaadeJnaanavijnaanayogo Naama Saptamo’dhyaayah

Thus in the Upanishads of the glorious Bhagavad Gita, the science of the Eternal, thescripture of Yoga, the dialogue between Sri Krishna and Arjuna, ends the seventh discourseentitled:“The Yoga of Wisdom and Realisation”