ಬುದ್ಧಿಯುಕ್ತೋ ಜಹಾತೀಹ ಉಭೇ ಸುಕೃತದುಷ್ಕೃತೇ ।ತಸ್ಮಾದ್ ಯೋಗಾಯ ಯುಜ್ಯಸ್ವ ಯೋಗಃ ಕರ್ಮಸು ಕೌಶಲಮ್ ॥೫೦॥
ಬುದ್ಧಿಯುಕ್ತಃ ಜಹಾತಿ ಇಹ ಉಭೇ ಸುಕೃತದುಷ್ಕೃತೇ
ತಸ್ಮಾತ್ ಯೋಗಾಯ ಯುಜ್ಯಸ್ವ ಯೋಗಃ ಕರ್ಮಸು ಕೌಶಲಮ್-
ಭಗವಂತನನ್ನರಿತವನು ಬೇಡವಾದ ಪುಣ್ಯಪಾಪಗಳೆರಡನ್ನು ಇಲ್ಲೆ ತೊರೆಯುತ್ತಾನೆ. ಆದ್ದರಿಂದ ಅರಿವಿನ 'ಯೋಗ'ಕ್ಕೆ ತೊಡಗು. 'ಯೋಗ'ವೆಂದರೆ ಇದೆ: ತಿಳಿದು ಮಾಡುವ ಜಾಣತನ.
ತಿಳುವಳಿಕೆಯಿಂದ ಕರ್ಮ ಮಾಡಿದರೆ ತನ್ನ ಎಲ್ಲಾ ಪಾಪಗಳನ್ನು ಹಾಗು ಬೇಡವಾದ ಪುಣ್ಯವನ್ನು ತೊರೆದು ಭಗವಂತನನ್ನು ಸೇರುತ್ತಾನೆ. ಇಲ್ಲಿ ಬೇಡವಾದ ಪುಣ್ಯ ಅಂದರೆ: ಉದಾಹರಣೆಗೆ ಒಬ್ಬ ಮಹಾತ್ಮ ತನ್ನ ಜ್ಞಾನ ಕರ್ಮಗಳಿಂದ ಮೋಕ್ಷವನ್ನು ಪಡೆಯುತ್ತಾನೆ. ಹೀಗೆ ಈ ಮಾರ್ಗದಲ್ಲಿರುವಾಗ ಆತ ಇತರ ಪುಣ್ಯವನ್ನೂ ಗಳಿಸುತ್ತಾನೆ. ಒಂದು ವೇಳೆ ಆತ ಚಕ್ರವರ್ತಿಯಾಗಿ ಮೆರೆಯುವ ಪುಣ್ಯವನ್ನು ಪಡೆದಿದ್ದರೆ ಅದು ಆತನಿಗೆ ಬೇಡವಾದ ಪುಣ್ಯ. ಏಕೆಂದರೆ ಮೋಕ್ಷದ ಮುಂದೆ ಈ ಪುಣ್ಯದ ಅವಶ್ಯಕತೆ ಆತನಿಗಿಲ್ಲ. ಆತ ಈ ಪುಣ್ಯವನ್ನು ಇಲ್ಲೇ ತೊರೆಯುತ್ತಾನೆ. ಇದನ್ನು ಇಲ್ಲಿ ಬೇಡವಾದ ಪುಣ್ಯ ಎಂದಿರುವುದು. ಯಾರು ಹೀಗೆ ಭಗವತ್ಪ್ರಜ್ಞೆಯಲ್ಲಿ ಬದುಕುತ್ತಾರೋ ಅವರು ಮಾಡಿದ ಕರ್ಮ ಅವರ ಪಾಪ ಪುಣ್ಯದ ಬಂಧನಕ್ಕೆ ಕಾರಣವಾಗುವುದಿಲ್ಲ. ಆದ್ದರಿಂದ ಜ್ಞಾನಯೋಗದಲ್ಲಿ ನಿಂತು ಆ ಅರಿವಿನಿಂದ ಕರ್ಮವನ್ನು ಮಾಡುವುದು ಜಾಣತನ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
बुद्धियुक्तो जहातीह उभे सुकृतदुष्कृते।
तस्माद्योगाय युज्यस्व योगः कर्मसु कौशलम्॥
समबुद्धियुक्त पुरुष पुण्य और पाप दोनों को इसी लोक में त्याग देता है अर्थात उनसे मुक्त हो जाता है। इससे तू समत्व रूप योग में लग जा, यह समत्व रूप योग ही कर्मों में कुशलता है अर्थात कर्मबंध से छूटने का उपाय है
॥50॥
Buddhiyukto jahaateeha ubhe sukrita dushkrite;
Tasmaad yogaaya yujyaswa yogah karmasu kaushalam.
Endowed with wisdom (evenness of mind), one casts off in this life both good and evildeeds;
therefore, devote thyself to Yoga;
Yoga is skill in action.COMMENTARY: Actions which are of a binding nature lose that nature when performedwith equanimity of mind.
No comments:
Post a Comment