Wednesday, 5 September 2018

ಅಧ್ಯಾಯ - 02 : ಶ್ಲೋಕ - 52


ಯದಾ ತೇ ಮೋಹಕಲಿಲಂ ಬುದ್ಧಿರ್ವ್ಯತಿತರಿಷ್ಯತಿ ।ತದಾ ಗಂತಾನಿ ನಿರ್ವೇದಂ ಶ್ರೋತವ್ಯಸ್ಯ ಶ್ರುತಸ್ಯ ಚ    ॥೫೨॥ ಯದಾ ತೇ ಮೋಹ ಕಲಿಲಮ್  ಬುದ್ಧಿಃ ವ್ಯತಿತರಿಷ್ಯತಿ  ತದಾ ಗಂತಾ ಅನಿ ನಿರ್ವೇದಮ್  ಶ್ರೋತವ್ಯಸ್ಯ ಶ್ರುತಸ್ಯ ಚ -- ಎಂದು ನಿನ್ನ ಬುದ್ಧಿ ಅಜ್ಞಾನದ ಕೊಳೆಯನ್ನು ಕಳೆದುಕೊಳ್ಳುವುದೋ, ಅಂದು  ಮುಂದೆ ಕೇಳುವ, ಹಿಂದೆ ಕೇಳಿದ ಉಪದೇಶದ ಪೂರ್ತಿ ಫಲವನ್ನು ಪಡೆಯುವೆ. ಯಾವಾಗ ನಾವು ಓದಿದ್ದು ಕೇಳಿದ್ದು ಸಾರ್ಥಕವಾಗುವುದು?  ನಮ್ಮ ಬುದ್ಧಿ ಎಷ್ಟು ಕೇಳಿದರೂ ಕೂಡಾ ಪುನಃ ಗೊಂದಲದಲ್ಲೇ ಇದ್ದರೆ, ಎಷ್ಟು ಕೇಳಿಯೂ ಉಪಯೋಗವಿಲ್ಲ. ಓದುವುದರಿಂದ, ಕೇಳುವುದರಿಂದ ನಮ್ಮ ಮನಸ್ಸಿನ ಕೊಳೆ ತೊಳೆದು ಹೋಗಿ ಮನಸ್ಸು ತಿಳಿಯಾಗಬೇಕು. ಇಂತಹ ಮನಸ್ಸಿಗೆ ಎಂದೂ ದುಗುಡ, ಆತಂಕ ಇರುವುದಿಲ್ಲ. ಈ ಸ್ಥಿತಿಯಲ್ಲಿ ಕೋಪ ಬಾರದು. ಇಂತಹ ರಾಗ-ದ್ವೇಷ ರಹಿತವಾದ, ಎಂತಹ ಸಂದರ್ಭದಲ್ಲೂ ಸಮತೋಲನ ಕಳೆದುಕೊಳ್ಳದ ಮನಸ್ಸು ಬಂದಾಗ, ಓದಿದ್ದು, ಕೇಳಿದ್ದು ಸಾರ್ಥಕವಾಗುತ್ತದೆ.ಇಂತಹ ಸ್ಥಿತಿಯಲ್ಲಿ ಹಿಂದೆ ಕೇಳಿದ, ಹಾಗು ಇನ್ನು ಕೇಳುವ ಉಪದೇಶ ಪೂರ್ತಿ ಫಲವನ್ನು ಕೊಡುತ್ತದೆ. ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

 यदा ते मोहकलिलं बुद्धिर्व्यतितरिष्यति। तदा गन्तासि निर्वेदं श्रोतव्यस्य श्रुतस्य च॥ जिस काल में तेरी बुद्धि मोहरूपी दलदल को भलीभाँति पार कर जाएगी, उस समय तू सुने हुए और सुनने में आने वाले इस लोक और परलोक संबंधी सभी भोगों से वैराग्य को प्राप्त हो जाएगा ॥52॥

 Yadaa te mohakalilam buddhir vyatitarishyati; Tadaa gantaasi nirvedam shrotavyasya shrutasya cha. When thy intellect crosses beyond the mire of delusion, then thou shalt attain toindifference as to what has been heard and what has yet to be heard.COMMENTARY: The mire of delusion is identification of the Self with the body andmind.

No comments:

Post a Comment