Thursday, 6 September 2018

ಅಧ್ಯಾಯ - 02 : ಶ್ಲೋಕ - 65

ಪ್ರಸಾದೇ ಸರ್ವದುಃಖಾನಾಂ ಹಾನಿರಸ್ಯೋಪಜಾಯತೇ  ।ಪ್ರಸನ್ನಚೇತಸೋ ಹ್ಯಾಶು ಬುದ್ಧಿಃ ಪರ್ಯವತಿಷ್ಠತಿ ॥೬೫॥

ಪ್ರಸಾದೇ ಸರ್ವ ದುಃಖಾನಾಮ್  ಹಾನಿಃ ಅಸ್ಯ ಉಪಜಾಯತೇ
ಪ್ರಸನ್ನಚೇತಸಃ ಹಿ ಅಶು ಹ್ಯಾಶು ಬುದ್ಧಿಃ ಪರಿ ಅವತಿಷ್ಠತಿ-

-ಮನಸ್ಸು ತಿಳಿಗೊಂಡಾಗ ಸಾಧಕನ ಎಲ್ಲಾ ದುಗುಡಗಳು ಇಲ್ಲವಾಗುತ್ತವೆ. ಏಕೆಂದರೆ ಬಗೆ ತಿಳಿಗೊಂಡವನ ಬುದ್ಧಿ  ಬೇಗನೆ ಭಗವಂತನಲ್ಲಿ ನೆಲೆಗೊಳ್ಳುತ್ತದೆ.
ಮನಸ್ಸು ಕೊಳೆಯಾದರೆ ಎಲ್ಲವೂ ಕೊಳೆ. ಮನಸ್ಸು ತಿಳಿಯಾದರೆ ಎಲ್ಲವೂ ತಿಳಿ. ಎಲ್ಲಾ ಸಮಸ್ಯೆ ಇರುವುದು ಮನಸ್ಸು ಕೊಳೆಯಾಗುವುದರಿಂದ. ನಮಗೆ ನಮ್ಮ ಮನಸ್ಸಿನ ಸ್ವಚ್ಛತೆ ಬಗ್ಗೆ ಗಮನ ಇಲ್ಲದಿದ್ದರೆ ಇತರ ಎಲ್ಲಾ ಕಾರ್ಯವೂ ವ್ಯರ್ಥ. ಮನಸ್ಸು ಸ್ವಚ್ಚವಾದರೆ ಮಡಿ. ಅದೇ ಪ್ರಸನ್ನವಾದ ಸ್ಥಿತಿ.  ಮನಸ್ಸು ತಿಳಿಯಾದಾಗ ಸರ್ವ ದುಃಖವೂ ತನ್ನಷ್ಟಕ್ಕೆ ತಾನು ಕಣ್ಮರೆಯಾಗುತ್ತದೆ. ಇದು ದುಃಖಾತೀತ ಆನಂದ ಸ್ಥಿತಿ.

ಮನಸ್ಸು ತಿಳಿಯಾಯಿತು ಎಂದರೆ ಅದು ಭಗವಂತನನ್ನು ತಿಳಿಯಲು ಸಹಾಯ ಮಾಡುತ್ತದೆ. ಕೊಳೆಯಾದ ಮನಸ್ಸಿನಿಂದ ಭಗವಂತನ ಚಿಂತನೆ ಸಾಧ್ಯವಿಲ್ಲ. ಭಗವಂತನನ್ನು ತಿಳಿದ ಮೇಲೆ ದುಃಖವಿಲ್ಲ. ಬುದ್ಧಿ-ಗಟ್ಟಿಗೊಂಡು ಭಗವಂತನ ಅಪರೋಕ್ಷ  ಜ್ಞಾನದಲ್ಲಿ ನಿಂತುಬಿಡುತ್ತದೆ. ಈ ಸ್ಥಿತಿಯಲ್ಲಿ ಯಾವ ದೆಸೆಯಲ್ಲಿ ಯೋಚನೆ ಹೋದರೂ ಕೂಡಾ ಅದು ಭಗವಂತನಲ್ಲಿ ಹೋಗಿ ನಿಲ್ಲುತ್ತದೆ. ಯಾವುದನ್ನು ಕೇಳಿದರು, ಯಾವುದನ್ನು ನೋಡಿದರು, ಅದರ ಹಿಂದೆ ಇರುವ ಜಗತ್ತಿನ ಮೂಲ ಶಕ್ತಿಯ ಚಿಂತನೆ ಮನಸ್ಸಿಗೆ ಬಂದುಬಿಡುತ್ತದೆ. ಆಗ ಯಾವುದೋ ಸಣ್ಣ ಸಂಗತಿಗಾಗಿ ಕೊರಗುವ ಪ್ರಶ್ನೆಯೇ ಉಳಿಯುವುದಿಲ್ಲ. ತಿಳಿಯಾದ ಮನಸ್ಸು ಭಗವನ್ಮಯವಾಗುತ್ತದೆ. ಒಮ್ಮೆ ಭಗವಂತ ಮನಸ್ಸಿನಲ್ಲಿ ತುಂಬಿದ ಅಂದರೆ ಸರ್ವವೂ ಆನಂದಮಯ. ಆ ನಂತರ ದುಃಖವೆಂಬುವುದಿಲ್ಲ;  ಈ ಆನಂದ ಅಪರಿಮಿತ.


ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

प्रसादे सर्वदुःखानां हानिरस्योपजायते।
प्रसन्नचेतसो ह्याशु बुद्धिः पर्यवतिष्ठते॥

अन्तःकरण की प्रसन्नता होने पर इसके सम्पूर्ण दुःखों का अभाव हो जाता है और उस प्रसन्नचित्त वाले कर्मयोगी की बुद्धि शीघ्र ही सब ओर से हटकर एक परमात्मा में ही भलीभाँति स्थिर हो जाती है
॥65॥

Prasaade sarvaduhkhaanaam haanir asyopajaayate;
Prasannachetaso hyaashu buddhih paryavatishthate.

In that peace all pains are destroyed, for the intellect of the tranquil-minded soonbecomes steady.COMMENTARY: When peace is attained all miseries end.

No comments:

Post a Comment