Thursday, 6 September 2018

ಅಧ್ಯಾಯ - 02 : ಶ್ಲೋಕ - 70

ಆಪೂರ್ಯಮಾಣಮಚಲಪ್ರತಿಷ್ಠಂ ಸಮುದ್ರಮಾಪಃ ಪ್ರವಿಶಂತಿ ಯದ್ವತ್ ।ತದ್ವತ್ ಕಾಮಾ ಯಂ ಪ್ರವಿಶಂತಿ ಸರ್ವೇ ಸ ಶಾಂತಿಮಾಪ್ನೋತಿ ನ ಕಾಮಕಾಮೀ ॥೭೦॥

ಆಪೂರ್ಯಮಾಣಮ್ ಅಚಲಪ್ರತಿಷ್ಠಮ್  ಸಮುದ್ರಮ್ ಅಪಃ ಪ್ರವಿಶಂತಿ ಯದ್ವತ್
ತದ್ವತ್ ಕಾಮಾಃ  ಯಮ್  ಪ್ರವಿಶಂತಿ ಸರ್ವೇ ಸಃ  ಶಾಂತಿಮ್ ಅಪ್ನೋತಿ ನ ಕಾಮಕಾಮೀ-

-ತುಂಬಿದರೂ ತುಳುಕದೆ ನಿಂತ ಕಡಲನ್ನು ಎಲ್ಲ ನೀರುಗಳು ಬಂದು ಸೇರುವಂತೆ, ಯಾರನ್ನು ಎಲ್ಲ ವಿಷಯಗಳು ತುಂಬಿಯೂ ತುಳುಕದಂತೆ ಬಂದು ಸೇರುವವೋ ಅವನು ಮುಕ್ತಿ ಪಡೆಯುತ್ತಾನೆ. ಹೊರತು  ಕೆಟ್ಟ ಬಯಕೆಗಳ ಬೆನ್ನು ಹತ್ತಿದವನಲ್ಲ.

ಭಗವಂತನನ್ನು ಕಂಡವನು, ಸತ್ಯದ ಸಾಕ್ಷಾತ್ಕಾರವಾದವನು. ಭಗವಂತನನ್ನು ಕಾಣುವ ಸರಿ ದಾರಿಯಲ್ಲಿ ನಡೆಯುವವನು ಹೇಗಿರುತ್ತಾನೆ ಎನ್ನುವ ವಿಷಯದ ಮೇಲೆ ಕೃಷ್ಣ ಇಲ್ಲಿ ಇನ್ನಷ್ಟು ವಿವರಣೆಯನ್ನು ಕೊಟ್ಟಿದ್ದಾನೆ: ಆತನ ಮನಸ್ಸು ಸದಾ ಆನಂದವಾಗಿರುತ್ತದೆ. ಅದು ಭಗವಂತನಲ್ಲಿ ನೆಲೆಗೊಂಡಿರುತ್ತದೆ.  ಆತ ಕಿರು ತೊರೆಗಳಂತೆ ಇರದೆ ಕಡಲಿನಂತಿರುತ್ತಾನೆ. ಸಮುದ್ರಕ್ಕೆ ಎಲ್ಲಾ ನದಿಗಳು ಬಂದು ಸೇರಿದರೂ ಅದು ಉಕ್ಕೇರುವುದಿಲ್ಲ. ಕಡಲು ಮಳೆ ಬಂದಾಗ ಉಕ್ಕಿ ಹರಿದು- ಬೇಸಿಗೆ ಬಂದಾಗ ಬತ್ತಿ ಹೋಗುವುದಿಲ್ಲ. ಅದೇ ರೀತಿ ಸಾಧಕ ಪ್ರಪಂಚದ ಎಲ್ಲಾ  ಭೋಗಗಳು ಅವನನ್ನು ಪ್ರವೇಶಿಸಿದರೂ ಕೂಡಾ, ವಿಚಲಿತನಾಗದೆ ಸುಖ-ದುಃಖವನ್ನು ಮೀರಿ ನಿಲ್ಲುತ್ತಾನೆ. ಆತನ ಮನಸ್ಸು ಸದಾ ಪ್ರಸನ್ನವಾಗಿರುತ್ತದೆ. ಆತ ಭಗವಂತನಲ್ಲಿ ನಿಷ್ಠೆಯನ್ನಿಟ್ಟು ಮೋಕ್ಷವನ್ನು ಪಡೆಯುತ್ತಾನೆ. ಆದರೆ ಬಯಕೆಗಳ ಬೆನ್ನು ಹತ್ತಿದವನು ಅದರಿಂದ ಈಚೆ ಬಾರದೆ ಎಂದೂ ನಿಜವಾದ ಸುಖ ಕಾಣಲಾರ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

आपूर्यमाणमचलप्रतिष्ठं-
समुद्रमापः प्रविशन्ति यद्वत्‌।
तद्वत्कामा यं प्रविशन्ति सर्वे
स शान्तिमाप्नोति न कामकामी॥

जैसे नाना नदियों के जल सब ओर से परिपूर्ण, अचल प्रतिष्ठा वाले समुद्र में उसको विचलित न करते हुए ही समा जाते हैं, वैसे ही सब भोग जिस स्थितप्रज्ञ पुरुष में किसी प्रकार का विकार उत्पन्न किए बिना ही समा जाते हैं, वही पुरुष परम शान्ति को प्राप्त होता है, भोगों को चाहने वाला नहीं
॥70॥

Aapooryamaanam achalapratishthamSamudram aapah pravishanti yadwat;
Tadwat kaamaa yam pravishanti sarveSa shaantim aapnoti na kaamakaami.

He attains peace into whom all desires enter as waters enter the ocean, which, filled fromall sides, remains unmoved;
but not the man who is full of desires.

No comments:

Post a Comment