Thursday, 6 September 2018

ಅಧ್ಯಾಯ - 03 : ಶ್ಲೋಕ – 02

ವ್ಯಾಮಿಶ್ರೇಣ್ಯೇವ ವಾಕ್ಯೇನ ಬುದ್ಧಿಂ ಮೋಹಯಸೀವ ಮೇ ।ತದೇಕಂ ವದ ನಿಶ್ಚಿತ್ಯ ಯೇನ ಶ್ರೇಯೋsಹಮಾಪ್ನುಯಾಮ್ ॥೨॥

ವ್ಯಾಮಿಶ್ರೇಣ ಇವ  ವಾಕ್ಯೇನ ಬುದ್ಧಿಮ್  ಮೋಹಯಸಿ ಇವ ಮೇ
ತತ್  ಏಕಮ್ ವದ ನಿಶ್ಚಿತ್ಯ ಯೇನ ಶ್ರೇಯಃ ಅಹಮ್ ಅಪ್ನುಯಾಮ್-

ಇಬ್ಬಗೆಯ ಮಾತಿನಿಂದ ನನ್ನ ನಿರ್ಧಾರಶಕ್ತಿಯನ್ನು ಗೊಂದಲಕ್ಕೀಡುಮಾಡುವಂತಿದೆ. ಆದ್ದರಿಂದ,ಒಂದನ್ನು ನಿರ್ಧರಿಸಿ ಹೇಳು: ಯಾವುದರಿಂದ ನಾನು ಒಳಿತನ್ನು ಪಡೆದೇನು?

ಇಲ್ಲಿ 'ವ್ಯಾಮಿಶ್ರೇಣ' ಎಂದರೆ ಸಂದಿಗ್ದಾರ್ಥ (Contradicting, Confusing). “ಈ  ರೀತಿ ಇಬ್ಬಗೆಯ ಮಾತಿನಿಂದ ನನಗೆ ಯಾವುದು ಸರಿ-ಯಾವುದು ತಪ್ಪು ಎನ್ನುವ ತೀರ್ಮಾನ ಬರುತ್ತಿಲ್ಲ, ಹಾಗು ಆ ಶಕ್ತಿ  ನನ್ನಲ್ಲಿಲ್ಲ. ನಿನ್ನ ಅಭಿಪ್ರಾಯವನ್ನು ನಾನು ಗ್ರಹಿಸಲಾರೆ. ಯಾವ ದಾರಿಯಲ್ಲಿ ನಡೆದರೆ ನಾನು ಶ್ರೇಯಸ್ಸನ್ನು ಪಡೆದೇನು? ನನ್ನ ಬದುಕು ಸಾರ್ಥಕವಾಗುವ ನಿಶ್ಚಿತ ದಾರಿಯನ್ನು ಹೇಳು” ಎಂದು ಕೃಷ್ಣನಲ್ಲಿ ಅರ್ಜುನ ಕೇಳಿಕೊಳ್ಳುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

व्यामिश्रेणेव वाक्येन बुद्धिं मोहयसीव मे।
तदेकं वद निश्चित्य येन श्रेयोऽहमाप्नुयाम्‌॥

आप मिले हुए-से वचनों से मेरी बुद्धि को मानो मोहित कर रहे हैं। इसलिए उस एक बात को निश्चित करके कहिए जिससे मैं कल्याण को प्राप्त हो जाऊँ
॥2॥॥

Vyaamishreneva vaakyena buddhim mohayaseeva me;
Tadekam vada nishchitya yena shreyo’ham aapnuyaam.

With these apparently perplexing words Thou confusest, as it were, my understanding;
therefore, tell me that one way for certain by which I may attain bliss.

No comments:

Post a Comment