Thursday, 6 September 2018

ಅಧ್ಯಾಯ - 03 : ಶ್ಲೋಕ – 07

ಯಸ್ತ್ವಿಂದ್ರಿಯಾಣಿ   ಮನಸಾ ನಿಯಮ್ಯಾsರಭತೇsರ್ಜುನ ।ಕರ್ಮೇಂದ್ರಿಯೈಃ ಕರ್ಮಯೋಗಮಸಕ್ತಃ ಸ ವಿಶಿಷ್ಯತೇ ॥೭॥

ಯಃ ತು ಇಂದ್ರಿಯಾಣಿ  ಮನಸಾ ನಿಯಮ್ಯ ಆರಭತೇ ಅರ್ಜುನ
ಕರ್ಮ ಇಂದ್ರಿಯೈಃ ಕರ್ಮಯೋಗಮ್ ಅಸಕ್ತಃ ಸ ವಿಶಿಷ್ಯತೇ-

ಓ ಅರ್ಜುನ, ಇಂದ್ರಿಯಗಳನ್ನು ಮನೋಬಲದಿಂದ ಗೆದ್ದು, ಫಲದ ನಂಟು ತೊರೆದು, ಇಂದ್ರಿಯಗಳ ಮೂಲಕ ಸಾಧನೆಯಲ್ಲಿ ತೊಡಗುವವನು ಮಿಗಿಲಾದವನು.

ಮನಸ್ಸು ಸ್ವಚ್ಛವಾಗಿದ್ದು, ಇಂದ್ರಿಯಗಳ ಮೇಲೆ ಮಾನಸಿಕ ಕಡಿವಾಣ ಗಟ್ಟಿಯಿದ್ದಾಗ- ಕರ್ಮೆಂದ್ರಿಯದಿಂದ ಮಾಡುವ ಸಾಧನೆ  ಕರ್ಮಯೋಗವಾಗುತ್ತದೆ. ಇದು ಶುದ್ಧ ಅಧ್ಯಾತ್ಮ ಸಾಧನೆ. ಈ ಸ್ಥಿತಿಯಲ್ಲಿ ಇಂದ್ರಿಯಗಳು ದಾರಿ ತಪ್ಪುವುದಿಲ್ಲ. ತನ್ನ ಜೀವ ಸ್ವರೂಪದ ಸ್ವಭಾವಕ್ಕನುಗುಣವಾಗಿ ಚತ್ತ ಶುದ್ಧಿಯಿಂದ ಮಾಡುವ ಕರ್ಮ ನಿಜವಾದ ಅಧ್ಯಾತ್ಮ ಸಾಧನೆ. ಈ ರೀತಿಯ ಸಾಧನೆಯಲ್ಲಿ ತೊಡಗುವವನು ಶ್ರೇಷ್ಠನೆನಿಸುತ್ತಾನೆ. ಇಂತವರು ಒಳಗೊಂದು-ಹೊರಗೊಂದು ಆಗಿರದೆ, ಮನೋಬಲದಿಂದ ಇಂದ್ರಿಯಗಳನ್ನು ಗೆದ್ದು, ಫಲದ ನಂಟನ್ನು ತೊರೆದು, ಎತ್ತರಕ್ಕೇರುತ್ತಾರೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यस्त्विन्द्रियाणि मनसा नियम्यारभतेऽर्जुन।
कर्मेन्द्रियैः कर्मयोगमसक्तः स विशिष्यते॥

किन्तु हे अर्जुन! जो पुरुष मन से इन्द्रियों को वश में करके अनासक्त हुआ समस्त इन्द्रियों द्वारा कर्मयोग का आचरण करता है, वही श्रेष्ठ है
॥7॥॥

Yastwindriyaani manasaa niyamyaarabhate’rjuna;
Karmendriyaih karmayogam asaktah sa vishishyate.

But whosoever, controlling the senses by the mind, O Arjuna, engages himself in KarmaYoga with the organs of action, without attachment, he excels!

No comments:

Post a Comment