Thursday, 6 September 2018

ಅಧ್ಯಾಯ - 03 : ಶ್ಲೋಕ – 25

ಸಕ್ತಾಃ ಕರ್ಮಣ್ಯವಿದ್ವಾಂಸೋ ಯಥಾ ಕುರ್ವಂತಿ  ಭಾರತ।ಕುರ್ಯಾದ್ ವಿದ್ವಾಂಸ್ತಥಾsಸಕ್ತಶ್ಚಿಕೀರ್ಷುರ್ಲೋಕಸಂಗ್ರಹಮ್ ॥೨೫॥

ಸಕ್ತಾಃ ಕರ್ಮಣಿ ಅವಿದ್ವಾಂಸಃ ಯಥಾ ಕುರ್ವಂತಿ  ಭಾರತ
ಕುರ್ಯಾತ್  ವಿದ್ವಾನ್ ತಥಾ ಅಸಕ್ತಃ ಚಿಕೀರ್ಷುಃ ರ್ಲೋಕ ಸಂಗ್ರಹಮ್ -

ಓ ಭಾರತ, ತಿಳಿಯದ ಮಂದಿ ಫಲದ ನಂಟಿಗಾಗಿ ಕರ್ಮಗಳನ್ನು ಮಾಡುತ್ತಾರೆ ಹೇಗೆ, ಹಾಗೇ ತಿಳಿದವನೂ ಕರ್ಮ ಮಾಡುತ್ತಿರಬೇಕು-ಫಲದ ನಂಟು ತೊರೆದು, ಸಮಾಜವನ್ನು ತಿದ್ದುವುದಕ್ಕಾಗಿ.

ತಿಳುವಳಿಕೆ ಇಲ್ಲದವರು ಫಲಾಪೇಕ್ಷೆಯಿಂದ ಕರ್ಮ ಮಾಡುತ್ತಾರೆ. ಆದರೆ ತಿಳಿದವನು, ಜ್ಞಾನಿ, ಯಾವುದೇ  ಫಲದ ಅಧಿಕಾರ ಸಾಧಿಸದೆ, ನಿಷ್ಕಾಮ ಕರ್ಮ ಮಾಡುತ್ತಿರಬೇಕು. "ನಾನು ನನ್ನ ಕಣ್ಮಂದೆ ಬೆಳೆಯುತ್ತಿರುವ ಜನಾಂಗಕ್ಕೆ ಮಾರ್ಗದರ್ಶನವಾಗಿ ಭಗವಂತನ ಸೇವೆ ಮಾಡುತ್ತಿದ್ದೇನೆ, ನನಗೆ ಇದರಿಂದ ಭಗವಂತ ಏನು ಕೊಟ್ಟರೂ ಸಂತೋಷ" ಎಂಬ ಸಂಕಲ್ಪದಿಂದ ಕರ್ಮ ಮಾಡಬೇಕು ಇದು ನಿಜವಾದ ಕರ್ಮಯೋಗ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( अज्ञानी और ज्ञानवान के लक्षण तथा राग-द्वेष से रहित होकर कर्म करने के लिए प्रेरणा ) सक्ताः कर्मण्यविद्वांसो यथा कुर्वन्ति भारत।
कुर्याद्विद्वांस्तथासक्तश्चिकीर्षुर्लोकसंग्रहम्‌॥

हे भारत! कर्म में आसक्त हुए अज्ञानीजन जिस प्रकार कर्म करते हैं, आसक्तिरहित विद्वान भी लोकसंग्रह करना चाहता हुआ उसी प्रकार कर्म करे
॥25॥

Saktaah karmanyavidwaamso yathaa kurvanti bhaarata;
Kuryaad vidwaam stathaa saktash chikeershur lokasangraham.

As the ignorant men act from attachment to action, O Bharata (Arjuna), so should thewise act without attachment, wishing the welfare of the world!

No comments:

Post a Comment