ಅಧ್ಯಾಯ - 03 : ಶ್ಲೋಕ – 27
ಪ್ರಕೃತೇಃ ಕ್ರಿಯಮಾಣಾನಿ ಗುಣೈಃ ಕರ್ಮಾಣಿ ಸರ್ವಶಃ ।ಅಹಂಕಾರವಿಮೂಢಾತ್ಮಾ ಕರ್ತಾsಹಮಿತಿ ಮನ್ಯತೇ ॥೨೭॥
ಪ್ರಕೃತೇಃ ಕ್ರಿಯಮಾಣಾನಿ ಗುಣೈಃ ಕರ್ಮಾಣಿ ಸರ್ವಶಃ
ಅಹಂಕಾರವಿಮೂಢ ಆತ್ಮಾ ಕರ್ತಾ ಅಹಮ್ ಇತಿ ಮನ್ಯತೇ-
-ಪ್ರಕೃತಿಯ ಅಂಗಾಂಗಗಳಾದ ಇಂದ್ರಿಯಾದಿಗಳಿಂದ(ಭಗವದಧೀನವಾದ, ಜೀವನ ಸ್ವಭಾವ ಸಹಜವಾದ ಗುಣಗಳಿಂದ) ಎಲ್ಲ ಬಗೆಯ ಕರ್ಮಗಳೂ ನಡೆಯುತ್ತಿರುತ್ತವೆ. ಹಮ್ಮಿನಿಂದ ಮೈಮರೆತವನು 'ನಾನೇ ಮಾಡಿದೆ' ಎಂದು ತಿಳಿಯುತ್ತಾನೆ.
ಈ ಶ್ಲೋಕ ಅನೇಕ ವಿಧದಲ್ಲಿ ತೆರೆದುಕೊಳ್ಳುತ್ತದೆ. ಇಲ್ಲಿ ಕೃಷ್ಣ ಮುಖ್ಯವಾಗಿ 'ನಾನೇ ಮಾಡಿದೆ' ಎಂದು ಅಹಂಕಾರ ಪಡುವುದು ಎಷ್ಟು ತಪ್ಪು ಮತ್ತು ಏಕೆ ಎನ್ನುವುದನ್ನು ವಿವರಿಸಿದ್ದಾನೆ. ಕೃಷ್ಣ ಹೇಳುತ್ತಾನೆ "ಯಾರಾದರು ಏನನ್ನಾದರು 'ನಾನೇ ಮಾಡಿದೆ' ಎಂದು ತಿಳಿದುಕೊಂಡರೆ ಅದು ಅವನ ತಿಳಿಗೇಡಿತನ" ಎಂದು. ಸೃಷ್ಟಿಯಲ್ಲಿನ ಒಂದು ವಿಚಿತ್ರವೆಂದರೆ ಯಾರೂ ಏನನ್ನೂ ಮಾಡುವುದಿಲ್ಲ-ಆದರೆ ಎಲ್ಲವೂ ಎಲ್ಲರ ಕೈಯಿಂದ ಆಗುತ್ತಿರುತ್ತದೆ! ಈ ದೇಹ (ಪಿಂಡಾಂಡ) ಪ್ರಕೃತಿಯ ನಿರ್ಮಾಣ. ಪ್ರಕೃತಿಯಲ್ಲಿ ಅದಕ್ಕೆ ಪೋಷಕವಾದ ಅಂಗಭೂತವಾದ ಇಂದ್ರಿಯಗಳಿವೆ. ಪ್ರಕೃತಿ ಎಂದರೆ ಈ ದೇಹ, ಅದರ ಗುಣಗಳು ಎಂದರೆ ಇಂದ್ರಿಯಗಳು. ಶಬ್ದ-ಸ್ಪರ್ಶ-ರಸ-ರೂಪ- ಗಂಧ; ಕಿವಿ-ತೊಗಲು-ನಾಲಿಗೆ-ಕಣ್ಣು-ಮೂಗು; ಅದಕ್ಕೆ ಅನುಗುಣವಾಗಿ ಆಕಾಶ(ಶಬ್ದ), ಗಾಳಿ(ಸ್ಪರ್ಶ), ನೀರು(ರಸ), ಅಗ್ನಿ (ರೂಪ), ಮತ್ತು ಮಣ್ಣು(ಗಂಧ) ಇವು ಪ್ರಕೃತಿಯ ಗುಣಗಳು. ಹೀಗಿರುವಾಗ ನಾವು ಯಾವುದೋ ಒಂದು ವಿಷಯವನ್ನು ನಾನೇ ಮಾಡಿದೆ ಎಂದು ಹೇಳುವುದು ಅರ್ಥ ಶೂನ್ಯ. ಉದಾಹರಣೆಗೆ 'ಕಣ್ಣಿನಿಂದ ನೋಡಿದೆ'; ಈ ಕಣ್ಣನ್ನು ನಮಗೆ ಕೊಟ್ಟವನು ಯಾರು? ಹುಟ್ಟು ಕುರುಡನಿಗೆ ಕಣ್ಣು ಕೊಡಲು ನಿನಗೆ ಸಾಧ್ಯವೇ? ಅಂದರೆ ಕಣ್ಣು ಪ್ರಕೃತಿಯ ಕೊಡುಗೆ. ಭಗವಂತ ನಮಗೆ ಕಣ್ಣು ಕೊಟ್ಟ, ಕಣ್ಣ ಮುಂದೆ ನೋಡುವ ವಸ್ತುವನ್ನಿಟ್ಟ, ನೋಡುವಂತೆ ಪ್ರೇರೇಪಿಸಿದ- ನಾವು ನೋಡಿದೆವು! ಒಂದು ವೇಳೆ ನಮಗೆ ಒಳ್ಳೆಯ ಸ್ವರವಿದ್ದರೆ ಅದಕ್ಕಾಗಿ ಅಹಂಕಾರ ಪಡುತ್ತೇವೆ. ಆದರೆ ಈ ಸ್ವರವನ್ನು ನಮಗೆ ಕೊಟ್ಟವನು ಯಾರು? ಈ ಬಗ್ಗೆ ಎಂದೂ ನಾವು ಯೋಚಿಸುವುದಿಲ್ಲ. ಒಂದು ಕಾರ್ಯವಾಗಬೇಕಾದರೆ ಇಡೀ ವಿಶ್ವದ ಅನೇಕ ಘಟಕಗಳು ಸೇರಿ ಕಾರ್ಯ ನಿರ್ವಹಿಸಬೇಕು. ಪ್ರಕೃತಿ ಜಡ ಅದಕ್ಕೆ ಇಚ್ಛೆ ಇಲ್ಲ. 'ನಾವು ಮಾಡುವುದು' ಅಂದರೆ ಇಚ್ಛಿಸಿ ಮಾಡುವುದು. ನಮಗೆ ಇಚ್ಛೆ ಇದೆ;ಪ್ರತಿಯೊಬ್ಬ ಜೀವನಿಗೂ ಅವನದೇ ಆದ ಜೀವ ಸ್ವಭಾವವಿದೆ. ನಾವು ಮಾಡುವ ಪ್ರತಿಯೊಂದು ಕಾರ್ಯ ನಮ್ಮ ಜೀವ ಸ್ವಭಾವಕ್ಕೆ ಅನುಗುಣವಾಗಿರುತ್ತದೆ. ಇದು ಇಚ್ಛಾ ಪೂರ್ವಕ ಕ್ರಿಯೆ. ಆದರೆ ಇಲ್ಲಿ ನಮಗೆ ಇಚ್ಛಾ ಸ್ವಾತಂತ್ರ್ಯವಿಲ್ಲ.
ಇಚ್ಛಾಸ್ವಾತಂತ್ರ್ಯ ಇರುವುದು ಕೇವಲ ಭಗವಂತನಲ್ಲಿ. ಅದಕ್ಕನುಗುಣವಾಗಿ ಸರ್ವಕಾರ್ಯ ನಿರ್ವಹಣೆ ಆಗುತ್ತದೆ. ಆದ್ದರಿಂದ ನಮ್ಮ ಸ್ವಭಾವವನ್ನು ನಿಯಂತ್ರಿಸುವವ ಇಡೀ ಜಗತ್ತಿನ ಮೂಲ ಕರ್ತೃ ಭಗವಂತ. ಅವನ ಇಚ್ಛೆಗನುಗುಣವಾಗಿ ಪ್ರಪಂಚದ ವ್ಯಾಪಾರ ನಡೆಯುತ್ತದೆ. ಇದು ವಿಶ್ವದ ವ್ಯವಸ್ಥೆ. ಇಡೀ ವಿಶ್ವದ ಕರ್ಮ ಚಕ್ರದಲ್ಲಿ ನಾವು ಒಂದು ಘಟಕ ಅಷ್ಟೆ. ಆದ್ದರಿಂದ 'ನಾನೇ ಮಾಡಿದೆ' ಎಂದು ಅಹಂಕಾರ ಪಡುವುದರಲ್ಲಿ ಯಾವ ಅರ್ಥವೂ ಇಲ್ಲ. ನಿಜವಾದ ಕರ್ತೃ ಭಗವಂತ. ಜೀವನಿಗೊಂದು ಕರ್ತೃತ್ವ ಹಾಗು ಜಡಕ್ಕೊಂದು ಕರ್ತೃತ್ವವಿದೆ. ಇದರ ಅಂತರ ನಮಗೆ ತಿಳಿದಿರಬೇಕು. ಮಣ್ಣು ಜಡ ಅದಕ್ಕೆ ಇಚ್ಛೆ ಇಲ್ಲ. ಬೀಜ ಚೇತನ, ಅದಕ್ಕೆ ಮರವಾಗುವ ಸ್ವಭಾವವಿದೆ ಆದರೆ ಸ್ವಾತಂತ್ರ್ಯವಿಲ್ಲ. ಬೀಜವನ್ನು ಬಿತ್ತಿ ಬೆಳೆಸುವ ತೋಟಗಾರ ಆ ಭಗವಂತ. ಭಗವಂತನ ಇಚ್ಛೆಗನುಗುಣುವಾಗಿ, ‘ಜೀವ’ ನಲ್ಲಿರುವ ಸ್ವಭಾವಕ್ಕನುಗುಣವಾಗಿ ಪ್ರಪಂಚದಲ್ಲಿ ಕ್ರಿಯೆ ನಡೆಯುತ್ತದೆ. ಒಂದು ಕ್ರಿಯೆಯ ಹಿಂದೆ ಇಡೀ ವಿಶ್ವದ ಪಾಲುದಾರಿಕೆ ಇರುತ್ತದೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
प्रकृतेः क्रियमाणानि गुणैः कर्माणि सर्वशः।
अहंकारविमूढात्मा कर्ताहमिति मन्यते॥
- वास्तव में सम्पूर्ण कर्म सब प्रकार से प्रकृति के गुणों द्वारा किए जाते हैं, तो भी जिसका अन्तःकरण अहंकार से मोहित हो रहा है, ऐसा अज्ञानी 'मैं कर्ता हूँ' ऐसा मानता है
॥27॥
Prakriteh kriyamaanaani gunaih karmaani sarvashah;
Ahamkaaravimoodhaatmaa kartaaham iti manyate.
All actions are wrought in all cases by the qualities of Nature only. He whose mind isdeluded by egoism thinks: “I am the doer”.COMMENTARY: Prakriti or Nature is that state in which the three Gunas exist in a stateof equilibrium. When this equilibrium is disturbed, creation begins and the body, senses and mindare formed. The man who is deluded by egoism identifies the Self with the body, mind, thelife-force and the senses, and ascribes to the Self all the attributes of the body and the senses. Inreality the Gunas of nature perform all actions.

No comments:
Post a Comment