Thursday, 6 September 2018

ಅಧ್ಯಾಯ - 03 : ಶ್ಲೋಕ – 29

ಪ್ರಕೃತೇರ್ಗುಣ ಸಮ್ಮಾಢಾಃ ಸಜ್ಜಂತೇ  ಗುಣಕರ್ಮಸು ।ತಾನಕೃತ್ಸ್ನವಿದೋ ಮಂದಾನ್ ಕೃತ್ಸ್ನವಿನ್ನ ವಿಚಾಲಯೇತ್ ॥೨೯॥

ಪ್ರಕೃತೇಃ ಗುಣ ಸಮ್ಮಾಢಾಃ ಸಜ್ಜಂತೇ  ಗುಣಕರ್ಮಸು
ತಾನ್ ಅಕೃತ್ಸ್ನವಿದಃ ಮಂದಾನ್ ಕೃತ್ಸ್ನವಿತ್ ನ  ವಿಚಾಲಯೇತ್--

ಪ್ರಕೃತಿಯ ಅಂಗಾಂಗಗಳಾದ ಇಂದ್ರಿಯಾದಿಗಳಲ್ಲೇ ಮೈಮರೆತವರು ಇಂದ್ರಿಯಾದಿಗಳ ಕ್ರಿಯೆಯಲ್ಲೆ ಅಂಟಿಕೊಳ್ಳುತ್ತಾರೆ. ಪೂರ್ತಿ ನಿಜವನ್ನರಿಯದ ಅಂಥ ಮಂದಿಯನ್ನು ಪೂರ್ತಿ ಅರಿತವರು ಗೊಂದಲಗೆಡಿಸಬಾರದು.

ಪ್ರಕೃತಿಯ ಗುಣಭೂತವಾಗಿರುವ ಇಂದ್ರಿಯ ಸುಖದಲ್ಲಿ ಮುಳುಗಿದವರು, ಮೂಲ ಪ್ರಕೃತಿಯ ತ್ರಿಗುಣದ ಮೋಹಕ್ಕೊಳಗಾಗಿ, ಸತ್ಯವನ್ನರಿಯದೆ, ಜೀವ ಸ್ವಭಾವದ ಗುಣ ಮೋಹದಲ್ಲಿದ್ದು, ತಾನು ಭಗವಂತನ ಗುಣದ ಅಧೀನ ಎನ್ನುವ ಎಚ್ಚರ ಇಲ್ಲದೆ ಇರುವವರನ್ನು ಕೃಷ್ಣ   'ಪ್ರಕೃತೇರ್ಗುಣ ಸಮ್ಮಾಢಾಃ' ಎಂದು ಕರೆದಿದ್ದಾನೆ. ಇಂತವರು ಭಗವಂತನ ಗುಣ ಕರ್ಮವನ್ನು ತಮ್ಮದೇ ಎಂದು ಭ್ರಮಿಸಿಕೊಂಡು, 'ನಾನೇ ಎಲ್ಲಾ ನನ್ನಿಂದಲೇ ಎಲ್ಲ' ಎಂದು ಬದುಕುತ್ತಿರುತ್ತಾರೆ. ಇಂತವರಿಗೆ ಸತ್ಯವನ್ನು ಅಥವಾ ಪೂರ್ಣವನ್ನು ಅರಿಯುವ ಯೋಗ್ಯತೆ ಇರುವುದಿಲ್ಲ. ಅಂಥವರನ್ನು 'ಪೂರ್ಣವನ್ನು ಅರಿತವರು'  ಗೊಂದಲಗೆಡಿಸಲು ಹೋಗಬಾರದು. ಅವರಲ್ಲಿ ಸತ್ಯವನ್ನು ತಿಳಿಯುವ ಯೋಗ್ಯತೆ ಇದ್ದರೆ ಅವರು ಆ ಸ್ಥಿತಿಯಿಂದಾಚೆಗೆ ಬರುತ್ತಾರೆ. ಇಲ್ಲದ ಯೋಗ್ಯತೆಯನ್ನು ಯಾರೂ ಅವರಲ್ಲಿ ತುಂಬಿಸಲಾರರು, ಇದ್ದ ಯೋಗ್ಯತೆಯನ್ನು ಯಾರೊಬ್ಬರೂ ಕಸಿಯಲಾರರು. ಯಾರಿಗೆ ಸತ್ಯವನ್ನು ತಿಳಿಯುವ ಅಪೇಕ್ಷೆ ಇದೆ ಅವರೊಂದಿಗೆ ಸೇರಿ ಅವರ ಸಹವಾಸ ಮಾಡಿ ಅವರಿಂದ ಕಲಿಯಬಹುದು ಅಥವಾ ಅವರಿಗೆ ತಿಳಿಹೇಳಬಹುದು.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

प्रकृतेर्गुणसम्मूढ़ाः सज्जन्ते गुणकर्मसु।
तानकृत्स्नविदो मन्दान्कृत्स्नविन्न विचालयेत्‌॥

प्रकृति के गुणों से अत्यन्त मोहित हुए मनुष्य गुणों में और कर्मों में आसक्त रहते हैं, उन पूर्णतया न समझने वाले मन्दबुद्धि अज्ञानियों को पूर्णतया जानने वाला ज्ञानी विचलित न करे
॥29॥

Prakriter gunasammoodhaah sajjante gunakarmasu;
Taan akritsnavido mandaan kritsnavin na vichaalayet.

Those deluded by the qualities of Nature are attached to the functions of the qualities. Aman of perfect knowledge should not unsettle the foolish one of imperfect knowledge.

No comments:

Post a Comment