ಇಂದ್ರಿಯಾಣಿ ಪರಾಣ್ಯಾಹುರಿಂದ್ರಿಯೇಭ್ಯಃ ಪರಂ ಮನಃ ।ಮನಸಸ್ತು ಪರಾ ಬುದ್ಧಿರ್ಯೋ ಬುದ್ಧೇಃ ಪರತಸ್ತು ಸಃ ॥೪೨॥
ಇಂದ್ರಿಯಾಣಿ ಪರಾಣಿ ಆಹುಃ ಇಂದ್ರಿಯೇಭ್ಯಃ ಪರಮ್ ಮನಃ ।
ಮನಸಃ ತು ಪರಾ ಬುದ್ಧಿಃ ಯಃ ಬುದ್ಧೇಃ ಪರತಃ ತು ಸಃ-
ಇಂದ್ರಿಯಗಳು[ಶರೀರಕ್ಕಿಂತ) ಹಿರಿದಾದ ತಾಣಗಳು. (ಇಂದ್ರಿಯಾಭಿಮಾನಿಗಳಾದ ಇಂದ್ರಾದಿಗಳು ಹಿರಿಯ ದೇವತೆಗಳು].ಇಂದ್ರಿಯಗಳಿಗಿಂತ ಮನಸ್ಸು ಹಿರಿಯ ತಾಣ.[ಇಂದ್ರಿಯಾಭಿಮಾನಿ ದೇವತೆಗಳಿಗಿಂತ ಮನೋಭಿಮಾನಿ ರುದ್ರ ಹಿರಿಯ ದೇವತೆ]. ಮನಸ್ಸಿಗಿಂತ ಬುದ್ಧಿ ಹಿರಿಯ ತಾಣ(ಮನೋಭಿಮಾನಿಗಿಂತ ಬುದ್ಧಿಮಾನಿನಿ ಸರಸ್ವತಿ ಹಿರಿಯ ದೇವತೆ) ಬುದ್ಧಿಗಿಂತಲು ಆಚೆಗಿರುವಂಥದು ಆ ಪರತತ್ವ(ಬುದ್ಧಿ ಮಾನಿನಿಗಿಂತಲೂ ಬುದ್ಧಿಗೋಚರನಾಗದ ಭಗವಂತ ಹಿರಿಯತತ್ವ).
ಹೇಗೆ ದುಷ್ಟ ಶಕ್ತಿಗಳಿವೆಯೋ ಹಾಗೇ ನಮ್ಮ ಒಳಿತನ್ನು ಬಯಸುವ ದೇವತಾಶಕ್ತಿಗಳು ನಮ್ಮ ರಕ್ಷಣೆಗೆ ನಿಂತಿರುತ್ತಾರೆ. ಪ್ರತಿಯೊಂದು ಇಂದ್ರಿಯಗಳಿಗೂ ಒಬ್ಬ ದೇವತೆ ಅಭಿಮಾನಿ. ನಮ್ಮ ಇಂದ್ರಿಯದ ಅಭಿಮಾನಿದೇವತೆ ಇಂದ್ರ. ಮನಸ್ಸಿನ ಅಭಿಮಾನಿ ಶಿವ-ಪಾರ್ವತಿಯರು, ಬುದ್ಧಿಯ ಅಭಿಮಾನಿ ಸರಸ್ವತಿ. ಬುದ್ಧಿಯಿಂದಾಚೆಗಿರುವುದು ಆತ್ಮ-ಅದುವೇ ಆ ಭಗವಂತನ ಸ್ಥಾನ.
ನಾವು ನಮ್ಮ ಇಂದ್ರಿಯ ಮನಸ್ಸು ಬುದ್ಧಿಯನ್ನು ನಿಯಂತ್ರಿಸುವ ದೇವತಾ ಶಕ್ತಿಗೆ ಶರಣಾಗಬೇಕು. ಆಗ ಆ ದೇವತಾ ಶಕ್ತಿಗಳ ಸಹಾಯದಿಂದ ನಾವು ಜ್ಞಾನವನ್ನು ಪಡೆದು ಭಗವಂತನನ್ನು ಕಾಣಬಹುದು. ನಮ್ಮ ಪ್ರತಿಯೊಂದು ಇಂದ್ರಿಯಕ್ಕೂ ಒಬ್ಬ ಅಭಿಮಾನಿ ದೇವತೆ ಇದ್ದಾನೆ. ಕಣ್ಣಿಗೆ ಸೂರ್ಯ, ಕಿವಿಗೆ ಚಂದ್ರ, ಬಾಯಿಗೆ ಅಗ್ನಿ, ನಾಲಿಗೆ-ವರುಣ, ಮೂಗು-ಅಶ್ವಿದೇವತೆಗಳು ,ಕೈ-ಇಂದ್ರ(ಈತ ಸರ್ವೇಂದ್ರಿಯದ ಒಡೆಯ ಕೂಡಾ ಹೌದು), ಕಾಲು-ಇಂದ್ರ ಪುತ್ರ ಉಪೇಂದ್ರ, ಯಮ-ಮಲಮೂತ್ರ ವಿಸರ್ಜನಾಂಗದ ಮತ್ತು ದಕ್ಷ ಸಂತಾನಕ್ಕೆ ಸಂಭಂದಪಟ್ಟ ಅಂಗದ ದೇವತೆ. ಹೀಗೆ ಪ್ರತಿಯೊಂದು ದೇವತೆಗಳೂ ನಮಗೆ ನಮ್ಮ ಶತ್ರುವಿನಿಂದ ಪಾರಾಗಲು ಸಹಾಯ ಮಾಡುತ್ತಾರೆ. ಹೀಗೆ ದೇವತೆಗಳನ್ನು ಪ್ರಾರ್ಥಿಸಿ ಅವರ ಸಹಾಯ ಪಡೆದು ದುಷ್ಟ ಶಕ್ತಿಯಿಂದ ದೂರ ಸರಿದು ಎಲ್ಲಕ್ಕೂ ಮಿಗಿಲಾದ ಆ ಪರತತ್ವವನ್ನು ಸೇರಬೇಕು.
ಏವಂ ಬುದ್ಧೇಃ ಪರಂ ಬುದ್ಧ್ವಾ ಸಂಸ್ತಭ್ಯಾsತ್ಮಾನಮಾತ್ಮನಾ।ಜಹಿ ಶತ್ರುಂ ಮಹಾಬಾಹೋ ಕಾಮರೂಪಂ ದುರಾಸದಮ್ ॥೪೩॥
ಏವಮ್ ಬುದ್ಧೇಃ ಪರಮ್ ಬುದ್ಧ್ವಾ ಸಂಸ್ತಭ್ಯ ಆತ್ಮನಮ್ ಆತ್ಮಾನಾ
ಜಹಿ ಶತ್ರುಮ್ ಮಹಾ ಬಾಹೋ ಕಾಮರೂಪಮ್ ದುರಾಸದಮ್-ಓ ಮಹಾವೀರ, ಹೀಗೆ ಬುದ್ಧಿಗೂ ನಿಲುಕದ ಆ ಪರತತ್ವವನ್ನು ತಿಳಿದು, ವಿವೇಕದಿಂದ ಬಗೆಯನ್ನು ಬಿಗಿಹಿಡಿದು, ಸಾಮಾನ್ಯರಿಗೆ ಬಗ್ಗದ ಕಾಮವೆಂಬ ಹಗೆಯನ್ನು ಒದ್ದೋಡಿಸು.
ಹೀಗೆ ಇಂದ್ರಿಯ-ಮನಸ್ಸು-ಬುದ್ಧಿಗೆ ನಿಲುಕದ ಆ ಪರತತ್ವವನ್ನು ತಿಳಿದು, ಮನಸ್ಸೆಂಬ ಚಂಚಲವಾದ ಕುದುರೆಗೆ ಬುದ್ಧಿಯೆಂಬ ಲಗಾಮನ್ನು ಕಟ್ಟಿ, ಆ ಕಡಿವಾಣವನ್ನು ಭಗವಂತನ ಕೈಯಲ್ಲಿ ಕೊಟ್ಟು, ಸರ್ವ ದೇವತೆಗಳ ಸಹಾಯದಿಂದ ಕಾಲನೇಮಿ ಎನ್ನುವ ರಾಕ್ಷಸನನ್ನು ಹಂತ ಹಂತವಾಗಿ ಗೆದ್ದು, ಭಗವಂತನನ್ನು ಸೇರು ಎನ್ನುತ್ತಾನೆ ಕೃಷ್ಣ.
ಇಲ್ಲಿ ಹೇಳಿದ ವಿವರಣೆಯನ್ನು ನಮಗೆ ಕೆಟ್ಟ ಬಯಕೆ ಹುಟ್ಟಿದಾಗ ನೆನಪಿಸಿಕೊಂಡರೆ ಕಾಲನೇಮಿ ಎನ್ನುವ ರಾಕ್ಷಸ ನಮ್ಮೊಳಗೆ ನುಸುಳದಂತೆ ತಡೆಯಬಹುದು.ಏಕೆಂದರೆ ಎಲ್ಲಾ ಬಯಕೆಗಳೂ ಕೆಟ್ಟದ್ದಲ್ಲ. ಭಗವಂತನನ್ನು ಸೇರಬೇಕು ಎನ್ನುವ ಬಯಕೆ ಬೇಕು. ಆದ್ದರಿಂದ ನಮ್ಮ ಬುದ್ಧಿಯನ್ನು ಭಗವಂತನ ಕೈಗೊಪ್ಪಿಸಿ, ದುಷ್ಟ ಕಾಮನೆಗಳ ವಿರುದ್ಧ ದೇವತೆಗಳ ಸಹಾಯದಿಂದ ಹೋರಾಡಿ ಮೋಕ್ಷವನ್ನು ಪಡೆಯಬಹುದು. ಇಲ್ಲಿ ಒಂದು ಎಚ್ಚರ ಅಗತ್ಯ, ಒಂದೇ ಸಲ ಈ ದುಷ್ಟ ಶಕ್ತಿಯ ವಿರುದ್ಧ ಹೋರಾಡಿ ಜಯ ಗಳಿಸುತ್ತೇನೆ ಎಂದರೆ ಅದು ಅಸಾಧ್ಯ. ಇದನ್ನು ಹಂತ ಹಂತವಾಗಿ ಗಳಿಸಬೇಕು. ಸಾಧನೆಯ ವಿವಿಧ ಮೆಟ್ಟಲಿನಲ್ಲಿ ವಿವಿಧ ದೇವತೆಗಳು ನಮಗೆ ಸಹಾಯ ಮಾಡುತ್ತಾರೆ.
ಇತಿ ತೃತೀಯೋಧ್ಯಾಯಃ
ಮೂರನೇ ಅಧ್ಯಾಯ ಮುಗಿಯಿತು
***
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
इन्द्रियाणि पराण्याहुरिन्द्रियेभ्यः परं मनः।
मनसस्तु परा बुद्धिर्यो बुद्धेः परतस्तु सः॥
इन्द्रियों को स्थूल शरीर से पर यानी श्रेष्ठ, बलवान और सूक्ष्म कहते हैं। इन इन्द्रियों से पर मन है, मन से भी पर बुद्धि है और जो बुद्धि से भी अत्यन्त पर है वह आत्मा है
॥42॥
एवं बुद्धेः परं बुद्धवा संस्तभ्यात्मानमात्मना।
जहि शत्रुं महाबाहो कामरूपं दुरासदम्॥
इस प्रकार बुद्धि से पर अर्थात सूक्ष्म, बलवान और अत्यन्त श्रेष्ठ आत्मा को जानकर और बुद्धि द्वारा मन को वश में करके हे महाबाहो! तू इस कामरूप दुर्जय शत्रु को मार डाल
ॐ तत्सदिति श्रीमद्भगवद्गीतासूपनिषत्सु ब्रह्मविद्यायां योगशास्त्रे श्रीकृष्णार्जुनसंवादे कर्मयोगो नाम तृतीयोऽध्यायः
॥3॥
Indriyaani paraanyaahur indriyebhyah param manah;
Manasastu paraa buddhir yo buddheh paratastu sah.
They say that the senses are superior (to the body);
superior to the senses is the mind;
superior to the mind is the intellect;
and one who is superior even to the intellect is He—the Self.
Evam buddheh param buddhwaa samstabhyaatmaanam aatmanaa;
Jahi shatrum mahaabaaho kaamaroopam duraasadam.
Thus, knowing Him who is superior to the intellect and restraining the self by the Self,slay thou, O mighty-armed Arjuna, the enemy in the form of desire, hard to conquer!COMMENTARY: Restrain the lower self by the higher Self. Subdue the lower mind bythe higher mind. It is difficult to conquer desire because it is of a highly complex andincomprehensible nature. But a man of discrimination and dispassion, who does constant andintense Sadhana, can conquer it quite easily.
Hari Om Tat SatIti Srimad Bhagavadgeetaasoopanishatsu BrahmavidyaayaamYogashaastre Sri KrishnaarjunasamvaadeKarmayogo Naama Tritiyo’dhyaayah
Thus in the Upanishads of the glorious Bhagavad Gita, the science of the Eternal, thescripture of Yoga, the dialogue between Sri Krishna and Arjuna, ends the third discourse entitled:“The Yoga of Action”

No comments:
Post a Comment