Thursday, 6 September 2018

ಅಧ್ಯಾಯ - 04 : ಶ್ಲೋಕ – 07

ಯದಾಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ ।ಅಭ್ಯುತ್ಥಾನಮಧರ್ಮಸ್ಯ ತದಾSSತ್ಮಾನಂ ಸೃಜಾಮ್ಯಹಮ್  ॥೭॥

ಯದಾಯದಾ ಹಿ ಧರ್ಮಸ್ಯ ಗ್ಲಾನಿಃ ಭವತಿ ಭಾರತ |
ಅಭ್ಯುತ್ಥಾನಮ್ ಅಧರ್ಮಸ್ಯ ತದಾ ಆತ್ಮಾನಮ್  ಸೃಜಾಮಿ ಅಹಮ್-

ಓ ಭಾರತ, ಧರ್ಮ ಕಳೆಗುಂದಿದಾಗೆಲ್ಲ, ಅಧರ್ಮತಲೆಯತ್ತಿದಾಗೆಲ್ಲ ನಾನು ನನ್ನನ್ನು ಹುಟ್ಟಿಸಿಕೊಳ್ಳುತ್ತೇನೆ.

ಇಡಿಯ ಪ್ರಪಂಚದಲ್ಲಿ  ಯಾವಾಗ-ಯಾವಾಗ ಧರ್ಮ ಮಲೀನವಾಗಿ ಅಧರ್ಮದ ಮುಂದೆ ಸೋಲೊಪ್ಪಿಕೊಂಡು, ತಲೆಕೆಳಗಾಗಿ ನಿಲ್ಲುವ ಪ್ರಸಂಗ ಬರುತ್ತದೋ, ಆಗ ನಾನು ಧರೆಗಿಳಿದು ಬರುತ್ತೇನೆ ಎನ್ನುತ್ತಾನೆ ಕೃಷ್ಣ. ಇಲ್ಲಿ ಧರ್ಮ ಸೋಲುವುದುಅಂದರೆ ಅದು ಒಂದು ಮನೆಗೆ- ಒಂದು ದೇಶಕ್ಕೆ  ಸಂಬಂಧಪಟ್ಟಿದ್ದಲ್ಲ. ಇಡೀ ವಿಶ್ವದಲ್ಲೇ ಧರ್ಮಕ್ಕೆ ನೆಲೆ ಸಿಗದ ಪರಿಸ್ಥಿತಿಬಂದಾಗ ಭಗವಂತನ ಅವತಾರವಾಗುತ್ತದೆ. ದುಷ್ಟ ಶಕ್ತಿಗಳು ಭೂಮಿಯ ಮೇಲೆ ಹಿಡಿತ ಸಾಧಿಸಿ ಸತ್ವಗುಣದ ತಲೆ ಎತ್ತದಂತೆಮಾಡಿದಾಗ, ಭಗವಂತ ತನ್ನನ್ನು ತಾನು ಭೂಮಿಯ ಮೇಲೆ ಸೃಷ್ಟಿಸಿಕೊಳ್ಳುತ್ತಾನೆ. "ತದಾSSತ್ಮಾನಂ ಸೃಜಾಮ್ಯಹಮ್" ಎನ್ನುವಲ್ಲಿ  'ನಾನು ನನ್ನ ಆತ್ಮೀಯರನ್ನು ಕಳುಹಿಸುತ್ತೇನೆ' ಎನ್ನುವ ಹಾಗು 'ನಾನೇ ಅವತರಿಸುತ್ತೇನೆ' ಎನ್ನುವ ಎರಡು ಧ್ವನಿಇದೆ.  ಧರ್ಮಕ್ಕೆ ಸೋಲಾಗುವ ಲಕ್ಷಣಗಳು ಪ್ರಾಂತೀಯವಾಗಿ ಕಂಡು ಬಂದಾಗ ಭಗವಂತ ತನಗೆಆತ್ಮೀಯರಾದವರನ್ನು(ದೇವತೆಗಳನ್ನು) ಭೂಮಿಗೆ ಕಳುಹಿಸುತ್ತಾನೆ. ಅವರು ಆಚಾರ್ಯಪುರುಷರಾಗಿ ಬಂದು ಸಮಾಜವನ್ನುತಿದ್ದುತ್ತಾರೆ. ಇಂತಹ ವ್ಯವಸ್ಥೆ ಕೂಡಾ ಕುಸಿದು ತಾಮಸ ಶಕ್ತಿಗಳು ವಿಜೃಂಭಿಸಿದಾಗ, ಕೊನೆಯದಾಗಿ ಭಗವಂತ ಸ್ವಯಂಅವತಾರವೆತ್ತುತ್ತಾನೆ.   ಕೃಷ್ಣನ ಅವತಾರವಾದ  ಸಮಯದ ಸ್ಥಿತಿಯನ್ನು ಗಮನಿಸಿದಾಗ ಆ ಕಾಲದ ಧರ್ಮದ ಪಾಡೇನುಎನ್ನುವುದು ಸ್ಪಷ್ಟವಾಗುತ್ತದೆ. ಜರಾಸಂಧ ಪ್ರಪಂಚದ ಮೂಲೆ ಮೂಲೆಯಲ್ಲಿನ ಸುಮಾರು 22,800  ರಾಜಕುಮಾರರನ್ನು ತನ್ನಸೆರೆಯಲ್ಲಿಟ್ಟಿದ್ದ. ಕಂಸನಿಗೆ ತನ್ನ ಮಗಳನ್ನು ಕೊಟ್ಟು ಆತನನ್ನು ಎತ್ತಿಕಟ್ಟಿ, ಶೂರಸೇನನನ್ನು ಸೆರೆಮನೆಗೆ ಹಾಕುವಂತೆ ಕುತಂತ್ರಮಾಡಿ,ಅದರಲ್ಲಿ ಯಶಸ್ವಿಯಾಗಿದ್ದ ಜರಾಸಂಧ. ಇನ್ನು ಆತನ ಮಿತ್ರ ನರಕಾಸುರ ಸುಮಾರು 16,100 ರಾಜಕುಮಾರಿಯರನ್ನುಸೆರೆಮನೆಯಲ್ಲಿಟ್ಟಿದ್ದ.

ಭೀಷ್ಮಾಚಾರ್ಯರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡು ಇಡೀ ಭೂಲೋಕದಲ್ಲಿ ತನ್ನದೇ ಆದ ಏಕಚಕ್ರಧಿಪತ್ಯವನ್ನುಸ್ಥಾಪಿಸುವ, ಹಾಗು ಜನರನ್ನು ಸುಲಿಗೆ ಮಾಡುವ ಕುತಂತ್ರ ರೂಪಿಸಿದ್ದ ಜರಾಸಂಧ. ಅಂದಿನ ಭಾರತ ಇಂದಿನಭಾರತದಂತಿರಲಿಲ್ಲ. ಅದು ಅತಿದೊಡ್ಡ ಭೂ ಭಾಗವಾಗಿತ್ತು. ಒಂದು ವೇಳೆ ಕೃಷ್ಣನ ಅವತಾರ ಆಗದೇ ಇದ್ದಿದ್ದರೆ ಇಡೀಭೂಲೋಕ ಈ  ಪಾಪಿಗಳ ಕೈವಶವಾಗುತ್ತಿತ್ತು. ಇಂತಹ ಸಂದರ್ಭದಲ್ಲಿ ಕೃಷ್ಣ ಅವತರಿಸಿದ. ಕಂಸನನ್ನು ಕೊಂದುಶೂರಸೇನನನ್ನು ಮರಳಿ ರಾಜನನ್ನಾಗಿ ಮಾಡಿದ ಕೃಷ್ಣ, ನರಕಾಸುರನನ್ನು ಕೊಂದು, ಆತನ ಕೈ ಕೆಳಗಿನ ರಾಜಕುಮಾರಿಯರನ್ನುಬಿಡುಗಡೆಗೊಳಿಸಿದ. ಹೀಗೆ ಬಿಡುಗಡೆಗೊಂಡ ರಾಜಕುಮಾರಿಯರು ಶೀಲ ಶಂಕಿಸುವ ಸಮಾಜಕ್ಕೆ ಹೆದರಿದಾಗ ಅವರಿಗೆಅಭಯವನ್ನು ಕೊಟ್ಟು, ಅವರನ್ನು ತಾನೇ ಮದುವೆಯಾಗಿ ಅವರ ಗೌರವವನ್ನು ಕಾಪಾಡಿದ. ಜರಾಸಂಧ ಕೃಷ್ಣನ ಮೇಲೆಸುಮಾರು 23  ಅಕ್ಷೌಹಿಣಿ ಸೈನ್ಯದೊಂದಿಗೆ ದಾಳಿ ಮಾಡಿದಾಗ ಓಡಿ ಹೋದಂತೆ ನಟಿಸಿ, ನಂತರ ಭೀಮಾರ್ಜುನರೊಂದಿಗೆಜರಾಸಂಧನನ್ನು ಸಂಧಿಸಿ- ಅಲ್ಲಿ ನಡೆದ ಮಲ್ಲ ಯುದ್ಧದಲ್ಲಿ ಭೀಮನಿಂದ ಜರಾಸಂಧನ ವದೆಯಾಗುವಂತೆ ಮಾಡಿದ. ಹಾಗುಆತನ ಸೆರೆಯಲ್ಲಿದ್ದ ಎಲ್ಲಾ ರಾಜಕುಮಾರರರನ್ನು ಅವರವರ ರಾಜ್ಯಕ್ಕೆ ಕಳುಹಿಸಿಕೊಟ್ಟ.

ಹೀಗೆ ಇಡೀ ಭೂಲೋಕ ಅಧರ್ಮದ ದಾಸ್ಯಕ್ಕೆ ಗುರಿಯಾಗುವ ಸಂದರ್ಭ ಬಂದಾಗ ಮಾತ್ರ ಭಗವಂತನ ಅವತಾರಭೂಲೋಕದಲ್ಲಿ ಆಗುತ್ತದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यदा यदा हि धर्मस्य ग्लानिर्भवति भारत।
अभ्युत्थानमधर्मस्य तदात्मानं सृजाम्यहम्‌॥

हे भारत! जब-जब धर्म की हानि और अधर्म की वृद्धि होती है, तब-तब ही मैं अपने रूप को रचता हूँ अर्थात साकार रूप से लोगों के सम्मुख प्रकट होता हूँ
॥7॥

Yadaa yadaa hi dharmasya glaanir bhavati bhaarata;
Abhyutthaanam adharmasya tadaatmaanam srijaamyaham.

Whenever there is a decline of righteousness, O Arjuna, and rise of unrighteousness, thenI manifest Myself!COMMENTARY: That which elevates a man and helps him to reach the goal of life andattain knowledge is Dharma (righteousness);
that which drags him into worldliness isunrighteousness. That which helps a man to attain liberation is Dharma;
that which makes himirreligious is Adharma or unrighteousness.

No comments:

Post a Comment