Thursday, 6 September 2018

ಅಧ್ಯಾಯ - 04 : ಶ್ಲೋಕ – 08

ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಮ್ ।ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇಯುಗೇ ॥೮॥

ಪರಿತ್ರಾಣಾಯ ಸಾಧೂನಾಮ್  ವಿನಾಶಾಯ ಚ ದುಷ್ಕೃತಾಮ್ |
ಧರ್ಮ ಸಂಸ್ಥಾಪನ ಅರ್ಥಾಯ ಸಂಭವಾಮಿ ಯುಗೇಯುಗೇ-

ಸಜ್ಜನರನ್ನು ಉಳಿಸಲೆಂದು, ಕೇಡಿಗರನ್ನುಅಳಿಸಲೆಂದು, ಧರ್ಮವನ್ನು ನೆಲೆಗೊಳಿಸಲೆಂದು ಯುಗ ಯುಗದಲ್ಲೂ ಮೂಡಿಬರುತ್ತೇನೆ.

ಯಾರು ಸಮಾಜಕ್ಕೆ ಕೆಟ್ಟದ್ದನ್ನು, ಕೇಡನ್ನು ಮಾಡಿ ಅದರಿಂದ ಲಾಭ ಪಡೆದು ಮೆರೆಯುತ್ತಾರೋ, ಅಂಥವರಪೂರ್ಣನಾಶಕ್ಕಾಗಿ, ಸಜ್ಜನರ ಮತ್ತು ಪ್ರಪಂಚದ ಸಮಗ್ರ ರಕ್ಷಣೆಗಾಗಿ, ಧರ್ಮದ ಬೀಜ ಬಿತ್ತಲು ಭಗವಂತ ಭೂಲೋಕದಲ್ಲಿಅವತರಿಸುತ್ತಾನೆ. ಇಲ್ಲಿ ಯುಗೇ ಯುಗೇ ಅನ್ನುವಲ್ಲಿನ ಅರ್ಥ ‘ಯುಗ-ಯುಗದಲ್ಲೂ’. ಅಂದರೆ ಭಗವಂತ ಪ್ರತೀ ಯುಗದಲ್ಲೂಅವತರಿಸುತ್ತಾನೆ ಎಂದರ್ಥವಲ್ಲ. ಆತ ಅವತರಿಸುವುದು ಮೇಲೆ ಹೇಳಿದ ಸಂದರ್ಭ ಬಂದಾಗ ಮಾತ್ರ. ಒಂದೊಂದುಯುಗದಲ್ಲಿ ಅನೇಕ ಅವತಾರವಿರಬಹುದು; ಇನ್ನು ಕೆಲವು ಯುಗದಲ್ಲಿ ಅವತಾರವೇ ಇಲ್ಲದಿರಬಹುದು. ಆದರೆ ಭಗವಂತನಆವಿರ್ಭಾವವಿರುವ ಅನೇಕ ಮಹಾಪುರುಷರು ಯುಗ-ಯುಗದಲ್ಲೂ ಬಂದು ಹೋಗುತ್ತಿರುತ್ತಾರೆ. ಅವರ ಮುಖೇನಭಗವಂತನ ಧರ್ಮ ರಕ್ಷಣೆ ಯುಗ ಯುಗದಲ್ಲೂ ನಿರಂತರ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

परित्राणाय साधूनां विनाशाय च दुष्कृताम्‌।
धर्मसंस्थापनार्थाय सम्भवामि युगे युगे॥

साधु पुरुषों का उद्धार करने के लिए, पाप कर्म करने वालों का विनाश करने के लिए और धर्म की अच्छी तरह से स्थापना करने के लिए मैं युग-युग में प्रकट हुआ करता हूँ
॥9॥

Paritraanaaya saadhoonaam vinaashaaya cha dushkritaam;
Dharma samsthaapanaarthaaya sambhavaami yuge yuge.

For the protection of the good, for the destruction of the wicked, and for the establishmentof righteousness, I am born in every age.

No comments:

Post a Comment