ಕಾಂಕ್ಷಂತಃ ಕರ್ಮಣಾಂ ಸಿದ್ಧಿಂ ಯಜಂತ ಇಹ ದೇವತಾಃಕ್ಷಿಪ್ರಂ ಹಿ ಮಾನುಷೇ ಲೋಕೇ ಸಿದ್ಧಿರ್ಭವತಿ ಕರ್ಮಜಾ ॥೧೨॥
ಕಾಂಕ್ಷಂತಃ ಕರ್ಮಣಾಮ್ ಸಿದ್ಧಿಮ್ ಯಜಂತೇ ಇಹ ದೇವತಾಃ ।
ಕ್ಷಿಪ್ರಮ್ ಹಿ ಮಾನುಷೇ ಲೋಕೇ ಸಿದ್ಧಿಃ ಭವತಿ ಕರ್ಮಜಾ -
ಕರ್ಮಗಳ ಮೂಲಕ ಫಲವನ್ನು ಬಯಸುವವರು ಇಲ್ಲಿದೇವತೆಗಳನ್ನು ಪೂಜಿಸುತ್ತಾರೆ. ಈ ಭೂಮಿಯಲ್ಲಿ ಕರ್ಮದಿಂದ ಫಲ ಸಿದ್ಧಿ ಒಡನೆ ಕೈಗೂಡುತ್ತದೆಯಲ್ಲವೇ ?
ನಮ್ಮಲ್ಲಿ ಕೆಲವರು ದೇವತೆಗಳಿಗು ಮತ್ತು ಭಗವಂತನಿಗು ವ್ಯತ್ಯಾಸ ತಿಳಿಯದೆ, ದೇವತಗಳನ್ನೇ ಭಗವಂತನೆಂದು ಪೂಜಿಸುತ್ತಾರೆ. ಇದು ದೇವತೆಗಳ ಬಗ್ಗೆ ನಮ್ಮಲ್ಲಿರುವ ಒಂದು ತಪ್ಪು ಕಲ್ಪನೆ. ದೇವರು ಅನೇಕ ಅಲ್ಲ ಆತಒಬ್ಬನೆ; ಆದರೆ ಭಗವಂತನ ಅಧೀನವಾಗಿರುವ ದೇವತೆಗಳು ಅನೇಕ. ನಾವು ತಕ್ಷಣ ಫಲ ಪಡೆಯುವ ಅಪೇಕ್ಷೆಯಿಂದ ಭಗವಂತನನ್ನು ಮರೆತು ದೇವತೆಗಳ ಸಮೂಹವನ್ನು ಪೂಜಿಸುವ ಸಂಪ್ರದಾಯವನ್ನುಬೆಳೆಸಿಕೊಂಡುಬಿಟ್ಟಿದ್ದೇವೆ. ಈ ರೀತಿ ಮಾಡುವುದರಿಂದ ಫಲ ಸಿಗಬಹುದು- ಆದರೆ ಅದು ಅಲ್ಪಕಾಲದ್ದು. ಐಹಿಕ ಸುಖವನ್ನುಬಯಸಿ ವಿವಿಧ ದೇವತೆಗಳನ್ನು ವಿವಿಧ ಫಲಕ್ಕಾಗಿ ಪೂಜಿಸುವುದು ನಮ್ಮನ್ನು ಶಾಶ್ವತವಾದ ಮೋಕ್ಷ ಮಾರ್ಗದತ್ತಕೊಂಡೊಯ್ಯಲಾರದು. ಇಂದ್ರಿಯ ಭೋಗಕ್ಕಾಗಿ ಮಾಡುವ ಪೂಜೆ- ಪೂಜೆ ಎನಿಸಲಾರದು. ದೇವತೆಗಳು ಮೋಕ್ಷಮಾರ್ಗದಲ್ಲಿ ನಮಗೆ ಸಹಾಯ ಮಾಡಬಲ್ಲರು, ಆದರೆ ಸರ್ವಶಕ್ತ ಭಗವಂತನ ಎಚ್ಚರ ಬಹಳ ಮುಖ್ಯ.
ಭಗವಂತನನ್ನು ಯಾವ ರೂಪದಲ್ಲೇ ಪೂಜಿಸದರೂ ಐಹಿಕ ಭೋಗಕ್ಕಾಗಿ ಪೂಜಿಸದೆ, ಆ ಸರ್ವಾಂತರ್ಯಾಮಿ ಭಗವಂತನನ್ನುಸೇರುವ ಅನುಸಂಧಾನದಿಂದ ಪೂಜಿಸುವುದು ಅಧ್ಯಾತ್ಮಸಾಧನೆಯಲ್ಲಿ ಅತಿ ಮುಖ್ಯ ವಿಚಾರ. ನೀನು ನಿನ್ನ ದೇವರನ್ನು ಕೃಷ್ಣಎಂದರೂ ಸರಿ, ಅಲ್ಲಾಹು ಎಂದರೂ ಸರಿ. ಆದರೆ ನಮ್ಮೆಲ್ಲರನ್ನು ಕಾಪಾಡಿ ಪೋಷಿಸುವ ಶಕ್ತಿ ಒಂದೇ ಎನ್ನುವ ನಿಜ ತಿಳಿದಿರಲಿ. ಭಗವಂತನನ್ನು ವಿವಿಧ ರೂಪದಲ್ಲಿ ಪೂಜಿಸಬಹುದು. ಆದರೆ ವಿವಿಧ ಭೋಗಕ್ಕಾಗಿ ವಿವಿಧ ದೇವತೆಗಳನ್ನು ದೇವರೆಂದುಪೂಜಿಸುವುದು ಅಧ್ಯಾತ್ಮ ಸಾಧನೆಯಾಗಲಾರದು. ದೇವತೆಗಳ ಮುಖೇನ ಅಥವಾ ದೇವತೆಗಳಲ್ಲಿ ಭಗವಂತನನ್ನುಕಾಣುವುದು ತಪ್ಪಲ್ಲ. ಏಕೆಂದರೆ ಭಗವಂತ ಸರ್ವಾಂತರ್ಯಾಮಿ, ಆತನಿರದ ಸ್ಥಳವಿಲ್ಲ. ಇದನ್ನು ಬಿಟ್ಟು ದೇವತೆಗಳನ್ನೇಭಗವಂತ ಎಂದು ಪೂಜಿಸಿದರೆ ಅದನ್ನು ದೇವತೆಗಳೂ ಮೆಚ್ಚಲಾರರು.
ತನ್ನ ಅವತಾರದ ಉದ್ದೇಶ ಮತ್ತು ರಹಸ್ಯವನ್ನು ತಿಳಿಹೇಳಿದ ಕೃಷ್ಣ, ಅಂತಹ ಜ್ಞಾನದಿಂದ ಸಿದ್ಧಿ ಪಡೆದ ಉದಾಹರಣೆ ನೀಡಿದ. ಬಹುದೇವತಾ ವಾದವನ್ನು ತೊಡೆದು ಹಾಕಿ ದೇವರು ಒಬ್ಬನೇ, ದೇವತೆಗಳು ಹಲವು ಎನ್ನುವುದನ್ನು ಸ್ಪಷ್ಟಪಡಿಸಿದ ಹಾಗುಉಪಾಸನೆ ಹೇಗಿರಬೇಕು ಎನ್ನುವುದನ್ನೂ ಸ್ಪಷ್ಟವಾಗಿ ಹೇಳಿದ. ಈ ಸಂದರ್ಭದಲ್ಲಿ ನಮಗೆ ಒಂದು ಪ್ರಶ್ನೆ ಮೂಡಬಹುದು. ಮನುಕುಲದ ಸೃಷ್ಟಿ ಈ ಭೂಮಿಯ ಮೇಲೆ ಭಗವಂತನಿಂದಾಯಿತು. ಆದರೆ ಒಬ್ಬ ಮಾನವ ಇನ್ನೊಬ್ಬನಂತಿಲ್ಲ. ಸ್ವಭಾವವೈವಿಧ್ಯತೆಯ ಮೂಲವೇನು? ಭಗವಂತ ಒಬ್ಬಬ್ಬರನ್ನು ಒಂದೊಂದು ರೀತಿ ಏಕೆ ಸೃಷ್ಟಿ ಮಾಡಿದ್ದಾನೆ? ಈ ಪ್ರಶ್ನೆಗೆ ಮುಂದಿನಶ್ಲೋಕದಲ್ಲಿ ಕೃಷ್ಣ ಉತ್ತರಿಸುತ್ತಾನೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
काङ्क्षन्तः कर्मणां सिद्धिं यजन्त इह देवताः।
क्षिप्रं हि मानुषे लोके सिद्धिर्भवति कर्मजा॥
इस मनुष्य लोक में कर्मों के फल को चाहने वाले लोग देवताओं का पूजन किया करते हैं क्योंकि उनको कर्मों से उत्पन्न होने वाली सिद्धि शीघ्र मिल जाती है
॥12॥
Kaangkshantah karmanaam siddhim yajanta iha devataah;
Kshipram hi maanushe loke siddhir bhavati karmajaa.
Those who long for success in action in this world sacrifice to the gods, because successis quickly attained by men through action.

No comments:
Post a Comment