Thursday, 6 September 2018

ಅಧ್ಯಾಯ - 04 : ಶ್ಲೋಕ – 17

ಕರ್ಮಣೋ ಹ್ಯಪಿ ಬೋದ್ಧವ್ಯಂ ಬೋದ್ಧವ್ಯಂ ಚ ವಿಕರ್ಮಣಃ ।ಅಕರ್ಮಣಶ್ಚ ಬೋದ್ಧವ್ಯಂ ಗಹನಾ ಕರ್ಮಣೋ ಗತಿಃ  ॥೧೭॥

ಕರ್ಮಣಃ ಹಿ ಅಪಿ  ಬೋದ್ಧವ್ಯಮ್  ಬೋದ್ಧವ್ಯಮ್  ಚ ವಿಕರ್ಮಣಃ |
ಅಕರ್ಮಣಃ ಚ ಬೋದ್ಧವ್ಯಮ್  ಗಹನಾ ಕರ್ಮಣಃ ಗತಿಃ --

ಕರ್ಮದ ಬಗ್ಗೆಯೂ ತಿಳಿಯಬೇಕು. ವಿರುದ್ಧ ಕರ್ಮದ ಬಗೆಗೂತಿಳಿಯಬೇಕು, ಕರ್ಮ ತ್ಯಾಗದ ಬಗೆಗೂ ತಿಳಿಯಬೇಕು.[ಕರ್ಮವನ್ನು ನಮ್ಮಿಂದ ತಿಳಿಯಬೇಕು. ವಿಕರ್ಮವನ್ನು ನಮ್ಮಿಂದತಿಳಿಯಬೇಕು; ಆಕರ್ಮವನ್ನೂ ನಮ್ಮಿಂದ ತಿಳಿಯಬೇಕು.] ಕರ್ಮದ ನಡೆ ನಿಗೂಢವಾದದ್ದು.

ಯಾವುದು ಕರ್ಮ, ಯಾವುದು ಅಕರ್ಮ ಎನ್ನುವುದು ಜ್ಞಾನಿಗಳಿಗೂ ಕೂಡಾ ಗೊಂದಲದ ವಿಷಯ. ನಾವು ಮಾಡುವುದನ್ನುತಿಳಿದು ಮಾಡಬೇಕು. ನಮ್ಮ ಕರ್ಮ ಜ್ಞಾನಪೂರ್ವಕವಾಗಿರಬೇಕು. ಆದ್ದರಿಂದ ಕರ್ಮ ಎಂದರೆ ಏನು ಎನ್ನುವುದನ್ನು ಮೊದಲುನಿನಗೆ ಹೇಳುತ್ತೇನೆ. ಇದರಿಂದ ನೀನು ಕೇಡಿನಿಂದ ಪಾರಾಗುವೆ ಎನ್ನುತ್ತಾನೆ. ಕೃಷ್ಣ.

ಕರ್ಮದ ಬಗ್ಗೆ ತಿಳಿಯುವುದು ಅಷ್ಟು ಸುಲಭವಲ್ಲ. ಆದರೆ ಇದನ್ನು ತಿಳಿಯಲೇಬೇಕು. ಕರ್ಮದ ನಡೆ ಅತ್ಯಂತ ರಹಸ್ಯವಾದದ್ದು. ಯಾವುದು ಕರ್ಮ ಯಾವುದು ಅಕರ್ಮ ಎಂದು ತಿಳಿಯುವುದು ಬಹಳ ಕಷ್ಟ. ದೊಡ್ಡದೊಡ್ಡ ಜ್ಞಾನಿಗಳಿಗೂ ಇದುತಿಳಿಯುವುದಿಲ್ಲ. ಇತಿಹಾಸದಲ್ಲಿನ ಕೆಲವು ವಿಷಯವನ್ನು ನೋಡಿದರೆ  ನಮಗೆ ಗೊಂದಲವಾಗುತ್ತದೆ. ಉದಾಹರಣೆಗೆವೇದವ್ಯಾಸರು. ಇವರು ಮದುವೆ ಆಗದ ಒಬ್ಬ ಬೆಸ್ತರ ಹುಡುಗಿಯಿಂದ ಹುಟ್ಟಿದ ಕನ್ಯಾಪುತ್ರ(ಕಾನೀನ); ವೇದವ್ಯಾಸರಮಕ್ಕಳು ಪಾಂಡು ಮತ್ತು ಧೃತರಾಷ್ಟ್ರ ವಿದವೆಯರಿಗೆ ಹುಟ್ಟಿದ ಮಕ್ಕಳು;  ಪಾಂಡವರು-ಗಂಡ ಇರುವಾಗ ಪರಪುರುಷರಿಗೆ  ಹುಟ್ಟಿದವರು!  ಯಾವುದು ಧರ್ಮ? ಪಾಂಡವರನ್ನು ಸಮರ್ಥಿಸುವುದು ಎಷ್ಟು ಸರಿ? ವೇದವ್ಯಾಸರನ್ನು ಮಹಾಜ್ಞಾನಿ ಬ್ರಾಹ್ಮಣಎಂದು ಒಪ್ಪುವುದು ಸಾಧ್ಯವೇ? ಈ ಉದಾಹರಣೆಯನ್ನು ನೋಡಿದಾಗ ಯಾವುದು ಧರ್ಮ,ಯಾವುದು ಅಧರ್ಮ, ಯಾವುದುಸರಿ, ಯಾವುದು ತಪ್ಪು, ಎನ್ನುವಲ್ಲಿ ನಮಗೆ  ಗೊಂದಲವಾಗುತ್ತದೆ.

ನಮ್ಮಲ್ಲಿ ನೆಡೆಯತಕ್ಕ ಕರ್ಮ, ಅಕರ್ಮ, ವಿಕರ್ಮದ ಹಿಂದೆ ಅನಂತವಾದ ಭಗವದ್ ಶಕ್ತಿ ಕೆಲಸ ಮಾಡುತ್ತಿರುತ್ತದೆ ಎನ್ನುವಎಚ್ಚರ ನಮಗಿರಬೇಕು. ಈ ಜ್ಞಾನವಿಲ್ಲದೆ ಕರ್ಮದ ಮರ್ಮವನ್ನು ಅರಿಯಲು ಸಾಧ್ಯವಿಲ್ಲ. ಒಂದು ದೇಹದಲ್ಲಿ ಭಗವಂತಅನೇಕ ರೂಪದಲ್ಲಿದ್ದು(ವಿಕರ್ಮಣಃ) ಕರ್ಮ ಮಾಡಿಸುತ್ತಾನೆ. ಕರ್ಮ ಎನ್ನುವುದು ತುಂಬಾ ಕ್ಲಿಷ್ಟವಾದ ವಿಷಯ. ಅದನ್ನುನಾವು ಭಗವಂತನಿಂದಲೇ ತಿಳಿಯಬೇಕು. ಮುಂದಿನ ಶ್ಲೋಕಗಳಲ್ಲಿ ಕೃಷ್ಣ ಕರ್ಮದ ಮರ್ಮವನ್ನು ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

कर्मणो ह्यपि बोद्धव्यं बोद्धव्यं च विकर्मणः।
अकर्मणश्च बोद्धव्यं गहना कर्मणो गतिः॥

कर्म का स्वरूप भी जानना चाहिए और अकर्मण का स्वरूप भी जानना चाहिए तथा विकर्म का स्वरूप भी जानना चाहिए क्योंकि कर्म की गति गहन है
॥17॥

Karmano hyapi boddhavyam boddhavyam cha vikarmanah;
Akarmanashcha boddhavyam gahanaa karmano gatih.

For, verily the true nature of action (enjoined by the scriptures) should be known, also(that) of forbidden (or unlawful) action, and of inaction;
hard to understand is the nature (path) ofaction

No comments:

Post a Comment