Thursday, 6 September 2018

ಅಧ್ಯಾಯ - 04 : ಶ್ಲೋಕ – 18

ಕರ್ಮಣ್ಯಕರ್ಮ ಯಃ ಪಶ್ಯೇದಕರ್ಮಣಿ ಚ ಕರ್ಮ ಯಃ ।ಸ ಬುದ್ಧಿಮಾನ್ ಮನುಷ್ಯೇಷು ಸ ಯುಕ್ತಃ ಕೃತ್ಸ್ನಕರ್ಮಕೃತ್  ॥೧೮॥

ಕರ್ಮಣಿ ಅಕರ್ಮ ಯಃ ಪಶ್ಯೇತ್ ಅಕರ್ಮಣಿ ಚ ಕರ್ಮ ಯಃ |
ಸಃ  ಬುದ್ಧಿಮಾನ್ ಮನುಷ್ಯೇಷು ಸಃ  ಯುಕ್ತಃ ಕೃತ್ಸ್ನಕರ್ಮ ಕೃತ್ --

ವಿಶ್ವದ ಕ್ರಿಯೆ ನಡೆಯುತ್ತಿರುವಾಗಲೂ ತನ್ನಿಂದ ಏನೂನಡೆದಿಲ್ಲ ಎಂದು ತಿಳಿದವನು, ತಾನು ಏನು ಮಾಡದಿದ್ದಾಗಲೂ ವಿಶ್ವದ ಕ್ರಿಯೆ ನಡೆಯುತ್ತಿದೆ ಎಂದು ತಿಳಿದವನು,[ಕರ್ಮಬದ್ಧನಾದ ಜೀವನಲ್ಲಿ ಕರ್ಮ ಇಲ್ಲ ಎಂದು ತಿಳಿದವನು, ಕರ್ಮಾತೀತನಾದ ಭಗವಂತನಲ್ಲಿ ಎಲ್ಲಾ ಕರ್ಮಗಳನ್ನುಕಾಣುವವನು]ಮನುಷ್ಯರಲ್ಲಿ ನಿಜವಾಗಿ ತಿಳಿದವನು. ಅವನೇ ಸಾಧನೆಯ ದಾರಿ ಬಲ್ಲವನು; ಎಲ್ಲಾ ಕರ್ಮಗಳ ಫಲವನ್ನುಪಡೆದವನು.

ಕರ್ಮ ಅಂದರೆ ಏನು ಎನ್ನುವ ಬಗ್ಗೆ ಅತ್ಯಂತ ರೋಚಕವಾದ ವಿಚಾರವನ್ನು ಕೃಷ್ಣ ಇಲ್ಲಿ ವಿವರಿಸಿದ್ದಾನೆ. ಈ ಹಿಂದೆ ಹೇಳಿದಂತೆಸಂಸ್ಕೃತ ರಹಸ್ಯಾರ್ಥವುಳ್ಳ ಭಾಷೆ(mystic language).ಅದಕ್ಕಾಗಿ ಭಗವದ್ಗೀತೆಯನ್ನು ಓದಿದಾಕ್ಷಣ, ಅಧ್ಯಾತ್ಮದ ಅನುಭವಇಲ್ಲದೆ ಏನೂ ತಿಳಿಯದು. ಅಧ್ಯಾತ್ಮದ ಅನುಭವದ ಸ್ಥರದಲ್ಲಿ ನಾವು ಎಷ್ಟು ಆಳಕ್ಕೆ ಇಳಿಯುತ್ತೆವೋ ಅಷ್ಟು ಆಳಕ್ಕೆ ಗೀತೆತೆರೆದುಕೊಳ್ಳುತ್ತದೆ. ಇದಕ್ಕೆ ಈ ಶ್ಲೋಕವೇ ಉದಾಹರಣೆ. ಮೇಲ್ನೋಟಕ್ಕೆ ಒಗಟಿನಂತೆ ವಿರೋಧಾಭಾಸವಾಗಿರುವ ಹುಚ್ಚುಹೇಳಿಕೆಯಂತಿದೆ ಈ ಶ್ಲೋಕ!  ಇಲ್ಲಿ ಹೀಗೆ ಹೇಳಲಾಗಿದೆ: "ಕರ್ಮ ಇದ್ದಲ್ಲಿ ಕರ್ಮ ಇಲ್ಲ, ಕರ್ಮ ಏಲ್ಲಿ ಇಲ್ಲ ಅಲ್ಲಿ ಕರ್ಮಇದೆ. ಇದು ಯಾರಿಗೆ ತಿಳಿದಿದೆ ಆತ ಬುದ್ಧಿವಂತ"  ಅಥವಾ "ಯಾವುದು ಕರ್ಮವೋ ಅದು ಕರ್ಮವಲ್ಲ, ಯಾವುದುಕರ್ಮವಲ್ಲವೋ ಅದು ಕರ್ಮ; ಇದನ್ನು ತಿಳಿದವ ಬುದ್ಧಿವಂತ"!!  ಇಲ್ಲಿರುವ ಗೂಡಾರ್ಥವನ್ನು ತಿಳಿದುಕೊಳ್ಳಬೇಕಾದರೆಅಧ್ಯಯನದ ಜೊತೆಗೆ ಅಧ್ಯಾತ್ಮದ ಅನುಭಾವ ಬೇಕು.

'ಏಲ್ಲಿ ಕರ್ಮವಿದೆ ಅಲ್ಲಿ ಕರ್ಮವಿಲ್ಲ. ನಾವು ನಮ್ಮಲ್ಲಿ  ಕರ್ಮವಿದೆ ಎಂದು ತಿಳಿದುಕೊಳ್ಳುತ್ತೇವೆ. 'ನನ್ನಲ್ಲಿ ಕರ್ಮದಸ್ವಾತಂತ್ರ್ಯವಿದೆ-ನನಗೆ ಯಾರ ಹಂಗೂ ಇಲ್ಲ' ಎನ್ನುವ ಭಾವನೆ ನಮ್ಮದು. ಆದರೆ ನಮ್ಮಲ್ಲಿರುವ ಕರ್ಮ ಭಗವಂತನಅಧೀನ. ಈ ಸೃಷ್ಟಿ ಚಕ್ರದಲ್ಲಿ ನಾವು ಏನು ಮಾಡದಿದ್ದಾಗಲೂ ಸಹ ಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ನೀನುಏನನ್ನಾದರೂ ಮಾಡುತ್ತಿದ್ದರೆ ನಿನ್ನಿಂದಾಗಿಯೇ ಕ್ರಿಯೆ ನಡೆದಿದ್ದಲ್ಲ. ನನ್ನಲ್ಲಿ ಕ್ರಿಯೆ ಇದೆ ಎನ್ನುವ ಭ್ರಮೆಯನ್ನುಬಿಟ್ಟುಬಿಡು. ಪ್ರಕೃತಿ ನಿರಂತರವಾಗಿ ತನ್ನ ಕರ್ತವ್ಯವನ್ನು ಮಾಡುತ್ತಿರುತ್ತದೆ. ವಿಶ್ವಕ್ರಿಯೆ ನಾವು ನಿಷ್ಕ್ರೀಯರಾಗಿದ್ದರೂನಡೆಯುತ್ತದೆ. ನಾವು ಎಲ್ಲ ಮಾಡಿದರೂ ಏನೂ ನಡೆಯುವುದಿಲ್ಲ. ಈ ವಿಶ್ವ ಚಕ್ರ ನಿರಂತರ.
ಇದನ್ನು ಅರ್ಥ ಮಾಡಿಕೊಳ್ಳಲು ಒಂದು ಲೌಕಿಕ ದೃಷ್ಟಾಂತವನ್ನು ನೋಡೋಣ.  ಒಂದು ಆನೆ(ಈ ವಿಶ್ವ ಚಕ್ರ) ಅದರ ತಲೆಯಮೇಲೆ ಒಂದು ಪುಟ್ಟ ಇರುವೆ(ಸಾಮಾನ್ಯ ಮಾನವ). ಆನೆ ಪೂರ್ವದಿಂದ ಪಶ್ಚಿಮಕ್ಕೆ ಹೋಗುತ್ತಿದೆ. ಇರುವೆ ನಿರಂತರತಲೆಯಿಂದ ಬಾಲದತ್ತ ಅಂದರೆ ಪಶ್ಚಿಮದಿಂದ ಪೂರ್ವಕ್ಕೆ ಹೋಗುತ್ತಿದೆ. ಆದರೆ ಆನೆಯ ಮೇಲೆ ಇರುವ ಈ ಇರುವೆ ಯಾವದಿಕ್ಕಿನಲ್ಲಿ ಚಲಿಸಿದರೂ ಅದು ಆನೆ ಎಲ್ಲಿಗೆ ಸೇರುತ್ತದೋ ಅಲ್ಲಿಗೇ ಸೇರುವುದು.  ಇಲ್ಲಿ ಇರುವೆಯ ಚಲನೆ ವ್ಯರ್ಥ-ಅದರಿಂದಏನೂ ಉಪಯೋಗವಿಲ್ಲ. ಒಂದು ವೇಳೆ ಈ ಇರುವೆ ನನ್ನಿಂದಾಗಿ ಆನೆ ಅಲ್ಲಿಂದ ಇಲ್ಲಿಗೆ ಬಂದು ತಲುಪಿತು ಎಂದುತಿಳಿದರೆ? ಎಷ್ಟು ಹಾಸ್ಯಾಸ್ಪದವಲ್ಲವೇ? ಹಾಗೇ, ನಮ್ಮ ಚಲನೆಯ ಹಿಂದೆ ಒಂದು ಮಹಾನ್ ಚಾಲನಾ ಶಕ್ತಿ ಇದೆ. ಇಡೀಬ್ರಹ್ಮಾಂಡವನ್ನು(Cosmos)ತೆಗೆದುಕೊಂಡರೆ, ಈ ಭೂಮಿ ಇತರ ಗ್ರಹಗೊಲಗಳ ನಡುವಿನ ಒಂದು ಚಿಕ್ಕ ಬಿಂದು. ಆಬಿಂದುವಿನಲ್ಲಿ ನಮ್ಮ ದೇಶ  ಇನ್ನೂ ಒಂದು ಚಿಕ್ಕ ಬಿಂದು. ಅದರಲ್ಲಿ 'ನಾನು' ಎನ್ನುವುದು ಊಹಿಸಲೂ ಅಸಾಧ್ಯವಾದಬಿಂದು(very tiny and insignificant). ಆದರೆ ನಾವು ಮಾತ್ರ ಈ ಬ್ರಹ್ಮಾಂಡವೇ ನಮ್ಮಿಂದ ನಡೆಯುತ್ತಿದೆ ಎನ್ನುವಂತೆಅಹಂಕಾರ ಪಡುತ್ತೇವೆ. ಇಡೀ ವಿಶ್ವದ ಚಲನೆಯೊಂದಿಗೆ ನಾವು  ಒಂದು ಘಟಕವಾಗಿದ್ದೇವೆ ಹೊರತು, ನಮ್ಮ  ಸ್ವಂತದಿಂದಏನೂ ಆಗುತ್ತಿಲ್ಲ. ಆದ್ದರಿಂದ 'ನಿನ್ನ ಕರ್ಮದಲ್ಲಿ ಅಕರ್ಮವನ್ನು ನೋಡು’ ಎನ್ನುತ್ತಾನೆ ಕೃಷ್ಣ. ಹೀಗೆ ತನ್ನ  ಕರ್ಮವನ್ನುನಿಯಂತ್ರಿಸುವ ವಿಶ್ವಶಕ್ತಿಯಾಗಿ ಭಗವಂತನಿದ್ದಾನೆ ಎಂದು ತಿಳಿದವ ವಿವೇಕಿ'.

'ಯುಕ್ತಃ' ಅಂದರೆ ಮನಸ್ಸನ್ನು ಸತ್ಯದ ಕಡೆಗೆ ತಿರುಗಿಸಿ, ಸತ್ಯವನ್ನು ತಿಳಿಯುವುದಕ್ಕೋಸ್ಕರ ಮನನ ಮಾಡಿದವ ಎಂದರ್ಥ. ಹೀಗೆ ಸರಿ ತಪ್ಪು ತಿಳಿದವ ಎಲ್ಲ ಕರ್ಮದ ಪೂರ್ಣ ಫಲವನ್ನು ಪಡೆಯುತ್ತಾನೆ. ಇಂಥವನಿಗೆ ಕರ್ತೃತ್ವ ಇದ್ದರೂ ಅದರಅಭಿಮಾನವಿಲ್ಲ;  ನಾನು ಮಾಡಿದೆ ನನ್ನಿಂದಾಯಿತು ಅನ್ನುವ ಅಹಂಕಾರವಿಲ್ಲ; ನಾನು ಸ್ವತಂತ್ರ ಅನ್ನುವ ಭ್ರಮೆ ಇಲ್ಲ. ಆದ್ದರಿಂದ ಅವನು ಮಾಡುವ ಎಲ್ಲ ಕರ್ಮವೂ ಫಲಪ್ರದ. ಭಗವಂತನ ಪಾರಮ್ಯದ ಎಚ್ಚರದಿಂದ ಅವನ ಜೀವನರೂಪುಗೊಂಡಿದೆ. ಅಂತವನು ಸಣ್ಣ ಕರ್ಮ ಮಾಡಿದರೂ ಮಹಾ ಫಲವನ್ನು ಪಡೆಯುತ್ತಾನೆ. ಅಹಂಕಾರದಿಂದಕಳಚಿಕೊಳ್ಳುವುದು ಅಧ್ಯಾತ್ಮದಲ್ಲಿ ಅತ್ಯಂತ ಮಹತ್ವದ ವಿಷಯ. ಕೃಷ್ಣ ಗೀತೆಯಲ್ಲಿ  ಈ ಮಾತನ್ನು ಪದೇ ಪದೇಹೇಳುತ್ತಾನೆ. ಅಹಂಕಾರ ಎನ್ನುವುದು ಎಷ್ಟು ಅಪಾಯಕಾರಿ ಎಂದರೆ, ಗೀತೆ ಓದಿದ ಮೇಲೆ 'ನಾನು ಗೀತೆಯನ್ನುಓದಿದ್ದೇನೆ' ಎನ್ನುವ ಅಹಂಕಾರ ಬಂದು ಬಿಡುತ್ತದೆ!  ಆದ್ದರಿಂದ ಜ್ಞಾನ ಸಂಪಾದನೆ ಜೊತೆಗೆ ಒಂದು ಎಚ್ಚರ ಸದಾ ಇರಬೇಕು. ಯಾವ ಕಾಲಕ್ಕೂ ಅಹಂಕಾರಕ್ಕೆ ಒಳಗಾಗಬಾರದು. ಅಹಂಕಾರ ಎನ್ನುವುದು ಆಧ್ಯಾತ್ಮದ ದಾರಿ ಅಲ್ಲ.

ಭಗವಂತ ಕರ್ಮ ಮಾಡಿದರೂ ಅವನಿಗೆ ಕರ್ಮದ ಲೇಪವಿಲ್ಲ. ಯಾವ ಕರ್ಮದ ಲೇಪವಿಲ್ಲದ ಭಗವಂತನಲ್ಲಿ ಎಲ್ಲಕರ್ಮವಿದೆ. ಕರ್ಮ ಇದ್ದಲ್ಲಿ ಕರ್ಮದ ಲೇಪವಿಲ್ಲ. ಯಾರಲ್ಲಿ ಕರ್ಮದ ಲೇಪವಿಲ್ಲ ಆತ ಮಾತ್ರ ಪೂರ್ಣ ಫಲವನ್ನುಪಡೆಯುತ್ತಾನೆ. ಕರ್ಮದ ಲೇಪದಲ್ಲಿ ಬಿದ್ದವನು 'ನಾನು ಮಾಡಿದೆ, ನನ್ನಿಂದಾಯಿತು' ಎಂದುಕೊಂಡು ಸೆರೆಯಲ್ಲಿ ಸಿಕ್ಕಿಒದ್ದಾಡುತ್ತಾನೆ. ಇದು ಕೃಷ್ಣನ  ಕರ್ಮದ ವಿವರಣೆ(definition).  ಭಗವಂತನಲ್ಲಿ ಕರ್ಮದ ಲೇಪವಿಲ್ಲ, ಆದರೆ ಸರ್ವಕರ್ತೃತ್ವವಿದೆ. ನಾವು ಎಷ್ಟು ಕರ್ಮದ ಲೇಪವನ್ನು ಕಮ್ಮಿ ಮಾಡಿಕೊಂಡೆವೋ ಅಷ್ಟು ಕರ್ಮದ ಫಲವನ್ನು ಪಡೆಯುತ್ತೇವೆ. ಇದನ್ನು ತಿಳಿದವ ಬುದ್ಧಿವಂತ. ಆತ  ಕರ್ಮದ ನಿಜವಾದ ಅನುಸಂಧಾನದಿಂದ ಅದರ ಪೂರ್ಣ ಫಲವನ್ನು ಪಡೆಯುತ್ತಾನೆ. ಇದನ್ನು ಇನ್ನೂ ಬಿಡಿಸಿ ಮುಂದಿನ ಶ್ಲೋಕದಲ್ಲಿ ಕೃಷ್ಣ ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

कर्मण्य कर्म यः पश्येदकर्मणि च कर्म यः।
स बुद्धिमान्मनुष्येषु स युक्तः कृत्स्नकर्मकृत्‌॥

जो मनुष्य कर्म में अकर्म देखता है और जो अकर्म में कर्म देखता है, वह मनुष्यों में बुद्धिमान है और वह योगी समस्त कर्मों को करने वाला है
॥18॥

Karmanyakarma yah pashyed akarmani cha karma yah;
Sa buddhimaan manushyeshu sa yuktah kritsnakarmakrit.

He who seeth inaction in action and action in inaction, he is wise among men;
he is aYogi and performer of all actions.COMMENTARY: It is the idea of agency, the idea of “I am the doer” that binds man toworldliness. If this idea vanishes, action is no action at all. It does not bind one to worldliness. Thisis inaction in action. But if a man sits quietly, thinking of actions and that he is their doer, he is everdoing actions. This is referred to as action in inaction.

No comments:

Post a Comment