ಯದೃಚ್ಛಾಲಾಭಸಂತುಷ್ಟೋ ದ್ವಂದ್ವಾತೀತೋ ವಿಮತ್ಸರಃ ।ಸಮಃ ಸಿದ್ಧಾವಸಿದ್ಧೌ ಚ ಕೃತ್ವಾSಪಿ ನ ನಿಬದ್ಧ್ಯತೇ ॥೨೨॥
ಯದೃಚ್ಛಾ ಲಾಭ ಸಂತುಷ್ಟಃ ದ್ವಂದ್ವ ಅತೀತಃ ವಿಮತ್ಸರಃ |
ಸಮಃ ಸಿದ್ಧೌ ಅಸಿದ್ಧೌ ಚ ಕೃತ್ವಾ ಅಪಿ ನ ನಿಬಧ್ಯತೇ --
ತಾನಾಗಿಯೇ ಸಿಕ್ಕಿದ್ದರಲ್ಲಿ ಸಂತಸಪಡುವವನು, ಬದುಕಿನಇಬ್ಬಂದಿತನವನ್ನು ಮೀರಿನಿಂತವನು, ಹೆರವರ ಏಳಿಗೆಗೆ ಕಿಚ್ಚುಪಡದವನು,ಗಳಿಕೆಯನ್ನೂ ಕಲಿಕೆಯನ್ನೂ ಒಂದೇ ಬಗೆಯಿಂದಕಾಣುವವನು ಕರ್ಮ ಮಾಡಿದರೂ ಅದರ ಸೆರೆಗೆ ಸಿಕ್ಕುವುದಿಲ್ಲ.
ನಮ್ಮ ಮನಸ್ಸು ನಮ್ಮ ಹಿಡಿತದಲ್ಲಿ ಬಂದಾಗ ಕಾಣುವ ಮುಖ್ಯ ಲಕ್ಷಣದ ಬಗ್ಗೆ ಇಲ್ಲಿ ವಿವರಣೆ ಇದೆ. ತೃಪ್ತಿಯನ್ನುಸಾಧಿಸಿದವನಿಗೆ ಏನಾದರೂ ಸಿಕ್ಕಿದರೆ ಅದರಲ್ಲೇ ಸಂತೋಷವಾಗಿರುತ್ತಾನೆ. ಸಿಕ್ಕಿದ್ದು ಸಾಲದೆಂದಾಗಲಿ, ಇನ್ನೇನೋ ಸಿಗಲಿಎಂದಾಗಲಿ ಆತನ ಮನಸ್ಸು ಬಯಸುವುದಿಲ್ಲ. ಏಕೆಂದರೆ ನಮಗೆ ಏನೇ ಸಿಕ್ಕಿದರೂ ಅದು ಭಗವಂತನ ಇಚ್ಛೆಯಿಂದಸಿಕ್ಕಿರುವುದು. ಉದಾಹರಣೆಗೆ ಉದ್ಯೋಗ. ಪ್ರತಿಭೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವುದಿಲ್ಲ. ಉದ್ಯೋಗಸಿಗುವುದು, ಅದರಿಂದ ಸಂಬಳ ಸಿಗುವುದು- ಎಲ್ಲವೂ ಭಗವಂತನ ಇಚ್ಛೆಯಂತೆ. ಆದ್ದರಿಂದ ಎಲ್ಲವೂ ಭಗವಂತನ ಸಂಕಲ್ಪಎಂದು ತಿಳಿದು ನಿಸ್ವಾರ್ಥ ಕರ್ಮದಲ್ಲಿ ತೊಡಗಿದಾಗ ಮನಸ್ಸು ನಿರ್ಮಲವಾಗುತ್ತದೆ. ಈ ಸ್ಥಿತಿಯಲ್ಲಿ ಅಹಂಕಾರ ಎಂದೂ ಹತ್ತಿರಸುಳಿಯುವುದಿಲ್ಲ. ಬಡತನವಾಗಲಿ,ಸಿರಿತನವಾಗಲಿ, ನಾವು ಹುಟ್ಟುವ ಮನೆಯಾಗಲಿ, ಯಾವುದೂ ನಮ್ಮ ಕೈಯಲ್ಲಿಲ್ಲ. ಎಲ್ಲವೂ ಆ ಈಶ್ವರ ಇಚ್ಛೆ. ಇದನ್ನು ತಿಳಿದು ಬದುಕುವುದು ಯತಚಿತ್ತಾತ್ಮನ ಗುರುತು.
ಇನ್ನು ಎರಡನೆ ಲಕ್ಷಣ 'ದ್ವಂದ್ವಾತೀತ ಜೀವನ'. ನಮ್ಮ ಜೀವನ ಎಂದರೆ ದ್ವಂದ್ವ. ಹಗಲು-ರಾತ್ರಿ, ಲಾಭ-ನಷ್ಟ, ಸೋಲು-ಗೆಲುವು, ಹುಟ್ಟು-ಸಾವು ಹೀಗೆ ಎಲ್ಲವೂ ದ್ವಂದ್ವ. ನಾವು ಈ ದ್ವಂದ್ವದ ನಡುವೆಯೇ ಬದುಕಬೇಕು. ಹಗಲು-ರಾತ್ರಿಗೆ ನಾವುಹೇಗೆ ಹೊಂದಿಕೊಂಡು ಬದುಕುತ್ತೇವೆ ಹಾಗೆ 'ಇತರ ದ್ವಂದ್ವದ ಆಘಾತಕ್ಕೆ ಒಳಗಾಗದೆ ಬದುಕಲು ಕಲಿ' ಎನ್ನುತ್ತಾನೆ ಕೃಷ್ಣ. ಸಿಗದಿದ್ದಾಗ ದುಃಖವಿಲ್ಲ, ಸಿಕ್ಕಾಗ ಹಾರಾಟವಿಲ್ಲ. ಎರಡೂ ಸ್ಥಿತಿಯಲ್ಲಿ ಏಕರೂಪವಾದ ಮನಃಸ್ಥಿತಿಯನ್ನು ಗಳಿಸುವುದುದ್ವಂದ್ವಾತೀತ ಜೀವನ.
ದ್ವಂದ್ವಾತೀತನಾಗಿ ಬದುಕುವಾಗ ಒಂದು ಸಮಸ್ಯೆ ಎದುರಾಗುತ್ತದೆ. ಇದ್ದದ್ದು ಸಾಕು ಎಂದು ಬದುಕುತ್ತಿರುವಾಗ ನಮ್ಮಜೊತೆಗಿನ ಇನ್ನೊಬ್ಬ ಹೆಚ್ಚು ಗಳಿಸಲಾರಂಬಿಸಿದರೆ, ಅದನ್ನು ನೋಡಿ ನಮಗೆ ಕಿಚ್ಚು ಹುಟ್ಟಿಕೊಳ್ಳುತ್ತದೆ. ನಮ್ಮ ಕೆಳಗಿನಮಟ್ಟದವರು, ನಮ್ಮ ಪಕ್ಕದ ಮನೆಯವರು ಯಾವುದೋ ಕಾರಣಕ್ಕೆ ಶ್ರೀಮಂತರಾದರೆ ನಮಗೆ ಸಂಕಟ! ಇಲ್ಲಿ ಕೃಷ್ಣಹೇಳುತ್ತಾನೆ "ಇನ್ನೊಬ್ಬರನ್ನು ಕಂಡು ಎಂದೂ ಕಿಚ್ಚು ಪಡಬೇಡ" ಎಂದು. ಯಾರ್ಯಾರಿಗೆ ಎಷ್ಟೆಷ್ಟು ಸಿಗಬೇಕೋ ಅಷ್ಟಷ್ಟೇಸಿಗುವುದು. ನಾವು ಎಷ್ಟು ಕೌಶಲ್ಯ(expertise)ರಾದರೂ ಕೂಡಾ ಭಗವಂತ ಅನುಗ್ರಹಿಸದೇ ಇದ್ದರೆ ನಾವು ಮೇಲಕ್ಕೇಳಲುಸಾಧ್ಯವಿಲ್ಲ. ಈ ಎಚ್ಚರವೇ "ಯದೃಚ್ಛಾ ಲಾಭ ಸಂತುಷ್ಟಃ"
ಇನ್ನು ಸಿದ್ಧಿ ಅಸಿದ್ಧಿಗಳು. ಉದಾಹರಣೆಗೆ ಧ್ಯಾನ(Meditation): ಧ್ಯಾನದಲ್ಲಿ ಏಕಾಗ್ರತೆ ಪಡೆಯಲು ಆಗದೆ ಇನ್ನೇನೋಕಾಣಿಸಿದರೆ ಏನು ಕಾಣಿಸಿತೋ ಅದರಲ್ಲೇ ಭಗವಂತನನ್ನು ಕಾಣು. ಅದಕ್ಕಾಗಿ ತಲೆ ಕೆಡಿಸಿಕೊಳ್ಳಬೇಡ. ಏಕಾಗ್ರತೆಸಾಧ್ಯವಾದರೆ ಭ್ರಮೆಗೊಳಗಾಗಬೇಡ. ಏಕೆಂದರೆ ಸಿದ್ಧಿ-ಅಸಿದ್ಧಿಗಳು ನಮ್ಮ ಕೈಯಲ್ಲಿಲ್ಲ. ಅಸಿದ್ಧಿಯೂ ಸಿದ್ಧಿಯ ಮೆಟ್ಟಿಲು. ಇಂತಹ ಮಾನಸಿಕ ಸಮತೋಲನ ಲೌಕಿಕ ಮತ್ತು ಅಧ್ಯಾತ್ಮಿಕ ಜೀವನದಲ್ಲಿ ಅತಿಮುಖ್ಯ. ಇಂತಹ ಸ್ಥಿತಿಯಲ್ಲಿ ಕರ್ಮ ಎಂದೂಬಂಧಕವಾಗುವುದಿಲ್ಲ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
यदृच्छालाभसंतुष्टो द्वंद्वातीतो विमत्सरः।
समः सिद्धावसिद्धौ च कृत्वापि न निबध्यते॥
जो बिना इच्छा के अपने-आप प्राप्त हुए पदार्थ में सदा संतुष्ट रहता है, जिसमें ईर्ष्या का सर्वथा अभाव हो गया हो, जो हर्ष-शोक आदि द्वंद्वों से सर्वथा अतीत हो गया है- ऐसा सिद्धि और असिद्धि में सम रहने वाला कर्मयोगी कर्म करता हुआ भी उनसे नहीं बँधता
॥22॥
Yadricchaalaabhasantushto dwandwaateeto vimatsarah;
Samah siddhaavasiddhau cha kritwaapi na nibadhyate.
Content with what comes to him without effort, free from the pairs of opposites andenvy, even-minded in success and failure, though acting, he is not bound.

No comments:
Post a Comment