Thursday, 6 September 2018

ಅಧ್ಯಾಯ - 04 : ಶ್ಲೋಕ – 24

ಬ್ರಹ್ಮಾರ್ಪಣಂ ಬ್ರಹ್ಮ ಹವಿರ್ಬ್ರಹ್ಮಾಗ್ನೌ ಬ್ರಹ್ಮಣಾ ಹುತಮ್ ।ಬ್ರಹ್ಮೈವ ತೇನ ಗಂತವ್ಯಂ  ಬ್ರಹ್ಮಕರ್ಮಸಮಾಧಿನಾ ॥೨೪॥

ಬ್ರಹ್ಮ ಅರ್ಪಣಮ್  ಬ್ರಹ್ಮ ಹವಿಃ ಬ್ರಹ್ಮ ಅಗ್ನೌ ಬ್ರಹ್ಮಣಾ ಹುತಮ್ ।
ಬ್ರಹ್ಮ ಏವ  ತೇನ ಗಂತವ್ಯಮ್   ಬ್ರಹ್ಮ ಕರ್ಮ ಸಮಾಧಿನಾ-

ಅರ್ಪಣವೂ ಭಗವಂತ [ಭಗವಂತನಲ್ಲಿ ಅರ್ಪಣ]. ಅರ್ಪಿಸುವಹವಿಸ್ಸೂ ಭಗವಂತ[ಭಗವಂತನಾದ ಹವಿಸ್ಸು]. ಬೆಂಕಿಯ ರೂಪದಲ್ಲಿರುವ ಭಗವಂತನಲ್ಲಿ [ಭಗವದಧೀನವಾದ ಬೆಂಕಿಯಲ್ಲಿ] ಭಗವಂತನಿಂದಲೆ ಹೋಮಮಾಡಿತು. ಬಗೆಯ ಏಕಾಗ್ರತೆಯ ಜತೆಗೆ ಕರ್ಮದ ವ್ಯಗ್ರತೆಯೂ ಭಗವಂತನೆ [ಭಗವಂತನಅಧೀನವಾದದ್ದು]

ಅಭಿಮಾನ ತ್ಯಾಗದಿಂದ ಜ್ಞಾನದ ಸ್ಥಿತಿಯಲ್ಲಿ ಕರ್ಮ ಮಾಡಿದರೆ ಹೇಗಿರುತ್ತದೆ ಎನ್ನುವುದಕ್ಕೆ ಉತ್ತರ "ಬ್ರಹ್ಮಾರ್ಪಣಂಬ್ರಹ್ಮಹವಿಃ" . ಇಲ್ಲಿ ಅರ್ಪಣ ಅನ್ನುವದನ್ನು ಈ ರೀತಿ ಅರ್ಥ ಮಾಡಿಕೊಳ್ಳಬಹುದು. ನಾವು ಒಂದು ಹವಿಸ್ಸನ್ನು ಅಗ್ನಿಯಲ್ಲಿಭಗವಂತನಿಗೆ ಅರ್ಪಣೆ ಮಾಡುತ್ತೇವೆ- ಇದು ಅರ್ಪಣೆ. ಒಬ್ಬ ಹಸಿದವನಿಗೆ ಅನ್ನ ನೀಡುತ್ತೇವೆ-ಇದು ಅರ್ಪಣೆ. ಒಬ್ಬ ಯೋಗ್ಯವರನಿಗೆ ಕನ್ಯಾದಾನ ಮಾಡುತ್ತೇವೆ-ಇದು ಅರ್ಪಣೆ. ಒಬ್ಬ ಹಣದ ಸಮಸ್ಯಯಲ್ಲಿದ್ದಾಗ ಆತನಿಗೆ ಸಹಾಯ ಮಾಡುತ್ತೇವೆ-ಇದುಅರ್ಪಣೆ. ಇಲ್ಲಿ ಕೊಡುವವನೂ ಆ ಭಗವಂತ, ತೆಗೆದುಕೊಳ್ಳುವವನ ಒಳಗಿದ್ದು ಸ್ವೀಕರಿಸುವವನೂ ಅವನೇ. ಎಲ್ಲವೂಭಗವಂತನ ಇಚ್ಛೆಯಂತೆ ನಡೆಯುತ್ತದೆ. ಹವಿಸ್ಸು ಅಂದರೆ ಕೊಡುವ ವಸ್ತು. ಅರ್ಪಣ-ಕೊಡುವ  ಕ್ರಿಯೆ. ಯಾವ ವಸ್ತು ಕೂಡಾಹವಿಸ್ಸಾಗಬಹುದು. ದಾನದ ದ್ರವ್ಯ-ಹವಿಸ್ಸು, ಯಜ್ಞದಲ್ಲಿ ಅಗ್ನಿ ಮುಖೇನ ಅರ್ಪಿಸುವ ದ್ರವ್ಯ-ಹವಿಸ್ಸು. ನಾವು ಹುಟ್ಟುವಾಗಏನನ್ನೂ ತೆಗೆದುಕೊಂಡು ಬಂದಿಲ್ಲ, ಎಲ್ಲವನ್ನೂ ಈ ಪ್ರಕೃತಿಯಿಂದ ಪಡೆದಿರುವುದು ಅಂದಮೇಲೆ,  ನಾವು ಕೊಡುವ ಹವಿಸ್ಸುಕೂಡಾ ಆ ಭಗವಂತನ ಅಧೀನ. ಇಲ್ಲಿ 'ನನ್ನದು' ಎನ್ನುವುದು ಹಾಸ್ಯಾಸ್ಪದ.

ಅಗ್ನಿ   ಮುಖೇನ  ನಾವು ದ್ರವ್ಯವನ್ನು ಅರ್ಪಿಸುತ್ತೇವೆ. ಇಲ್ಲಿ ಅಗ್ನಿ ಎಂದರೆ ಬರಿಯ ಜಡವಾದ ಬೆಂಕಿ ಅಲ್ಲ. ಸಂಸ್ಕೃತದಲ್ಲಿ ಅಗ್ನಿಎಂದರೆ ಅಗ್ನಿಯ ಅಭಿಮಾನಿ ದೇವತೆ, ಅದು  ಚೇತನ. ಈ ಕಾರಣಕ್ಕಾಗಿ ಅಗ್ನಿಯನ್ನು ಸಾಕ್ಷಿಯಾಗಿ ಬಳಸುತ್ತಾರೆ (ಉದಾ: ಅಗ್ನಿಸಾಕ್ಷಿಯಾಗಿ ಮದುವೆಯಾಗುವುದು). ಜಡವನ್ನು ಎಂದೂ ಸಾಕ್ಷಿಯಾಗಿ ಬಳಸಲು ಬರುವುದಿಲ್ಲ. ಈ ಅಗ್ನಿದೇವತೆಯ ಒಳಗೆತಾರಕ  ಶಕ್ತಿಯಾಗಿ ಆ ಭಗವಂತನಿದ್ದಾನೆ.  ಇಲ್ಲಿ ಕೊಡುವುದು, ಕೊಡತಕ್ಕದ್ದು, ಕೊಡುವ ಕ್ರಿಯೆ, ಕೊಟ್ಟಿದ್ದು ಎಲ್ಲಿಯೋ-ಎಲ್ಲವೂ ಭಗವಂತನ ಅಧೀನ. ಎಲ್ಲಾ ಕ್ರಿಯೆಯಲ್ಲಿ  ಭಗವಂತನ ಸನ್ನಿಧಾನವಿದೆ. ಕೊಡತಕ್ಕ ವಸ್ತುವಿನಲ್ಲಿ ಆತನಸನ್ನಿಧಾನವಿರುವುದರಿಂದ ಅದು ಉಪಯುಕ್ತವಾಗಿರುತ್ತದೆ. ಜ್ಞಾನರೂಪನಾದ ಭಗವಂತ ಅಗ್ನಿಯಲ್ಲಿ ಸನ್ನಿಹಿತನಾಗಿ ಭಕ್ತಿರೂಪದ ಆಹುತಿಯನ್ನು ಸ್ವೀಕರಿಸುತ್ತಾನೆ. ಈ ಅನುಸಂಧಾನದಿಂದ ನಮ್ಮ ಕ್ರಿಯೆ ನಡೆದರೆ ನಾವು ಭಗವಂತನ ಆರಾದನೆಮಾಡಿದಾಗ  "ಬ್ರಹ್ಮೈವ ತೇನ ಗಂತವ್ಯಂ"-ಹೋಗಿ ಸೇರುವುದೂ ಭಗವಂತನನ್ನೇ. ಏಕೆಂದರೆ "ಬ್ರಹ್ಮಕರ್ಮಸಮಾಧಿನಾ" -ಎಲ್ಲವೂ ಸರ್ವಸಮರ್ಥನಾದ ಭಗವಂತನ ಅಧೀನ.

ಇಲ್ಲಿ ಬ್ರಹ್ಮಾರ್ಪಣ ಎಂದರೆ ಎಲ್ಲಾ ಕ್ರಿಯೆಯೂ ಭಗವಂತನಿಗೆ ಎಂದರ್ಥ. ಪ್ರಪಂಚದಲ್ಲಿರುವ ಎಲ್ಲಾ ವಸ್ತುವನ್ನು  ಸೃಷ್ಟಿಸಿದ್ದು ಆಭಗವಂತ. ಪ್ರಕೃತಿಯಲ್ಲಿ ಸೃಷ್ಟಿಯಾಗಿರುವುದನ್ನು ನಾವು ಉಪಯೋಗಿಸುತ್ತೇವೆ ಅಷ್ಟೆ. ಅಗ್ನಿ ಭಗವಂತನ ಅಧೀನವಾಗಿಕಾರ್ಯ ನಿರ್ವಹಿಸುತ್ತಾನೆ. 'ನಾವು ಮಾಡುವ ಕ್ರಿಯೆ ಆ ಭಗವಂತನ ಪ್ರೇರಣೆ. ನಾವು ಮಾಡುವ ಎಲ್ಲಾ ಕರ್ಮವೂಬ್ರಹ್ಮಕರ್ಮ. ಅದು ಭಗವಂತನ  ಪೂಜಾರೂಪವಾದ ಕರ್ಮ'- ಇದು ಕರ್ಮದ ಬಗ್ಗೆ ನಮಗಿರಬೇಕಾದ ಜ್ಞಾನ. ನಾವುಮಾಡುವ ಕರ್ಮದಲ್ಲಿ ನಮ್ಮ ಸ್ವಾರ್ಥ ಇರಕೂಡದು. ಅದು ಭಗವಂತನ ಪೂಜಾ ರೂಪವಾಗಿರಬೇಕು. ಯಜ್ಞ ಎಂದರೆ ಅಗ್ನಿಮುಖೇನ ಮಾಡುವ ಕ್ರಿಯೆ ಮಾತ್ರ ಅಲ್ಲ. ನಮ್ಮ ಬದುಕನ್ನು ಭಗವನ್ಮಯ ಮಾಡಿಕೊಂಡಾಗ ನಮ್ಮ ಜೀವನದ ಎಲ್ಲಾನಡೆಯೂ ಯಜ್ಞವಾಗಿಬಿಡುತ್ತದೆ. ನಮ್ಮ ಬದುಕು ಭಗವಂತನ ಚಿಂತನೆಗೆ ಮೀಸಲಾದಾಗ ನಮ್ಮ ಬದುಕೇ ಒಂದುಮಹಾಯಜ್ಞ. ಭಗವಂತನ ಚಿಂತನೆ ಇಲ್ಲದೆ ಸ್ವಾರ್ಥದಿಂದ  ಮಾಡುವ ಅಗ್ನಿಮುಖೇನವಾದ  ಯಜ್ಞ ಕೇವಲ ವ್ಯಾಪಾರ.  ಪೌರೋಹಿತ್ಯ ಕೂಡಾ ಹೀಗೆ.  ತಿಳಿದು ಮಾಡಿದಾಗ ಮಾತ್ರ ಅದು ನಿಜವಾದ ಪೌರೋಹಿತ್ಯ, ಇಲ್ಲದಿದ್ದರೆ ಅದು ಕೇವಲದುಡ್ಡಿಗಾಗಿ ಮಾಡುವ ದಂದೆ.

ಈ ತನಕ  ಕೃಷ್ಣ ಕರ್ಮದ ಪ್ರಭೇದದ ಬಗ್ಗೆ ಹೇಳಿದ. ದೇವರ ಪೂಜಾರೂಪವಾಗಿ ಮಾಡುವ ಪ್ರತಿಯೊಂದು ಕಾರ್ಯ ಕೂಡಾಯಜ್ಞ ಎನ್ನುವ ವಿಚಾರ ವಿಶ್ಲೇಷಣೆ ಮಾಡಿದ. ಮುಂದೆ ಯಜ್ಞದ ಬಗ್ಗೆ ವ್ಯಾಪಕವಾದ ಅರ್ಥವನ್ನು ಕೃಷ್ಣ ವಿವರಿಸುತ್ತಾನೆ. ಹಿಂದೆಹೇಳಿದಂತೆ ಅಗ್ನಿ ಮುಖದಲ್ಲಿ ಮಾಡುವ ಪೂಜೆ  ಮಾತ್ರ ಯಜ್ಞವಲ್ಲ. ಕೊಡುವಿಕೆ, ಪೂಜೆಯಂತಹ ಒಳ್ಳೆಯ ಕಾರ್ಯಕ್ಕೆ ಒಂದುಕಡೆ ಸೇರುವಿಕೆ(ಸಂಗತೀಕರಣ), ಜ್ಞಾನದಾನ, ಅನ್ನದಾನ, ನಮ್ಮಲ್ಲಿ ಹೆಚ್ಚಿಗೆ ಇರುವುದನ್ನು ಇಲ್ಲದವರಿಗೆ ಹಂಚಿಬದುಕುವುದು, ಎಲ್ಲವೂ ಒಂದು ಯಜ್ಞವೇ.     ಮುಂದಿನ ಶ್ಲೋಕಗಳಲ್ಲಿ ಯಜ್ಞದ ವಿಶ್ವತೋಮುಖ ಚಿತ್ರವನ್ನು ಕೃಷ್ಣ ನಮಗೆನೀಡುತ್ತಾನೆ.

ಸಾಮಾನ್ಯವಾಗಿ ಯಜ್ಞದಲ್ಲಿ ಎರಡು ವಿಧ. ಒಂದು ಅಂತರಂಗ ಯಜ್ಞ ಇನ್ನೊಂದು ಬಾಹ್ಯಯಜ್ಞ. ಅಂತರಂಗದಲ್ಲಿ  ಭಗವಂತನನಿರಂತರ ಪೂಜೆ(ದೇವಪೂಜಾ); ಚಿತ್ತ-ಮನಸ್ಸು ಭಗವಂತನ ಜೊತೆಗೆ ಸೇರುವುದು(ಸಂಗತೀಕರಣ) ಮತ್ತು ನಮ್ಮನ್ನು ನಾವುಭಗವಂತನಿಗೆ ಅರ್ಪಿಸಿಕೊಳ್ಳುವುದು-ಇದು ಪರಿಪೂರ್ಣವಾದ ಮಾನಸ ಯಜ್ಞ. ಇನ್ನೊಂದು ರೀತಿಯಲ್ಲಿ ಯಜ್ಞದಲ್ಲಿ ಎರಡುಬಗೆ: ಜ್ಞಾನಪ್ರದವಾದ ಯಜ್ಞ ಹಾಗು ಕರ್ಮಪ್ರದವಾದ ಯಜ್ಞ. ಈ ಎಲ್ಲಾ ವಿವರಣೆಯನ್ನು ಮುಂದಿನ ಶ್ಲೋಕಗಳಲ್ಲಿ ಕೃಷ್ಣವಿವರಿಸಿದ್ದಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏


( फलसहित पृथक-पृथक यज्ञों का कथन ) ब्रह्मार्पणं ब्रह्म हविर्ब्रह्माग्रौ ब्रह्मणा हुतम्‌।
ब्रह्मैव तेन गन्तव्यं ब्रह्मकर्मसमाधिना॥

जिस यज्ञ में अर्पण अर्थात स्रुवा आदि भी ब्रह्म है और हवन किए जाने योग्य द्रव्य भी ब्रह्म है तथा ब्रह्मरूप कर्ता द्वारा ब्रह्मरूप अग्नि में आहुति देना रूप क्रिया भी ब्रह्म है- उस ब्रह्मकर्म में स्थित रहने वाले योगी द्वारा प्राप्त किए जाने योग्य फल भी ब्रह्म ही हैं
॥24॥

Brahmaarpanam brahmahavirbrahmaagnau brahmanaa hutam;
Brahmaiva tena gantavyam brahmakarmasamaadhinaa.

Brahman is the oblation;
Brahman is the melted butter (ghee);
by Brahman is theoblation poured into the fire of Brahman;
Brahman verily shall be reached by him who always seesBrahman in action.COMMENTARY: This is wisdom-sacrifice, wherein the idea of Brahman is substitutedfor the ideas of the instrument and other accessories of action, the idea of action itself and its results.By having such an idea the whole action melts away.

No comments:

Post a Comment