ದೈವಮೇವಾಪರೇ ಯಜ್ಞಂ ಯೋಗಿನಃ ಪರ್ಯುಪಾಸತೇ ।ಬ್ರಹ್ಮಾಗ್ನಾವಪರೇ ಯಜ್ಞಂ ಯಜ್ಞೇನೈವೋಪಜುಹ್ವತಿ ॥೨೫॥
ದೈವಮ್ ಏವ ಅಪರೇ ಯಜ್ಞಮ್ ಯೋಗಿನಃ ಪರ್ಯುಪಾಸತೇ |
ಬ್ರಹ್ಮ ಅಗ್ನೌ ಅಪರೇ ಯಜ್ಞಮ್ ಯಜ್ಞೇನ ಏವ ಉಪಜುಹ್ವತಿ-
ಕೆಲವು ಸಾಧಕರು ಭಗವದುಪಾಸನೆಯೆಂಬ ಮಾನಸಯಜ್ಞವನ್ನು ಆಚರಿಸುತ್ತಾರೆ.[ಭಗವಂತನನ್ನೇ ಯಜ್ಞ ರೂಪನೆಂದು ಪೂಜಿಸುತ್ತಾರೆ.] ಕೆಲವರು ಬೆಂಕಿಯ ರೂಪದಭಗವಂತನಲ್ಲಿ ಹೋಮಿಸುವ ಮೂಲಕ ಬಾಹ್ಯ ಯಜ್ಞದಿಂದ ಯಜ್ಞ ನಾಮಕ ಭಗವಂತನನ್ನು ಪೂಜಿಸುತ್ತಾರೆ.[ಯಜ್ಞನಾಮಕಭಗವಂತನಿಂದಲೆ ಬಾಹ್ಯ ಯಜ್ಞವನ್ನು ಆಚರಿಸುತ್ತಾರೆ].
ಭಗವಂತನ ಉಪಾಸನೆಯ ಮಾರ್ಗದಲ್ಲಿ ಸಾಗುವ ಕೆಲವು ಯೋಗಿಗಳು(ಸಾಧಕರು) ದೈವವನ್ನೇ ಯಜ್ಞವಾಗಿ ಉಪಾಸನೆಮಾಡುತ್ತಾರೆ. ಅಂದರೆ ನಿರಂತರ ಅಂತರಂಗದಲ್ಲಿ ಭಗವಂತನ ಉಪಾಸನೆಯೇ ಅವರ ಯಜ್ಞ. ಇದಕ್ಕೆ ಯಾವ ಬಾಹ್ಯ ಪರಿಕರಬೇಡ. ಇದು ಧ್ಯಾನ ರೂಪ ಯಜ್ಞ. ಈ ರೀತಿ ಬಾಹ್ಯ ಪರಿಕರಗಳಿಲ್ಲದೆ ಮಾಡುವ ಯಜ್ಞ ಅತ್ಯಂತ ಶ್ರೇಷ್ಠ ಯಜ್ಞ. ಇದು ಸಾಮಾನ್ಯವಾಗಿ ಅತ್ಯಂತ ಎತ್ತರಕ್ಕೇರಿದ ಸಾಧಕರು ಮಾಡಬಲ್ಲ ಯಜ್ಞ. ಎಲ್ಲಾ ಬಾಹ್ಯ ಪರಿಕರಗಳನ್ನು ಬಿಟ್ಟು ಮಾನಸಪರಿಗ್ರಹದಿಂದ ಮಾಡತಕ್ಕ ಜ್ಞಾನಪ್ರಧಾನವಾದ ಯಜ್ಞವಿದು.
ಇನ್ನೊಂದು ಪ್ರಕಾರದ ಯಜ್ಞ ಅಗ್ನಿ ಮುಖದಲ್ಲಿ ಮಾಡತಕ್ಕ ಕರ್ಮ ಪ್ರಧಾನವಾದ ಯಜ್ಞ. ಇದನ್ನು ಸಾಮಾನ್ಯ ಮಾನವರುಅನುಸರಿಸುತ್ತಾರೆ. ಭಗವಂತನ ಸನ್ನಿಧಾನವಿರುವ ಅಗ್ನಿಯ ಮುಖದಲ್ಲಿ ಭಗವಂತನಿಗೆ ಅರ್ಪಣೆ ಮಾಡುವ ಆರಾಧನೆ. ಇದುಬಾಹ್ಯ ಯಜ್ಞ. ಇದು ಬಹಳ ಮುಖ್ಯವಾದದ್ದು. ವೇದದಲ್ಲಿ ಭಗವಂತನ ಆರಾದನೆಗೆ ಅತ್ಯಂತ ಮುಖ್ಯವಾದ ಪ್ರತೀಕ ಅಗ್ನಿಎನ್ನುತ್ತಾರೆ. ಅಗ್ನಿ ಎಂದೂ ಅಪವಿತ್ರವಲ್ಲ. ಅಗ್ನಿ ಸ್ಪರ್ಶದಿಂದ ಅಪವಿತ್ರ ಕೂಡಾ ಪವಿತ್ರವಾಗುತ್ತದೆ. ನಮಗೆ ಭಗವಂತನಿಗೆಏನನ್ನಾದರೂ ತಿನ್ನಿಸಬೇಕು ಎನ್ನುವ ಅಭಿಲಾಷೆ ಇದ್ದರೆ ಅದನ್ನು ಕೇವಲ ಅಗ್ನಿ ಮುಖೇನ ಮಾಡಬಹುದು. ನಮ್ಮ ಕಣ್ಣಮುಂದೆ ಇರುವ ಎಲ್ಲಾ ಪ್ರತೀಕಗಳಲ್ಲಿ ಅಗ್ನಿ ಅತ್ಯಂತ ಶ್ರೇಷ್ಠ ಎನ್ನುವುದು ವೇದ ಕಾಲದ ಋಷಿಗಳ ತೀರ್ಮಾನ. ಸುಡುವಅಗ್ನಿಯಲ್ಲಿ ಅಗ್ನಿದೇವ, ಅವನೊಳಗೆ ಪ್ರಾಣ, ಪ್ರಾಣನೊಳಗೆ ಭಗವಂತ. ಈ ಅನುಸಂಧಾನದಲ್ಲಿ ಯಜ್ಞ. ಯಜ್ಞ ನಾಮಕಭಗವಂತನನ್ನು, ಯಜ್ಞದಿಂದ, ಜ್ಞಾನ ಭಕ್ತಿ ವೈರಾಗ್ಯದಿಂದ ಕೂಡಿದ ಉತ್ಕೃಷ್ಟವಾದ ಆಹ್ವಾನದಿಂದ ಆರಾದನೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
दैवमेवापरे यज्ञं योगिनः पर्युपासते।
ब्रह्माग्नावपरे यज्ञं यज्ञेनैवोपजुह्वति॥
दूसरे योगीजन देवताओं के पूजनरूप यज्ञ का ही भलीभाँति अनुष्ठान किया करते हैं और अन्य योगीजन परब्रह्म परमात्मारूप अग्नि में अभेद दर्शनरूप यज्ञ द्वारा ही आत्मरूप यज्ञ का हवन किया करते हैं। (परब्रह्म परमात्मा में ज्ञान द्वारा एकीभाव से स्थित होना ही ब्रह्मरूप अग्नि में यज्ञ द्वारा यज्ञ को हवन करना है।)
॥25॥
Daivam evaapare yajnam yoginah paryupaasate;
Brahmaagnaavapare yajnam yajnenaivopajuhwati.
Some Yogis perform sacrifice to the gods alone, while others (who have realised theSelf) offer the Self as sacrifice by the Self in the fire of Brahman alone.

No comments:
Post a Comment