ಶ್ರೋತ್ರಾದೀನೀಂದ್ರಿಯಾಣ್ಯನ್ಯೇ ಸಂಯಮಾಗ್ನಿಷು ಜುಹ್ವತಿ ।ಶಬ್ದಾದೀನ್ ವಿಷಯಾನನ್ಯ ಇಂದ್ರಿಯಾಗ್ನಿಷು ಜುಹ್ವತಿ ॥೨೬॥
ಶ್ರೋತ್ರಾ ಆದೀನಿ ಇಂದ್ರಿಯಾಣಿ ಅನ್ಯೇ ಸಂಯಮ ಅಗ್ನಿಷು ಜುಹ್ವತಿ |
ಶಬ್ದ ಆದೀನ್ ವಿಷಯಾನ್ ಅನ್ಯ ಇಂದ್ರಿಯ ಅಗ್ನಿಷು ಜುಹ್ವತಿ-
ಕೆಲವರು ಕಿವಿ ಮೊದಲಾದ ಇಂದ್ರಿಯಗಳನ್ನು ಅಂಕೆಯಬೆಂಕಿಯಲ್ಲಿ ಹೋಮಿಸುತ್ತಾರೆ. ಕೆಲವರು ಶಬ್ದ ಮೊದಲಾದ ವಿಷಯಗಳನ್ನು ಇಂದ್ರಿಯಗಳ ಬೆಂಕಿಯಲ್ಲಿ ಹೋಮಿಸುತ್ತಾರೆ.
ಒಬ್ಬ ಸಾಧಕನಲ್ಲಿರಬೇಕಾದ ವಿಶಿಷ್ಟ ಸಾಧನೆ ಕೂಡಾ ಒಂದು ಯಜ್ಞ.ಇಂದ್ರಿಯವೆಂಬ ಹವಿಸ್ಸನ್ನು 'ನಿಗ್ರಹ' ಎನ್ನುವ ಬೆಂಕಿಯಲ್ಲಿಆಹುತಿಗೊಳಿಸುವುದು ಒಂದು ಯಜ್ಞ. ಕೆಟ್ಟದ್ದನ್ನು ಕೇಳುವುದಿಲ್ಲ,ಕೆಟ್ಟದ್ದನ್ನು ಆಡುವುದಿಲ್ಲ. ಕೆಟ್ಟದ್ದನ್ನು ನೋಡುವುದಿಲ್ಲ, ಹೀಗೆಇಂದ್ರಿಯ ಸಂಯಮದಿಂದ ಇಂದ್ರಿಯ ಚಾಪಲವನ್ನು ಹೋಮಿಸು. ಇದು ಇಂದ್ರಿಯ ಚಾಪಲವನ್ನು ಗೆಲ್ಲುವ ಪ್ರಕ್ರಿಯೆ. ಸಂಯಮ ಎನ್ನುವ ಅಗ್ನಿಯಲ್ಲಿ ಇಂದ್ರಿಯ ಚಾಪಲವೆಂಬ ಹವಿಸ್ಸನ್ನು ಹೋಮಿಸಿ, ಭಗವಂತನನ್ನು ಆರಾದಿಸುವುದು. ಭಗವಂತ ಪ್ರಸನ್ನನಾಗಲಿ, ಅದರ ಮೂಲಕ ನನ್ನನ್ನು ಸಾಧನೆಯ ದಾರಿಯಲ್ಲಿ ಮುನ್ನೆಡೆಸಲಿ ಎನ್ನುವ ಅನುಸಂಧಾನದಲ್ಲಿಮಾಡುವ ಯಜ್ಞವಿದು.
ಇನ್ನು ಒಳ್ಳೆಯ ಸಂಗತಿಗಳನ್ನು ಇಂದ್ರಿಯಗಳಲ್ಲಿ ಹೋಮಿಸುವುದೂ ಒಂದು ಯಜ್ಞ. ಕಿವಿ ಎನ್ನುವ ಅಗ್ನಿ ಕುಂಡದಲ್ಲಿಭಗವಂತನ ಗುಣಗಾನವೆಂಬ ಹವಿಸ್ಸನ್ನು ಹಾಕುವುದು, ಕಣ್ಣು ಎನ್ನುವ ಅಗ್ನಿ ಕುಂಡದಲ್ಲಿ ಭಗವಂತನ ಪ್ರತೀಕ ಎನ್ನುವಹವಿಸ್ಸನ್ನು ಹಾಕುವುದು, ಮೂಗು ಎನ್ನುವ ಅಗ್ನಿ ಕುಂಡದಲ್ಲಿ ಭಗವಂತನಿಗೆ ಅರ್ಪಿತವಾದ ತುಳಸಿ, ಗಂಧ ರೂಪದ ಹವಿಸ್ಸನ್ನುಹಾಕುವುದು. ಹೀಗೆ ಇಂದ್ರಿಯ ವಿಷಯಗಳನ್ನು ಸ್ವೀಕರಿಸುವುದೂ ಒಂದು ಯಜ್ಞವಾಗುತ್ತದೆ. ಇಂದ್ರಿಯ ನಿಗ್ರಹದಂತೆಇಂದ್ರಿಯ ಗ್ರಹಣ ಕೂಡಾ ಒಂದು ಯಜ್ಞ. ಭಗವಂತನ ಚಿಂತನೆಗೆ ಪೂರಕವಾದ ವಿಷಯವನ್ನು ಗ್ರಹಣ ಮಾಡು ಮತ್ತು ಅಲ್ಲದವಿಷಯವನ್ನು ತ್ಯಾಗ ಮಾಡು-ಇದು ಸಾಧನೆಯ ಹಾದಿಯಲ್ಲಿ ಪ್ರಮುಖ ಹೆಜ್ಜೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
श्रोत्रादीनीन्द्रियाण्यन्ये संयमाग्निषु जुह्वति।
शब्दादीन्विषयानन्य इन्द्रियाग्निषु जुह्वति॥
अन्य योगीजन श्रोत्र आदि समस्त इन्द्रियों को संयम रूप अग्नियों में हवन किया करते हैं और दूसरे योगी लोग शब्दादि समस्त विषयों को इन्द्रिय रूप अग्नियों में हवन किया करते हैं
॥26॥
Shrotraadeeneendriyaanyanye samyamaagnishu juhwati;
Shabdaadeen vishayaananya indriyaagnishu juhwati.
Some again offer hearing and other senses as sacrifice in the fire of restraint;
others offersound and various objects of the senses as sacrifice in the fire of the senses.

No comments:
Post a Comment