Thursday, 6 September 2018

ಅಧ್ಯಾಯ - 04 : ಶ್ಲೋಕ – 29

ಅಪಾನೇ ಜುಹ್ವತಿ ಪ್ರಾಣಂ ಪ್ರಾಣೇSಪಾನಂ ತಥಾSಪರೇ  ।ಪ್ರಾಣಾಪಾನಗತೀ ರುದ್ಧ್ವಾ ಪ್ರಾಣಾಯಾಮಪರಾಯಣಾಃ  ॥೨೯॥

ಅಪಾನೇ ಜುಹ್ವತಿ ಪ್ರಾಣಮ್  ಪ್ರಾಣೇ ಅಪಾನಮ್  ತಥಾ ಅಪರೇ  ।
ಪ್ರಾಣ ಅಪಾನ ಗತೀ ರುದ್ಧ್ವಾ ಪ್ರಾಣಾಯಾಮ ಪರಾಯಣಾಃ  -

ಮತ್ತೆ ಕೆಲವರು ಪ್ರಾಣಾಯಾಮದ ಸಾಧಕರು. ಪ್ರಾಣಾಪಾನಗಳ ನಡೆಯನ್ನು ತಡೆಹಿಡಿದು ಅಪಾನದಲ್ಲಿ ಪ್ರಾಣವನ್ನು ಹೋಮಿಸುತ್ತಾರೆ. ಪ್ರಾಣದಲ್ಲಿ ಅಪಾನವನ್ನು.

ಯೋಗದಲ್ಲಿ   ವಿಶಿಷ್ಟವಾದ ಸಾಧನೆ ಪ್ರಾಣಯಾಮ. ಕೆಲವರಿಗೆ ಪ್ರಾಣಾಯಾಮವೇ ಬದುಕಿನಲ್ಲಿ ಒಂದು ಸಾಧನೆ. ಪ್ರಾಣಾಪಾನಗಳನ್ನು ಭಗವಂತನಲ್ಲಿ ಯಜ್ಞ ರೂಪವಾಗಿ ಅರ್ಪಿಸಿ,ಪ್ರಾಣಾಯಾಮದಿಂದ ಭಗಂತನ ಉಪಾಸನೆ-ಅಪಾನದಲ್ಲಿಪ್ರಾಣವನ್ನು ಹೋಮಿಸುವುದು. ಇದು ಕುಂಭಕಕ್ಕೆ  ಸಂಬಂಧಪಟ್ಟಿದ್ದು. ದೇಹದ ಒಳಗಿನಿಂದ  ಶ್ವಾಸವನ್ನುಹೊರಬಿಡುವುದು 'ರೇಚಕ';ಆಮ್ಲಜನಕಯುಕ್ತ ಶುದ್ಧ ಗಾಳಿಯನ್ನು ಒಳಗೆ ತೆಗೆದುಕೊಳ್ಳುವುದು 'ಪೂರಕ'. ನಮ್ಮ ಹೃದಯಕಲಶದಲ್ಲಿ ಪ್ರಾಣಶಕ್ತಿಯನ್ನು ಹಿಡಿದಿಡುವುದು-‘ಕುಂಭಕ’. ಇದು ಬಹಳ ಪರಿಣಾಮಕಾರಿ. ಇದರಿಂದಏಕಾಗ್ರತೆ, ಆರೋಗ್ಯ, ಆಯಸ್ಸು ಹೆಚ್ಚುತ್ತದೆ. ಸಾಮಾನ್ಯವಾಗಿ ಒಬ್ಬ ಮನುಷ್ಯನ ಆಯಸ್ಸು ಆತನ ಉಸಿರಾಟದ ಮೇಲೆನಿರ್ಧಾರವಾಗಿರುತ್ತದೆ. ಸಹಜ ಉಸಿರಾಟ ಎಂದರೆ ನಾಲ್ಕು ಸೆಕೆಂಡಿಗೆ ಒಂದು  ಉಸಿರಾಟ(ರೇಚಕ ಮತ್ತು ಪೂರಕ). ಒಬ್ಬಮನುಷ್ಯ ನೂರು ವರ್ಷ ಬದುಕುತ್ತಾನೆ ಎಂದರೆ ಆತನ ಆಯಸ್ಸು '೭೭ ಕೋಟಿ, ೭೬ ಲಕ್ಷ ಉಸಿರು'. ಒಂದು ವೇಳೆ ನಾಲ್ಕುಸೆಕೆಂಡಿಗೆ ಬದಲಾಗಿ ೮ ಸೆಕೆಂಡಿಗೊಮ್ಮೆ ಉಸಿರಾಟ ಮಾಡಿದರೆ ಆತ ೨೦೦ ವರ್ಷ ಬದುಕಬಹುದು. ಇದನ್ನು ಹಿಂದೆ ಕೆಲವುಸಾಧಕರು ಪ್ರಾಣಾಯಾಮದಿಂದ ಸಾಧಿಸುತ್ತಿದ್ದರು. ಇಂದೂ ಕೂಡಾ ಹಿಮಾಲಯದಲ್ಲಿ ನೂರಾರು ವರ್ಷ ವಯಸ್ಸಾಗಿರುವಆರೋಗ್ಯಪೂರ್ಣ ಸಾಧಕರಿದ್ದಾರೆ ಎಂದು  ಪರಮಹಂಸ ಯೋಗನಂದರು(Autobiography of Yogi) ಮತ್ತುಸ್ವಾಮಿರಾಮ್(Living with Himalayan Masters) ತಮ್ಮ  ಸ್ವಂತ ಅನುಭವದಿಂದ ಹೇಳಿದ್ದಾರೆ.

ಪ್ರಾಣಾಯಾಮದಿಂದ ಪ್ರಾಣಶಕ್ತಿ ವೃದ್ಧಿಗೊಳ್ಳುತ್ತದೆ. ಇದರಿಂದ ಇನ್ನೊಬ್ಬರ ರೋಗವನ್ನು  ಕೂಡಾ ಗುಣಪಡಿಸಬಹುದು. ಇದನ್ನು ಸ್ಪರ್ಶ ಅಥವಾ   Touch Heal ಎನ್ನುತ್ತಾರೆ. ಕೇವಲ ಹಸ್ತ ಸ್ಪರ್ಶದಿಂದ ಭಯ, ರೋಗ, ದುಃಖ, ಹುಚ್ಚು, ಕುರುಡುತನಎಲ್ಲವನ್ನೂ ಗುಣ ಪಡಿಸಬಹುದು. ಈ ಕಾರಣಕ್ಕಾಗಿ ಒಬ್ಬರು ಇನ್ನೊಬ್ಬರಿಗೆ ಆಶೀರ್ವಾದ ಮಾಡುವಾಗ ತಲೆ ಮೇಲೆ ಕೈ ಇಟ್ಟುಮಾಡುತ್ತಾರೆ. ಇದರಿಂದ ಪ್ರಾಣ ಶಕ್ತಿ ದೊಡ್ಡವರಿಂದ ಚಿಕ್ಕವರಿಗೆ ಹರಿಯುತ್ತದೆ.   ಹೀಗೆ ಪ್ರಣಾಯಾಮದಲ್ಲಿ ಅನೇಕ ಸಾಧನೆಸಾಧ್ಯ. ಮುಖ್ಯವಾಗಿ ಇದರಿಂದ ಮನಸ್ಸು ದೇವರಲ್ಲಿ ನೆಲೆಗೊಳ್ಳುತ್ತದೆ. ಕೃಷ್ಣ ಇದನ್ನು ಯಜ್ಞ ಎನ್ನುತ್ತಾನೆ.

ಮೇಲಿನಿಂದ ಕೆಳಕ್ಕೆ ಹರಿಯುವ ಶಕ್ತಿ ಅಪಾನ, ಊರ್ಧ್ವ ಮುಖವಾಗಿ ಮೂಲಾದಾರದಿಂದ ಸಹಸ್ರಾರದತ್ತ ಹರಿಯುವ ಶಕ್ತಿ ಪ್ರಾಣ. ಈ ಎರಡು ಶಕ್ತಿಗಳನ್ನು ಹೃದಯದಲ್ಲಿ ಸ್ಥಗಿತ ಮಾಡುವುದು ಕುಂಭಕ. ಪೂರ್ಣವಾಗಿ ಒಳಗಿನ ಗಾಳಿಯನ್ನು ತನ್ನ ಬಲ ಮೂಗಿನ ಹೊರಳೆಯಿಂದ ಹೊರ ಹಾಕಿ, ತನ್ನ ಎಡ ಮೂಗಿನ ಹೊರಳೆಯಿಂದ ಶುದ್ಧ ಗಾಳಿಯನ್ನು ಇನ್ನು ಒಳಗೆ ಹೋಗುವುದಿಲ್ಲ ಅನ್ನುವಷ್ಟು ಪ್ರಮಾಣದಲ್ಲಿ ತೆಗೆದುಕೊಂಡು,  ಪ್ರಾಣಶಕ್ತಿ  ಮೇಲಕ್ಕೆ ಹೋಗದಂತೆ, ಅಪಾನ ಕೆಳಗೆ ಹೋಗದಂತೆ ಶಕ್ತಿಯನ್ನು ಹೃದಯದಲ್ಲಿ ಸ್ಥಗಿತ ಗೊಳಿಸುವುದು- ಕುಂಭಕ.  ಇದು ಪ್ರಾಣಾಯಾಮ ಪರಾಯಣರು ಮಾಡುವ ಯಜ್ಞ. ಭಗವಂತ ಪ್ರಸನ್ನನಾಗಿ ನನಗೆ ಏಕಾಗ್ರತೆಯನ್ನು ಕೊಟ್ಟು, ನನ್ನ ಸಾಧನೆಯನ್ನು ಮುಂದುವರಿಸಲು ಸಹಕರಿಸಲಿ ಎನ್ನುವ ಅನುಸಂಧಾನದಿಂದ ಮಾಡುವ ಉಸಿರಾಟದ ಯಜ್ಞ. [ಗುರುವಿನ ಮಾರ್ಗದರ್ಶನವಿಲ್ಲದೆ ಪ್ರಾಣಾಯಾಮವನ್ನು ಪ್ರಯತ್ನಿಸಬಾರದು]

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अपाने जुह्वति प्राणं प्राणेऽपानं तथापरे।
प्राणापानगती रुद्ध्वा प्राणायामपरायणाः॥
अपरे नियताहाराः प्राणान्प्राणेषु जुह्वति।
सर्वेऽप्येते यज्ञविदो यज्ञक्षपितकल्मषाः॥

दूसरे कितने ही योगीजन अपान वायु में प्राणवायु को हवन करते हैं, वैसे ही अन्य योगीजन प्राणवायु में अपान वायु को हवन करते हैं तथा अन्य कितने ही नियमित आहार (गीता अध्याय 6 श्लोक 17 में देखना चाहिए।) करने वाले प्राणायाम परायण पुरुष प्राण और अपान की गति को रोककर प्राणों को प्राणों में ही हवन किया करते हैं। ये सभी साधक यज्ञों द्वारा पापों का नाश कर देने वाले और यज्ञों को जानने वाले हैं
॥29-30॥

Apaane juhwati praanam praane’paanam tathaa’pare;
Praanaapaana gatee ruddhwaa praanaayaamaparaayanaah.

Others offer as sacrifice the outgoing breath in the incoming, and the incoming in theoutgoing, restraining the courses of the outgoing and the incoming breaths, solely absorbed in therestraint of the breath.COMMENTARY: Some Yogis practise inhalation, some practise exhalation, and someretention of breath. This is Pranayama.

No comments:

Post a Comment