ಯಜ್ಞಶಿಷ್ಟಾಮೃತಭುಜೋ ಯಾಂತಿ ಬ್ರಹ್ಮ ಸನಾತನಮ್ ।ನಾಯಂ ಲೋಕೋSಸ್ತ್ಯಯಜ್ಞಸ್ಯ ಕುತೋSನ್ಯಃ ಕುರುಸತ್ತಮ ॥೩೧॥
ಯಜ್ಞ ಶಿಷ್ಟ ಅಮೃತ ಭುಜಃ ಯಾಂತಿ ಬ್ರಹ್ಮ ಸನಾತನಮ್ |
ನ ಅಯಮ್ ಲೋಕಃ ಅಸ್ತಿ ಅಯಜ್ಞಸ್ಯ ಕುತಃ ಅನ್ಯಃ ಕುರುಸತ್ತಮ -
ಯಜ್ಞದಲ್ಲಿ ಅರ್ಪಿಸಿ ಉಳಿದಅಮೃತವನ್ನುಣ್ಣುವವರು(ಯಜ್ಞ ಫಲದ ಅಮೃತ) ಶಾಶ್ವತವಾದ ಭಗವಂತನನ್ನು ಪಡೆಯುತ್ತಾರೆ. ಓಕುರುಶ್ರೇಷ್ಠ, ಯಜ್ಞವಿರದವನಿಗೆ ಈ ಲೋಕವೇ ಇಲ್ಲ. ಆ ಲೋಕದ ಮಾತೇನು?
ಯಜ್ಞದಲ್ಲಿ ಭಗವಂತನಿಗೆ ಅರ್ಪಿಸಿ ಉಳಿದಿದ್ದನ್ನು 'ಅಮೃತ' ಎನ್ನುತ್ತಾರೆ. ಅದು ನಮ್ಮನ್ನು ಸಾವಿನಿಂದಾಚೆಗೆಕೊಂಡೊಯ್ಯುತ್ತದೆ. ಜೀವನದ ಪ್ರತಿಯೊಂದು ನಡೆಯಲ್ಲಿ ಈ ರೀತಿಯ ಬದುಕನ್ನು ಬದುಕುತ್ತಿದ್ದರೆ ಕ್ರಮೇಣ ಎಂದೆಂದೂಬದಲಾಗದ, ಶಾಶ್ವತ ಮತ್ತು ಸನಾತನವಾದ ಭಗವಂತನನ್ನು ಹೋಗಿ ಸೇರುತ್ತೇವೆ.
ಇಲ್ಲಿ 'ಸನಾತನ' ಎನ್ನುವಲ್ಲಿ ಇನ್ನೊಂದು ಧ್ವನಿ ಇದೆ. ಕೇವಲ ಉಪವಾಸ ಪ್ರಾಣಾಯಾಮ ಮಾಡಿದಾಗ ಮೋಕ್ಷಸಿಗದು. ಸನಾತನ(ನಾತನ-ನಾದನ) ಅಂದರೆ ಶಬ್ದ. ಬ್ರಹ್ಮ ಸನಾತನ ಎಂದರೆ ಸರ್ವಶಬ್ದವಾಚ್ಯನಾದ, ವೇದವೇದ್ಯ ಭಗವಂತ. ಇಂತಹ ಭಗವಂತನನ್ನು ಶಾಸ್ತ್ರದ ಮುಖೇನ ತಿಳಿದುಮಾಡುವ ಯಜ್ಞದಿಂದ ಮೋಕ್ಷಸಾಧ್ಯ. ಇಲ್ಲದಿದ್ದರೆ ಏನೂ ಉಪಯೋಗವಿಲ್ಲ. ವೇದದಲ್ಲಿ ಹೇಳಿರುವ ಗುಣವನ್ನು ಬಲ್ಲವರಿಂದ ತಿಳಿದು ಉಪಾಸನೆಮಾಡುವವ, ವೇದವನ್ನು ಓದಿ ಅದರಿಂದ ತಿಳಿದವ, ತಿಳಿದು ಇನ್ನೊಬ್ಬರಿಗೆ ಹೇಳುವವ, ಹೀಗೆ ಎಲ್ಲರೂ ಸಾಧಕರೆನಿಸುತ್ತಾರೆ. ಯಜ್ಞದಲ್ಲಿ ಪ್ರಮುಖವಾಗಿ ಬೇಕಾಗಿರುವುದು ಜ್ಞಾನ, ಅನನ್ಯ ಭಕ್ತಿ ಮತ್ತು ಶರಣಾಗತಿ. "ಜೀವನದಲ್ಲಿ ಈಅನುಸಂಧಾನವಿಲ್ಲದವ, ಯಜ್ಞವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳದವ, ಇಹದಲ್ಲೂ ವ್ಯರ್ಥವಾಗಿ ಬದುಕುತ್ತಾನೆ-ಇನ್ನು ಪರದಮಾತೇನು" ಎನ್ನುತ್ತಾನೆ ಕೃಷ್ಣ.
ಇಲ್ಲಿ ಅರ್ಜುನನನ್ನು ಕೃಷ್ಣ 'ಕುರುಸತ್ತಮ' ಎಂದು ಸಂಬೋಧಿಸಿದ್ದಾನೆ. ಕುರುವಂಶದಲ್ಲಿ ಶ್ರೇಷ್ಠನಾದ ನೀನು ನಿಷ್ಕ್ರೀಯನಾಗದೆ ಕಾರ್ಯ ಪ್ರವೃತ್ತನಾಗು; ಯಜ್ಞದಲ್ಲಿ ತಮ್ಮನ್ನು ತೊಡಗಿಸಿಕೊಂಡುಬಂದ ವಂಶದಲ್ಲಿ ಹುಟ್ಟಿದ ಜ್ಞಾನಿಶ್ರೇಷ್ಠ, ಸಾತ್ವಿಕನಾದನೀನು- 'ಯುದ್ಧವನ್ನು ಯಜ್ಞವಾಗಿ ಮಾಡು' ಎನ್ನುವ ಧ್ವನಿ ಈ ಸಂಬೋಧನೆಯಲ್ಲಿದೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
यज्ञशिष्टामृतभुजो यान्ति ब्रह्म सनातनम्।
नायं लोकोऽस्त्ययज्ञस्य कुतोऽन्यः कुरुसत्तम॥
हे कुरुश्रेष्ठ अर्जुन! यज्ञ से बचे हुए अमृत का अनुभव करने वाले योगीजन सनातन परब्रह्म परमात्मा को प्राप्त होते हैं। और यज्ञ न करने वाले पुरुष के लिए तो यह मनुष्यलोक भी सुखदायक नहीं है, फिर परलोक कैसे सुखदायक हो सकता है?
॥31॥
Yajnashishtaamritabhujo yaanti brahma sanaatanam;
Naayam loko’styayajnasya kuto’nyah kurusattama.
Those who eat the remnants of the sacrifice, which are like nectar, go to the eternalBrahman. This world is not for the man who does not perform sacrifice;
how then can he have theother, O Arjuna?COMMENTARY: They go to the eternal Brahman after attaining knowledge of the Selfthrough purification of the mind by performing the above sacrifices. He who does not perform anyof these is not fit even for this miserable world. How then can he hope to get a better world than this?

No comments:
Post a Comment