Thursday, 6 September 2018

ಅಧ್ಯಾಯ - 04 : ಶ್ಲೋಕ – 34 ಶ್ಲೋಕ – 35

ತದ್ ವಿದ್ಧಿ ಪ್ರಣಿಪಾತೇನ ಪರಿಪ್ರಶ್ನೇನ ಸೇವಯಾ ।ಉಪದೇಕ್ಷ್ಯಂತಿ ತೇ ಜ್ಞಾನಂ ಜ್ಞಾನಿನಸ್ತತ್ತ್ವದರ್ಶಿನಃ ॥೩೪॥

ಅಧ್ಯಾಯ - 04 : ಶ್ಲೋಕ – 35

ಯಜ್ ಜ್ಞಾತ್ವಾ ನ ಪುನರ್ಮೋಹಮೇವಂ ಯಾಸ್ಯಸಿ ಪಾಂಡವ।ಯೇನ ಭೂತಾನ್ಯಶೇಷೇಣ ದ್ರಕ್ಷ್ಯಸ್ಯಾSತ್ಮನ್ಯಥೋ ಮಯಿ ॥೩೫॥

ತತ್  ವಿದ್ಧಿ ಪ್ರಣಿಪಾತೇನ ಪರಿಪ್ರಶ್ನೇನ ಸೇವಯಾ |
ಉಪದೇಕ್ಷ್ಯಂತಿ ತೇ ಜ್ಞಾನಮ್  ಜ್ಞಾನಿನಃ ತತ್ತ್ವದರ್ಶಿನಃ  ||
ಯತ್  ಜ್ಞಾತ್ವಾ ನ ಪುನಃ ಮೋಹಮ್ ಏವಮ್ ಯಾಸ್ಯಸಿ ಪಾಂಡವ |
ಯೇನ ಭೂತಾನಿ ಅಶೇಷೇಣ ದ್ರಕ್ಷ್ಯಸಿ ಆತ್ಮನಿ ಅಥ ಉ ಮಯಿ-   

 ಪಾಂಡವ, ಯಾವುದನ್ನು ತಿಳಿದಾಗ ನೀನು ಮತ್ತೆ ಹೀಗೆಮೋಹಗೊಳ್ಳುವುದಿಲ್ಲ; ಯಾವುದರಿಂದ ಮೋಹವಳಿದದ್ದರಿಂದ ಎಲ್ಲಾ ಜೀವಿಗಳನ್ನು ಅಂತರ್ಯಾಮಿಯಾದ [ಎಲ್ಲೆಲ್ಲೂಇರುವ] ನನ್ನಲ್ಲಿ ಕಾಣಬಲ್ಲೆ, ಅಂಥ ತಿಳಿವನ್ನು ನಿಜ ಕಂಡು  ತಿಳಿದವರು ನಿನಗೆ ತಿಳಿಹೇಳುತ್ತಾರೆ. ಕಾಲಿಗೆರಗಿ, ಪರಿಪರಿಯಿಂದಕೇಳಿ,ಸೇವೆಗೈದು ಅದನ್ನು ತಿಳಿದುಕೋ.

ಜ್ಞಾನವನ್ನು ಗಳಿಸಬೇಕಾದರೆ "ನೀನು ಜ್ಞಾನಿಗಳ ಬೆನ್ನುಹತ್ತಬೇಕು; ಸತ್ಯವನ್ನು ಸಾಕ್ಷಾತ್ಕಾರ ಮಾಡಿಕೊಂಡ ತತ್ವದರ್ಶಿಗಳಿಂದಜ್ಞಾನವನ್ನು ಪಡೆ ಎನ್ನುತ್ತಾನೆ ಕೃಷ್ಣ. ಜ್ಞಾನ ಎನ್ನುವುದು ಕೇವಲ ಪುಸ್ತಕವನ್ನು ಓದುವುದರಿಂದ ಬರುವುದಲ್ಲ. ಅದು ನಮಗೆಸಾಕ್ಷಾತ್ಕಾರವಾಗಬೇಕು. "Truth is an intuitional flash, it is  not Intellectual". ಸತ್ಯ  ಎನ್ನುವುದು ನಮಗೆಸ್ಪೂರಣವಾಗಬೇಕು. ಎಲ್ಲಾ ವೇದ ಮಂತ್ರಗಳೂ ಋಷಿಗಳಿಗೆ ಅಂತರಂಗದಲ್ಲಿ ಸ್ಪೂರಣವಾಗಿರುವುದು(intuitional composition). ನ್ಯೂಟನ್ ಗೆ ಗುರುತ್ವಾಕರ್ಷಣ ಶಕ್ತಿಯ ವಿಚಾರ ಹೊಳೆದಂತೆ. ಈ ಕಾರಣಕ್ಕಾಗಿ ಮೊದಲು ನಾವು ಸತ್ಯಕ್ಕೆಶರಣಾಗಬೇಕು; ಸತ್ಯವನ್ನು ಕಂಡ ತತ್ವಜ್ಞಾನಿಗಳ ಬೆನ್ನುಹತ್ತಬೇಕು.

ಸಾಮಾನ್ಯವಾಗಿ ಸತ್ಯವನ್ನು ಸಾಕ್ಷಾತ್ಕಾರ ಮಾಡಿಕೊಂಡ ಜ್ಞಾನಿಗಳು ಜ್ಞಾನವನ್ನು ಯೋಗ್ಯರಲ್ಲದವರಿಗೆಎಂದೂ ಬೋಧಿಸುವುದಿಲ್ಲ. ಈ ಕಾರಣಕ್ಕಾಗಿ ಕೃಷ್ಣ ಹೇಳುತ್ತಾನೆ: "ತತ್ವದರ್ಶಿಗಳನ್ನು ಕಂಡರೆ ಬಿಡಬೇಡ, ಅವರ ಬೆನ್ನುಹತ್ತು, ಅವರನ್ನು ಒಲಿಸಿಕೊ, ಅವರ ಮುಂದೆ ನೀನು ಯೋಗ್ಯ ಎಂದು ರುಜುವಾತು ಪಡಿಸು. ನಿನ್ನ ಅನನ್ಯ  ಬಯಕೆ ಅವರಿಗೆಮನವರಿಕೆಯಾಗುವಂತೆ ಮಾಡು,ಅವರಿಗೆ ಶರಣಾಗು"  ಎಂದು. ಇಲ್ಲಿ 'ಪ್ರಣಿಪಾತ' ಅಂದರೆ ಎಂಟು ಅಂಗಗಳ ನಮಸ್ಕಾರ. ತಲೆ, ಎದೆ, ಕೈ, ಕಾಲು ಎಲ್ಲವನ್ನು ನೆಲಕ್ಕೆ ತಾಗಿಸಿ, ಭಕ್ತಿಯ ದೃಷ್ಟಿಯಿಂದ, ಸ್ತೋತ್ರ(ವಚನ) ಮುಖೇನ,ಮನಸ್ಸಿನಲ್ಲಿ ಅಪಾರಗೌರವವಿಟ್ಟು ಮಾಡುವ ನಮಸ್ಕಾರ-'ಅಷ್ಟಾಂಗ ನಮನ'. ಹೀಗೆ ಶರಣಾಗಿ "ಕೆದಕಿ ಕೆದಕಿ, ಪರಿಪರಿಯಾಗಿ  ಕೇಳಿ ತಿಳಿದುಕು" ಎನ್ನುತ್ತಾನೆ ಕೃಷ್ಣ. 'ತತ್ವದರ್ಶಿಗಳ ಸೇವೆಮಾಡಿ ಅವರಿಂದ ಜ್ಞಾನವನ್ನು ಗಳಿಸು, ಅದರಿಂದ ಕರ್ಮ ಮಾಡು' ಎನ್ನುವುದು ಕೃಷ್ಣ  ಅರ್ಜುನನ ಮೂಲಕ ನಮಗೆ ಕೊಟ್ಟ ಸಂದೇಶ.

ಒಮ್ಮೆ ತತ್ವದರ್ಶಿಗಳಿಂದ ಜ್ಞಾನವನ್ನು ಪಡೆದರೆ ಮುಂದೆ ಮೋಹಕ್ಕೆ ಅವಕಾಶವಿಲ್ಲ. ಇಲ್ಲಿ ಅರ್ಜುನನನ್ನು ಕಾಡುತ್ತಿರುವುದುಜ್ಞಾನವನ್ನು ಮುಚ್ಚಿರುವ  ಮೋಹದ ಪರದೆ. ಅದಕ್ಕಾಗಿ ಕೃಷ್ಣ ಅರ್ಜುನನನ್ನು 'ಪಾಂಡವ' ಎಂದು ಸಂಬೋಧಿಸುತ್ತಾನೆ.  ಇಲ್ಲಿ 'ಪಂಡಾ' ಎಂದರೆ ಜ್ಞಾನ (ಉದಾ:ಪಂಡಾ ಉಳ್ಳವ ಪಂಡಿತ),  ಪಾಂಡವ ಎಂದರೆ ಜ್ಞಾನರಾಶಿಯನ್ನು ಪಡೆದವ. ಇನ್ನುಪಾಂಡು ಎಂದರೆ 'ಬಿಳಿ ಬಣ್ಣ' ಅದು ಸಾತ್ವಿಕತೆಯ ಸಂಕೇತ. 'ನೀನು ಸ್ವಯಂ ಜ್ಞಾನಿ ಹಾಗು ಸಾತ್ವಿಕ' ಎಂದು ಸೂಚಿಸಿ ಇಲ್ಲಿ  ಈಸಂಬೋಧನೆ.

ಒಮ್ಮೆ ಸತ್ಯದ ಅರಿವು ಬಂದರೆ ಅದರಿಂದ ಮೋಹದ ಪಾಶ ಕಳಚಿಹೋಗುತ್ತದೆ. ಅದು ಪುನಃ ಬರುವ ಸಂಭವವಿಲ್ಲ. ಈಸ್ಥಿತಿಯಲ್ಲಿ ಸಮಸ್ತ ಜೀವಜಾತವೂ ಆತ್ಮನಲ್ಲಿ (ಭಗವಂತನಲ್ಲಿ) ಆಶ್ರಿತವಾಗಿದೆ, ಎಲ್ಲವುದಕ್ಕೂ ನಿಯಾಮಕ ಶಕ್ತಿ ಭಗವಂತಎನ್ನುವ ಪ್ರಜ್ಞೆ ಜಾಗೃತವಾಗುತ್ತದೆ. ಇದರಿಂದ ಎಲ್ಲ ಗೊಂದಲವೂ ಮರೆಯಾಗುತ್ತದೆ. ಸ್ವಾರ್ಥ, ದುಃಖ, ಅಸೂಹೆ, ಎಲ್ಲವೂಹೊರಟು ಹೋಗಿ ಸ್ಥಿತಪ್ರಜ್ಞೆ ಮೂಡುತ್ತದೆ. ಭಗವಂತ ಅಣು ಒಳಗೆ ಅಣುವಾಗಿ, ಎಲ್ಲರೊಳಗೂ ಬಿಂಬ ರೂಪನಾಗಿತುಂಬಿದ್ದಾನೆ ಹಾಗು ಆತ ಮಹತ್ತಿನಲ್ಲಿ ಮಹತ್ತಾಗಿರುವ ಸರ್ವಗತ.  ಅವನ ಇಚ್ಛೆಯಂತೇ ಎಲ್ಲವೂ ನಡೆಯುತ್ತದೆ ಎನ್ನುವ ಸತ್ಯತಿಳಿಯುತ್ತದೆ. ಭಗವಂತನಲ್ಲಿ ತನ್ನನ್ನು ತಾನು ಒಪ್ಪಿಸಿಕೊಂಡವನಿಗೆ ಜೀವನದಲ್ಲಿ ಎಂದೂ ಭಯವಿಲ್ಲ.

ಜ್ಞಾನದಿಂದ ಕರ್ಮ ಮಾಡಬೇಕು, ತತ್ವ ಜ್ಞಾನಿಗಳಿಂದ  ಜ್ಞಾನ ಪಡೆಯಬೇಕು, ಅದರಿಂದ ಮೋಕ್ಷ ಸಾಧ್ಯ ಎನ್ನುವ ವಿಚಾರತಿಳಿಯಿತು. ಆದರೆ ಈ ವಿಷಯ ತಿಳಿಯುವ ಮೊದಲು ಸಾಕಷ್ಟು ಪಾಪ ಕರ್ಮಗಳನ್ನು ಮಾಡಿದ ಪಾಪಿಗಳ ಗತಿಏನು? ಇದಕ್ಕಾಗಿ ಭಯ ಪಡಬೇಕಾಗಿಲ್ಲ ಎನ್ನುತ್ತಾನೆ ಕೃಷ್ಣ. ಈ ವಿಚಾರವಾಗಿ ಕೃಷ್ಣನ  ಭರವಸೆಯನ್ನು ಮುಂದಿನ ಶ್ಲೋಕದಲ್ಲಿನೋಡೋಣ.                         
ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

तद्विद्धि प्रणिपातेन परिप्रश्नेन सेवया।
उपदेक्ष्यन्ति ते ज्ञानं ज्ञानिनस्तत्वदर्शिनः॥

उस ज्ञान को तू तत्वदर्शी ज्ञानियों के पास जाकर समझ, उनको भलीभाँति दण्डवत्‌ प्रणाम करने से, उनकी सेवा करने से और कपट छोड़कर सरलतापूर्वक प्रश्न करने से वे परमात्म तत्व को भलीभाँति जानने वाले ज्ञानी महात्मा तुझे उस तत्वज्ञान का उपदेश करेंगे
॥34॥

यज्ज्ञात्वा न पुनर्मोहमेवं यास्यसि पाण्डव।
येन भुतान्यशेषेण द्रक्ष्यस्यात्मन्यथो मयि॥

जिसको जानकर फिर तू इस प्रकार मोह को नहीं प्राप्त होगा तथा हे अर्जुन! जिस ज्ञान द्वारा तू सम्पूर्ण भूतों को निःशेषभाव से पहले अपने में (गीता अध्याय 6 श्लोक 29 में देखना चाहिए।) और पीछे मुझ सच्चिदानन्दघन परमात्मा में देखेगा। (गीता अध्याय 6 श्लोक 30 में देखना चाहिए।)
॥35॥

Tadviddhi pranipaatena pariprashnena sevayaa;
Upadekshyanti te jnaanam jnaaninas tattwadarshinah.

Know that by long prostration, by question and by service, the wise who have realisedthe Truth will instruct thee in (that) knowledge.

Yajjnaatwaa na punarmoham evam yaasyasi paandava;
Yena bhootaanyasheshena drakshyasyaatmanyatho mayi.

Knowing that, thou shalt not, O Arjuna, again become deluded like this;
and by that thoushalt see all beings in thy Self and also in Me!

No comments:

Post a Comment