Thursday, 6 September 2018

ಅಧ್ಯಾಯ - 04 : ಶ್ಲೋಕ – 38

ನಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ ।ತತ್ ಸ್ವಯಂ ಯೋಗಸಂಸಿದ್ಧಃ ಕಾಲೇನಾSತ್ಮನಿ ವಿಂದತಿ ॥೩೮॥

ನ ಹಿ ಜ್ಞಾನೇನ ಸದೃಶಮ್  ಪವಿತ್ರಮ್ ಇಹ  ವಿದ್ಯತೇ       
ತತ್ ಸ್ವಯಮ್   ಯೋಗ ಸಂಸಿದ್ಧಃ ಕಾಲೇನ ಆತ್ಮನಿ ವಿಂದತಿ-

 ತಿಳಿವಿಗೆ ಸಾಟಿಯಾದ ಪಾವನವಾದ ವಸ್ತು ಇಲ್ಲಿ ಇನ್ನೊಂದಿಲ್ಲ. ಸಾಧನೆಯಿಂದ ಪಳಗಿದವನು  ತಕ್ಕ ಕಾಲದಲ್ಲಿ ಅದನ್ನು ತಾನೆ ತನ್ನಲ್ಲಿ ಪಡೆಯುತ್ತಾನೆ.

ಜ್ಞಾನ ಎನ್ನುವುದು ಮಹಾಪವಿತ್ರ. ಅದಕ್ಕೆ ಸಾಟಿಯಾದ ಇನ್ನೊಂದು ವಸ್ತು ಈ ಪ್ರಪಂಚದಲ್ಲಿಲ್ಲ. ಏಕೆಂದರೆ ಜ್ಞಾನವೆಂದರೆ  ಭಗವಂತ. ಆದ್ದರಿಂದ "ಜ್ಞಾನ ಮಾರ್ಗವನ್ನು ಹಿಡಿ, ಕಾಲ ಪರಿಪಕ್ವವಾದಾಗ ನೀನು ಸಿದ್ಧಿಯನ್ನು ಪಡೆದೇ ಪಡೆಯುತ್ತಿ" ಎನ್ನುವುದು ಕೃಷ್ಣನ  ಭರವಸೆ. ಕೆಲವೊಮ್ಮೆ ಸಾಧನೆಯ ಪಥದಲ್ಲಿ ಸಿದ್ಧಿಯನ್ನು ಪಡೆಯಲು ಕೆಲವು ಜನ್ಮಗಳೇಬೇಕಾಗಬಹುದು. ಆದರೆ ಭಗವಂತನ ಭರವಸೆಯನ್ನು ನಂಬಿ ಆತ್ಮವಿಶ್ವಾಸದಿಂದ ಮುನ್ನೆಡೆದವನು ಸಿದ್ಧಿಯನ್ನುಪಡೆಯುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

न हि ज्ञानेन सदृशं पवित्रमिह विद्यते।
तत्स्वयं योगसंसिद्धः कालेनात्मनि विन्दति॥

इस संसार में ज्ञान के समान पवित्र करने वाला निःसंदेह कुछ भी नहीं है। उस ज्ञान को कितने ही काल से कर्मयोग द्वारा शुद्धान्तःकरण हुआ मनुष्य अपने-आप ही आत्मा में पा लेता है
॥38॥

Na hi jnaanena sadrisham pavitram iha vidyate;
Tat swayam yogasamsiddhah kaalenaatmani vindati.

Verily there is no purifier in this world like knowledge. He who is perfected in Yogafinds it in the Self in time.

No comments:

Post a Comment