Thursday, 6 September 2018

ಅಧ್ಯಾಯ - 04 : ಶ್ಲೋಕ – 39

ಶ್ರದ್ಧಾವಾನ್ ಲಭತೇ ಜ್ಞಾನಂ ತತ್ಪರಃ  ಸಂಯತೇಂದ್ರಿಯಃ ।ಜ್ಞಾನಂ ಲಬ್ಧ್ವಾ ಪರಾಂ ಶಾಂತಿಮಚಿರೇಣಾಧಿಗಚ್ಛತಿ ॥೩೯॥

ಶ್ರದ್ಧಾವಾನ್ ಲಭತೇ ಜ್ಞಾನಮ್ ತತ್  ಪರಃ  ಸಂಯತ ಇಂದ್ರಿಯಃ  ।
ಜ್ಞಾನಮ್  ಲಬ್ಧ್ವಾ ಪರಾಮ್  ಶಾಂತಿಮ ಆಚಿರೇಣ ಅಧಿಗಚ್ಛತಿ-

ಇಂದ್ರಿಯಗಳನ್ನು ಹದ್ದಿನಲ್ಲಿಟ್ಟು, ಶ್ರದ್ಧೆಯಿಂದ ನನ್ನನ್ನೇಪರದೈವವೆಂದು  ನಂಬಿದವನು ತಿಳಿವನ್ನುಗಳಿಸಿ ಶೀಘ್ರವಾಗಿ  ಸಂತಸದ ಸೆಲೆಯಾದ ಮುಕ್ತಿಯನ್ನು ಪಡೆಯುತ್ತಾನೆ.

ನಮ್ಮಲ್ಲಿ ಅರಿವು ಮೂಡಬೇಕೆಂದರೆ ಬರಿಯ ಅಧ್ಯಯನ ಸಾಲದು. ಒಂದು ವಿಷಯ ನಮಗೆ ಮನವರಿಕೆಯಾಗಬೇಕಾದರೆಮೊದಲು ನಮಗೆ ಶ್ರದ್ಧೆ ಬೇಕು. ಇಲ್ಲಿ ಸಮರ್ಪಣಾ ಭಾವನೆ ಅತೀ ಮುಖ್ಯ.  ನಾನು ತಿಳಿದಿದ್ದೇ ದೊಡ್ಡದು ಅದಕ್ಕಿಂತ ದೊಡ್ಡದು  ಯಾವುದೂ ಇಲ್ಲ ಅನ್ನುವ ಅಹಂಕಾರವನ್ನು ಮೊದಲು ಬಿಡಬೇಕು. ನನಗೆ ಯಾವುದು ತಿಳಿದಿಲ್ಲವೋ ಅದು ಸತ್ಯವಾಗಿರಲುಸಾಧ್ಯ ಎನ್ನುವ ಶ್ರದ್ಧೆ ಬೇಕು. ಪ್ರಪಂಚದ ಸತ್ಯ ನಮ್ಮ ನಂಬಿಕೆಯ ಮೇಲೆ ನಿಂತಿಲ್ಲ.  ಈ ಪ್ರಪಂಚದಲ್ಲಿ ನಮಗೆ ತಿಳಿದಿರುವುದುಕೇವಲ ಅತೀ ಚಿಕ್ಕ ಅಂಶ. ನಮಗೆ ಗೊತ್ತಿಲ್ಲದೇ ಇರುವ ಸತ್ಯ ಇದೆ ಎಂದು ತಿಳಿಯುವುದೇ ಶ್ರದ್ಧೆ. ನಮ್ಮ ಬದುಕಿನ ಗುರಿ ಜ್ಞಾನಮತ್ತು  ಸತ್ಯದ ತಿಳುವಳಿಕೆಯಾಗಬೇಕು. ಜ್ಞಾನದ ತೃಷೆ ಜೊತೆಗೆ ಇಂದ್ರಿಯಗಳ ಚಾಪಲ್ಯಕ್ಕೆ ಹಿಡಿತ. ಹೀಗೆ ಇದ್ದಾಗ ಅದರಿಂದಮಾನಸ ಸಾಕ್ಷಾತ್ಕಾರ, ಆತ್ಮ ಸಾಕ್ಷಾತ್ಕಾರ-ಕೊನೆಗೆ ಪರಮಾತ್ಮನ ಸಾಕ್ಷಾತ್ಕಾರ. ಈ ನಡೆಯಿಂದ ಅಪರೋಕ್ಷ ಜ್ಞಾನಸಿದ್ಧಿಯಾಗುತ್ತದೆ  ಮತ್ತು ಇದರಿಂದ  ಸದಾ ಜ್ಞಾನಾನಂದಪೂರ್ಣನಾದ ಭಗವಂತನನ್ನು(ಮೋಕ್ಷವನ್ನು) ಪಡೆಯಲುಸಾಧ್ಯ.               
ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

श्रद्धावाँल्लभते ज्ञानं तत्परः संयतेन्द्रियः।
ज्ञानं लब्धवा परां शान्तिमचिरेणाधिगच्छति॥

जितेन्द्रिय, साधनपरायण और श्रद्धावान मनुष्य ज्ञान को प्राप्त होता है तथा ज्ञान को प्राप्त होकर वह बिना विलम्ब के- तत्काल ही भगवत्प्राप्तिरूप परम शान्ति को प्राप्त हो जाता है
॥39॥

Shraddhaavaan labhate jnaanam tatparah samyatendriyah;
Jnaanam labdhvaa paraam shaantim achirenaadhigacchati.

The man who is full of faith, who is devoted to it, and who has subdued all the senses,obtains (this) knowledge;
and, having obtained the knowledge, he goes at once to the supremepeace.

No comments:

Post a Comment