Thursday, 6 September 2018

ಅಧ್ಯಾಯ - 04 : ಶ್ಲೋಕ – 40

ಅಜ್ಞಶ್ಚಾಶ್ರದ್ದಧಾನಶ್ಚ ಸಂಶಯಾತ್ಮಾ ವಿನಶ್ಯತಿ ।ನಾಯಂ ಲೋಕೋSಸ್ತಿ ನ ಪರೋ ನ ಸುಖಂ ಸಂಶಯಾತ್ಮನಃ ॥೪೦॥

ಅಜ್ಞಃ ಚ ಅಶ್ರದ್ದಧಾನಃ ಚ  ಸಂಶಯ ಆತ್ಮಾ ವಿನಶ್ಯತಿ
ನ ಅಯಮ್  ಲೋಕಃ ಅಸ್ತಿ  ನ ಪರಃ ನ ಸುಖಮ್  ಸಂಶಯ ಆತ್ಮನಃ -

ಅರಿವಿರದ, ನಂಬಿಕೆ ಕಳೆದುಕೊಂಡ ಇಬ್ಬಂದಿವಿನಾಶದತ್ತ ಸಾಗುತ್ತಾನೆ. ಇಬ್ಬಂದಿಗೆ ಇಹವಿಲ್ಲ; ಪರವಿಲ್ಲ; ನೆಮ್ಮದಿಯೂ ಇಲ್ಲ.

ಜ್ಞಾನವಿಲ್ಲದ, ಶ್ರದ್ಧೆ ಇಲ್ಲದ ಅಜ್ಞಾನಿಗಳು ನಿರಂತರ ಸಂಶಯದಲ್ಲೇ ಬದುಕುತ್ತಾರೆ.  ಜ್ಞಾನ ಮತ್ತು ಶ್ರದ್ಧೆ ಇಲ್ಲದಾಗ ಅಲ್ಲಿಸಂಶಯ ಬೆಳೆಯಲಾರಂಭಿಸುತ್ತದೆ. ಆ ಸಂಶಯ ಮನಸ್ಸನ್ನು ಆಕ್ರಮಿಸಿ ನಂತರ ಚಿತ್ತವನ್ನು ತಲುಪುತ್ತದೆ.  ಬುದ್ಧಿಗೆ ಬಂದಸಂಶಯಕ್ಕೆ ಪರಿಹಾರವಿಲ್ಲ. ಅದು ನಮ್ಮನ್ನು ಅಧಃಪಾತಕ್ಕೆ ಕೊಂಡೊಯ್ಯುತ್ತದೆ. ಇದರಿಂದ ಅಂತವರಿಗೆಇಹವಿಲ್ಲ, ಪರವಿಲ್ಲ, ಎಂದೆಂದೂ ನೆಮ್ಮದಿ ಇಲ್ಲ.     

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अज्ञश्चश्रद्दधानश्च संशयात्मा विनश्यति।
नायं लोकोऽस्ति न परो न सुखं संशयात्मनः॥

विवेकहीन और श्रद्धारहित संशययुक्त मनुष्य परमार्थ से अवश्य भ्रष्ट हो जाता है। ऐसे संशययुक्त मनुष्य के लिए न यह लोक है, न परलोक है और न सुख ही है
॥40॥

Ajnashchaashraddhadhaanashcha samshayaatmaa vinashyati;
Naayam loko’sti na paro na sukham samshayaatmanah.

The ignorant, the faithless, the doubting self proceeds to destruction;
there is neither thisworld nor the other nor happiness for the doubting.

No comments:

Post a Comment