Thursday, 6 September 2018

ಅಧ್ಯಾಯ ಆರು

ಹಿಂದಿನ ಅಧ್ಯಾಯದಲ್ಲಿ ಮುಖ್ಯವಾಗಿ ಭಗವಂತನ ಉಪಾಸನೆಯ ಸಾಧನೆಯನ್ನು ವಿವರಿಸಿದ ಕೃಷ್ಣ  ಈಗ ಆರನೇ ಅಧ್ಯಾಯದಲ್ಲಿ ಧ್ಯಾನಯೋಗ ಮತ್ತು ಧ್ಯಾನಸಮಾಧಿಯನ್ನು ತಳಸ್ಪರ್ಶಿಯಾಗಿ ವಿವರಿಸುತ್ತಾನೆ.

ಅಧ್ಯಾಯ - 06 : ಶ್ಲೋಕ – 01

ಭಗವಾನುವಾಚ ।ಅನಾಶ್ರಿತಃ ಕರ್ಮಫಲಂ ಕಾರ್ಯಂ ಕರ್ಮ ಕರೋತಿ ಯಃ ।ಸ ಸಂನ್ಯಾಸೀ ಚ ಯೋಗೀ ಚ ನ ನಿರಗ್ನಿರ್ನ ಚಾಕ್ರಿಯಃ ॥೧॥

ಭಗವಾನುವಾಚ- ಭಗವಂತ ಹೇಳಿದನು:
ಅನಾಶ್ರಿತಃ ಕರ್ಮ ಫಲಮ್  ಕಾರ್ಯಮ್  ಕರ್ಮ ಕರೋತಿ ಯಃ  ।
ಸಃ ಸಂನ್ಯಾಸೀ ಚ ಯೋಗೀ  ಚ ನ ನಿಃ ಅಗ್ನಿಃ ನ ಚ ಅಕ್ರಿಯಃ –

ಕರ್ಮದ ಫಲನ್ಯಾಸ ಮಾಡಿ  ಕರ್ತವ್ಯವನ್ನು ಮಾಡುತ್ತಿರುವವನೆ ನಿಜವಾದ ಸಂನ್ಯಾಸಿ ಮತ್ತು ನಿಜವಾದ ಯೋಗಿ. ಬೆಂಕಿಯಲ್ಲಿ ಹೋಮಿಸದವನಲ್ಲ, ಕರ್ಮವನ್ನು ತೊರೆದವನೂ ಅಲ್ಲ.

ಸಾಮಾನ್ಯವಾಗಿ ನಾವು ಕರ್ಮಯೋಗಿಗಳು ಬೇರೆ ಮತ್ತು ಸಂನ್ಯಾಸಿಗಳು ಬೇರೆ ಎಂದು ಎರಡು ಗುಂಪು ಮಾಡುತ್ತೇವೆ. ಇಲ್ಲಿ ಕೃಷ್ಣ ಯಾರು ಸಂನ್ಯಾಸಿಗಳು, ಯಾರು ಕರ್ಮಯೋಗಿಗಳು ಎನ್ನುವ ಲೋಕದ ಕಲ್ಪನೆಗಿಂತ ಭಿನ್ನವಾದ ವಿವರವನ್ನು ಈ ಶ್ಲೋಕದಲ್ಲಿ ನಮ್ಮ ಮುಂದಿಟ್ಟಿದ್ದಾನೆ. ಕೃಷ್ಣ ಹೇಳುತ್ತಾನೆ “ಅನಾಶ್ರಿತಃ ಕರ್ಮಫಲಂ” ಎಂದು. ನಾವು ಸಾಮಾನ್ಯವಾಗಿ ಕರ್ಮತ್ಯಾಗ ಮಾಡಿದವರು ಸಂನ್ಯಾಸಿಗಳು, ಕರ್ಮ ಮಾಡುವವರು ಗೃಹಸ್ಥರೆಂದು ಭಾವಿಸುತ್ತೇವೆ. ಆದರೆ ಕೃಷ್ಣ ಹೇಳುತ್ತಾನೆ ಪ್ರತಿಯೊಬ್ಬರೂ ಕರ್ಮಯೋಗಿಗಳಾಗಬೇಕು ಮತ್ತು ಪ್ರತಿಯೊಬ್ಬರೂ ಸಂನ್ಯಾಸಿಗಳಾಗಬೇಕು ಎಂದು. ಇದು ಒಂದನ್ನು ಬಿಟ್ಟು ಒಂದು ಇರತಕ್ಕದ್ದಲ್ಲ. ಸಂನ್ಯಾಸಿ ಎಂದರೆ ನಾವು ಮಾಡಿದ್ದನ್ನೆಲ್ಲಾ ಭಗವಂತನಿಗೆ ಅರ್ಪಿಸುವುದೇ ಹೊರತು ಏನೂ ಮಾಡದೆ ಇರುವುದಲ್ಲ.(ಹಿಂದೆ ಕರ್ಮ ಸಂನ್ಯಾಸದ ಬಗ್ಗೆ ವಿವರಿಸುವಾಗ ಈ ಬಗ್ಗೆ ನೋಡಿದ್ದೇವೆ). ಸಮಸ್ತ ಕರ್ಮವನ್ನು ಭಗವಂತನಿಗೆ ಅರ್ಪಿಸುವುದು ಸಂ-ನ್ಯಾಸ. ಇಲ್ಲಿ ಬಹಳ ಮುಖ್ಯವಾದ ವಿಷಯ ಎಂದರೆ  ಕರ್ಮದ ಫಲದ ಬಯಕೆಯನ್ನು ಸಂಪೂರ್ಣನಾದ ಭಗವಂತನ ಹೃದಯದಲ್ಲಿ ನೆಲೆಗೊಳಿಸಬೇಕು.

ಸಂನ್ಯಾಸ ಎಂದರೆ ತನ್ನ ಕುಟುಂಬವನ್ನು ತೊರೆದು ಕಾಡಿಗೆ ಹೋಗುವುದಲ್ಲ. ಕರ್ಮಯೋಗ ಮಾಡಲೇ ಬೇಕು. “ಕಾರ್ಯಂ ಕರ್ಮ ಕರೋತಿ ಯಃ” ಯಾರ್ಯಾರಿಗೆ ಯಾವುದ್ಯಾವುದು ಕಾರ್ಯವೋ ಅವರವರು ಅದನ್ನದನ್ನು ಮಾಡಬೇಕು. ಈ ಕಾರಣಕ್ಕಾಗಿ ಸಂನ್ಯಾಸ ಮತ್ತು ಕರ್ಮಯೋಗ ಎರಡೂ ಒಟ್ಟೊಟ್ಟಿಗಿರುವುದು. ನಿಜವಾದ ಸಂನ್ಯಾಸಿ ಕರ್ಮಯೋಗಿಯಾಗಿರುತ್ತಾನೆ, ಮತ್ತು ನಿಜವಾದ ಕರ್ಮಯೋಗಿ ಸಂನ್ಯಾಸಿಯಾಗಿರುತ್ತಾನೆ. ಇದಲ್ಲದೆ ನಾವು ತಿಳಿದಂತೆ ಅಗ್ನಿಯನ್ನು ತ್ಯಾಗ ಮಾಡಿದವರು, ಕರ್ಮವನ್ನು ತ್ಯಾಗ ಮಾಡಿದವರು ಸಂನ್ಯಾಸಿಗಳು ಅಥವಾ ಯೋಗಿಗಳಲ್ಲ.

ಸಂನ್ಯಾಸಿ ಎಂದೂ ನಿಷ್ಕ್ರೀಯ ಅಲ್ಲ. ಪ್ರತಿಯೊಬ್ಬರಿಗೂ ಅವರದ್ದೇ ಆದ ಕ್ರಿಯೆ ಇರುತ್ತದೆ. ಬ್ರಹ್ಮಚಾರಿಯಾದವನು ಅಧ್ಯಯನ, ಗುರುಕುಲವಾಸ, ಗುರು ಶುಶ್ರೂಷೆ, ಇತ್ಯಾದಿ ಕಾರ್ಯ ಮಾಡಿದರೆ, ಗ್ರಹಸ್ಥ ಅತಿಥಿಸತ್ಕಾರ, ಸಂಸಾರ ಪಾಲನೆ ಇತ್ಯಾದಿ ಕಾರ್ಯವನ್ನು ಮಾಡುತ್ತಾನೆ. ಹೀಗಾಗಿ ಎಲ್ಲರಿಗೂ ಕರ್ಮವಿದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( कर्मयोग का विषय और योगारूढ़ पुरुष के लक्षण )
श्रीभगवानुवाच
अनाश्रितः कर्मफलं कार्यं कर्म करोति यः।
स सन्न्यासी च योगी च न निरग्निर्न चाक्रियः॥

श्री भगवान बोले- जो पुरुष कर्मफल का आश्रय न लेकर करने योग्य कर्म करता है, वह संन्यासी तथा योगी है और केवल अग्नि का त्याग करने वाला संन्यासी नहीं है तथा केवल क्रियाओं का त्याग करने वाला योगी नहीं है
॥1॥

Sri Bhagavaan Uvaacha:
Anaashritah karmaphalam kaaryam karma karoti yah;
Sa sannyaasi cha yogee cha na niragnirna chaakriyah.

The Blessed Lord said:
He who performs his bounden duty without depending on the fruits of his actions—he is aSannyasin and a Yogi, not he who is without fire and without action.

ಅಧ್ಯಾಯ - 06 : ಶ್ಲೋಕ – 02

ಯಂ ಸಂನ್ಯಾಸಮಿತಿ ಪ್ರಾಹುರ್ಯೋಗಂ ತಂ ವಿದ್ಧಿ ಪಾಂಡವ ।ನಹ್ಯಸಂನ್ಯಸ್ತಸಂಕಲ್ಪೋ ಯೋಗೀ ಭವತಿ ಕಶ್ಚನ ॥೨॥

ಯಮ್  ಸಂನ್ಯಾಸಮ್ ಇತಿ ಪ್ರಾಹುಃ ಯೋಗಮ್ ತಮ್  ವಿದ್ಧಿ ಪಾಂಡವ ।
ನ ಹಿ ಅಸಂನ್ಯಸ್ತ ಸಂಕಲಪಃ  ಯೋಗೀ ಭವತಿ ಕಶ್ಚನ-

ಯಾವುದನ್ನು ಸಂನ್ಯಾಸವೆನ್ನುವರೋ ಅದನ್ನೆ ಯೋಗವೆಂದು ತಿಳಿ ಪಾಂಡವ. ಬಯಕೆಗಳ ‘ಸಂನ್ಯಾಸ’ ಮಾಡದ ಯಾವನೂ ಮರ್ಮವರಿತ ಕರ್ಮಯೋಗಿಯಾಗಲಾರ.

ಸಂನ್ಯಾಸ ಕೂಡಾ ಒಂದು ಯೋಗ. ಕರ್ಮ ಫಲತ್ಯಾಗ ಕೂಡಾ ಕರ್ಮ ಮಾಡತಕ್ಕ ಕರ್ಮಯೋಗಿಯ ಯೋಗದ ಒಂದು ಮುಖ. ಎಲ್ಲವನ್ನೂ ಭಗವಂತನಿಗೆ ಅರ್ಪಣೆ ಮಾಡಿ ಫಲಕಾಮನೆ ಇಲ್ಲದೆ ಭಗವದ್ ಪೂಜಾ ದೃಷ್ಟಿಯಿಂದ ಮಾಡುವಂತಹ ಕ್ರಿಯೆ ಸಾತ್ವಿಕರ ಸಾಧನೆ. ಸಂನ್ಯಾಸ ಎಂದರೆ ಕಾಮ-ಸಂಕಲ್ಪವನ್ನು ಭಗವಂತನಲ್ಲಿ ಅರ್ಪಿಸುವುದು. ಕಾಮ ಅಂದರೆ ‘ಮಾಡಬೇಕು’ ಎಂದು ಬಯಸುವುದು, ಸಂಕಲ್ಪ ಎಂದರೆ  ‘ಮಾಡುತ್ತೇನೆ’ ಎಂದು ನಿರ್ಧರಿಸುವುದು. ಕಾಮಸಂಕಲ್ಪ ವರ್ಜಿತ-ಸಂನ್ಯಾಸ. ಇಲ್ಲಿ ಕೃಷ್ಣ ವಿವರಿಸುತ್ತಿರುವುದು ಆಶ್ರಮಕ್ಕೆ(ಸಂನ್ಯಾಸಾಶ್ರಮ) ಸಂಭಂದಪಟ್ಟ ವಿಚಾರವಲ್ಲ. ಇದು ಸಾಧನೆಗೆ ಸಂಭಂದಪಟ್ಟ ವಿಚಾರ. ಸಾಧನೆಯ ಮುಖದಲ್ಲಿ ಯೋಗಿಗಳು ಸಂನ್ಯಾಸಿಗಳಾಗಬೇಕು ಮತ್ತು ಸಂನ್ಯಾಸಿಗಳು ಯೋಗಿಗಳಾಗಬೇಕು ಇದು ಕೃಷ್ಣನ ಸಂದೇಶ.

ನಾವು ಸಾಧನೆ ಮಾಡುವಾಗ ಕರ್ಮವೂ ಇರಬೇಕು ಫಲನ್ಯಾಸವೂ ಇರಬೇಕು. ಹೀಗಿರುವಾಗ ಎಲ್ಲರೂ ಮಾಡಬೇಕಾದ ಕರ್ಮ ಅಂತ ಒಂದು ಇದೆಯೋ ? ಸಾಧಕನ ಸಾಮಾಜಿಕ ಕರ್ತವ್ಯ ಯಾವುದು? ಸಮಾಜದೊಂದಿಗೆ ಒಬ್ಬ ಸಾಧಕ ಹೇಗೆ ಸ್ಪಂದಿಸಬೇಕು? ಕರ್ಮದ ಕೊನೆ ಎಂದು? ಸಾಧನೆಗೂ ಕರ್ಮಕ್ಕೂ ಇರುವ ಹೊಂದಿಕೆ ಏನು? ಅದು ಹೇಗೆ ಸಾಧನೆಗೆ ಪೂರಕ? ಈ ಎಲ್ಲಾ  ಪ್ರಶ್ನೆಗಳಿಗೆ ಕೃಷ್ಣ ಮುಂದಿನ ಶ್ಲೋಕದಲ್ಲಿ ಉತ್ತರ  ಕೊಡುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यं सन्न्यासमिति प्राहुर्योगं तं विद्धि पाण्डव।
न ह्यसन्न्यस्तसङ्‍कल्पो योगी भवति कश्चन॥

हे अर्जुन! जिसको संन्यास (गीता अध्याय 3 श्लोक 3 की टिप्पणी में इसका खुलासा अर्थ लिखा है।) ऐसा कहते हैं, उसी को तू योग (गीता अध्याय 3 श्लोक 3 की टिप्पणी में इसका खुलासा अर्थ लिखा है।) जान क्योंकि संकल्पों का त्याग न करने वाला कोई भी पुरुष योगी नहीं होता
॥2॥

Yam sannyaasamiti praahuryogam tam viddhi paandava;
Na hyasannyastasankalpo yogee bhavati kashchana.

Do thou, O Arjuna, know Yoga to be that which they call renunciation;
no one verilybecomes a Yogi who has not renounced thoughts!COMMENTARY: Lord Krishna eulogises Karma Yoga here because it is a means or astepping stone to the Yoga of meditation. In order to encourage the practice of Karma Yoga it isstated here that it is Sannyasa.

ಅಧ್ಯಾಯ - 06 : ಶ್ಲೋಕ – 03

ಆರುರುಕ್ಷೋರ್ಮುನೇರ್ಯೋಗಂ ಕರ್ಮ ಕಾರಣಮುಚ್ಯತೇ ।ಯೋಗಾರೂಢಸ್ಯ ತಸ್ಯೈವ ಶಮಃ ಕಾರಣಮುಚ್ಯತೇ ॥೩॥

ಆರುರುಕ್ಷೋಃ ಮುನೇಃ ಯೋಗಮ್ ಕರ್ಮ ಕಾರಣಮ್ ಉಚ್ಯತೇ            ।
ಯೋಗ ಆರೂಢಸ್ಯ ತಸ್ಯ ಏವ ಶಮಃ ಕಾರಣಮ್ ಉಚ್ಯತೇ –

ಸಾಧನೆಯ ಮೆಟ್ಟಲೇರುವವನಿಗೆ ಗುರಿ ಮುಟ್ಟಲು ಕರ್ಮಯೋಗ[ಹಲವು ಬಗೆಯ ಜನಸೇವೆ]ಕಾರಣವೆನಿಸುತ್ತದೆ. ಅವನೆ ಗುರಿ ಸೇರಿದಾಗ ಭಗವತ್ ಸಮಾಧಿ [ಜನ ಸೇವೆಯಿಂದ ವಿರಾಮ ಮತ್ತು ಭಗವಂತನಲ್ಲಿ ಧ್ಯಾನ ನಿಷ್ಠೆ] ಸುಖದ ಹೆಚ್ಚಳಕ್ಕೆ ಕಾರಣವೆನಿಸುತ್ತದೆ.

ಈ ಶ್ಲೋಕಕ್ಕೆ ಎರಡು ಆಯಾಮವಿದೆ. ನಾವು ಮಾಡತಕ್ಕ ನಿತ್ಯಕರ್ಮ ಒಬ್ಬ ಸಾಧಕ ಎಲ್ಲಿಯತನಕ ಮಾಡಬೇಕು ಮತ್ತು ಎಲ್ಲಿಂದ ಬಿಡಬಹುದು ಎನ್ನುವುದು ಒಂದು ಆಯಾಮವಾದರೆ ಇನ್ನೊಂದು ಸಾಮಾಜಿಕವಾಗಿ ಒಬ್ಬ ಸಾಧಕನ ಕರ್ತವ್ಯವೇನು ಎನ್ನುವುದನ್ನು ಈ ಶ್ಲೋಕ ವಿವರಿಸುತ್ತದೆ.
ಇನ್ನೂ ಸಿದ್ಧಿ ಪಡೆಯದ ಸಾಧನೆಯ ಹಾದಿಯಲ್ಲಿರುವ ಒಬ್ಬ ಸಾಧಕ  ಆ ಸ್ಥಿತಿಯಲ್ಲಿ ಎಲ್ಲ ವಿಹಿತಕರ್ಮವನ್ನು ಮಾಡುತ್ತಿರಬೇಕು, ಯಾವುದನ್ನೂ ಬಿಡುವಂತಿಲ್ಲ. ಸಿದ್ಧನಾದ ಮೇಲೆ ಆತ ಸಮಾಧಿ ಸ್ಥಿತಿಯಲ್ಲಿ ಭಗವಂತನನ್ನು ಒಳಗಿನಿಂದ ಕಾಣಬಲ್ಲ.  ಆ ಸ್ಥಿತಿಯಲ್ಲಿ ಆತನಿಗೆ ಉಳಿದ ಕರ್ಮಗಳಿಗಿಂತ ಅಂತರಂಗದಲ್ಲಿ ಭಗವಂತನನ್ನು ಕಾಣುವ ಕರ್ಮ ಮುಖ್ಯವಾಗುತ್ತದೆ. ಒಬ್ಬ ಅಪರೋಕ್ಷ್ಣ ಜ್ಞಾನ ಬಂದವ ಸದಾ ಸಮಾಧಿ ಸ್ಥಿತಿಯಲ್ಲಿ ಇರಲು ಸಾಧ್ಯವಿಲ್ಲ. ಅವನು ಹೊರ ಪ್ರಪಂಚಕ್ಕೆ ಬರಲೇ ಬೇಕು. ಆಗ ಅವನ ಮುಖ್ಯ ಕರ್ಮವೆಂದರೆ ಶಾಸ್ತ್ರ ಶ್ರಾವಣ, ಮಂತ್ರ ಜಪ, ಪ್ರವಚನ ಇತ್ಯಾದಿ. ಆದ್ದರಿಂದ ವಿಹಿತಕರ್ಮಗಳ ವಿಧಿನಿಷೇದ ಬದ್ದತೆ ಅಪರೋಕ್ಷ  ಜ್ಞಾನದವರೆಗೆ ಮಾತ್ರ. ಉದಾಹರಣೆಗೆ ಒಬ್ಬ ಅಪರೋಕ್ಷ ಜ್ಞಾನಿ ಧ್ಯಾನಕ್ಕೆ ಕುಳಿತಿದ್ದಾನೆ, ಆತ ತನ್ನ ಅಂತರಂಗದಲ್ಲಿ ಭಗವಂತನನ್ನು ಕಾಣುತ್ತಿದ್ದಾನೆ ಮತ್ತು ಆ ಆನಂದದಲ್ಲಿ ಮುಳುಗಿದ್ದಾನೆ. ಅದು ಬೆಳಗಿನಜಾವ-ಸೂರ್ಯೋದಯದ ಕಾಲ. ಸ್ನಾನ ಮಾಡಿ ಸಂಧ್ಯಾವಂದನೆ ಮಾಡುವ ಸಮಯದಲ್ಲಿ ಈತ ಧ್ಯಾನದಲ್ಲಿ ಕುಳಿತಿದ್ದಾನಲ್ಲ ಎಂದು ನಾವು ಅವನನ್ನು ಎಬ್ಬಿಸುವುದು ತಪ್ಪು. ಆತ ಸಂಧ್ಯಾವಂದನೆ ಮಾಡದಿದ್ದರೆ ಯಾವ ಕರ್ಮ ಲೇಪವೂ ಆಗುವುದಿಲ್ಲ. ಏಕೆಂದರೆ ಸಂಧ್ಯಾವಂದನೆ ಮಾಡುವುದು ಭಗವಂತನ ದರ್ಶನಕ್ಕಾಗಿ-ಆದರೆ ಆತ ಆಗಲೇ ಭಗವಂತನ ದರ್ಶನ ಪಡೆಯುತ್ತಿದ್ದಾನೆ. ಹೀಗೆ ಅಪರೋಕ್ಷ ಜ್ಞಾನಿಗೆ ಕರ್ಮದ ಬದ್ಧತೆ ಇಲ್ಲ. ಸಮಾಧಿಸ್ಥಿತಿಯಿಂದ ಹೊರಬಂದ ಮೇಲೆ ಇರತಕ್ಕ ಕರ್ತವ್ಯ ಎಂದರೆ ಭಗವಂತನ ಗುಣಗಾನ, ಪ್ರವಚನ, ಅಧ್ಯಯನ, ಜಪ ಇತ್ಯಾದಿ.
ಈ ಶ್ಲೋಕದ ಇನ್ನೊಂದು ಆಯಾಮವನ್ನು ಬಹಳ ಸುಂದರವಾಗಿ ಮಧ್ವಾಚಾರ್ಯರು ತಮ್ಮ ಗೀತಾತಾತ್ಪರ್ಯದಲ್ಲಿ ವಿವರಿಸಿದ್ದಾರೆ. ಇದು ಮುಖ್ಯವಾಗಿ ಒಬ್ಬ ಸಾಧಕನ ಸಾಮಾಜಿಕ ನಡೆ ಹೇಗಿರಬೇಕು ಎನ್ನುವುದನ್ನು ವಿವರಿಸುತ್ತದೆ. ಕರ್ಮ ಎನ್ನುವುದಕ್ಕೆ ಆಚಾರ್ಯರು ಒಂದು ಅಪೂರ್ವ ಅರ್ಥವನ್ನು ಕೊಟ್ಟಿದ್ದಾರೆ. ಕರ್ಮ ಅಂದರೆ ಕರ+ಮ. ಕರ ಅಂದರೆ ಕಂದಾಯ(Duty).ಯಾವುದನ್ನು ಕಂದಾಯವೆಂದು ತಿಳಿದು ನಾವು ಮಾಡಬೇಕೋ ಅದು ‘ಕರ-ಮ’. ನಾವು ಭಗವಂತನ ರಾಜ್ಯದಲ್ಲಿನ ಪ್ರಜೆಗಳು. ಅದಕ್ಕೋಸ್ಕರ ಅವನಿಗೆ ನಾವು ಕೊಡುವ ಕರ ಕರ್ಮ. ಯಾವುದೋ ಅಭಿಲಾಷೆಯಿಂದ ದೇವಸ್ಥಾನದಲ್ಲಿ ನಾವು ಕಾಣಿಕೆ ಹಾಕುವುದು ನಿಜವಾದ ಕಂದಾಯವಲ್ಲ, ಅದನ್ನು ಭಗವಂತ ಬಯಸುವುದೂ ಇಲ್ಲ. ಭಗವಂತ ನಮ್ಮಿಂದ ಬಯಸುವ ಕರ್ಮ ಕಷ್ಟದಲ್ಲಿರುವವರ ಶುಶ್ರೂಷೆ. ಒಬ್ಬ ಸಾಧಕ ಅಪರೋಕ್ಷ ಸಾಧಕನಾಗುವ ತನಕ ಅವನ ಸಾಧನೆಯಲ್ಲಿ ಇದು ಒಂದು ಮುಖ್ಯ ಸಾಧನೆ. ಸಮಸ್ತ ಜೀವಜಾತದ ಮೇಲೆ ಅನುಕಂಪ ಸೇವಾ ಮನೋವೃತ್ತಿ  ಬಹಳ ಮುಖ್ಯ. ಯೋಗಶಾಸ್ತ್ರದಲ್ಲಿ ಕೂಡಾ ಇದನ್ನೇ ಹೇಳುತ್ತಾರೆ. ಮೈತ್ರಿ, ಕರುಣಾ, ಮುದಿತ ಮತ್ತು ಉಪೇಕ್ಷ ಎನ್ನುವ ನಾಲ್ಕು ಮನೋವೃತ್ತಿ ಒಬ್ಬ ಸಾಧಕನಲ್ಲಿರಬೇಕು. ಮೈತ್ರಿ ಎಂದರೆ ಸಜ್ಜನರ ಸಹವಾಸ, ಎಲ್ಲಿ ಒಳ್ಳೆಯತನವಿದೆ ಅವರ ಸ್ನೇಹ;  ದುಃಖವನ್ನು ಕಂಡಾಗ ಅಲ್ಲಿ ಕರುಣೆ ಹಾಗು ನೆರವು-ಕರುಣಾ; ಇನ್ನೊಬ್ಬರ ಉದ್ಧಾರ ನೋಡಿ ಸಂತೋಷಪಡುವುದು ಮುದಿತ; ದುಷ್ಟರಿಂದ ದೂರವಿರುವುದು ಉಪೇಕ್ಷ. ಕೆಟ್ಟವರೊಂದಿಗೆ ಜಗಳ ಬೇಡ ಆದರೆ ಅವರ ಒಡನಾಟದಿಂದ ಯಾವುದೇ ದ್ವೇಷವಿಲ್ಲದೆ ದೂರವಿರುವುದು ಉಪೇಕ್ಷ. ಹೀಗೆ ಸಾಧಕನ ಜೀವನದಲ್ಲಿ ಇದು ಮಹತ್ತರವಾದ ಸಾಮಾಜಿಕ ಕರ್ತವ್ಯ. ಒಬ್ಬ ಸಿದ್ಧನಾದವ(ಯೋಗಾರೂಢ) ಸದಾ ಅಂತರ್ಮುಖಿ-ಯಾಗಿರುತ್ತಾನೆ. ಅವನಿಗೆ ಈ ಸಾಮಾಜಿಕ ಬದ್ಧತೆ ಇಲ್ಲ(ಅವರಿಗೆ ಅದು ಸಾಧ್ಯವಾಗುವುದಿಲ್ಲ). ಅವರ ಆನಂದಾಭಿವೃದ್ಧಿಗೆ ಕಾರಣ ‘ಶಮಃ’.  ಅಂದರೆ ಸದಾ ಭಗವಂತನಲ್ಲೇ ಮನಸ್ಸನ್ನು ನೆಟ್ಟಿರುವುದು, ಅದರಿಂದ ವ್ಯತಿರಿಕ್ತವಾದ ಇನ್ನೊಂದು ಕರ್ಮ ಅವರಿಗಿಲ್ಲ.

ಹೀಗೆ ಲೋಕಸೇವೆ ಎನ್ನುವುದು ಒಬ್ಬ ಸಾಧಕನ ಅವಿಭಾಜ್ಯ ಅಂಗವಾಗಬೇಕು ಎನ್ನುವುದನ್ನು ಕೃಷ್ಣ ಈ ಶ್ಲೋಕದಲ್ಲಿ  ಸ್ಪಷ್ಟವಾಗಿ ಹೇಳಿದ. ಯೋಗಾರೂಢನಿಗೆ ಯಾವ ಸಾಮಾಜಿಕ ಬದ್ಧತೆ ಇಲ್ಲ, ಅವನು ಅಂತರಂಗದಲ್ಲಿ ಭಗವಂತನನ್ನು ಕಾಣುತ್ತಿರುತ್ತಾನೆ ಎಂದು ಕೃಷ್ಣ ಹೇಳಿದಾಗ ನಮಗೆ ಒಂದು ಪ್ರಶ್ನೆ ಮೂಡಬಹುದು. ಇಂತಹ ಅಪರೋಕ್ಷ  ಜ್ಞಾನಿಗಳನ್ನು ಗುರುತಿಸುವುದು ಹೇಗೆ ಎಂದು. ಮುಂದಿನ ಶ್ಲೋಕ ಈ ನಮ್ಮ ಪ್ರಶ್ನೆಗೆ ಉತ್ತರ ರೂಪದಲ್ಲಿದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

आरुरुक्षोर्मुनेर्योगं कर्म कारणमुच्यते।
योगारूढस्य तस्यैव शमः कारणमुच्यते॥

योग में आरूढ़ होने की इच्छा वाले मननशील पुरुष के लिए योग की प्राप्ति में निष्काम भाव से कर्म करना ही हेतु कहा जाता है और योगारूढ़ हो जाने पर उस योगारूढ़ पुरुष का जो सर्वसंकल्पों का अभाव है, वही कल्याण में हेतु कहा जाता है
॥3॥

Aarurukshormuneryogam karma kaaranamuchyate;
Yogaaroodhasya tasyaiva shamah kaaranamuchyate.

For a sage who wishes to attain to Yoga, action is said to be the means;
for the same sagewho has attained to Yoga, inaction (quiescence) is said to be the means.

ಅಧ್ಯಾಯ - 06 : ಶ್ಲೋಕ – 04

ಯದಾ ಹಿ ನೇಂದ್ರಿಯಾರ್ಥೇಷು ನ ಕರ್ಮಸ್ವನುಷಜ್ಜತೇ ।ಸರ್ವಸಂಕಲ್ಪಸಂನ್ಯಾಸೀ ಯೋಗಾರೂಢಸ್ತದೋಚ್ಯತೇ ॥೪॥

ಯದಾ ಹಿ ನ ಇಂದ್ರಿಯ ಅರ್ಥೇಷು ನ ಕರ್ಮಸು ಅನುಷಜ್ಜತೇ ।
ಸರ್ವ ಸಂಕಲ್ಪ ಸಂನ್ಯಾಸೀ ಯೋಗಾರೂಢ ತದಾ ಉಚ್ಯತೇ –

ಎಲ್ಲ ಕರ್ಮದ ಹೊಣೆಯನ್ನೂ ಭಗವಂತನಿಗರ್ಪಿಸಿ, ಇಂದ್ರಿಯ ವಿಷಯಗಳಲ್ಲಿ ಮತ್ತು ಕರ್ಮಗಳಲ್ಲಿ ಬಗೆಯ ನಂಟು ಕಳೆದುಕೊಂಡಾಗ ಸಾಧನೆಯ ಗುರಿ ಸೇರಿದವನೆನಿಸುತ್ತಾನೆ.

ಅಪರೋಕ್ಷ ಜ್ಞಾನಿಯ ಲಕ್ಷಣವನ್ನು ಹೇಳುತ್ತ ಕೃಷ್ಣ ಹೇಳುತ್ತಾನೆ  “ಯದಾ ಹಿ ನ ಇಂದ್ರಿಯ ಅರ್ಥೇಷು ನ ಕರ್ಮಸು ಅನುಷಜ್ಜತೇ” ಎಂದು.  ಅಂದರೆ ಅಪರೋಕ್ಷ ಜ್ಞಾನಿಗಳು  ಇಂದ್ರಿಯಗಳನ್ನು ಸೆಳೆಯುವ ಸಂಗತಿಗಳಲ್ಲಿ (ಶಬ್ದ, ರೂಪ, ರಸ, ಗಂಧ, ಸ್ಪರ್ಶ),  ಅಥವಾ ಯಾವ ವಿಷಯದಲ್ಲೂ ಅಂಟಿಕೊಂಡಿರುವುದಿಲ್ಲ. ಆತ ಕ್ರಿಯೆ ಮಾಡುತ್ತಾನೆ ಆದರೆ ಅದಕ್ಕೆ ತನ್ನನ್ನು ಅಂಟಿಸಿಕೊಳ್ಳುವುದಿಲ್ಲ. ಸಾಧನೆಯ ಹಾದಿಯಲ್ಲಿರುವ ಸಾಧಕ ಕಷ್ಟಪಟ್ಟು ಇಂದ್ರಿಯ ನಿಗ್ರಹ ಮಾಡಿದರೆ ಅಪರೋಕ್ಷ ಜ್ಞಾನಿಗಳಿಗೆ ಇದು ಸಹಜ ಧರ್ಮವಾಗಿರುತ್ತದೆ. ಋಗ್ವೇದದಲ್ಲಿ ಹೇಳುವಂತೆ “ಎಲ್ಲ ಜಗತ್ತಿನ ನಿಯಾಮಕನಾದ ನರಸಿಂಹ-ಅವನ ಬಯಕೆಯೇ ನನ್ನ ಬಯಕೆಯಾಗಲಿ.ಅವನ ಹೃದಯದಲ್ಲಿ ಏನು ಬಯಕೆ ಇದೆ ಅದೇ ನನ್ನ ಭಾವನೆಯಾಗಲಿ. ಅದಕ್ಕೆ ವಿರುದ್ಧವಾದ ಸಂಕಲ್ಪ ನನಗೆ ಬಾರದೇ ಇರಲಿ”. ಈ ರೀತಿ ಅಪರೋಕ್ಷಜ್ಞಾನಿ ಬಯಸುತ್ತಾನೆ. ಅವನು ಏನನ್ನೂ ಕೂಡಾ ಇಂದ್ರಿಯದ ಮೂಲಕ ಅನುಭವಿಸಬೇಕು ಎಂದು ಬಯಸುವುದಿಲ್ಲ, ಪರಿತಪಿಸುವುದಿಲ್ಲ. ಇಂದ್ರಿಯದ ಮೂಲಕ  ಬಂದ ಅನುಭವದಿಂದ ಪ್ರಭಾವಿತನಾಗಿ ಅದಕ್ಕೆ ಅಂಟಿಕೊಳ್ಳುವುದೂ ಇಲ್ಲ. ಎಲ್ಲವನ್ನೂ ತಟಸ್ಥವಾಗಿ ನೋಡುತ್ತಿರುತ್ತಾನೆ.

ನಾವು ಸಮುದ್ರದ ತಟದಲ್ಲಿ ಕುಳಿತು ಸಮುದ್ರವನ್ನು ನೋಡುತ್ತಿದ್ದರೆ ಅಲ್ಲಿ ಅನೇಕ ರೀತಿಯ ಅಲೆಗಳಿರುತ್ತವೆ. ನಾವು ಆ ಅಲೆಗಳನ್ನು ನೋಡಿ ಆನಂದಿಸುತ್ತಿರುತ್ತೇವೆ. ಅಲ್ಲಿ ಬರುವ ತೆರೆಗಳ ನಿಯಂತ್ರಣ ನಮ್ಮ ಕೈಯಲ್ಲಿಲ್ಲ. ಯಾವ ಅಲೆ ಹೇಗೆ ಬಂತೋ ಹಾಗೆ ತಟಸ್ಥವಾಗಿ ಆಸ್ವಾದಿಸುವುದರಲ್ಲಿ ಆನಂದವಿದೆ. ಜೀವನ ಸಾಗರದಲ್ಲಿ ಕಷ್ಟ ಸುಖ ನೋವು ನಲಿವು ಎಲ್ಲವೂ ಅಲೆಗಳಂತೆ ಬಂದು ಹೋಗುತ್ತಿರುತ್ತವೆ. ಅದರ ನಿಯಂತ್ರಣ ನಮ್ಮ ಕೈಯಲ್ಲಿಲ್ಲ. ಸಮುದ್ರದ ಅಲೆಯನ್ನು ನೋಡಿ ಸಂತೋಷಪಟ್ಟಂತೆ ಈ ಜೀವನದ ಅಲೆಯನ್ನು ಸಹಜವಾಗಿ ನೋಡಿ ಸಂತೋಷಪಡುತ್ತ ಬಾಳುವುದೇ ಅಪರೋಕ್ಷ ಜ್ಞಾನಿಯ ಲಕ್ಷಣ.
If
ಈ ಅಧ್ಯಾಯದಲ್ಲಿ ಕೃಷ್ಣ ಧ್ಯಾನದ ಸಂಪೂರ್ಣ ಪ್ರಕ್ರೀಯೆಯನ್ನು ಮುಂದೆ ವಿವರಿಸುತ್ತಾನೆ. ಅದಕ್ಕಾಗಿ ನಮ್ಮ ಮನಸ್ಸನ್ನು ಹೇಗೆ ಸಜ್ಜುಗೊಳಿಸಬೇಕು, ನಾವೂ ಯೋಗಾರೂಢರಾಗಬೇಕಾದರೆ  ಏನು ಮಾಡಬೇಕು ಎನ್ನುವುದರ ಪ್ರಸ್ತಾವನೆ ಮುಂದಿನ ಶ್ಲೋಕ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यदा हि नेन्द्रियार्थेषु न कर्मस्वनुषज्जते।
सर्वसङ्‍कल्पसन्न्यासी योगारूढ़स्तदोच्यते॥

जिस काल में न तो इन्द्रियों के भोगों में और न कर्मों में ही आसक्त होता है, उस काल में सर्वसंकल्पों का त्यागी पुरुष योगारूढ़ कहा जाता है
॥4॥

Yadaa hi nendriyaartheshu na karmaswanushajjate;
Sarvasankalpasannyaasee yogaaroodhas tadochyate.

When a man is not attached to the sense-objects or to actions, having renounced allthoughts, then he is said to have attained to Yoga.

ಅಧ್ಯಾಯ - 06 : ಶ್ಲೋಕ – 05

ಉದ್ಧರೇದಾತ್ಮನಾSSತ್ಮಾನಂ ನಾSತ್ಮಾನಮವಸಾದಯೇತ್  ।ಆತ್ಮೈವ ಹ್ಯಾತ್ಮನೋ ಬಂಧುರಾತ್ಮೈವ ರಿಪುರಾತ್ಮನಃ ॥೫॥

ಉದ್ಧರೇತ್ ಆತ್ಮನಾ ಆತ್ಮಾನಮ್ ನ ಆತ್ಮಾನಮ್ ಅವಸಾದಯೇತ್       ।
ಆತ್ಮಾ ಏವ ಹಿ ಆತ್ಮನಃ ಬಂಧುಃ ಆತ್ಮಾ ಏವ ರಿಪುಃ ಆತ್ಮನಃ –

ಬಗೆಯ ಬಲದಿಂದ [ಭಗವಂತನ ಹಸಾದದಿಂದ] ಜೀವವನ್ನು ಮೇಲೆತ್ತಬೇಕು; ಜೀವವನ್ನು ಜಂಜಡಗೊಳಿಸಬಾರದು. ಬಗೆಯೆ[ಭಗವಂತನೆ] ಜೀವದ ಗೆಳೆಯ; ಬಗೆಯೆ[ಭಗವಂತನೆ]ಜೀವದ ಹಗೆಯು.

ಈ ಹಿಂದೆ ಹೇಳಿದಂತೆ ಆತ್ಮ ಎನ್ನುವ ಪದಕ್ಕೆ ಅನೇಕ ಅರ್ಥಗಳಿವೆ. ಆತ್ಮ ಎಂದರೆ ಶರೀರ, ಮನಸ್ಸು, ಜೀವ, ಪರಮಾತ್ಮ. ಹೀಗೆ ಈ ಶ್ಲೋಕದಲ್ಲಿ ಬಂದಿರುವ ಆತ್ಮ ಶಬ್ಧಕ್ಕೆ ಈ ಎಲ್ಲಾ ಅರ್ಥವನ್ನೂ ಜೋಡಿಸಿ ನೋಡಿದರೆ ಅನೇಕ ವಿಚಾರ ಸ್ಪಷ್ಟವಾಗುತ್ತದೆ. “ಉದ್ಧರೇತ್ ಆತ್ಮನಾ ಆತ್ಮಾನಮ್ ನ ಆತ್ಮಾನಮ್ ಅವಸಾದಯೇತ್” ಅಂದರೆ ನಮ್ಮ ಅಧಃಪಾತಕ್ಕೂ ಕಾರಣ ಮನಸ್ಸು. ನಮ್ಮ ಉದ್ಧಾರಕ್ಕೆ ಕಾರಣ ಮನಸ್ಸು. ಆದ್ದರಿಂದ ಮನಸ್ಸಿನಿಂದ(ಆತ್ಮಾನಾ) ಜೀವದ(ಆತ್ಮಾನಂ) ಉದ್ಧಾರದ ದಾರಿಯನ್ನು ಹುಡುಕು ಎನ್ನುತ್ತಾನೆ ಕೃಷ್ಣ. ಎಂದೂ ಮನಸ್ಸನ್ನು ಕೆಳಕ್ಕೆ ಕಳುಹಿಸಬೇಡ. ಆತ್ಮದ(ಜೀವದ) ಅವಸಾನಕ್ಕೆ ಕಾರಣವಾಗುವಂತೆ ಮನಸ್ಸನ್ನು ಸ್ವಚ್ಛಂದವಾಗಿ ಬಿಡಬೇಡ. ಅದನ್ನು ಮೇಲಕ್ಕೆ ಕೊಂಡು ಹೋಗು. ಮನಸ್ಸು ಕೆಳಗೆ ಹೋದರೆ ಅದು ನಮ್ಮನ್ನು ಪಾತಾಳಕ್ಕೆ ತಳ್ಳಿ ಬಿಡುತ್ತದೆ. ‘ಆ ಮನಸ್ಸನ್ನು ಎತ್ತರಕ್ಕೆ ಕಳಿಸು. ಎತ್ತರಕ್ಕೆ ಹೋದ ಮನಸ್ಸು ನಿನ್ನನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಮನಸ್ಸಿನಿಂದ ನಿನ್ನ ಜೀವ ಸ್ವರೂಪವನ್ನು ಉದ್ಧಾರ ಮಾಡಿಕೊ. ಜೀವಕ್ಕೆ ಮನಸ್ಸೇ ಬಂಧು, ಮನಸ್ಸೇ ಶತ್ರು. ಆದ್ದರಿಂದ ಸಾಧನೆ ಮಾಡಬೇಕಾದರೆ  ಮನಸ್ಸನ್ನು ಬಂಧುವಾಗಿ ಪರಿವರ್ತನೆ ಮಾಡಿಕೊ. ಮನಸ್ಸು ನಿನ್ನ ಶತ್ರುವಾಗಿ ನಿಂತರೆ ನಿನ್ನ ಜೀವಮಾನದಲ್ಲೇ ಉದ್ಧಾರವಿಲ್ಲ. ಅದಕ್ಕಾಗಿ ಮೊದಲು ಬುದ್ಧಿಬಲದಿಂದ  ಮನಸ್ಸಿಗೆ ತರಬೇತಿ ಕೊಟ್ಟು ಅದನ್ನು ಗೆಲ್ಲಬೇಕು’  ಎನ್ನುವುದು ಕೃಷ್ಣನ ಸಂದೇಶ. ಮನಸ್ಸನ್ನು ಗೆದ್ದರೆ ಎಲ್ಲವೂ ಪ್ರಶಾಂತ, ಯಾವ ಗೊಂದಲವೂ ಇಲ್ಲ. ಇದು ಧ್ಯಾನಕ್ಕೆ ಬೇಕಾದ ಪೂರ್ವ ಸ್ಥಿತಿ.

ಕೃಷ್ಣನ ಈ ಸಂದೇಶ ಕೇಳಿದಾಗ ನಮಗೆ ಒಂದು ಪ್ರಶ್ನೆ ಎದುರಾಗುತ್ತದೆ. ಈ ಹಿಂದೆ ಕೃಷ್ಣನೇ ಹೇಳಿದಂತೆ ಯಾವುದೂ ನಮ್ಮ ಕೈಯಲ್ಲಿಲ್ಲ. ಭಗವಂತನ ಅನುಗ್ರಹವಿಲ್ಲದೆ ನಾವು ನಮ್ಮ ಮನಸ್ಸನ್ನು ಸ್ವತಂತ್ರವಾಗಿ ಎಂದೂ ನಿಯಂತ್ರಿಸಲು ಸಾಧ್ಯವಿಲ್ಲ. ಹೀಗಿರುವಾಗ ನಾವು ನಮ್ಮ ಮನಸ್ಸನ್ನು ನಿಯಂತ್ರಿಸುವುದು ಹೇಗೆ? ಈ ನಮ್ಮ ಪ್ರಶ್ನೆಗೆ ಇದೇ ಶ್ಲೋಕದಲ್ಲಿ ಉತ್ತರವಿದೆ.ಆತ್ಮ ಎಂದರೆ ಪರಮಾತ್ಮ ಎನ್ನುವ ಸೂಕ್ಷ್ಮ ಅರ್ಥದಲ್ಲಿ  ಈ ಶ್ಲೋಕವನ್ನು ನೋಡಿದಾಗ ನಮ್ಮ ಪ್ರಶ್ನೆಗೆ ಉತ್ತರ ಸಿಗುತ್ತದೆ. “ಉದ್ಧರೇತ್ ಆತ್ಮನಾ ಆತ್ಮಾನಮ್” ಅಂದರೆ   “ಆತ್ಮನಿಂದಲೇ(ಭಗವಂತನಿಂದಲೇ) ಆತ್ಮನನ್ನು(ಜೀವವನ್ನು) ಉದ್ಧರಿಸಬೇಕು. ಸಾಮಾನ್ಯವಾಗಿ ಮನಸ್ಸು ನಮ್ಮ ಮಾತನ್ನು ಕೇಳುವುದಿಲ್ಲ. “ನನ್ನಿಂದ ಇದು ಸಾಧ್ಯವಿಲ್ಲ” ಎನ್ನುತ್ತದೆ ಮನಸ್ಸು. ಆದರೆ ನಮಗೆ ಭಗವಂತ ಬುದ್ಧಿ ಕೊಟ್ಟಿದ್ದಾನೆ, ನಾವು ಅದನ್ನು ಉಪಯೋಗಿಸಬೇಕು. ಬುದ್ಧಿಯನ್ನು ಉಪಯೋಗಿಸಿ ಆ ಭಗವಂತನಲ್ಲಿ “ನನಗೆ ಒಳ್ಳೆಯ ಮನಸ್ಸನ್ನು ಕೊಡು, ನನ್ನನ್ನು ಉದ್ಧಾರದ ದಾರಿಯಲ್ಲಿ ನಡೆಸು, ಸಾಧನೆ ಮಾಡುವಂತಹ ಸದ್ಭುದ್ಧಿಯನ್ನು ಕೊಡು” ಎಂದು ಆ ಭಗವಂತನಲ್ಲಿ ನಿರಂತರ ಪ್ರಾರ್ಥಿಸು. ಆತ ನಮ್ಮ ಅತ್ಯಂತ ಆತ್ಮೀಯ ಹಿತಚಿಂತಕ ಬಂಧು. ಅವನೊಬ್ಬನೇ ಯಾವುದೇ ಸ್ವಾರ್ಥವಿಲ್ಲದ ಶಾಶ್ವತ, ನಿರ್ವ್ಯಾಜ, ನಿರಂತರ  ಬಂಧು. ಆತ ಖಂಡಿತ ನಮ್ಮ ಪ್ರಾರ್ಥನೆಯನ್ನು ಮನ್ನಿಸಿ ನಮ್ಮ ಮನಸ್ಸಿನಲ್ಲಿ ಬಂದು ಕೂರುತ್ತಾನೆ.

ಭಗವಂತ ನಾವು ಆತನನ್ನು ಹೇಗೆ ಕಾಣುತ್ತೇವೆ ಅದೇ ಭಾವದಲ್ಲಿ ವ್ಯಕ್ತನಾಗುತ್ತಾನೆ. ದೇವತೆಗಳು ಆತನನ್ನು ಜ್ಞಾನಿಯಾಗಿ ಕಂಡರು- ಆತ ಅವರಿಗೆ ಜ್ಞಾನಿಯಾಗಿ ಕಾಣಿಸಿಕೊಂಡು ಅವರ ಉದ್ಧಾರ ಮಾಡಿದ. ರಾಕ್ಷಸರು ಆತ ಕೊಲ್ಲುವವವ ಮತ್ತು ಶತ್ರು ಎಂದು ತಿಳಿದು ಅವನನ್ನು ದ್ವೇಷಿಸಿದರು- ಆತ ಅವರಿಗೆ ಶತ್ರುವಾಗಿ ಕಾಣಿಸಿದ. ಆದ್ದರಿಂದ ಕೃಷ್ಣ ಹೇಳುತ್ತಾನೆ “ಆತ್ಮಾ ಏವ ರಿಪುಃ ಆತ್ಮನಃ” ಎಂದು. ಅಂದರೆ ನಾವು ಅಹಂಕಾರದಿಂದ ದಾರಿ ತಪ್ಪಿದಾಗ ಆತ ನಮಗೆ ನಮ್ಮ ಶತ್ರುವಿನಂತೆ ಬಾಸವಾಗುತ್ತಾನೆ. ಈ ಬಗ್ಗೆ ಮುಂದಿನ ಶ್ಲೋಕ ಇನ್ನೂ ಹೆಚ್ಚಿನ ವಿವರವನ್ನು ಕೊಡುತ್ತದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( आत्म-उद्धार के लिए प्रेरणा और भगवत्प्राप्त पुरुष के लक्षण )
उद्धरेदात्मनाऽत्मानं नात्मानमवसादयेत्‌।
आत्मैव ह्यात्मनो बन्धुरात्मैव रिपुरात्मनः॥

अपने द्वारा अपना संसार-समुद्र से उद्धार करे और …

ಅಧ್ಯಾಯ - 06 : ಶ್ಲೋಕ – 06

ಬಂಧುರಾತ್ಮಾSSತ್ಮನಸ್ತಸ್ಯ ಯೇನಾSತ್ಮೈವಾSತ್ಮನಾ ಜಿತಃ ।ಅನಾತ್ಮನಸ್ತು ಶತ್ರುತ್ವೇ ವರ್ತೇತಾSತ್ಮೈವ ಶತ್ರುವತ್ ॥೬॥

ಬಂಧುಃ ಆತ್ಮಾ ಆತ್ಮನಃ ತಸ್ಯ ಯೇನ ಆತ್ಮಾ ಏವ ಆತ್ಮನಾ ಜಿತಃ ।
ಅನಾತ್ಮನಃ ತು ಶತ್ರುತ್ವೇ  ವರ್ತೇತ ಆತ್ಮಾ ಏವ ಶತ್ರುವತ್-

ಯಾವ ಜೀವ ವಿವೇಕದಿಂದ ಬಗೆಯನ್ನು [ಭಕ್ತಿಯಿಂದ ಭಗವಂತನನ್ನು]ಗೆದೆಯಬಲ್ಲದೋ [ಯಾವ ಜೀವದಿಂದ ಬಗೆ ಹದಗೊಂಡಿದೆಯೋ], ಅಂಥ ಜೀವಕ್ಕೆ ಬಗೆ[ಭಗವಂತ]ಗೆಳೆಯ. ಬಗೆಯನ್ನು[ಭಗವಂತನನ್ನು] ಗೆದೆಯಲಾರದವನಿಗೆ ಬಗೆಯೆ [ಭಗವಂತನೆ]ಹಗೆಯಾಳಿನಂತೆ ಎದುರಾಳಿ.

ಯಾರು ಭಗವಂತನನ್ನು ಗೆದ್ದಿದ್ದಾರೋ(ಭಗವಂತನ ಪ್ರೀತಿಗೆ ಪಾತ್ರರಾಗಿದ್ದಾರೋ) ಅವರಿಗೆ ಆತ ಬಂಧು. ಭಗವಂತನ  ಪ್ರೀತಿಗೆ ಪಾತ್ರರಾಗಲು ಆತನ ಅನುಗ್ರಹ ಬೇಕು. ಅವನ ಅನುಗ್ರಹದಿಂದ ಅವನನ್ನು ಒಲಿಸಿ ಅವನ ಪ್ರೀತಿಗೆ ಪಾತ್ರರಾದವರಿಗೆ ಆತ ಬಂಧು. ಯಾರು ಭಗವಂತನಿಗೆ ಬೆನ್ನು ಹಾಕಿ ಮುಂದೆ ಸಾಗಿದರೋ ಅವರು ಸದಾ ಭಗವಂತನಿಂದ ದೂರ ಸಾಗುತ್ತಾರೆ. ಆತನಿಗೆ ಬೆನ್ನುಹಾಕಿ ಆತನನ್ನು ದ್ವೇಷಿಸುವವರಿಗೆ ಆತ ಶತ್ರುವಂತೆ ಕಾಣುತ್ತಾನೆ. ಈ ಕಾರಣದಿಂದ ನಿರಂತರ ಭಗವಂತನನ್ನು ಪ್ರಾರ್ಥಿಸು. “ಬಂಧುವಾಗಿ ನನ್ನೊಳಗೆ ಬಂದು ನೆಲೆಸು, ನನ್ನನ್ನು ಒಳ್ಳೆಯ ದಾರಿಯಲ್ಲಿ ನಡೆಸು, ನನ್ನನ್ನು ನಿನ್ನತ್ತ ತಿರುಗಿಸಿ ಮುಂದೆ ಕರೆದುಕೊಂಡು ಹೋಗು” ಎನ್ನುವ ಪ್ರಾರ್ಥನೆ ಹಾಗು ಶರಣಾಗತಿ ನಮ್ಮ ಮನಸ್ಸು ಆತನಲ್ಲಿ ನೆಲೆಗೊಳ್ಳುವಂತೆ ಮಾಡುತ್ತದೆ. ಇದು ಧ್ಯಾನದ ಮೊದಲ ಮೆಟ್ಟಿಲು. ಹೀಗೆ ಮನಸ್ಸನ್ನು ಮಣಿಸಲು ಭಗವಂತನ ಅನುಗ್ರಹಪಡೆಯುವ ಪ್ರಯತ್ನ ಮಾಡಿದಾಗ ಏನಾಗುತ್ತದೆ ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ ನೋಡೋಣ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

बन्धुरात्मात्मनस्तस्य येनात्मैवात्मना जितः।
अनात्मनस्तु शत्रुत्वे वर्तेतात्मैव शत्रुवत्‌॥

जिस जीवात्मा द्वारा मन और इन्द्रियों सहित शरीर जीता हुआ है, उस जीवात्मा का तो वह आप ही मित्र है और जिसके द्वारा मन तथा इन्द्रियों सहित शरीर नहीं जीता गया है, उसके लिए वह आप ही शत्रु के सदृश शत्रुता में बर्तता है
॥6॥

Bandhuraatmaa’tmanastasya yenaatmaivaatmanaa jitah;
Anaatmanastu shatrutwe vartetaatmaiva shatruvat.

The self is the friend of the self for him who has conquered himself by the Self, but to theunconquered self, this self stands in the position of an enemy like the (external) foe.
[9:11 AM, 6/9/2018] Bhagavathgeetha: 🍁BHAGAVAD-GITA🍁

ಅಧ್ಯಾಯ - 06 : ಶ್ಲೋಕ – 07, 08

ಜಿತಾತ್ಮನಃ ಪ್ರಶಾಂತಸ್ಯ ಪರಮಾತ್ಮಾ ಸಮಾಹಿತಃ ।ಶೀತೋಷ್ಣಸುಖದುಃಖೇಷು ತಥಾ ಮಾನಾಪಮಾನಯೋಃ ॥೭॥

ಜ್ಞಾನವಿಜ್ಞಾನತೃಪ್ತಾತ್ಮಾ ಕೂಟಸ್ಥೋ ವಿಜಿತೇಂದ್ರಿಯ ।ಯುಕ್ತ ಇತ್ಯುಚ್ಯತೇ ಯೋಗೀ ಸಮಲೋಷ್ಟಾಶ್ಮಕಾಂಚನಃ ॥೮॥

ಜಿತ ಆತ್ಮನಃ ಪ್ರಶಾಂತಸ್ಯ ಪರಮ ಆತ್ಮಾ ಸಮಾಹಿತಃ ।
ಶೀತ ಉಷ್ಣ ಸುಖ ದುಃಖೇಷು ತಥಾ ಮಾನ ಅಪಮಾನಯೋಃ  ||
ಜ್ಞಾನ ವಿಜ್ಞಾನ ತೃಪ್ತ ಆತ್ಮಾ ಕೂಟ ಸ್ಥಃ ವಿಜಿತ ಇಂದ್ರಿಯ
ಯುಕ್ತಃ ಇತಿ ಉಚ್ಯತೇ ಯೋಗೀ ಸಮಲೋಷ್ಟ ಅಶ್ಮ ಕಾಂಚನಃ –

ಬಗೆಯನ್ನು[ಭಕ್ತಿಯಿಂದ ಭಗವಂತನನ್ನು] ಗೆಲಿದವನ, ವಿಷಯಗಳತ್ತ ಸುಳಿಯದೆ ಭಗವಂತನಲ್ಲೆ ನಲಿದವನ ಬಗೆಯಲ್ಲಿ ಭಗವಂತ ನೆಲೆಗೊಳ್ಳುತ್ತಾನೆ. ಅಂತವನು ತಂಪು –ಬಿಸಿ, ಸುಖ –ದುಃಖ ಮತ್ತು ಸಮ್ಮಾನ-ತಿರಸ್ಕಾರ ಇಂಥ ದ್ವಂದ್ವಗಳಲ್ಲಿ ನಿರ್ವಿಕಾರನಾಗಿ ನಿಲ್ಲಬಲ್ಲವನು ; ಭಗವಂತನ ಅರಿವು ಕಾಣ್ಕೆಗಳಿಂದ ಬಗೆದುಂಬಿದವನು; ಇಂದ್ರಿಯಗಳನ್ನು ಹಿಡಿತದಲ್ಲಿಟ್ಟವನು. ಅವನಿಗೆ ಮಣ್ಣು, ಕಲ್ಲು, ಚಿನ್ನ ಎಲ್ಲ ಒಂದೆ. ಇಂಥ ಯೋಗ ಸಾಧಕನು ಗುರಿ ಸೇರಿದವನು ಎನ್ನಿಸುತ್ತಾನೆ.

ಭಕ್ತಿಯಿಂದ ಭಗವಂತನ ಅನುಗ್ರಹ ಪಡೆದಾಗ ಮೊದಲು ಮನಸ್ಸು ಆತನಲ್ಲಿ ನೆಲೆ ನಿಲ್ಲುತ್ತದೆ. ಮನಸ್ಸು ಎಂಥಹ ಪ್ರಸಂಗದಲ್ಲೂ ಉದ್ವೇಗಗೊಳ್ಳುವುದಿಲ್ಲ. “ಪರಮಾತ್ಮಾ ಸಮಾಹಿತಃ” –ಭಗವಂತ ಅವನ ಹೃದಯದಲ್ಲಿ ಬಂದು ನೆಲೆಸಿ ಬಿಡುತ್ತಾನೆ. ನಾವು ಬಯಸಿದಾಗ ಆತನ ಅಂತರ್ದರ್ಶನ ಸಾಧ್ಯ. ಈ ರೀತಿ ಭಗವಂತನನ್ನು ಕಾಣುವವರ, ಅಪರೋಕ್ಷ ಜ್ಞಾನದ ಪರಿಣಾಮ ಏನು ಎನ್ನುವುದನ್ನು ಇಲ್ಲಿ ಮತ್ತೊಮ್ಮೆ ವಿವರಿಸುತ್ತಾನೆ ಕೃಷ್ಣ.

ಮುಖ್ಯವಾಗಿ ಅಪರೋಕ್ಷ ಜ್ಞಾನಿಗಳಿಗೆ ಎಂದೂ ಇಂದ್ರಿಯ ಚಾಪಲ ಕಾಡುವುದಿಲ್ಲ. ಅಪಮಾನಕ್ಕೆ ಆತ ಎಂದೂ ಕುಸಿಯುವುದಿಲ್ಲ. ಮಾನಾಪಮಾನ ಆತನಿಗೆ ದೊಡ್ಡ ಸಂಗತಿ ಆಗುವುದಿಲ್ಲ. ಈ ಸ್ಥಿತಿ ತಲುಪಿದವ ಸಿದ್ಧ ಎನಿಸುತ್ತಾನೆ. ಆತ ಎಷ್ಟು ನಿರ್ವೀಕಾರ ಎಂದರೆ ಆತ ಎಲ್ಲವನ್ನೂ  ಸಮನಾಗಿ ಕಾಣಲಾರಂಭಿಸುತ್ತಾನೆ. ಧನ-ಕನಕ ಎಲ್ಲವೂ ಬೇಡವೆನಿಸಿ ಅದರಿಂದ ದೂರವಿರುತ್ತಾನೆ. (ರಾಮಕೃಷ್ಣ ಪರಮಹಂಸರ ಆತ್ಮಕಥೆಯನ್ನು ಓದಿದರೆ ಒಬ್ಬ ಅಪರೋಕ್ಷ ಜ್ಞಾನಿಯ ಮನಃಸ್ಥಿತಿ ನಮಗೆ ಅರ್ಥವಾಗುತ್ತದೆ).

ಮುಂದಿನ ಶ್ಲೋಕದಲ್ಲಿ ಕೃಷ್ಣ  ಧ್ಯಾನಕ್ಕೆ ಪೂರ್ವಭಾವಿಯಾಗಿ  ಒಬ್ಬ ಯೋಗಿಯ ಮನಃಸ್ಥಿತಿ ಹೇಗಿರಬೇಕು ಎನ್ನುವ ಬಹಳ  ಮಹತ್ವವಾದ ವಿಚಾರವನ್ನು ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

जितात्मनः प्रशान्तस्य परमात्मा समाहितः।
शीतोष्णसुखदुःखेषु तथा मानापमानयोः॥

सरदी-गरमी और सुख-दुःखादि में तथा मान और अपमान में जिसके अन्तःकरण की वृत्तियाँ भलीभाँति शांत हैं, ऐसे स्वाधीन आत्मावाले पुरुष के ज्ञान में सच्चिदानन्दघन परमात्मा सम्यक्‌ प्रकार से स्थित है अर्थात उसके ज्ञान में परमात्मा के सिवा अन्य कुछ है ही नहीं
॥7॥

ज्ञानविज्ञानतृप्तात्मा कूटस्थो विजितेन्द्रियः।
युक्त इत्युच्यते योगी समलोष्टाश्मकांचनः॥

जिसका अन्तःकरण ज्ञान-विज्ञान से तृप्त है, जिसकी स्थिति विकाररहित है, जिसकी इन्द्रियाँ भलीभाँति जीती हुई हैं और जिसके लिए मिट्टी, पत्थर और सुवर्ण समान हैं, वह योगी युक्त अर्थात भगवत्प्राप्त है, ऐसे कहा जाता है
॥8॥

Jitaatmanah prashaantasya paramaatmaa samaahitah;
Sheetoshna sukha duhkheshu tathaa maanaapamaanayoh.

The Supreme Self of him who is self-controlled and peaceful is balanced in cold and heat,pleasure and pain, as also in honour and dishonour.

Jnaana vijnaana triptaatmaa kootastho vijitendriyah;
Yuktah ityuchyate yogee samaloshtaashmakaanchanah.

The Yogi who is satisfied with the knowledge and the wisdom (of the Self), who hasconquered the senses, and to whom a clod of earth, a piece of stone and gold are the same, is said tobe harmonised (that is, is said to have attained the state of Nirvikalpa Samadhi).
[10:09 AM, 6/10/2018] Bhagavathgeetha: 🍁BHAGAVAD-GITA🍁

ಅಧ್ಯಾಯ - 06 : ಶ್ಲೋಕ – 09

ಸುಹೃನ್ಮಿತ್ರಾರ್ಯುದಾಸೀನಮಧ್ಯಸ್ಥದ್ವೇಷ್ಯಬಂದುಷು ।ಸಾಧುಷ್ವಪಿ ಚ ಪಾಪೇಷು ಸಮಬುದ್ಧಿರ್ವಿಶಿಷ್ಯತೇ ॥೯॥

ಸುಹೃತ್ ಮಿತ್ರ ಅರಿ ಉದಾಸೀನ ಮಧ್ಯಸ್ಥ ದ್ವೇಷ್ಯ ಬಂದುಷು ।
ಸಾಧುಷು ಅಪಿ ಚ ಪಾಪೇಷು ಸಮಬುದ್ಧಿಃ ವಿಶಿಷ್ಯತೇ –

ಹೆಳೆಯಿಲ್ಲದೆ ಹಚ್ಚಿಕೊಳ್ಳುವವರು, ಕಷ್ಟ ಕಾಲದಲ್ಲಿ ಎಚ್ಚರಿಸುವವರು, ಕಾಟಕೊಡುವವರು, ಒಳಿತು-ಕೆಡುಕು ಯಾವುದಕ್ಕೂ ಇಲ್ಲದವರು, ಎರಡಕ್ಕೂ ನಿಲ್ಲುವವರು, ಬೇಡವಾದದ್ದನ್ನು ಬಗೆವವರು, ನೆಂಟರು, ಒಳ್ಳೆಯವರು ಮತ್ತು ಕೆಟ್ಟವರು –ಎಲ್ಲರೂ ಮೂಲತಃ ಜ್ಞಾನ ಸ್ವರೂಪರು ಎಂದು ಸಮಭಾವದಿಂದ ಕಾಣುವವನು[ಎಲ್ಲರನ್ನೂ ಅವರವರ ಇರವಿಗೆ ತಕ್ಕಂತೆ ಗೌರವಿಸುವವನು] ಮಿಗಿಲಾದವನು.

ಮನಸ್ಸು ಸಮತೋಲನವಾಗದೆ ಧ್ಯಾನ ಮಾಡಲು ಸಾಧ್ಯವಿಲ್ಲ. ಯಾರ್ಯಾರೋ ಬಗ್ಗೆ ಯಾವುದ್ಯಾವುದೋ ವಿಚಾರಗಳು ಮನಸ್ಸಿನಲ್ಲಿ ಸುಳಿಯಲಾರಂಭಿಸಿದರೆ ಧ್ಯಾನ ಅಸಾಧ್ಯ. ಪ್ರಪಂಚದಲ್ಲಿ ಅನೇಕ ವಿಧದ ಜನರಿರುತ್ತಾರೆ. ಉದಾಹರಣೆಗೆ ಸುಹೃತರು-ಅಂದರೆ ಒಳ್ಳೆಯ ಹೃದಯ ಉಳ್ಳವರು. ಯಾವ ಪ್ರತ್ಯುಪಕಾರ ಬಯಸದೆ ಎಲ್ಲರಿಗೂ ಸಹಾಯ ಮಾಡುವ ಜನರಿವರು. ಇವರ ನಂತರ ‘ಮಿತ್ರ’- ತನ್ನ ಆತ್ಮೀಯನಿಗೆ ಸದಾ ಸಹಾಯ ಮಾಡುವವ, ನಾವು ತಪ್ಪಿದಾಗ ನಮ್ಮನ್ನು ತಿದ್ದುವವನೀತ. ಆರಿಗಳು: ಕೊಲ್ಲುವ ಕೆಟ್ಟ ಶತ್ರುತ್ವ ಸಾಧಿಸುವ ಇವರಿಗೆ ದ್ವೇಷಿಸಲು ಕಾರಣ ಬೇಡ. ಉದಾಸೀನರು: ಇವರು ಒಳ್ಳೆಯದಕ್ಕೂ ಇಲ್ಲ ಕೆಟ್ಟದಕ್ಕೂ ಇಲ್ಲ. ಮಧ್ಯಸ್ಥ: ಒಳ್ಳೆಯದು ಮಾಡಿದಾಗ ಒಳ್ಳೆಯದು, ಕೆಟ್ಟದ್ದು ಮಾಡಿದಾಗ ಕೆಟ್ಟದ್ದು ಮಾಡುವವ. ದ್ವೇಷ್ಯ: ಒಬ್ಬರನ್ನು ಕಂಡು ಸಹಿಸದವ(hatred). ಕೊನೆಯದಾಗಿ ಬಂಧುಗಳು(Relatives).ಹೀಗೆ ಮಾನವ ಜನಾಂಗದಲ್ಲಿ ಒಳ್ಳೆಯರು ಮತ್ತು ಕೆಟ್ಟವರು ತುಂಬಿರುತ್ತಾರೆ.(ದೇವತೆಗಳಲ್ಲಿ- ದಾನವರಲ್ಲಿ ಈ ರೀತಿಯ ಸಮ್ಮಿಶ್ರ ವರ್ಗವಿಲ್ಲ. ದೇವತೆಗಳು ಕೇವಲ ಸಾದುಗಳು, ಅಸುರರು ಸದಾ ಪಾಪಿಗಳು, ಆದರೆ ಮಾನವರಲ್ಲಿ ಮಾತ್ರ ಈ ಎರಡು ಗುಣ ಮಿಶ್ರಿತ ಗುಂಪುಗಳನ್ನು ಕಾಣಬಹುದು). ಧ್ಯಾನದಲ್ಲಿ ನಮಗೆ ಭಗವಂತನ ದರ್ಶನವಾಗಬೇಕಾದರೆ ಮೊದಲು ನಾವು ನಮ್ಮ ಅಂತರಂಗದಲ್ಲಿ ಈ ಎಲ್ಲಾ ರೀತಿಯ ಜನರ ಬಗ್ಗೆ ಸಮಬುದ್ಧಿಯನ್ನು ಬೆಳೆಸಿಕೊಳ್ಳಬೇಕು. ಒಬ್ಬ ವ್ಯಕ್ತಿಯ ನಡವಳಿಕೆ ಆತನು ಬೆಳೆದುಬಂದ ವಾತಾವರಣದಿಂದ ಅಥವಾ ತಿಳುವಳಿಕೆ ಇಲ್ಲದೆ ಇದ್ದುದರಿಂದ ಬಂದದ್ದು ಎಂದು ತಿಳಿದು  ಅವನ ಬಗ್ಗೆ ಮನಸ್ಸಿನಲ್ಲಿ ಯಾವ ಕೆಟ್ಟ ಭಾವನೆಯೂ ಇರದಂತೆ ನೋಡಿಕೊಳ್ಳಬೇಕು. ಒಬ್ಬ ನಮ್ಮ ವೈರಿಯಂತೆ ನಮ್ಮನ್ನು ಕಾಡುತ್ತಿರಬಹುದು. ಇದಕ್ಕೆ ಕಾರಣ ಆತನ ಹಾಗು ನಮ್ಮ ಪ್ರಾರಾಬ್ಧ ಕರ್ಮವಿರಬಹುದು. ದೇವರು ಈ ಜನ್ಮದಲ್ಲಿ ಅವನಿಗೆ ಕೊಟ್ಟ ಪಾತ್ರವನ್ನು ಆತ ನಿಭಾಯಿಸುತ್ತಿದ್ದಾನೆ ಎನ್ನುವ ಭಾವದಲ್ಲಿ ಅವನನ್ನು ನೋಡಿದಾಗ ನಮ್ಮಲ್ಲಿ ದ್ವೇಷ ಹುಟ್ಟುವುದಿಲ್ಲ; ಇನ್ನೊಬ್ಬರು ನಮ್ಮನ್ನು  ಬೈದಾಗ ನಾವು ಉದ್ವೇಗಕ್ಕೊಳಗಾಗುವುದಿಲ್ಲ-"ಭಗವಂತ ಅವನಿಗೆ ಕೊಟ್ಟ ಪಾತ್ರವನ್ನು ಅದೆಷ್ಟು ಚನ್ನಾಗಿ ನಿಭಾಯಿಸುತ್ತಿದ್ದಾನೆ" ಎನ್ನುವ ಭಾವ ನಮ್ಮಲ್ಲಿ ಮೂಢಬೇಕು.  ಸಂಬಂಧಿಕರಿರಲಿ, ಶತ್ರುಗಳಿರಲಿ, ಯಾರೇ ಇರಲಿ  ಧ್ಯಾನ ಸಮಯದಲ್ಲಿ ಮನಸ್ಸಿನಲ್ಲಿ ಶುದ್ಧವಾದ ಸಮಭಾವ ನೆಲೆಗೊಂಡಿರಬೇಕು. ಈ ಸ್ಥಿತಿಯಲ್ಲಿ  ಧ್ಯಾನಕ್ಕೆ ಕುಳಿತಾಗ ಇವರ್ಯಾರೂ ಎದುರಿಗೆ ಬರದೆ ಆ ಭಗವಂತನ ದರ್ಶನವಾಗುತ್ತದೆ. ಇಲ್ಲಿ ಒಂದು ಎಚ್ಚರದ ವಿಷಯ ಎಂದರೆ ಅಂತರಂಗದ ಸಮಭಾವವನ್ನು ವ್ಯವಹಾರಿಕವಾಗಿ ಹೊರ ಪ್ರಪಂಚದಲ್ಲಿ ಅಳವಡಿಸಲು ಬರುವುದಿಲ್ಲ. ವ್ಯವಹಾರಿಕವಾಗಿ ನಾವು ಹಿಂದೆ ಹೇಳಿದ ಮೈತ್ರಿ, ಕರುಣಾ, ಮುದಿತ ಮತ್ತು ಉಪೇಕ್ಷ ಎನ್ನುವ ನಾಲ್ಕು ಮನೋವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಎಲ್ಲರನ್ನೂ ಸಮಾನವಾಗಿ ಕಾಣುವುದು ಅಂದರೆ ಅವರವರನ್ನು ಆಯಾ ಸ್ಥಾನದಲ್ಲಿ ನೋಡುವುದು ವ್ಯಾವಹಾರಿಕ ಪ್ರಪಂಚದ ಸಮದೃಷ್ಟಿ. ತಂದೆಯನ್ನು ತಂದೆಯಂತೆ, ಮಗನನ್ನು ಮಗನಂತೆ ಕಂಡು ನಡೆಯುವುದು, ದುಷ್ಟರಿಂದ ದೂರವಿರುವುದು(ಉಪೇಕ್ಷ) ವ್ಯವಹಾರಿಕ ಪ್ರಪಂಚ.  ಅಂತರಂಗ ಪ್ರಪಂಚದಲ್ಲಿ ನಾವು ಎಲ್ಲರಲ್ಲೂ ಆತನ ಒಳಗಿರುವ ಭಗವಂತನನ್ನು ಮಾತ್ರ ಕಾಣಬೇಕು. ಇದು ಧ್ಯಾನಕ್ಕೆ ಬೇಕಾದ  ಪೂರ್ವಭಾವಿ ಮನಃಸ್ಥಿತಿ.  ಮಾನಸಿಕವಾಗಿ ಎಲ್ಲಾ ಸಂಬಂಧದ ನಂಟನ್ನು ಕಳಚಿ ಧ್ಯಾನಕ್ಕೆ  ಕುಳಿತುಕೊಳ್ಳಬೇಕು. ಧ್ಯಾನದಲ್ಲಿ ತಂದೆ, ತಾಯಿ, ಗುರು ಶಿಷ್ಯ, ವೈರಿ, ಮಿತ್ರ ಇತ್ಯಾದಿ ವರ್ಗಗಳಿಲ್ಲ. ಎಲ್ಲವೂ ಒಂದೆ, ಅದು  ಕೇವಲ ಜ್ಞಾನಸ್ವರೂಪವಾದ ಜೀವ- ಅದರೊಳಗೆ ಬಿಂಬ ರೂಪಿ ಭಗವಂತ. ಇದು ಧ್ಯಾನಕ್ಕೆ ಬೇಕಾದ ಮಾನಸಿಕ ಸ್ಥಿತಿ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

सुहृन्मित्रार्युदासीनमध्यस्थद्वेष्यबन्धुषु।
साधुष्वपि च पापेषु समबुद्धिर्विशिष्यते॥

सुहृद् (स्वार्…

ಅಧ್ಯಾಯ - 06 : ಶ್ಲೋಕ – 10

ಹೀಗೆ ಧ್ಯಾನಕ್ಕೆ ಬೇಕಾದ ಪೂರ್ವ ಸಿದ್ಧತೆಯನ್ನು ವಿವರಿಸಿದ ಕೃಷ್ಣ ಮುಂದೆ ನೇರವಾಗಿ  ಧ್ಯಾನಕ್ಕೆ ಕೂರುವ ವಿಧಾನವನ್ನು ವಿವರಿಸುತ್ತಾನೆ. 

ಯೋಗೀ ಯುಂಜೀತ ಸತತಮಾತ್ಮಾನಂ ರಹಸಿ ಸ್ಥಿತಃ ।ಏಕಾಕೀ ಯತಚಿತ್ತಾತ್ಮಾ ನಿರಾಶೀರಪರಿಗ್ರಹಃ ॥೧೦॥

ಯೋಗೀ ಯುಂಜೀತ ಸತತಮ್ ಆತ್ಮಾನಮ್  ರಹಸಿ ಸ್ಥಿತಃ ।
ಏಕಾಕೀ ಯತ ಚಿತ್ತ ಆತ್ಮಾ ನಿರಾಶೀಃ ಅಪರಿಗ್ರಹಃ –

ಯೋಗ ಸಾಧಕನು ಒಬ್ಬನೆ ಏಕಾಂತದಲ್ಲಿ ಕುಳಿತು, ಮೈಮನಗಳನ್ನು ಹದಗೊಳಿಸಿ, ಆಸೆಪಡದೆ, ಏತಕ್ಕೂ ಕೈಯೊಡ್ಡದೆ, ಬಗೆಯನ್ನು ಸದಾ ಸಮಾಧಿಗೆ ಅಣಿಗೊಳಿಸಬೇಕು.

“ಸತತಮ್ ಆತ್ಮಾನಮ್”-ಧ್ಯಾನ ಮಾರ್ಗದಲ್ಲಿ ಸಾಧನೆ ಮಾಡತಕ್ಕಂತಹ ವ್ಯಕ್ತಿ ಮನಸ್ಸನ್ನು ನಿರಂತರ ಧ್ಯಾನ ಯೋಗದಲ್ಲಿ ತೊಡಗಿಸಲು ಹಾಗು  ಏಕಾಗ್ರಗೊಳಿಸಲು  ಪ್ರಯತ್ನಪಡಬೇಕು;  “ರಹಸಿ ಸ್ಥಿತಃ”- ಜನಜಂಗುಳಿ ಇದ್ದಲ್ಲಿ ಧ್ಯಾನ ಅಭ್ಯಾಸ ಮಾಡಲು ಅಸಾಧ್ಯ. ಈ ಕಾರಣಕ್ಕಾಗಿ ಹಿಂದಿನವರು ಧ್ಯಾನಕ್ಕಾಗಿ ಬೆಳಗಿನ ಜಾವದ ಅರುಣೋದಯ ಕಾಲವನ್ನು ಮೀಸಲಿಡುತ್ತಿದ್ದರು. ಬೆಳಗಿನಜಾವ ಸೂರ್ಯೋದಯಕ್ಕಿಂತ ತೊಂಬತ್ತಾರು ನಿಮಿಷ ಮೊದಲು ಧ್ಯಾನಕ್ಕೆ ಕುಳಿತರೆ ಆಗ ಇಡೀ ಪ್ರಕೃತಿ ಪ್ರಶಾಂತವಾಗಿರುತ್ತದೆ. ಈ ಕಾಲ ಮನಸ್ಸನ್ನು ಏಕಾಗ್ರತೆಗೆ ಕೊಂಡೊಯ್ಯಲು ಅತ್ಯಂತ ಪೂರಕ ಕಾಲ. ಇದನ್ನು ‘ಬ್ರಹ್ಮಮಹೂರ್ತ’ ಎನ್ನುತ್ತಾರೆ(ಸೂರ್ಯೋದಯಕ್ಕಿಂತ ತೊಬತ್ತಾರು ನಿಮಿಷ(ನಾಲ್ಕು ಘಳಿಗೆ) ಮೊದಲು ಪ್ರಾರಂಭವಾಗಿ ನಲವತ್ತೆಂಟು ನಿಮಿಷಗಳ ಕಾಲ(ಎರಡು ಘಳಿಗೆ) ಬ್ರಹ್ಮಮಹೂರ್ತ-ಉದಾಹರಣೆಗೆ ಸೂರ್ಯೋದಯ 5:44ಕ್ಕೆ  ಆದರೆ 4:08 ರಿಂದ 4:56 ರ ತನಕ ಬ್ರಹ್ಮಮಹೂರ್ತ). ಈ ಮಹೂರ್ತದ ದೇವತೆ ಚತುರ್ಮುಖ ಬ್ರಹ್ಮ. ಈತನೇ ನಮ್ಮ ಚಿತ್ತದ ದೇವತೆ. ಆದ್ದರಿಂದ ಈ ಕಾಲ ಜಪ ಸ್ಮರಣೆ ಮತ್ತು ಧ್ಯಾನಕ್ಕೆ ಅತ್ಯಂತ ಶ್ರೇಷ್ಠವಾದ ಸಮಯ. ಧ್ಯಾನ  ಎನ್ನುವುದು ಅತ್ಯಂತ ಅಂತರಂಗದ ಕ್ರಿಯೆ. ಇಲ್ಲಿ ಕೇವಲ ಭಗವಂತ ಮತ್ತು ಸಾಧಕ ಜೀವ ಮಾತ್ರ ಇರಬೇಕು, ಮೂರನೆ ಸಂಗಾತಿ ಬಂದರೆ ತೊಂದರೆಯಾಗುತ್ತದೆ. ಒಬ್ಬ ಕಲುಷಿತ ಮನಸ್ಸಿನ(polluted mind) ವ್ಯಕ್ತಿಯಿಂದ ಆತನ ಸುತ್ತಲಿನ ವಾತಾವರಣ ಕೆಡುತ್ತದೆ. ಅದಕ್ಕಾಗಿ ಧ್ಯಾನ ಅಭ್ಯಾಸ ಮಾಡುವಾಗ ಯಾವಾಗಲೂ ಏಕಾಂತವಾಗಿ ಅಭ್ಯಾಸ ಮಾಡಬೇಕು. ನಮ್ಮ ಚಿತ್ತ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿಟ್ಟು, ಯಾವುದೇ ಆಸೆ ಆಕಾಂಕ್ಷೆ ಮನಸ್ಸಿಗೆ ಸುಳಿಯದಂತೆ, ತೃಪ್ತ ಮನಸ್ಸಿನಿಂದ ಧ್ಯಾನಕ್ಕೆ ಅಣಿಯಾಗಬೇಕು.

ಮುಂದಿನ ಶ್ಲೋಕದಲ್ಲಿ ಧ್ಯಾನಕ್ಕೆ ಕೂರುವ ಸ್ಥಳ ಹೇಗಿರಬೇಕು ಮತ್ತು ಹೇಗೆ ಕುಳಿತುಕೊಳ್ಳಬೇಕು  ಎನ್ನುವುದನ್ನು ಕೃಷ್ಣ ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

योगी युञ्जीत सततमात्मानं रहसि स्थितः।
एकाकी यतचित्तात्मा निराशीरपरिग्रहः॥

मन और इन्द्रियों सहित शरीर को वश में रखने वाला, आशारहित और संग्रहरहित योगी अकेला ही एकांत स्थान में स्थित होकर आत्मा को निरंतर परमात्मा में लगाए
॥10॥

Yogee yunjeeta satatamaatmaanam rahasi sthitah;
Ekaakee yatachittaatmaa niraasheeraparigrahah.

Let the Yogi try constantly to keep the mind steady, remaining in solitude, alone, withthe mind and the body controlled, and free from hope and greed.

ಅಧ್ಯಾಯ - 06 : ಶ್ಲೋಕ – 11, 12

ಶುಚೌ ದೇಶೇ ಪ್ರತಿಷ್ಠಾಪ್ಯ ಸ್ಥಿರಮಾಸನಮಾತ್ಮನಃ ।ನಾತ್ಯುಚ್ಛ್ರಿತಂ ನಾತಿನೀಚಂ ಚೇಲಾಜಿನಕುಶೋತ್ತರಮ್॥೧೧॥ತತ್ರೈಕಾಗ್ರಂ ಮನಃ ಕೃತ್ವಾ ಯತಚಿತ್ತೇಂದ್ರಿಯಕ್ರಿಯಾಃ ।ಉಪವಿಶ್ಯಾSಸನೇ ಯುಂಜ್ಯಾದ್ ಯೋಗ ಮಾತ್ಮವಿಶುದ್ಧಯೇ   ॥೧೨॥

ಶುಚೌ ದೇಶೇ ಪ್ರತಿಷ್ಠಾಪ್ಯ ಸ್ಥಿರಮ್ ಆಸನಮ್ ಆತ್ಮನಃ ।
ನ ಅತಿ ಉಚ್ಛ್ರಿತಮ್ ನ ಅತಿ ನೀಚಮ್  ಚೇಲ ಅಜಿನ ಕುಶ ಉತ್ತರಮ್     
ತತ್ರ ಏಕ ಅಗ್ರಮ್  ಮನಃ ಕೃತ್ವಾ ಯತಚಿತ್ತ ಇಂದ್ರಿಯ ಕ್ರಿಯಃ ।
ಉಪವಿಶ್ಯ ಆಸನೇ ಯುಂಜ್ಯಾದ್ ಯೋಗಮ್ ಆತ್ಮ ವಿಶುದ್ಧಯೇ –

ನಿರ್ಮಲವಾದ ತಾಣದಲ್ಲಿ, ಹುಲ್ಲ(ದರ್ಬೆ) ಚಾಪೆ-ಜಿಂಕೆಯ ತೊಗಲ ಮೇಲೆ ಬಟ್ಟೆ ಹಾಸಿ, ತುಂಬ ಎತ್ತರವೂ ಅಲ್ಲದ, ತೀರ ತಗ್ಗೂ ಅಲ್ಲದ, ನಲುಗದ ಆಸನವನ್ನು ತನಗಾಗಿ ಅಣಿಗೊಳಿಸಬೇಕು. ಅದರಲ್ಲಿ ಕುಳಿತು, ಬಗೆಯನ್ನು ನೆಟ್ಟ ಗುರಿಯಲ್ಲಿರಿಸಿ, ಇಂದ್ರಿಯಗಳ ಮತ್ತು  ಒಳಬಗೆಯ ಚೆಲ್ಲಾಟವನ್ನು ನಿಲ್ಲಿಸಿ, ಆತ್ಮ ಶುದ್ಧಿಗಾಗಿ ಸಮಾಧಿಯನ್ನು ಸಾಧಿಸಬೇಕು.

ಧ್ಯಾನಕ್ಕೆ ಕೂರುವ ಪ್ರದೇಶ ಸ್ವಚ್ಛವಾಗಿರಬೇಕು. ಮನೆಯಲ್ಲಿ ಸಾತ್ವಿಕ ಕಂಪನ(Vibration)ವಿರುವ ಸ್ಥಳವನ್ನು ಧ್ಯಾನಕ್ಕೆ  ಆರಿಸಿಕೊಳ್ಳಬೇಕು. ಹಿಂದೆ  ಮನೆಯಲ್ಲಿ ಹೆಚ್ಚು ಸಾತ್ವಿಕ ಕಂಪನವಿರುವ ಸ್ಥಳವನ್ನು ಗುರುತಿಸಿ ಅಲ್ಲಿ ದೇವರಮನೆಯನ್ನು ನಿರ್ಮಿಸುತ್ತಿದ್ದರು. ದುರಾದೃಷ್ಟಾವಶಾತ್ ಇಂದು ಮನೆ ಕಟ್ಟುವಾಗ  ಎಲ್ಲಿ ಜಾಗ ಉಳಿದಿದೆ ಅದನ್ನು ದೇವರಮನೆಯಾಗಿ ಪರಿವರ್ತಿಸುತ್ತಿದ್ದೇವೆ. ನಾವು   ಮನೆಯಲ್ಲಿ ಯಾವ ಭಾಗದಲ್ಲಿ ಕುಳಿತಾಗ ನಮಗೆ ಮನಸ್ಸು ಪ್ರಸನ್ನವಾಗಿ ದೇವರ ಧ್ಯಾನಕ್ಕೆ ಪೂರಕವಾಗಿರುತ್ತದೋ ಅಲ್ಲಿ ಸಾತ್ವಿಕ ಕಂಪನ ಹೆಚ್ಚಾಗಿದೆ ಎಂದು ನಾವು ಸುಲಭವಾಗಿ ಕಂಡು ಹಿಡಿಯಬಹುದು. ಇದನ್ನೇ ಇಲ್ಲಿ “ಶುಚಿ ದೇಶ” ಎಂದಿದ್ದಾರೆ.

ನಾವು ಸಾತ್ವಿಕ ಕಂಪನವಿರುವ ಸ್ಥಳವನ್ನು ಗುರುತಿಸಿದರೆ ಸಾಲದು; ಅಲ್ಲಿ ಎಷ್ಟು ಒಳ್ಳೆಯ ಸಾತ್ವಿಕ ಕಂಪನವಿದ್ದರೂ ನಾವು ನೆಲದಲ್ಲಿ ಕುಳಿತರೆ ನೆಲದಲ್ಲಿರುವ ಕೆಟ್ಟ ಕಂಪನ ನಮ್ಮ ದೇಹವನ್ನು ಪ್ರವೇಶಿಸಬಹುದು. ಅದಕ್ಕಾಗಿ ನಾವು ಕುಳಿತುಕೊಳ್ಳುವ ಆಸನ ವ್ಯವಸ್ಥೆ ಸರಿಯಾಗಿರಬೇಕು. ಸ್ಥಿರವಾದ ಆಸನ ಅತೀ ಮುಖ್ಯ. ಇದಕ್ಕಾಗಿ ಸೋಫಾದಂತಹ ಕುಶನ್ ಇರುವ ಆಸನವನ್ನು ಉಪಯೋಗಿಸಬಾರದು. ಇಲ್ಲಿ ಕೃಷ್ಣ ಯಾವ ರೀತಿಯ ಆಸನ ಯೋಗ್ಯ ಎನ್ನುವುದನ್ನು ವಿವರಿಸಿದ್ದಾನೆ. ನಾವು ಕುಳಿತು ಕೊಳ್ಳುವ ಆಸನ ಬಹಳ ತಗ್ಗಾಗಿ ಇರಬಾರದು ಬಹಳ ಎತ್ತರದಲ್ಲಿಯೂ ಇರಬಾರದು. ಕುಳಿತುಕೊಳ್ಳುವ ಸ್ಥಳದಲ್ಲಿ ಮೊದಲು ದರ್ಬೆಯ ಚಾಪೆಯನ್ನು ಹಾಸಬೇಕು. ಅದರ ಮೇಲೆ ಕೃಷ್ಣಾಜಿನವನ್ನು(ಸಂಸಾರಿಗಳು) ಅಥವಾ ವ್ಯಾಗ್ರಾಜಿನ(ಸಂಸಾರವನ್ನು ತ್ಯಜಿಸಿದ-ನೈಷ್ಠಿಕ ಬ್ರಹ್ಮಚಾರಿಗಳು)ವನ್ನು ಹಾಸಬೇಕು. ಅದರ ಮೇಲೆ ಬಟ್ಟೆ (ರೇಷ್ಮೆಯ ಪಟ್ಟೆ ಅಥವಾ ದಾವಳಿ). ಇದು ಧ್ಯಾನಕ್ಕೆ ಅತ್ಯಂತ ಶ್ರೇಷ್ಠ ಆಸನ.

ಇಲ್ಲಿ ದರ್ಬೆಯ ಚಾಪೆಯನ್ನು ಉಪಯೋಗಿಸಲು ಹೇಳಿದ್ದಾರೆ. ಮೇಲ್ನೋಟಕ್ಕೆ ದರ್ಬೆ ವ್ಯರ್ಥವಾಗಿ ಬೆಳೆಯುವ ಹುಲ್ಲು; ಆದರೆ ವಾತಾವರಣದಲ್ಲಿರುವ ದುಷ್ಟಶಕ್ತಿಯನ್ನು ನಿಯಂತ್ರಿಸುವ ಅಮೋಘ ಶಕ್ತಿ ದರ್ಬೆಗಿದೆ. ಅದಕ್ಕಾಗಿ ಯಜ್ಞ-ಯಾಗದಿಗಳಲ್ಲಿ ದರ್ಬೆಯನ್ನು ಉಂಗುರವಾಗಿ ಧರಿಸುತ್ತಾರೆ ಹಾಗು ದುಷ್ಟ ಶಕ್ತಿ ನಿಯಂತ್ರಕವಾಗಿ ಯಜ್ಞಕುಂಡದ ಸುತ್ತಲೂ ದರ್ಬೆಯನ್ನು  ಇಡುತ್ತಾರೆ. ಧ್ಯಾನ ಕಾಲದಲ್ಲಿ ಯಾವ ದುಷ್ಟಶಕ್ತಿ ನಮಗೆ ತೊಂದರೆ ಕೊಡದಂತೆ ಇಲ್ಲಿ ದರ್ಬೆಯ ಚಾಪೆ ನಮಗೆ ಸಹಾಯ ಮಾಡುತ್ತದೆ. ಕೃಷ್ಣಾಜಿನ ಹಾಗು ಪಟ್ಟೆ ಮಹತ್ತಾದ ಸಾತ್ವಿಕ ಕಂಪನವನ್ನು ನಮಗೊದಗಿಸುತ್ತದೆ. ಇದು ನೆಲದಿಂದ ನಮ್ಮ ದೇಹಕ್ಕೆ ಕೆಟ್ಟ ಕಂಪನ ಪ್ರವೇಶಿಸದಂತೆ ತಡೆಯುತ್ತದೆ. ನಮ್ಮಲ್ಲಿ ಕೆಲವರು ಮರದ ಮಣೆಯನ್ನು ಉಪಯೋಗಿಸುತ್ತಾರೆ. ಆದರೆ ಮಣೆಯಲ್ಲಿ ಕುಳಿತಾಗ ನಮ್ಮ ದೇಹದ ಕೆಲವು ಭಾಗ ನೆಲವನ್ನು ಸ್ಪರ್ಶಿಸುವ ಸಾಧ್ಯತೆ ಇದೆ. ಅದಕ್ಕಾಗಿ ಕೃಷ್ಣ ಹೇಳಿದ ಈ ಮೇಲಿನ  ಆಸನ ಬಹಳ ಸೂಕ್ತ. ಈ ರೀತಿಯ ಆಸನವನ್ನು ತಯಾರಿಸಿಕೊಂಡು ನಮಗೆ ಸಾಧ್ಯವಾದ ಭಂಗಿ(Posture)ಯಲ್ಲಿ ನೆಟ್ಟಗೆ ಕುಳಿತುಕೊಳ್ಳಬೇಕು. ನಮಗೆ ಸಾಧ್ಯವಾಗದ ಆಸನದಲ್ಲಿ ಬಲವಂತವಾಗಿ ಕೂರುವುದು ಧ್ಯಾನಕ್ಕೆ ಪೂರಕವಲ್ಲ. ಸಾಮಾನ್ಯವಾಗಿ ವಜ್ರಾಸನ ಬಹಳ ಪ್ರಸಿದ್ಧ. ಈ ಆಸನದಲ್ಲಿ ನಮ್ಮ ದೇಹ ನೆಟ್ಟಗಿರುತ್ತದೆ ಹಾಗು ಇದು ಧ್ಯಾನಕ್ಕೆ ಪೂರಕ. ಈ ಬಗ್ಗೆ ಮುಂದೆ ವಿವರವಾಗಿ ಹದಿಮೂರನೇ ಶ್ಲೋಕದಲ್ಲಿ  ಕೃಷ್ಣ ವಿವರಿಸುತ್ತಾನೆ.

ಮೇಲೆ ಹೇಳಿದ ರೀತಿ ಆಸನವನ್ನು ಸಿದ್ಧ ಪಡಿಸಿಕೊಂಡು ಕುಳಿತ ತಕ್ಷಣ ಧ್ಯಾನ ಸಾಧ್ಯವಾಗುವುದಿಲ್ಲ. ಆಸನದ ಮೇಲೆ ಸೂಕ್ತ ಭಂಗಿಯಲ್ಲಿ ಕೂತು ಮನಸ್ಸನ್ನು ಭಗವಂತನ ಕಡೆಗೆ ಏಕಾಗ್ರ ಮಾಡಬೇಕು. ‘ಏಕಾಗ್ರ’ ಎನ್ನುವ ಪದಕ್ಕೆ ಎರಡು ಅರ್ಥವಿದೆ. ಏಕ+ಅಗ್ರ-ಬಾಣದಂತೆ ಒಂದೇ ಗುರಿ. ಯಾವುದಕ್ಕೆ ಗುರಿ ಇಡುವುದು ಎಂದರೆ ಅದಕ್ಕೆ ಇದೇ ಪದದಲ್ಲಿ ಉತ್ತರವಿದೆ.  ‘ಏಷ ಏವ ಕರೋತೀತಿ ಏಕಾಗ್ರಹಃ’ ಯಾರೊಬ್ಬನು ಎಲ್ಲ ಜಗತ್ತಿನ ಸೃಷ್ಟಿ-ಸ್ಥಿತಿ-ಸಂಹಾರ-ನಿಯಮನ-ಜ್ಞಾನಾಜ್ಞಾನ-ಬಂಧ-ಮೊಕ್ಷಗಳಿಗೆ ಕಾರಣನೋ ಅವನಲ್ಲಿ ಮನಸ್ಸನ್ನು ನೆಲೆಗೊಳಿಸುವುದು ಏಕಾಗ್ರ.  ಬಾಲ್ಯದಿಂದ ಬೆಳೆಸಿಕೊಂಡು ಬಂದ ಅಭ್ಯಾಸವನ್ನು ಬಿಟ್ಟು ಹೊಸ ಅಭ್ಯಾಸಕ್ಕೆ ತನ್ನನ್ನು ತಾನು ಅಣಿಗೊಳಿಸಬೇಕಾದರೆ ಮನಸ್ಸಿಗೆ ಬಹಳ ಸಮಯ ಬೇಕಾಗುತ್ತದೆ. ಹೀಗಾಗಿ ಧ್ಯಾನಕ್ಕೆ ಕೂತ ತಕ್ಷಣ ಮನಸ್ಸು ಏಕಾಗ್ರವಾಗಲಿಲ್ಲ ಎಂದು ಯಾರೂ ಗಾಬರಿಯಾಗುವುದು ಬೇಡ. ನಿರಂತರ ಪ್ರಯತ್ನವನ್ನು ಎಂದೂ ಕೈಬಿಡದೆ ಛಲದಿಂದ ಸಾಧನೆ ಮಾಡಿದಾಗ ಏಕಾಗ್ರತೆ ಸಾಧ್ಯ.

ಮನಸ್ಸು ಏಕಾಗ್ರವಾದ ನಂತರ ‘ಯತಚಿತ್ತ ಇಂದ್ರಿಯ ಕ್ರಿಯಃ’ – ಎಲ್ಲ ಬಾಹ್ಯಇಂದ್ರಿಯ ಕ್ರಿಯೆಯನ್ನು ಸಂಪೂರ್ಣ ಸ್ಥಬ್ಧಗೊಳಿಸಬೇಕು. ಅಂದರೆ ಈ ಸ್ಥಿತಿಯಲ್ಲಿ ಹೊರಗಿನ ಶಬ್ದ ನಮಗೆ ಕೇಳಿಸದು, ಬಾಹ್ಯ ಕಂಪು ಮೂಗಿಗೆ ಬಡಿಯದು. ಒಂದು ವೇಳೆ ಒಂದು ಸೊಳ್ಳೆ ಕಚ್ಚಿದರೂ ಆ ನೋವಿನ ಅರಿವು ನಮಗಾಗುವುದಿಲ್ಲ. ಇದು ನಿದ್ದೆಯಂತೆ; ನಿದ್ದೆಯಲ್ಲಿ ನಮಗೆ ಅಂತರಂಗ ಪ್ರಪಂಚ ಎಚ್ಚರವಿರುವುದಿಲ್ಲ, ಆದರೆ ಧ್ಯಾನದಲ್ಲಿ ಅಂತರಂಗ ಪ್ರಪಂಚ ಎಚ್ಚರವಿರುತ್ತದೆ. ಹೀಗೆ ಬಾಹ್ಯೇಂದ್ರಿಯ ಕ್ರಿಯೆಯನ್ನು ಸ್ಥಬ್ಧಗೊಳಿಸಿ ನಂತರ ಚಿತ್ತವನ್ನು ನಿಯಂತ್ರಿಸಬೇಕು. ನಮ್ಮ ಚಿತ್ತದಲ್ಲಿ ಅದೆಷ್ಟು ವಿಚಾರ ಸಂಗ್ರಹವಾಗಿರುತ್ತದೆ. ಆದರೆ ಹಿಂದೆ ದಾಖಲಿಸಿರುವ ಎಲ್ಲ ವಿಷಯವನ್ನೂ ಬಿಟ್ಟು ಕೇವಲ ಭಗವಂತನ ಗುಣದ ಅಂಶವನ್ನು ಮಾತ್ರ ಧ್ಯಾನ ಮಾಡಬೇಕು.

ಹೀಗೆ ನಮ್ಮ ಮನಸ್ಸು ಚಿತ್ತವನ್ನು ನಿಯಂತ್ರಿಸಲು ಜನ್ಮ ಜನ್ಮಾಂತರದ ಸಾಧನೆ ಬೇಕು. ಕೆಲವರು ಈ ಸಾಧನೆಯಲ್ಲಿ ನಿರಂತರ ಪ್ರಯತ್ನ ಮಾಡಿ ಯಾವುದೇ ಸಿದ್ಧಿಫಲಿಸದೇ ನಿರಾಶರಾಗುವುದಿದೆ. ಆದರೆ ಹಿಂದೆ ಹೇಳಿದಂತೆ ನಾವು ಅಧ್ಯಾತ್ಮದಲ್ಲಿ ಇಡುವ ಒಂದು ತೊದಲು ಹೆಜ್ಜೆ ಕೂಡಾ ವ್ಯರ್ಥವಲ್ಲ. ಈ ಜನ್ಮದಲ್ಲಿ ಸಿದ್ಧಿ ಸಾಧ್ಯವಾಗದೇ ಇದ್ದರೆ ಖಂಡಿತ ಮುಂದಿನ ಜನ್ಮದಲ್ಲಿ ನಮ್ಮ ಸಾಧನೆ ನಾವು ಈ ಜನ್ಮದಲ್ಲಿ ಎಲ್ಲಿ ನಿಂತಿದ್ದೆವೋ ಅಲ್ಲಿಂದ ಆರಂಭವಾಗುತ್ತದೆ. ಆದ್ದರಿಂದ ಎಂದೂ ನಿರಾಶೆ ಬೇಡ, ಪ್ರಯತ್ನ ಮಾತ್ರ ನಿರಂತರವಾಗಿರಲಿ.
ಹೀಗೆ ನಮ್ಮ ಮನಸ್ಸು ಮತ್ತು ಚಿತ್ತ ನಿಯಂತ್ರಣಕ್ಕೆ ಬಂದ ಮೇಲೆ ನಾವು ಅದನ್ನು ಅದೇ ಸ್ಥಿತಿಯಲ್ಲಿ ಹಿಡಿದಿಟ್ಟುಕೊಳ್ಳಬೇಕು(ಯುಂಜ್ಯಾದ್ ಯೋಗಮ್). ಈ ಸ್ಥಿತಿಯಲ್ಲಿ ನಮ್ಮ ಜ್ಞಾನಾನಂದಮಯವಾದ ಆತ್ಮಕ್ಕೆ ಹಿಡಿದ ಕೊಳೆ ತೊಳೆದುಹೋಗಿ ಆತ್ಮಶುದ್ಧಿಯಾಗುತ್ತದೆ. ಇಂತಹ ಶುದ್ಧವಾದ ಆತ್ಮದಿಂದ ಪವಿತ್ರನಾದ ಭಗವಂತನನ್ನು ಕಾಣಲು ಸಾಧ್ಯ.

ಮುಂದಿನ ಶ್ಲೋಕದಲ್ಲಿ ಕೃಷ್ಣ ಧ್ಯಾನ ಭಂಗಿ(ಕುಳಿತುಕೊಳ್ಳುವ ರೀತಿ)ಯ ಬಗ್ಗೆ ಇನ್ನೂ ಸ್ಪಷ್ಟವಾದ ಚಿತ್ರಣವನ್ನು ಕೊಡುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( विस्तार से ध्यान योग का विषय )
शुचौ देशे प्रतिष्ठाप्य स्थिरमासनमात्मनः।
नात्युच्छ्रितं नातिनीचं चैलाजिनकुशोत्तरम्‌॥

शुद्ध भूमि में, जिसके ऊपर क्रमशः कुशा, मृगछाला और वस्त्र बिछे हैं, जो न बहुत ऊँचा है और न बहुत नीचा, ऐसे अपने आसन को स्थिर स्थापन करके
॥11॥

तत्रैकाग्रं मनः कृत्वा यतचित्तेन्द्रियक्रियः।
उपविश्यासने युञ्ज्याद्योगमात्मविशुद्धये॥

उस आसन पर बैठकर चित्त और इन्द्रियों की क्रियाओं को वश में रखते हुए मन को एकाग्र करके अन्तःकरण की शुद्धि के लिए योग का अभ्यास करे
॥12॥

Shuchau deshe pratishthaapya sthiramaasanamaatmanah;
Naatyucchritam naatineecham chailaajinakushottaram.

In a clean spot, having established a firm seat of his own, neither too high nor too low,made of a cloth, a skin and kusha grass, one over the other,

Tatraikaagram manah kritwaa yatachittendriyakriyah;
Upavishyaasane yunjyaadyogamaatmavishuddhaye.

There, having made the mind one-pointed, with the actions of the mind and the sensescontrolled, let him, seated on the seat, practise Yoga for the purification of the self.

 ಅಧ್ಯಾಯ - 06 : ಶ್ಲೋಕ – 13, 14

ಸಮಂ ಕಾಯಶಿರೋಗ್ರೀವಂ ಧಾರಯನ್ನಚಲಂ ಸ್ಥಿರಃ ।ಸಂಪ್ರೇಕ್ಷ್ಯ ನಾಸಿಕಾಗ್ರಂ ಸ್ವಂ ದಿಶಶ್ಚಾನವಲೋಕಯನ್ ॥೧೩॥ಪ್ರಶಾಂತಾತ್ಮಾ ವಿಗತಭೀರ್ಬ್ರಹ್ಮಚಾರಿವ್ರತೇ ಸ್ಥಿತಃ ।ಮನಃ ಸಂಯಮ್ಯ ಮಚ್ಚಿತ್ತೋ ಯುಕ್ತ ಆಸೀತ ಮತ್ಪರಃ ॥೧೪॥

ಸಮಮ್  ಕಾಯ ಶಿರಃ ಗ್ರೀವಮ್  ಧಾರಯನ್ ಅಚಲಮ್  ಸ್ಥಿರಃ ।
ಸಂಪ್ರೇಕ್ಷ್ಯ ನಾಸಿಕಾ ಅಗ್ರಮ್  ಸ್ವಮ್  ದಿಶಃ ಚ ಅನವಲೋಕಯನ್ ||
ಪ್ರಶಾಂತ ಆತ್ಮಾ ವಿಗತ ಭೀಃ ಬ್ರಹ್ಮಚಾರಿವ್ರತೇ ಸ್ಥಿತಃ ।
ಮನಃ ಸಂಯಮ್ಯ ಮತ್ ಚಿತ್ತಃ ಯುಕ್ತಃ  ಆಸೀತ ಮತ್ ಪರಃ --

ಬೆನ್ನು-ತಲೆ-ಕತ್ತುಗಳನ್ನು ನೆಟ್ಟಗೆ ನಿಲ್ಲಿಸಿ, ನಲುಗದೆ ಗಟ್ಟಿಯಾಗಿ ಕುಳಿತು, ಅತ್ತಿತ್ತ ನೋಡದೆ ತನ್ನ ಮೂಗಿನ ತುದಿಯಲ್ಲೆ ನೋಟವಿಟ್ಟು, ಬಗೆಯನ್ನು ವಿಷಯಗಳತ್ತ ಹರಿಯಗೊಡದೆ ಹದಗೊಳಿಸಿ, ಅಂಜದೆ, ಬ್ರಹ್ಮಚರ್ಯದಲ್ಲಿದ್ದು, ನನ್ನನ್ನೇ ಪರದೈವವೆಂದು ನಂಬಿ, ನನ್ನನ್ನೆ ನೆನೆಯುತ್ತ ಸಮಾಧಿಯನ್ನು ಸಾಧಿಸಬೇಕು.

ಧ್ಯಾನಕ್ಕೆ ಕುಳಿತಾಗ ಸೊಂಟದಿಂದ ಮೇಲಿನ ನಮ್ಮ ಶರೀರ ನೆಟ್ಟಗೆ ಸರಳರೇಖೆಯಲ್ಲಿರಬೇಕು. ಬೆನ್ನು ಬಗ್ಗಿರಕೂಡದು,  ಕುತ್ತಿಗೆ, ತಲೆ ವಾಲಿರಬಾರದು. ದೇಹವನ್ನು ನಿಶ್ಚಲಗೊಳಿಸಬೇಕು. ಸ್ವಲ್ಪವೂ ಅಲ್ಲಡಿಸಬಾರದು. ಈ ರೀತಿ ಕುಳಿತುಕೊಳ್ಳದೆ ಮನಸ್ಸಿನ ಸ್ಥಿರತೆ ಅಸಾಧ್ಯ. ಮನಸ್ಸು ಈ ದೇಹವೆಂಬ ಪಾತ್ರೆಯೊಳಗಿನ ನೀರಿನಂತೆ. ಪಾತ್ರೆ ಅಲ್ಲಾಡಿದರೆ ಮನಸ್ಸೆಂಬ ನೀರಿನಲ್ಲಿ ಅಲೆಗಳು ಮೂಡುತ್ತವೆ, ಇದರಿಂದ ಏಕಾಗ್ರತೆಗೆ ಭಂಗವಾಗುತ್ತದೆ.

ದೇಹದಲ್ಲಿ ಇನ್ನೊಂದು ಪ್ರಮುಖ ಅಂಗ ಕಣ್ಣು. ದೇಹವನ್ನು ಸ್ಥಿರಗೊಳಿಸಿದ ಮೇಲೆ ಕಣ್ಣನ್ನು ಸ್ಥಿರಗೊಳಿಸಬೇಕು. ಮೂಗಿನ ತುದಿಯಲ್ಲಿ ದೃಷ್ಟಿಯನ್ನು ನೆಟ್ಟು ಯಾವ ದಿಕ್ಕಿನ ಯಾವ ಆಕೃತಿಯೂ ಕಾಣದಂತೆ ನೇರವಾಗಿ ಒಂದೇ ಕಡೆ ದೃಷ್ಟಿ ಸ್ಥಿರಗೊಳಿಸಬೇಕು.(ಕಣ್ಣನ್ನು ಮುಚ್ಚಿ ಧ್ಯಾನ ಮಾಡಬಹುದು, ಆದರೆ ಕಣ್ಣನ್ನು ಮುಚ್ಚಿದರೆ ನಿದ್ದೆ ಮಾಡುವ ಸಾಧ್ಯತೆ ಹೆಚ್ಚು).

ಈ ರೀತಿ ಧ್ಯಾನದ ಸ್ಥಿತಿಯನ್ನು ತಲುಪಿದಾಗ ಮನಸ್ಸು ಪ್ರಶಾಂತವಾಗುತ್ತದೆ. ಯಾವ ಗೊಂದಲವೂ ಇಲ್ಲದ ಹೇಳಲಾಗದ ವಿಚಿತ್ರ ಆನಂದದಸ್ಥಿತಿಯನ್ನು ನಾವು ಈ ಸ್ಥಿತಿಯಲ್ಲಿ  ಅನುಭವಿಸುತ್ತೇವೆ. ಇದರಿಂದ ನಮಗೆ ಎಲ್ಲಾ ಭಯವೂ ಹೊರಟು ಹೋಗುತ್ತದೆ. ಧ್ಯಾನಕ್ಕೆ ಅತಿ ಮುಖ್ಯವಾಗಿ ಬೇಕಾದ  ಇನ್ನೊಂದು ಅಂಶ ಬ್ರಹ್ಮಚರ್ಯ ಪಾಲನೆ. ಇಲ್ಲಿ ಬ್ರಹ್ಮಚರ್ಯ ಎನ್ನುವ ಪದಕ್ಕೆ ಮೂರು ಅರ್ಥವಿದೆ. ಪರಬ್ರಹ್ಮನ ಕಡೆಗೆ ಹೋಗುವ ಧೀಕ್ಷೆ-ಬ್ರಹ್ಮಚರ್ಯ; ನಿರಂತರ ವೇದಾಧ್ಯಯನ-ಬ್ರಹ್ಮಚರ್ಯ; ಸಂಸಾರಿಗಳಾದವರು ನಿಯಮಿತ ಲೈಂಗಿಕತೆ ಪಾಲಿಸುವುದು(ಅತಿ ಸುಲಭವಾಗಿ ಲೈಂಗಿಕತೆಯಿಂದ ದೂರ ಸರಿದು ನಿಲ್ಲುವ ಕ್ಷಮತೆ ಹಾಗು ಬೇಕೆನಿಸಿದಾಗ ನಿಯಮಿತ ಲೈಂಗಿಕತೆ) ಹಾಗು ವಿರಕ್ತಿಗಳ(ನೈಷ್ಠಿಕ ಬ್ರಹ್ಮಚಾರಿ) ಲೈಂಗಿಕ ಮುಕ್ತ ಜೀವನ-ಬ್ರಹ್ಮಚರ್ಯ.

ಭಗವಂತನೇ ಸರ್ವೋತ್ತಮ ಎನ್ನುವ ಅಚಲವಾದ ಭಕ್ತಿಯಿಂದ, ಭಗವಂತನಲ್ಲಿ ಸಂಪೂರ್ಣ ಭರವಸೆಯನ್ನಿಟ್ಟು ಸದಾ ಭಗವಂತನನ್ನು ನೆನೆಯುತ್ತ, ಎಂದೂ ಎದೆಗುಂದದೆ ಸಮಾಧಿಯನ್ನು ಸಾಧಿಸಬೇಕು.

ಧ್ಯಾನದ  ಪರಿಣಾಮವೇನು? ನಾವು ಏಕೆ ಧ್ಯಾನ ಮಾಡಬೇಕು? ಉತ್ತರ ಮುಂದಿನ ಶ್ಲೋಕ!

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

समं कायशिरोग्रीवं धारयन्नचलं स्थिरः।
सम्प्रेक्ष्य नासिकाग्रं स्वं दिशश्चानवलोकयन्‌॥

काया, सिर और गले को समान एवं अचल धारण करके और स्थिर होकर, अपनी नासिका के अग्रभाग पर दृष्टि जमाकर, अन्य दिशाओं को न देखता हुआ
॥13॥

प्रशान्तात्मा विगतभीर्ब्रह्मचारिव्रते स्थितः।
मनः संयम्य मच्चित्तो युक्त आसीत मत्परः॥

ब्रह्मचारी के व्रत में स्थित, भयरहित तथा भलीभाँति शांत अन्तःकरण वाला सावधान योगी मन को रोककर मुझमें चित्तवाला और मेरे परायण होकर स्थित होए
॥14॥

Samam kaayashirogreevam dhaarayannachalam sthirah;
Samprekshya naasikaagram swam dishashchaanavalokayan.

Let him firmly hold his body, head and neck erect and perfectly still, gazing at the tip ofhis nose, without looking around.

Prashaantaatmaa vigatabheer brahmachaarivrate sthitah;
Manah samyamya macchitto yukta aaseeta matparah.

Serene-minded, fearless, firm in the vow of a Brahmachari, having controlled the mind,thinking of Me and balanced in mind, let him sit, having Me as his supreme goal.

ಅಧ್ಯಾಯ - 06 : ಶ್ಲೋಕ – 15

ಮುಂದಿನ ಶ್ಲೋಕವನ್ನು ವಿಶ್ಲೇಷಿಸುವ ಮೊದಲು ಇಲ್ಲಿ ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಒಂದು ಸರ್ವೇಸಾಮಾನ್ಯ ಪ್ರಶ್ನೆಯನ್ನು ವಿಶ್ಲೇಷಿಸೋಣ. ಯುದ್ಧರಂಗದಲ್ಲಿ ನಿಂತ ಅರ್ಜುನನಿಗೆ ಕೃಷ್ಣ ಭಗವದ್ಗೀತೆ ಉಪದೇಶ ಮಾಡಿದ. ಹೀಗಿರುವಾಗ ಆತ ಧ್ಯಾನದ ಬಗ್ಗೆ, ಧ್ಯಾನ ಸಮಾಧಿಯಬಗ್ಗೆ, ಧ್ಯಾನಕ್ಕೆ ಕುಳಿತುಕೊಳ್ಳುವ ವಿಧಾನದ ಬಗ್ಗೆ ಏಕೆ ಪ್ರಸ್ತಾಪಿಸಿದ? ಇದರ ಅಗತ್ಯವೇನಿತ್ತು? ಇದು ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಪ್ರಶ್ನೆ.  ನಿಜವಾಗಿ ನೋಡಿದರೆ ಅರ್ಜುನನಿಗೆ ಈ ಪ್ರಶ್ನೆಗಳಿರಲಿಲ್ಲ, ಅರ್ಜುನನ ಪ್ರಶ್ನೆಯೇ ಬೇರೆ. ಆ ಪ್ರಶ್ನೆಗೆ ಉತ್ತರ ಕೊಡುವಾಗ ಧ್ಯಾನದ ಪ್ರಶ್ನೆ ಸಾಮಾನ್ಯವಾಗಿ ಬಂದಾಗ, ಕೃಷ್ಣ ಇಡೀ ನರಸಮುದಾಯಕ್ಕೆ ಸಹಾಯವಾಗುವಂತೆ ಸಂಪೂರ್ಣ ಧ್ಯಾನದ ಪ್ರಕ್ರೀಯೆಯನ್ನು ವಿವರಿಸಿದ. ಕೃಷ್ಣ ಯುದ್ಧರಂಗದಲ್ಲಿ ಅದೆಷ್ಟು ಸೂಕ್ಷ್ಮವಾಗಿ ಅರ್ಜುನನಿಗೆ ಈ ಭೋದನೆ ಮಾಡಿದ್ದನೋ ನಮಗೆ ತಿಳಿಯದು, ಆದರೆ ವ್ಯಾಸ ಮಹರ್ಷಿಗಳು ಇದನ್ನು ಎಳೆ ಎಳೆಯಾಗಿ ಬಿಡಿಸಿ ಒಂದು ಅಧ್ಯಾಯ ರೂಪದಲ್ಲಿ ನಮಗೆ ಉಣಬಡಿಸಿದ್ದಾರೆ. ಭಗವದ್ಗೀತೆಯನ್ನು ಅರ್ಜುನನಿಗೆ ಉಪದೇಶ ಮಾಡುವಾಗ  ಕೃಷ್ಣನ ಮುಂದಿದ್ದದ್ದು ಕೇವಲ ಅರ್ಜುನ ಮಾತ್ರವಲ್ಲ; ಸಮಸ್ತ ಸಾತ್ವಿಕ ನರ ಸಮುದಾಯ. ಸರ್ವ ಸಾತ್ವಿಕರಿಗೂ  ಸತ್ಯದ ದಾರಿಯನ್ನು ತೋರಿಸುವ ಉದ್ದೇಶದಿಂದ ಗೀತೆಯ ಉಪದೇಶವಾಯಿತು. ಇದೇ ಮೂಲ ಉದ್ದೇಶದಿಂದ ಶ್ರೀಕೃಷ್ಣ ಗೀತೆಯನ್ನು ಇನ್ನೊಮ್ಮೆ ಉದ್ದವನಿಗೆ ಉಪದೇಶ ಮಾಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಯುಂಜನ್ನೇವಂ ಸದಾSSತ್ಮಾನಂ ಯೋಗೀ ನಿಯತಮಾನಸಃ ।ಶಾಂತಿಂ ನಿರ್ಬಾಣ ಪರಮಾಂ ಮತ್ ಸಂಸ್ಥಾಮಧಿಗಚ್ಛತಿ ॥೧೫॥

ಯುಂಜನ್ ಏವಮ್ ಸದಾ ಆತ್ಮಾನಮ್  ಯೋಗೀ ನಿಯತ ಮಾನಸಃ      ।
ಶಾಂತಿಮ್  ನಿರ್ಬಾಣ ಪರಮಾಮ್  ಮತ್ ಸಂಸ್ಥಾಮ್ ಅಧಿಗಚ್ಛತಿ-

ಹೀಗೆ ಭಗವಂತನನ್ನು ಸದಾ ಧ್ಯಾನಿಸುತ್ತ, ಬಗೆಯನ್ನು ಬಿಗಿ ಹಿಡಿದ ಸಾಧಕನು ದೇಹ ತೊರೆದ ಮೇಲೆ ನನ್ನಲ್ಲೇ ನೆಲೆಸುವಂಥ ಸುಖವನ್ನು ಅನುಭವಿಸುತ್ತಾನೆ.

ಈ ಅಧ್ಯಾಯದಲ್ಲಿ ಈವರೆಗೆ ಕೃಷ್ಣ ವಿವರಿಸಿದ್ದು ಮನಸ್ಸಿನಿಂದ ಮಾಡುವ ಧ್ಯಾನ. ಬಾಹ್ಯ ಇಂದ್ರಿಯವನ್ನು ಸ್ಥಬ್ಧಗೊಳಿಸಿ, ಚಿತ್ತ ಮತ್ತು ಮನಸ್ಸನ್ನು ನಿಯಂತ್ರಿಸಿ ಮಾಡುವುದು ಧ್ಯಾನ. ಇದರಿಂದಾಚೆಗಿರುವುದು ‘ತುರಿಯಾವಸ್ಥೆ’. ನಮ್ಮ ಮನಸ್ಸನ್ನು ಸಂಪೂರ್ಣ ಸ್ಥಬ್ಧಗೊಳಿಸಿ ಆತ್ಮಸ್ವರೂಪಭೂತವಾದ ಜೀವ ನೇರವಾಗಿ ಭಗವಂತನನ್ನು ನೋಡುವ ಸ್ಥಿತಿ ತುರಿಯಾವಸ್ಥೆ. ಈ ಶ್ಲೋಕದಲ್ಲಿ ಕೃಷ್ಣ ತುರಿಯಾವಸ್ಥೆಯ ಸುಳಿವು ಕೊಡುತ್ತಾನೆ. ಈ ವಿಚಾರ ಇಲ್ಲಿ ನಿಗೂಢವಾಗಿ ಅಡಗಿದೆ.

ಧ್ಯಾನದಲ್ಲಿ ನಾವು ಕಾಣುವುದು ನೇರ ಭಗವಂತನನ್ನಲ್ಲ ಬದಲಿಗೆ ಭಗವಂತನ ಪ್ರತೀಕವನ್ನು. ಏಕೆಂದರೆ ಮನಸ್ಸು ನೇರವಾಗಿ ಜ್ಞಾನಾನಂದಸ್ವರೂಪಭೂತನಾದ ಭಗವಂತನನ್ನು ಗ್ರಹಿಸಲಾರದು. ಭಗವಂತನ ನೇರ ದರ್ಶನವಾಗಬೇಕಾದರೆ, ಧ್ಯಾನದಿಂದಾಚೆಗಿನ  ತುರಿಯಾವಸ್ಥೆಗೆ ಹೋಗಬೇಕು. ಜೀವ ಸ್ವರೂಪದ ಕಣ್ಣಿನಿಂದ ಭಗವಂತನನ್ನು ಕಾಣಬೇಕು. ಮನಸ್ಸನ್ನು ನಿರಂತರವಾಗಿ ಭಗವಂತನಲ್ಲಿ ನೆಲೆಗೊಳಿಸಿ; ಮನಸ್ಸಿನ ಮೂಲಕ ಧ್ಯಾನದಲ್ಲಿ ಭಗವಂತನ ಮಾನಸ ರೂಪ ಗೋಚರವಾದ ಮೇಲೆ ಮನಸ್ಸನ್ನು ಸ್ಥಬ್ಧಗೊಳಿಸಬೇಕು. ಆಗ  ತುರಿಯಾವಸ್ಥೆ  ಜಾಗೃತವಾಗುತ್ತದೆ. ಈ ಹಂತದಲ್ಲಿ ಆತ್ಮ ಸ್ವರೂಪಕ್ಕೆ ಭಗವಂತನ ಸಂಯೋಗವಾಗುತ್ತದೆ ಹಾಗು ಆಗ ಅದು  ನೇರವಾಗಿ ಭಗವಂತನನ್ನು ಕಾಣಬಲ್ಲದು. ಈ ಸ್ಥಿತಿಯನ್ನು ತಲುಪಿದ ಧ್ಯಾನಯೋಗಿ ನಿಜವಾದ ಯೋಗಿ ಎನಿಸುತ್ತಾನೆ.

ಭಗವಂತನ ಸಾಕ್ಷಾತ್ಕಾರ ಒಂದು ಜೀವ ತನ್ನ ಸಾಧನೆಯ ಹಾದಿಯಲ್ಲಿ ಪಡೆಯಬಹುದಾದ ಅತ್ಯಂತ ಮಹತ್ತರವಾದ ಆನಂದದ ಪರಾಕಾಷ್ಠೆ. ಇದಕ್ಕಿಂತ ಮಿಗಿಲಾದ ಅರಿವು, ಆನಂದದ  ದರ್ಶನ ಇನ್ನೊಂದಿಲ್ಲ. ಈ ರೀತಿ ಭಗವಂತನ ಸಾಕ್ಷಾತ್ಕಾರವಾದವನು ಮುಂದೆಂದೂ ಈ ಸಂಸಾರ ಬಂಧದಲ್ಲಿ ಸಿಲುಕುವುದಿಲ್ಲ, ಆತ ಭಗವಂತನಲ್ಲೇ ನೆಲೆಸಿ  ಮೋಕ್ಷವನ್ನು ಪಡೆಯುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

युञ्जन्नेवं सदात्मानं योगी नियतमानसः।
शान्तिं निर्वाणपरमां मत्संस्थामधिगच्छति॥

वश में किए हुए मनवाला योगी इस प्रकार आत्मा को निरंतर मुझ परमेश्वर के स्वरूप में लगाता हुआ मुझमें रहने वाली परमानन्द की पराकाष्ठारूप शान्ति को प्राप्त होता है
॥15॥

Yunjannevam sadaa’tmaanam yogee niyatamaanasah;
Shaantim nirvaanaparamaam matsamsthaamadhigacchati.

Thus, always keeping the mind balanced, the Yogi, with the mind controlled, attains tothe peace abiding in Me, which culminates in liberation.

ಅಧ್ಯಾಯ - 06 : ಶ್ಲೋಕ – 16

ಸಮಾಧಿಯನ್ನು ಅಭ್ಯಾಸ ಮಾಡುವವರ ಜೀವನಕ್ರಮ ಹೇಗಿರಬೇಕು ಎನ್ನುವುದನ್ನು ಕೃಷ್ಣ ಮುಂದೆ ವಿವರಿಸುತ್ತಾನೆ. ಈ ಜೀವನಕ್ರಮ ಕೇವಲ ಧ್ಯಾನಕ್ಕೆ  ಮಾತ್ರ ಪೂರಕವಲ್ಲ. ನಮ್ಮ ಅಧ್ಯಯನಕ್ಕೆ, ನಮ್ಮ ಆರೋಗ್ಯ ಜೀವನಕ್ಕೆ  ಈ ಶಿಸ್ತು ಬಹಳ ಮುಖ್ಯ. ನಮ್ಮ ಪ್ರತಿಯೊಂದು ಅನುಷ್ಠಾನವನ್ನು ಶಾಸ್ತ್ರಕಾರರು ಇದಕ್ಕನುಗುಣವಾಗಿ   ವಿನ್ಯಾಸ ಮಾಡಿದ್ದಾರೆ. ಆದರೆ ಇಂದು ನಮಗೆ ಈ ಎಚ್ಚರವಿಲ್ಲ. ಏಕಾದಶಿ ಉಪವಾಸವಿರಲಿ, ಇನ್ಯಾವುದೇ ಅನುಷ್ಠಾನವಿರಲಿ,ಅದನ್ನು ಧ್ಯಾನಕ್ಕೆ ಪೂರಕವಾಗಿ ಪಾಲಿಸಬೇಕು. ಈ ಜ್ಞಾನವಿಲ್ಲದೆ ಕೇವಲ ಯಾಂತ್ರಿಕವಾಗಿ ಪಾಲಿಸುವ ಯಾವ ಅನುಷ್ಠಾನವೂ ನಮ್ಮನ್ನು ಎತ್ತರಕ್ಕೆ ಕೊಂಡೊಯ್ಯಲಾರದು.

ನಾತ್ಯಶ್ನತಸ್ತು ಯೋಗೋSಸ್ತಿ ನ ಚಾತ್ಯಂತಮನಶ್ನತಃ ।ನ ಚಾತಿಸ್ವಪ್ನಶೀಲಸ್ಯ ಜಾಗ್ರತೋ ನೈವ ಚಾರ್ಜುನ ॥೧೬॥

ನ ಅತಿ  ಅಶ್ನತಃ ತು ಯೋಗಃ ಅಸ್ತಿ ನ ಚಾತ್ಯಂತಮ್ ಅನಶ್ನತಃ ।
ನ ಚ ಅತಿ ಸ್ವಪ್ನ ಶೀಲಸ್ಯ ಜಾಗ್ರತಃ ನ ಏವ ಚ ಅರ್ಜುನ-

 ಹೇ ಅರ್ಜುನ, ಹೊಟ್ಟೆಬಾಕನಿಗೆ ಧ್ಯಾನಯೋಗ ಸಾಧ್ಯವಿಲ್ಲ. ತೀರ ತಿನ್ನದವನಿಗೂ ಇಲ್ಲ. ತುಂಬಾ ತೂಕಡಿಸುವವನಿಗೂ ಇಲ್ಲ. ನಿದ್ದೆಗೇಡಿಗೂ ಇಲ್ಲ.

ಅತಿಯಾಗಿ ತಿನ್ನುವವನಿಗೆ ಧ್ಯಾನ ಸಾಧ್ಯವಿಲ್ಲ. ಹೊಟ್ಟೆಗೆ ಹೆಚ್ಚು ಆಹಾರ ಹೋದಾಗ ಮನಸ್ಸು ನಿಸ್ತೇಜವಾಗುತ್ತದೆ. ಆದ್ದರಿಂದ ಮನನಶೀಲ ಹೊಟ್ಟೆಬಾಕನಾಗಿರಬಾರದು. ಅತಿಯಾದ ಆಹಾರ ಸೇವನೆ ಒಳ್ಳೆಯದಲ್ಲ. ಈ ಕಾರಣಕ್ಕಾಗಿ ಅತಿಥಿ ಸತ್ಕಾರದಲ್ಲಿ ಒತ್ತಾಯ ಮಾಡಿ ಬಡಿಸುವುದು ತಪ್ಪು. ಅದೇ ರೀತಿ ಯಾವಾಗಲೂ ಸರಿಯಾಗಿ ತಿನ್ನದೆ ಇದ್ದರೆ  ಅದರಿಂದ ದೇಹ ಪೋಷಣೆ ಇಲ್ಲವಾಗಿ ದೇಹ ಕುಸಿಯುತ್ತದೆ. ಭಗವಂತನ ಸಾಕ್ಷಾತ್ಕಾರವಾಗುವುದು ಈ ದೇಹದ ಮೂಲಕವೇ. ಆದ್ದರಿಂದ ನಾವು ನಿಯತವಾದ ಆಹಾರವನ್ನು ನಿಯತ ಕಾಲದಲ್ಲಿ ತಿನ್ನುವ ಅಭ್ಯಾಸ ಮಾಡಿಕೊಳ್ಳಬೇಕು.

ಆಹಾರದ ಜೊತೆಗೆ ನಮ್ಮ ನಿದ್ದೆ ಮಾಡುವ ಅಭ್ಯಾಸ ನಿಯತವಾಗಿರಬೇಕು. ನಾವು ಹೇಗೆ ಅಭ್ಯಾಸ ಮಾಡಿಕೊಂಡೆವೋ ಹಾಗೆ ನಮ್ಮ  ಮನಸ್ಸು. ಎಂದೂ ಅತಿ ನಿದ್ದೆ ಒಳ್ಳೆಯದಲ್ಲ, ಅದೇ ರೀತಿ ನಿದ್ದೆಗೆಟ್ಟರೆ ಖಂಡಿತ ಧ್ಯಾನ ಸಾಧ್ಯವಿಲ್ಲ. ಆಹಾರ ನಿದ್ದೆ ನಿಯತವಾಗಿದ್ದರೆ ಅದು ನಮ್ಮ ಆರೋಗ್ಯಕ್ಕೂ ಪೂರಕ ಹಾಗು ಧ್ಯಾನಕ್ಕೆ ಇದು ಅತ್ಯಗತ್ಯ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

नात्यश्नतस्तु योगोऽस्ति न चैकान्तमनश्नतः।
न चाति स्वप्नशीलस्य जाग्रतो नैव चार्जुन॥

हे अर्जुन! यह योग न तो बहुत खाने वाले का, न बिलकुल न खाने वाले का, न बहुत शयन करने के स्वभाव वाले का और न सदा जागने वाले का ही सिद्ध होता है
॥16॥

Naatyashnatastu yogo’sti nachaikaantamanashnatah;
Na chaatiswapnasheelasya jaagrato naiva chaarjuna.

Verily Yoga is not possible for him who eats too much, nor for him who does not eat atall;
nor for him who sleeps too much, nor for him who is (always) awake, O Arjuna!

ಅಧ್ಯಾಯ - 06 : ಶ್ಲೋಕ – 17

ಯುಕ್ತಾಹಾರವಿಹಾರಸ್ಯ ಯುಕ್ತಚೇಷ್ಟಸ್ಯ ಕರ್ಮಸು ।ಯುಕ್ತಸ್ವಪ್ನಾವಬೋಧಸ್ಯ ಯೋಗೋ ಭವತಿ ದುಃಖಹಾ ॥೧೭॥

ಯುಕ್ತ ಆಹಾರ ವಿಹಾರಸ್ಯ ಯುಕ್ತ ಚೇಷ್ಟಸ್ಯ ಕರ್ಮಸು ।
ಯುಕ್ತ ಸ್ವಪ್ನ ಅವಬೋಧಸ್ಯ ಯೋಗಃ  ಭವತಿ ದುಃಖ ಹಾ-ತಕ್ಕ ತಿನಿಸು-

ತಿರುಗಾಟ, ತಕ್ಕಷ್ಟೆ ಕಾಯಕ, ತಕ್ಕಂತೆ ನಿದ್ದೆ-ಎಚ್ಚರ ಸಾಧಿಸಿದವನಿಗೆ ಧ್ಯಾನಯೋಗದಿಂದ ದುಗುಡದೂರ.

ಯೋಗಾಭ್ಯಾಸ ಮಾಡುವಾಗ ನಮ್ಮ ಜೀವನಕ್ರಮ ಶಿಸ್ತುಬದ್ಧವಾಗಿರಬೇಕು. ನಿಯಮಿತವಾದ ಹಾಗು ಯೋಗ್ಯವಾದ ಆಹಾರ ಸೇವನೆ ಬಹಳ ಮುಖ್ಯ. ಧ್ಯಾನಕ್ಕೆ ಮನಸ್ಸನ್ನು ಅಣಿಗೊಳಿಸುವ ಸಾತ್ವಿಕ ಆಹಾರ ಸೇವನೆ ಧ್ಯಾನಕ್ಕೆ ಪೂರಕ. ಕೆಲವು ಆಹಾರ ನಮ್ಮ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಉದಾಹರಣೆಗೆ ಈರುಳ್ಳಿ ಮತ್ತು ಬೆಳ್ಳುಳ್ಳಿ. ಇವುಗಳಲ್ಲಿ ಔಷಧೀಯ ಗುಣವಿದ್ದರೂ ಕೂಡ ಇದು ನಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರುವ ಆಹಾರ. ನಾವು ಈರುಳ್ಳಿ ಅಥವಾ ಬೆಳ್ಳುಳ್ಳಿಯನ್ನು ಅತಿಯಾಗಿ ಸೇವಿಸಿದ ದಿನ ನಮಗೆ ಕೆಟ್ಟ ಕನಸು ಬೀಳುವುದು ಈ ಆಹಾರ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ ಎನ್ನುವುದಕ್ಕೆ ಪುರಾವೆ. ವೇದಾಧ್ಯಾಯನ ಮಾಡುವವರು ಇಂತಹ ಮನಸ್ಸನ್ನು ಕೆಡಿಸುವ ಆಹಾರವನ್ನು ಸೇವಿಸಬಾರದು. ನಮ್ಮ ದೇಹದ ಪೋಷಣೆಯ ಜೊತೆಗೆ ನಮ್ಮ ಮನಸ್ಸಿಗೆ ಸಾತ್ವಿಕ ಪೋಷಣೆ ಕೊಡುವ ಆಹಾರವನ್ನು ಇಲ್ಲಿ ಕೃಷ್ಣ  “ಯುಕ್ತಾಹಾರ” ಎಂದು ಕರೆದಿದ್ದಾನೆ.

ನಮ್ಮ ಮನಸ್ಸಿಗೆ ನಾವು ಎಷ್ಟು ಬೇಕೋ ಅಷ್ಟು ವಿರಾಮ ಕೊಡುವುದು ಬಹಳ ಮುಖ್ಯ. ಆದರೆ ಈ ವಿರಾಮ ಸೋಮಾರಿತನವಾಗಿ ರೂಪುಗೊಳ್ಳಬಾರದು. ಮನಸ್ಸಿಗೆ ವಿರಾಮ ಕೊಡುವಾಗ ಯಾವ ಚಿಂತನೆ ಕೂಡ ಮಾಡದೆ ಸಂಪೂರ್ಣ ವಿಶ್ರಾಂತಿಯನ್ನು ಕೊಡಬೇಕು. ಆಗ ಮನಸ್ಸು ಧ್ಯಾನಕ್ಕೆ ಪೂರಕವಾಗಿ ಕೆಲಸ ಮಾಡುತ್ತದೆ. “ಯುಕ್ತಚೇಷ್ಟಸ್ಯ ಕರ್ಮಸು” ನಾವು ಮಾಡಬೇಕಾದ ಕೆಲಸ ಕಾರ್ಯವನ್ನು ಕ್ರಮಬದ್ಧವಾಗಿ ಪ್ರಮಾಣಬದ್ಧವಾಗಿ ನಾವೇ ಮಾಡಬೇಕು. ಮಾಡಬೇಕಾದ ಕೆಲಸದಲ್ಲಿ ಸೋಮಾರಿತನವಿರಬಾರದು.

ಹೀಗೆ ಶಾಸ್ತ್ರೀಯವಾದ ಶುದ್ಧವಾದ ಕ್ರಮಬದ್ದವಾದ ಆಹಾರ ಸೇವನೆ, ತಕ್ಕ ಕಾಲದಲ್ಲಿ ತಕ್ಕಷ್ಟು ನಿದ್ದೆ ಹಾಗು ಎಚ್ಚರ, ಕ್ರಮಬದ್ಧವಾದ ಪರಿಶ್ರಮ ಮತ್ತು ವಿರಾಮ- ಹೀಗೆ ಇದ್ದಾಗ “ಯೋಗೋ ಭವತಿ ದುಃಖಹಾ”- ದುಃಖ ರಹಿತ ಆನಂದಮಯ ಜೀವನ ಸಾಧ್ಯ.
ಧ್ಯಾನಯೋಗದಿಂದ ಮನಸ್ಸು ಒಂದು ಹದಕ್ಕೆ ಬರುತ್ತದೆ. ಮನಸ್ಸು ಹದವಾದಾಗ ಹೊರಪ್ರಪಂಚದಲ್ಲಿ ನಾವು ಅನುಭವಿಸುವ ಸುಖ ದುಃಖಗಳು ನಿರ್ಲಿಪ್ತವಾಗಿ ನೋಡಲು ಅಭ್ಯಾಸವಾಗುತ್ತದೆ. ಇದರಿಂದ ಸುಖ ಬಂದಾಗ ಹಾರಾಟವಿಲ್ಲ, ದುಃಖ ಬಂದಾಗ ಪಾತಾಳಕ್ಕೆ ಕುಸಿಯುವುದೂ ಇಲ್ಲ. ಸುಖ-ದುಃಖ, ಸೋಲು-ಗೆಲುವಿನ ದ್ವಂದ್ವವೇ ಜೀವನ ಎನ್ನುವ ಸಮದೃಷ್ಟಿ ಧ್ಯಾನಯೋಗದಿಂದ ಬಂದುಬಿಡುತ್ತದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

युक्ताहारविहारस्य युक्तचेष्टस्य कर्मसु।
युक्तस्वप्नावबोधस्य योगो भवति दुःखहा॥

दुःखों का नाश करने वाला योग तो यथायोग्य आहार-विहार करने वाले का, कर्मों में यथायोग्य चेष्टा करने वाले का और यथायोग्य सोने तथा जागने वाले का ही सिद्ध होता है
॥17॥

Yuktaahaaravihaarasya yuktacheshtasya karmasu;
Yuktaswapnaavabodhasya yogo bhavati duhkhahaa.

Yoga becomes the destroyer of pain for him who is always moderate in eating andrecreation (such as walking, etc.), who is moderate in exertion in actions, who is moderate in sleepand wakefulness.

ಅಧ್ಯಾಯ - 06 : ಶ್ಲೋಕ – 18

ಯದಾ ವಿನಿಯತಂ ಚಿತ್ತಮಾತ್ಮನ್ಯೇವಾವತಿಷ್ಠತೇ ।ನಿಸ್ಪೃಹಃ ಸರ್ವಕಾಮೇಭ್ಯೋ ಯುಕ್ತ ಇತ್ಯುಚ್ಯತೇ ತದಾ  ॥೧೮॥

ಯದಾ ವಿನಿಯತಮ್  ಚಿತ್ತಮ್ ಆತ್ಮನಿ ಏವ ಅವತಿಷ್ಠತೇ ।
ನಿಸ್ಪೃಹಃ ಸರ್ವ ಕಾಮೇಭ್ಯಃ  ಯುಕ್ತಃ ಇತಿ ಉಚ್ಯತೇ  ತದಾ-

ಚನ್ನಾಗಿ ಹದಗೊಂಡ ಒಳಬಗೆ ಭಗವಂತನಲ್ಲೆ ನೆಲೆಗೊಂಡಾಗ, ಎಲ್ಲ ಕಾಮಗಳ ಆಸೆ ಅಳಿದಾಗ ‘ಧ್ಯಾನಯೋಗಿ’ ಎನ್ನಿಸಿಕೊಳ್ಳುತ್ತಾನೆ.

ಯೋಗಾಭ್ಯಾಸದಿಂದ ಯೋಗಿಯ ಸ್ಥುಪ್ತಪ್ರಜ್ಞೆ ನಿಯಂತ್ರಣವಾಗುತ್ತದೆ. ಸಾಮಾನ್ಯವಾಗಿ ನಮ್ಮ ಚಿತ್ತದಲ್ಲಿರುವ ಹಿಂದಿನ ಕೆಟ್ಟ ನೆನಪುಗಳು ಸದಾ ನಮ್ಮನ್ನು ಕಾಡುತ್ತಿರುತ್ತವೆ. ಯಾವುದೋ ಹಗೆ, ಯಾವುದೋ ಪ್ರೀತಿ ಇವೆಲ್ಲವನ್ನೂ ಬದಿಗೊತ್ತಿ ಯೋಗಿ ತನ್ನ ಅಂತರಂಗದ ಪೀಠದಲ್ಲಿ ಕೇವಲ ಭಗವಂತನನ್ನು ಕೂರಿಸಬಲ್ಲ. ಹೀಗೆ ಮಾಡಿದಾಗ ಸದಾ ಅಂತರಂಗದಲ್ಲಿ ಭಗವಂತನ ದರ್ಶನವಾಗುತ್ತದೆ. ಆ ಭಗವಂತನನ್ನು ಕಂಡಮೇಲೆ ಇನ್ನೇನೂ ಬೇಕು ಎನ್ನಿಸುವುದಿಲ್ಲ. ಏಕೆಂದರೆ ಭಗವಂತ  ನಾವು ಬಯಸುವ ಸಂಗತಿಗಳಲ್ಲೇ ಅತ್ಯಂತ ಶ್ರೇಷ್ಠ ವಾದ ಸಂಗತಿ. ಅಂತರಂಗದ ಆನಂದದ ಚಿಲುಮೆ ತೆರೆದುಕೊಂಡಾಗ ಕ್ಷುದ್ರವಾದ ಬಾಹ್ಯ ಕಾಮನೆಗಳು ಅಳಿದುಹೋಗಿ ಆತ ಧ್ಯಾನಯೋಗಿ ಎನ್ನಿಸಿಕೊಳ್ಳುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यदा विनियतं चित्तमात्मन्येवावतिष्ठते।
निःस्पृहः सर्वकामेभ्यो युक्त इत्युच्यते तदा॥

अत्यन्त वश में किया हुआ चित्त जिस काल में परमात्मा में ही भलीभाँति स्थित हो जाता है, उस काल में सम्पूर्ण भोगों से स्पृहारहित पुरुष योगयुक्त है, ऐसा कहा जाता है
॥18॥

Yadaa viniyatam chittamaatmanyevaavatishthate;
Nihsprihah sarvakaamebhyo yukta ityuchyate tadaa.

When the perfectly controlled mind rests in the Self only, free from longing for theobjects of desire, then it is said: “He is united.”COMMENTARY: Without union with the Self neither harmony nor balance nor Samadhiis possible.

ಅಧ್ಯಾಯ - 06 : ಶ್ಲೋಕ – 19

ಯಥಾ ದೀಪೋ ನಿವಾತಸ್ಥೋ ನೇಂಗತೇ ಸೋಪಮಾ ಮತಾ ।ಯೋಗಿನೋ ಯತಚಿತ್ತಸ್ಯ ಯುಂಜತೋ ಯೋಗಮಾತ್ಮನಃ  ॥೧೯॥

ಯಥಾ ದೀಪೋ ನಿವಾತಸ್ಥೋ ನೇಂಗತೇ ಸೋಪಮಾ ಮತಾ ।
ಯೋಗಿನೋ ಯತಚಿತ್ತಸ್ಯ ಯುಂಜತೋ ಯೋಗಮಾತ್ಮನಃ –ಗಾಳಿಯಿಲ್ಲದ ತಾಣದಲ್ಲಿರುವ ದೀಪ ಹಂದುವುದಿಲ್ಲ ಹೇಗೆ ಹಾಗೆ ಇದು: ಒಳಬಗೆಯನ್ನು ಹದಗೊಳಿಸಿ ಭಗವಂತನನ್ನು ನೆನೆಯುವ ಧ್ಯಾನಯೋಗಿಗೆ ಇದು ಉಪಮಾನ.

ಗಾಳಿ ಬೀಸದ ಸ್ಥಳದಲ್ಲಿ ಉರಿಯುವ ಬೆಂಕಿಯ ಶಿಖೆಯಂತೆ ಬಗೆಯನ್ನು ಹದಗೊಳಿಸಿದ ಯೋಗಿಯ ಮನಸ್ಸಿನಲ್ಲಿ ‘ಭಗವಂತನ ಕುರಿತಾದ ಮನಸ್ಸಿನ ಯೋಗ(ಆತ್ಮಯೋಗ)’ ನಿಶ್ಚಲವಾಗಿರುತ್ತದೆ. ಅದು ಚಲಿಸುವುದಿಲ್ಲ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यथा दीपो निवातस्थो नेंगते सोपमा स्मृता।
योगिनो यतचित्तस्य युञ्जतो योगमात्मनः॥

जिस प्रकार वायुरहित स्थान में स्थित दीपक चलायमान नहीं होता, वैसी ही उपमा परमात्मा के ध्यान में लगे हुए योगी के जीते हुए चित्त की कही गई है
॥19॥

Yathaa deepo nivaatastho nengate sopamaa smritaa;
Yogino yatachittasya yunjato yogamaatmanah.

As a lamp placed in a windless spot does not flicker—to such is compared the Yogi ofcontrolled mind, practising Yoga in the Self (or absorbed in the Yoga of the Self).COMMENTARY: This is a beautiful simile which Yogis often quote when they talk ofconcentration or one-pointedness of mind.

ಅಧ್ಯಾಯ - 06 : ಶ್ಲೋಕ – 20-23

ಯತ್ರೋಪರಮತೇ ಚಿತ್ತಂ ನಿರುದ್ಧಂ ಯೋಗಸೇವಯಾ ।ಯತ್ರ ಚೈವಾSತ್ಮನಾSSತ್ಮಾನಂ ಪಶ್ಯನ್ನಾತ್ಮನಿ ತುಷ್ಯತಿ ॥೨೦॥

ಯತ್ರ ಉಪರಮತೇ ಚಿತ್ತಮ್ ನಿರುದ್ಧಮ್ ಯೋಗ ಸೇವಯಾ।
ಯತ್ರ ಚ ಏವ ಆತ್ಮನಾ ಆತ್ಮಾನಮ್  ಪಶ್ಯನ್ ಆತ್ಮನಿ ತುಷ್ಯತಿ ||

ಸುಖಮ್ಮಾತ್ಯಂತಿಕಂ ಯತ್ತದ್ ಬುದ್ಧಿ ಗ್ರಾಹ್ಯಮತೀಂದ್ರಿಯಮ್ ।ವೇತ್ತಿ ಯತ್ರ ನ ಚೈವಾಯಂ ಸ್ಥಿತಶ್ಚಲತಿ ತತ್ತ್ವತಃ ॥೨೧॥

ಸುಖಮ್ ಆತ್ಯನ್ತಿಕಮ್  ಯತ್ ತತ್  ಬುದ್ಧಿ ಗ್ರಾಹ್ಯಮ್ ಅತೀಂದ್ರಿಯಮ್ ।
ವೇತ್ತಿ ಯತ್ರ ನ ಚ ಏವ ಅಯಮ್  ಸ್ಥಿತಃ  ಚಲತಿ  ತತ್ತ್ವತಃ ||

ಯಂ ಲಬ್ಧ್ವಾ ಚಾಪರಂ ಲಾಭಂ ಮನ್ಯತೇ ನಾಧಿಕಂ ತತಃ ।ಯಸ್ಮಿನ್ ಸ್ಥಿತೋ  ನ ದುಃಖೇನ ಗುರುಣಾSಪಿ ವಿಚಾಲ್ಯತೇ ॥೨೨॥

ಯಮ್  ಲಬ್ಧ್ವಾ ಚ ಅಪರಮ್  ಲಾಭಮ್  ಮನ್ಯತೇ ನ ಅಧಿಕಮ್  ತತಃ ।
ಯಸ್ಮಿನ್ ಸ್ಥಿತಃ ನ ದುಃಖೇನ ಗುರುಣಾ ಅಪಿ ವಿಚಾಲ್ಯತೇ  ||

ತಂ ವಿದ್ಯಾದ್ ದುಃಖಸಂಯೋಗವಿಯೋಗಂ ಯೋಗಸಂಜ್ಞಿತಮ್ ।ಸ ನಿಶ್ಚಯೇನ ಯೋಕ್ತವ್ಯೋ ಯೋಗೋನಿರ್ವಿಣ್ಣಚೇತಸಾ  ॥೨೩॥

ತಮ್  ವಿದ್ಯಾತ್ ದುಃಖಸಂಯೋಗ ವಿಯೋಗಮ್  ಯೋಗಸಂಜ್ಞಿತಮ್ ।
ಸಃ ನಿಶ್ಚಯೇನ ಯೋಕ್ತವ್ಯಃ ಯೋಗಃ ಅನಿರ್ವಿಣ್ಣಚೇತಸಾ ||

ಧ್ಯಾನ ಸಾಧನೆಯಿಂದ ಬಿಗಿಗೊಂಡ ಒಳಬಗೆ ಈ ಸ್ಥಿತಿಯಲ್ಲಿ ಹೊರಗಣ ವಿಷಯಗಳತ್ತ ಹರಿಯದು. ಇಲ್ಲಿ ತನ್ನೊಳಗೆಯೆ ಬಗೆಯಿಂದ[ಭಗವಂತನ ಹಸಾದದಿಂದ] ಭಗವಂತನನ್ನು ಕಾಣುತ್ತ ಸಂತಸಗೊಳ್ಳುತ್ತಾನೆ.ಇಲ್ಲಿ ಇಂದ್ರಿಯಗಳಿಂದ ದೊರಕದ, ಒಳಬಗೆಯಲ್ಲಿ ಅರಳುವ ಅತಿಶಯವಾದ ಆನಂದವನ್ನು ಅನುಭವಿಸುತ್ತಾನೆ. ಈ ಸ್ಥಿತಿಯಲ್ಲಿ ನಿಂತವನು ಎಂದೂ ಭಗವಂತನಿಂದ ಕದಲುವುದಿಲ್ಲ. ಇದನ್ನು ಪಡೆದ ಮೇಲೆ ಇನ್ನಾವ ಗಳಿಕೆಯೂ ಇದಕ್ಕಿಂತ ಮಿಗಿಲೆನಿಸುವುದಿಲ್ಲ. ಇಲ್ಲಿ ನಿಂತವನು ಎಂಥ ಹಿರಿಯ ದುಗುಡದಿಂದಲೂ ಕಂಗೆಡುವುದಿಲ್ಲ. ಇದೇ ಎಲ್ಲ ದುಗುಡಗಳಿಂದ ಬಿಡುಗಡೆಗೊಳಿಸುವ ಯೋಗವೆಂದರಿಯಬೇಕು. ವಿಷಯಗಳಿಂದ ಬೇಸತ್ತು ಬೆನ್ನು ತಿರುಗಿಸಿದವನು ಅವಶ್ಯವಾಗಿ ಈ ಯೋಗದಲ್ಲಿ ಪಳಗಬೇಕು.

ಹೊರಗಿನ ಪ್ರಪಂಚದ ಸಂಪರ್ಕವನ್ನು ಕಳೆದುಕೊಂಡು ಮನಸ್ಸು ಭಗವಂತನಲ್ಲಿ ನೆಲೆಸಿದಾಗ ಏನಾಗುತ್ತದೆ ಎಂದರೆ- ಕೃಷ್ಣ ಹೇಳುತ್ತಾನೆ: “ಉಪರಮತೇ ಚಿತ್ತಮ್” ಅಂದರೆ ಉತ್ಕೃಷ್ಟವಾದ ಆ ಆನಂದದಲ್ಲೇ ಮನಸ್ಸು  ನಿಂತುಬಿಡುತ್ತದೆ. ಆ ಆನಂದದ ಸೆಲೆಯಿಂದ ಬೇರೆಯಾಗುವುದು ಬೇಡ ಎನ್ನುವ ಭಾವನೆ ಬಂದುಬಿಡುತ್ತದೆ. ಸಾಮಾನ್ಯವಾಗಿ ತಕ್ಷಣ ಈ ಸ್ಥಿತಿಗೆ ಮನಸ್ಸು ಹೋಗುವುದಿಲ್ಲ. ಅದಕ್ಕೆ ಬಹಳ ಪ್ರಯತ್ನ ಬೇಕು. ಪ್ರಯತ್ನ ಒಂದು ಜನ್ಮದಲ್ಲ ಅನೇಕ ಜನ್ಮದ ಪ್ರಯತ್ನವಿಲ್ಲದೆ ಒಮ್ಮೆಗೆ ಈ ಸ್ಥಿತಿಯನ್ನು ತಲುಪುವುದು ಅಸಾಧ್ಯ. ನಿರಂತರ ಯೋಗಾಭ್ಯಾಸದ ಸಾಧನೆಯಿಂದ ಚಿತ್ತ ವೃತ್ತಿಯನ್ನು ನಿರೋಧ ಮಾಡಬೇಕು. ಅಂದರೆ ನಮ್ಮ  ಮನಸ್ಸನ್ನು ತಡೆಹಿಡಿಯಬೇಕು. ಅದು ಎಲ್ಲಿಯೂ ಹರಿಯದಂತೆ ಒಡ್ಡುಹಾಕಿ ಅದು ಭಗವಂತನಲ್ಲೇ ನೆಲೆನಿಲ್ಲುವಂತೆ ಮಾಡಬೇಕು.

ನಮಗೆ ಆತ್ಮಸಾಕ್ಷಾತ್ಕಾರವಾದಾಗ ಎಂದೂ ಆಗದ ಅಪೂರ್ವ ಆನಂದವಾಗುತ್ತದೆ. ಇದು ಅತ್ಯಂತ ಶ್ರೇಷ್ಠವಾದ ಆನಂದದ ಅನುಭವ.  ಭಗವಂತನ ಬಗ್ಗೆ ಭಕ್ತನ ಭಕ್ತಿ ಹಾಗು ಭಕ್ತನ ಮೇಲೆ ಭಗವಂತನ ವಾತ್ಸಲ್ಯ ಇವೆರಡೂ ಮೇಳವಿಸಿದಾಗ  ‘ನಿರ್ಭಯ’.  ಒಳಗಣ್ಣಿನಿಂದ  ಧ್ಯಾನದ ಸ್ಥಿತಿಯಲ್ಲಿ ಅಂತರ್ಯಾಮಿಯಾದ ಭಗವಂತನನ್ನು ಕಾಣುವುದು ಧ್ಯಾನದಲ್ಲಿ  ಬರುವ ಅನುಭವ. ಇಲ್ಲಿ ನಮಗೆ ಕಾಣುವುದು ಮನಸ್ಸು ಕಡೆದ ಆ ಭಗವಂತನ ಭವ್ಯ ರೂಪ. ಇದು ಕೇವಲ ಭಗವಂತನ ಪ್ರತೀಕ. ನಾವು ಭಗವಂತನನ್ನು ನಿಜವಾಗಿ ಕಾಣಬೇಕಾದರೆ ಅವನು ನಮ್ಮನ್ನು ಪ್ರೀತಿಸಬೇಕು. ಭಗವದ್ ಅನುಗ್ರಹವಾದಾಗ ನಮ್ಮ ಸ್ವರೂಪ ಭಗವಂತನನ್ನು ಕಾಣುತ್ತದೆ. ಇದು ಬಹಳ ಉತ್ಕಟವಾದ ಸ್ಥಿತಿ. ಈ ಸ್ಥಿತಿಯಲ್ಲಿ ಮನಸ್ಸು ಸಂಪೂರ್ಣ ಸ್ತಬ್ಧವಾಗಿ ನೇರವಾಗಿ ಆತ್ಮಸ್ವರೂಪ ತನ್ನ ಆತ್ಮಸ್ವರೂಪದ ಕಣ್ಣಿನಿಂದ ಭಗವಂತನನ್ನು ಕಾಣುತ್ತದೆ. ಈ ಸ್ಥಿತಿ ಸಂಪೂರ್ಣ ತೃಪ್ತಿಯನ್ನು ಕೊಡಬಲ್ಲದು. ಇಂದ್ರಿಯಗಳಿಂದ ಸಿಗುವ ಆನಂದ ಸಾಪೇಕ್ಷ  ಎನ್ನುವ ನಿಜ ಆ ಹಂತದಲ್ಲಿ ತಿಳಿಯುತ್ತದೆ. ಈ ಉತ್ಕಟವಾದ ಆನಂದವನ್ನು ಅನುಭವಿಸಿದ ಮೇಲೆ ಮತ್ತೆ ಮೇಲೇರಬೇಕು ಅಥವಾ ಕೆಳಗಿಳಿಯಬೇಕು ಎನ್ನುವ ಬಯಕೆ ಇಲ್ಲ. ಭಗವಂತನ ಪೂರ್ಣ ಅನುಭವ ಬಂದಾತ ಯಾವ ಪ್ರಾಪಂಚಿಕ ದುಃಖದಲ್ಲೂ  ಎಂದೂ ವಿಚಲಿತನಾಗುವುದಿಲ್ಲ. ಇದು ಮಾನವ ಜೀವನದಲ್ಲಿ ಪಡೆಯಬಹುದಾದ ಅತೀ ಎತ್ತರದ ಸ್ಥಿತಿ. ನಾವು ನಿಜವಾದ ಆನಂದವನ್ನು ಕಾಣಬೇಕಾದರೆ ಈ ಉತ್ಕಟವಾದ ಸ್ಥಿತಿಯನ್ನು ತಲುಪಬೇಕು.

ಮೇಲೆ ಹೇಳಿದ ವಿಚಾರವನ್ನು ಕೇಳಿ ಕೆಲವರು ಭ್ರಮೆಗೊಳಗಾಗಿ ಒಮ್ಮೆಗೆ ಎಲ್ಲವನ್ನೂ ಬಿಟ್ಟು ಈ ಸ್ಥಿತಿಯನ್ನು ತಲುಪುವ ಸಾಹಸಕ್ಕೆ ಕೈ ಹಾಕುತ್ತಾರೆ. ಆದರೆ ಹಾಗೆ ಮಾಡಿದರೆ ಎಂದೂ ಯಶಸ್ಸು ಸಿಗದು. ಕೇವಲ ನಿರಂತರ ಸಾಧನೆಯಿಂದ ಮಾತ್ರ ಈ ಆನಂದವನ್ನು ಪಡೆಯಲು…

ಅಧ್ಯಾಯ - 06 : ಶ್ಲೋಕ – 24, 25

ಸಂಕಲ್ಪಪ್ರಭವಾನ್ ಕಾಮಾಂಸ್ತ್ಯಕ್ತ್ವಾ ಸರ್ವಾನಶೇಷತಃ ।ಮನಸೈವೇದ್ರಿಯಗ್ರಾಮಂ ವಿನಿಯಮ್ಯ ಸಮಂತತಃ ॥೨೪॥ಶನೈಃ ಶನೈರುಪರಮೇದ್ ಬುದ್ಧ್ಯಾ ಧೃತಿಗೃಹೀತಯಾ ।ಆತ್ಮಸಂಸ್ಥಂ ಮನಃ ಕೃತ್ವಾ ನ ಕಿಂಚಿದಪಿ ಚಿಂತಯೇತ್ ॥೨೫॥

ಸಂಕಲ್ಪ ಪ್ರಭವಾನ್ ಕಾಮಾನ್ ತ್ಯಕ್ತ್ವಾ ಸರ್ವಾನ್ ಅಶೇಷತಃ ।
ಮನಸಾ ಏವ ಇಂದ್ರಿಯ ಗ್ರಾಮಮ್  ವಿನಿಯಮ್ಯ ಸಮಂತತಃ ||
ಶನೈಃ ಶನೈಃ  ಪರಮೇತ್  ಬುದ್ಧ್ಯಾ ಧೃತಿ ಗೃಹೀತಯಾ ।
ಆತ್ಮಸಂಸ್ಥಮ್  ಮನಃ ಕೃತ್ವಾ ನ ಕಿಂಚಿತ್ ಅಪಿ ಚಿಂತಯೇತ್ –

ಬಗೆಯಲ್ಲಿ ಮೂಡಿಬರುವ ಎಲ್ಲ ಬಯಕೆಗಳನ್ನೂ ಪೂರ್ತಿಯಾಗಿ ತೊರೆದುಬಿಡಬೇಕು; ಇಂದ್ರಿಯಗಳ ಗಡಣವನ್ನು ಎಲ್ಲೆಡೆಯಿಂದಲು ಮನೋಬಲದಿಂದಲೆ ಹಿಡಿತದಲ್ಲಿಡಬೇಕು; ಅಳುಕದ ವಿವೇಕ ಪ್ರಜ್ಞೆಯಿಂದ ಮೆಲಮೆಲನೆ ಬಗೆಯನ್ನು ವಿಷಯಗಳಿಂದ ಹೊರಳಿಸಬೇಕು; ಭಗವಂತನಲ್ಲಿರಿಸಬೇಕು. ಇರಿಸಿ ಮತ್ತೇನನ್ನೂ ಚಿಂತಿಸಬಾರದು.

ಮನಸ್ಸನ್ನು ಭಗವಂತನಲ್ಲಿ ನೆಲೆಗೊಳಿಸುವ ವಿಧಾನವನ್ನು ಮತ್ತೆ ಕೃಷ್ಣ ಇಲ್ಲಿ ವಿವರಿಸುತ್ತಾನೆ. ಕೃಷ್ಣ ಹೇಳುತ್ತಾನೆ:  “ಸಂಕಲ್ಪ ಪ್ರಭವಾನ್ ಕಾಮಾನ್ ತ್ಯಕ್ತ್ವಾ ಸರ್ವಾನ್ ಅಶೇಷತಃ”   ಎಂದು. ಇದರ ಹಿನ್ನೆಲೆಯನ್ನು ಹಿಂದೆ ನಾವು ನೋಡಿದ್ದೇವೆ. ನಮ್ಮ ಎಲ್ಲ ಸಮಸ್ಯೆಗಳ ಮೂಲ ನಮ್ಮ ಸಂಕಲ್ಪಗಳು. ಸಂಕಲ್ಪಗಳು ಎಂದರೆ ಮನಸ್ಸಿನಲ್ಲಿ ಏನೇನು ಮಾಡಬೇಕು ಎನ್ನುವ ತೀರ್ಮಾನ. ನಾವು ಯಾವುದೇ ಒಂದು ಕೆಲಸವನ್ನೂ ಮಾಡುವ ಮೊದಲು ಅದನ್ನು ಮಾನಸಿಕವಾಗಿ ಮಾಡುತ್ತೇವೆ. ಇಂದು ಇಲ್ಲಿಗೆ ಹೋಗಬೇಕು, ಇಂತವರನ್ನು ಭೇಟಿಯಾಗಬೇಕು, ಅಲ್ಲಿ ಇಂತಹದ್ದನ್ನು ಪಡೆಯಬೇಕು, ಇತ್ಯಾದಿ ವೇಳಾಪಟ್ಟಿ ನಮ್ಮ ಮನಸ್ಸಿನಲ್ಲಿ ನೆಟ್ಟಿರುತ್ತದೆ. ಈ ರೀತಿ ಸಾವಿರ ಸಂಕಲ್ಪಗಳು, ಅದನ್ನು ಈಡೇರಿಸಿಕೊಳ್ಳುವುದಕ್ಕೆ ಸಾವಿರ ಬಯಕೆಗಳು. ‘ಹೀಗೆ ಮಾಡಬೇಕು ಅದರಿಂದ ಹೀಗೇ ಆಗಬೇಕು ಎನ್ನುವ ಆಸೆಗಳು’. ಬದುಕು ಎಂದರೆ ನಾವು ನಮ್ಮ ಮನಸ್ಸಿನಲ್ಲಿ ಕಲ್ಪಿಸಿಕೊಂಡ ಬದುಕಿನ ರೂಪುರೇಷೆಯನ್ನು ಬಾಹ್ಯ ಪ್ರಪಂಚದಲ್ಲಿ ಸಾಕಾರಗೊಳಿಸುವ ಪ್ರಯತ್ನ. ಹೀಗೆ ಸಾವಿರಾರು ಸಂಕಲ್ಪ ಮತ್ತು ಕಾಮನೆಯನ್ನು  ಮನಸ್ಸಿನಲ್ಲಿ ತುಂಬುತ್ತಾ ಹೋದರೆ ಮನಸ್ಸಿಗೆ ಅದರಿಂದಾಚೆಗೆ ಯೋಚಿಸಲು ಅವಕಾಶವೇ ಇಲ್ಲವಾಗುತ್ತದೆ. ಮನಸ್ಸು ಎಂದರೆ ಬರೀ ಸಂಕಲ್ಪ-ವಿಕಲ್ಪ. ಏನೇನೋ ಕನಸು ಕಟ್ಟುವುದು(ಸಂಕಲ್ಪ),  ಮಾಡಬೇಕೋ ಬೇಡವೋ, ಮಾಡಿದರೆ ಯಶಸ್ವಿ ಆದೀತೋ ಇಲ್ಲವೋ (ವಿಕಲ್ಪ) ಎಂದು ಯೋಚಿಸುತ್ತ ಅದರಿಂದ ಗೊಂದಲಕ್ಕೊಳಗಾಗುವುದು-ಇದರಿಂದಾಚೆಗೆ ಮನಸ್ಸು ಹೋಗುವುದೇ ಇಲ್ಲ. ಕೃಷ್ಣ ಹೇಳುತ್ತಾನೆ “ಮೊದಲು ನಿನ್ನ ಸಂಕಲ್ಪಗಳನ್ನು ಬಿಟ್ಟುಬಿಡು” ಎಂದು. ಈ ಸಂಕಲ್ಪಗಳು ತಿರುಕನ ಕನಸಿನಂತೆ. ಎಷ್ಟು ಹೆಚ್ಚು ಸಂಕಲ್ಪ ನಮ್ಮ ಮನಸ್ಸಿಗೆ ಬರುತ್ತದೆ ಅಷ್ಟೇ ಹತಾಶೆ ಹೆಚ್ಚಾಗುತ್ತದೆ, ಅದರಿಂದ ವ್ಯಾಕುಲತೆ. ನಂತರ ಏನನ್ನೂ ಯೋಚಿಸಲು ಆಗುವುದಿಲ್ಲ!

ಬಯಸುವುದು ಮನಸ್ಸಿನ ಸಹಜ ಗುಣ, ಬಯಸದೆ ಬದುಕಿಲ್ಲ. ಅದಕ್ಕಾಗಿ ಏನು ಬರುತ್ತದೋ ಅದು ಬರಲಿ ಎಂದು ಬಯಸುವುದನ್ನು ಕಲಿತು ನಮ್ಮ ಇತರ ಸಂಕಲ್ಪ ವಿಕಲ್ಪವನ್ನು ಬಿಟ್ಟುಬಿಡಬೇಕು- ಇದು ಯಶಸಿನ ಸೂತ್ರ. ಬಯಸಿದ್ದು ಸಿಗುವುದಿಲ್ಲ, ಬಯಸಿದಂತೆ ಆಗುವುದಿಲ್ಲ ಎಂದ ಮೇಲೆ ಅನಗತ್ಯ ಕನಸಿನ ಗೋಪುರ ಕಟ್ಟುವುದರಲ್ಲಿ ಯಾವ ಅರ್ಥವೂ ಇಲ್ಲ. ನಮ್ಮ ಸಂಕಲ್ಪ ಕೇವಲ ಒಂದೇ ಒಂದು ‘ಭಗವಂತನ ಸಂಕಲ್ಪ ಹೇಗೋ ಹಾಗೆ’. ದ್ವಾದಶ ಸ್ತೋತ್ರದಲ್ಲಿ ಶ್ರೀ ಮಧ್ವಾಚಾರ್ಯರು ಹೇಳುವಂತೆ:

ಕುರು ಭುಂಕ್ಷ್ವ ಚ ಕರ್ಮ ನಿಜಂ ನಿಯತಂ ಹರಿಪಾದ ವಿನಮ್ರಧಿಯಾ ಸತತಂ |
ಹರಿರೇವ ಪರೋ ಹರಿರೇವ ಗುರುಃ ಹರಿರೇವ ಜಗತ್ ಪಿತೃಮಾತೃಗತಿಃ || ೩-೧ ||

ನಿನ್ನ ಪಾಲಿನ ಕರ್ಮ ಮಾಡು, ಬಂದುದನ್ನುಣ್ಣು. ಹರಿಯ ಚರಣದ ಅರಿವು ತಪ್ಪದಿರಲಿ. ನನ್ನದು ಎನ್ನುವ ಪ್ರತ್ಯೇಕ   ಸಂಕಲ್ಪ ಬೇಡ. ವೇದದಲ್ಲಿ ಹೇಳುವಂತೆ ‘ಭಗವಂತನ ಕಾಮನೆಯೇ ನನ್ನ ಕಾಮನೆಯಾಗಲಿ, ಆತನ ಇಚ್ಛೆಯೇ ನನ್ನ ಇಚ್ಛೆಯಾಗಲಿ, ಅದರಿಂದ ನನ್ನ ಕಾಮನೆ ಭಗವಂತನ ಕಾಮನೆಗೆ ಶ್ರುತಿಗೂಡಲಿ’. ಹೀಗೆ ಆದಾಗ ಅಪಸ್ವರ ಹೊರಡುವುದಿಲ್ಲ. ನಮ್ಮ ಬಯಕೆ ಭಗವಂತನ ಇಚ್ಛೆಗೆ ಅನುರಣನವಾದಾಗ(State of Resonance)   ಬಾಳಿನ ಸಂಗೀತದಲ್ಲಿ ಮಾಧುರ್ಯ ನಿರ್ಮಾಣವಾಗುತ್ತದೆ. ಕೃಷ್ಣ ಹೇಳುತ್ತಾನೆ “ಸರ್ವಾನ್ ಅಶೇಷತಃ” ಎಂದು. ಅಂದರೆ ನಿನ್ನೆಲ್ಲಾ ಸಂಕಲ್ಪವನ್ನು  ಪೂರ್ಣವಾಗಿ ಬಿಡು ಎಂದು. ಭಗವಂತನ ಇಚ್ಚೆಗೆ ವಿರುದ್ಧವಾದ ಒಂದೂ ಸಂಕಲ್ಪ ನಮ್ಮಲ್ಲಿರಬಾರದು. ‘ನೀನು(ಭಗವಂತ) ಏನು ಬಯಸಿದೆಯೋ ಅದೇ ನನ್ನ ಸಂಕಲ್ಪ’-ಇದು ಒಬ್ಬ ಯೋಗಿ ಧ್ಯಾನದಲ್ಲಿ ತೊಡಗಿಸಿಕೊಳ್ಳಬೇಕಾದ ಏಕೈಕ ಸಂಕಲ್ಪ.

ಸಂಕಲ್ಪ ಎಲ್ಲಿ ಹುಟ್ಟುತ್ತದೋ ಅಲ್ಲೇ ಅದನ್ನು ತಡೆಯಬೇಕು. ಇದನ್ನು ತಡೆಯಬೇಕು ಎಲ್ಲಿಂದ ಎಂದರೆ ಮನಸ್ಸಿನಿಂದಲೇ! ನಾವು ನಮ್ಮ ಮನಸ್ಸಿಗೆ ನ…

ಅಧ್ಯಾಯ - 06 : ಶ್ಲೋಕ – 26

ಯತೋ ಯತೋ ನಿಶ್ಚರತಿ ಮನಶ್ಚಂಚಲಮಸ್ಥಿರಮ್ ।ತತಸ್ತತೋ ನಿಯಮ್ಯೈತದಾತ್ಮನ್ಯೇವ ವಶಂ ನಯೇತ್ ॥೨೬॥

ಯತಃ ಯತಃ ನಿಶ್ಚರತಿ ಮನಃ ಚಂಚಲಮ್ ಅಸ್ಥಿರಮ್ ।
ತತಃ ತತಃ  ನಿಯಮ್ಯ ಏತತ್ ಆತ್ಮನಿ ಏವ ವಶಮ್  ನಯೇತ್ –

ಗಟ್ಟಿಗೊಳ್ಳದೆ ಎತ್ತೆತ್ತ ಸರಿಯುವ ಬಗೆ ಯಾವೆಡೆಯೆಲ್ಲ ಹರಿಯಿತು ಆಯಾ ಕಡೆಯಿಂದ ಮತ್ತೆ ಹೊರಳಿಸಿ ಭಗವಂತನಲ್ಲೆ ನಿಲ್ಲುವಂತೆ ಹಿಡಿತಕ್ಕೆ ತರಬೇಕು.

ನಮ್ಮ ಮನಸ್ಸು ಬಹಳ ಚಂಚಲ. ಈ ಕಾರಣದಿಂದ ಅದು ಎಲ್ಲೆಡೆ ಹರಿಯುತ್ತಿರುತ್ತದೆ. ಅದು ಎಲ್ಲಿ ಎಲ್ಲಿ ಜಾರುತ್ತದೋ ಅಲ್ಲಿ ಅಲ್ಲಿ ಭಗವಂತನೆಂಬ ಒಡ್ಡು ಹಾಕಿ ಅದನ್ನು ಭಗವಂತನಲ್ಲಿ ನೆಲೆನಿಲ್ಲುವಂತೆ ಮಾಡಬೇಕು. ಇದಕ್ಕೆ ನಿರಂತರ ಪ್ರಯತ್ನ ಅಗತ್ಯ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यतो यतो निश्चरति मनश्चञ्चलमस्थिरम्‌।
ततस्ततो नियम्यैतदात्मन्येव वशं नयेत्‌॥

यह स्थिर न रहने वाला और चंचल मन जिस-जिस शब्दादि विषय के निमित्त से संसार में विचरता है, उस-उस विषय से रोककर यानी हटाकर इसे बार-बार परमात्मा में ही निरुद्ध करे
॥26॥

Yato yato nishcharati manashchanchalamasthiram;
Tatastato niyamyaitad aatmanyeva vasham nayet.

From whatever cause the restless, unsteady mind wanders away, from that let himrestrain it and bring it under the control of the Self alone.

ಅಧ್ಯಾಯ - 06 : ಶ್ಲೋಕ – 27

ಪ್ರಶಾಂತಮನಸಂ ಹ್ಯೇನಂ ಯೋಗಿನಂ ಸುಖಮುತ್ತಮಮ್ ।ಉಪೈತಿ ಶಾಂತರಜಸಂ ಬ್ರಹ್ಮಭೂತಮಕಲ್ಮಷಮ್ ॥೨೭॥

ಪ್ರಶಾಂತ ಮನಸಮ್ ಹಿ ಎನಮ್  ಯೋಗಿನಮ್  ಸುಖಮ್ ಉತ್ತಮಮ್  ।
ಉಪೈತಿ ಶಾಂತರಜಸಮ್  ಬ್ರಹ್ಮಭೂತಮ್ ಅಕಲ್ಮಷಮ್ –

ವಿಷಯಗಳತ್ತ ಹರಿಯದೆ ಹಾಯಾದ ಬಗೆಯವನನ್ನು, ರಜೋಗುಣದ ಬಿಸಿಯಳಿದು ತಿಳಿಯಾದವನನ್ನು, ಭಗವಂತನಲ್ಲೆ ನೆಲೆನಿಂತ ಇಂಥ ಯೋಗಿಯನ್ನು ಸುಖದ ಸುಗ್ಗಿ ನುಗ್ಗಿ ಬರುತ್ತದೆ.

ಒಮ್ಮೆ ನಮ್ಮ ಮನಸ್ಸು ಭಗವಂತನಲ್ಲಿ ನೆಲೆ ನಿಂತಿತೆಂದರೆ ಗೊಂದಲದ ಗೂಡಾದ ಮನಸ್ಸು ಪ್ರಶಾಂತವಾಗುತ್ತದೆ. ಇದನ್ನು ಸಾಧಿಸಿದ ವ್ಯಕ್ತಿ ಎಂತಹ ಸನ್ನಿವೇಶದಲ್ಲೂ ಉದ್ವೇಗಕ್ಕೊಳಗಾಗುವುದಿಲ್ಲ. ಜೀವನದಲ್ಲಿ ನಾವು ಅನುಭವಿಸಬೇಕಾದ ನಿಜವಾದ ಶ್ರೇಷ್ಠ ಸುಖ ಏನು ಎನ್ನುವುದು ಈ ಸ್ಥಿತಿಯಲ್ಲಿ ತಿಳಿಯುತ್ತದೆ. ಮನಸ್ಸು ಸಾಮಾನ್ಯವಾಗಿ ಬಯಸುವ ರಾಜಸ ಸುಖದಲ್ಲಿ ಇರುವ ನಿರಾಶೆ ಇಲ್ಲಿ ಎಂದೂ ಇರದು. ಈ ಸ್ಥಿತಿಯಲ್ಲಿ ನಾವು ಸ್ವಚ್ಚವಾಗುತ್ತೇವೆ. ಇದು ನಿಜವಾದ ಮಡಿ. ಮನಸ್ಸಿನ ಸ್ವಚ್ಚತೆಯನ್ನು ಸಾಧಿಸದೆ ಬಾಹ್ಯ ಮಡಿ ಮಾಡುವುದರಿಂದ ಯಾವ ಉಪಯೋಗವೂ ಇಲ್ಲ.ಶುದ್ಧವಾದ ಮನಸ್ಸಿಗೆ ಯಾವುದೂ ಮೈಲಿಗೆ ಅಲ್ಲ! ಮನಸ್ಸು ಮಡಿಯಾದರೆ ಅವನು ಮೈಲಿಗೆಯಾಗುವ ಸಾಧ್ಯತೆ ಇಲ್ಲ. ಇದು ಮಾನವ ತನ್ನ ಜೀವಮಾನದಲ್ಲಿ ಪಡೆಯಬಹುದಾದ ಪರಮಾನಂದದ ಸ್ಥಿತಿ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

प्रशान्तमनसं ह्येनं योगिनं सुखमुत्तमम्‌।
उपैति शांतरजसं ब्रह्मभूतमकल्मषम्‌॥

क्योंकि जिसका मन भली प्रकार शांत है, जो पाप से रहित है और जिसका रजोगुण शांत हो गया है, ऐसे इस सच्चिदानन्दघन ब्रह्म के साथ एकीभाव हुए योगी को उत्तम आनंद प्राप्त होता है
॥27॥

Prashaantamanasam hyenam yoginam sukhamuttamam;
Upaiti shaantarajasam brahmabhootamakalmasham.

Supreme bliss verily comes to this Yogi whose mind is quite peaceful, whose passion isquieted, who has become Brahman, and who is free from sin.

ಅಧ್ಯಾಯ - 06 : ಶ್ಲೋಕ – 28

ಯುಂಜನ್ ಏವಂ ಸದಾತ್ಮಾನಂ ಯೋಗೀ ವಿಗತಕಲ್ಮಷಃ ।
ಸುಖೇನ ಬ್ರಹ್ಮಸಂಸ್ಪರ್ಶಮತ್ಯಂತಂ ಸುಖಮಶ್ನುತೇ ॥೨೮॥ಯುಂಜನ್ ಏವಮ್  ಸದಾ ಆತ್ಮಾನಮ್  ಯೋಗೀ ವಿಗತ ಕಲ್ಮಷಃ ।
ಸುಖೇನ ಬ್ರಹ್ಮಸಂಸ್ಪರ್ಶಮ್ ಅತ್ಯಂತಮ್  ಸುಖಮಶ್ನುತೇ-

ಹೀಗೆ ಕೊಳೆಯಳಿದು ಸದಾ ಭಗವಂತನನ್ನು ಧ್ಯಾನಿಸುವ ಸಾಧಕನು ಹಾಯಾಗಿ ಭಗವದನುಭವದ ಪರಮ ಸುಖವನ್ನು ಉಣ್ಣುತ್ತಾನೆ.

ಭಗವದ್ ಅನುಭೂತಿ ಆದಾಗ ಆಗುವ ಅಂತರಂಗದ ಆನಂದವನ್ನು ಇನ್ನೊಂದು ರೀತಿಯಲ್ಲಿ ಕೃಷ್ಣ ಇಲ್ಲಿ  ವಿವರಿಸಿದ್ದಾನೆ. ಕೃಷ್ಣ ಹೇಳುತ್ತಾನೆ “ಯುಂಜನ್ ಏವಂ ಸದಾತ್ಮಾನಂ ಯೋಗೀ ವಿಗತಕಲ್ಮಷಃ” ಎಂದು. ಕೃಷ್ಣನ ಈ ನುಡಿಯನ್ನು ಎರಡು ರೂಪದಲ್ಲಿ ಕಾಣಬಹುದು. ಮೊದಲನೆಯದಾಗಿ  “ವಿಗತಕಲ್ಮಷ ಸನ್ ಆತ್ಮಾನಂ ಯುಂಜನ್” ಹಾಗು ಎರಡನೆಯದಾಗಿ “ಆತ್ಮಾನಂ ಯುಂಜನ್ ಸನ್  ವಿಗತಕಲ್ಮಷಃ”. ನಾವು ಮೊದಲು ವಿಗತಕಲ್ಮಶವಾದ ಮನಸ್ಸಿನಿಂದ ಭಗವಂತನನ್ನು ಕಾಣಬೇಕು, ನಂತರ ಭಗವಂತನನ್ನು ಧ್ಯಾನ ಮಾಡುತ್ತಾ ವಿಗತಕಲ್ಮಷರಾಗಬೇಕು. ಭಗವಂತನ ಧ್ಯಾನಕ್ಕೊಸ್ಕರ ಮನಸ್ಸನ್ನು ಸ್ವಚ್ಛಗೊಳಿಸಿ ಒಮ್ಮೆ ಭಗವಂತನನ್ನು ಕಾಣಬಹುದು ಆದರೆ ಭಗವಂತನ ಅನುಭವದಿಂದ ಕೆಳಗಿಳಿದ ತಕ್ಷಣ ತಾಮಸ ಆವೇಶ ನಮ್ಮ ಮನಸ್ಸನ್ನು ಕೆಡಿಸಬಹುದು. ಅದಕ್ಕಾಗಿ ಸದಾ ಭಗವದ್ ಅನುಭೂತಿಯಲ್ಲೇ ನೆಲೆಗೊಳ್ಳಬೇಕು. ಇದರರ್ಥ ದಿನದ ಇಪತ್ನಾಲ್ಕು ಗಂಟೆ ಧ್ಯಾನದಲ್ಲೇ ಇರಬೇಕು ಎಂದಲ್ಲ, ಬದಲಾಗಿ ಸದಾ  ಭಗವಂತನ ಗುಂಗಿನಲ್ಲಿರುವುದು. ಹೀಗಿದ್ದಾಗ ಮನಸ್ಸು ನಿರಂತರ ಸ್ವಚ್ಛವಾಗಿರುತ್ತದೆ. ಹೀಗೆ ಭಗವದ್ಪ್ರಜ್ಞೆ ಗಟ್ಟಿಗೊಂಡಾಗ ಸಾಧಕ ಅನಾಯಾಸವಾಗಿ ಭಗವಂತನನ್ನು ನೇರವಾಗಿ ಕಾಣುವ ಅತ್ಯಂತ ಸುಖಾನುಭವವನ್ನು ಪಡೆಯತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

युञ्जन्नेवं सदात्मानं योगी विगतकल्मषः।
सुखेन ब्रह्मसंस्पर्शमत्यन्तं सुखमश्नुते॥

वह पापरहित योगी इस प्रकार निरंतर आत्मा को परमात्मा में लगाता हुआ सुखपूर्वक परब्रह्म परमात्मा की प्राप्ति रूप अनन्त आनंद का अनुभव करता है
॥28॥

Yunjannevam sadaa’tmaanam yogee vigatakalmashah;
Sukhena brahmasamsparsham atyantam sukham ashnute.

The Yogi, always engaging the mind thus (in the practice of Yoga), freed from sins,easily enjoys the infinite bliss of contact with Brahman (the Eternal).

ಅಧ್ಯಾಯ - 06 : ಶ್ಲೋಕ – 29

ಧ್ಯಾನ ಪ್ರಕ್ರಿಯೆಯನ್ನು ವಿವರಿಸಿದ ಕೃಷ್ಣ ಮುಂದಿನ ಶ್ಲೋಕದಲ್ಲಿ ಭಗವಂತನಲ್ಲಿ ಎಂತಹ ಗುಣದ ಅನುಸಂಧಾನ ಮಾಡಬೇಕು ಎನ್ನುವುದನ್ನು ವಿವರಿಸುತ್ತಾನೆ. ದೇವರು ಎಂದರೆ ಎಲ್ಲೋ ಸತ್ಯಲೋಕದಿಂದಾಚೆಗಿನ ವೈಕುಂಠದಲ್ಲಿನ ಅಂತಃಪುರದ ಕೋಣೆಯಲ್ಲಿ ಕುಳಿತ ಒಬ್ಬ ವ್ಯಕ್ತಿ ಎಂದು ಅನುಸಂಧಾನ ಮಾಡುವುದಲ್ಲ. ದೇವರು ಎನ್ನುವ ಕಲ್ಪನೆ ಹಿಂದಿರುವ ನಿಜವಾದ ಅನುಸಂಧಾನ ಹೇಗಿರಬೇಕು  ಎನ್ನುವುದನ್ನು ಇಲ್ಲಿ ಕೃಷ್ಣ ವಿವರಿಸುತ್ತಾನೆ.

ಸರ್ವಭೂತಸ್ಥಮಾತ್ಮಾನಂ ಸರ್ವಭೂತಾನಿ ಚಾSತ್ಮನಿ ।ಈಕ್ಷತೇ ಯೋಗಯುಕ್ತಾತ್ಮಾ ಸರ್ವತ್ರ ಸಮದರ್ಶನಃ    ॥೨೯॥

ಸರ್ವ ಭೂತ ಸ್ಥಮ್ ಆತ್ಮಾನಮ್  ಸರ್ವ ಭೂತಾನಿ ಚ ಆತ್ಮನಿ ।
ಈಕ್ಷತೇ ಯೋಗ ಯುಕ್ತ ಆತ್ಮಾ ಸರ್ವತ್ರ ಸಮದರ್ಶನಃ –

ಧ್ಯಾನಯೋಗಕ್ಕೆ ಬಗೆ ಸಜ್ಜುಗೊಂಡ ಸಾಧಕ ಎಲ್ಲ ಜೀವಿಗಳಲ್ಲು ಭಗವಂತನನ್ನು ಕಾಣುತ್ತಾನೆ ಮತ್ತು ಎಲ್ಲ ಜೀವಿಗಳನ್ನು ಭಗವಂತನಲ್ಲಿ ಕಾಣುತ್ತಾನೆ. ಎಲ್ಲೆಡೆ ಇರುವ ಭಗವಂತ ಏಕರೂಪನೆಂದು ಕಾಣುತ್ತಾನೆ.

ನಾವು ಭಗವಂತನನ್ನು ಬ್ರಹ್ಮ ಎನ್ನುತ್ತೇವೆ, ಪರಮಾತ್ಮ ಎನ್ನುತ್ತೇವೆ. ಏನು ಹಾಗೆಂದರೆ? ಎಲ್ಲ ಕಾಲದಲ್ಲೂ ಎಲ್ಲ ದೇಶದಲ್ಲೂ ತುಂಬಿರುವ ಬೃಹತ್ತಾದದ್ದು ಬ್ರಹ್ಮ. ಎಲ್ಲ ಕಡೆ ವ್ಯಾಪಿಸಿರುವ ಸರ್ವ ಗುಣಪೂರ್ಣನಾಗಿ ಕಾಲತಃ, ದೇಶತಃ, ಗುಣತಃ, ಶಕ್ತಿತಃ ಅನಂತವಾಗಿರುವವ ಪರಮಾತ್ಮ. ಇಲ್ಲಿ ಕೃಷ್ಣ ಹೇಳುತ್ತಾನೆ “ಸರ್ವಭೂತಸ್ಥಮಾತ್ಮಾನಂ”-ಅಂದರೆ ಸಮಸ್ತ ಜೀವಜಾತದೊಳಗೆ ಅಂತರ್ಯಾಮಿಯಾಗಿ ಬಿಂಬರೂಪಿ ಭಗವಂತನಿದ್ದಾನೆ. ಅಷ್ಟೇ ಅಲ್ಲ   “ಸರ್ವ ಭೂತಾನಿ ಚ ಆತ್ಮನಿ” ಅಂದರೆ ಸಮಸ್ತ ಜೀವಗಳೂ ಭಗವಂತನಲ್ಲಿವೆ. ಇದರ ಪೂರ್ಣ ಅರ್ಥ: ‘ಭಗವಂತ ನಮ್ಮ ಒಳಗೂ ಹೊರಗೂ ತುಂಬಿದ್ದಾನೆ’ ಎಂದು. ಇದು ನಾವು ಉಪಾಸನೆ ಮಾಡುವಾಗ ತಿಳಿದುಕೊಳ್ಳಬೇಕಾದ ಮುಖ್ಯವಾದ ಅಂಶ. ಒಬ್ಬ ಧ್ಯಾನಯೋಗದಲ್ಲಿರುವ ಸಾಧಕ ಭಗವಂತನ ಸರ್ವಗತತ್ವವನ್ನು ಕಾಣುವ ಬಗೆಯಿದು.

ಭಗವಂತ ಎಲ್ಲಾ ಜೀವದಲ್ಲೂ ತುಂಬಿದ್ದರೂ ಕೂಡಾ ಒಬ್ಬ ಸಾಧಕ ಆತನನ್ನು “ಸರ್ವತ್ರ ಸಮದರ್ಶನಃ”- ಅಂದರೆ ಏಕರೂಪದಲ್ಲಿ ಕಾಣುತ್ತಾನೆ. ಭಗವಂತನ ಅವತಾರ, ಆತನ ಆವೇಶ, ಸನ್ನಿಧಾನ, ಗುಣ, ಕೃತಿ, ರೂಪ ಎಲ್ಲವೂ ಅಖಂಡ. ಅದರಲ್ಲಿ ವೆತ್ಯಾಸವಿಲ್ಲ. ಎಲ್ಲವುದರ ಒಳಗೂ ಹೊರಗೂ ತುಂಬಿರುವ ಆತ ಏಕರೂಪನಾಗಿದ್ದಾನೆ. ಬೈಬಲ್ ನಲ್ಲಿ ಯಾರಾದರೂ ದೇವರ ಬಗ್ಗೆ ಹೇಳುವವರು ಏನು ಹೇಳುತ್ತಾರೆ ಎನ್ನುವಲ್ಲಿ ಹೀಗೆ ಹೇಳಿದ್ದಾರೆ “ If they say ‘the Kingdom is in the sky’ then the birds will precede you; if they say to you ‘It is in the sea’ then the fish will precede you. Rather ‘the Kingdom is inside of you and It is outside of you’. ಎಲ್ಲಾ ಗ್ರಂಥದ ತಾತ್ಪರ್ಯ ಒಂದೆ. ಹೀಗೆ ಭಗವಂತ ಸರ್ವಾಂತರ್ಯಾಮಿ ಮತ್ತು  ಸರ್ವಗತ ಎನ್ನುವ  ಅನುಸಂಧಾನ ನಮ್ಮ ನಿತ್ಯ  ಉಪಾಸನೆಯಲ್ಲಿರಬೇಕು.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

सर्वभूतस्थमात्मानं सर्वभूतानि चात्मनि।
ईक्षते योगयुक्तात्मा सर्वत्र समदर्शनः॥

सर्वव्यापी अनंत चेतन में एकीभाव से स्थिति रूप योग से युक्त आत्मा वाला तथा सब में समभाव से देखने वाला योगी आत्मा को सम्पूर्ण भूतों में स्थित और सम्पूर्ण भूतों को आत्मा में कल्पित देखता है
॥29॥

Sarvabhootasthamaatmaanam sarvabhootaani chaatmani;
Eekshate yogayuktaatmaa sarvatra samadarshanah.

With the mind harmonised by Yoga he sees the Self abiding in all beings and all beingsin the Self;
he sees the same everywhere.

ಅಧ್ಯಾಯ - 06 : ಶ್ಲೋಕ – 30

ಯೋ ಮಾಂ ಪಶ್ಯತಿ ಸರ್ವತ್ರ ಸರ್ವಂ ಚ ಮಯಿ ಪಶ್ಯತಿ ।ತಸ್ಯಾಹಂ ನ ಪ್ರಣಶ್ಯಾಮಿ ಸ ಚ ಮೇ ನ ಪ್ರಣಶ್ಯತಿ ॥೩೦॥

ಯಃ  ಮಾಮ್  ಪಶ್ಯತಿ ಸರ್ವತ್ರ ಸರ್ವಮ್  ಚ ಮಯಿ ಪಶ್ಯತಿ     ।
ತಸ್ಯ ಅಹಮ್  ನ ಪ್ರಣಶ್ಯಾಮಿ ಸಃ ಚ ಮೇ ನ ಪ್ರಣಶ್ಯತಿ –

ಯಾರು ನನ್ನನ್ನು ಎಲ್ಲೆಡೆ ಕಾಣುತ್ತಾನೆ ಮತ್ತು ಎಲ್ಲವನ್ನು ನನ್ನಲ್ಲಿ ಕಾಣುತ್ತಾನೆ ಅವನಿಗೆ ನಾನು ಎರವಾಗಲಾರೆ; ಅವನೂ ನನಗೆ ಎರವಾಗಲಾರ.

ಮುಂದುವರಿದು ಕೃಷ್ಣ ಹೇಳುತ್ತಾನೆ: “ಯಾರು ಹೀಗೆ ನನ್ನನ್ನು ಎಲ್ಲರಲ್ಲಿಯೂ ಮತ್ತು ಎಲ್ಲರನ್ನು ನನ್ನಲ್ಲಿ ಕಾಣುತ್ತಾನೋ ಅವನಿಗೆ ನಾನೆಂದೂ ಇಲ್ಲವಾಗುವುದಿಲ್ಲ. ಸದಾ ಆತನ ಯೋಗ ಕ್ಷೇಮದ ಹೊಣೆ ನನ್ನದು. ಅದೇ ರೀತಿ ನಾನು ಆತನ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇನೆ ಎನ್ನುವ ಎಚ್ಚರ ಸದಾ ಆತನಲ್ಲಿರುತ್ತದೆ” ಎಂದು. ಹೀಗೆ ಭಗವಂತನ ಅನ್ಯೋನ್ಯ ಸಂಬಂಧ, ದೇವರು ಎಂದೂ ನಮ್ಮನ್ನು ಬಿಟ್ಟು ಹಾಕುವುದಿಲ್ಲ ಎನ್ನುವ ಎಚ್ಚರ ನಮ್ಮಲ್ಲಿ ಸದಾ ಜಾಗೃತವಾಗಿರುತ್ತದೆ. ಹಿಂದೆ ಹೇಳಿದಂತೆ ಭಗವಂತ ನಾವು ಆತನನ್ನು ಹೇಗೆ ನೋಡುತ್ತೆವೋ ಹಾಗೆ. ಈ ಕಾರಣದಿಂದ ನಮ್ಮಲ್ಲಿನ ಈ ಎಚ್ಚರದಿಂದ ಯಾವತ್ತೂ ಜೀವನದಲ್ಲಿ ಬಗೆಹರಿಯದಂತಹ ಸಮಸ್ಯೆ ನಮಗೆ ಬರುವುದಿಲ್ಲ. ಪ್ರರಾಬ್ಧಕರ್ಮದಿಂದ ಬಂದರೂ ಕೂಡಾ ಕಾಣದ ಕೈ ನಮ್ಮನ್ನು ಕೈ ಹಿಡಿದು ನಡೆಸುತ್ತಿರುವ ಅನುಭವವಾಗುತ್ತದೆ. ‘ನನ್ನನ್ನು ಕಾಪಾಡುವವನಿದ್ದಾನೆ  ಅವನು ನನ್ನ ಯೋಗ-ಕ್ಷೇಮವನ್ನು ನೋಡಿಕೊಳ್ಳುತ್ತಾನೆ, ನಾನೇಕೆ ಹೆದರಬೇಕು’ ಎನ್ನುವ ದೈರ್ಯ ಬರುತ್ತದೆ. ಕೆಟ್ಟ ಯೋಚನೆ ದೂರವಾಗುತ್ತದೆ. ಸಾಮಾಜಿಕ ಪ್ರತಿಕ್ರೀಯೆಗಳಿಗೆ, ಟೀಕೆ-ಟಿಪ್ಪಣಿಗಳಿಗೆ, ಅಪವಾದಗಳಿಗೆ, ನಿಂದನೆಗಳಿಗೆ, ಯಾವುದಕ್ಕೂ ವಿಚಲಿತನಾಗುವುದಿಲ್ಲ. ಭಗವಂತ ಕೈಬಿಟ್ಟ ಎನ್ನುವ ಸ್ಥಿತಿ ಭಕ್ತನಿಗೆ ಎಂದೂ ಬರುವುದಿಲ್ಲ. ಭಗವಂತ ಎಂದೂ ತನ್ನ ಆತ್ಮೀಯ ಭಕ್ತನಿಂದ ದೂರವಾಗುವುದಿಲ್ಲ. ಇದಕ್ಕಾಗಿ ಭಗವಂತನನ್ನು ‘ಭಕ್ತಪರಾಧೀನ’ ಎನ್ನುವುದು. ಈ ಕುರಿತು ಇನ್ನಷ್ಟು ವಿವರವಾಗಿ ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸಿದ್ದಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

यो मां पश्यति सर्वत्र सर्वं च मयि पश्यति।
तस्याहं न प्रणश्यामि स च मे न प्रणश्यति॥

जो पुरुष सम्पूर्ण भूतों में सबके आत्मरूप मुझ वासुदेव को ही व्यापक देखता है और सम्पूर्ण भूतों को मुझ वासुदेव के अन्तर्गत (गीता अध्याय 9 श्लोक 6 में देखना चाहिए।) देखता है, उसके लिए मैं अदृश्य नहीं होता और वह मेरे लिए अदृश्य नहीं होता
॥30॥

Yo maam pashyati sarvatra sarvam cha mayi pashyati;
Tasyaaham na pranashyaami sa cha me na pranashyati.

He who sees Me everywhere and sees everything in Me, he does not become separatedfrom Me nor do I become separated from him.COMMENTARY: The Lord describes here the effect of oneness.

ಅಧ್ಯಾಯ - 06 : ಶ್ಲೋಕ – 31

ಸರ್ವಭೂತಸ್ಥಿತಂ ಯೋ ಮಾಂ ಭಜತ್ಯೇಕತ್ವಮಾಸ್ಥಿತಃ ।ಸರ್ವಥಾ ವರ್ತಮಾನೋSಪಿ ಸ ಯೋಗೀ ಮಯಿ ವರ್ತತೇ ॥೩೧॥

ಸರ್ವಭೂತಸ್ಥಿತಂ ಯಃ  ಮಾಮ್  ಭಜತಿ ಏಕತ್ವಮ್ ಆಸ್ಥಿತಃ।
ಸರ್ವಥಾ ವರ್ತಮಾನಃ ಅಪಿ ಸಃ  ಯೋಗೀ ಮಯಿ ವರ್ತತೇ-

ಎಲ್ಲಾ ಜೀವಿಗಳಲ್ಲಿರುವ ನನ್ನನ್ನು ಏಕರೀತಿಯಿಂದ ತಿಳಿದು ಪೂಜಿಸುವವನು ಯಾವ ಸ್ಥಿತಿಯಲ್ಲಿದ್ದರೂ ನನ್ನಲ್ಲಿ ಇರುತ್ತಾನೆ.

ಕೃಷ್ಣ ಹೇಳುತ್ತಾನೆ “ಸರ್ವಗತನಾದ ಭಗವಂತ ಎಲ್ಲ ಕಡೆ ಏಕರೂಪವಾಗಿದ್ದಾನೆ ಎನ್ನುವ ಅನುಸಂಧಾನ ಮತ್ತು ನಿರಂತರ ಭಕ್ತಿ ಇರುವ ಸಾಧಕ, ಆತ  ಹೇಗೇ ಇರಲಿ, ಅವನು ನನ್ನನ್ನು ಸೇರುವುದು ನಿಶ್ಚಿತ” ಎಂದು. ಅಪರೋಕ್ಷ ಜ್ಞಾನ ಪಡೆದವ ಭಗವಂತನಿಂದ ಎಂದೂ ದೂರ ಸರಿಯುವುದಿಲ್ಲ.  ಆತ ಮೋಕ್ಷವನ್ನು ಪಡೆದು ಭಗವಂತನಲ್ಲಿ  ನೆಲೆಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

सर्वभूतस्थितं यो मां भजत्येकत्वमास्थितः।
सर्वथा वर्तमानोऽपि स योगी मयि वर्तते॥

जो पुरुष एकीभाव में स्थित होकर सम्पूर्ण भूतों में आत्मरूप से स्थित मुझ सच्चिदानन्दघन वासुदेव को भजता है, वह योगी सब प्रकार से बरतता हुआ भी मुझमें ही बरतता है
॥31॥

Sarvabhootasthitam yo maam bhajatyekatwamaasthitah;
Sarvathaa vartamaano’pi sa yogee mayi vartate.

He who, being established in unity, worships Me who dwells in all beings,—that Yogiabides in Me, whatever may be his mode of living.

ಅಧ್ಯಾಯ - 06 : ಶ್ಲೋಕ – 32

ಆತ್ಮೌಪಮ್ಯೇನ ಸರ್ವತ್ರ ಸಮಂ ಪಶ್ಯತಿ ಯೋSರ್ಜುನ ।ಸುಖಂ ವಾ ಯದಿ ವಾ ದುಃಖಂ ಸ ಯೋಗೀ ಪರಮೋ ಮತಃ  ॥೩೨॥

ಆತ್ಮಔಪಮ್ಯೇನ ಸರ್ವತ್ರ ಸಮಮ್  ಪಶ್ಯತಿ ಯಃ ಅರ್ಜುನ ।
ಸುಖಮ್  ವಾ ಯದಿ ವಾ ದುಃಖಮ್  ಸಃ ಯೋಗೀ ಪರಮಃ ಮತಃ –

ಸುಖವಿರಲಿ, ದುಃಖವಿರಲಿ, ಎಲ್ಲರ ಬೇಕು-ಬೇಡಗಳನ್ನು ತನ್ನ ಹಾಗೆಯೇ ಸಮಾನತೆಯಿಂದ ಕಾಣುವವನು, ಓ ಅರ್ಜುನ, ಬಹಳ ದೊಡ್ಡ ಸಾಧಕ ಎನ್ನುವುದು ತೀರ್ಮಾನ.

ಕೃಷ್ಣ ನಮಗೆ ಸಮದೃಷ್ಟಿ ಬಗ್ಗೆ ಹಿಂದೆ ಕೂಡಾ ಹೇಳಿದ್ದ. ಇಲ್ಲಿ ಮುಖ್ಯವಾಗಿ ಸಾತ್ವಿಕರೊಂದಿಗೆ, ಭಗವದ್ಭಕ್ತರೊಂದಿಗೆ ಒಬ್ಬ ಸಾಧಕ ಯಾವ ರೀತಿ ಸಮದರ್ಶನ ಬೆಳೆಸಿಕೊಳ್ಳುತ್ತಾನೆ ಎನ್ನುವುದನ್ನು ವಿವರಿಸಿದ್ದಾನೆ. ಯೋಗಿಗಳಲ್ಲಿ ಶ್ರೇಷ್ಠನಾದವನು ತನ್ನಂತೆಯೇ ಇನ್ನೊಬ್ಬರು ಎಂದು ತಿಳಿದಿರುತ್ತಾನೆ. ನಮಗೆ ಯಾವುದು ದುಃಖವಾಗುತ್ತದೋ ಅದು ಇನ್ನೊಬ್ಬರಿಗೂ ದುಃಖವನ್ನು ಕೊಡುತ್ತದೆ ಎನ್ನುವ ಸತ್ಯವನ್ನು ಆತ ಅರಿತಿರುತ್ತಾನೆ.  ಎಲ್ಲರಿಗೂ ಸುಖ-ದುಃಖಗಳಿವೆ, ನನ್ನನಂತೆಯೇ ಅವರು ದುಃಖವನ್ನು ಇಷ್ಟಪಡುವುದಿಲ್ಲ ಎನ್ನುವ ಎಚ್ಚರದಿಂದ ಸಾಧಕ ವ್ಯವಹರಿಸುತ್ತಾನೆ. ಯಾರು ಇನ್ನೊಬ್ಬರ ನೋವನ್ನು ತನ್ನ ನೋವಿನಷ್ಟೇ ನೋವಿನಿಂದ ಕಾಣುತ್ತಾನೋ, ಯಾರು ಇನ್ನೊಬ್ಬರ ಸಂತೋಷವನ್ನು- ಯಶಸ್ಸನ್ನು ತನ್ನ ಯಶಸ್ಸೆಂದು ತಿಳಿದು ಖುಷಿ ಪಡುತ್ತಾನೋ- ಅವನು ಬಹಳ ದೊಡ್ಡ ಯೋಗ ಸಾಧಕ.
ಭಗವದ್ಭಕ್ತರಲ್ಲಿ ಭಗವಂತನ ವಿಶೇಷ ಸನ್ನಿಧಾನವಿದೆ. ಆದ್ದರಿಂದ ಅವರ ಸುಖ-ದುಃಖಕ್ಕೆ ನಾವು  ಸ್ಪಂದಿಸಿದಾಗ ಅದು ಅವರೊಳಗಿನ ಭಗವಂತನ ಪೂಜೆಯಾಗುತ್ತದೆ.

ಈ ಅಧ್ಯಾಯದಲ್ಲಿ ಇಲ್ಲಿಯವರೆಗೆ ಧ್ಯಾನದ ಬಗ್ಗೆ ಕೃಷ್ಣ ವಿಸ್ತಾರವಾಗಿ ಹೇಳಿದ. ಕೃಷ್ಣನ ಈ ವಿವರಣೆಯಲ್ಲಿ ಎಲ್ಲರಿಗೂ ಕಾಣುವ ಒಂದೇ ಒಂದು ಸರ್ವೇ ಸಾಮಾನ್ಯ ಕಷ್ಟದ ವಿಷಯವೆಂದರೆ ‘ಚಂಚಲ ಮನಸ್ಸನ್ನು ಹೊಂದಿದ ನಾವು ಅದನ್ನು ನಿಯಂತ್ರಿಸಿ ಸಮದೃಷ್ಟಿ ಬೆಳೆಸಿಕೊಳ್ಳುವುದು’. ಇದು ನಿಜವಾಗಲೂ ಸಾಧ್ಯವೇ? ಮುಂದಿನ ಶ್ಲೋಕದಲ್ಲಿ ಅರ್ಜುನ ನಮ್ಮೆಲ್ಲರ ಪರ ಈ ಪ್ರಶ್ನೆಯನ್ನು ಕೃಷ್ಣನಲ್ಲಿ ಮಂಡಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

आत्मौपम्येन सर्वत्र समं पश्यति योऽर्जुन।
सुखं वा यदि वा दुःखं स योगी परमो मतः॥

हे अर्जुन! जो योगी अपनी भाँति (जैसे मनुष्य अपने मस्तक, हाथ, पैर और गुदादि के साथ ब्राह्मण, क्षत्रिय, शूद्र और म्लेच्छादिकों का-सा बर्ताव करता हुआ भी उनमें आत्मभाव अर्थात अपनापन समान होने से सुख और दुःख को समान ही देखता है, वैसे ही सब भूतों में देखना 'अपनी भाँति' सम देखना है।) सम्पूर्ण भूतों में सम देखता है और सुख अथवा दुःख को भी सबमें सम देखता है, वह योगी परम श्रेष्ठ माना गया है
॥32॥

Aatmaupamyena sarvatra samam pashyati yo’rjuna;
Sukham vaa yadi vaa duhkham sa yogee paramo matah.

He who, through the likeness of the Self, O Arjuna, sees equality everywhere, be itpleasure or pain, he is regarded as the highest Yogi!Arjuna Uvaacha:

ಅಧ್ಯಾಯ - 06 : ಶ್ಲೋಕ – 33

ಅರ್ಜುನ ಉವಾಚ ।ಯೋSಯಂ ಯೋಗಸ್ತ್ವಯಾ ಪ್ರೋಕ್ತಃ ಸಾಮ್ಯೇನ ಮಧುಸೂದನ ।ಏತಸ್ಯಾಹಂ ನ ಪಶ್ಯಾಮಿ ಚಂಚಲತ್ವಾತ್ ಸ್ಥಿತಿಂ ಸ್ಥಿರಾಮ್ ॥೩೩॥

ಅರ್ಜುನಃ  ಉವಾಚ-ಅರ್ಜುನ ಕೇಳಿದನು:
ಯಃ ಅಯಾಮ್  ಯೋಗಃ ತ್ವಯಾ  ಪ್ರೋಕ್ತಃ ಸಾಮ್ಯೇನ ಮಧು ಸೂದನ ।
ಏತಸ್ಯ ಅಹಮ್  ನ ಪಶ್ಯಾಮಿ ಚಂಚಲತ್ವಾತ್ ಸ್ಥಿತಿಮ್  ಸ್ಥಿರಾಮ್-

ಮಧುಸೂದನ, ನೀನು ಸಮದೃಷ್ಟಿಯ ಧ್ಯಾನ ಯೋಗವನ್ನು ಹೇಳಿದೆ. ನನಗನಿಸುತ್ತದೆ: ಮನಸ್ಸು ಚಂಚಲವಾದ್ದರಿಂದ ಇದರಲ್ಲಿ ಗಟ್ಟಿಯಾಗಿ ನಿಲ್ಲುವುದು ಸಾಧ್ಯವಿಲ್ಲ.

ಸಾತ್ವಿಕರಿಗೆ ಆನಂದವನ್ನು ಕೊಡುವ ‘ಓ ಮಧುಸೂದನ’ ಎಂದು ಅರ್ಜುನ ಶ್ರೀಕೃಷ್ಣನನ್ನು ಸಂಭೋದಿಸಿ ಹೇಳುತ್ತಾನೆ: “ನೀನು ಸಂಗ್ರಹವಾಗಿ ಹೇಳಿದ ಈ ಧ್ಯಾನ ಪದ್ಧತಿಯನ್ನು ನಾವು ಅಳವಡಿಸಿಕೊಳ್ಳಲು ಹೇಗೆ ಸಾಧ್ಯ?  ಧ್ಯಾನವೆಂಬುದು ಸಂಪೂರ್ಣ ಮಾನಸಿಕ ಪ್ರಕ್ರಿಯೆ. ಆದರೆ ನಮ್ಮ ಮನಸ್ಸು ಪ್ರಕ್ಷಬ್ಧ ಮತ್ತು ಚಂಚಲ. ಇಂತಹ ಮನಸ್ಸನ್ನು ಹಿಡಿತದಲ್ಲಿಟ್ಟು ನೀನು ಹೇಳಿದ ಸ್ಥಿರವಾದ ಈ ಧ್ಯಾನಯೋಗವನ್ನು ಸಾಧಿಸುವುದು ಸಾಧ್ಯವಿಲ್ಲ” ಎನ್ನುತ್ತಾನೆ ಅರ್ಜುನ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( मन के निग्रह का विषय )
अर्जुन उवाच
योऽयं योगस्त्वया प्रोक्तः साम्येन मधुसूदन।
एतस्याहं न पश्यामि चञ्चलत्वात्स्थितिं स्थिराम्‌॥

अर्जुन बोले- हे मधुसूदन! जो यह योग आपने समभाव से कहा है, मन के चंचल होने से मैं इसकी नित्य स्थिति को नहीं देखता हूँ
॥33॥

Yo’yam yogastwayaa proktah saamyena madhusoodana;
Etasyaaham na pashyaami chanchalatwaat sthitim sthiraam.

Arjuna said:
This Yoga of equanimity taught by Thee, O Krishna, I do not see its steady continuance,because of restlessness (of the mind)!

ಅಧ್ಯಾಯ - 06 : ಶ್ಲೋಕ – 34

ಚಂಚಲಂ ಹಿ ಮನಃ ಕೃಷ್ಣ ಪ್ರಮಾಥಿ ಬಲವದ್ ದೃಢಮ್ ।ತಸ್ಯಾಹಂ ನಿಗ್ರಹಂ ಮನ್ಯೇ ವಾಯೋರಿವ ಸುದುಷ್ಕರಮ್ ॥೩೪॥

ಚಂಚಲಂ ಹಿ ಮನಃ ಕೃಷ್ಣ ಪ್ರಮಾದಿ ಬಲ ವತ್  ದೃಢಮ್           ।
ತಸ್ಯ ಅಹಮ್  ನಿಗ್ರಹಮ್  ಮನ್ಯೇ ವಾಯೋಃ ಇವ ಸು ದುಷ್ಕರಮ್ –ಕೃಷ್ಣ ಬಗೆ ಚಂಚಲವಲ್ಲವೇ? ನಮ್ಮನ್ನು ಕಂಗೆಡಿಸಿಬಿಡುವಷ್ಟು ಗಟ್ಟಿ, ಬಲಶಾಲಿ. ಅದನ್ನು ಬಿಗಿ ಹಿಡಿಯುವುದೆಂದರೆ ಗಾಳಿಯನ್ನು ಬಿಗಿ ಹಿಡಿದಂತೆ ಎಂದು ನನ್ನ ಭಾವನೆ.

ಮನಸ್ಸು ತುಂಬಾ ಚಂಚಲ, ಅದು ವಿಷಯದಿಂದ ವಿಷಯಕ್ಕೆ ಹಾರುತ್ತಿರುತ್ತದೆ. ನನ್ನ ಮನಸ್ಸು ಸದಾ ನನ್ನನ್ನು ಮಣಿಸುತ್ತಿದೆ ಆದರೆ ನಾನು ಅದನ್ನು ಮಣಿಸಲಾಗುತ್ತಿಲ್ಲ. ತನಗೆ ಬೇಕಾದಂತೆ ಇನ್ನೊಬ್ಬರನ್ನು ಬಗ್ಗು ಬಡಿಯುವ ಸ್ವಭಾವ ಮನಸ್ಸಿನದು. ನಮ್ಮ ಭಗವದ್ ಸಂಕಲ್ಪವನ್ನು ಅದು ನುಚ್ಚು ನೂರುಮಾಡಿ ತನ್ನ ಸ್ವಾಧೀನ ಮಾಡಿಕೊಂಡು ಬಿಡುತ್ತದೆ. ಇಂತಹ ಮನಸ್ಸನ್ನು ಸಾಮಾನ್ಯ ಮನುಷ್ಯ ನಿಗ್ರಹ ಮಾಡುವುದು ಹೇಗೆ? ಬೀಸುವ ಗಾಳಿಯನ್ನು ಹೇಗೆ ಮುಷ್ಠಿಯಲ್ಲಿ ಹಿಡಿಯುವುದು ಅಸಾಧ್ಯವೋ ಹಾಗೆ ಮನಸ್ಸನ್ನು ನಿಗ್ರಹ ಮಾಡುವುದು ಅಸಾಧ್ಯ ಎನ್ನುವುದು ನನ್ನ ಭಾವನೆ ಎನ್ನುತ್ತಾನೆ ಅರ್ಜುನ.

ಅರ್ಜುನನ ಈ ಪ್ರಶ್ನೆ ಭಾಗಶಃ ನಮ್ಮ ಪ್ರತಿಯೊಬ್ಬ ಓದುಗರಿಗೂ ಈ ಅಧ್ಯಾಯದ ಇಲ್ಲಿಯ ತನಕದ ಭಾಗವನ್ನು ಓದುವಾಗ ಮನಸ್ಸಿಗೆ ಬಂದಿರುತ್ತದೆ. “ಇದೆಲ್ಲಾ ನಮ್ಮಂತವರಿಗಲ್ಲ” ಅಥವಾ “ಇದು  ನಮ್ಮಿಂದ ಸಾಧ್ಯವಿಲ್ಲ” ಎನ್ನುವುದು ಸಾಮಾನ್ಯವಾಗಿ ನಮ್ಮ ಮನಸ್ಸಿಗೆ ಬರುವ ಮೊದಲ ವಿಚಾರ. ಈ ಕಾರಣವನ್ನು ತಿಳಿದೇ ಇಲ್ಲಿ ನಮ್ಮೆಲ್ಲರ ಪ್ರತಿನಿಧಿ ‘ನರ’ನಾರಾಯಣನನ್ನು ಈ ರೀತಿ ಪ್ರಶ್ನಿಸಿದ್ದಾನೆ. ಈಗ ನರನ ಈ ಪ್ರಶ್ನೆಗೆ ಕೃಷ್ಣ ಏನೆಂದು ಉತ್ತರಿಸುತ್ತಾನೆ ಎಂದು ತಿಳಿಯುವ ಕರ್ಣಕುತೂಹಲ ನಿಮಗೆಲ್ಲರಿಗೂ ಮೂಡಿರುತ್ತದೆ. ಏಕೆಂದರೆ ನಮಗೆ ಆ ನಮ್ಮ ಚಂಚಲ ಮನಸ್ಸನ್ನು ಮಣಿಸಬೇಕು, ಮಣಿಸಿ ಭಗವಂತನಲ್ಲಿ ನೆಲೆ ನಿಲ್ಲಿಸಬೇಕು ಎನ್ನುವ ಸಂಕಲ್ಪವಿದೆ. ಆದರೆ ಆ ಮನಸ್ಸು ಮಹಾ ಬಲಶಾಲಿ ಎನ್ನುವ ಭಯವಿದೆ!  ಬನ್ನಿ ಆ ಮಧುಸೂದನ ನಮ್ಮ ಪ್ರಶ್ನೆಗೆ ಏನೆಂದು ಉತ್ತರಿಸಿದ ಎಂದು  ಈ ಅಧ್ಯಾಯದ ಮುಂದಿನ ಭಾಗದಲ್ಲಿ  ನೋಡೋಣ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

चञ्चलं हि मनः कृष्ण प्रमाथि बलवद्दृढम्‌।
तस्याहं निग्रहं मन्ये वायोरिव सुदुष्करम्‌॥

क्योंकि हे श्रीकृष्ण! यह मन बड़ा चंचल, प्रमथन स्वभाव वाला, बड़ा दृढ़ और बलवान है। इसलिए उसको वश में करना मैं वायु को रोकने की भाँति अत्यन्त दुष्कर मानता हूँ
॥34॥

Chanchalam hi manah krishna pramaathi balavad dridham;
Tasyaaham nigraham manye vaayoriva sudushkaram.

The mind verily is restless, turbulent, strong and unyielding, O Krishna! I deem it asdifficult to control as to control the wind.COMMENTARY: The mind ever changes its point of concentration from one object toanother. So it is always restless. It is not only restless but also turbulent and impetuous, strong andobstinate. It produces agitation in the body and in the senses. That is why the mind is even moredifficult to control than to control the wind.

ಅಧ್ಯಾಯ - 06 : ಶ್ಲೋಕ – 35

ಭಗವಾನುವಾಚ ।ಅಸಂಶಯಂ ಮಹಾಬಾಹೋ ಮನೋ ದುರ್ನಿಗ್ರಹಂ ಚಲಮ್ |ಅಭ್ಯಾಸೇನ ತು ಕೌಂತೇಯ ವೈರಾಗ್ಯೇಣ ಚ ಗೃಹ್ಯತೇ ॥೩೫॥

ಭಗವಾನುವಾಚ-ಭಗವಂತ ಹೇಳಿದನು:
ಅಸಂಶಯಮ್ ಮಹಾಬಾಹೋ ಮನಃ  ದುರ್ನಿಗ್ರಹಮ್ ಚಲಮ್ |
ಅಭ್ಯಾಸೇನ ತು ಕೌಂತೇಯ ವೈರಾಗ್ಯೇಣ ಚ ಗೃಹ್ಯತೇ –

ಮಹಾವೀರ, ಖಂಡಿತ ಹೌದು;ಬಗೆ ಚಪಲವಾದದ್ದು, ಹಿಡಿತಕ್ಕೆ ಸಿಗದ್ದು. ಆದರೆ ಕೌಂತೇಯ, ಮರಳಿ ಮರಳಿ ಯತ್ನಿಸುವುದರಿಂದ ಮತ್ತು ವೈರಾಗ್ಯದಿಂದ ಅದನ್ನು ಬಿಗಿಹಿಡಿಯಬಹುದು.

ಕೃಷ್ಣ ಹೇಳುತ್ತಾನೆ “ನೀನು ಹೇಳುವುದರಲ್ಲಿ ಯಾವ ಸಂಶಯವೂ ಇಲ್ಲ. ಮನಸ್ಸನ್ನು ತಡೆ ಹಿಡಿಯುವುದು ಸುಲಭದ ಕೆಲಸವಲ್ಲ, ಆದರೆ ಅಭ್ಯಾಸ ಮತ್ತು ವೈರಾಗ್ಯದಿಂದ ಇದನ್ನು ಕ್ರಮೇಣವಾಗಿ ಸಾಧಿಸಬಹುದು” ಎಂದು. ನಾವು ಪ್ರಯತ್ನವಿಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪ್ರತಿಯೊಂದಕ್ಕೂ ಪ್ರಯತ್ನ ಬೇಕು. ನಾವು ನಮ್ಮ ಮನಸ್ಸು ಹೇಳಿದಂತೆ ಕುಣಿಯುವ ಅಭ್ಯಾಸ ಮಾಡಿಕೊಂಡು ಬಿಟ್ಟಿದ್ದೇವೆ. ಅದನ್ನು ಬಿಟ್ಟು  ನಾವು ಹೇಳಿದಂತೆ ಮನಸ್ಸು ಕೇಳುವಂತೆ ಮಾಡುವ ಪ್ರಯತ್ನವನ್ನು ನಾವೆಂದೂ ಮಾಡಿರುವುದಿಲ್ಲ. ಇಲ್ಲಿ ಕೃಷ್ಣ ವೈರಾಗ್ಯ ಮತ್ತು ಅಭ್ಯಾಸ  ಎನ್ನುವ ಎರಡು ವಿಚಾರವನ್ನು ಒತ್ತುಕೊಟ್ಟು ಹೇಳುತ್ತಾನೆ. ವೈರಾಗ್ಯ ಎಂದರೆ ಯಾವುದರ ಕಡೆ ಮನಸ್ಸು ಹರಿಯಬಾರದೋ ಅದನ್ನು ಮನಸ್ಸಿಗೆ ಉಣಿಸದೇ(Feed) ದೂರವಿಡುವುದು. ನಮಗೆ ದೇವರು ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ತಿಳಿದುಕೊಳ್ಳುವ ಬುದ್ಧಿ ಕೊಟ್ಟಿದ್ದಾನೆ. ಆ ಬುದ್ಧಿಯನ್ನು ಉಪಯೋಗಿಸಿ ನಮ್ಮ ಮನಸ್ಸನ್ನು ಕೆಟ್ಟದರಿಂದ ದೂರವಿರಿಸುವುದು. ಕೆಟ್ಟದ್ದನ್ನು ಮನಸ್ಸಿಗೆ ಪರಿಚಯ ಮಾಡಿಕೊಡದೇ ಇರುವುದು. ಹೀಗೆ ಯಾವುದು ನಮ್ಮ ಬೆಳವಣಿಗೆಗೆ ಬಾದಕವೋ ಅದನ್ನು ಮನಸ್ಸಿನಿಂದ ದೂರವಿಡುವುದು ವೈರಾಗ್ಯ. ಇದರ ಜೊತೆಗೆ ನಿರಂತರವಾಗಿ ಏಕಾಗ್ರತೆಗೆ ಬೇಕಾದ ಅಭ್ಯಾಸವನ್ನು ತಪ್ಪದೆ ಮಾಡುವುದು. ಇದರಿಂದ ನಾವು ಮನಸ್ಸನ್ನು ಖಂಡಿತವಾಗಿ ನಿಯಂತ್ರಿಸಬಹುದು ಎನ್ನುತ್ತಾನೆ ಕೃಷ್ಣ.
ಸಾಮಾನ್ಯವಾಗಿ ನಾವು ನಮ್ಮ ಮನಸ್ಸಿಗೆ ಪ್ರತೀ ದಿನ ಬೇಡದ ತರಬೇತಿಯನ್ನೇ ಕೊಡುತ್ತೇವೆ. ಉದಾಹರಣೆಗೆ ನಮ್ಮ ಅಮೂಲ್ಯವಾದ ಸಮಯದಲ್ಲಿ ದೂರದರ್ಶನದಲ್ಲಿ ಬರುವ ಯಾವುದೋ ದೈನಂದಿನ ದಾರಾವಾಹಿ, ಸಿನಿಮ ಇತ್ಯಾದಿ ವಿಷಯದಲ್ಲಿ ನಮ್ಮ ಮನಸ್ಸನ್ನು ಸಂಪೂರ್ಣ ತೊಡಗಿಸಿಕೊಳ್ಳುತ್ತೇವೆ. ನಮಗೆ ಆಧ್ಯಾತ್ಮಿಕ ಗ್ರಂಥಗಳನ್ನು ಓದಲು ಸಮಯವೇ ಇರುವುದಿಲ್ಲ! ದೇವರ ಪೂಜೆ ಮಾಡುವಾಗ ಕೂಡಾ ನಮಗೆ ಆ ದಾರಾವಾಹಿಯ ಮುಂದಿನ ಭಾಗದ  ಚಿಂತೆ. ನಾವು ರಾತ್ರಿ ಮಲಗುವಾಗ ಯಾವುದೋ ಕೆಟ್ಟ ಪುಸ್ತಕವನ್ನು ಓದಿ, ಕೆಟ್ಟ  ದಾರಾವಾಹಿಯನ್ನು ನೋಡಿ ಮಲಗುವ ಬದಲು, ಒಳ್ಳೆಯ ಅಧ್ಯಾತ್ಮಿಕ ಗ್ರಂಥವನ್ನು ಓದುವ ಅಭ್ಯಾಸವನ್ನು ಮಾಡಿಕೊಂಡು ನಮಗೆ ಬೇಡವಾದ ವಿಷಯದತ್ತ ವೈರಾಗ್ಯ ಸಾಧಿಸಬೇಕು. ಇದು ಕೇವಲ ಒಂದು ಉದಾಹರಣೆಯಷ್ಟೇ, ನಾವು ನಮ್ಮ ದೈನಂದಿನ ಚಟುವಟಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ನಮಗೆ ಇಂತಹ ಸಾವಿರ ಉದಾಹರಣೆಗಳು ಸಿಗುತ್ತವೆ.
ಮನಸ್ಸು ತನಗೆ ತಿಳಿಯದ ವಿಷಯದತ್ತ ಹೆಚ್ಚು ಗಮನ ಕೊಡುವುದಿಲ್ಲ. ಆದರೆ ಒಮ್ಮೆ ರುಚಿ ನೋಡಿದರೆ ಅದು ನಿಮ್ಮನ್ನು ಬಿಡುವುದಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಮಧ್ಯ ಸೇವನೆ. ಎಂದೂ ಮಧ್ಯ ಸೇವನೆ ಮಾಡದವನಿಗೆ ಅದು ಅಸಹ್ಯ, ಆದರೆ ಒಮ್ಮೆ ಒತ್ತಾಯದಿಂದ ಬೇಡದ ಮಧ್ಯವನ್ನು ಸೇವಿಸಿ ನಮ್ಮ ಮನಸ್ಸಿಗೆ ಅದರ ಪರಿಚಯ ಮಾಡಿಸಿದಾಗ ನಮ್ಮ ಮನಸ್ಸು “ಹೇಗೂ ಒಮ್ಮೆ ಕುಡಿದಿದ್ದೀಯ ಇನ್ನೊಮ್ಮೆ ಕುಡಿದರೆ ಏನೂ ಆಗುವುದಿಲ್ಲ-ಕುಡಿ” ಎಂದು ಹೇಳುತ್ತದೆ! ಇದರ ಪರಿಣಾಮ ಏನು ಎನ್ನುವುದನ್ನು ಇಲ್ಲಿ ವಿವರಿಸಬೇಕಾಗಿಲ್ಲ.
ನಮ್ಮ ಇನ್ನೊಂದು ಮಹಾ ತಪ್ಪು ಎಂದರೆ ಬೇಡದ ವಿಷಯದಲ್ಲಿ ತಲೆ ಹಾಕುವುದು. “ಯಾರೋ ಏನೋ ಮಾಡಿದರಂತೆ”-ಈ ರೀತಿ ಒಂದು ಮಾತು ನಮ್ಮ ಕಿವಿಗೆ ಬಿದ್ದಾಗ ನಾವು ನಮಗೆ ಆ ವಿಚಾರವನ್ನು ತಿಳಿಯುವುದರಿಂದ ಏನು ಉಪಯೋಗ ಎಂದು ಯೋಚಿಸದೆ ಆ ವಿಷಯಕ್ಕೆ ತಲೆ ಹಾಕುತ್ತೇವೆ. ಒಮ್ಮೆ ತಲೆ ಹಾಕಿದರೆ ಮತ್ತೆ ಮನಸ್ಸು ಅದನ್ನು ಬಿಡುವುದಿಲ್ಲ. ಎಲ್ಲವನ್ನೂ ಬಿಟ್ಟು ಆ ವಿಷಯದ ಬೆನ್ನು ಹತ್ತುತ್ತದೆ. ಆದ್ದರಿಂದ ಒಂದು ವಿಷಯಕ್ಕೆ ತಲೆ ಹಾಕುವ ಮೊದಲು ಆ ವಿಷಯದ ಬಗ್ಗೆ ಬುದ್ಧಿಪೂರ್ವಕವಾಗಿ ನಿರ್ಧಾರ ತೆಗೆದುಕೊಂಡು ಮನಸ್ಸು ಇಲ್ಲ ಸಲ್ಲದ ವಿಚಾರದ ಹಿಂದೆ ಓಡದಂತೆ ತಡೆಹಿಡಿಯಬೇಕು. ಇದಕ್ಕೆ ಉತ್ತಮ ದೃಷ್ಟಾಂತ ಗ್ರೀಕ್ ದೇಶದ ಸೋಕ್ರಾಟೆಸ್ ಎನ್ನುವ ವಿಚಾರವಾಧಿಯ ಮೂರು ಹಂತದ ಸೋಸುವಿಕೆ ಎನ್ನುವ ಕಥೆ(The Socrates Triple Filter Test). ಒಮ್ಮೆ ಸೋಕ್ರಾಟೆಸ್ ನ ಒಬ್ಬ ಪರಿಚಯದ ವ್ಯಕ್ತಿ ಬಂದು ಸೋಕ್ರಾಟೆಸ್ ನಲ್ಲಿ ಈ ರೀತಿ ಹೇಳುತ್ತಾನೆ “ನಾನು ನಿನ್ನ ಮಿತ್ರನ ಬಗ್ಗೆ ಏನು ಕೇಳಿದೆ ಗೊತ್ತಾ?( Do you know what I just heard about your friend?)” ಎಂದು. ತಕ್ಷಣ ಸೋಕ್ರಾಟೆಸ್ ಹೇಳುತ್ತಾನೆ “ಸ್ವಲ್ಪ ನಿಲ್ಲು (Hold on a minute); ನೀನು ನನ್ನ ಮಿತ್ರನ ಬಗ್ಗೆ ಏನನ್ನಾದರೂ ಹೇಳುವ ಮೊದಲು ನಾನು ಮೂರು ವಿಚಾರವನ್ನು ತಿಳಿಯ ಬಯಸುತ್ತೇನೆ. ಮೊದಲಿಗೆ ನೀನು ಹೇಳಲು ಹೊರಟಿರುವ ವಿಚಾರದ ಬಗ್ಗೆ ನಿನಗೆ ನೈಜ ಮಾಹಿತಿ ಇದೆಯೋ?(Have you made absolutely sure that what you are about to tell me is true?)”. ಆಗ ಆ ವ್ಯಕ್ತಿ ಹೇಳುತ್ತಾನೆ “ ಇಲ್ಲ.... ಆದರೆ ನಾನು ಈ ವಿಚಾರವನ್ನು ಕೇಳಿಸಿಕೊಂಡೆ...(“No, actually I just heard about it and…)” ಎಂದು. ಈಗ ಸೋಕ್ರಾಟೆಸ್ ಕೇಳುತ್ತಾನೆ “ ಅಂದರೆ ನಿನಗೆ ಆ ವಿಚಾರ ಸರಿಯಾಗಿ ತಿಳಿದಿಲ್ಲ(So you don’t really know if it’s true or not), ಇರಲಿ, ನೀನು ಹೇಳಬೇಕೆಂದಿರುವ ವಿಚಾರ ತುಂಬಾ ಒಳ್ಳೆಯ ವಿಚಾರವೋ?( Is what you are about to tell me about my friend something good?)”. ಆಗ ಆ ವ್ಯಕ್ತಿ ಹೇಳುತ್ತಾನೆ “ಅಲ್ಲ ಅದು ಒಳ್ಳೆಯ ವಿಚಾರವಲ್ಲ(No, on the contrary…)” ಎಂದು. ಕೊನೆಯದಾಗಿ ಸೋಕ್ರಾಟೆಸ್ ಕೇಳುತ್ತಾನೆ “ನೀನು ಹೇಳಲು ಹೊರಟಿರುವ ವಿಚಾರ ನನಗೆ ಉಪಯೋಗಕ್ಕೆ ಬರುವ ವಿಚಾರವೋ?( Is what you want to tell me about my friend going to be useful to me?)”. ಆಗ ಆ ವ್ಯಕ್ತಿ ಹೇಳುತ್ತಾನೆ “ಅಲ್ಲ (No, not really)” ಎಂದು. ಈಗ ಸೋಕ್ರಾಟೆಸ್ ಹೇಳುತ್ತಾನೆ “ನೀನು ಹೇಳಲು ಹೊರಟಿರುವ ವಿಚಾರ ನಿಜವಲ್ಲ, ಒಳ್ಳೆಯ ವಿಚಾರವಲ್ಲ, ಉಪಯೋಗಕ್ಕೆ ಬರುವ ವಿಚಾರವಲ್ಲ ಮತ್ತೆ ಏಕೆ ನನಗೆ ಹೇಳುತ್ತೀಯ?( if what you want to tell me is neither true nor good nor even useful, why tell it to me at all)”.
ಸ್ನೇಹಿತರೆ, ಇಲ್ಲಿ ನಾವು ಕಲಿಯಬೇಕಾದ ವಿಚಾರವೇನೆಂದರೆ ಮನಸ್ಸನ್ನು ಇಲ್ಲ ಸಲ್ಲದ ವಿಚಾರದಲ್ಲಿ ತೊಡಗಿಸುವ ಮೊದಲು ವಿಷಯವನ್ನು ಮೂರು ಬಾರಿ ಸೋಸುವುದನ್ನು ಕಲಿಯಿರಿ. ಬೇಡದ ವಿಚಾರದಲ್ಲಿ ವೈರಾಗ್ಯವನ್ನು ತಾಳಿ ಮತ್ತು ಮನಸ್ಸನ್ನು ಏಕಾಗ್ರಮಾಡುವ ಸಾಧನೆಯನ್ನು ಮನಸ್ಸಿಗೆ ಅಭ್ಯಾಸ ಮಾಡಿಸಿ. ಈ ಮಾರ್ಗದಲ್ಲಿ ಸಾಗಿದವರಿಗೆ ಧ್ಯಾನಯೋಗ ಎಂದೂ ಅಸಾಧ್ಯವಲ್ಲ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

श्रीभगवानुवाच
असंशयं महाबाहो मनो दुर्निग्रहं चलम्‌।
अभ्यासेन तु कौन्तेय वैराग्येण च गृह्यते॥

श्री भगवान बोले- हे महाबाहो! निःसंदेह मन चंचल और कठिनता से वश में होने वाला है। परन्तु हे कुंतीपुत्र अर्जुन! यह अभ्यास (गीता अध्याय 12 श्लोक 9 की टिप्पणी में इसका विस्तार देखना चाहिए।) और वैराग्य से वश में होता है
॥35॥

Sri Bhagavaan Uvaacha:
Asamshayam mahaabaaho mano durnigraham chalam;
Abhyaasena tu kaunteya vairaagyena cha grihyate.

The Blessed Lord said:
Undoubtedly, O mighty-armed Arjuna, the mind is difficult to control and restless;
but,by practice and by dispassion it may be restrained!

ಅಧ್ಯಾಯ - 06 : ಶ್ಲೋಕ – 36

ಅಸಂಯತಾತ್ಮನಾ ಯೋಗೋ ದುಷ್ಪ್ರಾಪ ಇತಿ ಮೇ ಮತಿಃ ।ವಶ್ಯಾತ್ಮನಾ ತು ಸತತಂ ಶಕ್ಯೋSವಾಪ್ತುಮಶೇಷತಃ ॥೩೬॥

ಅಸಂಯತ ಆತ್ಮನಾ ಯೋಗಃ  ದುಷ್ಪ್ರಾಪಃ  ಇತಿ ಮೇ ಮತಿಃ ।
ವಶ್ಯ ಆತ್ಮನಾ ತು ಸತತಂ ಶಕ್ಯಃ ಆವಾಪ್ತುಮ್ ಅಶೇಷತಃ –

ಬಗೆ ಬಿಗಿಗೊಳಿಸದವನಿಗೆ ಸಮಾಧಿ ಸಿಗುವಂತದ್ದಲ್ಲ ಎಂದು ನನ್ನ ತೀರ್ಮಾನ.ಬಗೆಯನ್ನು ಸದಾ ಹಿಡಿತದಲ್ಲಿಟ್ಟವನು ಸಮಗ್ರವಾಗಿ ಸಮಾಧಿಯನ್ನು ಸಾಧಿಸಬಲ್ಲ.

ಯಾರು ತನ್ನ ಸೋಮಾರಿತನದಿಂದ, ಕೆಟ್ಟ ಲೌಕಿಕ ಅಭಿಲಾಷೆಯಿಂದ ಈ ರೀತಿ ಪ್ರಯತ್ನ ಮಾಡುವುದಿಲ್ಲವೋ ಅವನಿಗೆ ಸಮಾಧಿ ಎಂದೂ ದಕ್ಕುವುದಿಲ್ಲ. ವೈರಾಗ್ಯ ಮತ್ತು ಅಭ್ಯಾಸವೆಂಬ ಉಪಾಯದಿಂದ ಮನಸ್ಸನ್ನು ಮಣಿಸಿ ನಮಗೆ ಬೇಕಾದಂತೆ ಆ ಮನಸ್ಸಿನಿಂದ ಕೆಲಸವನ್ನೂ ಮಾಡಿಸಿಕೊಳ್ಳಬೇಕು. ಹೀಗೆ ಮಾಡಿದಾಗ ಸಮಾಧಿಯನ್ನು ಸಾಧಿಸಬಹುದು ಎನ್ನುವ ಭರವಸೆಯನ್ನು ಕೃಷ್ಣ ಇಲ್ಲಿ ಕೊಟ್ಟಿದ್ದಾನೆ.

ಕೃಷ್ಣನ ಈ ಉತ್ತರದಲ್ಲಿ ನಮಗೆ ಧ್ಯಾನಕ್ಕೆ ಬೇಕಾದ ಉಪಾಯ ದೊರಕಿತು. ಆದರೆ ಈಗ ನಮ್ಮೆಲ್ಲರಿಗೆ ಇನ್ನೊಂದು ಪ್ರಶ್ನೆ ಎದುರಾಗುತ್ತದೆ. ಅದೇನೆಂದರೆ ಸಂಸಾರದಲ್ಲಿರುವ ನಾವು ಒಂದು ವೇಳೆ ಸಾಧನೆಯ ಹಾದಿಯಲ್ಲಿ ಪೂರ್ಣ ಸಮಾಧಿಯನ್ನು ಸಾಧಿಸದೆ ಮಧ್ಯದಲ್ಲೇ ನಿಂತಿದ್ದರೆ ಅಥವಾ ಅರ್ಧ ಸಾಧನೆಯ ನಂತರ ನನ್ನ ಈ ಜನ್ಮ ಕೊನೆಗೊಡರೆ ಆಗ ನನ್ನ ಪಾಡೇನು? ಈ ಜನ್ಮದ ಸಾಧನೆ ವ್ಯರ್ಥವೋ? ನಾನು ಭಗವಂತನನ್ನು ಸೇರುವುದು ಅಸಾಧ್ಯವೋ? ನಮ್ಮ ಈ ಪ್ರಶ್ನೆಯನ್ನೇ ಮುಂದಿನ ಶ್ಲೋಕದಲ್ಲಿ  ಅರ್ಜುನ ಕೃಷ್ಣನಲ್ಲಿ ಕೇಳುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

असंयतात्मना योगो दुष्प्राप इति मे मतिः।
वश्यात्मना तु यतता शक्योऽवाप्तुमुपायतः॥

जिसका मन वश में किया हुआ नहीं है, ऐसे पुरुष द्वारा योग दुष्प्राप्य है और वश में किए हुए मन वाले प्रयत्नशील पुरुष द्वारा साधन से उसका प्राप्त होना सहज है- यह मेरा मत है
॥36॥

Asamyataatmanaa yogo dushpraapa iti me matih;
Vashyaatmanaa tu yatataa shakyo’vaaptumupaayatah.

I think that Yoga is hard to be attained by one of uncontrolled self, but theself~controlled and striving one attains to it by the (proper) means.

ಅಧ್ಯಾಯ - 06 : ಶ್ಲೋಕ – 37

ಅರ್ಜುನ ಉವಾಚ ।ಅಯತಿಃ ಶ್ರದ್ಧಯೋಪೇತೋ ಯೋಗಾಚ್ಚಲಿತಮಾನಸಃ ।ಅಪ್ರಾಪ್ಯ ಯೋಗಸಂಸಿದ್ಧಿಂ ಕಾಂ ಗತಿಂ ಕೃಷ್ಣ ಗಚ್ಛತಿ ॥೩೭॥

ಅರ್ಜುನ ಉವಾಚ-ಅರ್ಜುನ ಕೇಳಿದನು:
ಅಯತಿಃ ಶ್ರದ್ಧಯಾ ಉಪೇತಃ ಯೋಗಾತ್ ಚಲಿತ ಮಾನಸಃ।
ಅಪ್ರಾಪ್ಯ ಯೋಗಸಂಸಿದ್ಧಿಮ್  ಕಾಮ್  ಗತಿಮ್  ಕೃಷ್ಣ ಗಚ್ಛತಿ –

ಕೃಷ್ಣ, ಶ್ರದ್ಧೆಯಿದೆ. ಪ್ರಯತ್ನಿಸುವುದಾಗಲಿಲ್ಲ. ಧ್ಯಾನಯೋಗದಿಂದ ಬಗೆ ಕದಲಿದೆ. ಯೋಗಸಿದ್ಧಿಯನ್ನು ಪಡೆಯಲಾಗದ ಇಂಥವನ ಪಾಡೇನು?

ಯೋಗದ ಸಾಧನೆಯಲ್ಲಿ ಸಾಧನೆ ಮಾಡಿದ, ಧ್ಯಾನ ಮಾಡುವುದಕ್ಕೂ ಪ್ರಯತ್ನ ಮಾಡಿದ, ಒಂದು ಹಂತದವರೆಗೆ ಶ್ರದ್ದೆಯಿಂದ ಏಕಾಗ್ರತೆಗೆ ಪ್ರಯತ್ನಿಸಿದ, ಯಾವುದೋ ಕಾರಣದಿಂದ ಪೂರ್ಣ ಗುರಿ ತಲುಪಲಿಲ್ಲ-ಅಂತವನ   ಪಾಡೇನು? ಇಂತವರಿಗೆ ಸಿದ್ಧಿ ಲಭಿಸದೆ?

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

( योगभ्रष्ट पुरुष की गति का विषय और ध्यानयोगी की महिमा )
अर्जुन उवाच
अयतिः श्रद्धयोपेतो योगाच्चलितमानसः।
अप्राप्य योगसंसिद्धिं कां गतिं कृष्ण गच्छति॥

अर्जुन बोले- हे श्रीकृष्ण! जो योग में श्रद्धा रखने वाला है, किन्तु संयमी नहीं है, इस कारण जिसका मन अन्तकाल में योग से विचलित हो गया है, ऐसा साधक योग की सिद्धि को अर्थात भगवत्साक्षात्कार को न प्राप्त होकर किस गति को प्राप्त होता है
॥37॥

Arjuna Uvaacha:
Ayatih shraddhayopeto yogaacchalitamaanasah;
Apraapya yogasamsiddhim kaam gatim krishna gacchati.

Arjuna said:
He who is unable to control himself though he has the faith, and whose mind wandersaway from Yoga, what end does he meet, having failed to attain perfection in Yoga, O Krishna?

ಅಧ್ಯಾಯ - 06 : ಶ್ಲೋಕ – 38

ಕಚ್ಚಿನ್ನೋಭಯವಿಭ್ರಷ್ಟಶ್ಛಿನ್ನಾಭ್ರಮಿವ ನಶ್ಯತಿ ।ಅಪ್ರತಿಷ್ಠೋ ಮಹಾಬಾಹೋ ವಿಮೂಢೋ ಬ್ರಹ್ಮಣಃ ಪಥಿ ॥೩೮॥

ಕಚ್ಚಿತ್ ನ ಉಭಯ ವಿಭ್ರಷ್ಟಃ ಛಿನ್ನ ಅಭ್ರಮ್ ಇವ ನಶ್ಯತಿ ।
ಅಪ್ರತಿಷ್ಠಃ ಮಹಾಬಾಹೋಃ ವಿಮೂಢಃ  ಬ್ರಹ್ಮಣಃ ಪಥಿ –

ಓ ಮಹಾವೀರ, ನೆಲೆಗಾಣದೆ, ಭಗವಂತನ ದಾರಿಯಲ್ಲಿ ಗುರಿತಪ್ಪಿದ ಅವನು ಇಲ್ಲೂ ಇಲ್ಲದೆ ಅಲ್ಲೂ ಸಲ್ಲದೆ ತುಂಡು ಮೋಡದಂತೆ ಮರೆಯಾಗುವನೆ?

ಇಂತವರು ಇಹವೂ ಇಲ್ಲದೆ, ಪರವೂ ಇಲ್ಲದೆ, ಒಂದು ತುಣುಕು ಮೋಡದಂತೆ ಆ ಕಡೆ ನೆರಳೂ ಆಗದೆ, ಈಚೆ ಮಳೆಯೂ ಸುರಿಸದೆ ಯಾವುದಕ್ಕೂ ಉಪಯೋಗವಿಲ್ಲದೆ ವ್ಯರ್ಥವಾಗಿ ಹೋಗುವುದೋ ಅವರ ಬದುಕು? ಜ್ಞಾನ ಬಲ ಇಚ್ಛಾ ಸ್ವರೂಪನಾದ(ಮಹಾಬಾಹೋಃ) ನೀನು ಅಂತಹ ವಯವಿಭ್ರಷ್ಟರನ್ನು ಏನು ಮಾಡುತ್ತೀಯ?

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

कच्चिन्नोभयविभ्रष्टश्छिन्नाभ्रमिव नश्यति।
अप्रतिष्ठो महाबाहो विमूढो ब्रह्मणः पथि॥

हे महाबाहो! क्या वह भगवत्प्राप्ति के मार्ग में मोहित और आश्रयरहित पुरुष छिन्न-भिन्न बादल की भाँति दोनों ओर से भ्रष्ट होकर नष्ट तो नहीं हो जाता?
॥38॥

Kacchinnobhayavibhrashtash cchinnaabhramiva nashyati;
Apratishtho mahaabaaho vimoodho brahmanah pathi.

Fallen from both, does he not perish like a rent cloud, supportless, O mighty-armed(Krishna), deluded on the path of Brahman?

ಅಧ್ಯಾಯ - 06 : ಶ್ಲೋಕ – 39, 40

ಏತನ್ಮೇ ಸಂಶಯಂ ಕೃಷ್ಣ ಚ್ಛೇತ್ತುಮರ್ಹಸ್ಯಶೇಷತಃ ।ತ್ವದನ್ಯಃ ಸಂಶಯಸ್ಯಾಸ್ಯ ಚ್ಛೇತ್ತಾ ನ ಹ್ಯುಪಪದ್ಯತೇ ॥೩೯॥

ಏತತ್ ಮೇ ಸಂಶಯಮ್  ಕೃಷ್ಣ ಚ್ಛೇತ್ತುಮ್ ಅರ್ಹಸಿ ಅಶೇಷತಃ  ।
ತ್ವತ್ ಅನ್ಯಃ ಸಂಶಯಸ್ಯ ಅಸ್ಯ ಚ್ಛೇತ್ತಾ ನ ಹಿ ಉಪಪದ್ಯತೇ-

ಕೃಷ್ಣ, ನನ್ನ ಈ ಗೊಂದಲವನ್ನು ಪೂರ್ತಿಯಾಗಿ ನೀನೆ ಪರಿಹರಿಸಬೇಕು. ನೀನಲ್ಲದೆ ಇನ್ನಾರೂ ಇಂಥ ಸಂಶಯವನ್ನು ಪರಿಹರಿಸಲಾರರು ಎಂದು ಅರ್ಜುನ ಕೃಷ್ಣನನ್ನು ಕೇಳುತ್ತಾನೆ.

ಭಗವಾನುವಾಚ ।ಪಾರ್ಥ ನೈವೇಹ ನಾಮುತ್ರ ವಿನಾಶಸ್ತಸ್ಯ ವಿದ್ಯತೇ ।ನಹಿ ಕಲ್ಯಾಣಕೃತ್ ಕಶ್ಚಿದ್ ದುರ್ಗತಿಂ ತಾತ ಗಚ್ಛತಿ      ॥೪೦॥

ಭಗವಾನುವಾಚ-ಭಗವಂತ ಹೇಳಿದನು:
ಪಾರ್ಥ ನ ಏವ ಇಹ ನ ಅಮುತ್ರ ವಿನಾಶಃ ತಸ್ಯ ವಿದ್ಯತೇ ।
ನ ಹಿ ಕಲ್ಯಾಣಕೃತ್ ಕಶ್ಚಿತ್  ದುರ್ಗತಿಮ್  ತಾತ ಗಚ್ಛತಿ-

ಪಾರ್ಥ, ಅವನ ಸಾಧನೆ ವ್ಯರ್ಥವಲ್ಲ, ಇಹದಲ್ಲಿ ಮತ್ತು ಪರದಲ್ಲಿ. ಅಪ್ಪಾ(ತಾತ), ಒಳಿತನ್ನು ಮಾಡುವವನು ಎಂದೂ ಕೇಡನ್ನು ಪಡೆಯುವುದಿಲ್ಲ.

ಅರ್ಜುನನ ಪ್ರಶ್ನೆಗೆ ಕೃಷ್ಣನ ಉತ್ತರ ದೊಡ್ಡ ಭರವಸೆ. ಕೃಷ್ಣ ಹೇಳುತ್ತಾನೆ “ಸಾಧನೆಯ ದಾರಿಯಲ್ಲಿ ಸಾಗಿದವರು ಇಹದಲ್ಲಿ ಅಥವಾ ಪರದಲ್ಲಿ ಏನನ್ನೂ ಕಳೆದುಕೊಳ್ಳುವುದಿಲ್ಲ. ಓ ನನ್ನ ಪ್ರೀತಿಯ ಮಿತ್ರನೇ, ಒಳ್ಳೆಯದನ್ನು ಮಾಡಿದವರು ಎಂದೂ ಕೆಟ್ಟದ್ದನ್ನು ಪಡೆಯುವುದಿಲ್ಲ. ಇದು ಪ್ರಕೃತಿಯ ನಿಯಮ” ಎಂದು. ಇಲ್ಲಿ ಕೃಷ್ಣ ಅರ್ಜುನನನ್ನು ಪಾರ್ಥ ಎಂದು ಸಂಬೋದಿಸಿದ್ದಾನೆ. ಪಾರ್ಥ ಎಂದರೆ ಪಾರವನ್ನು(ದಡವನ್ನು) ತಿಳಿದವನು. ಸಾಧನೆಯ ಹಾದಿಯಲ್ಲಿ ಹೆಜ್ಜೆ ಇಟ್ಟವನು ಒಮ್ಮೆಗೆ  ಭಗವಂತನನ್ನು ಕಾಣದಿದ್ದರೂ ಕೂಡಾ ಆತ ಎಂದೂ ಮಧ್ಯದಲ್ಲಿ ಮುಳುಗುವುದಿಲ್ಲ. ಆತ ಸಾಧನೆಯ ಆಚೆ ದಡವನ್ನು ಸೇರಿಯೇ ಸೇರುತ್ತಾನೆ. ಒಳ್ಳೆಯದನ್ನು ಮಾಡಿದವರಿಗೆ ಒಳ್ಳೆಯ ಮಾರ್ಗವನ್ನು ತುಳಿದವರಿಗೆ ಎಂದೂ ಕೆಟ್ಟದ್ದಾಗುವುದಿಲ್ಲ. ನಮ್ಮಲ್ಲಿ ಕೆಲವರು ಹೇಳುವುದಿದೆ: “ನಾನು ನನ್ನ ಜೀವನದಲ್ಲಿ ಎಂದೂ ಕೆಟ್ಟ ಕೆಲಸ ಮಾಡಿಲ್ಲ, ಯಾವತ್ತೂ ಒಬ್ಬರಿಗೆ ಕೇಡನ್ನು ಬಯಸಲಿಲ್ಲ, ಆದರೆ ಏಕೆ ದೇವರು ನನಗೆ ಹೀಗೆ ಮಾಡಿದ?” ಎಂದು. ನಾವು ಜೀವನದಲ್ಲಿ ‘ಕೆಟ್ಟದ್ದನ್ನು ಮಾಡಿಲ್ಲ, ಕೆಟ್ಟದ್ದನ್ನು ಎಣಿಸಿಲ್ಲ’ ಎನ್ನುವುದು ಕೇವಲ ಈ ಜನ್ಮಕ್ಕೆ ಸೀಮಿತ. ಆದರೆ ಜೀವದ ಗತಿ ಅನಾದಿ ಅನಂತ. ಅದು ಜನ್ಮದಿಂದ ಜನ್ಮಕ್ಕೆ ಹರಿದು ಬರುವ ಪ್ರವಾಹ. ನಾವು ಈ ಜನ್ಮದಲ್ಲಿ ಒಂದು ದುರಂತ ಅಥವಾ ಕಷ್ಟಕ್ಕೆ  ಒಳಗಾದರೆ ಅದಕ್ಕೆ ಕಾರಣಭೂತವಾಗಿರುವಂತಹ ಇನ್ನೊಂದು ಕ್ರಿಯೆ ನಮ್ಮಿಂದ ನಡೆದಿರಲೇ ಬೇಕು. ಕೆಟ್ಟದ್ದನ್ನು ಮಾಡದವನು ಕೆಟ್ಟದ್ದನ್ನು ಪಡೆಯುವುದಿಲ್ಲ. ಒಳ್ಳೆಯದನ್ನು ಮಾಡಿದವನು ಒಳ್ಳೆಯದನ್ನು ಪಡೆಯದೆ ಇರುವುದಿಲ್ಲ. ಇದು ಸಾರ್ವಕಾಲಿಕ ಸತ್ಯ. ಇದಕ್ಕೆ ಅಪವಾದವೇ ಇಲ್ಲ. ಅದು ಹೇಗೆ ಎನ್ನುವುದನ್ನು ಕೃಷ್ಣ ಮುಂದೆ ವಿವರಿಸುತ್ತಾನೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

एतन्मे संशयं कृष्ण छेत्तुमर्हस्यशेषतः।
त्वदन्यः संशयस्यास्य छेत्ता न ह्युपपद्यते॥

हे श्रीकृष्ण! मेरे इस संशय को सम्पूर्ण रूप से छेदन करने के लिए आप ही योग्य हैं क्योंकि आपके सिवा दूसरा इस संशय का छेदन करने वाला मिलना संभव नहीं है
॥39॥

श्रीभगवानुवाच
पार्थ नैवेह नामुत्र विनाशस्तस्य विद्यते।
न हि कल्याणकृत्कश्चिद्दुर्गतिं तात गच्छति॥

श्री भगवान बोले- हे पार्थ! उस पुरुष का न तो इस लोक में नाश होता है और न परलोक में ही क्योंकि हे प्यारे! आत्मोद्धार के लिए अर्थात भगवत्प्राप्ति के लिए कर्म करने वाला कोई भी मनुष्य दुर्गति को प्राप्त नहीं होता
॥40॥

Etanme samshayam krishna cchettumarhasyasheshatah;
Twadanyah samshayasyaasya cchettaa na hyupapadyate.

This doubt of mine, O Krishna, do Thou completely dispel, because it is not possible forany but Thee to dispel this doubt.COMMENTARY: There is no better teacher than the Lord Himself as He is omniscient.

Sri Bhagavaan Uvaacha:
Paartha naiveha naamutra vinaashas tasya vidyate;
Nahi kalyaanakrit kashchid durgatim taata gacchati.

The Blessed Lord said:
O Arjuna, neither in this world, nor in the next world is there destruction for him;
none,verily, who does good, O My son, ever comes to grief!

ಅಧ್ಯಾಯ - 06 : ಶ್ಲೋಕ – 41

ಪ್ರಾಪ್ಯ ಪುಣ್ಯಕೃತಾಂ ಲೋಕಾನುಷಿತ್ವಾ ಶಾಶ್ವತೀಃ ಸಮಾಃ ।ಶುಚೀನಾಂ ಶ್ರೀಮತಾಂ ಗೇಹೇ ಯೋಗಭ್ರಷ್ಟೋSಭಿಜಾಯತೇ ॥೪೧॥

ಪ್ರಾಪ್ಯ ಪುಣ್ಯಕೃತಾಮ್  ಲೋಕಾನ್ ಉಷಿತ್ವಾ ಶಾಶ್ವತೀಃ ಸಮಾಃ ।
ಶುಚೀನಾಮ್  ಶ್ರೀಮತಾಮ್  ಗೇಹೇ ಯೋಗ ಭ್ರಷ್ಟಃ ಅಭಿಜಾಯತೇ-

ಇಂಥ ಯೋಗ ಭ್ರಷ್ಟನು ಪುಣ್ಯವಂತರ ಲೋಕಗಳನ್ನು ಪಡೆದು ಅಲ್ಲಿ ಬಹಳ ಕಾಲ ನೆಲಸಿ ಅನಂತರ ನಿರ್ಮಲರೂ ಸಿರಿವಂತರೂ ಆದವರ ಮನೆಯಲ್ಲಿ ಹುಟ್ಟುತ್ತಾನೆ.

ಯೋಗಭ್ಯಾಸ ಮಾಡಿ, ಭಗವಂತನ ಧ್ಯಾನಕ್ಕೆ ಪ್ರಯತ್ನಿಸಿ, ಕೆಲವು ಮೆಟ್ಟಲನ್ನೇರಿ ಯಾವುದೊ ಕಾರಣದಿಂದ, ಮನೋವಿಕ್ಷೇಪದಿಂದ ಅಥವಾ ಆಯಸ್ಸು ಮುಗಿದುದರಿಂದ, ಅಲ್ಲೇ ಅದನ್ನು ನಿಲ್ಲಿಸಿದವನ ಸಾಧನೆ ಎಂದೂ ವ್ಯರ್ಥವಲ್ಲ-ಇದು ಏಕೆ ಎನ್ನುವುದನ್ನು ಕೃಷ್ಣ ಹಿಂದಿನ ಅಧ್ಯಾಯದಲ್ಲೇ (ಅ-೨; ಶ್ಲೋ-೪೦) ಹೇಳಿದ್ದಾನೆ, ಅದಕ್ಕೆ ಒತ್ತು ಕೊಟ್ಟು ಇಲ್ಲಿ ಮತ್ತೆ ವಿವರಿಸುತ್ತಾನೆ. ಕೃಷ್ಣ ಹೇಳುತ್ತಾನೆ ಸಾಧನೆ ಮಧ್ಯದಲ್ಲಿ ನಿಂತು ಹೋದರೆ ಏನೂ ತೊಂದರೆ ಇಲ್ಲ. ಏಕೆಂದರೆ ಅಂತವನು ದೇಹತ್ಯಾಗ ಮಾಡಿದ ಮೇಲೆ ಪುಣ್ಯವನ್ನು ಗಳಿಸಿದವರು ಪಡೆಯುವಂತಹ ಲೋಕವನ್ನು ಪಡೆಯುತ್ತಾನೆ. ಬಹಳ ಕಾಲದ ತನಕ ಅಲ್ಲಿ ಸುಖವನ್ನು ಅನುಭವಿಸಿ, ಮತ್ತೆ ಭೂಮಿಯಲ್ಲಿ ಸ್ವಚ್ಛವಾದ ಶ್ರೀಮಂತ ವೇದಜ್ಞರ ಮನೆಯಲ್ಲಿ ಆತ ಹುಟ್ಟುತ್ತಾನೆ. ಆತನಿಗೆ ಯಾವುದೇ ಐಹಿಕ ಭೋಗದ ಕೊರತೆ ಕಾಡದು. ಯೋಗಸಾಧನೆಗೆ ಬೇಕಾದ ಅತ್ಯುತ್ತಮ ವಾತಾವರಣ ಅವನಿಗೆ ದೊರೆಯುತ್ತದೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

प्राप्य पुण्यकृतां लोकानुषित्वा शाश्वतीः समाः।
शुचीनां श्रीमतां गेहे योगभ्रष्टोऽभिजायते॥

योगभ्रष्ट पुरुष पुण्यवानों के लोकों को अर्थात स्वर्गादि उत्तम लोकों को प्राप्त होकर उनमें बहुत वर्षों तक निवास करके फिर शुद्ध आचरण वाले श्रीमान पुरुषों के घर में जन्म लेता है
॥41॥

Praapya punyakritaam lokaanushitwaa shaashwateeh samaah;
Shucheenaam shreemataam gehe yogabhrashto’bhijaayate.

Having attained to the worlds of the righteous and, having dwelt there for everlastingyears, he who fell from Yoga is reborn in the house of the pure and wealthy.

ಅಧ್ಯಾಯ - 06 : ಶ್ಲೋಕ – 42

ಅಥವಾ ಯೋಗಿನಾಮೇವ ಕುಲೇ ಭವತಿ ಧೀಮತಾಮ್ ।ಏತದ್ಧಿ ದುರ್ಲಭತರಂ ಲೋಕೇ ಜನ್ಮ ಯದೀದೃಶಮ್   ॥೪೨॥

ಅಥವಾ ಯೋಗಿನಾಮ್ ಏವ ಕುಲೇ ಭವತಿ ಧೀಮತಾಮ್ ।
ಏತತ್ ಹಿ  ದುರ್ಲಭ ತರಮ್  ಲೋಕೇ ಜನ್ಮ ಯತ್ ಈದೃಶಮ್-

ಅಥವಾ ಬಲ್ಲವರಾದ ಯೋಗಿಗಳ ಮನೆತನದಲ್ಲಿ ಹುಟ್ಟುತ್ತಾನೆ. ಲೋಕದಲ್ಲಿ ಈ ಬಗೆಯ ಹುಟ್ಟು ತುಂಬ ದುರ್ಲಭವಾದದ್ದು.

ಮುಂದುವರಿದು ಕೃಷ್ಣ ಹೇಳುತ್ತಾನೆ: ಯೋಗ ಸಾಧಕರಲ್ಲದಿದ್ದರೆ ಯೋಗ ಸಿದ್ಧರ ಮನೆಯಲ್ಲಿ ಆತ ಜನಿಸುತ್ತಾನೆ. ಇದರಿಂದ ಗರ್ಭದಿಂದಲೇ ಆತನಿಗೆ ಯೋಗದ ದೀಕ್ಷೆಯಾಗುತ್ತದೆ. ಹಿಂದಿನ  ಜನ್ಮದಲ್ಲಿ ಆತ ಸಾಧನೆಯ ಯಾವ ಮೆಟ್ಟಿಲನ್ನು ಹತ್ತಿದ್ದನೋ ಆ ಮೆಟ್ಟಿಲನ್ನು ಸುಲಭವಾಗಿ ಆತ ತಲುಪಿ ಅಲ್ಲಿಂದ ಮುಂದಿನ ಸಾಧನೆ ಮಾಡುವ ಅವಕಾಶ ಅವನಿಗೆ ಸಿಗುತ್ತದೆ. ಇದು ಅಧ್ಯಾತ್ಮ ಸಾಧನೆಯಲ್ಲಿನ ವಿಶೇಷ. ಒಂದು ಜನ್ಮದಲ್ಲಿ ಎರಡು ಮೆಟ್ಟಿಲು ಹತ್ತಿದರೆ  ಮುಂದಿನ ಜನ್ಮದಲ್ಲಿ ನೇರವಾಗಿ ಮೂರನೇ ಮೆಟ್ಟಿಲಿಗೆ ಹೆಜ್ಜೆ. ಈ ಕಾರಣದಿಂದ ಯಾವ ಸಾಧನೆಯೂ ವ್ಯರ್ಥವಲ್ಲ- ಈ ಬಗ್ಗೆ ಎಂದೂ ನಿರಾಶೆಪಡಬೇಕಾಗಿಲ್ಲ.  ಈ ರೀತಿ ಪಕ್ವವಾದ ಜೀವ ಯೋಗಸಿದ್ಧರ ಮನೆಯಲ್ಲಿ ಹುಟ್ಟುವುದರಿಂದ ಆತನಿಗೆ ಅಲ್ಲಿ ಅನುವಂಶೀಯ ಸಾತ್ವಿಕ ಸೆಳೆತ (genetic force) ಮತ್ತು ಅದಕ್ಕೆ ಬೇಕಾದ ವಾತಾವರಣ(Environmental forces)ಸಿಗುತ್ತದೆ ಮತ್ತು ಆತ  ಅಲ್ಲಿ ತನ್ನ ಸಾಧನೆಯನ್ನು ಮುಂದುವರಿಸುತ್ತಾನೆ. ಲೋಕದಲ್ಲಿ ಯೋಗಸಿದ್ಧರ ಮನೆಯಲ್ಲಿ ಹುಟ್ಟು ಬಹಳ ದುರ್ಲಭ. ಸಾಧನೆಯ ಹಾದಿಯಲ್ಲಿ ಎತ್ತರಕ್ಕೆರಿದವರಿಗೆ ಮಾತ್ರ ಈ ಭಾಗ್ಯ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

अथवा योगिनामेव कुले भवति धीमताम्‌।
एतद्धि दुर्लभतरं लोके जन्म यदीदृशम्‌॥

अथवा वैराग्यवान पुरुष उन लोकों में न जाकर ज्ञानवान योगियों के ही कुल में जन्म लेता है, परन्तु इस प्रकार का जो यह जन्म है, सो संसार में निःसंदेह अत्यन्त दुर्लभ है
॥42॥

Athavaa yoginaameva kule bhavati dheemataam;
Etaddhi durlabhataram loke janma yadeedrisham.

Or he is born in a family of even the wise Yogis;
verily a birth like this is very difficult toobtain in this world.

ಅಧ್ಯಾಯ - 06 : ಶ್ಲೋಕ – 43

ತತ್ರ ತಂ ಬುದ್ಧಿಸಂಯೋಗಂ ಲಭತೇ ಪೌರ್ವದೈಹಿಕಮ್ ।ಯತತೇ ಚ ತತೋ ಭೂಯಃ ಸಂಸಿದ್ಧೌ ಕುರುನಂದನ  ॥೪೩॥

ತತ್ರ ತಮ್  ಬುದ್ಧಿಸಂಯೋಗಮ್  ಲಭತೇ ಪೌರ್ವ ದೈಹಿಕಮ್   ।
ಯತತೇ ಚ ತತಃ  ಭೂಯಃ ಸಂಸಿದ್ಧೌ ಕುರುನಂದನ-

ಈ ಜನ್ಮದಲ್ಲು ಹಿಂದಿನ ಜನ್ಮದ ವಿವೇಕದ ನಂಟನ್ನು ಮರಳಿ ಪಡೆಯುತ್ತಾನೆ. ಕುರುಕುಮಾರ, ಮತ್ತೆ ಮರಳಿ ಸಿದ್ಧಿಗಾಗಿ ಪ್ರಯತ್ನಿಸುತ್ತಾನೆ.

 ಹಿಂದಿನ ಜನ್ಮದಲ್ಲಿ ಅವನು ಏನು ಸಾಧನೆ ಮಾಡಿದ್ದ ಅವೆಲ್ಲವೂ ಸ್ತುಪ್ತಪ್ರಜ್ಞೆಯಲ್ಲಿ ಹುದುಗಿದ್ದು ಅದಕ್ಕೆ ಅನುಗುಣವಾದ ವಾತಾವರಣ ಸಿಕ್ಕ ತಕ್ಷಣ ಅದು ಜಾಗೃತವಾಗುತ್ತದೆ. ಈ ಜನ್ಮದ ಬೆಳವಣಿಗೆ ಹಿಂದಿನ ಜನ್ಮದ ಬೆಳವಣಿಗೆಯ ಉತ್ತರಾರ್ಧವಾಗುತ್ತದೆ. ಒಂದು ವೇಳೆ ಹಿಂದಿನ ಜನ್ಮದಲ್ಲಿ ಹೆಚ್ಚು ಬೆಳವಣಿಗೆ ಆಗದೇ ಇದಿದ್ದರೆ ಇಲ್ಲಿ ಅದನ್ನು ಪ್ರಾರಂಭಿಸಬೇಕೇ ಹೊರತು ಅದಕ್ಕಾಗಿ ಗಾಬರಿಪಡುವ ಅವಶ್ಯಕತೆ ಇಲ್ಲ. ಪೂರ್ವ ಜನ್ಮದ ಸಂಸ್ಕಾರ ಸದಾ ನಮ್ಮೊಂದಿಗಿರುತ್ತದೆ ಹಾಗು ಆ ಸಂಸ್ಕಾರದೊಂದಿಗೆ ನಾವು ಸಾಧನೆಯ ಹಾದಿಯಲ್ಲಿ ಮುಂದುವರಿಯಬೇಕು. ಧ್ಯಾನಯೋಗವೆಂಬುವುದು ಒಂದು ಜನ್ಮದ ಸಾಧನೆಯಲ್ಲ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

तत्र तं बुद्धिसंयोगं लभते पौर्वदेहिकम्‌।
यतते च ततो भूयः संसिद्धौ कुरुनन्दन॥

वहाँ उस पहले शरीर में संग्रह किए हुए बुद्धि-संयोग को अर्थात समबुद्धिरूप योग के संस्कारों को अनायास ही प्राप्त हो जाता है और हे कुरुनन्दन! उसके प्रभाव से वह फिर परमात्मा की प्राप्तिरूप सिद्धि के लिए पहले से भी बढ़कर प्रयत्न करता है
॥43॥

Tatra tam buddhisamyogam labhate paurvadehikam;
Yatate cha tato bhooyah samsiddhau kurunandana.

There he comes in touch with the knowledge acquired in his former body and strivesmore than before for perfection, O Arjuna!

ಅಧ್ಯಾಯ - 06 : ಶ್ಲೋಕ – 44

ಪೂರ್ವಾಭ್ಯಾಸೇನ ತೇನೈವ ಹ್ರಿಯತೇ ಹ್ಯವಶೋSಪಿ ಸಃ।ಜಿಜ್ಞಾಸುರಪಿ ಯೋಗಸ್ಯ ಶಬ್ದಬ್ರಹ್ಮಾತಿವರ್ತತೇ ॥೪೪॥

ಪೂರ್ವ ಅಭ್ಯಾಸೇನ ತೇನ ಏವ ಹ್ರಿಯತೇ ಹಿ ಅವಶಃ ಅಪಿ ಸಃ    ।
ಜಿಜ್ಞಾಸುಃ ಅಪಿ ಯೋಗಸ್ಯ ಶಬ್ದಬ್ರಹ್ಮ ಅತಿವರ್ತತೇ –

ಹಿಂದಿನ ಅಭ್ಯಾಸ ಬಲದಿಂದ ಅವನಿಗರಿವಿಲ್ಲದೆಯೆ,ಅವನ ಬಗೆ ಅತ್ತ ಹರಿಯುತ್ತದೆ. ಧ್ಯಾನಯೋಗವನ್ನು ತಿಳಿಯಬಯಸಿದವನು ಕೂಡ ಶಬ್ದಬ್ರಹ್ಮದಾಚೆಗಿರುವ ಪರಬ್ರಹ್ಮನನ್ನು ಸೇರುತ್ತಾನೆ.

ಒಂದು ವೇಳೆ ವೇದಜ್ಞರ ಮನೆಯಲ್ಲಿ ಹುಟ್ಟದೇ ಇದ್ದರೂ ಕೂಡ ಹಿಂದಿನ ಜನ್ಮದ ಸಾಧನೆಯ ಫಲದಿಂದ ನಮಗರಿವಿಲ್ಲದಂತೆ ನಮ್ಮ ಮನಸ್ಸು ಸಾಧನೆಯತ್ತ ಹರಿಯುತ್ತದೆ. ಪ್ರಹಲ್ಲಾದನ ಮತ್ತು  ಪಿಂಗಳೆಯ ಕಥೆ ಇದಕ್ಕೆ ಉತ್ತಮ ದೃಷ್ಟಾಂತ. ಅಂತರಂಗದಲ್ಲಿ ಸದಾ ಅಧ್ಯಾತ್ಮದ ಬಗ್ಗೆ ತುಡಿತ, ಅತ್ಯಂತ ಉತ್ಕಟವಾದ ಕಳಕಳಿ ಇದ್ದರೆ ಅವರು ಶಾಸ್ತ್ರ ಓದಿದವರನ್ನು ಮೀರಿ ಎತ್ತರಕ್ಕೆರುತ್ತಾರೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

पूर्वाभ्यासेन तेनैव ह्रियते ह्यवशोऽपि सः।
जिज्ञासुरपि योगस्य शब्दब्रह्मातिवर्तते॥

वह (यहाँ 'वह' शब्द से श्रीमानों के घर में जन्म लेने वाला योगभ्रष्ट पुरुष समझना चाहिए।) श्रीमानों के घर में जन्म लेने वाला योगभ्रष्ट पराधीन हुआ भी उस पहले के अभ्यास से ही निःसंदेह भगवान की ओर आकर्षित किया जाता है तथा समबुद्धि रूप योग का जिज्ञासु भी वेद में कहे हुए सकाम कर्मों के फल को उल्लंघन कर जाता है
॥44॥

Poorvaabhyaasena tenaiva hriyate hyavasho’pi sah;
Jijnaasurapi yogasya shabdabrahmaativartate.

By that very former practice he is borne on in spite of himself. Even he who merelywishes to know Yoga transcends the Brahmic word.COMMENTARY: One who had fallen from Yoga is carried to the goal (which he intendedto reach in his previous birth), by the force of the impressions of his past Yogic practices, though hemay be unconscious of it and may not be willing to adopt the course of Yogic discipline due to theforce of some evil Karma.
[8:34 PM, 7/8/2018] Bhagavathgeetha: ಭಗವದ್ಗೀತೆಯ ಕಲಿಕೆಯ ನಿಮ್ಮ ಆಸಕ್ತಿ ಶ್ಲಾಘನೀಯ. ನಮ್ಮೆಲ್ಲ ಸಮಸ್ಯೆಗಳಿಗೆ ಭಗವದ್ಗಿತೆಯೇ ಪರಿಹಾರ. ನಮ್ಮದು ದೇಹವಲ್ಲ. ಅದು ಆತ್ಮ. ಆದರೆ ನಾವು ಅನುಭವಿಸುವ ದುಃಖ ದೇಹಕ್ಕೆ ಸಂಭಂದಿಸಿದು, ಆತ್ಮದಲ್ಲೇ ಮನಸ್ಸನ್ನು ಸ್ಥಿರಗೊಳಿಸಿದರೇ ಎಲ್ಲಾ ದುಃಖದಿಂದ ಪಾರಾಗಬಹುದು.

  ಸಹ್ರದಯರೇ, ಪ್ರತಿನಿತ್ಯವೂ ಒಂದು ಶ್ಲೋಕವನ್ನು ಚೆನ್ನಾಗಿ ಓದಿ, ಮನನ ಮಾಡಿರಿ. ಗೀತೆಯನ್ನು ಜೀವನದಲ್ಲಿ ಪೂರ್ಣವಾಗಿ ಅಳವಡಿಸಿಕೊಂಡಲ್ಲಿ ಯಶಸ್ಸು, ಕೀರ್ತಿ ಸಂಪತ್ತನ್ನು ನೀವು ಪಡೆಯುವಿರಿ.

 ಧನ್ಯವಾದಗಳು.

 TEAM SPIRITUAL SCIENCE

ಅಧ್ಯಾಯ - 06 : ಶ್ಲೋಕ – 45

ಪ್ರಯತ್ನಾದ್ ಯತಮಾನಸ್ತು ಯೋಗೀ ಸಂಶುದ್ಧಕಿಲ್ಬಿಷಃ ।ಅನೇಕಜನ್ಮಸಂಸಿದ್ಧಸ್ತತೋ ಯಾತಿ ಪರಾಂ ಗತಿಮ್    ॥೪೫॥

ಪ್ರಯತ್ನಾತ್  ಯತಮಾನಃ ಟು  ಯೋಗೀ ಸಂಶುದ್ಧ ಕಿಲ್ಬಿಷಃ ।
ಅನೇಕ ಜನ್ಮಸಂಸಿದ್ಧಃ ತತಃ  ಯಾತಿ ಪರಾಮ್  ಗತಿಮ್-

ಧ್ಯಾನದಲ್ಲಿ ತೊಡಗುವ ಸಾಧಕ ಪ್ರಯತ್ನದ ಫಲವಾಗಿ ಬಗೆಯ ಕಿಲುಬು ಕಳೆದುಕೊಂಡು ಅನೇಕ ಜನ್ಮಗಳ ಸಾಧನೆಯಿಂದ ಸಿದ್ಧಿ ಪಡೆದು ಹಿರಿಯ ನೆಲೆಯಾದ ಭಗವಂತನನ್ನು ಸೇರುತ್ತಾನೆ.

ಹಿಂದೆ ಹೇಳಿದಂತೆ ನಮ್ಮ ಸಾಧನೆ ಅನೇಕ ಜನ್ಮಗಳದ್ದು. ಮೊದಲು ನಮ್ಮಲ್ಲಿ ಇಚ್ಛೆ ಹುಟ್ಟಿತು, ಅದರಿಂದ ಆ ಇಚ್ಛೆ ಪೂರ್ಣವಾಗುವ ವಾತವರಣವನ್ನು ಮುಂದಿನ ಜನ್ಮದಲ್ಲಿ ಭಗವಂತ ಕೊಟ್ಟ, ಅಲ್ಲಿ ಪ್ರಯತ್ನ ಮಾಡಿ ಒಳಗಿನ ಕೊಳೆ ತೊಳೆಯಿತು, ಸಾಧನೆಯಿಂದ ಸ್ವಚ್ಛವಾದ ಜ್ಞಾನ ಬಂತು. ಈ ಜ್ಞಾನ ಮತ್ತು ಸಾಧನೆಯಿಂದ ಅನೇಕ ಜನ್ಮಗಳ ನಂತರ ಶಬ್ದಬ್ರಹ್ಮನನ್ನು ಮೀರಿ ಭಗವಂತನನ್ನು ಕಾಣಲು ಸಾಧ್ಯ. ಹೀಗೆ ಅಂತರಂಗದಲ್ಲಿ ಉತ್ಕಟವಾದ ಕಳಕಳಿ ಉಳ್ಳ ಜಿಜ್ಞಾಸು ಶಾಸ್ತ್ರ ಪಂಡಿತರನ್ನು ಮೀರಿ ಮೋಕ್ಷವನ್ನು ತಲುಪಬಲ್ಲ.
ಸಾಧನೆಯಲ್ಲಿ ಬಹಳ ಮುಖ್ಯವಾದದ್ದು ಅಂತರಂಗ ಪ್ರಪಂಚದ ಸಾಧನೆ. ಹೊರಗಡೆ ಸ್ನಾನ, ಪೂಜೆ, ಹೋಮ, ಹವನ, ಏನೇ ಮಾಡಿದರೂ ಕೂಡಾ ಅದಕ್ಕಿಂತ ಮಿಗಿಲಾದದ್ದು ಅಂತರಂಗ ಪ್ರಪಂಚ. ಇದನ್ನು ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ ಕೃಷ್ಣ.   

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

प्रयत्नाद्यतमानस्तु योगी संशुद्धकिल्बिषः।
अनेकजन्मसंसिद्धस्ततो यात परां गतिम्‌॥

परन्तु प्रयत्नपूर्वक अभ्यास करने वाला योगी तो पिछले अनेक जन्मों के संस्कारबल से इसी जन्म में संसिद्ध होकर सम्पूर्ण पापों से रहित हो फिर तत्काल ही परमगति को प्राप्त हो जाता है
॥45॥

Prayatnaadyatamaanastu yogee samshuddhakilbishah;
Anekajanmasamsiddhas tato yaati paraam gatim.

But, the Yogi who strives with assiduity, purified of sins and perfected graduallythrough many births, reaches the highest goal.

ಅಧ್ಯಾಯ - 06 : ಶ್ಲೋಕ – 46

ತಪಸ್ವಿಭ್ಯೋSಧಿಕೋ ಯೋಗೀ ಜ್ಞಾನಿಭ್ಯೋಪಿ ಮತೋಧಿಕಃ ।ಕರ್ಮಿಭ್ಯಶ್ಚಾಧಿಕೋ ಯೋಗೀ ತಸ್ಮಾದ್ ಯೋಗೀ ಭವಾರ್ಜುನ ॥೪೬॥

ತಪಸ್ವಿಭ್ಯಃ ಅಧಿಕಃ ಯೋಗೀ ಜ್ಞಾನಿಭ್ಯಃ ಅಪಿ ಮತಃ ಅಧಿಕಃ ।
ಕರ್ಮಿಭ್ಯಃ ಚ ಅಧಿಕಃ  ಯೋಗೀ ತಸ್ಮಾತ್  ಯೋಗೀ ಭವ ಅರ್ಜುನ-

ಧ್ಯಾನ ಯೋಗದ ಸಾಧಕ ಉಪವಾಸ ಮೊದಲಾದ ವ್ರತಸಾಧಕರಿಗಿಂತ ಮಿಗಿಲು; ಬರಿಯ ಧ್ಯಾನಯೋಗದ ಬಗೆಯನ್ನು ಬಲ್ಲವರಿಗಿಂತಲೂ ಮಿಗಿಲು ಎನ್ನುವುದು ತೀರ್ಮಾನ. ಕರ್ಮ ಯೋಗಿಗಳಿಗಿಂತಲು ಮಿಗಿಲು. ಆದ್ದರಿಂದ ಓ ಅರ್ಜುನ , ನೀನು ಧ್ಯಾನಯೋಗಿಯಾಗು.

ಯಾರು ಅಂತರಂಗದಲ್ಲಿ ಏಕಾಗ್ರವಾಗಿ ಭಗವಂತನನ್ನು ಧ್ಯಾನಿಸಬಲ್ಲ ಅವನು ತಪಸ್ಸು ಮಾಡುವವನಿಗಿಂತ ದೊಡ್ಡವ ಎನ್ನುತ್ತಾನೆ ಕೃಷ್ಣ. ಇಲ್ಲಿ ತಪಸ್ಸು ಎಂದರೆ ನಾವು ಮಾಡುವ ವೃತಾಚರಣೆ. ದೇಹ ದಂಡನೆ, ಏಕಾದಶಿ ಉಪವಾಸ, ಬ್ರಹ್ಮಚರ್ಯಪಾಲನೆ ಇತ್ಯಾದಿ. ಬಾಹ್ಯವಾದ ನೂರಾರು ವೃತಾಚರಣೆ, ಹೋಮ-ಹವನ ಮಾಡುವವರಿಗಿಂತಲೂ ಅಂತರಂಗದಲ್ಲಿ ಧ್ಯಾನ ಮಾಡತಕ್ಕವನು ಭಗವಂತನಿಗೆ ಹೆಚ್ಚು ಪ್ರಿಯ. ಅವನು ಜ್ಞಾನಿಗಳಿಗಿಂತಲೂ ದೊಡ್ಡವನು ಎನ್ನುತ್ತಾನೆ ಕೃಷ್ಣ. ಅಂದರೆ ಧ್ಯಾನದ ಬಗ್ಗೆ, ಶಾಸ್ತ್ರದ ಬಗ್ಗೆ ಕೇವಲ ತಿಳಿದಿರುವವರಿಗಿಂತ ಧ್ಯಾನ ಮಾಡುವವನು ದೊಡ್ಡವನು. ಇಂದು ಅಧ್ಯಾತ್ಮದ ಬಗ್ಗೆ ಮಾತನಾಡುವವರು ಸಿಗುತ್ತಾರೆ ಹೊರತು ನಿಜವಾದ ಧ್ಯಾನ ಯೋಗಿಗಳು ಅತೀ ವಿರಳ("There are nowadays professors of philosophy, but not philosophers”- Henry David Thoreau, Walden).

ನಮ್ಮಲ್ಲಿ ಕೆಲವರು ಕರ್ಮಟರು. ಯಜ್ಞ-ಯಾಗ ಮಾಡುವುದು, ಅಗ್ನಿ ಮುಖೇನ ಭಗವಂತನ ಆರಾದನೆ ಮಾಡುವವರು. ಅಂತರಂಗದಲ್ಲಿ ಭಗವಂತನನ್ನು ಕಾಣುವುದಕ್ಕೊಸ್ಕರ ಈ ಕರ್ಮ. ಇದೇ ರೀತಿ ಪ್ರತಿಮಾಪೂಜೆ. ನಮ್ಮ ಪೂಜೆ ಕೇವಲ ದೇವರ ಪ್ರತಿಮೆಗೆ ಮೀಸಲಾಗದೆ ಅದು ಅಂತರಂಗದಲ್ಲಿ ಭಗವಂತನನ್ನು ಕಾಣಲು ಸಹಾಯ ಮಾಡುವ ಸಂಕೇತ ಎನ್ನುವ ಜ್ಞಾನ ನಮಗಿರಬೇಕು. ಮಾನಸ ಪೂಜೆ ಇಲ್ಲದೆ ಬಾಹ್ಯ ಪೂಜೆ ಪೂಜೆಯೇ ಅಲ್ಲ. ಆದ್ದರಿಂದ ಬರೇ ಕರ್ಮಾಟನಾಗಿ  ಬಾಹ್ಯ ಪೂಜೆ ಮಾಡುವವನಿಗಿಂತ ಮಾನಸ ಪೂಜೆ ಮಾಡುವ ಧ್ಯಾನಯೋಗಿ ದೊಡ್ಡವ. “ ಆದ್ದರಿಂದ ನೀನು ಜೀವನದಲ್ಲಿ ಧ್ಯಾನಯೋಗಿಯಾಗು, ಅಂತರಂಗದ ಧ್ಯಾನದಲ್ಲಿ ತೊಡಗು. ಆ ಧ್ಯಾನದಲ್ಲಿ ತೊಡಗಿದ ಮೇಲೆ ನಿನ್ನ ಬಾಹ್ಯ ಕರ್ಮಗಳು ನಿನಗೆ ಲೇಪವಾಗುವುದಿಲ್ಲ. ಆಗ ಯುದ್ಧವೂ ಕೂಡಾ ಭಗವದ್ ಪೂಜೆಯಾಗುತ್ತದೆ” ಎನ್ನುವುದು ಅರ್ಜುನನಿಗೆ ಕೃಷ್ಣನ ಸಂದೇಶ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

तपस्विभ्योऽधिको योगी ज्ञानिभ्योऽपि मतोऽधिकः।
कर्मिभ्यश्चाधिको योगी तस्माद्योगी भवार्जुन॥

योगी तपस्वियों से श्रेष्ठ है, शास्त्रज्ञानियों से भी श्रेष्ठ माना गया है और सकाम कर्म करने वालों से भी योगी श्रेष्ठ है। इससे हे अर्जुन! तू योगी हो
॥46॥

Tapaswibhyo’dhiko yogee jnaanibhyo’pi mato’dhikah;
Karmibhyashchaadhiko yogee tasmaad yogee bhavaarjuna.

The Yogi is thought to be superior to the ascetics and even superior to men of knowledge(obtained through the study of scriptures);
he is also superior to men of action;
therefore, be thou aYogi, O Arjuna!

ಅಧ್ಯಾಯ - 06 : ಶ್ಲೋಕ – 47

ಯೋಗಿನಾಮಪಿ ಸರ್ವೇಷಾಂ ಮದ್ಗತೇನಾಂತರಾತ್ಮನಾ ।ಶ್ರದ್ಧಾವಾನ್ ಭಜತೇ ಯೋ ಮಾಂ ಸ ಮೇ ಯುಕ್ತತಮೋ ಮತಃ ॥೪೭॥

ಯೋಗಿನಾಮ್ ಅಪಿ ಸರ್ವೇಷಾಮ್  ಮತ್ ಗತೇನ ಅಂತಃ ಆತ್ಮನಾ  ।
ಶ್ರದ್ಧಾವಾನ್ ಭಜತೇ ಯಃ  ಮಾಮ್  ಸಃ  ಮೇ ಯುಕ್ತ ತಮಃ  ಮತಃ –

ನನ್ನಲ್ಲಿ ಒಳಬಗೆಯನ್ನಿರಿಸಿ ಶ್ರದ್ಧೆಯಿಂದ ನನ್ನನ್ನು ಸೇವಿಸುವವನು ಇತರ ಎಲ್ಲ ಧ್ಯಾನಯೋಗಿಗಳಿಗಿಂತಲು ಹಿರಿಯ ಯೋಗಿ ಎಂದು ನನ್ನ ತೀರ್ಮಾನ.

ಧ್ಯಾನವನ್ನು ಮಾಡುವಾಗ ನಾವು ಮನಸ್ಸನ್ನು ಯಾವುದರಮೇಲೆ ಕೂಡ ಏಕಾಗ್ರ ಮಾಡಿ ಧ್ಯಾನ ಮಾಡಬಹುದು. ಕೆಲವರು ಅನೇಕ ಕ್ಷುದ್ರ ದೇವತೆಗಳು, ಭೂತ-ಪ್ರೇತಗಳನ್ನು ಉಪಾಸನೆ ಮಾಡುವವರಿದ್ದಾರೆ. ಆದರೆ ಕೃಷ್ಣ ಹೇಳುತ್ತಾನೆ “ಯಾರು ಭಗವಂತನಲ್ಲೇ ಮನಸ್ಸನ್ನಿಟ್ಟು ಧ್ಯಾನ ಮಾಡುತ್ತಾರೋ ಅವರು ಎಲ್ಲರಿಗಿಂತ ಹಿರಿಯ ಯೋಗಿ” ಎಂದು. ಭಗವಂತನನ್ನು ಬಿಟ್ಟು ಇನ್ನೇನನ್ನೋ ಧ್ಯಾನ ಮಾಡಿದರೆ ಏನೂ ಉಪಯೋಗವಿಲ್ಲ. ನಮ್ಮ ಜೋತಿಷಿಗಳು ಸಾಮಾನ್ಯವಾಗಿ ‘ಇಂತಹ ಗ್ರಹಚಾರಕ್ಕೆ ಇಂತಹ ದೇವತೆಯನ್ನು ಉಪಾಸನೆ ಮಾಡು’ ಎಂದು ಹೇಳುತ್ತಾರೆ. ಅದರರ್ಥ  ಭಗವಂತನನ್ನು ಆ ಪ್ರತೀಕದಲ್ಲಿ ಕಾಣು ಎಂದರ್ಥ. ಯಾವುದೇ ದೇವತೆಯನ್ನು ಉಪಾಸನೆ ಮಾಡುವಾಗ ಆ ಪ್ರತೀಕದಲ್ಲಿ ಭಗವಂತನ ಉಪಾಸನೆ ಮಾಡದಿದ್ದರೆ ಅದು ನಿಜವಾದ ಯೋಗವಾಗುವುದಿಲ್ಲ. ಧ್ಯಾನದಲ್ಲಿ ಕೇವಲ ಭಗವಂತನನ್ನು ಕಾಣಬೇಕು ಎನ್ನುವ ಬಯಕೆ ಮತ್ತು  ಎಲ್ಲಾ ಪ್ರತೀಕದಲ್ಲೂ ಅವನನ್ನೇ ಕಾಣುವುದು ಶ್ರೇಷ್ಠವಾದ ಯೋಗ. ಈ ರೀತಿ ಬದುಕಿದಾಗ ನಮ್ಮ ಬದುಕೇ ಒಂದು ಯೋಗವಾಗುತ್ತದೆ.

ಇತಿ ಷಷ್ಠೋSಧ್ಯಾಯಃ

ಆರನೆಯ ಅಧ್ಯಾಯ ಮುಗಿಯಿತು
ಇಲ್ಲಿಗೆ ಭಗವದ್ಗೀತೆಯ ಮೊದಲ ಷಟ್ಕ(ಮೊದಲ ಆರು ಅಧ್ಯಾಯ) ಮುಗಿಯಿತು. ಈ ಷಟ್ಕದಲ್ಲಿ ಭಗವಂತನ ಉಪಾಸನೆಯ ಜ್ಞಾನ ಮತ್ತು ಸಾಂಖ್ಯವನ್ನು ಕೃಷ್ಣ ವಿವರಿಸಿದ. ಜ್ಞಾನಪೂರ್ವಕವಾಗಿ ಭಗವದುಪಾಸನೆಯನ್ನು ಮಾಡುವಂತಹ ವಿಧಾನವನ್ನು ಗೀತೆಯ ಮೊದಲ ಷಟ್ಕ ವಿವರಿಸುತ್ತದೆ. ಮುಂದೆ ಭಗವಂತನನ್ನು ಉಪಾಸನೆ ಮಾಡುವ  ವಿಷಯಾಂಶ(aspect) ಮತ್ತು ಭಗವಂತನ ಮಹಿಮೆ-ಅದರ ವಿವರಗಳು ಬರುತ್ತವೆ.

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

योगिनामपि सर्वेषां मद्गतेनान्तरात्मना।
श्रद्धावान्भजते यो मां स मे युक्ततमो मतः॥

सम्पूर्ण योगियों में भी जो श्रद्धावान योगी मुझमें लगे हुए अन्तरात्मा से मुझको निरन्तर भजता है, वह योगी मुझे परम श्रेष्ठ मान्य है
॥47॥

ॐ तत्सदिति श्रीमद्भगवद्गीतासूपनिषत्सु ब्रह्मविद्यायां योगशास्त्रे श्रीकृष्णार्जुनसंवादे आत्मसंयमयोगो नाम षष्ठोऽध्यायः
॥6॥

Yoginaamapi sarveshaam madgatenaantaraatmanaa;
Shraddhaavaan bhajate yo maam sa me yuktatamo matah.

And among all the Yogis, he who, full of faith and with his inner self merged in Me,worships Me, he is deemed by Me to be the most devout.

Hari Om Tat SatIti Srimad Bhagavadgeetaasoopanishatsu BrahmavidyaayaamYogashaastre Sri KrishnaarjunasamvaadeAatmasamyamayogo Naama Shashtho’dhyaayah

Thus in the Upanishads of the glorious Bhagavad Gita, the science of the Eternal, thescripture of Yoga, the dialogue between Sri Krishna and Arjuna, ends the sixth discourse entitled:“The Yoga of Meditation”

No comments:

Post a Comment