Wednesday, 5 September 2018

ಅಧ್ಯಾಯ - 02 : ಶ್ಲೋಕ - 51


ಕರ್ಮಜಂ ಬುದ್ಧಿಯುಕ್ತಾ ಹಿ ಫಲಂ ತ್ಯಕ್ತ್ವಾ ಮನೀಷಿಣಃ    ।ಜನ್ಮಬಂಧವಿನಿರ್ಮುಕ್ತಾಃ ಪದಂ ಗಚ್ಛಂತ್ಯನಾಮಯಮ್    ॥೫೧॥ ಕರ್ಮಜಮ್  ಬುದ್ಧಿಯುಕ್ತಾಃ ಹಿ ಫಲಮ್  ತ್ಯಕ್ತ್ವಾ ಮನೀಷಿಣಃ  ಜನ್ಮಬಂಧ ವಿನಿರ್ಮುಕ್ತಾಃ ಪದಮ್ ಗಚ್ಛಂತಿ ಅನಾಮಯಮ್ -- ಬಲ್ಲವರು ಭಗವಂತನ ಅರಿವು ಪಡೆದು, ಕರ್ಮ ಫಲದ ಹೊಣೆಯನ್ನು ಅವನಿಗೊಪ್ಪಿಸಿ, ಹುಟ್ಟು ಸಾವಿನ ಕಟ್ಟು ಕಳಚಿಕೊಂಡು, ಕ್ಲೇಶರಹಿತವಾದ ಪದವನ್ನು ಪಡೆಯುತ್ತಾರೆ. ನಿಜವಾದ ಮನಿಷಿಗಳು ತಮ್ಮ ಮನಸ್ಸನ್ನು ತಾವೇ ನಿಯಂತ್ರಿಸಿಕೊಳ್ಳಬಲ್ಲ  ಜಿತೇಂದ್ರಿಯರು.  ಆತ್ಮಸಂಯಮ ಇರುವ ಜ್ಞಾನದ ಮಾರ್ಗದಲ್ಲಿ ಸಾಗಿ ಆ ಅರಿವನ್ನು ಪಡೆದವರು. ಬುದ್ಧಿವಂತರಾದ ಜ್ಞಾನಿಗಳು ಕರ್ಮದಿಂದ ಬರತಕ್ಕಂತಹ ಫಲದ ಮೋಹವನ್ನು(attachment) ಬಿಟ್ಟು ಅದನ್ನು ಭಗವಂತನಿಗೆ ಅರ್ಪಿಸುತ್ತಾರೆ. ಹೀಗೆ ಯಾರು ಕರ್ಮ ಫಲವನ್ನು ಭಗವಂತನಿಗೆ ಅರ್ಪಣ ಬುದ್ಧಿಯಿಂದ ತ್ಯಾಗ ಮಾಡಿ ನಿರ್ವಂಚನೆಯಿಂದ ಕರ್ಮ ಮಾಡುತ್ತಾರೆ, ಅವರು ಕರ್ಮ ಮಾಡಿದರೂ ಕರ್ಮಬಂಧನಕ್ಕೊಳಪಡದೆ, ಎಲ್ಲಾ ಬಂಧನವನ್ನು   ಕಳಚಿಕೊಂಡು, ದೋಷ ರಹಿತವಾದ ಮೋಕ್ಷವನ್ನು ಪಡೆಯುತ್ತಾರೆ. ಆದ್ದರಿಂದ ಕರ್ತವ್ಯ ಕರ್ಮವನ್ನು ಭಗವಂತನ ಆರಾಧನೆ ಎಂದು ಮಾಡಿ ಮೋಕ್ಷ ಪಡೆಯಬೇಕು. ಇದನ್ನು  ಹೊರತುಪಡಿಸಿ   ‘ನಾನು ಜ್ಞಾನಿ, ನಾನೇನೂ ಮಾಡಲಾರೆ’ ಎನ್ನುವ ಧೋರಣೆ ಸರಿಯಲ್ಲ. ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

 कर्मजं बुद्धियुक्ता हि फलं त्यक्त्वा मनीषिणः। जन्मबन्धविनिर्मुक्ताः पदं गच्छन्त्यनामयम्‌॥ क्योंकि समबुद्धि से युक्त ज्ञानीजन कर्मों से उत्पन्न होने वाले फल को त्यागकर जन्मरूप बंधन से मुक्त हो निर्विकार परम पद को प्राप्त हो जाते हैं ॥51॥

 Karmajam buddhiyuktaa hi phalam tyaktwaa maneeshinah; Janmabandha vinirmuktaah padam gacchantyanaamayam. The wise, possessed of knowledge, having abandoned the fruits of their actions, andbeing freed from the fetters of birth, go to the place which is beyond all evil.COMMENTARY: Clinging to the fruits of actions is the cause of rebirth. Man has to take abody to enjoy them. If actions are done for the sake of God, without desire for the fruits, one isreleased from the bonds of birth and death and attains to immortal bliss.

No comments:

Post a Comment